Tag: elections

  • ಹುಕ್ಕೇರಿ ನಂತರ ಅಥಣಿ ಸಹಕಾರ ಕ್ಷೇತ್ರದಲ್ಲೂ ಜಾರಕಿಹೊಳಿ ಸಹೋದರರಿಗೆ ಭಾರೀ ಮುಖಭಂಗ

    ಹುಕ್ಕೇರಿ ನಂತರ ಅಥಣಿ ಸಹಕಾರ ಕ್ಷೇತ್ರದಲ್ಲೂ ಜಾರಕಿಹೊಳಿ ಸಹೋದರರಿಗೆ ಭಾರೀ ಮುಖಭಂಗ

    – ಸವದಿ ಬೆಂಬಲಿಗರ ಸಂಭ್ರಮಾಚರಣೆ

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರಿಗೆ (Jarkiholi Brothers) ಮತ್ತೊಮ್ಮೆ ಹಿನ್ನೆಡೆಯಾಗಿದೆ.‌ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಕತ್ತಿ ಕುಟುಂಬದ ವಿರುದ್ಧ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹಿನ್ನಡೆ ಅನುಭವಿಸಿದರೆ ಈಗ ಅವರ ಸಹೋದರ ರಮೇಶ್‌ ಜಾರಕಿಹೊಳಿ (Ramesh Jarkiholi) ಲಕ್ಷ್ಮಣ ಸವದಿಗೆ ಸೆಡ್ಡು ಹೊಡೆದು ಅಥಣಿ ತಾಲೂಕಿನ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದಾರೆ.

    ತೀವ್ರ ಕುತುಹಲಕ್ಕೆ ಕಾರಣವಾಗಿದ್ದ ಅಥಣಿ ತಾಲೂಕಿನ ಕೃಷ್ಣಾ ಸಹಕಾರಿ ಸಂಘದ ಚುನಾವಣೆ ಮುಕ್ತಾಯವಾಗಿದೆ. ಶಾಸಕ ಲಕ್ಷ್ಮಣ್‌ ಸವದಿ (Laxman savadi) ವಿರುದ್ಧ ಅಥಣಿ ತಾಲೂಕಿನ ಎಲ್ಲಾ ಪಕ್ಷದ ನಾಯಕರು ಒಂದಾಗಿ ತೊಡೆ ತಟ್ಟಿದ್ದರು. ಅದರಲ್ಲೂ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಮಾಜಿ ಶಾಸಕರಾದ ಮಹೇಶ ಕುಮಟಳ್ಳಿ, ಶಹಜಾನ ಡೊಂಗರಗಾಂವ ಹಾಗೂ ಕೈ ಮುಖಂಡ ಗಜಾನನ ಮಂಗಸೂಳಿ ಜೊತೆಗೂಡಿ ಸವದಿಗೆ ಸೆಡ್ಡು ಹೊಡೆದಿದ್ದರು.

    ಭಾನುವಾರ ಬೆಳಿಗ್ಗೆ ಆರಂಭವಾದ ಚುನಾವಣೆ ಮಧ್ಯಾಹ್ನದವರೆಗೂ ಶಾಂತಿಯುತವಾಗಿ ನಡೆದಿತ್ತು. ಆದರೆ ಮೃತ ಸದಸ್ಯರ ಮತವನ್ನು ಸವದಿ ಬಣದವರು ಮಾಡುತ್ತಿದ್ದಾರೆ ಎಂದು ಆರೋಪಿಸಿ ರಮೇಶ್‌ ಜಾರಕಿಹೊಳಿ ಹಾಗೂ ಸವದಿ ಬಣದ ನಡಿವೆ ವಾಗ್ವಾದ ನಡೆಯುವದರ ಜೊತೆಗೆ ಎರಡು ಬಣಗಳ ನಡುವಿನ ಮಾರಾಮಾರಿ ನಡೆಯಿತು. ಬಳಿಕ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದರು.‌ ಇದು ದಬ್ಬಾಳಿಕೆಯ ಚುನಾವಣೆ ಪಾರದರ್ಶಕವಾಗಿ ಚುನಾವಣೆ ಆಗಿಲ್ಲ‌ ಎಂದು ಮಾಜಿ ಶಾಸಕ ಮಹೇಶ ಕುಮಟಳ್ಳಿ ಆರೋಪಿಸಿದರು. ಇದನ್ನೂ ಓದಿ: ನೆಲಮಂಗಲದ ಇಸ್ಲಾಂಪುರದಲ್ಲಿ ಪಂಚಾಯತ್‌ ಸದಸ್ಯನ ಮೇಲೆ ಗುಂಡಿನ ದಾಳಿ

     

    ಗಲಾಟೆ ಬಳಿಕ ಚುನಾವಣೆ ಪ್ರಕ್ರಿಯೆ ಮುಗಿದು ಒಟ್ಟು 11,300 ಮತದಾರರಲ್ಲಿ 8,975 ಮತದಾರರಿಂದ ಮತ ಚಲಾವಣೆ ಮಾಡಿದರು. ನ್ಯಾಯಾಲಯದಲ್ಲಿ ವಿಚಾರಣೆ ಹಿನ್ನೆಲೆ ಇಂದು ಮತ ಎಣಿಕೆಗೆ ಮಾತ್ರ ಅವಕಾಶ ಕಲ್ಪಿಸಿ ಅಧಿಕೃತ ಚುನಾವಣೆ ಫಲಿತಾಂಶ ಪ್ರಕಟಿಸಲಿಲ್ಲ.

    ಮತ ಎಣಿಕೆಯಲ್ಲಿ ಅನಧಿಕೃತವಾಗಿ ಸವದಿ ಬಣದ 12 ನಿರ್ದೇಶಕರು ಚುನಾವಣೆಯಲ್ಲಿ ಭರ್ಜರಿ ಮುನ್ನಡೆ ಸಾಧಿಸಿದರೆ ಓರ್ವ ನಿರ್ದೇಶಕ ಅವಿರೋಧವಾಗಿ ಆಯ್ಕೆಯಾಗುವದರ ಮೂಲಕ ಪೆನಲ್‌ನ ಎಲ್ಲಾ ಸದಸ್ಯರು ಗೆದ್ದಿರುವ ಹುಮ್ಮಸ್ಸಿ‌ನಲ್ಲಿ ಸವದಿ ಪುತ್ರ ಚಿದಾನಂದ ಸವದಿ ಹಾಗೂ ಅಭಿಮಾನಿಗಳು ಹಲ್ಯಾಳ ಗ್ರಾ‌ಮದ ಸಕ್ಕರೆ ಕಾರ್ಖಾನೆ ಆವರಣ ಹಾಗೂ ಅಥಣಿ ಪಟ್ಟಣದಲ್ಲಿ ಭರ್ಜರಿ ಸಂಭ್ರಮಾಚರಣೆ ಮಾಡಿ ಸಿಹಿ ಹಂಚಿ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸಿದರು.

    ಒಟ್ಟಿನಲ್ಲಿ ಅಥಣಿ ತಾಲೂಕಿನ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಸವದಿ ಸೋಲಿಸಲು ಪಕ್ಷಾತೀತವಾಗಿ ವಿರೋಧಿಗಳನ್ನು ಒಂದೂಗೂಡಿಸಿದ ಪ್ಲಾನ್ ವಿಫಲವಾಗಿದೆ. ಹೊರಗಿನವರಿಗೆ ಆಡಳಿತ ಮಾಡಲು ಬಿಡುವದಿಲ್ಲ ಎನ್ನುವ ಸಂದೇಶವನ್ನು ಹುಕ್ಕೇರಿ ತಾಲೂಕಿನ ನಂತರ ಮತ್ತೊಮ್ಮೆ ಅಥಣಿ ತಾಲೂಕಿನ ಜನರು ಜಾರಕಿಹೊಳಿ ಸಹೋದರರಿಗೆ ರವಾನಿಸಿದ್ದಾರೆ.

  • ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ

    ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ

    – ಮೋದಿ ನನ್ನ ಸಂಬಂಧ ಬದಲಾವಣೆ ಮಾಡೋಕೆ ಆಗಲ್ಲ

    ಬೆಂಗಳೂರು: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance) ಮುಂದುವರೆಯಲಿದೆ ಅಂತ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು (H.D Deve Gowda) ಸ್ಪಷ್ಟಪಡಿಸಿದ್ದಾರೆ.

    ಜೆಪಿ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದರು. ಈ ವೇಳೆ, ಜಿಬಿಎ ಚುನಾವಣೆಯಲ್ಲಿ (Elections) ಬಿಜೆಪಿ ಜೊತೆ ಮೈತ್ರಿ ಆಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಕಾರಣದಿಂದ ಆತಂಕ ಆಗುವುದಿಲ್ಲ. ಬಿಜೆಪಿ ಜೊತೆ ಮೈತ್ರಿ ಮುಂದುವರೆಯುತ್ತದೆ. ಜಿಲ್ಲಾ, ತಾಲೂಕು, ಜಿಬಿಎ, ವಿಧಾನಸಭೆ ಚುನಾವಣೆ ಸೇರಿ ಎಲ್ಲಾ ಚುನಾವಣೆಗಳಿಗೂ ಈ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನವೆಂಬರ್-ಡಿಸೆಂಬರ್ ಒಳಗೆ ಸಿಎಂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ: ಆರ್.ಅಶೋಕ್ ಭವಿಷ್ಯ

    ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಂದೂ ಆತಂಕ ಇಲ್ಲ. ಮೋದಿ ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರು ಬದಲಾವಣೆ ಮಾಡೋಕೆ ಆಗೊಲ್ಲ. ನಮ್ಮ ಅವರ ಸಂಬಂಧ 10 ವರ್ಷದಿಂದ ಉತ್ತಮವಾಗಿದೆ. ನಾನು ಕಳೆದ 10 ವರ್ಷಗಳಲ್ಲಿ ಮೋದಿ ಬಗ್ಗೆ ಲಘುವಾಗಿ ಮಾತಾಡಿಲ್ಲ. ಇದ್ದರೆ ತೋರಿಸಿ ಎನ್ನುವ ಮೂಲಕ ನನ್ನ ಮೋದಿ ಸಂಬಂಧ ಉತ್ತಮವಾಗಿದ್ದು, ಇದೇ ಮೈತ್ರಿಗೆ ಅಡಿಪಾಯ ಅಂತ ತಿಳಿಸಿದರು.


    ಕುಮಾರಸ್ವಾಮಿಯವರು 4 ತಿಂಗಳಿಂದ ನಮ್ಮ ರಾಜ್ಯದಲ್ಲಿ ಪ್ರವಾಸ ಮಾಡಿರಲಿಲ್ಲ. ಸ್ವಲ್ಪ ಆರೋಗ್ಯ ಸುಧಾರಣೆ ಆಗಬೇಕಿತ್ತು. ಆರೋಗ್ಯ ಸರಿಯಾಗಿದೆ, ಯಾವುದೇ ಸಮಸ್ಯೆ ಇಲ್ಲ. ಹೊರ ದೇಶದಿಂದ ಬಂದ ಡಾಕ್ಟರ್ ಪರಿಶೀಲನೆ ಮಾಡಿ ಯಾವುದೇ ಸಮಸ್ಯೆ ಇಲ್ಲ. ಅವರು ಎಷ್ಟು ಬೇಕಾದ್ರು ರಾಜಕೀಯದಲ್ಲಿ ಹೋರಾಟ ಮಾಡೋಕೆ ತೊಂದರೆ ಇಲ್ಲ ಎಂದಿದ್ದಾರೆ. ಕೆಲವೇ ದಿನಗಳಲ್ಲಿ ಅವರು ರಾಜ್ಯ ಪ್ರವಾಸ ಮಾಡ್ತಾರೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ

  • ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಮತ ಹಾಕಿದ್ದಕ್ಕೆ ಹಲ್ಲೆ ಆರೋಪ – ಆರೋಪಿಗಳು ಎಸ್ಕೇಪ್‌

    ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಮತ ಹಾಕಿದ್ದಕ್ಕೆ ಹಲ್ಲೆ ಆರೋಪ – ಆರೋಪಿಗಳು ಎಸ್ಕೇಪ್‌

    ಮಂಡ್ಯ: ಕೃಷಿ ಪತ್ತಿನ ಸಹಕಾರ ಸಂಘದ (Agricultural Credit Cooperative Society) ಚುನಾವಣೆಯಲ್ಲಿ ತಮ್ಮ ಪಕ್ಷದ ಪರವಾಗಿ ಮತಹಾಕದೇ ಕಾಂಗ್ರೆಸ್ ಪಕ್ಷದ ಪರವಾಗಿ ಮತಹಾಕಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರು ಅಟ್ಟಹಾಸ ಮೆರೆದು, ಯುವಕ ಹಾಗೂ ಯುವಕನ ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ (Nagamangala) ತಾಲ್ಲೂಕಿನ ಚೋಳೆನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಅಂದಹಾಗೆ ಸಕ್ಕರಿನಗರಿ ಮಂಡ್ಯ (Mandya) ಅಂದರೇ ರಾಜಕೀಯಕ್ಕೆ ಫೇಮಸ್. ಅದರಲ್ಲೂ ಗ್ರಾಮೀಣ ಭಾಗದಲ್ಲಿ ರಾಜಕಾರಣ ಹಾಸುಹೊದ್ದಿದೆ. ಆದರೆ ಸೊಸೈಟಿ ಚುನಾವಣೆಯಲ್ಲೂ ರಾಜಕೀಯ ಕೆಸರೆರಚಾಟ ಆರಂಭಗೊಂಡಿದ್ದು, ಲೋಕಲ್ ಫೈಟ್ ನಲ್ಲೂ ಡರ್ಟಿ ಪಾಲಿಟಿಕ್ಸ್ ನಡೆಯುತ್ತಿದೆ.

    ಅಂದಹಾಗೆ ಕೆಲ ದಿನಗಳ ಕೆಳಗೆ ನಾಗಮಂಗಲ ತಾಲೂಕಿನ ಮುದ್ದಿನಹಟ್ಟಿ ಕೃಷಿ ಪತ್ತಿನ ಸಹಕಾರ ಸಂಘದ ಎಲೆಕ್ಷನ್ ಇತ್ತು. ಈ ವೇಳೆ ಚೋಳನಹಳ್ಳಿ ಗ್ರಾಮದ ವಿಕಾಸ್, ಕಾಂಗ್ರೆಸ್ ಪರವಾಗಿ ಚುನಾವಣೆ ಮಾಡಿದ್ದ. ಅಲ್ಲದೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರವಾಗಿ ಮತಚಲಾವಣೆ ಮಾಡಿದ್ದ. ಇದರಿಂದ ಕುಪಿತಗೊಂಡ ಗ್ರಾಮದ ಮಾಜಿ ಗ್ರಾಪಂ ಅಧ್ಯಕ್ಷ ಪ್ರಶಾಂತ್ ಗೌಡ ಅಂಡ್ ಗ್ಯಾಂಗ್ ವಿಕಾಸ್ ಹಾಗೂ ಸಹೋದರ ರಘು ಎಂಬುವವರ ಮೇಲೆ ಹಲ್ಲೆ ನಡೆಸಿದ್ರು‌. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ರು. ಆದರೆ ದೂರು ನೀಡಿದ್ರು ಎಂದು ಮತ್ತೆ ಕುಪಿತಗೊಂಡು ವಿಕಾಸ್ ಹಾಗೂ ಆಕೆಯ ತಂಗಿ ನೇತ್ರಾವತಿ ಎಂಬಾಕೆಯ ಮೇಲೆ ಕಲ್ಲಿನಿಂದ ಪ್ರಶಾಂತ್, ಪ್ರತಾಪ್, ರಾಜು, ಪ್ರಮೋದ್, ಹರೀಶ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ನೇತ್ರಾವತಿ ತುಟಿ, ಹಲ್ಲಿನ ಭಾಗಕ್ಕೆ ಗಂಭೀರವಾದ ಗಾಯವಾಗಿದೆ.

    ಇನ್ನು ಹಲ್ಲೆ ಮಾಡಿ ದೂರು ನೀಡಿದ ನಂತರ ಸಹಾ ವಿಕಾಸ್ ಕುಟುಂಬಕ್ಕೆ ಮಾಜಿ ಗ್ರಾಪಂ ಅಧ್ಯಕ್ಷ ಪ್ರಶಾಂತ್ ಗೌಡ, ಅವಾಜ್ ಹಾಕಿದ್ದಾನೆ. ಯಾರು ಏನೂ ಮಾಡಲು ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಪ್ರಾಣ ಭಯದಲ್ಲೇ ಇಡೀ ಕುಟುಂಬ ಕಾಲ ಕಳೆಯುತ್ತಿದೆ. ಇನ್ನು ಗಂಭೀರವಾಗಿ ಗಾಯಗೊಂಡಿರೋ ನೇತ್ರಾವತಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ನಡುವೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಶಾಂತ್ ಗೌಡ ಸೇರಿದಂತೆ ಐವರು ಎಸ್ಕೇಪ್ ಆಗಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಇನ್ನು ನಮಗೆ ನ್ಯಾಯಬೇಕು. ಕೇವಲ ಎಫ್‌ಐಆರ್‌ ಆದರೆ ಸಾಲದು ಆರೋಪಿಗಳನ್ನ ಬಂಧಿಸುವಂತೆ ಒತ್ತಾಯಿಸಿದ್ದಾರೆ.

    ಸ್ಥಳೀಯ ಚುನಾವಣೆಯಲ್ಲೂ ಡರ್ಟಿ ಪಾಲಿಟಿಕ್ಸ್ ಆರಂಭಗೊಂಡು ಒಬ್ಬರ ಮೇಲೆ ಒಬ್ಬರು ಮಾರಣಾಂತಿಕವಾಗಿ ಹಲ್ಲೆ ನಡೆಸುವ ಹಂತಕ್ಕೆ ತಲುಪಿರುವುದು ದುರಂತವೇ ಸರಿ.

  • ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

    ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

    – ಮೇಕೆದಾಟು, ಮಹದಾಯಿ ದೇವೇಗೌಡರ ಹೋರಾಟವಲ್ಲ, ರಾಜ್ಯದ ಹೋರಾಟ ಎಂದ ಡಿಸಿಎಂ

    ಬೆಂಗಳೂರು: ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ (Elections) ಅವರು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದರು.

    ಕೆಪಿಸಿಸಿ (KPCC) ಕಚೇರಿಯಲ್ಲಿಂದು ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ, ಎಲ್.ಎಸ್. ಚೇತನ್ ಗೌಡ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು. ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಇದನ್ನೂ ಓದಿ: ಪ್ಲಾಟ್‌ಫಾರ್ಮ್ ಮೆಟ್ಟಿಲಿನಿಂದ ಪ್ರಯಾಣಿಕ ಜಾರಿ ಬಿದ್ದಿದ್ದು ಕಾಲ್ತುಳಿತಕ್ಕೆ ಕಾರಣ: ರೈಲ್ವೆ ಅಧಿಕಾರಿ

    ಮುಂದಿನ ಚುನಾವಣೆಗೂ ಸಿಎಂ ಬೇಕೆ ಬೇಕು ಎನ್ನುವ ಸಚಿವರುಗಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ (Siddaramaiah) ನಮ್ಮ ಮುಖ್ಯಮಂತ್ರಿಗಳು, ನಮ್ಮ ನಾಯಕರು. ಎಲ್ಲಾ ಚುನಾವಣೆಗಳಿಗೂ ಅವರು ಬೇಕು. ಕಾಂಗ್ರೆಸ್ ಪಕ್ಷ ಎರಡು ಬಾರಿ ಸಿಎಂ ಆಗುವ ಅವಕಾಶ ಕೊಟ್ಟಿದೆ. ದಿನ ಬೆಳಗಾದರೇ ಅವರ ಸುದ್ದಿ ಎತ್ತಿಕೊಂಡು ಅವರ ಹೆಸರು ದುರುಪಯೋಗ ಮಾಡೋದು ಬೇಡ. ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಸಿಎಂ ಸಿದ್ದರಾಮಯ್ಯ ಬೇಕು ಎಂದು ಹೇಳಿದರು

    ಸಿದ್ದರಾಮಯ್ಯನವರು ಎರಡನೇ ಬಾರಿಯೂ ಸಿಎಂ ಆಗಿ ಒಳ್ಳೆ ಕೆಲಸ ಮಾಡ್ತಾ ಇದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿ ಆಹಾರ ಆಗಬಾರದು, ನಮ್ಮಲ್ಲಿ ಗೊಂದಲದ ಯಾವ ಹೇಳಿಕೆಯೂ ಇಲ್ಲ. ಕಾಂಗ್ರೆಸ್ ಪಕ್ಷ ಎಲ್ಲವನ್ನು ಗಮನಿಸುತ್ತಿದೆ ಎಂದರು. ಇದನ್ನೂ ಓದಿ: ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ – ‘ಡೆವಿಲ್’ ಸಿನಿಮಾದ ಟೀಸರ್ ರಿಲೀಸ್

    ಅಧಿಕಾರದಲ್ಲಿದ್ದು ಹೋರಾಟ ಯಾಕೆ ಮಾಡ್ತಾರೆ?
    ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ (HD Devegowda) ಹೇಳಿಕೆ ಬಗ್ಗೆ ಕೇಳಿದಾಗ, ರಾಜ್ಯದ ನೆಲ, ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಮಹದಾಯಿ ವಿಚಾರವಾಗಿ ನಾವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟವಲ್ಲ. ರಾಜ್ಯದ ಹೋರಾಟ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು? ಎಂದು ಪ್ರಶ್ನಿಸಿದರು.

    ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನಮಗೆ ಅದರ ಅಗತ್ಯವೂ ಇಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂದು ನೋಡಿದ್ದೇವೆ. ನಾವು ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ, ಅದನ್ನು ಕೊಟ್ಟಿಲ್ಲ ಎಂದು ಅವರು ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು, ಕುಮಾರಸ್ವಾಮಿ, ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ. ಅವರು ಯೋಜನೆ ತರಲಿ. ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ.. ನಾವು ನೀಡುತ್ತೇವೆ. ಇಲ್ಲಿಂದಲೇ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತೇವೆ ಎಂದರು.

    ಬೆಂಗಳೂರಿನ ನೀರಿನ ವಿಚಾರವಾಗಿ ಮಾತನಾಡಿದ್ದಾರೆ ಎಂದು ಕೇಳಿದಾಗ, ಅವರ ಪಕ್ಷದ ನಾಯಕರಿಂದ ಗೊಂದಲದ ಹೇಳಿಕೆ ಕೊಡಿಸುತ್ತಿದ್ದಾರೆ. ಡಿ.ಸಿ ತಮ್ಮಣ್ಣ ಅವರಿಗೆ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಡಿಪಿಆರ್ ಸಿದ್ಧಪಡಿಸಿದ್ದಾರೆ ಅಷ್ಟೇ. ಇನ್ನೂ ತೀರ್ಮಾನ ಮಾಡಿಲ್ಲ, ನಾನು ಅಧಿಕಾರಕ್ಕೆ ಬಂದ ತಕ್ಷಣವೇ ಬೆಂಗಳೂರಿಗೆ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಮೆಟ್ಟಿಲುಗಳ ಮೇಲೆ ಉಸಿರು ಚೆಲ್ಲಿದ ಪ್ರಯಾಣಿಕರು – ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತಕ್ಕೆ ಕಾರಣವೇನು?

  • 2025ರ ಅಂತ್ಯ ಅಥವಾ 2026ರ ಆರಂಭದಲ್ಲಿ ಬಾಂಗ್ಲಾ ಚುನಾವಣೆ – ಮೊಹಮ್ಮದ್ ಯೂನಸ್

    2025ರ ಅಂತ್ಯ ಅಥವಾ 2026ರ ಆರಂಭದಲ್ಲಿ ಬಾಂಗ್ಲಾ ಚುನಾವಣೆ – ಮೊಹಮ್ಮದ್ ಯೂನಸ್

    ಢಾಕಾ: ಮುಂದಿನ ವರ್ಷದ ಕೊನೆಯಲ್ಲಿ ಅಥವಾ 2026ರ ಆರಂಭದಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು (Elections) ನಡೆಸಲಾಗುವುದು ಎಂದು ಬಾಂಗ್ಲಾದೇಶದ (Bangladesh) ಮಧ್ಯಂತರ ಸರ್ಕಾರದ ಮುಖ್ಯಸ್ಥ ನಾಯಕ ಮೊಹಮ್ಮದ್ ಯೂನಸ್ (Muhammad Yunus) ಹೇಳಿದ್ದಾರೆ.

    ಚುನಾವಣೆಯ ವ್ಯವಸ್ಥೆಗೂ ಮುನ್ನ ಸಾಕಷ್ಟು ಸುಧಾರಣೆಗಳು ಆಗಬೇಕಿದೆ. ದೋಷರಹಿತ ಮತದಾರರ ಪಟ್ಟಿ ತಯಾರಾಗಬೇಕು. ಅಲ್ಲದೇ ಸಂಪೂರ್ಣ ಸುಧಾರಣೆ ಮಾಡಿ ಚುನಾವಣೆ ನಡೆಸುವುದಾದರೆ ಕೆಲವು ತಿಂಗಳು ವಿಳಂಬವಾಗಲಿದೆ. ಇನ್ನೂ ರಾಜಕೀಯ ಪಕ್ಷಗಳು ಒಪ್ಪಿಕೊಂಡರೆ, ನವೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಬಹುದು ಎಂದು ಅವರು ಹೇಳಿದ್ದಾರೆ.

    ಆಗಸ್ಟ್‌ನಲ್ಲಿ ದೇಶದಲ್ಲಿ ನಡೆದ ದಂಗೆಯ ವೇಳೆ ಮಾಜಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದರು. ಬಳಿಕ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ ಮಾಡಲಾಗಿತ್ತು. ಇದೀಗ ಅವರ ಮೇಲೆ ಚುನಾವಣೆಗೆ ದಿನಾಂಕ ನಿಗದಿಪಡಿಸುವಂತೆ ಒತ್ತಡ ಹೆಚ್ಚುತ್ತಿದೆ. ಇದರಿಂದ ಚುನಾವಣೆ ನಿಗದಿಗೆ ಮುಖ್ಯ ಸಲಹೆಗಾರರನ್ನು ನೇಮಿಸಲಾಗಿದೆ.

    ಈ ಹಿಂದೆ ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರವು ನ್ಯಾಯಾಲಯ ಮತ್ತು ಸರ್ಕಾರಿ ಸಂಸ್ಥೆಗಳನ್ನು ರಾಜಕೀಯಗೊಳಿಸಿತ್ತು. ಅಲ್ಲದೇ ಅಧಿಕಾರಕ್ಕಾಗಿ ಚುನಾವಣೆಯಲ್ಲಿ ಅಕ್ರಮ ಎಸಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.

    ಹಸೀನಾ ಅವರ 15 ವರ್ಷಗಳ ಆಳ್ವಿಕೆಯಲ್ಲಿ ತಮ್ಮ ರಾಜಕೀಯ ವಿರೋಧಿಗಳ ಸಾಮೂಹಿಕ ಬಂಧನ. ಕಾನೂನುಬಾಹಿರ ಹತ್ಯೆಗಳು ನಡೆದಿವೆ. ಈ ಮೂಲಕ ವ್ಯಾಪಕವಾದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಆರೋಪವನ್ನು ಸಹ ಎದುರಿಸುತ್ತಿದ್ದಾರೆ.

  • Waqf Amendment Bill | ವಿಪಕ್ಷ ನಾಯಕರಿಂದ ಜೆಪಿಸಿ ರಾಜ್ಯ ಪ್ರವಾಸ ಬಹಿಷ್ಕಾರ

    Waqf Amendment Bill | ವಿಪಕ್ಷ ನಾಯಕರಿಂದ ಜೆಪಿಸಿ ರಾಜ್ಯ ಪ್ರವಾಸ ಬಹಿಷ್ಕಾರ

    ನವದೆಹಲಿ: ಜೆಪಿಸಿ ಸಮಿತಿಯ ಅಧ್ಯಕ್ಷರು ತಮಗಿಷ್ಟಬಂದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರವಾಸ ಮುಂದೂಡಬೇಕೆಂಬ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ, ವಕ್ಫ್ ತಿದ್ದುಪಡಿ ಮಸೂದೆಯ (Waqf Amendment Bill) ಮೇಲಿನ ಜಂಟಿ ಸಮಿತಿಯ (JPC) ವಿಪಕ್ಷ ಸದಸ್ಯರು ಸಮಿತಿಯ ಮುಂಬರುವ 5 ರಾಜ್ಯಗಳ ಪ್ರವಾಸವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

    ಸಮಿತಿಯು ಶನಿವಾರದಿಂದ (ನ.9 ರಿಂದ) ಗುವಾಹಟಿ, ಭುವನೇಶ್ವರ, ಕೋಲ್ಕತ್ತಾ, ಪಾಟ್ನಾ ಮತ್ತು ಲಕ್ನೋ ಪ್ರವಾಸವನ್ನು (JPC State Tour) ಆರಂಭಿಸಲಿದ್ದು, ವಿವಿಧ ಸಂತ್ರಸ್ತರ ಜೊತೆ ಚರ್ಚೆ ನಡೆಸಲಿದೆ. ಅಧ್ಯಕ್ಷರ ನಿರ್ಧಾರವನ್ನು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ವಿವರಿಸಿದರು. ಜಾರ್ಖಂಡ್‌ನಲ್ಲಿ ಮುಂಬರುವ ಚುನಾವಣೆಗಳು, ಬಂಗಾಳದ ಉಪಚುನಾವಣೆಗಳು ಮತ್ತು ಉತ್ಸವಗಳ ಹಿನ್ನೆಲೆ ಪ್ರತಿಪಕ್ಷಗಳ ಸದಸ್ಯರು ಪ್ರವಾಸದಲ್ಲಿ ಭಾಗವಹಿಸಲು ಕಷ್ಟವಾಗುತ್ತದೆ ಎಂದರು.

    ನಾವು ನಮ್ಮದೇ ಆದ ವೇಳಾಪಟ್ಟಿ ಹೊಂದಿದ್ದೇವೆ, ಪ್ರವಾಸದಲ್ಲಿ ಹೇಗೆ ಭಾಗವಹಿಸಲು ಸಾಧ್ಯ? ಪ್ರವಾಸಗಳು ಮುಂದೂಡಲ್ಪಟ್ಟಿಲ್ಲ ಎಂದು ನಾವು ನಿರಾಶೆಗೊಂಡಿದ್ದೇವೆ. ನಾವು ಇದನ್ನು ಸ್ಪೀಕರ್ ಅವರ ಗಮನಕ್ಕೆ ತಂದಿದ್ದೇವೆ. ನಮಗೆ ನಮ್ಮದೇ ಆದ ಬದ್ಧತೆಗಳಿವೆ. ಇದನ್ನು ಹೇಗೆ ಸರಿಹೊಂದಿಸಬಹುದು? ಪ್ರವಾಸಗಳು ಅತ್ಯಂತ ತೀವ್ರವಾದವು. ನಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡದಂತೆ ನಮ್ಮನ್ನು ತಡೆಯಲಾಗುತ್ತಿದೆ. ಜಾರ್ಖಂಡ್ ಚುನಾವಣೆಗಳಿವೆ, ಬಂಗಾಳದಲ್ಲಿ ಉಪಚುನಾವಣೆಗಳಿವೆ, ಅವರು ಈ ಪ್ರಕ್ರಿಯೆಯನ್ನು ಮುಂದೂಡಲು ಸ್ಪೀಕರ್‌ಗೆ ಮನವಿ ಮಾಡಿದರೂ ಏನೂ ಮಾಡಲಾಗಿಲ್ಲ ಎಂದು ಬ್ಯಾನರ್ಜಿ ಹೇಳಿದರು.

    ಸಮಿತಿಯ ಅಧ್ಯಕ್ಷರು ನಮ್ಮ ಪ್ರಕ್ರಿಯೆಯನ್ನು ಅಣಕಿಸುತ್ತಿದ್ದಾರೆ. ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಮಿತಿಗೆ ತನಿಖೆಯ ಅಧಿಕಾರವಿಲ್ಲ. ಅದರ ಕೆಲಸ ಕೇವಲ ಮಸೂದೆಯನ್ನು ಪರಿಶೀಲಿಸುವುದು. ಮೇಲಾಗಿ, ಅಧ್ಯಕ್ಷರು ಏಕಪಕ್ಷೀಯವಾಗಿ ವರ್ತಿಸುವಂತಿಲ್ಲ ಮತ್ತು ಸಮಿತಿಯು ಸಾಮೂಹಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಟ್ರಂಪ್‌, ಸೋತ ಹ್ಯಾರಿಸ್‌ಗೆ ರಾಹುಲ್‌ ಗಾಂಧಿ ಪತ್ರ

    ಪ್ರತಿಪಕ್ಷದ ಜೆಪಿಸಿ ಸದಸ್ಯರು ನವೆಂಬರ್ 5 ರಂದು ಲೋಕಸಭಾ ಸ್ಪೀಕರ್ ಅವರನ್ನು ಭೇಟಿ ಮಾಡಿ, ವೇಳಾಪಟ್ಟಿಯನ್ನು ಮುಂದೂಡಬೇಕು ಮತ್ತು ಜೆಪಿಸಿಯ ಸಭೆಯ ದಿನಗಳ ಸಂಖ್ಯೆಯನ್ನು ವಾರದಲ್ಲಿ ಎರಡು ದಿನಗಳಿಂದ ವಾರಕ್ಕೆ ಒಂದು ದಿನ ಅಥವಾ ಪ್ರತಿ ಹದಿನೈದು ದಿನಗಳಿಗೊಮ್ಮೆ ಸತತ ಎರಡು ದಿನಗಳಿಗೆ ಕಡಿತಗೊಳಿಸಬೇಕೆಂದು ಕೋರಿದ್ದರು. ಇದನ್ನೂ ಓದಿ: ಶಾರುಖ್ ಖಾನ್‌ಗೆ ಬೆದರಿಕೆ: ಕೃತ್ಯದ ಹಿಂದೆ ನಟನ ವಿರುದ್ಧ ದೂರು ನೀಡಿದ್ದ ವಕೀಲನ ಫೋನ್‌!

  • ಪವನ್ ಕಲ್ಯಾಣ್ ಬೆಂಬಲಕ್ಕೆ ನಿಂತ ನಟ ಅಲ್ಲು ಅರ್ಜುನ್

    ಪವನ್ ಕಲ್ಯಾಣ್ ಬೆಂಬಲಕ್ಕೆ ನಿಂತ ನಟ ಅಲ್ಲು ಅರ್ಜುನ್

    ತೆಲುಗಿನ ಖ್ಯಾತ ನಟ, ಜನಸೇನಾ ಪಾರ್ಟಿ ಮುಖ್ಯಸ್ಥ ಪವನ್ ಕಲ್ಯಾಣ್ ಬೆಂಬಲಕ್ಕೆ ತೆಲುಗಿನ ಮತ್ತೋರ್ವ ಹೆಸರಾಂತ ನಟ ಅಲ್ಲು ಅರ್ಜುನ್ (Allu Arjun) ಬೆಂಬಲಕ್ಕೆ ನಿಂತಿದ್ದಾರೆ. ಪವನ್ ಕಲ್ಯಾಣ್ ಗೆಲುವಿಗೆ ಶ್ರಮಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ಪವನ್ ಅವರ ಸಮಾಜಸೇವೆಯನ್ನೂ ಅವರು ಶ್ಲ್ಯಾಘಿಸಿದ್ದಾರೆ.

    ಆಂಧ್ರಪ್ರದೇಶದಲ್ಲಿ ಚುನಾವಣೆ ಕಾವು ಜೋರಾಗಿದೆ. ದಿನಕ್ಕೊಂದು ತಿರುವನ್ನೂ ಅದು ಪಡೆದುಕೊಳ್ಳುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಲಿಗಾಗಿ ಸರ್ವ ಪಕ್ಷಗಳು ಒಂದಾಗಿವೆ. ಮೈತ್ರಿ ಪಕ್ಷಗಳನ್ನು ಬಲ ಪಡಿಸೋಕೆ ಏನೆಲ್ಲ ಕಸರತ್ತುಗಳನ್ನು ಮಾಡಲಾಗುತ್ತಿದೆ. ಜಗನ್ ಮೋಹನ್ ರೆಡ್ಡಿ ಪಕ್ಷವನ್ನು ಸೋಲಿಸಲು ಒಂದು ಕಡೆ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ (Jana Sena) ಟೊಂಕ ಕಟ್ಟಿ ನಿಂತಿದ್ದರೆ, ಅದರ ಬೆಂಬಲಕ್ಕೆ ಹೆಸರಾಂತ ನಟ ಚಿರಂಜೀವಿ ಕೂಡ ಇರುವುದಾಗಿ ಘೋಷಣೆ ಮಾಡಿದ್ದಾರೆ.

    ಪವನ್ ಕಲ್ಯಾಣ್ ಬೆಂಬಲ ಕುರಿತಂತೆ ವಿಡಿಯೋವೊಂದನ್ನು ಮಾಡಿರುವ ಚಿರಂಜೀವಿ (Chiranjeevi), ಒಳ್ಳೆಯ ಆಡಳಿತಕ್ಕಾಗಿ ಜನಸೇನಾ ಮತ್ತು ಮೈತ್ರಿಕೂಟವನ್ನು ಬೆಂಬಲಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಅಗತ್ಯವಿದ್ದರೆ ಪವನ್ ಕಲ್ಯಾಣ್ (Pawan Kalyan) ಮತ್ತು ಅವರ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಬರುವುದಾಗಿ ಅವರು ಹೇಳಿಕೊಂಡಿದ್ದಾರೆ.

     

    ಮೇ 13ರಂದು ಆಂಧ್ರಪ್ರದೇಶದ (Andhra Pradesh) ಚುನಾವಣೆ ನಡೆಯುತ್ತಿದೆ. ಪವನ್ ಕಲ್ಯಾಣ್ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಈಗಾಗಲೇ ಮತದಾರನ ಒಲವು ಪವನ್ ಕಲ್ಯಾಣ್ ಕಡೆ ಇದೆ ಎಂದು ಹೇಳಲಾಗುತ್ತಿದೆ. ನಟ ನಾನಿ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಪವನ್ ಕಲ್ಯಾಣ್ ಪರ ಮತಯಾಚನೆ ಮಾಡುವ ಇಂಗಿತವನ್ನೂ ವ್ಯಕ್ತ ಪಡಿಸಿದ್ದಾರೆ. ಈ ಚುನಾವಣೆ ನಿಜಕ್ಕೂ ರಂಗೇರಿದೆ.

  • ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್ ಗೆ ಗುಡ್ ಬೈ ಘೋಷಿಸಿದ ಕಂಗನಾ

    ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್ ಗೆ ಗುಡ್ ಬೈ ಘೋಷಿಸಿದ ಕಂಗನಾ

    ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ ಬಾಲಿವುಡ್ ಬಿಡುವ ಬಗ್ಗೆ ಮಾತನಾಡಿದ್ದಾರೆ. ಸದ್ಯ ಲೋಕಸಭಾ (Lok Sabha) ಚುನಾವಣೆಯಲ್ಲಿ ಸ್ಪರ್ಧಿಸಿರುವ ಅವರು, ಈ ಚುನಾವಣೆಯಲ್ಲಿ ಗೆದ್ದರೇ ತಾವು ಬಾಲಿವುಡ್ ತೊರೆದು, ಸಂಪೂರ್ಣವಾಗಿ ಜನರ ಸೇವೆಗೆ ನಿಲ್ಲುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

    ಒಂದು ಕಡೆ ಕಂಗನಾ ರಣಾವತ್ ಗೆಲ್ಲಲೇಬೇಕು ಎಂದು ಹಠತೊಟ್ಟು ಹಗಲು ರಾತ್ರಿ ಎನ್ನದೇ ಜನರ ಮುಂದೆ ನಿಲ್ಲುತ್ತಿದ್ದಾರೆ. ಮತ್ತೊಂದು ಕಡೆ ಕಂಗನಾ ವಿರುದ್ಧ ಅನೇಕರು ಟೀಕೆ ಮಾಡುತ್ತಿದ್ದಾರೆ. ಅದರಲ್ಲೂ ಕಂಗನಾ ರಣಾವತ್ (Kangana Ranaut) ಜೊತೆ ಒಟ್ಟೊಟ್ಟಿಗೆ ಕೆಲಸ ಮಾಡಿದ ಸ್ವರಾ ಭಾಸ್ಕರ್ ಟೀಕಿಸಿದ್ದಾರೆ. ಇಬ್ಬರೂ ಒಂದೇ ಸಿನಿಮಾದಲ್ಲಿ ನಟಿಸಿದವರು. ಒಬ್ಬರೊನ್ನೊಬ್ಬರು ಆತುಕೊಂಡು ಕೂತವರು. ಆದರೆ, ನಂತರದ ದಿನಗಳಲ್ಲಿ ಹಾವು ಮುಂಗಸಿಯಂತೆ ಕಿತ್ತಾಡಿದವರು. ಆ ಕಿತ್ತಾಟ ಈಗಲೂ ಮುಂದುವರೆದಿದೆ. ಕಂಗನಾ ಈಗ ಲೋಕಸಭಾ ಕಣದಲ್ಲಿ ಇದ್ದಾರೆ. ಅದಕ್ಕೂ ಮುನ್ನ ಆಡಳಿತ ಪಕ್ಷದ ಪರವಾಗಿ ಸಾಕಷ್ಟು ಮಾತನಾಡಿದ್ದಾರೆ. ಈ ಕುರಿತಂತೆ ಸ್ವರಾ ಅಪಸ್ವರ ಎತ್ತಿದ್ದಾರೆ.

    ಸಂದರ್ಶನವೊಂದರಲ್ಲಿ ಅವರಿಗೂ ಮತ್ತು ಕಂಗನಾಗೂ ಇರುವ ವ್ಯತ್ಯಾಸವನ್ನು ಹೇಳಿಕೊಂಡಿದ್ದು, ಕಂಗನಾ ಎಂದಿಗೂ ಆಡಳಿತ ಸರಕಾರದ ವಿರೋಧವಾಗಿ ಮಾತನಾಡಲ್ಲ. ಅವರು ಯಾವಾಗಲೂ ಪರವಾಗಿಯೇ ಇರುತ್ತಾರೆ. ನಾನು ಹಾಗಲ್ಲ, ಜನರ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದಾರೆ.

     

    ಇತ್ತೀಚಿನ ದಿನಗಳಲ್ಲಿ ಸ್ವರಾ ರೆಬೆಲ್ ನಟಿಯಾಗಿ ಮಾರ್ಪಾಡಾಗಿದ್ದಾರೆ. ಅಪರಾಧಿ ಮುಸ್ಲಿಂ ಆಗಿದ್ದರೆ ಮಾತ್ರ ಮಹಿಳಾ ರಕ್ಷಣೆ ಬಗ್ಗೆ ಜನರು ಮಾತನಾಡುತ್ತಾರೆ ಎಂದು ಹೇಳುವ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದ ವಿಶ್ಲೇಷಣೆ ಮಾಡಿದ್ದಾರೆ ಸ್ವರಾ ಭಾಸ್ಕರ್ (Swara Bhaskar). ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತವೆ ಎಂದು ಮಾತನಾಡಿದ್ದಾರೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದಿದ್ದಾರೆ ಸ್ವರಾ.

  • ದ್ವೇಷದ ವಿರುದ್ಧ ಮತ ಹಾಕಿದ್ದೇನೆ: ನಟ ಪ್ರಕಾಶ್ ರೈ ವಿಡಿಯೋ ವೈರಲ್

    ದ್ವೇಷದ ವಿರುದ್ಧ ಮತ ಹಾಕಿದ್ದೇನೆ: ನಟ ಪ್ರಕಾಶ್ ರೈ ವಿಡಿಯೋ ವೈರಲ್

    ಹುಭಾಷಾ ನಟ ಪ್ರಕಾಶ್ ರೈ ಇಂದು ಬೆಳಗ್ಗೆ ಮತದಾನ ಮಾಡಿ, ತಾವು ಮತದಾನ ಮಾಡಿರುವ ಕುರಿತಂತೆ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಆ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ. ಕೆಲವರು ನೆಗೆಟಿವ್ ಕಾಮೆಂಟ್ ಮಾಡಿದರೆ, ಇನ್ನೂ ಕೆಲವರು ನಿಮ್ಮ ಮಾತನ್ನು ಅನುಮೋದಿಸುತ್ತೇವೆ ಎಂದಿದ್ದಾರೆ.

     

    ವೋಟು ಹಾಕಿದ ನಂತರ ಪೋಸ್ಟ್ ಮಾಡಿದ ವಿಡಿಯೋದಲ್ಲಿ ದೇಶದ ಬದಲಾವಣೆಗಾಗಿ ಮತದಾನ ಮಾಡಿರುವೆ, ದ್ವೇಷದ ವಿರುದ್ಧ ಮತ ಹಾಕಿರುವೆ. ಸಂಸತ್ ನಲ್ಲಿ ನನ್ನ ಪರವಾಗಿ ಧ್ವನಿ ಕೇಳಲಿ ಎಂದು ವೋಟು ಮಾಡಿದ್ದೇನೆ. ದಯಮಾಡಿ ವೋಡು ಮಾಡಿ, ಬದಲಾವಣೆಗೆ ಮತ ಹಾಕಿ ಎಂದು ಮಸೇಜ್ ನೀಡಿದ್ದರು.

     

    ಸಂಜೆ ಹೊತ್ತಿಗೆ ಮೂವತ್ತೆಂಟು ಸಾವಿರಕ್ಕೂ ಹೆಚ್ಚು ಜನ ವಿಡಿಯೋವನ್ನು ಲೈಕ್ ಮಾಡಿದ್ದರೆ, 215ಕ್ಕೂ ಹೆಚ್ಚು ಜನರ ಬುಕ್ ಮಾರ್ಕ್ ಮಾಡಿಕೊಂಡಿದ್ದಾರೆ. ಐದು ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ. ಜೊತೆಗೆ ಪಾಸಿಟಿವ್ ಮತ್ತು ನೆಗೆಟಿವ್ ಕಾಮೆಂಟ್ ಎರಡೂ ಹೇರಳವಾಗಿಯೇ ಇವೆ.

  • ವೋಟ್ ಮಾಡದೇ ಬ್ಲೇಮ್ ಮಾಡಬೇಡಿ: ನಟಿ ರಚಿತಾ ರಾಮ್

    ವೋಟ್ ಮಾಡದೇ ಬ್ಲೇಮ್ ಮಾಡಬೇಡಿ: ನಟಿ ರಚಿತಾ ರಾಮ್

    ನ್ನಡದ ಹೆಸರಾಂತ ನಟಿ ರಚಿತಾ ರಾಮ್ (Rachitha Ram) ಕತ್ರಿಗುಪ್ಪೆಯಲ್ಲಿ ಮತದಾನ (Voting) ಮಾಡಿದರು. ಸಾಮಾನ್ಯರಂತೆ ಅರ್ಧ ಗಂಟೆಗೂ ಹೆಚ್ಚು ಕಾಲ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಅಭಿಮಾನಿಗಳು ರಚಿತಾ ಅವರ ಜೊತೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಸಿದರು.

    ಮತದಾನದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರಚಿತಾ, ‘ಮನೆಯಲ್ಲಿ ಕೂತು ಕಾಮೆಂಟ್ ಮಾಡೋದಕ್ಕಿಂದ ಬಂದು ವೋಟ್ ಮಾಡಿ. ವೋಟ್ ಮಾಡದೇ ಬ್ಲೇಮ್ ಮಾಡಬೇಡಿ, ನಮ್ಮ ನಾಯಕರ ಆಯ್ಕೆ ಮಾಡಲೇಬೇಕು. ಬಿಸಿಲು ಅಂತ ಮನೆಯಲ್ಲಿ ಕೂರಬೇಡಿ, ಸಂಜೆವರೆಗೂ ಟೈಂ ಇದೆ ಬಂದು ವೋಟ್ ಮಾಡಿ. ಹಿರಿಯನಾಗರೀಕರೆ ಉತ್ಸಾಹದಿಂದ ವೋಟ್ ಮಾಡುವಾಗ ಯುವಕರು ಯಾಕೆ ಮನೆಯಲ್ಲಿ ಕೂರಬೇಕು’ ಎಂದು ಅವರು ಪ್ರಶ್ನೆ ಮಾಡಿದರು.

    ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ ಕೂಡ ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರೆ. ಮತದಾನದ ನಂತರ ಮಾಧ್ಯಮಗಳ ಜೊತೆಯ ಮಾತನಾಡಿದ್ದಾರೆ.

     

    ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು  ಎಂದು ವೋಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದಿದ್ದಾರೆ ರಕ್ಷಿತ್.