Tag: elephant

  • ಆಪರೇಷನ್ ಮಕ್ನಾ ಸಕ್ಸಸ್ – ಮೂರು ಪುಂಡಾನೆಗಳ ಸೆರೆ, ನಿಟ್ಟುಸಿರು ಬಿಟ್ಟ ಬೇಲೂರು ಜನ

    ಆಪರೇಷನ್ ಮಕ್ನಾ ಸಕ್ಸಸ್ – ಮೂರು ಪುಂಡಾನೆಗಳ ಸೆರೆ, ನಿಟ್ಟುಸಿರು ಬಿಟ್ಟ ಬೇಲೂರು ಜನ

    ಹಾಸನ: ಬೇಲೂರಿನಲ್ಲಿ (Belur) ಕಳೆದ ಭಾನುವಾರದಿಂದ ಆರಂಭಗೊಂಡಿದ್ದ ಮೂರು ಪುಂಡಾನೆಗಳ (Elephant) ಸೆರೆ ಕಾರ್ಯಾಚರಣೆ ಇಂದು ಮತ್ತೊಂದು ಕಾಡಾನೆ ಮಕ್ನಾನನ್ನು ಸೆರೆ ಹಿಡಿದು ಸ್ಥಳಾಂತರಿಸುವ ಮೂಲಕ ಅಂತ್ಯಗೊಂಡಿದೆ.

    ಒಂದು ತಿಂಗಳ ಅಂತರದಲ್ಲಿ ನಾಲ್ವರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಮೂರು ಪುಂಡಾನೆಗಳ ಸೆರೆ ಹಿಡಿದು ಸ್ಥಳಾಂತರ ಮಾಡಲು ಅನುಮತಿ ನೀಡಿತ್ತು. ಅದರಂತೆ ಏಳು ಸಾಕಾನೆಗಳು, ಇನ್ನೂರಕ್ಕೂ ಹೆಚ್ಚು ಅರಣ್ಯ ಇಲಾಖೆಯ (Forest Department) ಸಿಬ್ಬಂದಿ, ವೈದ್ಯರುಗಳೊಂದಿಗೆ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ಸೆರೆಹಿಡಿದ ಆನೆಗಳಲ್ಲಿ ಒಂದನ್ನು ಚಾಮರಾಜನಗರದ ಮಲೆಮಹದೇಶ್ವರ ಅರಣ್ಯಕ್ಕೆ ಬಿಟ್ಟರೆ, ಉಳಿದ ಎರಡು ಕಾಡಾನೆಗಳನ್ನು ಸಕ್ಕರೆಬೈಲು ಕ್ಯಾಂಪ್‍ಗೆ ಸ್ಥಳಾಂತರಿಸಲಾಗಿದೆ. ಇದರಿಂದಾಗಿ ಮಲೆನಾಡು ಭಾಗದ ಜನರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಎಟಿಎಫ್‌ ಸಿಬ್ಬಂದಿಯನ್ನು ಅಟ್ಟಾಡಿಸಿದ್ದ ಕಾಡಾನೆ ವಿಕ್ರಾಂತ್‌ ಸೆರೆ – ಜೀವ ಪಣಕ್ಕಿಟ್ಟು ಕಾರ್ಯಾಚರಣೆ ಮಾಡಿದ ತಂಡ

    ಕಳೆದ ಭಾನುವಾರ ಬೇಲೂರಿನ ಕಾನನಹಳ್ಳಿ ಗ್ರಾಮದಿಂದ ಮೂರು ಪುಂಡಾನೆಗಳ ಸೆರೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೊದಲ ದಿನದ ಕಾರ್ಯಾಚರಣೆಯಲ್ಲಿ ಪುಂಡಾನೆಯೊಂದನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿತ್ತು. ಮಂಗಳವಾರದಿಂದ ವಿಕ್ರಾಂತ್ ಕಾಡಾನೆ ಸೆರೆ ಆರಂಭಿಸಿ, ನಿರಂತರ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿ ವಾಟೀಹಳ್ಳಿ ಬಳಿ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯಲಾಯಿತು. ಇದಾದ ಎರಡು ದಿನಗಳ ಕಾಲ ಬಿಕ್ಕೋಡು ಬಳಿಯ ತಾತ್ಕಾಲಿಕ ಸಾಕಾನೆ ಶಿಬಿರದಲ್ಲಿ ಸಾಕಾನೆಗಳು, ಮಾವುತರು, ಕಾವಾಡಿಗರು ಎರಡು ದಿನಗಳ ಕಾಲ ವಿಶ್ರಾಂತಿ ಪಡೆದಿದ್ದರು. ಇಂದು (ಮಾ.23) ಮುಂಜಾನೆ ಜನ-ಜಾನುವಾರುಗಳು, ಬೈಕ್‍ಗಳ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿಸಿದ್ದ ಮಕ್ನಾ ಕಾಡಾನೆಯನ್ನು ಸೆರೆ ಕಾರ್ಯಾಚರಣೆ ಆರಂಭಿಸಲಾಗಿತ್ತು.

    ಮುಂಜಾನೆಯೇ ಇಟಿಎಫ್ ಸಿಬ್ಬಂದಿ ಮಕ್ನಾ ಕಾಡಾನೆ ಇದ್ದ ಸ್ಥಳವನ್ನು ಪತ್ತೆ ಹಚ್ಚಿದ್ದರು. ಸಕಲೇಶಪುರದ ಹೆಬ್ಬನಹಳ್ಳಿ ಬಳಿಯಿಂದ ಸಾಕಾನೆಗಳೊಂದಿಗೆ ಕಾರ್ಯಾಚರಣೆ ಆರಂಭಿಸಿ, ಆನೆಗೆ ಅರವಳಿಕೆ ನೀಡಿ ಸೆರೆಹಿಡಿಯಲಾಯಿತು. ಸತತ ಮೂರು ಗಂಟೆಗಳ ಕಾಲ ಶ್ರಮಪಟ್ಟು ಕಾಡಾನೆಗೆ ಹಗ್ಗ ಕಟ್ಟಿ ರಸ್ತೆಗೆ ಎಳೆದು ತಂದು ಕ್ರೇನ್ ಮೂಲಕ ಲಾರಿಗೆ ಹತ್ತಿಸಿ ಸಕ್ಕರೆಬೈಲು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: ಕಾಡಾನೆ ಸೆರೆ ಮೊದಲ ದಿನದ ಕಾರ್ಯಾಚರಣೆ ಯಶಸ್ವಿ – ಸತತ 4 ಗಂಟೆಗಳ ನಂತರ ಒಂಟಿಸಲಗ ಸೆರೆ

  • ಎಟಿಎಫ್‌ ಸಿಬ್ಬಂದಿಯನ್ನು ಅಟ್ಟಾಡಿಸಿದ್ದ ಕಾಡಾನೆ ವಿಕ್ರಾಂತ್‌ ಸೆರೆ – ಜೀವ ಪಣಕ್ಕಿಟ್ಟು ಕಾರ್ಯಾಚರಣೆ ಮಾಡಿದ ತಂಡ

    ಎಟಿಎಫ್‌ ಸಿಬ್ಬಂದಿಯನ್ನು ಅಟ್ಟಾಡಿಸಿದ್ದ ಕಾಡಾನೆ ವಿಕ್ರಾಂತ್‌ ಸೆರೆ – ಜೀವ ಪಣಕ್ಕಿಟ್ಟು ಕಾರ್ಯಾಚರಣೆ ಮಾಡಿದ ತಂಡ

    ಹಾಸನ: ಬೇಲೂರು ಭಾಗದ ಜನರ ನಿದ್ದೆಗೆಡಿಸಿದ್ದ ಹಾಗೂ ಅರಣ್ಯ ಇಲಾಖೆಗೆ (Forest Department) ತಲೆನೋವಾಗಿದ್ದ ದೈತ್ಯಾಕಾರದ ಪುಂಡಾನೆ ವಿಕ್ರಾಂತ್‌ನನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸತತ ಮೂರು ದಿನಗಳಿಂದ ವಿಕ್ರಾಂತ್ ಸೆರೆ ಹಿಡಿಯಲು ಏಳು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸತತ ಪ್ರಯತ್ನಪಟ್ಟಿದ್ದರು. ಇದೀಗ ವಿಕ್ರಾಂತ್‌ (Vikrant) ಜೊತೆಗಿದ್ದ ಭೀಮನಿಂದ ಬೇರ್ಪಡಿಸಿ ಅರವಳಿಕೆ ನೀಡಿ ಕಾಡಾನೆಯನ್ನು ಇಟಿಎಫ್‌ ಸಿಬ್ಬಂದಿ ಸೆರೆಹಿಡಿದಿದ್ದಾರೆ.

    ಮಂಗಳವಾರದಿಂದ ಬೇಲೂರಿನ (Beluru) ಕಾನನಹಳ್ಳಿ ಗ್ರಾಮದ ಬಳಿಯಿರುವ ಅರಣ್ಯದ ಬಳಿ ಏಳು ಸಾಕಾನೆಗಳು, ಇನ್ನೂರಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ವಿಕ್ರಾಂತ್ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು. ಮೊದಲ ದಿನ 6 ಗಂಟೆಗಳ ಕಾಲ ನಿರಂತರ ಪ್ರಯತ್ನಪಟ್ಟರೂ, ಅರಣ್ಯ ಇಲಾಖೆಗೆ ಚಳ್ಳೆ ಹಣ್ಣು ತಿನ್ನಿಸಿ ದಟ್ಟ ಅರಣ್ಯದೊಳಗೆ ಸೇರಿಕೊಂಡಿತ್ತು. ಎರಡನೇ ದಿನದ ಕಾರ್ಯಾಚರಣೆ ವೇಳೆ ಭೀಮ ಎಂಟ್ರಿಕೊಟ್ಟಿದ್ದರಿಂದ ಕೆಲಕಾಲ ಕಾರ್ಯಾಚರಣೆ ಸ್ಥಗಿತಗೊಳಿಸಿ, ಪುನಃ ಕಾರ್ಯಾಚರಣೆ ನಡೆಸಿದ್ದರು. ಗುಂಪಿನೊಳಗಿದ್ದ ವಿಕ್ರಾಂತ್‌ನನ್ನು ಬೇರ್ಪಡಿಸಿ ಅರವಳಿಕೆ ಚುಚ್ಚುಮದ್ದು ನೀಡಲು ವೈದ್ಯರು ಹಾಗೂ ಇಟಿಎಫ್ ಸಿಬ್ಬಂದಿ ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಸಿಟ್ಟಿಗೆದ್ದು ಅಟ್ಟಾಡಿಸಿದ ಕಾಡಾನೆ – ಓಡಿ ಓಡಿ ಪಾರಾದ ಇಟಿಎಫ್ ಸಿಬ್ಬಂದಿ!

    ವಿಕ್ರಾಂತ್‌ ಸೆರೆಯಾಗಿದ್ದು ಹೇಗೆ?
    ಗುರುವಾರ ಕಾರ್ಯಾಚರಣೆ ವೇಳೆ, ಎಟಿಎಫ್‌ (ETF) ಸಿಬ್ಬಂದಿ ಭೀಮನಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಕೆಲಕಾಲ ನಿತ್ರಾಣಗೊಳ್ಳುವಂತೆ ಮಾಡಿ ವಿಕ್ರಾಂತ್‌ನನ್ನು ಬೇರ್ಪಡಿಸಿದರು. ಬಳಿಕ ವಾಟೀಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ನಿಂತಿದ್ದ ವಿಕ್ರಾಂತ್‌ ಬಳಿಗೆ ಸಾಕಾನೆಗಳು ತೆರಳಿದ್ದು ಅರವಳಿಕೆ ತಜ್ಞರಾದ ರಮೇಶ್ ಚುಚ್ಚುಮದ್ದು ನೀಡಿದರು. ಅರವಳಿಕೆ ಚುಚ್ಚುಮದ್ದು ನೀಡುತ್ತಿದ್ದಂತೆ ಕಾಫಿ ತೋಟದೊಳಗಿಂದ ವೇಗವಾಗಿ ಓಡಲಾರಂಭಿಸಿದ ವಿಕ್ರಾಂತ್ ಅರೇಹಳ್ಳಿ-ಸಕಲೇಶಪುರ ರಸ್ತೆ ದಾಟಿ ಕಾಫಿ ತೋಟಕ್ಕೆ ಬಂದು ಕುಸಿದು ಬಿದ್ದಿತ್ತು. ಬಳಿಕ ಸಾಕಾನೆಗಳ ಸಹಾಯದಿಂದ ಆನೆಯನ್ನು ಸಿಬ್ಬಂದಿ ಸೆರೆಹಿಡಿದಿದ್ದಾರೆ.

    ವಾಟೀಹಳ್ಳಿ ಬಳಿ ಇಟಿಎಫ್ ಸಿಬ್ಬಂದಿ ವಿಕ್ರಾಂತ್ ಇರುವ ಸ್ಥಳವನ್ನು ಗುರುತು ಮಾಡುತ್ತಿದ್ದ ವೇಳೆ, ಸಿಬ್ಬಂದಿಯನ್ನು ಈ ಕಾಡಾನೆ ಅಟ್ಟಾಡಿಸಿತ್ತು. ಈ ವೇಳೆ ಕೂದಲೆಳೆ ಅಂತರದಲ್ಲಿ ಇಟಿಎಫ್‌ ಸಿಬ್ಬಂದಿ ಪಾರಾಗಿದ್ದರು. ಇದನ್ನೂ ಓದಿ: ಹಾಟ್ ಅವತಾರ ತಾಳಿದ ಜಾಕ್ವೆಲಿನ್- ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ

  • ಸಿಟ್ಟಿಗೆದ್ದು ಅಟ್ಟಾಡಿಸಿದ ಕಾಡಾನೆ – ಓಡಿ ಓಡಿ ಪಾರಾದ ಇಟಿಎಫ್ ಸಿಬ್ಬಂದಿ!

    ಸಿಟ್ಟಿಗೆದ್ದು ಅಟ್ಟಾಡಿಸಿದ ಕಾಡಾನೆ – ಓಡಿ ಓಡಿ ಪಾರಾದ ಇಟಿಎಫ್ ಸಿಬ್ಬಂದಿ!

    ಹಾಸನ: ಒಂಟಿ ಸಲಗವೊಂದು (Elephant) ಇಟಿಎಫ್ (Elephant Task Force) ಸಿಬ್ಬಂದಿಯನ್ನು ಅಟ್ಟಾಡಿಸಿದ ಘಟನೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಜುಲ್ಫಿ ಎಂಬವರ ಕಾಫಿ ತೋಟದಲ್ಲಿ ಇಟಿಎಫ್ ಸಿಬ್ಬಂದಿ ಪ್ರಶಾಂತ್ ಹಾಗೂ ಸುನೀಲ್ ಕಾಡಾನೆ ಚಲನವಲನಗಳನ್ನು ಗಮನಿಸುತ್ತಿದ್ದರು. ಈ ವೇಳೆ, ವಿಕ್ರಾಂತ್ ಹೆಸರಿನ ಒಂಟಿಸಲಗ ಏಕಾಏಕಿ ದಾಳಿ ನಡೆಸಿದೆ. ಜೀವ ಉಳಿಸಿಕೊಳ್ಳಲು ವೇಗವಾಗಿ ಸಿಬ್ಬಂದಿ ಓಡಿ ಬಂದಿದ್ದಾರೆ. ಇದನ್ನೂ ಓದಿ: ಕಾಡಾನೆ ಸೆರೆ ಮೊದಲ ದಿನದ ಕಾರ್ಯಾಚರಣೆ ಯಶಸ್ವಿ – ಸತತ 4 ಗಂಟೆಗಳ ನಂತರ ಒಂಟಿಸಲಗ ಸೆರೆ

    ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ. ವಿಕ್ರಾಂತ್ ಅಟ್ಟಿಸಿಕೊಂಡು ಬಂದಿರುವ ವೀಡಿಯೊ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮಂಗಳವಾರ (ಮಾ.17) ಬೇಲೂರು ತಾಲೂಕಿನ ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್‌ನಲ್ಲಿದ್ದ ಕಾಡಾನೆಯೊಂದನ್ನು ಇಟಿಎಫ್‌ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಕ್ರೇನ್ ಮೂಲಕ ಕಾಡಾನೆಯನ್ನು ಲಾರಿಗೆ ಶಿಫ್ಟ್ ಮಾಡಲಾಗಿದ್ದು, ಅರಣ್ಯಕ್ಕೆ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ನಿರ್ಲಕ್ಷ್ಯಕ್ಕೆ ಸರ್ಕಾರಿ ಶಾಲೆಗಳಿಗೆ ಆಪತ್ತು – ಜಿಲ್ಲೆಯಲ್ಲಿ 579 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ದಾಖಲಾತಿ

  • ಬೈಕ್‍ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಆನೆ ದಾಳಿ – ಮಹಿಳೆಗೆ ಗಂಭೀರ ಗಾಯ

    ಬೈಕ್‍ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಆನೆ ದಾಳಿ – ಮಹಿಳೆಗೆ ಗಂಭೀರ ಗಾಯ

    ಹಾಸನ: ಬೈಕ್‍ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ (Elephant) ದಾಳಿ ನಡೆಸಿದ ಘಟನೆ ಬೇಲೂರು ತಾಲೂಕಿನ, ಚಿಕ್ಕಸಾಲಾವಾರ ಗ್ರಾಮದ ಬಳಿ ನಡೆದಿದೆ. ಆನೆ ದಾಳಿಯಿಂದ ಬೈಕ್‍ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ.

    ಭಾನುವಾರ ಬೆಳಗ್ಗೆ ಉಮೇಶ್ ಹಾಗೂ ರೇವತಿ (50) ದಂಪತಿ ಕೂಲಿ ಕೆಲಸಕ್ಕೆ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೇವತಿಯವರ ತಲೆ ಮತ್ತು ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಕೇರಳಾಪುರದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ

    ಗಾಯಾಳುಗಳಿಗೆ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಸ್ಥಳಕ್ಕೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಕಲ್ಲಿನಿಂದ ಹೊಡೆದು ಕೊಂದ ತಂದೆ!

  • 2 ಜೀವಗಳನ್ನ ಬಲಿ ಪಡೆದಿದ್ದ, ಇಡೀ ಗ್ರಾಮದ ಜನರನ್ನೇ ಕಾಡಿದ್ದ ಸಲಗ ಕೊನೆಗೂ ಸೆರೆ

    2 ಜೀವಗಳನ್ನ ಬಲಿ ಪಡೆದಿದ್ದ, ಇಡೀ ಗ್ರಾಮದ ಜನರನ್ನೇ ಕಾಡಿದ್ದ ಸಲಗ ಕೊನೆಗೂ ಸೆರೆ

    ಮಡಿಕೇರಿ: ಎರಡು ಜೀವಗಳನ್ನ ಬಲಿ ಪಡೆದು, ಇಡೀ ಗ್ರಾಮದ ಜನರಿಗೆ ಕಾಟ ಕೊಡುತ್ತಿದ್ದ ಒಂಟಿ ಸಲಗವನ್ನ ಕೊನೆಗೂ ಅರಣ್ಯ ಇಲಾಖೆ (Kodagu Forest Department) ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಹೌದು.. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಚೆನ್ನಂಗೊಲ್ಲಿ, ಭದ್ರಗೊಳ, ದೇವರಪುರ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಅಡ್ಡಾಡುತ್ತಿದ್ದ ಪುಂಡ ಕಾಡಾನೆ (Wild Elephant) ಸುತ್ತಮುತ್ತಲಿನ ಗ್ರಾಮದ ಜನರನ್ನ ಸಿಕ್ಕಾಪಟ್ಟೆ ಕಾಡಿತ್ತು. ಅಂದಾಜು 40 ವರ್ಷ ಪ್ರಾಯದ ಒಂಟಿ ಸಲಗ ಕೆಲವು ತಿಂಗಳ ಹಿಂದೆ ಇದೇ ಭದ್ರಗೊಳ ಗ್ರಾಮದಲ್ಲಿ ಗೌರಿ ಎಂಬ ಮಹಿಳೆಯನ್ನ ಬಲಿ ಪಡೆದಿತ್ತು. ಅದಾದ ಬಳಿಕ ಎರಡು ದಿನಗಳ ಹಿಂದೆ ಚೆನ್ನಂಗೊಲ್ಲಿ ಗ್ರಾಮದಲ್ಲಿ ಪಾರ್ವತಿ (52) ಎಂಬ ಮಹಿಳೆಯನ್ನ ತುಳಿದು ಸಾಯಿಸಿತ್ತು. ಇದನ್ನೂ ಓದಿ: ಎಲಾನ್‌ ಮಸ್ಕ್‌ ಅವರ 13ನೇ ಮಗುವಿಗೆ ಜನ್ಮ ನೀಡಿದ್ದೇನೆ: ಆಶ್ಲೇ ಹೇಳಿಕೆಗೆ ಮೌನ ಮುರಿದ ಮಸ್ಕ್‌

    ಅಷ್ಟೇ ಅಲ್ಲದೇ ಸುತ್ತ ಮುತ್ತಲಿನ ಬಹಳಷ್ಟು ಮಂದಿಯ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿತ್ತು. ಹೀಗಾಗಿ ಈ ಆನೆಯನ್ನ ಸೆರೆ ಹಿಡಿಯಲೇಬೇಕೆಂದು ಗ್ರಾಮಸ್ಥರು ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಶಾಸಕ ಎ.ಎಸ್ ಪೊನ್ನಣ್ಣ ಅವರ ಮೂಲಕ ಅರಣ್ಯ ಸಚಿವರಿಗೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾಡಾನೆ ಸೆರೆಗೆ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭದ್ರಗೊಳ ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಯಿತು.

    ಸದ್ಯ ಈ ಆನೆಗೆ ʻವೇದʼ ಎಂದು ಹೆಸರಿಡಲಾಗಿದೆ. ಇದು ಮೊನ್ನೆ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ ಬಳಿಕ ಇದೇ ಗ್ರಾಮದ ಸುತ್ತಮುತ್ತಲಿನ ಕಾಫಿ ತೋಟ, ದೇವರ ಕಾಡಿನಲ್ಲಿ ಅಡ್ಡಾಡುತ್ತಿತ್ತು. ಹೀಗಾಗಿ ಅರಣ್ಯಾಧಿಕಾರಿಗಳು ಈ ಪುಂಡಾನೆ ಮೇಲೆ ಕಣ್ಣಿಟ್ಟಿದ್ದರು, ಸೆರೆ ಹಿಡಿಯಲು ಅನುಮತಿ ಸಿಕ್ಕ ಕೂಡಲೆ ಕಾರ್ಯಾಚರಣೆ ನಡೆಸಿದ್ರು. ಇದನ್ನೂ ಓದಿ: ಅಯೋಧ್ಯೆಗೆ ತೆರಳಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ – 10 ಮೊಬೈಲ್, 20,000 ರೂ. ದೋಚಿದ ಖದೀಮರು

    ದುಬಾರೆ, ಮತ್ತಿಗೋಡು ಮತ್ತು ಹಾರಂಗಿ ಸಾಕಾನೆ ಶಿಬಿರದ ಏಳು ಸಾಕಾನೆಗಳು ಮತ್ತು 90ಕ್ಕೂ ಅಧಿಕ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ರು. ದೇವರ ಕಾಡಿನಲ್ಲಿ ಬಿಂದಾಸ್ ಆಗಿ ಅಡ್ಡಾಡುತ್ತಿದ್ದ ಕಾಡಾನೆಗೆ ಅರವಳಿಕೆ ತಜ್ಞ ಡಾ.ರಮೇಶ್ ಅರವಳಿಕೆ ಇಂಜೆಕ್ಷನ್ ಶೂಟ್​ ಮಾಡಿದ್ರು. ಇಷ್ಟು ದಿನ ತನ್ನದೇ ಲೋಕದಲ್ಲಿ ವಿಹರಿಸುತ್ತಾ ಪುಂಡಾಟವಾಡುತ್ತಿದ್ದ ವೇದ ಕೊನೆಗೂ ಸೆರೆಯಾಯಿತು. ಸೆರೆಯಾದ ಬಳಿಕ ಹೆಚ್ಚೇನೂ ನಖರಾ ಮಾಡದೇ ಕ್ರೇನ್ ಸಹಾಯದಿಂದ ಲಾರಿ ಏರಿತು.

    ಸದ್ಯ ವೇದನನ್ನ ದುಬಾರೆ ಸಾಕಾನೆ ಶಿಬಿರಕ್ಕೆ ಕರೆದೊಯ್ಯಲಾಗಿದ್ದು ಅಲ್ಲಿ ಕ್ರಾಲ್​ನಲ್ಲಿ ಹಾಕಿ ಸನ್ನಡತೆಯ ಪಾಠ ಹೇಳಲಾಗುತ್ತದೆ. ಇದನ್ನೂ ಓದಿ: ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

  • ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ – ಜರ್ಮನ್ ಪ್ರವಾಸಿಗ ಸಾವು

    ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ – ಜರ್ಮನ್ ಪ್ರವಾಸಿಗ ಸಾವು

    • ಆನೆ ದಾಳಿಯ ವಿಡಿಯೋ ಮೊಬೈಲ್‌ನಲ್ಲಿ ಸೆರೆ

    ಚಾಮರಾಜನಗರ: ಕಾಡಾನೆ ದಾಳಿಯಿಂದ (Elephant Attack) ಜರ್ಮನ್ ಪ್ರವಾಸಿಗ (German Tourist) ಸಾವಿಗೀಡಾದ ಘಟನೆ ತಮಿಳುನಾಡಿನ (Tamil Nadu) ಕೊಯಮತ್ತೂರು ಜಿಲ್ಲೆಯ ಎಟಿಆರ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

    ಆನೆ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಮೈಕೆಲ್ ಶುಲ್ಜ್ (77) ಎಂದು ಗುರುತಿಸಲಾಗಿದೆ. ಟೈಗರ್ ವ್ಯಾಲಿ ರಸ್ತೆಯಲ್ಲಿ ಬೈಕ್‍ನಲ್ಲಿ ತೆರಳುವಾಗ ಆನೆ ಇರುವುದನ್ನು ಗಮನಿಸಿಯೂ ಅವರು ಸಮೀಪ ಹೋಗಿದ್ದಾರೆ. ಈ ವೇಳೆ ಬೈಕ್ ಸಮೇತ ಅವರನ್ನು ಆನೆ ಎತ್ತಿ ಎಸೆದಿದೆ. ಅವರು ತೀವ್ರ ಗಾಯಗೊಂಡಿದ್ದರು. ಅವರನ್ನು ಪೊಲ್ಲಾಚಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ದುರಂತ| ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಬಲಿ

    ಆನೆ ಪ್ರವಾಸಿಗನ ಮೇಲೆ ದಾಳಿ ನಡೆಸಿರುವುದನ್ನು ಹಿಂದೆ ಬರುತ್ತಿದ್ದ ವಾಹನ ಸವಾರರು ವಿಡಿಯೋ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ದ್ವೇಷ ಭಾಷಣಕ್ಕೆ 3 ವರ್ಷ ಜೈಲು – ಹೊಸ ಬಿಲ್ ತರಲು ರಾಜ್ಯ ಸರ್ಕಾರ ಸಿದ್ಧತೆ?

  • ವೃದ್ಧನನ್ನು ಕೊಂದು ಶವ ಮುಚ್ಚಿಟ್ಟ ಕಾಡಾನೆ!

    ವೃದ್ಧನನ್ನು ಕೊಂದು ಶವ ಮುಚ್ಚಿಟ್ಟ ಕಾಡಾನೆ!

    ಹಾಸನ: ಕಾಡಾನೆಯೊಂದು (Elephant) ವೃದ್ಧನ ಮೇಲೆ ಏಕಾಏಕಿ ದಾಳಿ ನಡೆಸಿ ಕೊಂದು, ಶವದ ಮೇಲೆ ಕಾಫಿ ಗಿಡ ಮುಚ್ಚಿದ ಘಟನೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ.

    ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ. ಕಾಲಿನಿಂದ ತುಳಿದು ಮರಕ್ಕೆ ಅಪ್ಪಳಿಸಿದೆ. ಇದರಿಂದ ವೃದ್ಧ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಳಿಕ ಆನೆ ಶವಕ್ಕೆ ಕಾಫಿ ಗಿಡಗಳನ್ನು ಮುಚ್ಚಿ ಹೋಗಿದೆ.

    ಬುಧವಾರ ಮುಂಜಾನೆ ಕಾಫಿ ತೋಟದಲ್ಲಿ ಪುಟ್ಟಯ್ಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ( Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಬಂಡೀಪುರದಲ್ಲಿ ರಸ್ತೆಗಿಳಿದ ಗಜರಾಜ – ನಾಲ್ಕು ಕಿಮೀ ಟ್ರಾಫಿಕ್ ಜಾಮ್!

    ಬಂಡೀಪುರದಲ್ಲಿ ರಸ್ತೆಗಿಳಿದ ಗಜರಾಜ – ನಾಲ್ಕು ಕಿಮೀ ಟ್ರಾಫಿಕ್ ಜಾಮ್!

    ಚಾಮರಾಜನಗರ: ಬಂಡೀಪುರದಲ್ಲಿ ಒಂಟಿ ಸಲಗವೊಂದು (Elephant) ರಸ್ತೆಗೆ ಇಳಿದ ಪರಿಣಾಮ ಸುಮಾರು 3-4 ಕಿಲೋ ಮೀಟರ್ ಟ್ರಾಫಿಕ್ ಜಾಮ್ (Traffic Jam )ಉಂಟಾಗಿದೆ.

    ವೀಕೆಂಡ್ ಹಿನ್ನೆಲೆ ತಮಿಳುನಾಡಿನ ಊಟಿ ಮೂಲಕ ಕರ್ನಾಟಕಕ್ಕೆ ಬರುತ್ತಿರುವ ಪ್ರಯಾಣಿಕರು ಗಜರಾಜನ ಕಾಟಕ್ಕೆ ಹೈರಣಾಗಿದ್ದಾರೆ. ರಾತ್ರಿ 9 ಗಂಟೆಗೆ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಇನ್ನೂ ಹೆಚ್ಚಾಗಿದೆ.

    ಇತ್ತೀಚೆಗೆ ತರಕಾರಿ ವಾಹನಗಳಿಗಾಗಿ ಗಜರಾಜ ಆಗಾಗ ರಸ್ತೆಗಿಳಿಯುತ್ತಿದ್ದ. ಅದನ್ನೇ ಅಭ್ಯಾಸ ಮಾಡಿಕೊಂಡು ಈಗ ರಸ್ತೆಯಲ್ಲೇ ನಿಂತು ವಾಹನ ಸವಾರರಿಗೆ ಆತಂಕ ಮೂಡಿಸಿದ್ದಾನೆ.

    ಅರಣ್ಯ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾಡಾನೆಯನ್ನು ರಸ್ತೆಯಿಂದ ಪಕ್ಕಕ್ಕೆ ಸರಿಸಲು ಹರಸಾಹಸಪಡುತ್ತಿದ್ದಾರೆ.

  • ಜಾತ್ರೆಯಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ – ಎದ್ನೋ, ಬಿದ್ನೋ ಅಂತ ಓಡಿದ ಜನ

    ಜಾತ್ರೆಯಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ – ಎದ್ನೋ, ಬಿದ್ನೋ ಅಂತ ಓಡಿದ ಜನ

    – 29 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    ತಿರುವನಂತಪುರಂ: ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು (Elephant) ನಿಯಂತ್ರಣ ಕಳೆದುಕೊಂಡು ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿದ ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ (Malappuram) ಜಿಲ್ಲೆಯ ತಿರೂರಿನಲ್ಲಿ ನಡೆದಿದೆ.

    ವಾದ್ಯಗಳ ಸದ್ದು, ಜನರ ಗದ್ದಲದ ನಡುವೆ ನಿಯಂತ್ರಣ ಕಳೆದುಕೊಂಡ ಪಾಕ್ಕಾತು ಶ್ರೀಕುಟ್ಟನ್ (Paakkath Sreekuttan) ಹೆಸರಿನ ಆನೆ, ವ್ಯಕ್ತಿಯೊಬ್ಬನನ್ನ ಎತ್ತಿ ಎಸೆದಿದೆ. ಈ ವೇಳೆ ಗುಂಪಿನಲ್ಲಿದ್ದ ಜನ ಎದ್ನೋ ಬಿದ್ನೋ ಅಂತ ಓಡಿದ್ದಾರೆ. ಕೆಲವರು ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

    ನಸುಕಿನ 2:30ರ ಸುಮಾರಿಗೆ ಮಾವುತ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರಿಂದ ಹೆಚ್ಚಿನ ಹಾನಿ ತಪ್ಪಿದೆ. ಘಟನೆಯಲ್ಲಿ ಸುಮಾರು 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

    ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ ನೂರಾರು ಮಂದಿ ನೆರೆದಿದ್ದರು. ಉತ್ಸವದಲ್ಲಿ ಕನಿಷ್ಠ ಐದು ಆನೆಗಳು ಅಂಲಕಾರಭೂಷಿತವಾಗಿ ಪಾಲ್ಗೊಂಡಿದ್ದವು. ಈ ವೇಳೆ ಹಠಾತ್ತನೆ ಜನರ ಕಡೆಗೆ ನುಗ್ಗಿದ್ದ ಪಾಕ್ಕಾತು ಶ್ರೀಕುಟ್ಟನ್ ಹೆಸರಿನ ಆನೆ ದಾಳಿ ನಡೆಸಿದೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಮೂಲಗಳ ಪ್ರಕಾರ, ಆನೆ ದಾಳಿಗೆ ಒಳಗಾದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಕೋಟಕ್ಕಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

  • ನಾಗರಹೊಳೆ | ಬ್ಯಾರಿಕೇಡ್‌ಗೆ ಸಿಲುಕಿದ್ದ ಕಾಡಾನೆ ರಕ್ಷಣೆ!

    ನಾಗರಹೊಳೆ | ಬ್ಯಾರಿಕೇಡ್‌ಗೆ ಸಿಲುಕಿದ್ದ ಕಾಡಾನೆ ರಕ್ಷಣೆ!

    – ಬಂಡೀಪುರ ಸಫಾರಿಯಲ್ಲಿ `ಭೀಮ’ನ ದರ್ಶನ!

    ಮೈಸೂರು: ನಾಗರಹೊಳೆ ಅರಣ್ಯದ (Nagarahole Forest) ಅಂಚಿನ ವೀರನಹೊಸಹಳ್ಳಿ ವ್ಯಾಪ್ತಿಯ ಅರಸುಹೊಸಕಟ್ಟೆಯ ಕೆರೆಯಲ್ಲಿ ಸಿಮೆಂಟ್ ಕಂಬದ ಬ್ಯಾರಿಕೇಡ್ ದಾಟಲಾರದೆ ಆನೆ ಸಿಲುಕಿತ್ತು.

    ಶನಿವಾರ ರಾತ್ರಿ ಕಾಡಿನಿಂದ ಹೊರಬಂದಿದ್ದ ಕಾಡಾನೆ, ಇಂದು ಮುಂಜಾನೆ ವಾಪಸ್ ಕಾಡಿಗೆ ಹೋಗುವಾಗ ಕಂಬಕ್ಕೆ ಸಿಲುಕಿ ಪರದಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಸುಮಾರು 3 ಗಂಟೆಗಳಿಂದ ನರಳುತ್ತಿದ್ದ ಆನೆಯನ್ನು ಜೆಸಿಬಿ ಮೂಲಕ ರಕ್ಷಿಸಿದ್ದಾರೆ.

    ಮತ್ತೊಂದು ಕಡೆ, ಸಕಲೇಶಪುರದ ವಳಲಹಳ್ಳಿ ಗ್ರಾಮದಲ್ಲಿ ಹೆಣ್ಣಾನೆ, ಮರಿಗಳು ಹೆಚ್ಚಿರುವ ಕಾಡಾನೆಗಳು ಬೀಡು ಬಿಟ್ಟಿದ್ದು, ಕಾಡಾನೆಗಳನ್ನು ಅರಣ್ಯಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಹರಸಾಹಸ ಮಾಡಿದೆ.

    ಅತ್ತ, ಬಂಡೀಪುರದಲ್ಲಿ ಸಫಾರಿಗೆ ಹೋದವರಿಗೆ `ಬಂಡೀಪುರದ ಭೀಮಾ’ ಅಂತ ಪ್ರಸಿದ್ಧಿ ಪಡೆದಿರುವ ದೈತ್ಯಗಾತ್ರದ ಗಂಡು ಹುಲಿ ಪ್ರತ್ಯಕ್ಷವಾಗಿದೆ.