Tag: Electric Pillar

  • ಮನೆಗಾಗಿ ವ್ಯಕ್ತಿಯೊಬ್ಬ ಹೈಟೆನ್ಷನ್ ವಿದ್ಯುತ್‌ ಕಂಬ ಏರಿ ಪ್ರತಿಭಟಿಸಿದ

    ಮನೆಗಾಗಿ ವ್ಯಕ್ತಿಯೊಬ್ಬ ಹೈಟೆನ್ಷನ್ ವಿದ್ಯುತ್‌ ಕಂಬ ಏರಿ ಪ್ರತಿಭಟಿಸಿದ

    ತುಮಕೂರು: ವ್ಯಕ್ತಿಯೊಬ್ಬ ಮನೆ ನೀಡುವಂತೆ ಒತ್ತಾಯಿಸಿ ಹೈ ಟೆನ್ಷನ್ ವಿದ್ಯುತ್‌ ಕಂಬ ಏರಿ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಬೆಳಗ್ಗೆ 10 ಗಂಟೆಗೆ ಗ್ರಾಮದ ಸಮೀಪವೇ ಹಾದುಹೋಗಿರುವ ಹೈಟೆನ್ಷನ್ ಕಂಬವನ್ನು ಏರಿದ ಶ್ರೀನಿವಾಸ್ ನನಗೆ ಸರ್ಕಾರದಿಂದ ಮನೆ ಹಾಗೂ ರಸ್ತೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮತ್ತು ಸರ್ಕಾರದ ವಿರುದ್ಧ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ.

    ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ಹೈಟೆನ್ಷನ್ ಕಂಬದ ಅರ್ಧ ಭಾಗದಲ್ಲಿ ಕುಳಿತು ನನಗೆ ಮನೆ ನೀಡಬೇಕು. ಗುಬ್ಬಿ ತಹಶೀಲ್ದಾರ್ ಸ್ಥಳಕ್ಕೆ ಬರಬೇಕು ಎಂದು ಪಟ್ಟುಹಿಡಿದಿದ್ದಾರೆ. ಶ್ರೀನಿವಾಸ್ ಹೈಟೆನ್ಷನ್ ಕಂಬದ ಮೇಲೆ ಕುಳಿತಿರುವುದನ್ನು ನೋಡಲು ಹೊಸಹಳ್ಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೆಲವರು ಕೆಳಗೆ ಇಳಿಯುವಂತೆ ಮಾಡಿದ ಮನವಿಗೆ ಶ್ರೀನಿವಾಸ್ ಕಿಮ್ಮತ್ತು ನೀಡಲಿಲ್ಲ.  ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

    ಹೈಟೆನ್ಷನ್ ಕಂಬ ಏರಿ ಕುಳಿತಿರುವ ವಿಷಯವನ್ನು ತಿಳಿದ ತಹಶೀಲ್ದಾರ್ ಆರತಿ, ಸಿಪಿಐ ನದಾಫ್ ಸ್ಥಳಕ್ಕೆ ಬಂದು ಶ್ರೀನಿವಾಸ್ ಅವರ ಮನವೊಲಿಸಿದರು. ಅಧಿಕಾರಿಗಳಿಂದ ಸಕಾರಾತ್ಮಕ ಭರವಸೆ ಸಿಕ್ಕಿದ ನಂತರ ಶ್ರೀನಿವಾಸ್ ಕೆಳಗೆ ಇಳಿದರು. ಶ್ರೀನಿವಾಸ್ ಹೈಟೆನ್ಷನ್ ಕಂಬ ಏರಿರುವುದನ್ನು ನೂರಾರು ಮಂದಿ ಕುತೂಹಲದಿಂದ ವೀಕ್ಷಿಸಿದರು. ಅಧಿಕಾರಿಗಳ ಮಧ್ಯ ಪ್ರವೇಶದಿಂದ ಪ್ರಕರಣ ಸುಖಾಂತ್ಯ ಕಂಡಿದೆ. ಇದನ್ನೂ ಓದಿ:  ನೀವು ಲಂಚ ಪಡೆದಿಲ್ಲ ಅಂದ್ರೆ ಹ್ಯೂಬ್ಲೋಟ್ ವಾಚ್ ಎಲ್ಲಿಂದ ಬಂತು – ಸಿದ್ದುಗೆ ಬಿಜೆಪಿ ಪ್ರಶ್ನೆ

  • ಭಾರೀ ಗಾಳಿಗೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬ – ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್

    ಭಾರೀ ಗಾಳಿಗೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬ – ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್

    ಚಿಕ್ಕಮಗಳೂರು: ವಿದ್ಯುತ್ ಕಂಬವೊಂದು ಭಾರೀ ಗಾಳಿಗೆ ಮನೆ ಮೇಲೆ ಮುರಿದು ಬಿದ್ದು, ಕಂಬ ಬಿದ್ದ ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್ ಆಗುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಬೀಸುತ್ತಿರುವ ರಣ ಗಾಳಿಯಿಂದ ಮುರಿದು ಬಿದ್ದ ಮರ, ವಿದ್ಯುತ್ ಕಂಬಗಳು ಲೆಕ್ಕವೇ ಇಲ್ಲ. ಈ ಮಧ್ಯೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬದ ಸುತ್ತಮುತ್ತ ಗ್ರೌಂಡಿಂಗ್ ಆಗಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮಳೆ ಅಬ್ಬರ – ಅಜ್ಜಿ ಪಾರು, ಹೆದ್ದಾರಿ ಬಂದ್, ಮನೆ-ಕಟ್ಟಡಗಳ ಕುಸಿತ

    ಹೀಗಾಗಿ ಕೂಡಲೇ ಸ್ಥಳಿಯರು ವಿಷಯವನ್ನು ಮೆಸ್ಕಾಂ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮಳೆ ಸುರಿಯುತ್ತಿದೆ, ಸ್ಥಳದಲ್ಲಿ ಗ್ರೌಂಡಿಂಗ್ ಮತ್ತೊಂದು ಅನಾಹುತವಾಗುವುದು ಬೇಡವೆಂದು ಸ್ಥಳೀಯರೇ ಮುಂದಾಗಿ ರಸ್ತೆಗೆ ಮರದ ದಿಮ್ಮೆಗಳನ್ನು ಅಡ್ಡವಿಟ್ಟು ಸಂಚಾರವನ್ನೇ ಬಂದ್ ಮಾಡಿದ್ದಾರೆ.

    ನಂತರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ ವಿಷಯ ತಿಳಿದ ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವ ವೇಳೆ ಸ್ಥಳೀಯರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಫೋನ್ ಮಾಡಿದ ಬಳಿಕವೂ ತಡವಾಗಿ ಬಂದ ಮೆಸ್ಕಾಂ ಸಿಬ್ಬಂದಿಗೆ ಕೂಡ ಸ್ಥಳೀಯರೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕೊಡಗಿನ ವಿವಿಧೆಡೆ ಮುಂದುವರಿದ ಮಳೆ- ಹೆಗ್ಗಳ ಗ್ರಾಮದಿಂದ ಕುಟುಂಬಗಳ ಸ್ಥಳಾಂತರ

  • ಅಡ್ಡಾದಿಡ್ಡಿ ನುಗ್ಗಿದ ಜೀಪ್ – ಬೈಕಿಗೆ ಡಿಕ್ಕಿ, ತಂತಿಯಲ್ಲಿ ನೇತಾಡಿದ ವಿದ್ಯುತ್ ಕಂಬ

    ಅಡ್ಡಾದಿಡ್ಡಿ ನುಗ್ಗಿದ ಜೀಪ್ – ಬೈಕಿಗೆ ಡಿಕ್ಕಿ, ತಂತಿಯಲ್ಲಿ ನೇತಾಡಿದ ವಿದ್ಯುತ್ ಕಂಬ

    ಮಡಿಕೇರಿ: ಜೀಪಿನ ಬ್ರೇಕ್ ಫೇಲ್ ಆದ ಪರಿಣಾಮ ಜೀಪು ಅಡ್ಡಾ ದಿಡ್ಡಿ ನುಗ್ಗಿ ಬೈಕ್ ಮತ್ತು ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.

    ವಿರಾಜಪೇಟೆ ಪಟ್ಟಣದ ನಿವಾಸಿ ವಾಸು ಜೀಪ್ ಚಾಲನೆ ಮಾಡುತ್ತಿದ್ದಾಗ ಬ್ರೇಕ್ ಫೇಲ್ ಆಗಿದೆ. ಪರಿಣಾಮ ಜೀಪು ಚಾಲಕನ ನಿಯಂತ್ರಣಕ್ಕೆ ಸಿಗದೆ, ಅಡ್ಡಾದಿಡ್ಡಿ ನುಗ್ಗಿದೆ. ಈ ವೇಳೆ ಪಕ್ಕದಲ್ಲಿ ಬರುತ್ತಿದ್ದ ಬೈಕಿಗೆ ಜೀಪು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಹಸೈನರ್ ಉರುಳಿ ಬಿದ್ದಿದ್ದು, ಚಿಕ್ಕ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಗಾಯಗೊಂಡಿರುವ ಬೈಕ್ ಚಾಲಕನನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕಿಗೆ ಡಿಕ್ಕಿ ಹೊಡೆದ ಜೀಪು ಅಷ್ಟಕ್ಕೆ ನಿಲ್ಲದೆ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ತುಂಡಾಗಿ ತಂತಿಯಲ್ಲೇ ನೇತಾಡಿದೆ. ಅಲ್ಲಿಂದಲೂ ಮುಂದೆ ನುಗ್ಗಿದ ಜೀಪು ಮತ್ತೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಲ್ಲಿ ನಿಂತಿದೆ. ಆದರೆ ಜೀಪು ಚಾಲಕ ವಾಸು ಚಿಕ್ಕಪುಟ್ಟ ಗಾಯಗಳೊಂದಿಗೆ ಗ್ರೇಟ್ ಎಸ್ಕೇಪ್ ಆಗಿದ್ದಾರೆ.

    ಘಟನೆ ಸಂಬಂಧ ವಿರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪು ಅಡ್ಡಾ ದಿಡ್ಡಿ ನುಗ್ಗಿ ಬೈಕ್ ಗೆ ಡಿಕ್ಕಿ ಹೊಡೆದಿರುವ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

  • ಮಲೆನಾಡಲ್ಲಿ ಮಳೆಯ ಅಬ್ಬರ – 20 ಕಂಬ, 50 ಮರ ಧರೆಗೆ

    ಮಲೆನಾಡಲ್ಲಿ ಮಳೆಯ ಅಬ್ಬರ – 20 ಕಂಬ, 50 ಮರ ಧರೆಗೆ

    – ಮುರಿದು ಬಿದ್ದ ನೂರಾರು ವರ್ಷದ ಬೃಹತ್ ಮರ
    – ಭಾನುವಾರವಾಗಿದ್ದರಿಂದ ತಪ್ಪಿದ ಭಾರೀ ಅನಾಹುತ

    ಚಿಕ್ಕಮಗಳೂರು: ಕಳೆದ ದಿನ ಅನೇಕ ಕಡೆ ಬಿರುಗಾಳಿ ಸಹಿತ ಜೋರಾಗಿ ಮಳೆಯಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದ್ದು, ಕೊಪ್ಪ, ಎನ್‍ಆರ್ ಪುರ, ಶೃಂಗೇರಿಯಲ್ಲಿ ಭಾರೀ ಗಾಳಿಯೊಂದಿಗೆ ವರುಣ ದೇವ ಅಬ್ಬರಿಸಿದ್ದಾನೆ.

    ಭಾನುವಾರ ರಾತ್ರಿ ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಕೊಪ್ಪದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಕೊಪ್ಪ ಅಕ್ಷರಶಃ ನಲುಗಿ ಹೋಗಿದೆ. ಕೊಪ್ಪದಲ್ಲಿ ಮಳೆ ಜೊತೆ ಬೀಸಿದ ರಣಗಾಳಿಗೆ ಸುಮಾರು 50ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಅಲ್ಲದೇ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದಿವೆ. ಭಾರೀ ಗಾಳಿ ಮಳೆಗೆ ಮರ ಹಾಗೂ ವಿದ್ಯುತ್ ಕಂಬ ಮುರಿದು ಬಿದ್ದಿದ್ರಿಂದ ಕೊಪ್ಪ ನಗರ ಸಂಪೂರ್ಣ ಕತ್ತಲಲ್ಲಿದೆ.

    ಬಿದ್ದ ಮರಗಳು ಮನೆ ಮೇಲೆ ಬಿದ್ದಿದ್ರಿಂದ ಮನೆಯ ಹಂಚುಗಳು, ಛಾವಣಿ ಮುರಿದು, ಮಳೆ ನೀರು ಮನೆಯೊಳಗೆ ನುಗ್ಗಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಬೈಕ್‍ಗಳು ಕೂಡ ಸಂಪೂರ್ಣ ಜಖಂ ಆಗಿವೆ. ಇನ್ನೂ ಎನ್‍ಆರ್ ಪುರ ತಾಲೂಕಿನ ಬಾಳೆಹೊನ್ನೂರಿನ ಇಟ್ಟಿಗೆ ಶಿವಪುರದ ಬಳಿ ನೂರಾರು ವರ್ಷದ ಬೃಹತ್ ಮರವೊಂದು ಮುರಿದು ಬಿದ್ದಿದೆ. ಪಕ್ಕದಲ್ಲೇ ಗ್ಯಾರೇಜ್ ಕೂಡ ಇತ್ತು. ಭಾನುವಾರವಾದ್ದರಿಂದ ಗ್ಯಾರೇಜ್‍ನಲ್ಲಿ ಯಾರೂ ಇರಲಿಲ್ಲ. ಬೇರೆ ದಿನವಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.

    ಈ ಮರದ ರೆಂಬೆ-ಕೊಂಬೆಗಳು ಒಣಗಿದ್ದು, ಬೀಳುವ ಹಂತದಲ್ಲಿದೆ ಎಂದು ಸ್ಥಳಿಯರು 2015ರಲ್ಲೇ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿರಲಿಲ್ಲ. ಇಂದು ಭಾರೀ ಮಳೆ-ಗಾಳಿಗೆ ಮರವೇ ಉರುಳಿ ಬಿದ್ದಿದೆ. ಕಳೆದ 15 ದಿನಗಳಿಂದ ಬಿಟ್ಟುಬಿಟ್ಟು ಸುರಿಯುತ್ತಿರೋ ಮಳೆ ಕಂಡ ಮಲೆನಾಡಿಗರು ಈ ವರ್ಷವೂ ನಾವು ವರುಣನ ಅಬ್ಬರಕ್ಕೆ ಬಲಿಯಾಗುತ್ತೀವಾ ಎಂದು ಆತಂಕಗೊಂಡಿದ್ದಾರೆ.

  • ರಸ್ತೆ ಮಧ್ಯದಲ್ಲೇ ವಿದ್ಯುತ್ ಕಂಬಗಳನ್ನಿಟ್ಟು ರಸ್ತೆ ನಿರ್ಮಿಸಿದ ಭೂಪರು

    ರಸ್ತೆ ಮಧ್ಯದಲ್ಲೇ ವಿದ್ಯುತ್ ಕಂಬಗಳನ್ನಿಟ್ಟು ರಸ್ತೆ ನಿರ್ಮಿಸಿದ ಭೂಪರು

    ಬೆಳಗಾವಿ(ಚಿಕ್ಕೋಡಿ): ಸಾಮಾನ್ಯವಾಗಿ ರಸ್ತೆ ಪಕ್ಕದಲ್ಲಿ ವಿದ್ಯುತ್ ಕಂಬಗಳನ್ನ ಅವಳಡಿಸದ್ದನ್ನ ನಾವು ನೋಡಿರುತ್ತೇವೆ. ಆದರೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಸಲಾಪೂರ ಗ್ರಾಮದಲ್ಲಿ ರಸ್ತೆ ಮಧ್ಯದಲ್ಲೇ ವಿದ್ಯುತ್ ಕಂಬಗಳನ್ನ ಬಿಟ್ಟು ನೂತನ ರಸ್ತೆ ನಿರ್ಮಿಸಲಾಗಿದೆ.

    ನಸಲಾಪೂರ ಗ್ರಾಮದಲ್ಲಿ ನೆರೆ ಹಾವಳಿ ಯೋಜನೆಯಡಿ ರಾಯಬಾಗ-ಅಂಕಲಿ ಮುಖ್ಯ ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ ಕಾಮಗಾರಿ ಭರದಿಂದ ಸಾಗುತ್ತಿದೆ. ಲೋಕೋಪಯೋಗಿ ಇಲಾಖೆಯಡಿ ನಡೆಯುತ್ತಿರುವ ಕಾಮಗಾರಿ ಇದಾಗಿದ್ದು, ರಸ್ತೆ ಪಕ್ಕದಲ್ಲಿ ಇದ್ದ ವಿದ್ಯುತ್ ಕಂಬಗಳು ಈಗ ರಸ್ತೆ ಅಗಲೀಕರಣದಿಂದ ರಸ್ತೆ ಮಧ್ಯ ಬಂದಿವೆ. ನಸಲಾಪೂರ ಗ್ರಾಮದಲ್ಲಿ ರಸ್ತೆ ಅಗಲೀಕರಣದಿಂದ ವಿದ್ಯುತ್ ಕಂಬಗಳು ರಸ್ತೆ ಮಧ್ಯ ಬಂದಿದ್ದು, ಇದರ ಬಗ್ಗೆ ಗ್ರಾಮಸ್ಥರು ಹಾಗೂ ಪ್ರಯಾಣಿಕರು ಗುತ್ತಿಗೆದಾರ ಹಾಗೂ ಲೋಕೋಪಯೋಗಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಸ್ತೆ ಮಧ್ಯೆ ವಿದ್ಯುತ್ ಕಂಬಗಳು ಇರುವುದರಿಂದ ರಾತ್ರಿ ಸಮಯದಲ್ಲಿ ವಾಹನ ಸವಾರರು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆಯುವ ಪರಿಸ್ಥಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೇ ಸಮೀಪದಲ್ಲಿ ಸಕ್ಕರೆ ಕಾರ್ಖಾನೆ ಇರುವುದರಿಂದ ನಿತ್ಯ ಈ ಮಾರ್ಗದಲ್ಲಿ ಕಬ್ಬು ತುಂಬಿದ ಟ್ಯಾಕ್ಟರ್ ಗಳು ಓಡಾಡುತ್ತವೆ. ಅವು ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ತಾಗಿದರೆ ಭಾರಿ ಅನಾಹುತ ನಡೆಯುವ ಸಾಧ್ಯತೆಯಿದೆ.

    ಈಗಾಗಲೇ ಒಂದು ಬದಿಯಲ್ಲಿ ವಿದ್ಯುತ್ ಕಂಬಗಳನ್ನು ರಸ್ತೆ ನಡುವೆ ಬಿಟ್ಟು ಡಾಂಬರೀಕರಣ ಪೂರ್ಣಗೊಳಿಸಲಾಗಿದ್ದು, ಇನ್ನೊಂದು ಬದಿಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಭರದಿಂದ ಸಾಗಿದೆ. ಇತ್ತ ಗುತ್ತಿಗೆದಾರ ಬೇಗ ಬೇಗನೆ ರಸ್ತೆ ಕಾಮಗಾರಿ ಮಾಡಿ, ಬಿಲ್ ತೆಗೆದುಕೊಳ್ಳಲು ತರಾತುರಿ ಮಾಡುತ್ತಿರುವುದು ಕಂಡು ಬರುತ್ತಿದೆ. ಇದರೆ ಜೊತೆಗೆ ರಸ್ತೆ ಕಾಮಗಾರಿ ಕೂಡ ಕಳಪೆ ಮಟ್ಟದ್ದಾಗಿರುವುದಾಗಿ ಗ್ರಾಮಸ್ಥರು ದೂರುತ್ತಿದ್ದಾರೆ.

    ನೆರೆ ಹಾವಳಿ ಯೋಜನೆಯಡಿ ಅತಿವೃಷ್ಠಿಗೆ ತುತ್ತಾದ ಗ್ರಾಮಗಳ ರಸ್ತೆ ಸುಧಾರಣೆಗೆ ಸರ್ಕಾರ ಕೋಟ್ಯಂತರ ರೂಪಾಯಿಗಳನ್ನು ಮಂಜೂರು ಮಾಡಿದೆ. ಆದರೆ ಸರ್ಕಾರದ ಹಣ ಸದುಪಯೋಗವಾಗುವುದಕ್ಕಿಂತ ಹೆಚ್ಚಾಗಿ ದುರಪಯೋಗವಾಗುತ್ತಿದೆ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.

    ರಾಯಬಾಗ ತಾಲೂಕಿನ ಲೋಕೋಪಯೋಗಿ ಅಧಿಕಾರಿಗಳ ಕಾರ್ಯವೈಖರಿಗೆ ಜನ ಛೀಮಾರಿ ಹಾಕುತ್ತಿದ್ದಾರೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಹೀಗೆ ನಿರ್ಲಕ್ಷ್ಯ ಮೆರೆಯುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು, ಸರ್ಕಾರದ ಹಣ ಪೋಲಾಗದಂತೆ ಗಮನ ವಹಿಸಲಿ ಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.

  • ಬಟ್ಟೆ ಒಣಹಾಕುವಾಗ ವಿದ್ಯುತ್ ಶಾಕ್-ಒಂದೇ ಕುಟುಂಬದ ಮೂವರು ಸಾವು

    ಬಟ್ಟೆ ಒಣಹಾಕುವಾಗ ವಿದ್ಯುತ್ ಶಾಕ್-ಒಂದೇ ಕುಟುಂಬದ ಮೂವರು ಸಾವು

    ಹಾಸನ: ಬಟ್ಟೆ ಒಣಹಾಕುವಾಗ ವಿದ್ಯುತ್ ಶಾಕ್ ಹೊಡೆದ ಪರಿಣಾಮ ತಾಯಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.

    ಚನ್ನರಾಯಪಟ್ಟಣ ತಾಲೂಕಿನ ಅಗಸರಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ. ತಾಯಿ ಭಾಗ್ಯಮ್ಮ(49) ಮತ್ತು ಮಕ್ಕಳಾದ ದಾಕ್ಷಾಯಿಣಿ(30), ದಯಾನಂದ(34) ಮೃತ ದುರ್ದೈವಿಗಳು.

    ಮನೆ ಬಳಿ ಇರುವ ವಿದ್ಯುತ್ ಕಂಬಕ್ಕೆ ಬಟ್ಟೆ ಒಣಹಾಕಲು ತಂತಿ ಕಟ್ಟಲಾಗಿತ್ತು. ಬೆಳ್ಳಂಬೆಳಗ್ಗೆ ಈ ತಂತಿಯ ಮೇಲೆ ಬಟ್ಟೆ ಒಣಹಾಕಲು ದಾಕ್ಷಾಯಿಣಿ ಹೋಗಿದ್ದರು. ಈ ವೇಳೆ ವಿದ್ಯುತ್ ಕಂಬದಿಂದ ತಂತಿಗೆ ಕರೆಂಟ್ ಹರಿದು, ದಾಕ್ಷಾಯಿಣಿಗೆ ಶಾಕ್ ಹೊಡೆದಿದೆ.

    ಈ ವೇಳೆ ತಂಗಿ ಒದ್ದಾಡುತ್ತಿದ್ದುದನ್ನು ಕಂಡ ದಯಾನಂದ ಆಕೆಯನ್ನು ಹಿಡಿಯಲು ಹೋದಾಗ ಆತನಿಗೂ ಶಾಕ್ ಹೊಡೆದಿದೆ. ಬಳಿಕ ತಾಯಿ ಮಕ್ಕಳನ್ನು ಶಾಕ್‍ಯಿಂದ ತಪ್ಪಿಸಲು ಹೋಗಿ ಅವರಿಗೂ ವಿದ್ಯುತ್ ಶಾಕ್ ತಗುಲಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.