Tag: Electronics City Flyover

  • ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

    ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ನಡೆದ ಅಪಘಾತಕ್ಕೆ ದ್ವಿಚಕ್ರ ವಾಹನ ಸವಾರರೊಬ್ಬರು ಬಲಿಯಾಗಿದ್ದಾರೆ. ಬೈಕ್‍ನಲ್ಲಿ (Bike) ಸಂಚರಿಸುತ್ತಿದ್ದಾಗ ಫ್ಲೈಓವರ್‌ನ ತಡೆಗೊಡೆಗೆ ಗುದ್ದಿ ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ (Electronics City) ನೀಲಾದ್ರಿ ಕ್ರಾಸ್ ಬಳಿ ನಡೆದಿದೆ.

    ಆಂಧ್ರ ಮೂಲದ ಕೌರಿ ನಾಗಾರ್ಜುನ (33) ಮೃತ ದುರ್ದೈವಿ. ಬೆಂಗಳೂರಿನಿಂದ ಹೊಸೂರು (Hosur) ಕಡೆ ನಾಗಾರ್ಜುನ ಪಲ್ಸರ್ ಬೈಕ್‍ನಲ್ಲಿ ಹೊರಟಿದ್ದರು. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ಕ್ರಾಸ್ ಬಳಿ ಬರುತ್ತಿದ್ದಂತೆ ಫ್ಲೈಓವರ್ ಇಳಿಯಬೇಕಾಗಿತ್ತು. ಈ ವೇಳೆ ಏಕಾಏಕಿ ಬೈಕ್ ಕಂಟ್ರೋಲ್‍ಗೆ ಬಾರದೆ ಸ್ಕಿಡ್ ಆಗಿ ಫ್ಲೈಓವರ್‌ನ ತಡೆಗೊಡೆಗೆ ಗುದ್ದಿ ಮೇಲಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಪತಿ ಜಾನ್ ಶಾ ನಿಧನ

    ತಕ್ಷಣ ಸಾರ್ವಜನಿಕರು ಸ್ಥಳೀಯ ಖಾಸಗಿ ಆಸ್ಪತ್ರೆಗೆ (Hospital) ದಾಖಲಿಸಿದ್ದರು. ಆ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ನಾಗಾರ್ಜುನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಅವರಿಗೆ ಗಂಡೆದೆ ಇದೆ – ಆರ್.ಅಶೋಕ್

    Live Tv
    [brid partner=56869869 player=32851 video=960834 autoplay=true]