ಶಿವಮೊಗ್ಗ: .ಲೋಕಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೆಂಪಲ್ ರನ್ ಮಾಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭ ಆಗುತ್ತಿದ್ದಂತೆಯೇ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೆಂಪಲ್ ರನ್ ಮಾಡಿದ್ದಾರೆ.
ಶಿವಮೊಗ್ಗದ ರವೀಂದ್ರ ನಗರದಲ್ಲಿರುವ ಗಣೇಶ ದೇವಸ್ಥಾನ, ಕೋಟೆ ಆಂಜನೇಯ ದೇವಸ್ಥಾನ ಹಾಗೂ ತಿಲಕ ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೇ ಗೆಲುವುಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿವಮೊಗ್ಗದಲ್ಲಿ ಒಟ್ಟು ಅಂಚೆ ಮತಗಳು 5199 ಚಲಾವಣೆಯಾಗಿದೆ. ಮತಎಣಿಕೆ ನಡೆಯುತ್ತಿದ್ದು, ಸದ್ಯ ಬಿ.ವೈ ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.
ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ (ಜೂನ್ 4) ಹೊರಬೀಳಲಿದೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.
ಮತಗಟ್ಟೆಗಳ ಸಮೀಕ್ಷೆಯಂತೆ ಬಿಜೆಪಿ (BJP) ಬಹುಮತದ ನಿರೀಕ್ಷೆಯಲ್ಲಿದೆ. ಎನ್‌ಡಿಎ ಬಹುಮತ ಬಂದರೆ ಮೋದಿಯವರು ಹ್ಯಾಟ್ರಿಕ್ ಸಾಧನೆ ಮಾಡಲಿದ್ದಾರೆ. ಹೀಗಾಗಿ ಮೂರನೇ ಅವಧಿಗೆ ಅಧಿಕಾರ ಹಿಡಿಯುವ ಲೆಕ್ಕಚಾರದಲ್ಲಿ ಮೋದಿಯವರು ಈ ತಯಾರಿ ಮಾಡಿಕೊಂಡಿದ್ದಾರೆ. ಮುಂದಿನ 125 ದಿನಗಳ ಪ್ಲ್ಯಾನ್‌ನೊಂದಿಗೆ ನಮೋ ಸಿದ್ಧವಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಅವರು ಕಾರ್ಯ ಪ್ರವೃತ್ತರಾಗಲಿದ್ದಾರೆ.
ತಯಾರಿ ಏನು..?: 125 ದಿನಗಳ ಯೋಜನೆ ಸಿದ್ದಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಜೂನ್ 9 ರಂದು ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಗಳಿವೆ. ಐತಿಹಾಸಿಕ ಹ್ಯಾಟ್ರಿಕ್ ಸಾಧನೆ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಪ್ಲ್ಯಾನ್ ಇದೆ.
ಮುಂಬರುವ ದಿನಗಳಲ್ಲಿ ಆಯಾ ರಾಜ್ಯಗಳಲ್ಲಿ ಸಂಘಟನೆಗೆ ಒತ್ತು ನೀಡುವ ದೃಷ್ಠಿಯಿಂದ ಈ ಆದ್ಯತೆ ನೀಡುವ ಸಾಧ್ಯತೆಗಳಿವೆ. ಕ್ಯಾಬಿನೆಟ್ ಬೆನ್ನಲ್ಲೇ ಇಟಲಿಗೆ ಮೊದಲ ವಿದೇಶಿ ಪ್ರವಾಸ ಮಾಡಲಿದ್ದಾರೆ. ಇಟಲಿಯಲ್ಲಿ ನಡೆಯಲಿರುವ G7 ಮೀಟಿಂಗ್ ನಲ್ಲಿ ಮೋದಿ ಭಾಗಿಯಾಗಲಿದ್ದಾರೆ. ವಾಪಾಸ್ ಆದ ಬಳಿಕ 125 ದಿನಗಳ ಕಾರ್ಯಸೂಚಿ ಅನುಷ್ಠಾನ ಮಾಡಲಿದ್ದಾರೆ.
ಲಕ್ನೋ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ ಹಾಗೂ ತೆಲಂಗಾಣ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ (Election Results) ಭಾನುವಾರ ಹೊರಬಿದ್ದಿದೆ. ಈ ಚುನಾವಣಾ ಫಲಿತಾಂಶದ ಕುರಿತು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ (Mayawati) ವಿಶ್ಲೇಷಣೆ ಮಾಡಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿತೆ ಬರೆದುಕೊಂಡಿದ್ದಾರೆ. ಇಡೀ ಚುನಾವಣೆಯ ವಾತಾವರಣವನ್ನು ಅವಲೋಕಿಸಿದಾಗ ಅನುಮಾನ, ಆಶ್ಚರ್ಯ, ಆತಂಕ ಕಾಡುವುದು ಸಹಜ. ಈ ವಿಚಿತ್ರ ಫಲಿತಾಂಶವು ಜನರಿಗೆ ಆಘಾತವನ್ನುಂಟು ಮಾಡಿತು ಎಂದಿದ್ದಾರೆ.
2. पूरे चुनाव के दौरान माहौल एकदम अलग व काँटे के संघर्ष जैसा दिलचस्प, किन्तु चुनाव परिणाम उससे बिल्कुल अलग होकर पूरी तरह से एकतरफा हो जाना, यह ऐसा रहस्यात्मक मामला है जिसपर गंभीर चिन्तिन व उसका समाधान जरूरी। लोगों की नब्ज पहचानने में भयंकर ’भूल-चूक’ चुनावी चर्चा का नया विषय।
ಎಕ್ಸ್ ನಲ್ಲಿ ಏನಿದೆ..?: ಇತ್ತೀಚೆಗಷ್ಟೇ ನಡೆದ ದೇಶದ ನಾಲ್ಕು ರಾಜ್ಯಗಳ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಏಕಪಕ್ಷೀಯವಾಗಿದ್ದು, ಇಡೀ ಚುನಾವಣೆಯ ವಾತಾವರಣವನ್ನು ಅವಲೋಕಿಸಿದಾಗ ಜನರೆಲ್ಲರಿಗೂ ಅನುಮಾನ, ಆಶ್ಚರ್ಯ, ಆತಂಕ ಕಾಡುವುದು ಸಹಜ. ಇಂತಹ ವಿಚಿತ್ರ ಫಲಿತಾಂಶವು ಜನರಿಗೆ ಆಘಾತವನ್ನುಂಟು ಮಾಡಿತು ಎಂದಿದ್ದಾರೆ. ಇದನ್ನೂ ಓದಿ: ದಯವಿಟ್ಟು ಸೋಲಿನ ಹತಾಶೆ ಹೊರಹಾಕಬೇಡಿ – ಸಂಸತ್ ಅಧಿವೇಶನಕ್ಕೂ ಮುನ್ನ ವಿಪಕ್ಷಗಳಿಗೆ ಮೋದಿ ಸಲಹೆ
ಇಡೀ ಚುನಾವಣೆಯ ವಾತಾವರಣ ಸಂಪೂರ್ಣ ಭಿನ್ನವಾಗಿದ್ದು, ಆಪ್ತ ಹೋರಾಟದಂತೆ ಕುತೂಹಲ ಮೂಡಿಸಿದೆ. ಆದರೆ ಚುನಾವಣಾ ಫಲಿತಾಂಶ ಅದಕ್ಕಿಂತ ಸಂಪೂರ್ಣ ಭಿನ್ನವಾಗಿದ್ದು, ಸಂಪೂರ್ಣ ಏಕಪಕ್ಷೀಯವಾಗಿದ್ದಾಗಿದೆ. ಗಂಭೀರ ಚಿಂತನೆ ಮತ್ತು ಪರಿಹಾರದ ಅಗತ್ಯವಿರುವಂತಹ ನಿಗೂಢ ವಿಷಯವಾಗಿದೆ. ಜನರ ನಾಡಿಮಿಡಿತವನ್ನು ಗ್ರಹಿಸುವಲ್ಲಿ ಒಂದು ಭಯಾನಕ ತಪ್ಪು ಚುನಾವಣಾ ಚರ್ಚೆಯ ಹೊಸ ವಿಷಯವಾಗಿದೆ ಎಂದರು.
3. बीएसपी के सभी लोगों ने पूरे तन, मन, धन व दमदारी के साथ यह चुनाव लड़ा, जिससे माहौल में नई जान आई, किन्तु उन्हें ऐसे अजूबे परिणाम से निराश कतई भी नहीं होना है बल्कि परमपूज्य बाबा साहेब डा. भीमराव अम्बेडकर के जीवन संघर्षों से प्रेरणा लेकर आगे बढ़ने का प्रयास करते रहना है।
ಬಿಎಸ್‍ಪಿಯ ಎಲ್ಲಾ ಕಾರ್ಯಕರ್ತರು ಈ ಚುನಾವಣೆಯಲ್ಲಿ ಪೂರ್ಣ ಶಕ್ತಿಯಿಂದ ಹೋರಾಡಿದರು. ಆದರೆ ಅಂತಹ ವಿಚಿತ್ರ ಫಲಿತಾಂಶದಿಂದ ಅವರು ನಿರಾಶೆಗೊಳ್ಳಬಾರದು. ಬಾಬಾ ಸಾಹೇಬ್ ಅಂಬೇಡ್ಕರ್ ಹೋರಾಟಗಳಿಂದ ಸ್ಪೂರ್ತಿ ಪಡೆದು ಮುನ್ನಡೆಯಲು ಪ್ರಯತ್ನಿಸುತ್ತಲೇ ಇರಬೇಕು. ಸೋಲಿನ ಪರಾಮರ್ಶೆಗೆ, ಲೋಕಸಭೆ ಚುನಾವಣೆಗೆ ಡಿಸೆಂಬರ್ 10 ರಂದು ಲಕ್ನೋದಲ್ಲಿ ಸಭೆ ನಡೆಸಲಾಗುವುದು ಎಂದು ಬರೆದುಕೊಂಡಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ ಹಾಗೂ ತೆಲಂಗಾಣ ರಾಜ್ಯಗಳ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಇದರಲ್ಲಿ ತೆಲಂಗಾಣದ ಕಾಂಗ್ರೆಸ್, ಉಳಿದ ಮೂರು ಕಡೆ ಬಿಜೆಪಿ ಭರ್ಜರಿ ಗೆಲುವು ಕಂಡಿದೆ. ಇನ್ನೊಂದು ರಾಜ್ಯವಾದ ಮಿಝೋರಾಂ ಫಲಿತಾಂಶ ಇಂದು ಸಂಜೆ ಹೊರಬೀಳಲಿದೆ.
ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆಯ ಅಧಿಕೃತ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್ ಜಯಗಳಿಸಿರುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಸಿಎಂ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವನ್ನು ತಿಳಿಸಿದರು. ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ.
ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್…
ಎಕ್ಸ್ ಖಾತೆಯಲ್ಲಿ ಬರೆದಿದ್ದೇನು..?: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢಗಳಲ್ಲಿ ಹಿನ್ನಡೆ ಆಗಿದೆ. ಇದನ್ನೂ ಓದಿ: ಚುನಾವಣಾ ಫಲಿತಾಂಶದ ಬಗ್ಗೆ INDIA ಒಕ್ಕೂಟ ಇವಿಎಂ ಮಷಿನ್‌ಗಳನ್ನು ದೂರಿದರೆ ಆಶ್ಚರ್ಯವಿಲ್ಲ: ಅಜಿತ್ ಪವಾರ್
ತೆಲಂಗಾಣ (Telangana Election Results) ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ (Bharat Jodo) ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು. ಬಿಜೆಪಿ ಬಿಆರ್‍ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದು, ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು ಕೂಡಾ ನಮ್ಮ ಗೆಲುವಿಗೆ ಕಾರಣ.
ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು ಮುಂದುವರಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ.
ರಾಜಸ್ಥಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋಟ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ರಾಜಸ್ಥಾನ ಮತ್ತು ಛತ್ತೀಸ್‍ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು ಮುಂದುವರಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಆರ್‍ಎಸ್ 40, ಬಿಜೆಪಿ 8, ಎಐಎಂಐಎಂ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಬೆಂಗಳೂರು: ರಾಜಸ್ಥಾನ (Rajasthan) ಹಾಗೂ ಮಧ್ಯಪ್ರದೇಶ (Madhya Pradesh) ಎರಡೂ ದೊಡ್ಡ ರಾಜ್ಯಗಳಲ್ಲಿ ನಮಗೆ ಗೆಲುವು ಸಿಕ್ಕಿದೆ. ಛತ್ತೀಸ್‌ಗಢದಲ್ಲೂ (Chattisgarh) ಬಿಜೆಪಿ (BJP) ಗೆಲ್ಲುತ್ತದೆ. ಈ ಫಲಿತಾಂಶ (Result) ಲೋಕಸಭೆಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ (Munirathna) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದಿನ ಫಲಿತಾಂಶ ಮತ್ತೆ ಮೋದಿ (Narendra Modi) ಪ್ರಧಾನಿ ಅನ್ನೋದನ್ನೇ ಹೇಳುತ್ತಿದೆ. ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಇಂದು ಬಿಜೆಪಿಗೆ ಒಳ್ಳೆಯ ದಿನ ಎಂದರು. ಇದನ್ನೂ ಓದಿ: Election Results : ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಮುನ್ನಡೆ
ಹೈದರಾಬಾದ್: ಗ್ಯಾರಂಟಿಗಳು ನಮ್ಮ ಕೈ ಹಿಡಿಯುತ್ತವೆ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ಶಾಸಕರು ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ನಮ್ಮ ಕರ್ನಾಟಕದ ಗ್ಯಾರಂಟಿ ಸಕ್ಸಸ್ ಆಗಿದೆ ಇಲ್ಲಿ ಇನ್ಸ್ ಪೇರಷನ್ ಆಗಿ ತಗೊಂಡಿದ್ದಾರೆ. ಗ್ಯಾರಂಟಿಗಳು ನಮ್ಮ ಕೈ ಹಿಡಿಯುತ್ತವೆ. ಗ್ಯಾರಂಟಿಗಳನ್ನ ಟೀಕೆ ಮಾಡ್ತಾ ಇರೋದು ಕೆಸಿಆರ್ ಮತ್ತೆ ಅವರ ಬಂಧು ಪ್ರಭಾಕರ್ ರೆಡ್ಡಿ (Prabhakar Reddy) ಅಷ್ಟೇ ಬೇರೆ ಯಾರು ಮಾಡ್ತಿಲ್ಲ ಎಂದು ಶಾಸಕರು ವಾಗ್ದಾಳಿ ನಡೆಸಿದರು.
10 ವರ್ಷದಲ್ಲಿ ಬಿಆರ್‍ಎಸ್ ಪಕ್ಷದ ದುರಾಡಳಿತವನ್ನ ಜನ ನೋಡಿದ್ದಾರೆ. 70ಕ್ಕೂ ಹೆಚ್ಚು ಕಾಂಗ್ರೆಸ್ (Congress) ಸೀಟ್ ತೆಲಂಗಾಣದಲ್ಲಿ ಗೆಲ್ಲುತ್ತವೆ. ಈ ಹಿಂದೆ ವೈಎಸ್ ರಾಜ್ ಶೇಖರ್ ರೆಡ್ಡಿ ಅವರು ಒಳ್ಳೆ ಕೆಲಸ ಮಾಡಿದ್ದಾರೆ. ಅದು ನಮ್ಮ ಕೈ ಹಿಡಿಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ – ಫೈಟ್ ನೀಡುತ್ತಿದೆ ಕಾಂಗ್ರೆಸ್
ಇದೇ ವೇಳೆ ಕಡಿಮೆ ಸೀಟ್ ಬಂದರೆ ಆಪರೇಷನ್ ಹಸ್ತ ಜೋರಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಚಿಕ್ಕವನು ಇನ್ನೂ ಅದರ ಬಗ್ಗೆ ಗೊತ್ತಿಲ್ಲ. ರೈತ ಬಂಧು ಫೇಲ್ಯೂರ್ ಆಗಿದೆ. 8 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇದು ಬಿಎಆರ್ ಎಸ್ ಸೋಲೋಕೆ ಕಾರಣ ಎಂದು ತಿಳಿಸಿದರು.
ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh Election Result) ಬಿಜೆಪಿ ಅಧಿಕಾರಕ್ಕೆ ಬರುತ್ತೆ. ನಾವು ಮತ್ತೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತೇವೆ ಎಂದು ಸಚಿವ, ಬಿಜೆಪಿ ನಾಯಕ ನರೋತ್ತಮ್ ಮಿಶ್ರಾ (Narottam Mishra) ಹೇಳಿದ್ದಾರೆ.
ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗ್ಗೆ 8 ಗಂಟೆಯಿಂದ ಮತಣಿಕೆ ನಡೆಯಲಿದೆ ಎಂದರು.
Counting of votes in Madhya Pradesh to begin at 8am
State minister & BJP leader Narottam Mishra says " We will win 125-150 seats in the state. BJP will form govt in the state. It is a matter of a few hours now." pic.twitter.com/g9IEd4FkSH
ಒಟ್ಟಿನಲ್ಲಿ ಸದ್ಯ ಬಿಜೆಪಿ ಸರ್ಕಾರವಿರುವ ಮಧ್ಯಪ್ರದೇದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇರಲಿದೆ ಎಂಬುದಾಗಿ ಬಹುತೇಕ ಸಮೀಕ್ಷೆಗಳು ತಿಳಿಸಿದ್ದು, ಯಾರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂಬುದನ್ನು ಕಾದುನೋಡಬೇಕು. ಕೆಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುಂದಿದ್ದರೆ, ಇನ್ನು ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಭೋಪಾಲ್: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಭಾರೀ ಕುತೂಹಲ ಹುಟ್ಟಿಸಿದೆ. ಮಧ್ಯಪ್ರದೇಶದಲ್ಲಿ (Madhyapradesh Election Result) ಸದ್ಯ ಬಿಜೆಪಿ (BJP) ಸರ್ಕಾರವಿದ್ದು, ಬಹುತೇಕ ಸಮೀಕ್ಷೆಗಳು ನೆಕ್ ಟು ನೆಕ್ ಫೈಟ್ ಇದೆ ಎಂದಿವೆ. ಕೆಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುಂದಿದ್ದರೆ, ಇನ್ನು ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ನವೆಂಬರ್ 17ರಂದು ನಡೆದ ಚುನಾವಣೆಯಲ್ಲಿ ಮಧ್ಯಪ್ರದೇಶ ಚುನಾವಣಾ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ಮತದಾನ ಅಂದ್ರೆ 77.1%ರಷ್ಟು ವೋಟಿಂಗ್ ನಮೂದಾಗಿತ್ತು. ಕಳೆದ ಬಾರಿ ಇಲ್ಲಿ ಗರಿಷ್ಠ ಸೀಟ್ ಗೆದ್ದು ಬಿಎಸ್‍ಪಿ ಶಾಸಕರ ನೆರವಿನಿಂದ ಇಲ್ಲಿ ಕಮಲ್‍ನಾಥ್ (Kamalnath) ಸರ್ಕಾರ ಮಾಡಿದ್ರು. ಆದರೆ ಬಿಜೆಪಿ ಆಪರೇಷನ್ ಕಮಲ ನಡೆಸಿದ ಕಾರಣ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮತ್ತೆ ಸಿಎಂ ಆದ್ರು. ಇಲ್ಲಿ ಈ ಬಾರಿ ಕಾಂಗ್ರೆಸ್-ಬಿಜೆಪಿ (Congress-BJP) ನಡ್ವೆ ಟಫ್ ಫೈಟ್ ನಡೆದಿದೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಒಟ್ಟು 5 ಕ್ಷೇತ್ರಗಳಿದ್ದು, 5 ಕ್ಷೇತ್ರದಲ್ಲಿಯೂ ಕಾಂಗ್ರೆಸ್ (Congress) ಗೆದ್ದು ಬಿಜೆಪಿಗೆ (BJP) ಸೋಲಿನ ರುಚಿಯನ್ನು ತೋರಿಸಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ತೀವ್ರ ಜಟಾಪಟಿ ನಡೆಯುತ್ತಿದ್ದು, ಕೊನೆಗೂ ಕಾಂಗ್ರೆಸ್ ಜಯಶಾಲಿಯಾಗಿದೆ.
ವಿಜೇತರ ವಿವರ:
1)ಚಿಕ್ಕಮಗಳೂರು:
ಹೆಚ್‌ಡಿ ತಮ್ಮಯ್ಯ – ಕಾಂಗ್ರೆಸ್
ಪಡೆದ ಮತಗಳು – 85,054
ಸಿ.ಟಿ.ರವಿ – ಬಿಜೆಪಿ
ಪಡೆದ ಮತಗಳು – 79,128
ಗೆಲುವು: ಕಾಂಗ್ರೆಸ್
ಅಂತರ: 5,926
2) ಕಡೂರು:
ಕೆ.ಎಸ್.ಆನಂದ್ – ಕಾಂಗ್ರೆಸ್
ಪಡೆದ ಮತಗಳು – 75,476
ಬೆಳ್ಳಿ ಪ್ರಕಾಶ್ – ಬಿಜೆಪಿ
ಪಡೆದ ಮತಗಳು – 63,469
ವೈ.ಎಸ್.ವಿ.ದತ್ತ – ಜೆಡಿಎಸ್
ಪಡೆದ ಮತಗಳು – 26,837
ಗೆಲುವು: ಕಾಂಗ್ರೆಸ್
ಅಂತರ: 12,007
3) ತರೀಕೆರೆ :
ಶ್ರೀನಿವಾಸ್ – ಕಾಂಗ್ರೆಸ್
ಪಡೆದ ಮತಗಳು – 63,086
ಡಿ.ಎಸ್.ಸುರೇಶ್ – ಬಿಜೆಪಿ
ಪಡೆದ ಮತಗಳು – 50,955
ಗೋಪಿಕೃಷ್ಣ – ಪಕ್ಷೇತರ
ಪಡೆದ ಮತಗಳು – 35,468
ಗೆಲುವು – ಕಾಂಗ್ರೆಸ್
ಅಂತರ: 12,131
4) ಶೃಂಗೇರಿ :
ಟಿಡಿ ರಾಜೇಗೌಡ – ಕಾಂಗ್ರೆಸ್
ಪಡೆದ ಮತಗಳು – 59,171
ಡಿ.ಎನ್.ಜೀವರಾಜ್ – ಬಿಜೆಪಿ
ಪಡೆದ ಮತಗಳು – 58,970
ಸುಧಾಕರ ಶೆಟ್ಟಿ – ಜೆಡಿಎಸ್
ಪಡೆದ ಮತಗಳು – 19,417
ಗೆಲುವು: ಕಾಂಗ್ರೆಸ್
ಅಂತರ: 201
5)ಮೂಡಿಗೆರೆ :
ನಯನಮೋಟಮ್ಮ – ಕಾಂಗ್ರೆಸ್
ಪಡೆದ ಮತಗಳು – 50,843
ಕೊಡಗು: ಕೊಡಗು (Kodagu) ಕ್ಷೇತ್ರದಲ್ಲಿ ಎರಡು ಮತಕ್ಷೇತ್ರಗಳಿದ್ದು, ಎರಡಕ್ಕೆ ಎರಡರಲ್ಲೂ ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿ, ಬಿಜೆಪಿಯ (BJP) ಭದ್ರಕೋಟೆಯಾಗಿದ್ದ ಮಡಿಕೇರಿ (Madikeri) ಹಾಗೂ ವಿರಾಜಪೇಟೆ (Virajpete) ಕ್ಷೇತ್ರವನ್ನು ತನ್ನದಾಗಿಸಿಕೊಂಡಿದೆ.
ಗೆದ್ದವರ ವಿವರ: 1) ಮಡಿಕೇರಿ:
ಮಂಥರ್ ಗೌಡ – ಕಾಂಗ್ರೆಸ್
ಪಡೆದ ಮತಗಳು – 83,949
ಅಪ್ಪಚ್ಚು ರಂಜನ್ – ಬಿಜೆಪಿ
ಪಡೆದ ಮತಗಳು – 79,429
ಗೆಲುವು: ಕಾಂಗ್ರೆಸ್
ಅಂತರ: 4,402
2)ವಿರಾಜಪೇಟೆ:
ಎಎಸ್ ಪೊನ್ನಣ್ಣ – ಕಾಂಗ್ರೆಸ್
ಪಡೆದ ಮತಗಳು – 83,128