Tag: Election Ticket

  • ಹಾಸನದಲ್ಲಿ ಸ್ವರೂಪ್‌ಗೆ ಟಿಕೆಟ್ ಫಿಕ್ಸ್ – ಪರೋಕ್ಷವಾಗಿ ಸುಳಿವು ಕೊಟ್ಟ HDK

    ಹಾಸನದಲ್ಲಿ ಸ್ವರೂಪ್‌ಗೆ ಟಿಕೆಟ್ ಫಿಕ್ಸ್ – ಪರೋಕ್ಷವಾಗಿ ಸುಳಿವು ಕೊಟ್ಟ HDK

    – ನನ್ನ ಹತ್ರ ಬ್ಲ್ಯಾಕ್‌ಮೇಲ್‌ ನಡೆಯಲ್ಲ; ರೇವಣ್ಣ ದಂಪತಿಗೆ ಟಾಂಗ್

    ಬೆಂಗಳೂರು: ಹಾಸನ ಟಿಕೆಟ್ (Hassan Ticket) ಕಗ್ಗಂಟು ಮತ್ತೊಂದು ಹಂತದಲ್ಲಿ ಕುತೂಹಲ ಕೆರಳಿಸಿದೆ.

    ಯಲಹಂಕದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಕಾರ್ಯಕರ್ತನೋರ್ವ, ಪಕ್ಷದ ಪರವಾಗಿ ಕೆಲಸ ಮಾಡಿದವರಿಗೆ ಟಿಕೆಟ್ ನೀಡಬೇಕು. ಹಾಸನದಲ್ಲಿ ಸ್ವರೂಪ್‌ಗೆ (Swaroop) ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಮುಲ್ ದೇಶದ ಬ್ರ್ಯಾಂಡ್‌, ಭಾರತದಲ್ಲೇ ಮಾರಾಟ ಮಾಡಿದ್ರೆ ಏನು ತೊಂದ್ರೆ – ಸಿ.ಟಿ ರವಿ ಪ್ರಶ್ನೆ

    ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಮಾಧ್ಯಮಮಿತ್ರರಿಗೂ ಹೇಳ್ತೀನಿ ಕೇಳಿಸಿಕೊಳ್ಳಿ. ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯ. ಕಾರ್ಯಕರ್ತರಿಗೆ ಟಿಕೆಟ್ ಅಂತಾ ಹೇಳಿದ್ದೀನಿ. ಅದರಲ್ಲಿ ಬದಲಾವಣೆ ಇಲ್ಲ ಅಂತ ಪರೋಕ್ಷವಾಗಿ ಸ್ವರೂಪ್‌ಗೇ ಟಿಕೆಟ್ ಅಂತ ಹೇಳಿದ್ದಾರೆ. ಇದನ್ನೂ ಓದಿ: ದೇವೇಗೌಡ್ರು ಅಡುಗೆ ಮನೆಯಲ್ಲಿ ಅರ್ಧ ಗಂಟೆ ಕುಳಿತರೆ ಜೆಡಿಎಸ್ ಟಿಕೆಟ್ ಹಂಚಿಕೆ ಮುಗಿಯುತ್ತೆ: ತೇಜಸ್ವಿ ಸೂರ್ಯ ವ್ಯಂಗ್ಯ

    ಈ ಮಧ್ಯೆ, ಹಾಸನದಲ್ಲಿ ಭವಾನಿಗೆ (Bhavani Revanna) ಟಿಕೆಟ್ ತಪ್ಪಿದರೆ, ಹೊಳೇನರಸೀಪುರದಲ್ಲಿ ನಾನೂ ಕೂಡ ಸ್ಪರ್ಧೆ ಮಾಡಲ್ಲ ಅಂತಾ ಶುಕ್ರವಾರ ಸಭೆಯಲ್ಲಿ ರೇವಣ್ಣ (HD Revanna) ಹೇಳಿದ್ದಾರೆ ಅನ್ನೋದು ತಿಳಿದು ಬಂದಿದೆ. ಇದರ ಬೆನ್ನಲ್ಲೇ, ನನ್ನ ಹತ್ತಿರ ಬ್ಲ್ಯಾಕ್‌ ಮೇಲ್‌ ನಡೆಯಲ್ಲ ಅಂತಲೂ ಪರೋಕ್ಷವಾಗಿ ರೇವಣ್ಣ ದಂಪತಿಗೆ ಟಾಂಗ್ ಕೊಟ್ಟಿದ್ದಾರೆ.

  • ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್‍ಗಾಗಿ ಭಾರೀ ಕಸರತ್ತು

    ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್‍ಗಾಗಿ ಭಾರೀ ಕಸರತ್ತು

    ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ (Janardhan Poojary) ಪ್ರಭಾವ ಬಳಸಿ ಈ ಬಾರಿಯ ಚುನಾವಣಾ ಟಿಕೆಟ್‍ಗಾಗಿ ಭಾರೀ ಕಸರತ್ತು ನಡೆಯುತ್ತಿದೆ.

    ಹೌದು. ಹಿರಿಯ ಕಾಂಗ್ರೆಸ್ ನಾಯಕನ ಮೂಲಕ ಟಿಕೆಟ್ ಪಡೆಯಲು ಒತ್ತಡ ತಂತ್ರ ಹೆಣೆಯಲಾಗುತ್ತಿದೆ. ಜನಾರ್ದನ ಪೂಜಾರಿಯಿಂದ ಡಿ.ಕೆ ಶಿವಕುಮಾರ್ (DK Shivakumar) ಗೆ ಕರೆ ಮಾಡಿಸಿ ಟಿಕೆಟ್ ಕೊಡಿಸಲು ಮನವಿ ಮಾಡಿದ ಪ್ರಸಂಗ ನಡೆದಿದೆ. ಇದನ್ನೂ ಓದಿ: ನಕಲಿ ಚಿನ್ನ ಕೊಟ್ಟು ಅಸಲಿ ಆಭರಣದೊಂದಿಗೆ ಅಜ್ಜಿ ಗ್ಯಾಂಗ್‌ ಎಸ್ಕೇಪ್‌

    ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಶೀತ್ ಪಿರೇರಾ ಟಿಕೆಟ್ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾನುವಾರ ಜನಾರ್ದನ ಪೂಜಾರಿ ಮನೆಗೆ ತೆರಳಿ ಟಿಕೆಟ್ ತೆಗೆಸಿ ಕೊಡಲು ಪ್ಲಾನ್ ಮಾಡಿದ್ದಾರೆ. ಅಂತೆಯೇ ಜನಾರ್ದನ ಪೂಜಾರಿ ಅವರು, ಡಿಕೆಶಿಗೆ ಕರೆ ಮಾಡಿ ಆಶೀತ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದಾರೆ. ಜೆ.ಆರ್.ಲೋಬೋ ಬದಲು ಆಶೀತ್ ಪಿರೇರಾಗೆ ಟಿಕೆಟ್ ಕೊಡಲು ಹೇಳಿದ್ದಾರೆ. ಇದನ್ನೂ ಓದಿ: ಸುಮಲತಾ ಜೊತೆ ನಮ್ಮ ಕಾರ್ಯಕರ್ತರು ಗುರುತಿಸಿಕೊಳ್ಳಬೇಡಿ: ಮಂಡ್ಯ ಕಾಂಗ್ರೆಸ್

    ಡಿಕೆಶಿ ಬಳಿ ಪೂಜಾರಿ ಹೇಳಿದ್ದೇನು..?: ನನ್ನಲ್ಲಿಗೆ ಯೂತ್ ಕಾಂಗ್ರೆಸ್ ಲೀಡರ್ ಆಶೀತ್ ಪಿರೇರಾ ಬಂದಿದ್ದಾರೆ. ಅವರಿಗೆ ಮಂಗಳೂರು ದಕ್ಷಿಣಕ್ಕೆ ಏನಾದ್ರೂ ಸಹಾಯ ಮಾಡಲು ಸಾಧ್ಯ ಉಂಟಾ..?. ನೀವೇ ಸುಧಾರಿಸಿ, ಜೆ.ಆರ್.ಲೋಬೋ ಸ್ಥಾನಕ್ಕೆ, ಆಶೀತ್ ಪಿರೇರಾ ಕೂಡ ಕ್ರಿಶ್ಚಿಯನ್. ಡಿಕೆಶಿಗೆ ಕರೆ ಮಾಡಿ ಆಶೀತ್ ಪಿರೇರಾ ಪರ ಪೂಜಾರಿ ಮಾತನಾಡಿದ್ದಾರೆ.

    ಸದ್ಯ ಮಂಗಳೂರು ದಕ್ಷಿಣದಿಂದ ಮಾಜಿ ಶಾಸಕ ಜೆ.ಆರ್ ಲೋಬೋ (J R Lobo) ಮತ್ತು ಐವನ್ ಡಿಸೋಜಾ (Ivan D’Souza) ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನನಗೆ ಪಕ್ಷ ಮುಖ್ಯ, ಸಣ್ಣ ವಿಚಾರ ದೊಡ್ಡದು ಮಾಡೋದು ಬೇಡ: ಆರ್.ವಿ.ದೇಶಪಾಂಡೆ

    ನನಗೆ ಪಕ್ಷ ಮುಖ್ಯ, ಸಣ್ಣ ವಿಚಾರ ದೊಡ್ಡದು ಮಾಡೋದು ಬೇಡ: ಆರ್.ವಿ.ದೇಶಪಾಂಡೆ

    ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಮತ್ತೊಮ್ಮೆ ಸಾಬೀತಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಿಕೆಟ್ ಹೇಳಿಕೆಗೆ ಪಕ್ಷದಲ್ಲೆ ಅಪಸ್ವರ ಕೇಳಿ ಬಂದಿದೆ. ಶಾಸಕ ದಿನೇಶ್ ಗುಂಡೂರಾವ್ ಬಳಿಕ ಹಿರಿಯ ನಾಯಕ ಆರ್. ದೇಶಪಾಂಡೆ ಕೂಡಾ ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    dkshivakumar

    ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಎಲ್ಲರಿಗೂ ಅಡ್ಜೆಸ್ಟ್ ಆಗುತ್ತೇನೆ. ಎಲ್ಲದ್ದಕ್ಕಿಂತ ಪಕ್ಷ ನನಗೆ ದೊಡ್ಡದು.ಪಕ್ಷ ನನಗೆ ಮುಖ್ಯ. ಪಕ್ಷ ನನ್ನನ್ನು ಮಂತ್ರಿ ಮಾಡಿದೆ. ಅಧ್ಯಕ್ಷ ಸ್ಥಾನ ಕೊಟ್ಟಿದೆ. ಹೀಗಾಗಿ ಗೊಂದಲಗಳಿಗಿಂತ ನನಗೆ ಪಕ್ಷ ಬೆಳೆವಣಿಗೆ ಆಗಬೇಕು ಅಷ್ಟೆ. ಸಣ್ಣ ಸಣ್ಣ ವಿಚಾರವನ್ನು ದೊಡ್ಡದು ಮಾಡುವುದು ಸರಿಯಲ್ಲ ಎಂದು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಯಾರೇ ಆಗ್ಲಿ.. ನನ್ನಿಂದ ಟಿಕೆಟ್ ಘೋಷಣೆ ಅಂತ ಹೇಳಿದ್ರೆ, ಅದು ಕಾಂಗ್ರೆಸ್‍ನಲ್ಲಿ ಸಾಧ್ಯವಿಲ್ಲ: ಡಿಕೆಶಿ ವಿರುದ್ಧ ಗುಂಡೂರಾವ್ ಕಿಡಿ

    ಡಿ.ಕೆ. ಶಿವಕುಮಾರ್ ಅವರು ವೇಗವಾಗಿ ಹೋಗುತ್ತಿದ್ದಾರೆ. ಅದು ಸರಿಯೇ. ಚುನಾವಣೆಗೆ ಸಮಯ ಕಡಿಮೆ ಇದೆ. ಹೀಗಾಗಿ ವೇಗವಾಗಿ ಹೋಗುತ್ತಿದ್ದಾರೆ. ಒಂದು ಮನೆಯಲ್ಲಿ 4 ಜನ ಮಕ್ಕಳು ಇರುತ್ತಾರೆ. ಒಬ್ಬೊಬ್ಬರು ಒಂದೊಂದು ರೀತಿ ಇರುತ್ತಾರೆ. ಎಲ್ಲರ ಅಭಿಪ್ರಾಯ ಒಂದೇ ಇರುವುದಿಲ್ಲ ಅಂತ ತಮ್ಮ ಮೇಲೆ ಡಿ.ಕೆ.ಶಿವಕುಮಾರ್ ಮಾಡಿದ ಆರೋಪಕ್ಕೂ ಟಾಂಗ್ ನೀಡಿದರು. ಇದನ್ನೂ ಓದಿ: ಹೈದರಾಬಾದ್ ಕರ್ನಾಟಕಕ್ಕೆ ಹಣ ಇಟ್ಟಿರುವುದು ಅವರಿಗೆ ಇಷ್ಟವಿಲ್ಲವೇನೋ: ಖರ್ಗೆಗೆ ಸಿಎಂ ತಿರುಗೇಟು

    ಕೆಲಸ ಮಾಡದ ಶಾಸಕರಿಗೆ ಟಿಕೆಟ್ ಕೊಡುವುದಿಲ್ಲ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ದೇಶಪಾಂಡೆ, ಕಾಂಗ್ರೆಸ್ ದೊಡ್ಡ ಪಕ್ಷ. ಕೆಲಸ ಮಾಡದೇ ಹೋದರೆ ಟಿಕೆಟ್ ಕೊಡುವುದಿಲ್ಲ ಎನ್ನುವುದು ಅವರ ಅಭಿಪ್ರಾಯ. ಟಿಕೆಟ್ ಬಗ್ಗೆ ನಾನು ಹೆಚ್ಚಾಗಿ ಮಾತಾಡುವುದಿಲ್ಲ. ಆದರೆ ಅಂತಿಮವಾಗಿ ಟಿಕೆಟ್ ತೀರ್ಮಾನ ಮಾಡುವುದು ಹೈಕಮಾಂಡ್. ಅಭಿಪ್ರಾಯ ಕೊಡುವುದು ಅಷ್ಟೆ ನಮ್ಮ ಕೆಲಸ. ಅಂತಿಮವಾಗಿ ತೀರ್ಮಾನ ಮಾಡುವುದು ಹೈಕಮಾಂಡ್ ಎನ್ನುವ ಮೂಲಕ ಡಿ.ಕೆ. ಶಿವಕುಮಾರ್‌ಗೆ ತಿರುಗೇಟು ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಟಿಕೆಟ್ ಫೈನಲ್ ಮಾಡಲು ಇಂದಿನಿಂದ ಮೂರು ದಿನಗಳ ಕಾಲ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಸರಣಿ ಸಭೆ

    ಟಿಕೆಟ್ ಫೈನಲ್ ಮಾಡಲು ಇಂದಿನಿಂದ ಮೂರು ದಿನಗಳ ಕಾಲ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಸರಣಿ ಸಭೆ

    ಬೆಂಗಳೂರು: ಚುನಾವಣಾ ಟಿಕೆಟ್ ಸಂಬಂಧ ಇವತ್ತಿನಿಂದ ಏಪ್ರಿಲ್ 6 ತನಕ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ಯಲಹಂಕದ ಖಾಸಗಿ ರೆಸಾರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂರು ದಿನಗಳ ಕಾಲ ಈ ಸಭೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಚರ್ಚೆ ನಡೆಸುತ್ತೇವೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ. ಎರಡು-ಮೂರು ಸರ್ವೆಗಳನ್ನು ನಡೆಸಿದ್ದೇವೆ, ಆ ಕುರಿತು ಚರ್ಚೆ ನಡೆಸಲಾಗುತ್ತದೆ. ಅಮಿತ್ ಶಾ ಅವರ ಜೊತೆ ಚರ್ಚೆ ಮಾಡಿದ ಬಳಿಕ ಮೊದಲ ಪಟ್ಟಿ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದರು.

    ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ತಾಲೂಕು ಅಧ್ಯಕ್ಷ, ತಾಲೂಕು ಪ್ರಧಾನ ಕಾರ್ಯದರ್ಶಿ, ಮಂಡಲ ಅಧ್ಯಕ್ಷರನ್ನು ಸಭೆಗೆ ಬರುವಂತೆ ಸೂಚಿಸಿಲಾಗಿದೆ. ಪ್ರಕಾಶ್ ಜಾವ್ಡೇಕರ್, ಪಿಯೂಶ್ ಗೋಯಲ್, ಮುರಳೀಧರ್ ರಾವ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.

    ಮೊದಲಿಗೆ ಬೆಂಗಳೂರು ನಗರದ ಪ್ರಮುಖರ ಜೊತೆ ಸಭೆ ನಡೆಯಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಅಂತಿಮಗೊಳ್ಳಲಿದೆ. ಮೊದಲ ದಿನವಾದ ಇಂದು 73 ವಿಧಾನಸಭಾ ಕ್ಷೇತ್ರಗಳ ಪ್ರಮುಖರ ಜೊತೆ ಚರ್ಚೆ ನಡೆಯಲಿದೆ. ಬೆಳಗ್ಗೆ ಬೆಂಗಳೂರು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲಾ ಪ್ರಮುಖರೊಂದಿಗೆ ಸಭೆ ನಡೆಯಲಿದೆ. ಮಧ್ಯಾಹ್ನ ಬಳ್ಳಾರಿ, ರಾಯಚೂರು, ಕೊಪ್ಪಳ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲಾ ಪ್ರಮುಖರೊಂದಿಗೆ ಸಭೆ ನಡೆಯಲಿದೆ ಎಂದು ತಿಳಿಸಿದರು.

    ಏಪ್ರಿಲ್ 8 ಮತ್ತು 9 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆ ಇದೆ. ಈ ವೇಳೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ರಾಜ್ಯ ಚುನಾವಣಾ ಸಮಿತಿ ಅನುಮೋದಿಸಲಿದೆ. ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಮುಂದಿಟ್ಟು ಅಮಿತ್ ಶಾ ಅನುಮೋದನೆ ಪಡೆಯಲಿದ್ದಾರೆ. ಇಂದಿನ ಸಭೆಯಲ್ಲಿ ಅಭ್ಯರ್ಥಿಗಳ ಕುರಿತು ಅಭಿಪ್ರಾಯ ಸಂಗ್ರಹ, ಚುನಾವಣಾ ವೆಚ್ಚ, ನಾಯಕರ ಪ್ರಚಾರದ ಸಮಯ ನಿಗದಿ ಇತ್ಯಾದಿ ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

    ಮೂರು ದಿನಗಳ ಕಾಲ ಸಭೆ ನಡೆಸಲು ಬಿಜೆಪಿ ಚುನಾವಣಾ ಆಯೋಗದಿಂದ ಅನುಮತಿ ಪಡೆದಿದೆ. ಬಿಜೆಪಿ ಸಭೆ ನಡೆಯುತ್ತಿರುವ ಸ್ಥಳಕ್ಕೆ ಚುನಾವಣಾಧಿಕಾರಿಗಳು ಭೇಟಿ ನೀಡಿದರು. ಸಭೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆಗಿದೆಯಾ ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸಭೆ ನಡೆಯುತ್ತಿರುವ ಸ್ಥಳದಲ್ಲಿ ಚುನಾವಣಾ ಅಧಿಕಾರಿಗಳು ವೀಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.