Tag: Electricity Wire

  • ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

    ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

    ನೆಲಮಂಗಲ: ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆಯಲ್ಲಿ ನಡೆದಿದೆ.

    ಉತ್ತರಪ್ರದೇಶದ ಮೂಲದ ಅಜಯ್ ಚೌಹಾಣ್ (35) ಮೃತ ಕಾರ್ಮಿಕ. ಸಹದ್ಯೋಗಿ ಸುನಿಲ್ ಚೌಹಾಣ್ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಬಿಲ್ಲಿನಕೋಟೆಯ ವಿ.ಆರ್.ಎಲ್ ಗೋಧಾಮಿನಲ್ಲಿ ಕೆಲಸದಲ್ಲಿದ್ದ ಕಾರ್ಮಿಕರು, ಭಾನುವಾರ ರಜೆಯಾದ್ದರಿಂದ ಸ್ವಚ್ಛತೆಯಲ್ಲಿ ತೊಡಗಿದ್ದ ವೇಳೆಯಲ್ಲಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

    ಗುತ್ತಿಗೆದಾರ ಗುಲಾಬ್, ಈ ಕಾರ್ಮಿಕರಿಗೆ ಆಶ್ರಯ ನೀಡಿದ್ದ ಎನ್ನಲಾಗಿದ್ದು, ಮೂಲಭೂತ ಸೌಕರ್ಯ ಸೂಕ್ತವಾಗಿ ಒದಗಿಸದೇ ಇದ್ದ ಹಿನ್ನಲೆಯಲ್ಲಿ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಶವವನ್ನು ಡಾಬಸ್ ಪೇಟೆ ಶವಾಗಾರದಲ್ಲಿ ಇರಿಸಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತ ದೇಹ ಹಸ್ತಾಂತರಿಸಲಿದ್ದಾರೆ. ಇದನ್ನೂ ಓದಿ: ಲವ್ ಕೇಸರಿಗೆ ಕರೆಕೊಟ್ಟು ಪ್ರಚೋದನಕಾರಿ ಭಾಷಣ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

  • ರಜೆಗೆಂದು ಮನೆಗೆ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

    ರಜೆಗೆಂದು ಮನೆಗೆ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

    ಚಾಮರಾಜನಗರ: ರಜೆಗೆಂದು ಮನೆಗೆ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ವಿದ್ಯುತ್ ತಂತಿ ತುಳಿದು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಾಮರಾಜನಗರ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.

    ಮಹೇಂದ್ರ ಮೃತ ವಿದ್ಯಾರ್ಥಿ. ಮಹೇಂದ್ರ ಮಂಡ್ಯದಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ರಜೆಗೆಂದು ಶನಿವಾರ ಮಹೇಂದ್ರ ಮನೆಗೆ ಬಂದಿದ್ದನು. ಭಾನುವಾರ ಸಂಜೆ ಜಮೀನಿನ ಬಳಿ ಹೋಗಿದ್ದ ಮಹೇಂದ್ರ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಪರಿಣಾಮ ಮಹೇಂದ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

    ಸೆಸ್ಕಾಂ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜನಗರ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • 7ರ ಪೋರಿಯನ್ನ ಬಲಿ ಪಡೆದ ಬೆಸ್ಕಾಂ- ಅರ್ಥಿಂಗ್ ಕೇಬಲ್ ತುಳಿದು ಬಾಲಕಿ ಸಾವು

    7ರ ಪೋರಿಯನ್ನ ಬಲಿ ಪಡೆದ ಬೆಸ್ಕಾಂ- ಅರ್ಥಿಂಗ್ ಕೇಬಲ್ ತುಳಿದು ಬಾಲಕಿ ಸಾವು

    ಚಿಕ್ಕಬಳ್ಳಾಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಸ್ತೆ ಪಕ್ಕದಲ್ಲೇ ಇದ್ದ ಟ್ರಾನ್ಸ್ ಫಾರ್ಮರ್ ಗೆ ಅಳವಡಿಸಿದ್ದ ಅರ್ಥಿಂಗ್ ವಿದ್ಯುತ್ ತಂತಿ ತಾಗಿ ಏಳು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡತತ್ತಮಂಗಲ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ನಾಗಪ್ಪ ಮತ್ತು ಮಂಜುಳ ದಂಪತಿಯ ಪುತ್ರಿ ಚರಣ್ಯ (7) ಮೃತಪಟ್ಟಿರುವ ಬಾಲಕಿ. ಮೃತ ಬಾಲಕಿ ಗ್ರಾಮದ ಮುಖ್ಯ ರಸ್ತೆಯಲ್ಲಿ ತಮ್ಮ ಮನೆಗೆ ನಡೆದುಕೊಂಡು ತೆರಳುತ್ತಿದ್ದ ವೇಳೆ ರಸ್ತೆಯ ಪಕ್ಕದಲ್ಲೆ ಶಿಥಿಲಾವ್ಯಸ್ಥೆಯಿಂದ ಕೂಡಿದ್ದ ಟ್ರಾನ್ಸ್ ಫಾರ್ಮರ್ ಗೆ ಹಾಕಲಾಗಿದ್ದ ಅರ್ಥಿಂಗ್ ತಂತಿ ಮೇಲೆ ಎದ್ದಿದ್ದು, ಬಾಲಕಿ ತಂತಿಯನ್ನ ತುಳಿದಾಗ ವಿದ್ಯುತ್ ಸ್ಪರ್ಶಿಸಿದೆ.

    ಪೋಷಕರು ಬಾಲಕಿಯನ್ನ ಕೂಡಲೇ ಆಸ್ಪತ್ರೆಗೆ ರವಾನೆ ಮಾಡುವ ಪ್ರಯತ್ನ ಮಾಡಿದರೂ, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಶಿಥಿಲಾವಸ್ಥೆಯಿಂದ ಕೂಡಿದ್ದ ಟ್ರಾನ್ಸ್ ಫಾರ್ಮರ್ ಸರಿಪಡಿಸುವಂತೆ ಈ ಹಿಂದೆಯೂ ಗ್ರಾಮಸ್ಥರು ಬೆಸ್ಕಾಂಗೆ ಮನವಿ ಮಾಡಿದ್ದರು ಎನ್ನಲಾಗಿದ್ದು, ಆದರೆ ಬೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದೇ ಬಾಲಕಿ ಸಾವಿಗೆ ಕಾರಣ ಎಂದು ಮೃತ ಬಾಲಕಿಯ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.