Tag: electrical bus

  • ಸಿಲಿಕಾನ್ ಸಿಟಿಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳು – ಆಗಸ್ಟ್ 15ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    ಸಿಲಿಕಾನ್ ಸಿಟಿಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳು – ಆಗಸ್ಟ್ 15ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    ಬೆಂಗಳೂರು: ಡಿಸೇಲ್ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಬಿಎಂಟಿಸಿ ತನ್ನ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಸ್ಯೆಗೆ ಬ್ರೇಕ್ ಹಾಕಲು ಮುಂದಾಗಿದೆ. ಬಿಎಂಟಿಸಿಯೂ ಕೇಂದ್ರ ಸರ್ಕಾರದ ಫೇಮ್ 2ನಲ್ಲಿ 300ಕ್ಕೂ ಹೆಚ್ಚು ಬಸ್‍ಗಳನ್ನು ರಸ್ತೆಗಿಳಿಸಲಿದ್ದು, ನಗರದಾದ್ಯಂತ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳ ಸಂಚಾರ ಆರಂಭವಾಗಲಿದೆ.

    ಕಳೆದ ಹಲವು ದಿನಗಳಿಂದ ನಷ್ಟದ ಸುಳಿಯಲ್ಲಿದ್ದ ಬಿಎಂಟಿಸಿಗೆ, ಡಿಸೇಲ್ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಾಂತಾಗಿತ್ತು. ಇದರ ನಡುವೆ ತೈಲ ಪೂರೈಕೆ ಮಾಡುತ್ತಿದ್ದ ಚಿಲ್ಲರೆ ವ್ಯಾಪಾರಿಗಳಿಗೂ ಸರಿಯಾದ ಹಣ ನೀಡದ ಕಾರಣ ಕೆಲ ದಿನ ಇಂಧನ ಪೂರೈಕೆ ಸ್ಥಗಿತಗೊಳಿಸಿದ್ದರು. ಈ ವೇಳೆ ಸಾಕಷ್ಟು ಸಮಸ್ಯೆಗೆ ಸಿಲುಕಿದ್ದ ನಗರ ಸಂಚಾರ ನಾಡಿ ಇನ್ಮುಂದೆ ಈ ಸಮಸ್ಯೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಇದನ್ನೂ ಓದಿ: ಲಂಪಿ ರೋಗ: ರಾಜಸ್ಥಾನದಲ್ಲಿ 12 ಸಾವಿರಕ್ಕೂ ಹೆಚ್ಚು ಮೂಕಪ್ರಾಣಿಗಳು ಬಲಿ

    ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿಯೇ ಕಾಕತಾಳೀಯ ಎಂಬಂತೆ ಬಿಎಂಟಿಸಿಯ ರಜತ ಮಹೋತ್ಸವ ಸಹ ಬಂದಿದೆ. ರಜತ ಮಹೋತ್ಸವದ ಸಂಭ್ರಮದಲ್ಲೇ ಬಿಎಂಟಿಸಿಯೂ ಕೇಂದ್ರ ಸರ್ಕಾರದ ಫೇಮ್ 2 ಅಡಿ 300 ಎಲೆಕ್ಟ್ರಿಕ್ ಬಸ್‍ಗಳನ್ನು ರಸ್ತೆಗಿಳಿಸುತ್ತಿದೆ. ಇದೇ ಆಗಸ್ಟ್ 15ಕ್ಕೆ 75 ಬಸ್‍ಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಇನ್ನೊಂದು ತಿಂಗಳಲ್ಲಿ ಉಳಿದ 230 ಬಸ್ ಗಳ ಸೇವೆ ಸಿಗಲಿದೆ.

    ಹೊಸ ಮಾದರಿಯ ಬಸ್‍ಗಳು ಮೊಬಿಲಿಟಿ ಲಿಮಿಟೆಡ್‍ನಿಂದ 12 ಮೀಟರ್ ಉದ್ದದ ನಾನ್ ಎಸಿ ಇ ಬಸ್ಸುಗಳಾಗಿವೆ. ಕಿ.ಲೋ ಮೀಟರ್‌ಗೆ 48.95 ರೂ. ಯಂತೆ ಸ್ವಿಚ್ ಕಂಪನಿ ಟೆಂಡರ್ ಪಡೆದು ಗುತ್ತಿಗೆ ಆಧಾರದ ಮೇಲೆ 300 ಬಸ್ಸುಗಳನ್ನು ಬಿಎಂಟಿಸಿಗೆ ಒದಗಿಸಲಿದೆ. ಈ ಬಸ್ಸುಗಳಿಗೆ ಟೆಂಡರ್ ಪಡೆದ ಕಂಪನಿಯೆ ಚಾಲಕರನ್ನು ಒದಗಿಸಲಿದ್ದು, ನಿರ್ವಹಣೆ ಮತ್ತು ಚಾರ್ಜ್ ಮಾಡಲು ಬೇಕಾದ ಮೂಲ ಸೌಕರ್ಯವನ್ನು ಇದೆ ಸಂಸ್ಥೆ ಮಾಡಲಿದೆ. ಈ ಹೊಸ ಬಸ್‌ಗಳು 41 ಆಸನ ಹೊಂದಿರಲಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 150 ಕಿಲೋಮೀಟರ್ ಸಂಚಾರ ಮಾಡಬಹುದು. ಮತ್ತೆ ಚಾರ್ಜ್ ಮಾಡಿದರೆ 75 ಕಿಲೋ ಮೀಟರ್ ಸೇರಿದಂತೆ ಒಟ್ಟು 225 ಕಿ.ಮೀ ಪ್ರಯಾಣ ಮಾಡಬಹುದಾಗಿದೆ. ಸಾಮಾನ್ಯ ಬಿಎಂಟಿಸಿ ಬಸ್ಸುಗಳಲ್ಲಿನ ದರವೇ ಈ ಬಸ್ಸುಗಳಲ್ಲಿ ಇರಲಿವೆ. ಪಾಸ್‌ಗಳಿಗೂ ಅನುಮತಿ ಇರಲಿದೆ. ಬಸ್ ಗಳ ಕಲರ್ ಕೂಡ ಪ್ರಯಾಣಿಕರನ್ನು ಆಕರ್ಷಣೆ ಗೊಳಿಸಲಿದೆ.

    ಒಟ್ಟಾರೆ ಪ್ರಯಾಣಿಕರ ಅನೂಕೂಲಕ್ಕಾಗಿ ಬಿಎಂಟಿಸಿ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳನ್ನು ರಸ್ತೆಗಿಳಿಸುತ್ತಿದೆ. ಇನ್ಮುಂದೆ ನಗರದ ಬಹುತೇಕ ಕಡೆ ಎಲೆಕ್ಟ್ರಿಕ್ ಬಸ್‍ಗಳ ಸಂಚಾರ ಆರಂಭವಾಗಲಿದ್ದು, ವಾಯುಮಾಲಿನ್ಯ ತಡೆಗೂ ಎಲೆಕ್ಟ್ರಿಕ್ ಬಸ್‍ಗಳು ಸಹಕಾರಿಯಾಗಲಿವೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಒತ್ತಡ –ಜಮೀರ್ ಬಾಯಿ ಮುಚ್ಚಿಸಿದ ನಾಯಕರು

    Live Tv
    [brid partner=56869869 player=32851 video=960834 autoplay=true]

  • ಹೊಸದಾಗಿ ರಸ್ತೆಗಿಳಿಯಲಿವೆ 6450 ಬಸ್ – ಬೆಂಗ್ಳೂರು, ಮೈಸೂರಿಗೆ ಬರುತ್ತೆ ಎಲೆಕ್ಟ್ರಿಕ್ ಬಸ್!

    ಹೊಸದಾಗಿ ರಸ್ತೆಗಿಳಿಯಲಿವೆ 6450 ಬಸ್ – ಬೆಂಗ್ಳೂರು, ಮೈಸೂರಿಗೆ ಬರುತ್ತೆ ಎಲೆಕ್ಟ್ರಿಕ್ ಬಸ್!

    ಬೆಂಗಳೂರು: ರಾಜ್ಯದ ಬಸ್ ಪ್ರಯಾಣಿಕರ ಸುಗಮ ಸಂಚಾರಕ್ಕೆ ಮತ್ತಷ್ಟು ಬಸ್‍ಗಳು ಈ ವರ್ಷ ರಸ್ತೆಗಿಳಿಯಲಿವೆ. ಒಟ್ಟಾರೆ 6,450 ಬಸ್‍ಗಳು ರಾಜ್ಯದಲ್ಲಿ ಸಂಚಾರ ಆರಂಭಿಸಲಿದೆ. ಸಾರಿಗೆ ಇಲಾಖೆಗೆ ಒಟ್ಟಾರೆಯಾಗಿ 2,354 ಕೋಟಿ ರೂ.ಗಳನ್ನು ರಾಜ್ಯ ಬಜೆಟ್‍ನಲ್ಲಿ ಸಿಎಂ ಸಿದ್ದರಾಮಯ್ಯ ಮೀಸಲಿರಿಸಿದ್ದಾರೆ.

    ಬಿಎಂಟಿಸಿ: ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ವಿಶ್ವಾಸಾರ್ಹ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬಿ.ಎಂ.ಟಿ.ಸಿ.ಗೆ ಬಸ್‍ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 3000 ಹೊಸ ಬಸ್‍ಗಳನ್ನು ಸೇರ್ಪಡೆ ಮಾಡಿಕೊಳ್ಳಲಿದೆ. ಇದರಲ್ಲಿ 1500 ಹೊಸ ಬಸ್ ಖರೀದಿ ಮೂಲಕ ಮತ್ತು ಉಳಿದ 1500 ಬಸ್‍ಗಳನ್ನು ಗುತ್ತಿಗೆ ಮೂಲಕ ಪಡೆಯಲಾಗುವುದು. ಬಿಎಂಟಿಸಿಯು ಬಸ್‍ಗಳನ್ನು ಖರೀದಿಸಲು ಪಡೆಯುವ ಸಾಲ ಹಾಗೂ ಬಡ್ಡಿಯ ಮರುಪಾವತಿ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಸರ್ಕಾರವು ಬಸ್ ಖರೀದಿ ಪ್ರಕ್ರಿಯೆಯನ್ನು ಬೆಂಬಲಿಸಲಿದೆ.

    ಸಾರಿಗೆ ನಿಗಮ: 2017-18ನೇ ಸಾಲಿನಲ್ಲಿ ಸಾರಿಗೆ ನಿಗಮಗಳಿಗೆ ಒಟ್ಟು 3,250 ಹೊಸ ಬಸ್‍ಗಳನ್ನು ಖರೀದಿಸಲಾಗುವುದು. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು 1050 ಬಸ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು 700 ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 1,500 ಬಸ್‍ಗಳನ್ನು ಖರೀದಿಸಲಿವೆ.

    ರಾಜ್ಯಕ್ಕೆ ಬರಲಿವೆ ಎಲೆಕ್ಟ್ರಿಕ್ ಬಸ್: ಕೇಂದ್ರ ಅನುದಾನಗಳೊಂದಿಗೆ ಬೆಂಗಳೂರು ನಗರದಲ್ಲಿ 150 ಎಲೆಕ್ಟ್ರಿಕ್ ಬಸ್‍ಗಳು ಮತ್ತು ಮೈಸೂರು ನಗರದಲ್ಲಿ 50 ಎಲೆಕ್ಟ್ರಿಕ್ ಬಸ್‍ಗಳನ್ನು ಸಂಚಾರಕ್ಕೆ ಬಿಡಲು ಉದ್ದೇಶಿಸಲಾಗಿದೆ. ಕಾರ್ಯದಕ್ಷತೆಯನ್ನು ಸುಧಾರಿಸಲು ಶಿವಮೊಗ್ಗದಲ್ಲಿ ಹೊಸ ವಿಭಾಗವನ್ನು ಆರಂಭಿಸಲಾಗುವುದು. ಎಲ್ಲ ಸಾರಿಗೆ ನಿಗಮಗಳ ಮೂಲಕ 44 ಹೊಸ ಬಸ್ ನಿಲ್ದಾಣಗಳನ್ನು, 14 ಹೊಸ ಬಸ್ ಡಿಪೋಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

    ರಾಜ್ಯದ ಗೋವಾ ಸ್ವಾತಂತ್ರ್ಯ ಹೋರಾಟಗಾರರಿಗೆ ಉಚಿತ ಬಸ್ ಪಾಸ್, ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಉಚಿತ ಬಸ್ ಪಾಸ್‍ಗಳನ್ನು ನೀಡಲಾಗುವುದು.

    ಮಹಿಳಾ ಸುರಕ್ಷತೆಗೆ ಒತ್ತು: ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ಸಲುವಾಗಿ ಬಿ.ಎಂ.ಟಿ.ಸಿ. ಮೊಬೈಲ್ ಅಪ್ಲಿಕೇಷನ್‍ನಲ್ಲಿ ಹೊಸದಾಗಿ ಎಸ್‍ಒಎಸ್ ಬಟನ್ ಮತ್ತು ಟ್ರಾಕಿಂಗ್ ಸೌಲಭ್ಯವನ್ನು ಅಳವಡಿಸಲಾಗುವುದು. ಉಚಿತ ಹಾಗೂ ರಿಯಾಯಿತಿ ದರದ ಪಾಸ್‍ಗಳನ್ನು ಹೊಂದಿರುವ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್‍ಗಳನ್ನು ನೀಡಲಾಗುವುದು. ಚಾಲಕರು ಮತ್ತು ಮೆಕ್ಯಾನಿಕ್‍ಗಳಿಗೆ ಸಾಮರ್ಥ್ಯವೃದ್ಧಿಗಾಗಿ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಜೊತೆಗೆ ಈಗಿರುವ ಕೇಂದ್ರಗಳನ್ನು ಸಹ ಪ್ರತಿ ವರ್ಷ 25,000 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅನುವಾಗುವಂತೆ ಮೇಲ್ದರ್ಜೆಗೇರಿಸಲಾಗುವುದು.

    ರೈತ ಸಾರಥಿ: ಈ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಟ್ರ್ಯಾಕ್ಟರ್ ಮತ್ತು ಟ್ರೈಲರ್‍ಗಳ ಚಾಲಕರ ಅನುಕೂಲಕ್ಕಾಗಿ ರೈತರಿಗೆ ತರಬೇತಿ ಮತ್ತು ಕಲಿಕಾ ಲೈಸೆನ್ಸ್ ನೀಡಲಾಗುವುದು. ಜೊತೆಗೆ ದ್ವಿಚಕ್ರ ವಾಹನ ಲೈಸೆನ್ಸ್ ನೀಡಿಕೆ ಹಾಗೂ ರಸ್ತೆ ಸುರಕ್ಷಾ ಕ್ರಮಗಳ ಬಗ್ಗೆ ಅರಿವು ಮೂಡಿಸುವ ತರಬೇತಿಗಾಗಿ 2 ಕೋಟಿ ರೂ.ಗಳನ್ನು ನೀಡಿದ್ದಾರೆ. ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಮತ್ತು ರಸ್ತೆ ಸುರಕ್ಷತೆಯನ್ನು ಸುಧಾರಿಸಲು, ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರವನ್ನು ರಚಿಸಲಾಗುವುದು. ಇದಕ್ಕಾಗಿ 5 ಕೋಟಿ ರೂ.ಗಳನ್ನು ಒದಗಿಸಲಾಗುವುದು.

    ಬೆಂಗಳೂರಿನಲ್ಲಿ ವಾಯು ಮತ್ತು ಶಬ್ದ ಮಾಲಿನ್ಯವನ್ನು ಕಡಿಮೆ ಮಾಡಲು 2018ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ 2 ಸ್ಟ್ರೋಕ್ ಆಟೋ ರಿಕ್ಷಾಗಳನ್ನು ರದ್ದುಗೊಳಿಸಿ ಅದರ ಬದಲು 4 ಸ್ಟ್ರೋಕ್ ಎಲ್‍ಪಿಜಿಯ 10,000 ಆಟೋ ರಿಕ್ಷಾಗಳಿಗೆ ಪ್ರತಿ ಆಟೋ ರಿಕ್ಷಾಗೆ 30,000 ರೂ.ಗಳ ಸಹಾಯಧನಕ್ಕಾಗಿ 30 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಸಿದ್ದರಾಮಯ್ಯ ನೀಡಿದ್ದಾರೆ. ಅಲ್ಲದೇ ಚಿಂತಾಮಣಿ, ರಾಣೆಬೆನ್ನೂರು ಮತ್ತು ಬಂಟ್ವಾಳದಲ್ಲಿ 3 ಹೊಸ ಆರ್‍ಟಿಒ ಕಚೇರಿಗಳು ಪ್ರಾರಂಭವಾಗಲಿವೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.