Tag: Electric Scooter

  • 99,900 ರೂಪಾಯಿಗೆ TVS ಆರ್ಬಿಟರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

    99,900 ರೂಪಾಯಿಗೆ TVS ಆರ್ಬಿಟರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

    ಭಾರತದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿ ಟಿವಿಎಸ್, ಇಂದು ‘ಟಿವಿಎಸ್ ಆರ್ಬಿಟರ್’ (TVS Orbiter) ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಇದರ ಬೆಲೆ ರೂ 99,900 (ಎಕ್ಸ್-ಶೋರೂಮ್, ಬೆಂಗಳೂರು; PM ಇ-ಡ್ರೈವ್ ಸ್ಕೀಮ್ ಸೇರಿದಂತೆ).

    ಆರ್ಬಿಟರ್ 3.1kWh ಬ್ಯಾಟರಿ ಪ್ಯಾಕ್‌ನೊಂದಿಗೆ ಮಾತ್ರ ಲಭ್ಯವಿದ್ದು, ಒಮ್ಮೆ ಚಾರ್ಜ್ ಮಾಡಿದರೆ 158km ಚಲಿಸುತ್ತದೆ ಎಂದು ಕಂಪನಿ ಹೇಳಿದೆ. ಆದರೆ ನಿಜವಾದ ರೇಂಜ್ ಸುಮಾರು 120 ಕಿಮೀ ನೀಡಬಹುದು. ಸ್ಕೂಟರ್‌ನ ಗರಿಷ್ಠ ವೇಗವನ್ನು ಗಂಟೆಗೆ 68 ಕಿ.ಮೀ.ಗೆ ಸೀಮಿತಗೊಳಿಸಲಾಗಿದೆ.

    ಟಿವಿಎಸ್ ಆರ್ಬಿಟರ್‌ಗೆ ಓಲಾ S1Z ಮತ್ತು ರಿವರ್ ಇಂಡೀ ಸ್ಕೂಟರ್‌ಗಳಲ್ಲಿ ನೀಡಿರುವಂತೆ 14-ಇಂಚಿನ ಮುಂಭಾಗದ ಚಕ್ರ ನೀಡಲಾಗಿದೆ. ಹಿಂಭಾಗದ ಚಕ್ರ 12 ಇಂಚಿದೆ. ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಓವರ್-ದಿ-ಏರ್ ಅಪ್‌ಡೇಟ್‌ಗಳು, ಆಂಟಿ-ಥೆಫ್ಟ್, ಕ್ರ್ಯಾಶ್ ಮತ್ತು ಜಿಯೋ-ಫೆನ್ಸಿಂಗ್ ಒಳಗೊಂಡ ಸುರಕ್ಷತಾ ಎಚ್ಚರಿಕೆಗಳನ್ನು ಕನೆಕ್ಟೆಡ್ ಆಪ್ ಮೂಲಕ ಪಡೆಯಬಹುದಾಗಿದೆ. ಈಕೋ ಮತ್ತು ಪವರ್ ಮೋಡ್‌ಗಳು, ಹಿಲ್-ಹೋಲ್ಡ್ ಅಸಿಸ್ಟ್, ಪಾರ್ಕಿಂಗ್ ಅಸಿಸ್ಟ್ (ರಿವರ್ಸ್ ಫಂಕ್ಷನ್) ಮತ್ತು ಕ್ರೂಸ್ ಕಂಟ್ರೋಲ್‌ನಂತಹ ವೈಶಿಷ್ಟ್ಯಗಳನ್ನು ಈ ಸ್ಕೂಟರ್‌ ಹೊಂದಿದೆ.

    ಆರ್ಬಿಟರ್‌ನಲ್ಲಿ ಹ್ಯಾಂಡಲ್‌ಬಾರ್-ಮೌಂಟೆಡ್ LED ಹೆಡ್‌ಲ್ಯಾಂಪ್, LED ಲೈಟ್ ಸ್ಟ್ರಿಪ್‌, ಎರಡು ಹೆಲ್ಮೆಟ್‌ಗಳನ್ನು ಇಡಬಹುದಾದ 34-ಲೀಟರ್ ಅಂಡರ್ ಸೀಟ್ ಸ್ಟೋರೇಜ್, ವಿಶಾಲವಾದ 290 ಎಂಎಂ ಫ್ಲಾಟ್ ಫ್ಲೋರ್‌ಬೋರ್ಡ್, ಮುಂತಾದ ವೈಶಿಷ್ಟ್ಯಗಳನ್ನು ನೀಡಲಾಗಿದೆ. ಆರ್ಬಿಟರ್ ನಿಯಾನ್ ಸನ್ ಬರ್ಸ್ಟ್, ಸ್ಟ್ರಾಟೋಸ್ ಬ್ಲೂ, ಲೂನಾರ್ ಗ್ರೇ, ಮಾರ್ಟಿಯನ್ ಕಾಪರ್, ಕಾಸ್ಮಿಕ್ ಟೈಟಾನಿಯಂ ಮತ್ತು ಸ್ಟೆಲ್ಲಾರ್ ಸಿಲ್ವರ್ ಎಂಬ ಆರು ಬಣ್ಣಗಳಲ್ಲಿ ಲಭ್ಯವಿದೆ.

  • ಬೈಕ್ ಶೋರೂಂಗೆ ಬೆಂಕಿ ಅವಘಡ – ಶೋರೂಂ ಮಾಲೀಕ, ಮ್ಯಾನೇಜರ್ ಬಂಧನ

    ಬೈಕ್ ಶೋರೂಂಗೆ ಬೆಂಕಿ ಅವಘಡ – ಶೋರೂಂ ಮಾಲೀಕ, ಮ್ಯಾನೇಜರ್ ಬಂಧನ

    ಬೆಂಗಳೂರು: ನಗರದ ರಾಜ್‌ಕುಮಾರ್ ರಸ್ತೆಯ (Rajkumar Road) ಬಳಿ ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಬೆಂಕಿ ಹೊತ್ತಿಕೊಂಡ ಘಟನೆಗೆ ಸಂಬಂಧಿಸಿದಂತೆ ಶೋರೂಂ ಮಾಲೀಕ ಹಾಗೂ ಮ್ಯಾನೇಜರ್‌ನ್ನು ರಾಜಾಜಿನಗರ (Rajaji Nagar) ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಮಾಲೀಕ ಪುನೀತ್ ಹಾಗೂ ಮ್ಯಾನೇಜರ್ ಯುವರಾಜ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ದೊಡ್ಮನೆಯಲ್ಲಿ ಯಾರು ಸ್ಟ್ರಾಂಗ್, ಯಾರು ವೀಕ್?- ಮಂಜು, ರಜತ್ ನಡುವೆ ಬಿಗ್ ಫೈಟ್

    ನ.19 ರಂದು ಸಂಜೆ 5:30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾಗಿತ್ತು. ಘಟನೆಯಲ್ಲಿ ಓರ್ವ ಯುವತಿ ಸಜೀವ ದಹನಗೊಂಡಿದ್ದು, ಮೂವರು ಗಾಯಗೊಂಡಿದ್ದರು. ಶೋರೂಮ್‌ನಲ್ಲಿ ಸೇಲ್ಸ್ ಗರ್ಲ್ ಆಗಿದ್ದ ಪ್ರಿಯಾ ಎಂಬ ಯುವತಿ ಸಾವಿಗೀಡಾಗಿದ್ದಾಳೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು (ನ.20) ಎಫ್‌ಎಸ್‌ಎಲ್ (FSL) ತಂಡದಿಂದ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಗ್ನಿ ಅವಘಡ ಸಂಬಂಧ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿದೆ. ಪೊಲೀಸರು ಮೂವರು ಗಾಯಾಳುಗಳ ಹೇಳಿಕೆ ಪಡೆದುಕೊಂಡಿದ್ದು, ಯುವತಿಯ ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ತನಿಖೆ ನಡೆಸಲಿದ್ದಾರೆ.

    ಘಟನೆಯ ಬಳಿಕ ಶೋ ರೂಂ ಮಾಲೀಕ ಪುನೀತ್ ಪರಾರಿಯಾಗಿದ್ದ. ಇದೀಗ ಮಾಲೀಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿರುದ್ಧ ಬಿಎನ್‌ಎಸ್ 106 ಅಡಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಮ್ಯಾನೇಜರ್ ಯುವರಾಜ್‌ನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.ಇದನ್ನೂ ಓದಿ: ಬೆಂಗಳೂರು| ಕೋರ್ಟ್‌ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

  • ಬೆಂಗ್ಳೂರು | ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ – ಯುವತಿ ಸಜೀವ ದಹನ

    ಬೆಂಗ್ಳೂರು | ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ – ಯುವತಿ ಸಜೀವ ದಹನ

    ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾದ ಘಟನೆ ನಗರದ (Bengaluru) ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.

    ಶೋರೂಮ್‌ನಲ್ಲಿ ಸೇಲ್ಸ್ ಗರ್ಲ್ ಆಗಿದ್ದ ಪ್ರಿಯಾ ಎಂಬ ಯುವತಿ ಸಾವಿಗೀಡಾಗಿದ್ದಾಳೆ. ಶೋರೂಮ್ ಧಗಧಗಿಸುತ್ತಿದ್ದಂತೆ ಹೊರಬರಲಾಗದೆ ಯುವತಿ ಒಳಗಡೆ ಸಿಲುಕಿದ್ದಳು. ಹೊರಬರಲಾರದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

    ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಬಂದಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅವಘಡದಲ್ಲಿ 30ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ.

  • ಬೆಂಗಳೂರಿನ ನಡು ರಸ್ತೆಯಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್‌ ಸ್ಕೂಟರ್‌

    ಬೆಂಗಳೂರಿನ ನಡು ರಸ್ತೆಯಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್‌ ಸ್ಕೂಟರ್‌

    ಬೆಂಗಳೂರು: ನಡು ರಸ್ತೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ (Electric Scooter) ಹೊತ್ತಿ ಉರಿದ ಘಟನೆ ಆರ್‌ಆರ್‌ ನಗರದ (RR Nagara) ಬೆಮೆಲ್ ಲೇಔಟ್ ರಸ್ತೆಯಲ್ಲಿ ನಡೆದಿದೆ.

    ಶಿವಾನಂದ ಎಂಬುವರು ಬೆಳಗ್ಗೆ ಮನೆಯಿಂದ ಕೆಲಸಕ್ಕೆ ಆರ್‌ಆರ್‌ ನಗರದ ಕಚೇರಿಗೆ ಬಂದಿದ್ದರು. ನಂತರ ಕಚೇರಿಯಿಂದ ನಾಗರಭಾವಿಗೆ ತೆರಳಲು ಸ್ಕೂಟರ್‌ ತೆಗೆದು ಹೊರ ಬರುವಾಗ ಸಣ್ಣ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಇದನ್ನೂ ಓದಿ: ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗಲ್ಲ: ಹೆಚ್‌ಡಿಕೆ

    ಹೊಗೆ ಬರುತ್ತಿರುವುದನ್ನು ನೋಡಿ ರಸ್ತೆ ಬದಿ ಶಿವಾನಂದ ಸ್ಕೂಟರ್‌ ನಿಲ್ಲಿಸಿದ್ದಾರೆ. ಈ ವೇಳೆ ಕ್ಷಣ ಮಾತ್ರದಲ್ಲೇ ಎಲೆಕ್ಟ್ರಿಕ್ ಸ್ಕೂಟರ್‌ ಹೊತ್ತಿ ಉರಿದಿದೆ. ಸ್ಥಳೀಯರು ಬ್ಯಾಟರಿ ಹೊರ ತೆಗೆದು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಪಟಾಕಿ – ಪುಂಡರಿಂದ ವಾಹನಗಳಿಗೆ ಕಿರಿಕ್‌

    ಎಲೆಕ್ಟ್ರಿಕ್ ಬೈಕ್ ಸುಟ್ಟು ಕರಕಲಾಗಿದ್ದು ಸ್ಥಳಕ್ಕೆ ಆರ್ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • FAME II ಸಬ್ಸಿಡಿ ಕಡಿತ; ಜೂನ್ 1ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ದುಬಾರಿ

    FAME II ಸಬ್ಸಿಡಿ ಕಡಿತ; ಜೂನ್ 1ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ದುಬಾರಿ

    ಜೂನ್ 1, 2023ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೆಲೆ ಭಾರೀ ಏರಿಕೆಯಾಗಲಿದೆ. ಇದಕ್ಕೆ ಕಾರಣ ಏನೆಂದರೆ ಕೇಂದ್ರ ಸರ್ಕಾರ FAME II ಸಬ್ಸಿಡಿಯನ್ನು ಪ್ರತಿ ಕಿಲೋವ್ಯಾಟ್‌ಗೆ 5 ಸಾವಿರ ಕಡಿತಗೊಳಿಸಿದೆ. ಹೊಸ ಅಧಿಸೂಚನೆ ಬರುವ ಮುನ್ನ FAME II ಸಬ್ಸಿಡಿ ಪ್ರತಿ ಕಿಲೋವ್ಯಾಟ್‌ಗೆ 15 ಸಾವಿರ ರೂ. ಇತ್ತು.

    ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಸಬ್ಸಿಡಿ ನೀಡುತ್ತಿದ್ದರೂ ಪೆಟ್ರೋಲ್ ವಾಹನಗಳಿಗಿಂತ ಅವು ದುಬಾರಿ. ಈಗ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸಿರುವುದರಿಂದ ಅವುಗಳ ಬೆಲೆಗಳು ಮತ್ತಷ್ಟು ಹೆಚ್ಚಾಗೋದಂತೂ ಗ್ಯಾರಂಟಿ. ಇದನ್ನೂ ಓದಿ: ಪೆಟ್ರೋಲ್ ಬೇಕಿಲ್ಲ – ಬಿಯರ್ ಹಾಕಿದ್ರೆ ಓಡುತ್ತೆ ಈ ಬೈಕ್!

    ಈ ಪರಿಷ್ಕರಣೆಯ ಪರಿಣಾಮವಾಗಿ, FAME II ಸಬ್ಸಿಡಿಗೆ ಅರ್ಹವಾಗಿರುವ ಎಲ್ಲಾ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕರು ತಮ್ಮ ಉತ್ಪನ್ನದ ಬೆಲೆಗಳನ್ನು ಸರಿಸುಮಾರು 25.000-35,000 ರೂ.ಗಳಷ್ಟು ಹೆಚ್ಚಿಸಬೇಕಾಗುತ್ತದೆ. ಉದಾಹರಣೆಗೆ, ಏಥರ್ 450X ಮತ್ತು OLA S1 Proಗೆ ಲಭ್ಯವಿರುವ ಸಬ್ಸಿಡಿ ಮೊತ್ತವು ಪ್ರಸ್ತುತ ರೂ 55,000-60,000ದ ನಡುವೆ ಇದೆ ಮತ್ತು ಪರಿಷ್ಕೃತ ದರಗಳೊಂದಿಗೆ, ಸಬ್ಸಿಡಿ ಮೊತ್ತವನ್ನು ಅರ್ಧಕ್ಕಿಂತ ಹೆಚ್ಚುಗೊಳಿಸಬೇಕಾದ ಅನಿವಾರ್ಯತೆ ತಯಾರಕರದ್ದು. ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರತಿ ತಿಂಗಳು ಇಳಿಮುಖವಾಗುತ್ತಿರುವಾಗ, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಮಾರಾಟ ಇನ್ನಷ್ಟು ಕಡಿಮೆಯಾಗುವ ಸಂಭವವಿದೆ.

    ನಿಮಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬೇಕು ಎಂಬ ಆಸೆ ಇದ್ದಲ್ಲಿ ಮೇ 31ರ ಒಳಗೆ ಕೊಂಡುಕೊಳ್ಳಿ ಮತ್ತು FAME II ಸಬ್ಸಿಡಿಯ ಪೂರ್ಣ ಲಾಭವನ್ನು ಪಡೆದುಕೊಳ್ಳಿ. ಇದನ್ನೂ ಓದಿ: Harley-Davidson Pan America 1250 ಅಡ್ವೆಂಚರ್‌ ಸ್ಪೆಷಲ್‌ ಬೈಕ್‌ ಭಾರತದಲ್ಲಿ ಬಿಡುಗಡೆ

  • ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಇಲ್ಲದ್ದಕ್ಕೆ ಎಲೆಕ್ಟ್ರಿಕ್‌ ಸ್ಕೂಟರ್‌ಗೆ ದಂಡ

    ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಇಲ್ಲದ್ದಕ್ಕೆ ಎಲೆಕ್ಟ್ರಿಕ್‌ ಸ್ಕೂಟರ್‌ಗೆ ದಂಡ

    ತಿರುವನಂತಪುರಂ: ಕೇರಳ ಸಂಚಾರಿ ಪೊಲೀಸರು(Kerala Traffic Police) ಎಲೆಕ್ಟ್ರಿಕ್‌ ಸ್ಕೂಟರ್‌ ಮಾಲೀಕರಿಗೆ ಮಾನ್ಯವಾದ ಮಾಲಿನ್ಯ ನಿಯಂತ್ರಣ (Pollution Under Control) ಪ್ರಮಾಣ ಪತ್ರವನ್ನು ಹೊಂದಿಲ್ಲದ ಕಾರಣಕ್ಕೆ ದಂಡ ಹಾಕಿ ಸುದ್ದಿಯಾಗಿದ್ದಾರೆ.

    ಕೇರಳದ ಮಲಪ್ಪುರಂ ಜಿಲ್ಲೆಯ ನೀಲಂಚೇರಿಯಲ್ಲಿ ಸೆಪ್ಟೆಂಬರ್ 6ರಂದು ಏಥರ್ 450X (Ather 450X) ಸ್ಕೂಟರ್‌ ಮಾಲೀಕರಿಗೆ 250 ರೂ. ದಂಡ ವಿಧಿಸಿದ್ದಾರೆ. ಪೊಲೀಸರು ನೀಡಿದ ಚಲನ್‌ ಪ್ರತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 213 (5) (ಇ) ಅಡಿ ದಂಡ ವಿಧಿಸಲಾಗಿದೆ. ನೆಟ್ಟಿಗರು ಈಗ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ(Nitin Gadkari) ಅವರಿಗೆ ಟ್ಯಾಗ್‌ ಮಾಡಿ ಎಲೆಕ್ಟ್ರಿಕ್‌ ಸ್ಕೂಟರ್‌ಗೆ ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಬೇಕೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಒಳ ಉಡುಪು ಖರೀದಿಸಲು ದೆಹಲಿಗೆ ಹೋಗಿದ್ದೆ- ಜಾರ್ಖಂಡ್ ಸಿಎಂ ಸಹೋದರನ ವಿವಾದಾತ್ಮಕ ಹೇಳಿಕೆ

    ಪೊಲೀಸರು ಇಂತಹ ವಿಚಿತ್ರ ಚಲನ್ ನೀಡುತ್ತಿರುವುದು ಇದೇ ಮೊದಲಲ್ಲ. ಜುಲೈನಲ್ಲಿ ಕೇರಳದ ವ್ಯಕ್ತಿಯೊಬ್ಬರು ಸಾಕಷ್ಟು ಇಂಧನವಿಲ್ಲದೆ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಚಲಾಯಿಸಿದ್ದಕ್ಕಾಗಿ ದಂಡವನ್ನು ಹಾಕಿದ್ದರು.

    ಏಥರ್ ಸ್ಕೂಟರ್ 5.4 kW ಬ್ರಶ್‌ಲೆಸ್ ಎಲೆಕ್ಟ್ರಿಕ್ ಮೋಟರ್ ಹೊಂದಿದ್ದು, 2.4 kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನಿಂದ ಚಾಲಿತವಾಗಿದೆ. ಸ್ಕೂಟರ್ 3.9 ಸೆಕೆಂಡುಗಳಲ್ಲಿ ಝೀರೋದಿಂದ 40 ಕಿಮೀ/ಗಂಟೆಗೆ ವೇಗವನ್ನು ಪಡೆಯುವ ಸಾಮರ್ಥ್ಯ ಹೊಂದಿದೆ. ಗಂಟೆಗೆ 80 ಕಿ.ಮೀ. ಕ್ರಮಿಸುವ ಸಾಮರ್ಥ್ಯ ಹೊಂದಿರುವ ಸ್ಕೂಟರ್‌ ಒಂದು ಬಾರಿ ಚಾರ್ಜ್‌ ಮಾಡಿದರೆ 75 ಕಿ.ಮೀವರೆಗೆ ಸಂಚರಿಸಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಖಿ ಕಟ್ಟಿದ ಸಹೋದರಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ ಗಿಫ್ಟ್‌ ಕೊಡಲು ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ

    ರಾಖಿ ಕಟ್ಟಿದ ಸಹೋದರಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ ಗಿಫ್ಟ್‌ ಕೊಡಲು ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ

    ನವದೆಹಲಿ: ರಕ್ಷಾ ಬಂಧನದ ದಿನ ರಾಖಿ ಕಟ್ಟಿದ ಸಹೋದರಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ನ್ನು ಉಡುಗೊರೆ ನೀಡಲು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ಕಳ್ಳನೊಬ್ಬ ತನ್ನನ್ನು ದರೋಡೆ ಮಾಡಲು ಪ್ರಯತ್ನಿಸಿ ವಿಫಲನಾಗಿದ್ದಾನೆ ಎಂದು ಸುರೇಂದ್ರ ಎಂಬವರು ದೂರು ಕೊಟ್ಟಿದ್ದರು. ತಪ್ಪಿಸಿಕೊಂಡ. ಆದರೆ ಈ ವೇಳೆ ಆತನ ಬಿದ್ದ ನನಗೆ ಸಿಕ್ತು ಎಂದು ಸುರೇಂದ್ರ ಅವರು ಸುಲ್ತಾನ್‌ಪುರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು ಎಂದು ಹಿರಿಯ ಪೊಲೀಸ್‌ ಅಧಿಕಾರಿ ಸಮೀರ್‌ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಪೆನ್ಸಿಲ್ ಬೆಲೆ ಏರಿಕೆಯಿಂದ ನನಗೆ ಕಷ್ಟ ಆಗುತ್ತಿದೆ – ಮೋದಿಗೆ 6ರ ಬಾಲಕಿ ಪತ್ರ

    ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಮೊಬೈಲ್ ಬಳಸಿದ್ದಾರೆ. ಆತನನ್ನು ರೋಹಿಣಿ ನಿವಾಸಿ 21 ವರ್ಷದ ತರುಣ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಆತನಿಂದ ಕದ್ದ ಬೈಕ್ ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ವಿಜಯ್ ವಿಹಾರ್‌ನಿಂದ ದ್ವಿಚಕ್ರ ವಾಹನವನ್ನು ಕದ್ದಿದ್ದೇನೆ. ರಾಖಿ ಕಟ್ಟಿದ ಸಹೋದರಿಗೆ ಉಡುಗೊರೆ ನೀಡಲು ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಲು ಕಳ್ಳತನ ಮಾಡುತ್ತಿದ್ದೆ ಎಂದು ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಇದನ್ನೂ ಓದಿ: ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಪರ ವಾದ ಮಂಡಿಸಿದ್ದ ವಕೀಲ ಹೃದಯಾಘಾತದಿಂದ ಸಾವು

    ಆರೋಪಿ ವಿಚಾರಣೆಯು ಆರು ಕಳ್ಳತನ ಪ್ರಕರಣಗಳನ್ನು ಭೇದಿಸಲು ಸಹಾಯ ಮಾಡಿದೆ. ಆತ ವಿದ್ಯಾರ್ಥಿಯಾಗಿದ್ದಾಗಲೇ ಶಾಲೆ ಬಿಟ್ಟು, ವ್ಯಸನಿಯಾಗಿದ್ದ. ಈತನ ವಿರುದ್ಧ 10 ಪೊಲೀಸ್ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ – ವೃದ್ಧ ಸಾವು, ನಾಲ್ವರಿಗೆ ಗಾಯ

    ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ – ವೃದ್ಧ ಸಾವು, ನಾಲ್ವರಿಗೆ ಗಾಯ

    ಹೈದರಾಬಾದ್: ಮನೆಯಲ್ಲಿ ಚಾರ್ಜ್‍ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ತೆಲಂಗಾಣದ ನಿಜಾಮಾಬಾದ್‍ನಲ್ಲಿ ಬುಧವಾರ ನಡೆದಿದೆ.

    ಬಿ ರಾಮಸ್ವಾಮಿ (80) ಮೃತ ವ್ಯಕ್ತಿ. ಟೈಲರ್ ಆಗಿರುವ ಅವರ ಮಗ ಬಿ ಪ್ರಕಾಶ್ ಒಂದು ವರ್ಷದಿಂದ ಇವಿ ಸ್ಕೂಟರ್ ಬಳಸುತ್ತಿದ್ದರು. ಘಟನೆ ಕುರಿತು ಮಾತನಾಡಿದ ನಿಜಾಮಾಬಾದ್‍ನ ಸಹಾಯಕ ಪೊಲೀಸ್ ಕಮಿಷನರ್ ಎ ವೆಂಕಟೇಶ್ವರಲು, ಸ್ಕೂಟರ್ ತಯಾರಕ ಮತ್ತು ಕಂಪನಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: PSI ಅಕ್ರಮ ನೇಮಕಾತಿ: ಎಂಎಲ್‌ಎ ಮುಂದೆಯೇ ಗನ್‌ಮ್ಯಾನ್ ಅರೆಸ್ಟ್

    ತ್ರೀ ಟೌನ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಾಯಿನಾಥ್ ಹೇಳಿಕೆ ಪ್ರಕಾರ, ಪ್ರಕಾಶ್ ಅವರು 12:30 ರ ಸುಮಾರಿಗೆ ಸ್ಕೂಟರ್‌ನಿಂದ ಬ್ಯಾಟರಿಯನ್ನು ತೆಗೆದು ಚಾರ್ಜ್ ಮಾಡಲು ಇಟ್ಟುಕೊಂಡಿದ್ದರು. ಅವರ ತಂದೆ ರಾಮಸ್ವಾಮಿ, ತಾಯಿ ಕಮಲಮ್ಮ ಮತ್ತು ಮಗ ಕಲ್ಯಾಣ್ ಲಿವಿಂಗ್ ರೂಮಿನಲ್ಲಿ ಮಲಗಿದ್ದಾಗ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬ್ಯಾಟರಿ ಸ್ಫೋಟಗೊಂಡು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪ್ರಕಾಶ್ ಮತ್ತು ಅವರ ಪತ್ನಿ ಕೃಷ್ಣವೇಣಿ ಕೂಡ ಬೆಂಕಿಯನ್ನು ನಂದಿಸುವಾಗ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ ಬ್ರಿಟನ್ ಪ್ರಧಾನಿ

    ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಮಸ್ವಾಮಿ ಅವರ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‍ಗೆ ಸಾಗಿಸುವಾಗ ಅವರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  • 1 ದಿನದಲ್ಲೇ 600 ಕೋಟಿ ಮೌಲ್ಯದ 80 ಸಾವಿರ ಓಲಾ ಸ್ಕೂಟರ್ ಮಾರಾಟ

    1 ದಿನದಲ್ಲೇ 600 ಕೋಟಿ ಮೌಲ್ಯದ 80 ಸಾವಿರ ಓಲಾ ಸ್ಕೂಟರ್ ಮಾರಾಟ

    ನವದೆಹಲಿ: ಮಾರಾಟ ಪ್ರಕ್ರಿಯೆ ಆರಂಭಗೊಂಡ ಮೊದಲ ದಿನವೇ 600 ಕೋಟಿ ರೂ. ಮೌಲ್ಯದ 80 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಗೊಂಡಿದೆ ಎಂದು ಓಲಾ ಹೇಳಿದೆ.

    ಎಸ್1 ಮಾದರಿಯ ಸ್ಕೂಟರ್ ಅನ್ನು ಸೆ.15 ಮತ್ತು 16 ರಂದು ಆನ್‍ಲೈನ್ ಮೂಲಕ ಖರೀದಿಸಲು ಗ್ರಾಹಕರಿಗೆ ಅವಕಾಶ ನೀಡಿತ್ತು. ಈ ಮೊದಲು 499 ರೂ. ಮುಂಗಡ ಪಾವತಿಸಿದವರು
    20 ಸಾವಿರ ರೂ. ಪಾವತಿಸಿ ಸ್ಕೂಟರ್ ಖರೀದಿ ಮಾಡಿದ್ದಾರೆ.

    ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸೆಕೆಂಡಿಗೆ 4 ಸ್ಕೂಟರ್ ಗಳು ಮಾರಾಟಗೊಂಡಿದೆ ಎಂದು ಓಲಾ ಸಿಇಒ ಭವೀಶ್ ಅಗರವಾಲ್ ತಿಳಿಸಿದ್ದಾರೆ.

    ಭಾರತ ಎಲೆಕ್ಟ್ರಿಕ್ ವಾಹನಗಳಿಗೆ ಬದ್ಧವಾಗಿದೆ ಮತ್ತು ಪೆಟ್ರೋಲ್ ಅನ್ನು ತಿರಸ್ಕರಿಸಿದೆ. 4 ಸೆಕೆಂಡಿಂಗ್ ಒಂದು ಸ್ಕೂಟರ್ ಮಾರಾಟ ಮಾಡಿದ್ದೇವೆ ಮತ್ತು 600 ಕೋಟಿ ರೂ. ಮೌಲ್ಯದ ಸ್ಕೂಟರ್ ಅನ್ನು ಒಂದೇ ದಿನದಲ್ಲಿ ಮಾರಾಟ ಮಾಡಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಓಲಾ ಕಂಪನಿ ಎರಡು ಮಾದರಿಯಲ್ಲಿ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಎಸ್ 1 ಬೆಲೆ 99,999 ರೂ., ಎಸ್ 1 ಪ್ರೊ ಬೆಲೆ 1.29 ಲಕ್ಷ ರೂ. ದರವನ್ನು ನಿಗದಿ ಮಾಡಿದೆ. ಇದನ್ನೂ ಓದಿ: ಭಾರತದಲ್ಲಿ ಬಾಗಿಲು ಮುಚ್ಚಲಿದೆ ಫೋರ್ಡ್ 

    ಬುಕ್ಕಿಂಗ್ ಮಾಡಿ ಖರೀದಿ ಮಾಡಿದ ಗ್ರಾಹಕರಿಗೆ ಅಕ್ಟೋಬರ್ ತಿಂಗಳಿನಿಂದ ಡೆಲಿವರಿ ಮಾಡಲಾಗುವುದು. ಯಾರು ಮೊದಲು ಬುಕ್ಕಿಂಗ್ ಮಾಡಿದ್ದಾರೋ ಅವರಿಗೆ ಮೊದಲು ಡೆಲಿವರಿ ಮಾಡಲಾಗುತ್ತದೆ ಎಂದು ಮುಖ್ಯ ಮಾರುಕಟ್ಟೆ ಅಧಿಕಾರಿ ವರುಣ್ ದುಬೆ ತಿಳಿಸಿದ್ದಾರೆ. ಇದನ್ನೂ ಓದಿ: ಶೇ.100 ಎಫ್‍ಡಿಐಗೆ ಸರ್ಕಾರದ ಅನುಮತಿ ಬೇಕಿಲ್ಲ – ಟೆಲಿಕಾಂ ಕಂಪನಿಗಳಿಗೆ ಹಲವು ಕೊಡುಗೆ

    ಮೊದಲ ಹಂತದಲ್ಲಿ ವರ್ಷಕ್ಕೆ 20 ಲಕ್ಷ ಸ್ಕೂಟರ್ ಉತ್ಪಾದನೆ ಮಾಡುವ ಗುರಿಯನ್ನು ಓಲಾ ಹಾಕಿಕೊಂಡಿದೆ. ಘಟಕ ಪೂರ್ಣವಾಗಿ ಆರಂಭಗೊಂಡರೆ ವರ್ಷಕ್ಕೆ 1 ಕೋಟಿ ಸ್ಕೂಟರ್ ಉತ್ಪಾದನೆ ಮಾಡಲಾಗುವುದು. ಇದು ವಿಶ್ವದ ದೊಡ್ಡ ದ್ವಿಚಕ್ರ ವಾಹನ ಫ್ಯಾಕ್ಟರಿ ಎಂದು ಕಂಪನಿ ಹೇಳಿಕೊಂಡಿದೆ.

    \

  • ಬಿಡುಗಡೆಯಾಗಲಿದೆ 50 ಸಾವಿರ ರೂ. ಮೌಲ್ಯದ ಬರ್ಡ್‌ ಎಲೆಕ್ಟ್ರಿಕ್‌ ಸ್ಕೂಟರ್‌

    ಬಿಡುಗಡೆಯಾಗಲಿದೆ 50 ಸಾವಿರ ರೂ. ಮೌಲ್ಯದ ಬರ್ಡ್‌ ಎಲೆಕ್ಟ್ರಿಕ್‌ ಸ್ಕೂಟರ್‌

    ನವದೆಹಲಿ: ದೇಶದ ಮಾರುಕಟ್ಟೆಗೆ ಬರ್ಡ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಲಗ್ಗೆ ಇಡಲಿದೆ. ಇಎಸ್‌1+ ಹೆಸರಿನ ಸ್ಕೂಟರ್‌ ಅನ್ನು 2021ರ ಮಧ್ಯ ಭಾಗದಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಇದರ ದೆಹಲಿ ಎಕ್ಸ್‌ ಶೋರೂಮ್‌ ಬೆಲೆ 50 ಸಾವಿರ ಇರಲಿದೆ ಎಂದು ಅಂದಾಜಿಸಲಾಗಿದೆ.

    ಬರ್ಡ್‌ ಗ್ರೂಪ್‌ ಆಸ್ಟ್ರೇಲಿಯಾದ ವಿಮೋಟೋ ಜೊತೆ ಪರಸ್ಪರ ಒಡಂಬಡಿಕೆ ಮಾಡಿಕೊಂದ್ದು ಮಾರಾಟ ಹಕ್ಕನ್ನು ಪಡೆದುಕೊಂಡಿದೆ.ಈ ಒಪ್ಪಂದ ಅನ್ವಯ ವಿಮೋಟೋ ಅಭಿವೃದ್ಧಿ ಪಡಿಸಿದರುವ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ಭಾರತದಲ್ಲಿ ಮಾರಾಟ ಮಾಡಲಿದೆ.

    ಆರಂಭದಲ್ಲಿ ದೆಹಲಿ ಎನ್‌ಸಿಆರ್‌ನಲ್ಲಿ ಬಿಡುಗಡೆಯಾಗಲಿದ್ದು ಬಳಿಕ ಟಯರ್‌ 1, ಟಯರ್‌ 2 ನಗರದಲ್ಲಿ ಸ್ಕೂಟರ್‌ ಬಿಡುಗಡೆಯಾಗಲಿದೆ.

    ಗುಣ ವೈಶಿಷ್ಟತೆ ಏನು?
    ಎಲ್‌ಇಡಿ ಹೆಡ್‌ಲ್ಯಾಂಪ್‌, ಎಲ್‌ಇಡಿ ಟೇಲ್‌ ಲ್ಯಾಂಪ್‌, ಸ್ಪ್ಪಿಟ್‌ ಸೀಟರ್‌ ಮತ್ತು ಎಲ್‌ಸಿಡಿ ಇನ್‌ಸ್ಟ್ರುಮೆಂಟ್‌ ಕ್ಲಸ್ಟರ್‌, 1782 ಮೀ.ಮೀ ಉದ್ದ, 727 ಮಿ.ಮೀ ಅಗಲ, 1087 ಮಿ.ಮೀ ಎತ್ತರವನ್ನು ಹೊಂದಿದೆ. 140 ಮಿ.ಮೀ ಗ್ರೌಂಡ್‌ ಕ್ಲಿಯರನ್ಸ್‌ ಇದ್ದು ಒಟ್ಟು 62 ಕೆಜಿ ತೂಕವನ್ನು ಹೊಂದಿದೆ.

    ಬ್ಯಾಟರಿ  3ಎಎಚ್‌ ಲಿಥಿಯಾನ್‌ ಐಯಾನ್‌ ಬ್ಯಾಟರಿ ಮತ್ತು 1.6 ಕೆಡಬ್ಲ್ಯೂ ಎಲೆಕ್ಟ್ರಿಕ್‌ ಬ್ಯಾಟರಿ ಒಳಗೊಂಡಿದೆ. ಒಂದು ಬಾರಿ ಚಾರ್ಜ್‌ ಮಾಡಿದರೆ 55 ಕಿ.ಮೀ ದೂರದವರೆಗೆ ಸಂಚರಿಸಬಹುದು. ಗಂಟೆಗೆ 45 ಕಿ.ಮೀ ವೇಗದಲ್ಲಿ ಈ ಸ್ಕೂಟರ್‌ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.