Tag: electricity Rate

  • ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ – 100+ ಯೂನಿಟ್‌ ಬಳಸುವ ಬಳಕೆದಾರರಿಗೆ ಗುಡ್‌ನ್ಯೂಸ್

    ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ – 100+ ಯೂನಿಟ್‌ ಬಳಸುವ ಬಳಕೆದಾರರಿಗೆ ಗುಡ್‌ನ್ಯೂಸ್

    – 100 ಯೂನಿಟ್‌ಗಿಂತ ಹೆಚ್ಚು ಬಳಸಿದ್ರೆ ಯೂನಿಟ್‌ಗೆ 1.10 ರೂ. ಇಳಿಕೆ

    ಬೆಂಗಳೂರು: 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರಿಗೆ ಕರ್ನಾಟಕ ವಿದ್ಯುಚಕ್ತಿ ನಿಯಂತ್ರಣ ಆಯೋಗ (KERC) ಗುಡ್‌ನ್ಯೂಸ್ ನೀಡಿದೆ.

    ಗೃಹ ಬಳಕೆ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ 1.10 ರೂ. ಇಳಿಕೆ ಮಾಡಿದ್ದು, 100 ಯೂನಿಟ್‌ಗಳಿಗಿಂತ ಹೆಚ್ಚಿನ ಬಳಕೆಗೆ ಪ್ರತಿ ಯೂನಿಟ್‌ಗೆ 1.10 ರೂ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆದಾರರಿಗೂ ಗುಡ್‌ನ್ಯೂಸ್ ಸಿಕ್ಕಂತಾಗಿದೆ. ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್‌ಗೆ 1.25 ರೂ. ಇಳಿಕೆಯಾಗಿದ್ದು, ಡಿಮ್ಯಾಂಡ್ ಶುಲ್ಕ ಪ್ರತಿ ಕೆವಿಎಗೆ 10 ರೂ. ಇಳಿಸಲಾಗಿದೆ. ಇದನ್ನೂ ಓದಿ: ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ

    KERC Order
    KERC

    ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದ್ದು, ಏಪ್ರಿಲ್‌ನಿಂದ ನೂತನ ದರ ಅನ್ವಯವಾಗಲಿದೆ. 5 ಹೆಸ್ಕಾಂಗಳ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ. ವಾಣಿಜ್ಯ ಕೈಗಾರಿಕಾ ಗೃಹ ಬಳಕೆ ವಿದ್ಯುತ್ ದರದಲ್ಲಿ 100 ಯೂನಿಟ್‌ಗಳ ಹೆಚ್ಚಿನ ಬಳಕೆಗೆ ದರ ಇಳಿಕೆ ಮಾಡಲಾಗಿದೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಕೇಸ್‌ – ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್‌

    ಹೆಚ್.ಟಿ ಕೈಗಾರಿಕೆಯಲ್ಲಿ ಇಂಧನ ಬಳಕೆ ಶುಲ್ಕ 50 ಪೈಸೆ ಇಳಿಸಿದ್ದು, ಡಿಮಾಂಡ್ ಶುಲ್ಕ ಪ್ರತಿ ಕೆವಿಎಗೆ 10 ರೂ. ಇಳಿಕೆ ಮಾಡಿದೆ. ಅಲ್ಲದೇ ಹೆಚ್.ಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್‌ಗೆ 40 ಪೈಸೆ ಇಳಿಸಿದ್ದು, ಡಿಮ್ಯಾಂಡ್ ಶುಲ್ಕ ಪ್ರತಿ ಕೆವಿಎಗೆ 10 ರೂ. ಇಳಿಸಲಾಗಿದೆ. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ

    ಹೆಚ್.ಟಿ ಖಾಸಗಿ ಏತ ನೀರಾವರಿಯಲ್ಲಿ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್‌ಗೆ 200 ಪೈಸೆ ಇಳಿಕೆ ಮಾಡಲಾಗಿದೆ. ಹೆಚ್.ಟಿ ನಿವಾಸ ಅಪಾರ್ಟ್ಮೆಂಟ್‌ಗಳಲ್ಲಿ ಇಂಧನ ಬಳಕೆ ಶುಲ್ಕ ಪ್ರತಿ ಕೆವಿಎಗೆ ಡಿಮಾಂಡ್ ಶುಲ್ಕವನ್ನು 10 ರೂ. ಇಳಿಕೆ ಮಾಡಲಾಗಿದೆ. ಎಲ್.ಟಿ. ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್‌ಗೆ 50 ಪೈಸೆ ಇಳಿಸಲಾಗಿದೆ. ಎಲ್.ಟಿ.ಕೈಗಾರಿಕಾ ಸ್ಥಾವರಗಳಲ್ಲಿ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್‌ಗೆ 100 ಪೈಸೆ ಇಳಿಸಲಾಗಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

  • ವಿದ್ಯುತ್ ದರ ಹೆಚ್ಚಳ ಇಲ್ಲ: ಸುನಿಲ್ ಕುಮಾರ್ ಸ್ಪಷ್ಟನೆ

    ವಿದ್ಯುತ್ ದರ ಹೆಚ್ಚಳ ಇಲ್ಲ: ಸುನಿಲ್ ಕುಮಾರ್ ಸ್ಪಷ್ಟನೆ

    ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧಾರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾಪವಿಲ್ಲ. ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವ ವಾಡಿಕೆಯಿದೆ. ಹೀಗಾಗಿ ದರ ಹೆಚ್ಚಳದ ವದಂತಿ ಬಗ್ಗೆ ಸಾರ್ವಜನಿಕರು ಆತಂಕಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತ್ತೆ ಮಹದಾಯಿ ಹೋರಾಟಕ್ಕೆ ನಾಂದಿ – ರಾಜ್ಯ ಸರ್ಕಾರಕ್ಕೆ ಕಾನೂನಾಸ್ತ್ರದ ಬಿಸಿ ಮುಟ್ಟಿಸಿದ ರೈತರು

    ರಾಜ್ಯದಲ್ಲಿ 13 ಉಷ್ಣ ವಿದ್ಯುತ್ ಸ್ಥಾವರಗಳಿವೆ. ಇವುಗಳ ಕಾರ್ಯ ನಿರ್ವಹಣೆಗೆ ಅಗತ್ಯವಾದ ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಅಗತ್ಯವಿರುತ್ತದೆ. ಇವುಗಳ ಮಾರುಕಟ್ಟೆ ದರದ ಏರಿಳಿತ ಆಧರಿಸಿ ಎಲ್ಲಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಹೊಂದಾಣಿಕೆ ವೆಚ್ಚ ಪರಿಷ್ಕರಣೆ ನಡೆಸುವುದು ನಿರಂತರ ಪ್ರಕ್ರಿಯೆ ಆಗಿರುತ್ತದೆ. ಈ ಸಂಬಂಧ ಎಸ್ಕಾಂಗಳು ಸಲ್ಲಿಸಿದ ಹೊಂದಾಣಿಕೆ ವೆಚ್ಚ (fuel cost adjustment charges) ಪ್ರಸ್ತಾಪ ಹಿನ್ನೆಲೆಯಲ್ಲಿ ಕೆಇಆರ್‌ಸಿ ಈ ದರ ಪರಿಷ್ಕರಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪೈಥಾನ್ ಬಳಸಿ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ಫುಲ್ ಕ್ಲಾಸ್

    ಹೊಂದಾಣಿಕೆ ವೆಚ್ಚ ಪರಿಷ್ಕರಣೆ ಕೆಇಆರ್‌ಸಿ ವಿವೇಚನಾಧಿಕಾರವಾಗಿದ್ದು, ಕಲ್ಲಿದ್ದಲು ದರ ಆಧರಿಸಿ ಈ ಹೊಂದಾಣಿಕೆ ವೆಚ್ಚ ಹೆಚ್ಚೂ ಆಗಬಹುದು, ಕಡಿಮೆಯೂ ಆಗಬಹುದು. ಹೀಗಾಗಿ ಈ ಪ್ರಕ್ರಿಯೆಯನ್ನು ವಾರ್ಷಿಕ ದರ ಪರಿಷ್ಕರಣೆ ಜೊತೆಗೆ ಥಳುಕು ಹಾಕುವ ಅಗತ್ಯವಿಲ್ಲ ಎಂದು ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    Live Tv

  • ರಾಜ್ಯದ ಜನರಿಗೆ ಕರೆಂಟ್ ಶಾಕ್ – ಜು. 1ರಿಂದ ವಿದ್ಯುತ್ ದರ ಏರಿಕೆ

    ರಾಜ್ಯದ ಜನರಿಗೆ ಕರೆಂಟ್ ಶಾಕ್ – ಜು. 1ರಿಂದ ವಿದ್ಯುತ್ ದರ ಏರಿಕೆ

    ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಆಯಿತು. ಇದೀಗ ವಿದ್ಯುತ್ ದರ ಏರಿಕೆ ಸರದಿ. ರಾಜ್ಯದಲ್ಲಿ ಜುಲೈ 1 ರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದೆ.

    ಹೌದು, ಬೆಲೆ ಏರಿಕೆ ಬಿಸಿ ನಡುವೆ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಜುಲೈ 1 ರಿಂದ ವಿದ್ಯುತ್ ದರ 19 ರೂಪಾಯಿಯಿಂದ 31 ರವರೆಗೆ ಹೆಚ್ಚಾಗಲಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು, ಇನ್ಮುಂದೆ ಹೆಚ್ಚುವರಿಯಾಗಿ 19 ರೂಪಾಯಿಂದ 31 ರೂಪಾಯಿ ಪಾವತಿಸಬೇಕು. ಇದನ್ನೂ ಓದಿ: ಬಿಎಸ್‌ ಯಡಿಯೂರಪ್ಪ ಇಂಗ್ಲೆಂಡ್‌ ಪ್ರವಾಸ 8 ದಿನ ವಿಸ್ತರಣೆ

    ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಎಸ್ಕಾಂಗಳು (ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಗೆಸ್ಕಾಂ, ಸೆಸ್ಕ್ ನಿಂದ ಪ್ರಸ್ತಾವ ಸಲ್ಲಿಸಲು ಅನುಮೋದಿಸಲಾಗಿತ್ತು. ಇದನ್ನೂ ಓದಿ:  ಮೇಲಧಿಕಾರಿ ವಿರುದ್ಧ ತಿರುಗಿಬಿದ್ದ ಕಾನ್ಸ್‌ಟೇಬಲ್‌ – ವಿಧಾನಸೌಧದ ಭದ್ರತಾ DCP ವಿರುದ್ಧ ದೂರು

    ಎಸ್ಕಾಂಗಳು ಎಷ್ಟು ದರ ಹೆಚ್ಚಳಕ್ಕೆ ಪ್ರಸಾವ ಸಲ್ಲಿಸಿತ್ತು?
    * ಪ್ರತಿ ಯೂನಿಟ್‍ಗೆ 38 ರಿಂದ 55 ರೂ. ವಸೂಲಿ ಮಾಡಲು ಎಸ್ಕಾಂಗಳು ಕೋರಿದ್ದವು
    * ಬೆಸ್ಕಾಂ – 55.28
    * ಮೆಸ್ಕಾಂ – 38.98
    * ಸೆಸ್ಕ್ – 40.47
    * ಹೆಸ್ಕಾಂ – 49.54
    * ಗೆಸ್ಕಾಂ – 39.36 ಹೆಚ್ಚಿಸಲು ನಿರ್ಧರಿಸಿದ್ದವು

    ವಿದ್ಯುತ್ ದರ ಹೆಚ್ಚಳಕ್ಕೆ ಕಾರಣ ಏನು?
    * ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಉತ್ಪಾದನೆಯ ವೆಚ್ಚ ಹೆಚ್ಚಾಗಿದೆ
    * ಕಲ್ಲಿದ್ದಲು, ಅಭಾವ ಹಾಗೂ ದರ ಹೆಚ್ಚಳವಾಗಿದೆ
    * ಆರ್ಥಿಕವಾಗಿ ನಷ್ಟದಲ್ಲಿರುವ ಎಸ್ಕಾಂಗಳು. ತಾತ್ಕಲಿಕ ಮಟ್ಟಕ್ಕೆ ದರ ಹೆಚ್ಚು ಮಾಡಲಾಗಿದೆ

    Live Tv

  • MSP ರಕ್ಷಣೆ ಕಾನೂನು ತಕ್ಷಣ ಜಾರಿಗೆ ಆಗ್ರಹ: ಕೋಡಿಹಳ್ಳಿ ಚಂದ್ರಶೇಖರ್

    MSP ರಕ್ಷಣೆ ಕಾನೂನು ತಕ್ಷಣ ಜಾರಿಗೆ ಆಗ್ರಹ: ಕೋಡಿಹಳ್ಳಿ ಚಂದ್ರಶೇಖರ್

    -ವಿದ್ಯುತ್ ದರ ಹೆಚ್ಚಳಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ತೀವ್ರ ಖಂಡನೆ

    ಬೆಂಗಳೂರು: ಮುಂಗಾರು ಬೆಳೆಗಳಿಗೆ ಕೇಂದ್ರ ಸರ್ಕಾರ 2021-22ನೇ ಸಾಲಿನ ಪರಿಷ್ಕೃತ ಬೆಂಬಲ ಬೆಲೆ-ಎಂಎಸ್‍ಪಿಯನ್ನು 14 ಬೆಳೆಗಳಿಗೆ ಪರಿಷ್ಕರಿಸಿದ್ದು, ಇದು ನ್ಯಾಯಯುತವಾಗಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ. ಇದನ್ನು ಓದಿ: ಅಬಕಾರಿ ಅಧಿಕಾರಿಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಾಥ್: ಉಪ ಆಯುಕ್ತರಿಂದ ನೋಟಿಸ್

    ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಟ್ರಾಕ್ಟರ್ ಉಳುಮೆ ವೆಚ್ಚ ಹೆಚ್ಚಾಗಿದೆ. ರೈತರು ಎಷ್ಟು ಡೀಸೆಲ್ ಬಳಸುವರು, ಬೆಲೆ ಏರಿಕೆಯಿಂದಾಗಿ ಆದ ಹೆಚ್ಚುವರಿ ಹೊರೆ ಎಷ್ಟು ಎಂಬುದನ್ನು ಪರಿಗಣಿಸಿ ಬೆಂಬಲ ಬೆಲೆ ಹೆಚ್ಚಳ ಮಾಡಿಲ್ಲ. ವಿದ್ಯುತ್ ದರ ಏರಿಕೆ ಒಂದೆಡೆಯಾದರೆ, ಮತ್ತೊಂದೆಡೆ ನಾಮಕಾವಸ್ಥೆ ಬೆಂಬಲ ಬೆಲೆ ಹೆಚ್ಚಳ ಮಾಡಿ ಮಹದುಪಕಾರ ಮಾಡಿದಂತೆ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ದಾರೆ.

    ಬೆಂಬಲ ಬೆಲೆ ರಕ್ಷಣೆಗೆ ಕಾನೂನಿನ ಅಗತ್ಯವಿದೆ, ಇಲ್ಲವಾದಲ್ಲಿ ಈ ಬೆಂಬಲ ಬೆಲೆ ಅವೈಜ್ಞಾನಿಕವಾಗಿ ನಿಗದಿಯಾಗುತ್ತಲೇ ಸಾಗಲಿದೆ ಎಂದು ಹೇಳಿದ್ದಾರೆ. ಇದರ ರಕ್ಷಣೆಗಾಗಿ ಪಂಜಾಬ್ ರಾಜ್ಯದಲ್ಲಿ ಎಂಎಸ್‍ಪಿ ದರಕ್ಕಿಂತ ಕಡಿಮೆ ದರಕ್ಕೆ ಖರೀದಿ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂಬ ಕಾನೂನಿದ್ದು, ಇಂತಹ ನಿಯಮ ದೇಶವ್ಯಾಪಿಯಾಗಿರಬೇಕು ಎಂದು ಆಗ್ರಹಿಸಿದ್ದಾರೆ.

    ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಹಾಲಿಗೆ ನೀಡುತ್ತಿದ್ದ ದರ ಕಡಿಮೆ ಮಾಡಲಾಗಿದೆ. ಅಂತೆಯೇ ಅಗತ್ಯ ಪ್ರಮಾಣದ ಖರೀದಿಯೂ ಆಗುತ್ತಿಲ್ಲ. ಹೂವು, ಹಣ್ಣು, ತರಕಾರಿ ಖರೀದಿಯೂ ಹೆಚ್ಚಾಗಿಲ್ಲದ ಕಾರಣ ರೈತರಿಗೆ ಈ ಬೆಂಬಲ ಬೆಲೆ ಏರಿಕೆ ಏನೇನೂ ಸಾಲದು. ಕೇಂದ್ರ ಸರ್ಕಾರ ಕೂಡಲೆ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಎಂದಿದ್ದಾರೆ.

    ಒಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಲೆ ಏರಿಕೆಯ ಹೊರೆ ಹೊರಿಸಿ, ಇದೀಗ ವಿದ್ಯುತ್ ದರ ಏರಿಕೆಯ ಶಾಕ್ ಕೊಟ್ಟು ಮತ್ತೊಂದೆಡೆ ಅತ್ಯಲ್ಪ ಪ್ರಮಾಣದ ಬೆಂಬಲ ಬೆಲೆ ಹೆಚ್ಚಳ ಮಾಡಿ ರೈತರ ಮೂಗಿಗೆ ತುಪ್ಪ ಸವರಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ಹೊರಹಾಕಿದ್ದಾರೆ.

    ವಿದ್ಯುತ್ ದರ ಹೆಚ್ಚಳಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ತೀವ್ರ ಖಂಡನೆ ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಪ್ರತಿ ಯೂನಿಟ್‍ಗೆ 30 ಪೈಸೆ ಹೆಚ್ಚಿಸಿದೆ. “ಕೊರೊನಾ ಲಾಕ್‍ಡೌನ್ ಕಾಲದಲ್ಲಿ ಜನರಿಗೆ ಸರಿಯಾಗಿ ಉದ್ಯೋಗವಿಲ್ಲ. ದುಡಿಮೆ ಇಲ್ಲದೇ ಊಟಕ್ಕೆ ಸಹ ತೊಂದರೆಯಾಗಿದೆ. ಇಂತಹ ಸಮಯದಲ್ಲಿ ದರ ಹೆಚ್ಚಿಸಿರುವುದು ಸರಿಯಲ್ಲ ಎಂದು ದರ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

    ಲಾಕ್‍ಡೌನ್ ನಿಂದ ಚೇತರಿಸಿಕೊಳ್ಳಲು ಬಿಡದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಆಸ್ತಿ ತೆರಿಗೆ ಹೆಚ್ಚಿಸಿದ್ದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಹ ಸ್ಥಿತಿ ಎದುರಾಗಿದೆ ಎಂದಿದ್ದಾರೆ. ಇದನ್ನು ಓದಿ:ಕೊರೊನಾ ಸೋಂಕಿತರಿಗೆ ಬೆಡ್ ಕಾಯ್ದಿರಿಸುವ ನೂತನ ‘ಕ್ಯೂ ಪದ್ಧತಿ’ ವ್ಯವಸ್ಥೆ ಲೋಕಾರ್ಪಣೆ

    ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದಲ್ಲಿವೆ ಎಂದು ಹೇಳುವ ಸರ್ಕಾರ ಕೇಂದ್ರದಿಂದ ವಿದ್ಯುತ್ ಖರೀದಿ, ಆದಾನಿ ಕಂಪನಿಯಿಂದ ವಿದ್ಯುತ್ ಖರೀದಿಯನ್ನು ನಿಲ್ಲಿಸಿಲ್ಲ. ಮೊದಲು ದುಬಾರಿ ಬೆಲೆಗೆ ಖರೀದಿ ನಿಲ್ಲಿಸಿ ವಿದ್ಯುತ್ ಇಳಿಸಿ ಪರಿಷ್ಕರಣೆ ಮಾಡಲಿ ಎಂದು ಆಗ್ರಹಿಸಿದ್ದಾರೆ.

  • ಪ್ರತಿ ಬಾರಿ ನಿಲುವು ಬದಲಿಸೋ ಪ್ರತಾಪ್ ಸಿಂಹ ಅಪ್ರಬುದ್ಧ ರಾಜಕಾರಣಿ: ಸಿದ್ದರಾಮಯ್ಯ

    ಪ್ರತಿ ಬಾರಿ ನಿಲುವು ಬದಲಿಸೋ ಪ್ರತಾಪ್ ಸಿಂಹ ಅಪ್ರಬುದ್ಧ ರಾಜಕಾರಣಿ: ಸಿದ್ದರಾಮಯ್ಯ

    ಬೆಂಗಳೂರು: ಸಂಸದ ಪ್ರತಾಪ್ ಸಿಂಹಗೆ ಯಾವುದೇ ನಿಲುವಿನಲ್ಲಿ ಬದ್ಧತೆ ಇಲ್ಲ, ಪ್ರತಿ ಬಾರಿಯೂ ನಿಲುವು ಬದಲಿಸೋ ಅಪ್ರಬುದ್ಧ ರಾಜಕಾರಣಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಪ್ರತಾಪ ಸಿಂಹ ನನ್ನನ್ನು ಸಿದ್ದರಾಮಯ್ಯ ಗಾರು ಎಂದು ಸಂಬೋಧಿಸಿದ್ದಾರೆ. ಪ್ರತಾಪ್ ಸಿಂಹ ತಮಗೂ ತೆಲಗು ಬರುತ್ತೆ ಅಂತಾ ತೋರಿಸಲು ಯತ್ನಿಸಿದ್ದಾರೆ. ಇದು ವ್ಯಂಗ್ಯ ಇರಬಹುದಾ ಅಂತ ನನಗೆ ಗೊತ್ತಿಲ್ಲ. ಗಾರು ಎಂಬುದನ್ನ ಸೂಕ್ತ ರೀತಿಯಲ್ಲಿ ಸ್ವೀಕರಿಸುತ್ತೇನೆ. ಆದರೆ ಪಾಪಾ ಬಹುವಚನದಲ್ಲಿ ಮಾತಾನಾಡಿದ್ದಾರೆ ಎಂದರು.

    ಚಾಮರಾಜನಗರ ಪ್ರಕರಣದಲ್ಲಿ ರೋಹಿಣಿ ಸಿಂಧೂರಿ ಪರ ಮಾತನಾಡಿದ್ದರು. ಈ ಹಿಂದೆ ರೋಹಿಣಿ ಸಿಂಧೂರಿಗೆ ಬೆಂಬಲಿಸಿದ್ದು ಯಾರು? ಈಗ ಸ್ವಾರ್ಥಕ್ಕಾಗಿ ವಿರೋಧಿಸುತ್ತಿದ್ದಾರೆ. ಭೂ ಮಾಫಿಯಾದಿಂದ ವರ್ಗಾವಣೆಯಾಗಿದೆ ಮತ್ತು ಶಾಸಕ ಸಾ.ರಾ.ಮಹೇಶ್ ಹೆಸರನ್ನ ರೋಹಿಣಿ ಸಿಂಧೂರಿ ಹೇಳಿದ್ದಾರೆ. ರಾಜಕಾಲುವೆ ಮೇಲೆ ಕಟ್ಟಡ ಕಟ್ಟಿದ್ರೆ ಈ ಬಗ್ಗೆ ತನಿಖೆ ನಡೆಯಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಜಗಳ ನಡೆಯದೇ ಇರಲು ಅಂದು ಸಿಂಧೂರಿಯನ್ನು ಸಮರ್ಥಿಸಿಕೊಂಡಿದ್ದೆ – ಪ್ರತಾಪ್ ಸಿಂಹ

    ಸರ್ಕಾರ ಯೂನಿಟ್ ಗೆ 30% ರಷ್ಟು ಹೆಚ್ಚಳ ಮಾಡಿದೆ. ಕೊರೊನಾ ಸಂಕಷ್ಟದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು ಸರಿಯಲ್ಲ. ಇತ್ತ ಪೆಟ್ರೋಲ್, ಗ್ಯಾಸ್ ಬೆಲೆ ಸಹ ಏರಿಕೆಯಾಗಿದೆ. ಅಚ್ಚೇದಿನ ಆಯೇಗಾ ಅಂತಾರೆ. ಇದೆನಾ ಅಚ್ಚೇದಿನ್ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿಯೇ ವಿದ್ಯುತ್ ಉತ್ಪಾದನೆ ಆಗುತ್ತಿದ್ದರೂ, ಅದಾನಿ ಕಂಪನಿಯಿಂದ ಏಕೆ ಖರೀದಿಸಬೇಕು ಎಂದು ಪ್ರಶ್ನೆ ಮಾಡಿದರು.  ಇದನ್ನೂ ಓದಿ: ರಾಜಕಾಲುವೆ ಮೇಲೆ ಕಲ್ಯಾಣ ಮಂಟಪವಿದ್ದರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

    ಐದು ದಿನ ಪ್ರತಿಭಟನೆ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುವಂತೆ ಎಐಸಿಸಿ ಸೂಚಿಸಿದೆ. ನಾಳೆಯಿಂದ ಐದು ದಿನಗಳ ಕಾಲ ಪೆಟ್ರೋಲ್ ಬಂಕ್ ಗಳ ಮುಂದೆ ಧರಣಿ ಮಾಡುತ್ತೇನೆ. ಇಡೀ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಮಾಹಿತಿ ನೀಡಿದರು.

  • ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು, ತಂದೇ ತರುತ್ತೀವಿ: ಸುಧಾಕರ್

    ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು, ತಂದೇ ತರುತ್ತೀವಿ: ಸುಧಾಕರ್

    – ಯು.ಟಿ.ಖಾದರ್ ಬಳಿ ಹೇಳಿಸಿಕೊಂಡು ತರೋ ಅಗತ್ಯವಿಲ್ಲ

    ಚಿಕ್ಕಮಗಳೂರು: ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು, ತಂದೇ ತರುತ್ತೇವೆ. ಆದರೆ ಅದನ್ನು ಯು.ಟಿ.ಖಾದರ್ ಬಳಿ ಹೇಳಿಸಿಕೊಂಡು ತರುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

    ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜು ಜಾಗದ ಸ್ಥಳ ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಎಲ್ಲಾ ಹಂತಗಳಲ್ಲಿ ಚರ್ಚೆಯಾಗಿದೆ. ಬಹುಶಃ ಮುಂದಿನ ಅಧಿವೇಶದನದಲ್ಲಿ ಜಾರಿಗೆ ತರುತ್ತೇವೆ ಎಂದರು.

    ಇದೇ ವೇಳೆ ವಿದ್ಯುತ್ ದರ ಹೆಚ್ಚಳಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಸರ್ಕಾರಕ್ಕೂ ಕೂಡ ಆರ್ಥಿಕ ಇತಿಮಿತಿ ಇದೆ. ಸರ್ಕಾರ ಎಂದಾಕ್ಷಣ ಅಕ್ಷಯ ಪಾತ್ರೆಯಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸರ್ಕಾರದ ಬಳಿ ಹಣ ಇಲ್ಲ ಎಂದರು. ಸರ್ಕಾರಕ್ಕೆ ಬಹಳ ಕಠಿಣ ಸವಾಲುಗಳು ಇದೆ. ಕೋವಿಡ್‍ನ ಆರ್ಥಿಕ ದುಸ್ಥಿತಿ ಕೂಡ ಸರ್ಕಾರಕ್ಕೆ ಬರದಂತೆ ಬಡಿದಿದೆ. ಒಂದೇ ವರ್ಷದಲ್ಲಿ ಎರಡು ಬಾರಿ ಅತಿವೃಷ್ಟಿಯಾಗಿ ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದ್ದೇವೆ. ಕಳೆದ ಎಂಟು ತಿಂಗಳಿಂದ ಆರು ಕೋಟಿ ಜನರಿಗೆ ವಿವಿಧ ಬಗೆಯಲ್ಲಿ ಕೋವಿಡ್ ನಿರ್ವಹಣೆ ಮಾಡಿದ್ದೇವೆ. ಯಾವುದೇ ಸಿಬ್ಬಂದಿಗೂ ವೇತನ ಕಡಿತ ಮಾಡಿಲ್ಲ, ಎಲ್ಲಾ ಸಿಬ್ಬಂದಿಗೂ ಪರಿಪೂರ್ಣ ವೇತನ ನೀಡಿ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾಗಿದ್ದು ಎಲ್ಲಾ ರೀತಿಯಲ್ಲೂ ಹಣದ ಕ್ರೋಢೀಕರಣಕ್ಕೆ ಕಷ್ಟಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಸರ್ಕಾರ ಕೂಡ ಬೆಲೆ ಹೆಚ್ಚಳವನ್ನು ಸಂತೋಷದಿಂದ ಮಾಡುವುದಿಲ್ಲ. ಅನಿವಾರ್ಯ ಪರಿಸ್ಥಿತಿಯಿಂದ ಮಾಡುವಂತಾಗಿದೆ.

    ಕಳೆದ ಎಂಟು ತಿಂಗಳಿಂದ ಸಾರಿಗೆ ವ್ಯವಸ್ಥೆ ಮಾಡಿದ್ದೇವೆ. ನೂರಾರು ಕೋಟಿ ರೂಪಾಯಿ ನಷ್ಟದಲ್ಲಿ ನಡೆಯುತ್ತಿದೆ. ನಷ್ಟವಾಗುತ್ತಿದೆ ಎಂದು ಯಾವುದನ್ನೂ ನಿಲ್ಲಿಸಿಲ್ಲ. ಸರ್ಕಾರ ತುಂಬಾ ಕಠಿಣ ಪರಿಸ್ಥಿತಿಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿಗಳು ಸ್ವಲ್ಪ ಮಟ್ಟಿಗೆ ವಿದ್ಯುತ್ ದರವನ್ನ ಹೆಚ್ಚು ಮಾಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಈ ಬಗ್ಗೆ ಚಿಂತನೆ ಮಾಡಿದ್ದಾರೆಂದು ತಿಳಿದುಕೊಂಡಿದ್ದೇನೆ. ಜನ ಅದಕ್ಕೆ ಸಹಕರಿಸಬೇಕು ಎಂದರು.

    ಪಟಾಕಿ ನಿಷೇಧದ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪಟಾಕಿಯನ್ನ ಬೇರೆ ಬೇರೆ ರಾಜ್ಯ ಕೂಡ ನಿಷೇಧ ಮಾಡಿದೆ. ಜನರ ಆರೋಗ್ಯ ಹಾಗೂ ಜೀವ ಮುಖ್ಯ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಂಡಿದ್ದಾರೆ. ಪಟಾಕಿ ಹಾಗೂ ಪಟಾಕಿಯ ಹೊಗೆ ಮಾರಕ ಎಂಬುದು ವರ್ತಕರಿಗೆ ಗೊತ್ತಿಲ್ವಾ. ಕೆಲವರ ಲಾಭಕ್ಕಾಗಿ ಕೋಟ್ಯಾಂತರ ಜೀವ ಹಾಗೂ ಆರೋಗ್ಯವನ್ನ ನಿರ್ಲಕ್ಷ್ಯ ಮಾಡೋದಕ್ಕೆ ನಮ್ಮ ಸರ್ಕಾರಕ್ಕೆ ಸಾಧ್ಯವಿಲ್ಲ. ನಮಗೆ ಕರ್ನಾಟಕದ ಜನರ ಆರೋಗ್ಯದ ಕಾಳಜಿಯೇ ಮುಖ್ಯ.

    ಪರಿಸರ ಸ್ನೇಹಿ ಪಟಾಕಿಗಳಿಗೆ ಅವಕಾಶ ಕೊಟ್ಟಿದ್ದಾರೆ. ಪಟಾಕಿ ತಯಾರು ಮಾಡುತ್ತಿರುವವರಿಗೂ ಕೋವಿಡ್ ಏನೆಂದು ಗೊತ್ತಿದೆ. ಯಾಕೆ ಅವರು ತಯಾರು ಮಾಡಬೇಕಿತ್ತು ಎಂದು ಪ್ರಶ್ನಿಸಿದರು. ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಡಲ್ಲ ಎಂದು ಗೊತ್ತಿರುತ್ತೆ. ಆದರೆ, ಕೆಲವರಿಗೆ ಅವರ ಲಾಭವೇ ಅವರಿಗೆ ಮುಖ್ಯ ಎಂದರು.

  • ಎಲೆಕ್ಷನ್ ರಿಸಲ್ಟ್ ಬಿಸಿಯ ಮಧ್ಯೆ ಕರೆಂಟ್ ಶಾಕ್!

    ಎಲೆಕ್ಷನ್ ರಿಸಲ್ಟ್ ಬಿಸಿಯ ಮಧ್ಯೆ ಕರೆಂಟ್ ಶಾಕ್!

    ಬೆಂಗಳೂರು: ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ. ನಾಳೆ ಹನ್ನೊಂದು ಗಂಟೆಗೆ ಹೊಸ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುತ್‍ಚ್ಛಕ್ತಿ ನಿಯಂತ್ರಣ ಮಂಡಳಿ(ಕೆಇಆರ್‍ಸಿ) ಪ್ರಕಟಿಸಲಿದೆ.

    ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ಕಾರಣ ದರ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಆದರೆ ಮತದಾನದ ಮುನ್ನಾ ದಿನ ದರ ಏರಿಕೆಯಾಗುವುದು ಅಧಿಕೃತವಾಗಿದೆ.

    ಐದು ವಿದ್ಯುತ್ ಸರಬಾರಾಜು ಕಂಪನಿಗಳು 83 ಪೈಸೆಯಿಂದ 1.20 ರೂ. ವರೆಗೆ ದರ ಏರಿಕೆಯ ಪ್ರಸ್ತಾಪವನ್ನು ಮುಂದಿಟ್ಟಿದೆ. ಈ ಪ್ರಸ್ತಾಪವನ್ನು ಆಧಾರಿಸಿ ವಿದ್ಯುತ್ ನಿಯಂತ್ರಣ ಆಯೋಗದಿಂದ ಪರಿಷ್ಕೃತ ದರಪಟ್ಟಿಯನ್ನು ಪ್ರಕಟಿಸಲಿದೆ.