ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ (Karnataka Assembly Election Result) ಶನಿವಾರ ಹೊರಬೀಳುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹೌದು. ಚುನಾವಣಾ ಫಲಿತಾಂಶ(Election Result) ಕ್ಕೆ 1,500 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬೆಂಗಳೂರು ನಗರದ ನಾಲ್ಕು ಮತ ಎಣಿಕೆ ಕೇಂದ್ರಗಳಿಗೆ ಭದ್ರತೆ ಒದಗಿಸಲಾಗುತ್ತಿದೆ. ವಿಠ್ಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಕಾಲೇಜು, ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ಬಸವನಗುಡಿಯ ಬಿಎಂಎಸ್ ಕಾಲೇಜು ಹಾಗೂ ತಿಲಕ್ ನಗರದ ಎಸ್‍ಎಸ್‍ಎಂಆರ್ ವಿ ಕಾಲೇಜುಗಳಿಗೆ ಟೈಟ್ ಸೆಕ್ಯೂರಿಟಿ ಕೈಗೊಳ್ಳಲಾಗಿದೆ.
ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿಗೆ 2 ಡಿಸಿಪಿ, 4 ಎಸಿಪಿ, 20 ಇನ್ಸ್ ಪೆಕ್ಟರ್, 72 ಪಿಎಸ್‍ಐ ಸೇರಿ 506 ಸಿಬ್ಬಂದಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ಬಸವನಗುಡಿಯ ಬಿಎಂಎಸ್ ಕಾಲೇಜಿಗೆ ಇಬ್ಬರು ಡಿಸಿಪಿ, 4 ಎಸಿಪಿ, 18 ಇನ್ಸ್ ಪೆಕ್ಟರ್, 40 ಪಿಎಸ್‍ಐ ಸೇರಿ 275 ಸಿಬ್ಬಂದಿ, ತಿಲಕ್ ನಗರದ ಎಸ್‍ಎಸ್‍ಎಂಆರ್ ವಿ ಕಾಲೇಜಿಗೆ ಇಬ್ಬರು ಡಿಸಿಪಿ, 5 ಎಸಿಪಿ, 10 ಇನ್ಸ್ ಪೆಕ್ಟರ್, 14 ಪಿಎಸ್‍ಐ ಸೇರಿ 399 ಪೊಲೀಸ್ ಸಿಬ್ಬಂದಿ ಹಾಗೂ ವಿಠ್ಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಕಾಲೇಜಿಗೆ ಇಬ್ಬರು ಡಿಸಿಪಿ, 3 ಎಸಿಪಿ, 6 ಇನ್ಸ್ ಪೆಕ್ಟರ್, 15 ಪಿಎಸ್‍ಐ ಸೇರಿ 214 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಒಟ್ಟಿನಲ್ಲಿ ಬೆಳಗ್ಗೆ 5 ಗಂಟೆಗೆ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ ಎಣಿಕೆ ಕೇಂದ್ರದ ಬಳಿ ಹಾಜರಿರಲು ಸೂಚನೆ ನೀಡಲಾಗಿದೆ. ಅಲ್ಲದೆ ಸಂಬಂಧಪಟ್ಟ ಡಿಸಿಪಿಗಳ ಬಳಿ ರಿಪೋರ್ಟ್ ಮಾಡಿಕೊಳ್ಳಲು ಕೂಡ ಸೂಚಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ನಿಷೇಧಾಜ್ಞೆ ಜಾರಿ
ಸ್ಥಳೀಯ ಪೊಲೀಸರಲ್ಲದೆ ಕೇಂದ್ರದ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರಗಳ ಬಳಿ ಕೆಎಸ್‍ಆರ್‍ಪಿ, ಸಿಎಆರ್, ಡಿಸ್ವ್ಯಾಟ್, ವಾಟರ್ ಜೆಟ್, ಖಾಲಿ ವಾಹನಗಳನ್ನು ನಿಯೋಜಿಸಲಾಗಿದೆ. ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಕ್ತ ಬಂದೋಬಸ್ತ್ ಮಾಡಿ ಉಸ್ತುವಾರಿ ವಹಿಸಿದ್ದಾರೆ.
ನವದೆಹಲಿ: ಗುಜರಾತ್‌ನಲ್ಲಿ (Gujarat) ಬಿಜೆಪಿ (BJP) ಅಭೂತಪೂರ್ವ ಜಯಗಳಿಸುತ್ತಿದ್ದಂತೆ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು, ಗುಜರಾತ್‌ನ ಜನರು ಬಿಟ್ಟಿ ಆಶ್ವಾಸನೆ ನೀಡುವ ಪಕ್ಷಗಳ ಕೈ ಬಿಟ್ಟಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಆಮ್ ಆದ್ಮಿ ಪಕ್ಷಕ್ಕೆ (AAP) ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಶಾ, ಉಚಿತ ಹಾಗೂ ತುಷ್ಟೀಕರಣದ ರಾಜಕೀಯ ಮಾಡುವವರನ್ನು ತಿರಸ್ಕರಿಸುವ ಮೂಲಕ ಗುಜರಾತ್‌ನ ಜನರು ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣವನ್ನು ನಿರೂಪಿಸುವ ನರೇಂದ್ರ ಮೋದಿಯವರ (Narendra Modi) ಬಿಜೆಪಿಗೆ ಅಭೂತಪೂರ್ವವಾದ ಗೆಲುವು ತಂದುಕೊಡುತ್ತಿದೆ.
ಮಹಿಳೆಯರು, ಯುವಕರು, ರೈತರು ಮಾತ್ರವಲ್ಲದೇ ಎಲ್ಲಾ ವರ್ಗದ ಜನರೂ ಬಿಜೆಪಿಯೊಂದಿಗಿದ್ದಾರೆ ಎಂಬುದನ್ನು ಈ ಬೃಹತ್ ಗೆಲುವು ತೋರಿಸಿಕೊಟ್ಟಿದೆ. ಗುಜರಾತ್ ಯಾವಾಗಲೂ ಇತಿಹಾಸವನ್ನು ಸೃಷ್ಟಿಸುತ್ತಾ ಬಂದಿದೆ. ಕಳೆದ 2 ದಶಕಗಳಲ್ಲಿ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಎಲ್ಲಾ ರೀತಿಯ ಅಭಿವೃದ್ಧಿಯ ದಾಖಲೆಗಳನ್ನು ಮುರಿದಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ – ಛತ್ತೀಸ್‌ಗಢಕ್ಕೆ ಶಾಸಕರು ಶಿಫ್ಟ್
ಗುಜರಾತ್‌ನಲ್ಲಿ ಇಂದು ಅಲ್ಲಿನ ಜನರು ಬಿಜೆಪಿಯನ್ನು ಆಶೀರ್ವದಿಸಿದ್ದಾರೆ ಹಾಗೂ ವಿಜಯದ ಎಲ್ಲಾ ದಾಖಲೆಗಳನ್ನೂ ಮುರಿದಿದ್ದಾರೆ. ಇದು ಮೋದಿಯವರ ಅಭಿವೃದ್ಧಿ ಮಾದರಿಯಲ್ಲಿ ಸಾರ್ವಜನಿಕರ ಅಚಲ ನಂಬಿಕೆಯ ವಿಜಯವಾಗಿದೆ ಎಂದು ಅಮಿತ್ ಶಾ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಗುಜರಾತ್‌ನಲ್ಲಿ ಬಿಜೆಪಿ 182 ಸ್ಥಾನಗಳಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಜ್ಜಾಗಿದೆ. 1985ರಲ್ಲಿ ಕಾಂಗ್ರೆಸ್‌ನ 149 ಸ್ಥಾನಗಳ ದಾಖಲೆಯನ್ನು ಬಿಜೆಪಿ ಮುರಿದಿದೆ. ಕಾಂಗ್ರೆಸ್ 20 ಸ್ಥಾನಕ್ಕಿಳಿದು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಪ್ರಬಲ ಸವಾಲನ್ನು ಎದುರಿಸಿ, ಬಿಜೆಪಿಯ ಪ್ರಮುಖ ಪ್ರತಿಸ್ಪರ್ಧಿಯಾಗಿ ಚುನಾವಣೆ ನಡೆಸಿದ ಎಎಪಿ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದನ್ನೂ ಓದಿ: ಗುಜರಾತ್ ಚುನಾವಣೆ – ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ ಏನು?
Live Tv
[brid partner=56869869 player=32851 video=960834 autoplay=true]
ಮೈಸೂರು: ಗುಜರಾತ್‌ನಲ್ಲಿ (Gujarat) ಆಮ್ ಆದ್ಮಿ ಪಕ್ಷಕ್ಕೆ (AAP) ಬಿಜೆಪಿ (BJP) ಹಣ ನೀಡಿದೆ. ಕಾಂಗ್ರೆಸ್‌ನ (Congress) ಓಟ್ ಅನ್ನು ವಿಭಜನೆ ಮಾಡುವ ಸಲುವಾಗಿ ಬಿಜೆಪಿ ಆಪ್‌ಗೆ ಹಣ ನೀಡಿದೆ. ಇದರಿಂದ ಗುಜರಾತ್‌ನಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದು, ಕಾಂಗ್ರೆಸ್‌ಗೆ ಹಿನ್ನಡೆ ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಗುಜರಾತ್‌ನಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಬಗ್ಗೆ ನಮಗೆ ಮೊದಲೇ ನಿರೀಕ್ಷೆಯಿತ್ತು. ಏಕೆಂದರೆ ಆಪ್ ನಮ್ಮ ವೋಟ್‌ಗಳನ್ನು ತಿನ್ನುತ್ತಿದೆ. ಆಪ್ ಪಡೆದಿರುವ ಮತಗಳೆಲ್ಲವೂ ಕಾಂಗ್ರೆಸ್‌ಗೆ ಸೇರಿದ್ದು. ಆದರೆ ಹಿಮಾಚಲ ಪ್ರದೇಶದಲ್ಲಿ (Himachal Pradesh) ಹಾಗಾಗುತ್ತಿಲ್ಲ. ಅಲ್ಲಿ ನಾವೇ ಮುಂದಿದ್ದೇವೆ ಎಂದು ಹೇಳಿದರು.
ಗುಜರಾತ್‌ನಲ್ಲಿ ಆಪ್ ಮಾಡಿರುವ ತಂತ್ರಗಾರಿಕೆ ಕರ್ನಾಟಕದಲ್ಲಿ ಮಾಡಲು ಸಾಧ್ಯವಿಲ್ಲ. ಆಪ್ ಪಕ್ಷ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲ. ಇಲ್ಲಿ ಬಿಜೆಪಿ ಜೆಡಿಎಸ್ ಜೊತೆ ಸೇರಿ ಇಂತಹ ತಂತ್ರಗಾರಿಕೆ ಮಾಡಬಹುದು. ಆದರೆ ಅದು ಇಲ್ಲಿ ನಡೆಯುವುದಿಲ್ಲ. ಗುಜರಾತ್‌ನಲ್ಲಿ ಆಪ್ ತುಂಬಾ ಖರ್ಚು ಮಾಡಿ ಚುನಾವಣೆ ಮಾಡಿದೆ. ಆದರೂ ಅದಕ್ಕೆ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು ನೀಡಿದರು. ಇದನ್ನೂ ಓದಿ: ಫಲ ನೀಡಿತು ಚಾಣಕ್ಯ ಜೋಡಿಯ ತಂತ್ರ – ಗುಜರಾತ್‌ನಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳೇನು?
ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆ ಕರ್ನಾಟಕದ ಮೇಲೂ ಪ್ರಭಾವ ಬೀರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯಕ್ಕೆ ಪ್ರಭಾವ ಬೀಳಲು ಸಾಧ್ಯವಿಲ್ಲ. ಆಯಾಯ ರಾಜ್ಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚುನಾವಣೆಯ ಫಲಿತಾಂಶಗಳು ಹೊರಬೀಳುತ್ತವೆ. ಇಲ್ಲಿ ಬಿಜೆಪಿ ಭ್ರಷ್ಟ ಸರ್ಕಾರ ನಡೆಸುತ್ತಿದ್ದರೆ, ಕಾಂಗ್ರೆಸ್ ತುಂಬಾ ಗಟ್ಟಿಯಾಗಿ ನಿಂತಿದೆ. ನಾವು ಕರ್ನಾಟಕದಲ್ಲಿ ಸುಮ್ಮನೆ ಇದ್ದರೂ ಗೆಲ್ಲುವ ತಾಕತ್ತು ನಮ್ಮಲ್ಲಿದೆ. ನಮಗೆ ಯಾವುದೇ ತಂತ್ರಗಾರಿಕೆ ಮಾಡುವ ಅಗತ್ಯವೇ ಇಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಹಿಮಾಚಲದಲ್ಲಿ ಹಾವು, ಏಣಿ ಆಟ – ಪಕ್ಷೇತರರೇ ನಿರ್ಣಾಯಕ?
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಆಮ್ ಆದ್ಮಿ ಪಕ್ಷದಿಂದ (AAP) ನಮಗೆ ತೊಂದರೆಯಾಗುತ್ತಿದೆ. ಆಪ್ ಪಕ್ಷದವರು ಬಿಜೆಪಿಗೆ (BJP) ಅನುಕೂಲವಾಗುವ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ (Dinesh Gundu Rao) ಕಿಡಿ ಕಾರಿದ್ದಾರೆ.
ಗುಜರಾತ್ (Gujarat) ಹಾಗೂ ಹಿಮಾಚಲ ಪ್ರದೇಶದ (Himachal Pradesh) ಚುನಾವಣಾ ಫಲಿತಾಂಶದ (Election Result) ಬಗ್ಗೆ ಪ್ರತಿಕ್ರಿಯಿಸಿದ ಅವರು ಆಪ್ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಬಿಜೆಪಿಗೆ ಅನುಕೂಲವಾಗುವಂತೆ ಅವರು ಪ್ರಚಾರ ಮಾಡುತ್ತಿದ್ದಾರೆ. ಇದನ್ನು ನಾವು ಗೋವಾ ಸೇರಿದಂತೆ ಹಲವು ಕಡೆ ನೋಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಹಾವು, ಏಣಿ ಆಟ – ಪಕ್ಷೇತರರೇ ನಿರ್ಣಾಯಕ?
ಗುಜರಾತ್‌ನಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬರುತ್ತಿಲ್ಲ. ವಿರೋಧ ಪಕ್ಷಗಳಲ್ಲಿನ ವೋಟ್ ವಿಭಜನೆಯಾಗುತ್ತಿದೆ. ಇದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ನಮಗೆ ಗುಜರಾತ್‌ನಲ್ಲಿ ಹೆಚ್ಚು ಸೀಟ್‌ಗಳ ನಿರೀಕ್ಷೆಯಿತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ – ಗುಜರಾತ್‌ನಲ್ಲಿ ದಾಖಲೆ ಬರೆಯುತ್ತಾ ಬಿಜೆಪಿ?
Live Tv
[brid partner=56869869 player=32851 video=960834 autoplay=true]
ಪಣಜಿ: ತೀವ್ರ ಕುತೂಹಲ ಕೆರಳಿಸಿರುವ ಹಿಮಾಚಲ ಪ್ರದೇಶ (Himachal Pradesh), ಗುಜರಾತ್ ವಿಧಾನಸಭೆ ಚುನಾವಣೆ (Gujrath Vidhanasabha Election) ಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು ಕೇಂದ್ರ ಚುನಾವಣಾ ಆಯೋಗ (Election Commission) ಎಲ್ಲ ತಯಾರಿ ಮಾಡಿಕೊಂಡಿದೆ. ಚುನಾವಣೊತ್ತರ ಸಮೀಕ್ಷೆಗಳಲ್ಲಿ ಗುಜರಾತ್ ನಲ್ಲಿ ಬಿಜೆಪಿ ಆಡಳಿತಕ್ಕೆ ಬಂದ್ರೆ ಹಿಮಾಚಲ ಪ್ರದೇಶದಲ್ಲಿ ನೆಕ್ ಟು ನೆಕ್ ಫೈಟ್ ಇದೆ ಎಂದು ಹೇಳಿವೆ. ಹೀಗಾಗಿ ಇಂದು ಪ್ರಕಟವಾಗಲಿರುವ ಎರಡು ರಾಜ್ಯಗಳ ಜನಾದೇಶ ಎಲ್ಲರ ಗಮನ ಸೆಳೆಯಲಿದೆ.
ಕಳೆದೊಂದು ತಿಂಗಳನಿಂದ ದೇಶದ ಜನರ ಗಮನ ಸೆಳೆದಿದ್ದು ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತ ಪತ್ರಗಳನ್ನು 8:30 ರ ಬಳಿಕ ಇವಿಎಂ ಮತ ಎಣಿಕೆ ಆರಂಭವಾಗಲಿದೆ.
ಮತ ಎಣಿಕೆ ಹಿನ್ನಲೆ ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗಗಳೊಂದಿಗೆ ಎಲ್ಲ ತಯಾರಿ ಮಾಡಿಕೊಂಡಿದೆ. ಗುಜರಾತ್ ನ 182 ಕ್ಷೇತ್ರಗಳು ಮತ್ತು ಹಿಮಾಚಲ ಪ್ರದೇಶದ 68 ಕ್ಷೇತ್ರಗಳ ಮತ ಎಣಿಕೆಗಾಗಿ ಆಯೋಗ 116 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಿದೆ. ಈ ಎರಡು ರಾಜ್ಯಗಳ ಜೊತೆಗೆ ಒಡಿಶಾ (Odisha), ರಾಜಸ್ಥಾನ, ಬಿಹಾರ, ಛತ್ತೀಸ್ಗಢದಲ್ಲಿ ತಲಾ ಒಂದು ಮತ್ತು ಉತ್ತರ ಪ್ರದೇಶದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಹಾಗೂ ಒಂದು ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಫಲಿತಾಂಶವನ್ನು ಆಯೋಗ ಪ್ರಕಟಿಸಲಿದೆ.
ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಹಂತಸ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆಗೆ ದಕ್ಕಬಾರದಂತೆ ನೋಡಿಕೊಳ್ಳಲು ಮತ ಎಣಿಕೆ ಕೇಂದ್ರಗಳ ಸುತ್ತಲೂ ಸೆಕ್ಷನ್ 144 CRPC ಅನ್ನು ವಿಧಿಸಿದೆ.
ಮೋದಿ ತವರು ಗುಜರಾತ್ ನಲ್ಲಿ ಗೆಲವು ಯಾರದು..?: ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರ ಎನ್ನುವ ಕಾರಣಕ್ಕೆ ಗುಜರಾತ್ ಎಲ್ಲರ ಗಮನ ಸೆಳೆದಿದೆ. ಗುಜರಾತ್ ನಲ್ಲಿ ನರೇಂದ್ರ ಮೋದಿ (Narendra Modi) ಅವರ ಅಶ್ವಮೇಧ ಯಾಗವನ್ನು ತಡೆದು ನಿಲ್ಲಿಸುವುರ್ಯಾರು ಎನ್ನುವುದು ಎಲ್ಲರ ಕುತೂಹಲವಾಗಿದೆ. ಆಡಳಿತ ವಿರೋಧಿ ಅಲೆಯನ್ನು ಮೀರಿ ಬಿಜೆಪಿ (BJP) ಉತ್ತಮ ಪ್ರಯತ್ನ ಮಾಡಿದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿದೆ ಎಂದು ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ, ಆಪ್ ಕಮಾಲ್ ಗುಜರಾತ್ ನಡೆದಿಲ್ಲ ಅದಾಗ್ಯೂ ಖಾತೆ ತೆರೆಯುವಲ್ಲಿ ಯಶಸ್ವಿಯಾಗಲಿದೆ ಎಂದು ಭವಿಷ್ಯ ನುಡಿದಿವೆ.
ಬಹುತೇಕ ರಾಷ್ಟ್ರೀಯ ಮಾಧ್ಯಮಗಳು ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದ್ದು 40 – 46% ವರೆಗೂ ಮತ ಪ್ರಮಾಣ ಪಡೆಯಬಹುದು ಎಂದು ಹೇಳಿವೆ. ಕಾಂಗ್ರೆಸ್ 20-30% ಹಾಗೂ ಆಪ್ 10 – 15 % ಮತಗಳು ಪಡೆಯಬಹುದು ಎನ್ನಲಾಗಿದೆ. ಕಳೆದ ಬಾರಿ ಪಾಟಿದಾರ್ ಹೋರಾಟದಿಂದ ಉತ್ತಮ ಫಲಸು ತೆಗೆದಿದ್ದ ಕಾಂಗ್ರೆಸ್ ಗೆ ಈ ಬಾರಿ ಗಟ್ಟಿಯಾದ ಅಸ್ತ್ರವೇ ಇಲ್ಲದಂತಾಗಿದೆ. ಬೆಲೆ ಏರಿಕೆ ನಿರುದ್ಯೋಗದ ಮೇಲೆ ಇಟ್ಟು ಅಖಾಡಕ್ಕೆ ಇಳಿದ ಕೈಪಡೆಗೆ ಆಪ್ ದೊಡ್ಡ ಪೆಟ್ಟು ನೀಡಿರುವುದು ಸಮೀಕ್ಷೆಯಲ್ಲಿ ಗೊತ್ತಾಗುತ್ತಿದೆ. ಮೊದಲ ಬಾರಿಗೆ ಅಖಾಡಕ್ಕೆ ಇಳಿದಿದ್ದು ಖಾತೆ ತೆರೆಯುವ ಲಕ್ಷಣಗಳು ಕಂಡು ಬಂದಿವೆ.
ಉಪ ಚುನಾವಣೆಯಲ್ಲಿ ಸೋತಿದ್ದ ಜೆ.ಪಿ ನಡ್ಡಾಗೆ ಪ್ರತಿಷ್ಟೆಯ ಪ್ರಶ್ನೆ: ಇನ್ನೂ ಪಹಾಡಿ ರಾಜ್ಯ ಅಂತ್ಲೆ ಕರೆಸಿಕೊಳ್ಳುವ ಹಿಮಾಚಲ ಪ್ರದೇಶದಲ್ಲಿ ಈ ಬಾರಿ ಗೆಲ್ಲೊದ್ಯಾರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಈ ರಾಜ್ಯದಲ್ಲಿ ಪ್ರತಿ ಐದು ವರ್ಷಗಳಿಗಮೊಮ್ಮೆ ಜನರು ಬೇರೆ ಬೇರೆ ಪಕ್ಷಗಳಿಗೆ ನೀಡುತ್ತಾ ಬಂದಿದ್ದಾರೆ. ಉತ್ತರಾಖಂಡ ನಲ್ಲೂ ಇದೇ ಸಂಸ್ಕೃತಿ ಇತ್ತು, ಅದನ್ನು ಬದಲಿಸಿದ್ದ ಬಿಜೆಪಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಹಾಗೆಯೇ ಹಿಮಾಚಲ ಪ್ರದೇಶದಲ್ಲೂ ಸತತ ಎರಡನೇ ಬಾರಿ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿ ಬಿಜೆಪಿ ನಾಯಕರಿದ್ದಾರೆ.
ವಿಶೇಷವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (J P Nadda) ಮುಂದೆ ಈ ಸವಾಲಿದ್ದು, ಈ ಚುನಾವಣೆ ಗೆಲ್ಲುವ ಮೂಲಕ ಉಪ ಚುನಾವಣೆ ಕಹಿ ಮರೆಯಬೇಕಿದೆ. ಆದರೆ ಸಮೀಕ್ಷೆಗಳು ಮಾತ್ರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ (Congress) ಮತ್ತು ತೀವ್ರ ಪೈಪೋಟಿ ಇದೆ. ಕಡೆ ಘಳಿಗೆಯಲ್ಲಿ ಯಾರು ಬೇಕಾದ್ರು ಅಧಿಕಾರ ಹಿಡಿಯಬಹುದು ಎಂದು ಭವಿಷ್ಯ ನುಡಿದಿವೆ.
ಬಹುತೇಕ ಸಮೀಕ್ಷೆಗಳು ನೇರಾ ನೇರ ಫೈಟ್ ತೋರಿಸಿದ್ರು, ಕೆಲವು ಸಮೀಕ್ಷೆಗಳು ಬಿಜೆಪಿ ಸರ್ಕಾರ ರಚನೆ ಮಾಡುವ ಸಣ್ಣ ಸಾಧ್ಯತೆಗಳನ್ನು ತೋರಿಸಿವೆ. ಈ ಹಿನ್ನೆಲೆ ಕಾಂಗ್ರೆಸ್ ಕೂಡಾ ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದು, ಇಂದಿನ ಫಲಿತಾಂಶಕ್ಕಾಗಿ ಕಾದು ಕುಳಿತಿದೆ. ಈ ನಡುವೆ ತೀವ್ರ ಹೋರಾಟ ನಡೆಸಿದ್ದ ಆಪ್ ಸಮೀಕ್ಷೆಗಳಲ್ಲಿ ಫೆಲ್ಯೂವರ್ ಆಗಿರುವುದು ಕಂಡು ಬಂದರೂ, ಸಮೀಕ್ಷೆಗಳು ಸುಳ್ಳಾಗಲಿದ್ದು ನಾವು ಅಧಿಕಾರ ಹಿಡಿಯಲಿದ್ದೇವೆ ಎಂದು ಹೇಳಿಕೊಂಡಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಇಂದು ಮೇಲ್ಮನೆ ಚುನಾವಣೆಯ 25 ಸ್ಥಾನಗಳ ಚುನವಣಾ ಫಲಿತಾಂಶ ಹೊರಬೀಳಲಿದೆ. 20 ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಫಲಿತಾಂಶ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಡಿಸೆಂಬರ್ 10ರಂದು ಮತದಾನ ನಡೆದಿತ್ತು.
4. ಶಿವಮೊಗ್ಗ
-ಡಿ.ಎಸ್.ಅರುಣ್, ಬಿಜೆಪಿ – ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ ಪುತ್ರ
-ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ – ಹಾಲಿ ಪರಿಷತ್ ಸದಸ್ಯ
5. ಧಾರವಾಡ
-ಪ್ರದೀಪ್ ಶೆಟ್ಟರ್, ಬಿಜೆಪಿ – ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಹೋದರ
-ಸಲೀಂ ಅಹ್ಮದ್, ಕಾಂಗ್ರೆಸ್ – ಕೆಪಿಸಿಸಿ ಕಾರ್ಯಾಧ್ಯಕ್ಷ
6. ಬೆಳಗಾವಿ
-ಮಹಾಂತೇಶ್ ಕವಟಗಿಮಠ, ಬಿಜೆಪಿ – ಹಾಲಿ ಸದಸ್ಯ
-ಚನ್ನರಾಜ್ ಹಟ್ಟಿ ಬಿ ಹಟ್ಟಿಹೊಳಿ, ಕಾಂಗ್ರೆಸ್ – ಕಾಂಗ್ರೆಸ್ ಪ್ರಭಾವಿ ನಾಯಕಿ ಹೆಬ್ಬಾಳ್ಕರ್ ಸಹೋದರ
-ಲಖನ್ ಜಾರಕಿಹೊಳಿ, ಪಕ್ಷೇತರ – ರಮೇಶ್, ಸತೀಶ್ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಕಿರಿಯ ಸಹೋದರ
7. ವಿಜಯಪುರ
-ಪಿ.ಎಚ್.ಪೂಜಾರ್, ಬಿಜೆಪಿ – ಮಾಜಿ ಶಾಸಕ
-ಸುನೀಲ್ ಗೌಡ ಪಾಟೀಲ್, ಕಾಂಗ್ರೆಸ್ – ಹಾಲಿ ಪರಿಷತ್ ಸದಸ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ
8. ಹಾಸನ
-ಸೂರಜ್ ರೇವಣ್ಣ, ಜೆಡಿಎಸ್ – ಮಾಜಿ ಸಚಿವ ಎಚ್.ಡಿ ರೇವಣ್ಣ ಪುತ್ರ, ಪ್ರಜ್ವಲ್ ರೇವಣ್ಣ ಸಹೋದರ
-ವಿಶ್ವನಾಥ್, ಬಿಜೆಪಿ
-ಎಂ.ಶಂಕರ್, ಕಾಂಗ್ರೆಸ್
9. ಮಂಡ್ಯ
-ಅಪ್ಪಾಜಿ ಗೌಡ, ಜೆಡಿಎಸ್ – ಹಾಲಿ ಪರಿಷತ್ ಸದಸ್ಯ
-ದಿನೇಶ್ ಗೂಳಿಗೌಡ, ಕಾಂಗ್ರೆಸ್ – ಸಚಿವ ಎಸ್.ಟಿ.ಸೋಮಶೇಖರ್ ಒಎಸ್‍ಡಿ ಆಗಿದ್ದವರು
-ಮಂಜು ಕೆ.ಆರ್.ಪೇಟೆ, ಬಿಜೆಪಿ
10. ಬೆಂಗಳೂರು ಗ್ರಾಮಾಂತರ
-ಎಸ್.ರವಿ ಕಾಂಗ್ರೆಸ್ – ಹಾಲಿ ಪರಿಷತ್ ಸದಸ್ಯ
-ರಮೇಶ್ ಗೌಡ, ಜೆಡಿಎಸ್ – ಹಾಲಿ ಪರಿಷತ್ ಸದಸ್ಯ
-ಬಿ.ಎಂ.ನಾರಾಯಣ ಸ್ವಾಮಿ, ಬಿಜೆಪಿ
11. ಬೆಂಗಳೂರು ನಗರ
-ಗೋಪಿನಾಥ್ ರೆಡ್ಡಿ, ಬಿಜೆಪಿ – ಈಸಲ ಎಸ್ಟಿ ಸೋಮಶೇಖರ್, ಬೈರತಿ ಬಸವರಾಜು ಸಪೋರ್ಟ್
-ಯೂಸುಫ್ ಷರೀಫ್, ಕಾಂಗ್ರೆಸ್ – ಡಿಕೆಶಿ ಪ್ರತಿಷ್ಠೆ, ಅತ್ಯಂತ ಸಿರಿವಂತ ಅಭ್ಯರ್ಥಿ
ಹುಬ್ಬಳ್ಳಿ/ಧಾರವಾಡ: ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ತವರಿನಲ್ಲಿ ನಡೀತಿರೋ ಮೊದಲ ಚುನಾವಣೆ ಇದಾಗಿರೋದ್ರಿಂದ ಅವಳಿ ನಗರ ಪಾಲಿಕೆಯಲ್ಲಿ ಕಮಲ ಅರಳಿಸೋ ಉಮೇದಿನಲ್ಲಿದೆ. ಈ ಬಾರಿ ಒಟ್ಟು 82 ವಾರ್ಡ್‍ಗಳಿಗೆ ಚುನಾವಣೆ ನಡೆದಿದೆ.
ಪಾಲಿಕೆಯಲ್ಲಿ ಈ ಬಾರಿ ಒಟ್ಟು 420 ಅಭ್ಯರ್ಥಿಗಳಿದ್ದು, ಅಧಿಕಾರದ ಗದ್ದುಗೆ ಏರಲು 42 ಸ್ಥಾನಗಳ ಅಗತ್ಯವಿದೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿತ್ತು. ಕಳೆದ ಮೂರು ಅವಧಿಗಳಲ್ಲಿಯೂ ಬಿಜೆಪಿ ಪ್ರಾಬಲ್ಯ ಮೆರೆದಿತ್ತು. ಹೀಗಾಗಿ ಸಿಎಂ ತವರಿನಲ್ಲಿ ಮತ್ತೊಮ್ಮೆ ಕಮಲ ಅರಳೋದು ನಿಶ್ಚಿತ ಎಂದು ಬಿಜೆಪಿ ಲೆಕ್ಕಾಚಾರ ಹಾಕುತ್ತಿದೆ. ಆದರೆ ಈ ಬಾರಿ ಬಿಜೆಪಿಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿದೆ. ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ
2013 ರಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ 67 ವಾರ್ಡ್‍ಗಳಿಗೆ ಮತದಾನ ನಡೆದಿತ್ತು. ಸಹಜವಾಗಿ ಬಿಜೆಪಿ, ಪಕ್ಷೇತರ ಹಾಗೂ ಕೆಜೆಪಿ ಅಭ್ಯರ್ಥಿಗೆ ತನ್ನ ತೆಕ್ಕೆಗೆ ತೆಗೆದುಕೊಂಡು ಅಧಿಕಾರ ಸ್ವೀಕಾರ ಮಾಡಿತ್ತು. ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿಯೂ 34 ಆಗುತ್ತಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಧಿಕಾರ ಮಾಡೋಕೆ ಪ್ರಯತ್ನ ಸಹ ಮಾಡಿರಲಿಲ್ಲ. ಈ ಬಾರಿ ವಾರ್ಡ್‍ಗಳ ಸಂಖ್ಯೆ 82 ಆಗಿವೆ. ಇದನ್ನೂ ಓದಿ: ಕಲಬುರಗಿಯಲ್ಲಿ ಭದ್ರಕೋಟೆ ಉಳಿಸಿಕೊಳ್ಳುತ್ತಾ ಕಾಂಗ್ರೆಸ್?
ಈ ಬಾರಿ ಯಾರಿಗೆ ಹುಬ್ಬಳ್ಳಿ-ಧಾರವಾಡ ಗದ್ದುಗೆ..?
* ಒಟ್ಟು ವಾರ್ಡ್ – 82
* ಮ್ಯಾಜಿಕ್ ನಂ – 42
* ಅಭ್ಯರ್ಥಿಗಳು – 420
* ಮತದಾನ – ಶೇ.55
(ಬಿಜೆಪಿ 82, ಕಾಂಗ್ರೆಸ್ 82, ಜೆಡಿಎಸ್ 49, ಇತರೆ 207)