ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡ ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಇದು ಬಾಂಡ್ (Electoral Bonds) ಖರೀದಿಸಿದವರ ಹೆಸರು, ವಿವಿಧ ಬಗೆಯ ಬಾಂಡ್‌ಗಳ ನಿರ್ದಿಷ್ಟ ಸಂಖ್ಯೆ, ಬಾಂಡ್ ನಗದೀಕರಿಸಿದ ಪಕ್ಷ, ರಾಜಕೀಯ ಪಕ್ಷಗಳ ಬ್ಯಾಂಕ್ ಖಾತೆಗಳ ಕೊನೆಯ ನಾಲ್ಕು ಸಂಖ್ಯೆಯನ್ನು ತೋರಿಸುವ ಮಾಹಿತಿಗಳನ್ನು ಒಳಗೊಂಡಿದೆ.
ಎಸ್‌ಬಿಐ ಈಗ ಎಲ್ಲಾ ವಿವರಗಳನ್ನು ಬಹಿರಂಗಪಡಿಸಿದೆ. ಸಂಪೂರ್ಣ ಖಾತೆ ಸಂಖ್ಯೆಗಳು, ಕೆವೈಸಿ ವಿವರ ಸೇರಿದಂತೆ ಯಾವುದೇ ಮಾಹಿತಿಯನ್ನು ರಹಸ್ಯವಾಗಿ ಇರಿಸಿಲ್ಲ ಎಂದು ಎಸ್‌ಬಿಐ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕೇಜ್ರಿವಾಲ್ ನಿವಾಸದಲ್ಲಿ ಇ.ಡಿ ಶೋಧ – ದೆಹಲಿ ಸಿಎಂ ಬಂಧನ ಸಾಧ್ಯತೆ
ಬ್ಯಾಂಕ್ ನೀಡಿರುವ ವಿವರಗಳನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ನಿರೀಕ್ಷೆಯಿದೆ. SBI ಈ ಹಿಂದೆ ಚುನಾವಣಾ ಆಯೋಗಕ್ಕೆ ಎರಡು ಪಟ್ಟಿಗಳನ್ನು ನೀಡಿತ್ತು. ಅದನ್ನು ಚುನಾವಣಾ ಸಮಿತಿಯು ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.
ಗುರುವಾರ ಸಂಜೆ 5 ಗಂಟೆಯೊಳಗೆ ಸೀರಿಯಲ್ ನಂಬರ್ ಸೇರಿದಂತೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಮತ್ತು ಆ ಕುರಿತು ಅಫಿಡವಿಟ್ ಸಲ್ಲಿಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಎಸ್‌ಬಿಐಗೆ ಈ ಹಿಂದೆ ಸೂಚಿಸಿತ್ತು. ಇದನ್ನೂ ಓದಿ: ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ – ಬಿಜೆಪಿಯಿಂದ 3ನೇ ಪಟ್ಟಿ ರಿಲೀಸ್
– ಚುನಾವಣಾ ಬಾಂಡ್ ಹಗರಣ – ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ – ಬಿಜೆಪಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ
ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ (Electoral Bonds case) ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ (BJP) ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಸ್ವಾಗತ ಕೋರುತ್ತೇನೆ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಬಿಜೆಪಿ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್‍ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ. ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲ ಹುಡುಕುತ್ತೇವೆ. ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ: ಪ್ರಹ್ಲಾದ್ ಜೋಶಿ
ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್‍ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‍ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‍ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿಯವರೇ ದಯವಿಟ್ಟು ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್‍ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲ್ಯಾಕ್‍ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪನಿಗಳು, ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಧಿಗಳು ಎಷ್ಟು ಸುರಕ್ಷಿತ? ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿಗಳೇ? ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಸುಪ್ರೀಂ ಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ. ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು