Tag: Electricity Price Hike

  • ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ

    ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ

    ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೊ (KCC&I) ಕರೆ ನೀಡಿದೆ.

    ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಜೂನ್ 22ರಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿವೆ. ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್‌ಗೆ ಕರೆ ನೀಡಿಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ತಬ್ಧಗೊಳಿಸಲಿವೆ. ಬಂದ್‌ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್‌ಗಳಿಂದ ಬೆಂಬಲ ದೊರಕಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಕೆಸಿಸಿ&ಐ, ಎಸ್ಕಾಂನ ವಿದ್ಯುತ್ ದರ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಲಾಗಿದೆ. ಕಳೆದ 8 ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮದ ಗಂಭೀರತೆಯನ್ನು ಸರ್ಕಾರಕ್ಕೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆದರೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಬಂದ್‌ಗೆ ಕರೆ ನೀಡಿದ್ದೇವೆ. ಈ ಮೂಲಕವಾದರು ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂದು ಭಾವಿಸಿದ್ದೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಹಂಪಿ ವಿವಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 85 ಲಕ್ಷ ರೂ. ಕರೆಂಟ್ ಬಿಲ್

    ಗದಗ ಜಿಲ್ಲಾ ಚೇಂಬರ್ ವಿಜಯಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ ಕರ್ನಾಟಕ, ಹಾವೇರಿ, ಹಾಸನ ಹಾಗೂ ಬಳ್ಳಾರಿಯಲ್ಲಿನ ಸಂಘಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಗಂಡ ಜೊತೆಗೆ ಬಾರದೇ ನಮಗೆ ಭದ್ರತೆ ಇಲ್ಲ; ಫ್ರೀ ಬಸ್ ಪ್ರಯಾಣ ಯೋಜನೆಗೆ ಮಹಿಳೆ ವಿರೋಧ

  • ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ; ಸಿಎಂಗೆ ತನ್ವೀರ್ ಸೇಠ್ ಪತ್ರ

    ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ; ಸಿಎಂಗೆ ತನ್ವೀರ್ ಸೇಠ್ ಪತ್ರ

    ಮೈಸೂರು: ವಿದ್ಯುತ್ ದರ ಏರಿಕೆ (Electricity Price Hike) ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ (Tanveer sait) ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ.

    ಎರಡು ಪುಟಗಳ ಪತ್ರ ಬರೆದು ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಸಾಧಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಅದರಲ್ಲಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ (200 Unit Free Electricity) ನೀಡುವುದು ಪ್ರಮುಖವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ವ್ಯಾಪಾರಸ್ಥರಿಗೆ ಶಾಕ್ – ದರ ಏರಿಕೆ ಖಂಡಿಸಿ ಅಘೋಷಿತ ಬಂದ್

    ಸೌಲಭ್ಯ ಕೊಟ್ಟು ಕಿತ್ತುಕೊಂಡಂತಾಗಿದೆ:
    ಮುಂದುವರಿದು… ಉಚಿತ ವಿದ್ಯುತ್ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ನಿಗಮಗಳಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯ ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ದರ ಏರಿಕೆ ಆದೇಶವನ್ನ ಮರುಪರಿಶೀಲಿಸಿ, ಜನಸಾಮಾನ್ಯರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದ ಕೋರಿದ್ದಾರೆ.