Tag: Electoral Roll

  • ತಮಿಳುನಾಡಿನಲ್ಲಿ ಶೀಘ್ರವೇ SIR- ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

    ತಮಿಳುನಾಡಿನಲ್ಲಿ ಶೀಘ್ರವೇ SIR- ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

    ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ (Tamil Nadu) ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲಾಗುವುದು ಎಂದು ಚುನಾವಣಾ ಆಯೋಗ (Election Commission of India) ಮದ್ರಾಸ್ ಹೈಕೋರ್ಟ್‌ಗೆ (Madras High Court) ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ ಪ್ರಾರಂಭವಾಗುವ ಸಾಧ್ಯತೆ ಇದೆ.

    ಇದಲ್ಲದೆ, ಚುನಾವಣೆ ಎದುರಿಸುತ್ತಿರುವ ಇತರ ಹಲವಾರು ರಾಜ್ಯಗಳು ಸಹ ಬಿಹಾರದ ಮಾದರಿಯಲ್ಲಿ ಇದೇ ರೀತಿಯ ವ್ಯಾಯಾಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಚುನಾವಣಾ ಆಯೋಗ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರ ಪೀಠದ ಮುಂದೆ ತಿಳಿಸಿದೆ. ಇದನ್ನೂ ಓದಿ: ಸಿಎಂ ಅವ್ರೇ ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ, ಪ್ರತಿ ಇಲಾಖೆಯೂ ರೇಡ್‌ ಕಾರ್ಡ್‌ ಫಿಕ್ಸ್‌ ಮಾಡಿದೆ: ಮೋಹನ್ ದಾಸ್ ಪೈ

    ಎಐಎಡಿಎಂಕೆ ಮಾಜಿ ಶಾಸಕ ಬಿ. ಸತ್ಯನಾರಾಯಣನ್ ಅವರು ಟಿ.ನಗರ ವಿಧಾನಸಭಾ ಕ್ಷೇತ್ರದ 229 ಮತಗಟ್ಟೆಗಳಲ್ಲಿ ಸಂಪೂರ್ಣ ಮತ್ತು ಪಾರದರ್ಶಕ ಮರು ಪರಿಶೀಲನೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು. ಚೆನ್ನೈನ ಟಿ ನಗರ ಕ್ಷೇತ್ರದ ಅಧಿಕಾರಿಗಳು ಆಡಳಿತಾರೂಢ ಡಿಎಂಕೆಗೆ ಲಾಭ ಮಾಡಿಕೊಡಲು ಉದ್ದೇಶಪೂರ್ವಕವಾಗಿ ಸುಮಾರು 13,000 ಎಐಎಡಿಎಂಕೆ ಬೆಂಬಲಿಗರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಆಯೋಗ ಹೈಕೋರ್ಟ್‌ಗೆ ಈ ಮಾಹಿತಿ ನೀಡಿದೆ. ಇದನ್ನೂ ಓದಿ: FATF ಹೊಸ ಪಟ್ಟಿ ಬಿಡುಗಡೆ – ಉತ್ತರ ಕೊರಿಯಾ, ಇರಾನ್, ಮ್ಯಾನ್ಮಾರ್ ಮತ್ತೆ ಕಪ್ಪುಪಟ್ಟಿಗೆ

  • ರಾಜೀನಾಮೆ, ನಿವೃತ್ತಿಯಿಂದ ತೆರವಾಗುತ್ತಿರುವ ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ

    ರಾಜೀನಾಮೆ, ನಿವೃತ್ತಿಯಿಂದ ತೆರವಾಗುತ್ತಿರುವ ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ

    ಬೆಂಗಳೂರು: ರಾಜೀನಾಮೆ (Resignation) ಮತ್ತು ನಿವೃತ್ತಿಯಿಂದ (Retirement) ತೆರವಾಗುತ್ತಿರುವ ವಿಧಾನಪರಿಷತ್ತಿನ ಕೆಲವು ಪದವೀಧರ (Graduate) ಮತ್ತು ಶಿಕ್ಷಕರ (Teachers) ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ (Election Commission) ಸೂಚಿಸಿದೆ.

    ನೈಋತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್ ಅವರ ರಾಜೀನಾಮೆಯಿಂದಾಗಿ 19-4-2023 ತಾರೀಖಿನಿಂದ ಸ್ಥಾನ ತೆರವಾಗಿದ್ದು, ಈ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ 21-06-2024ರವರೆಗೆ ಇದೆ. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದಾಗಿ 16-03-2023 ತಾರೀಖಿನಿಂದ ತೆರವಾಗಿರುವ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ 11-11-2026ರವರೆಗೆ ಇದೆ. ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ

    21-06-2024ಕ್ಕೆ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ ಬಿ. ಪಾಟೀಲ್, 21-06-2024ಕ್ಕೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ, 21-06-2024ಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ಎ.ನಾರಾಯಣ ಸ್ವಾಮಿ, 21-06-2024ಕ್ಕೆ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್. ಭೋಜೆಗೌಡ, 21-06-2024ಕ್ಕೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ನಿವೃತ್ತಿಯಾಗುತ್ತಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲಿ ಅಂಗೀಕಾರವಾಗಿದ್ದ 4 ಮಸೂದೆಗಳಿಗೆ ರಾಷ್ಟ್ರಪತಿ ಸಹಿ

    ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕ ನೋಟಿಸ್ ಅನ್ನು ಸೆ.30 ರಂದು ಪ್ರಕಟಣೆ ಮಾಡಬೇಕಾಗಿದೆ. ಫಾರಂ 18 ಅಥವಾ 19ರಲ್ಲಿ ಅರ್ಜಿ ಸ್ವೀಕರಿಸಲು ನ.06 ಕೊನೆಯ ದಿನವಾಗಿದೆ. ಮತದಾರರ ಕರಡು ಪ್ರತಿ ಪ್ರಕಟಿಸುವ ದಿನ ನ.23, ಮತದಾರರ ಪಟ್ಟಿ ಪ್ರಕಟಣೆ ದಿನ ನ.23, ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಲು ನ.23 ರಿಂದ ಡಿ.09 ರವರೆಗೆ ಅವಕಾಶವಿದೆ. ಇದನ್ನೂ ಓದಿ: ಇಳಕಲ್‌ ಸೀರೆಯಲ್ಲಿ ಅರಳಿತು ರಾಷ್ಟ್ರಧ್ವಜ, ಚಂದ್ರಯಾನ -3

    ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ನಿವಾರಿಸಿ ಪೂರಕ ಪ್ರತಿಗಳನ್ನು ಸಿದ್ಧಪಡಿಸಿ ಪ್ರಕಟಿಸಲು ಡಿ.25 ಹಾಗೂ ಮತದಾರರ ಅಂತಿಮ ಪಟ್ಟಿ ಪ್ರಕಟಿಸುವ ದಿನಾಂಕ ಡಿ.30 ಆಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಸಮಗ್ರ ನಿರ್ದೇಶನಗಳ ಅನ್ವಯ ಮಾಡತಕ್ಕದ್ದು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ಕಾಲಮಿತಿಯೊಳಗೆ ಜನನ-ಮರಣ ಪ್ರಮಾಣ ಪತ್ರ ವಿತರಿಸಿ – ಡಿಸಿ ಖಡಕ್‌ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜನನ, ಮರಣ ಮಾಹಿತಿ ಮತದಾರರ ಪಟ್ಟಿಗೆ ಜೋಡಣೆ – ಶೀಘ್ರವೇ ಮಸೂದೆ ಮಂಡನೆ

    ಜನನ, ಮರಣ ಮಾಹಿತಿ ಮತದಾರರ ಪಟ್ಟಿಗೆ ಜೋಡಣೆ – ಶೀಘ್ರವೇ ಮಸೂದೆ ಮಂಡನೆ

    ನವದೆಹಲಿ: ಜನನ ಹಾಗೂ ಮರಣಕ್ಕೆ ಸಂಬಂಧಿಸಿದ ದತ್ತಾಂಶವನ್ನು (Birth and Death Data) ಮತದಾರರ ಪಟ್ಟಿಗೆ (Electoral Roll) ಜೋಡಿಸಲು ಸಂಸತ್ತಿನಲ್ಲಿ ಮಸೂದೆಯನ್ನು ತರಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದ್ದಾರೆ.

    ಸೋಮವಾರ ಭಾರತೀಯ ರಿಜಿಸ್ಟ್ರಾರ್ ಜನರಲ್ ಹಾಗೂ ಜನಗಣತಿ ಆಯುಕ್ತರ ಕಚೇರಿ ‘ಜಂಗಣ್ಣನ ಭವನ’ವನ್ನು ಉದ್ಘಾಟಿಸಿದ ಶಾ ಬಳಿಕ ಮಾತನಾಡಿ, ವ್ಯಕ್ತಿಯ ಜನನ ಹಾಗೂ ಮರಣದ ನೋಂದಣಿಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು. ಈ ಪ್ರಕ್ರಿಯೆಯ ಅಡಿಯಲ್ಲಿ ಒಬ್ಬ ವ್ಯಕ್ತಿಗೆ 18 ವಯಸ್ಸು ತುಂಬಿದಾಗ ಆತನ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸ್ವಯಂಚಾಲಿತವಾಗಿ ಸೇರಿಸಲಾಗುತ್ತದೆ. ಅದೇ ರೀತಿ ಒಬ್ಬ ವ್ಯಕ್ತಿ ಸತ್ತಾಗ ಆ ಮಾಹಿತಿ ಸ್ವಯಂಚಾಲಿತವಾಗಿ ಚುನಾವಣಾ ಆಯೋಗಕ್ಕೂ ಹೋಗಲಿದ್ದು, ಆತನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಲಾಗುತ್ತದೆ ಎಂದು ತಿಳಿಸಿದರು.

    ಜನನ ಮತ್ತು ಮರಣ ನೋಂದಣಿ ಕಾಯಿದೆ (RBD), 1969 ರ ತಿದ್ದುಪಡಿ ಮಸೂದೆಯು ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್‌ಪೋರ್ಟ್‌ಗಳನ್ನು ವಿತರಿಸಲು ಹಾಗೂ ಇತರ ಜನರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ನೀಡಲು ಸಂಬಂಧಿಸಿದ ವಿಷಯಗಳನ್ನು ಸಹ ಸುಗಮಗೊಳಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರದ ಬಳಿ ಅಂಕಿ ಅಂಶಗಳೇ ಇಲ್ಲ – ಶೀಘ್ರವೇ ಗ್ಯಾರಂಟಿ ಯೋಜನೆ ಜಾರಿ ಅನುಮಾನ

    ಅಭಿವೃದ್ಧಿಗೆ ಸಾಕಷ್ಟು ಮಾಹಿತಿಗಳು ಲಭ್ಯವಾಗದ ಕಾರಣ ಮೊದಲು ಅಭಿವೃದ್ಧಿ ಪ್ರಕ್ರಿಯೆ ನಿಧಾನಗತಿಯಲ್ಲಿ ನಡೆಯುತ್ತಿತ್ತು. ಜನನ ಹಾಗೂ ಮರಣ ಪ್ರಮಾಣ ಪತ್ರದ ದತ್ತಾಂಶವನ್ನು ವಿಶೇಷ ರೀತಿಯಲ್ಲಿ ಸಂರಕ್ಷಿಸಿದರೆ ಜನಗಣತಿ ನಡುವಿನ ಸಮಯವನ್ನು ಅಂದಾಜಿಸಿ ಅಭಿವೃದ್ಧಿ ಕಾಮಗಾರಿಗಳ ಯೋಜನೆಯನ್ನು ಸಮರ್ಪಕವಾಗಿ ಮಾಡಬಹುದು ಎಂದು ತಿಳಿಸಿದ್ದಾರೆ.

    ಇನ್ನು ಮುಂದೆ ಜನಗಣತಿಯನ್ನು ವಿದ್ಯುನ್ಮಾನ ಮಾದರಿಯಲ್ಲಿ ಕೈಗೊಳ್ಳಲಿದ್ದು, ಸ್ವಯಂ ಗಣತಿಗೂ ಅವಕಾಶ ಕಲ್ಪಿಸಲಾಗುವುದು ಎಂದು ಶಾ ತಿಳಿಸಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಕರೆ – ಸ್ಪೀಕರ್‌ ಆಗಲಿದ್ದಾರೆ ಯುಟಿ ಖಾದರ್‌