Tag: emergency

  • ತುರ್ತು ಪರಿಸ್ಥಿತಿ ಬಗ್ಗೆ ಶಶಿ ತರೂರ್ ಲೇಖನ – ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿ

    ತುರ್ತು ಪರಿಸ್ಥಿತಿ ಬಗ್ಗೆ ಶಶಿ ತರೂರ್ ಲೇಖನ – ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿ

    ನವದೆಹಲಿ: ಕಾಂಗ್ರೆಸ್ ಹಾಗೂ ಸಂಸದ ಶಶಿ ತರೂರ್ (Shashi Throor) ಮಧ್ಯೆ ಫೈಟ್ ಮುಂದುವರಿದಿದೆ. ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಕ್ಕೆ ಇಟ್ಟಿರೋ ಸಂಸದ ಶಶಿ ತರೂರ್, ಪಕ್ಷದಲ್ಲೇ ಇದ್ದುಕೊಂಡು ಡ್ಯಾಮೇಜ್ ಮಾಡಿದ್ದಾರೆ. ಮಲಯಾಳಂ ಪತ್ರಿಕೆಯೊಂದಕ್ಕೆ ಬರೆದಿರೋ ಲೇಖನದಲ್ಲಿ ತುರ್ತು ಪರಿಸ್ಥಿತಿ ಪ್ರಸ್ತಾಪಿಸಿ, ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ತುರ್ತು ಪರಿಸ್ಥಿತಿ ಹೇರಿಕೆ ಇಂದಿರಾ ಗಾಂಧಿ ಅವರ ಸರ್ವಾಧಿಕಾರಿ ವಿಧಾನ. ಇಂದಿರಾ ಮಗ ಸಂಜಯ್‌ಗಾಂಧಿ ಸಂತಾನ ಹರಣ ಹೆಸರಿನಲ್ಲಿ ನಡೆಸಿದ್ದ ದೌರ್ಜನ್ಯವನ್ನೂ ಉಲ್ಲೇಖಿಸಿ, ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಮಾಡಿದ್ದಾರೆ. ಬಡ ಗ್ರಾಮೀಣ ಭಾಗದಲ್ಲಿ ಹಿಂಸೆ, ಬಲವಂತದಿಂದ ಸಂತಾನಹರಣ ಮಾಡಿಸಲಾಗುತ್ತಿತ್ತು. ಕೊಳಗೇರಿಗಳನ್ನು ಕರುಣೆಯೇ ಇಲ್ಲದೆ ನೆಲಸಮಗೊಳಿಸಲಾಯಿತು. ಸಾವಿರಾರು ಜನರು ನಿರ್ವಸತಿಗರಾದರು ಎಂದು ಶಶಿತರೂರ್ ಬರೆದಿದ್ದಾರೆ. 1975ರಲ್ಲಿದ್ದ ಭಾರತವೇ ಬೇರೆ, ಈಗ ಇರುವ ಭಾರತವೇ ಬೇರೆ ಎನ್ನುವ ಮೂಲಕ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಶಶಿ ತರೂರ್ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ನಮ್ಮಿಬ್ಬರನ್ನು ದೂರ ಮಾಡ್ತಾರೆ ಎಂಬ ಭಯದಲ್ಲಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ

    ಇದು ಮತ್ತೆ ಕಾಂಗ್ರೆಸ್ ಹೈಕಮಾಂಡ್ ಕಣ್ಣು ಕೆಂಪಗಾಗಿಸಿದೆ. ಈ ಬಗ್ಗೆ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿಕಾರಿದ್ದು, ಸ್ವಾತಂತ್ರ‍್ಯವು ಎಲ್ಲರಿಗೂ ಮುಕ್ತವಲ್ಲ. ವಿಶೇಷವಾಗಿ ಪರಭಕ್ಷಕಗಳು ದೇಶಭಕ್ತಿಯನ್ನು ಗರಿಗಳಾಗಿ ಧರಿಸಿದಾಗ ಸ್ವಾತಂತ್ರ‍್ಯ ಮುಕ್ತವಲ್ಲ ಅಂದಿದ್ದಾರೆ. ಇದನ್ನೂ ಓದಿ: ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್

  • ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು: ಶಶಿ ತರೂರ್‌ಗೆ ಖರ್ಗೆ ಟಾಂಗ್

    ಕಾಂಗ್ರೆಸ್‌ಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು: ಶಶಿ ತರೂರ್‌ಗೆ ಖರ್ಗೆ ಟಾಂಗ್

    – ದೇಶದಲ್ಲಿ ಈಗ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ
    – ಬಿಜೆಪಿ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ʼಸಂವಿಧಾನ ಹತ್ಯಾ ದಿವಸ್‌ʼ ನಾಟಕ

    ನವದೆಹಲಿ: ದೇಶ ಮೊದಲು, ಪಕ್ಷ ನಂತರ ಎಂದು ನಾವು ಹೇಳಿದ್ದೇವೆ. ಕೆಲವು ಜನರು ‘ಮೋದಿ ಮೊದಲು, ದೇಶ ನಂತರ’ ಎಂದು ಭಾವಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪರೋಕ್ಷವಾಗಿ‌ ಕಾಂಗ್ರೆಸ್ ಸಂಸದ ಶಶಿ ತರೂರ್‌ಗೆ  (Shashi Tharoor) ಟಾಂಗ್ ಕೊಟ್ಟಿದ್ದಾರೆ.

    ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹೊಗಳಿ ಇತ್ತಿಚೇಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬರೆದ ಲೇಖನದ ಬಗ್ಗೆ ಮಾತನಾಡಿದ ಅವರು, ಶಶಿ ತರೂರ್ ಇಂಗ್ಲಿಷ್‌ನಲ್ಲಿ ತುಂಬಾ ನಿರರ್ಗಳವಾಗಿ ಮಾತನಾಡುತ್ತಾರೆ. ನನಗೆ ಇಂಗ್ಲಿಷ್ ಚೆನ್ನಾಗಿ ಓದಲು ಬರುವುದಿಲ್ಲ, ಅವರ ಭಾಷೆ ತುಂಬಾ ಚೆನ್ನಾಗಿದೆ. ಅದಕ್ಕಾಗಿಯೇ ನಾವು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದೇವೆ ಎಂದು ಹೇಳಿದರು. 26 ನಾಗರಿಕರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಖರ್ಗೆ, ಸಶಸ್ತ್ರ ಪಡೆಗಳಿಗೆ ಬೆಂಬಲ ನೀಡುವಲ್ಲಿ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ನಿಂತಿವೆ ಎಂದು ಹೇಳಿದರು. ಇದನ್ನೂ ಓದಿ: Bengaluru | ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

    ದೇಶದಲ್ಲಿ ಈಗ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ನಮ್ಮ ‘ಸಂವಿಧಾನ ಬಚಾವೋ ಯಾತ್ರೆ’ಯಿಂದ ದಿಕ್ಕೆಟ್ಟಿದ್ದ ಬಿಜೆಪಿ 50 ವರ್ಷಗಳ ಹಿಂದಿನ ತುರ್ತುಪರಿಸ್ಥಿತಿಯ ಬಗ್ಗೆ ಮಾತನಾಡತೊಡಗಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಹೆಚ್ಚಿನದನ್ನು ಮಾಡಲು ಸಾಧ್ಯವಾಗದವರೂ ನಿರುದ್ಯೋಗ, ಹಣದುಬ್ಬರ, ನೋಟು ಅಮಾನ್ಯೀಕರಣದಂತಹ ಸಮಸ್ಯೆಗಳ ಬಗ್ಗೆ ಉತ್ತರ ನೀಡಲಾಗದವರು ತಮ್ಮ ವೈಫಲ್ಯಗಳನ್ನು ಮುಚ್ಚಿಡಲು ಹಾಗೂ ಪದೇ ಪದೇ ಸುಳ್ಳುಗಳನ್ನು ಹೇಳಿ ‘ಸಂವಿಧಾನ ಹತ್ಯಾ ದಿವಸ್’ ಅಂತಾ ಆಚರಿಸುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ಇದನ್ನೂ ಓದಿ: ಮಾವು ಬೆಳೆಗೆ ಬೆಂಬಲ ಬೆಲೆ ಕೊಡಿಸಿದ್ದು ಕುಮಾರಣ್ಣ, ಡಿಕೆ ಬ್ರದರ್ಸ್ ಏನ್ಮಾಡ್ತಿದ್ದಾರೆ: ನಿಖಿಲ್‌ ಕಿಡಿ

    ತುರ್ತು ಪರಿಸ್ಥಿತಿಯ 50ನೇ ವರ್ಷವನ್ನು ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸುವಂತೆ ಎಲ್ಲ ರಾಜ್ಯಗಳಿಗೂ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ಸುತ್ತೋಲೆ ಹೊರಡಿಸಿದ್ದಾರೆ. ಈಗ ಸಂವಿಧಾನ ಉಳಿಸುವ ಬಗ್ಗೆ ಮಾತನಾಡುತ್ತಿರುವವರು ಮುಗಿದು ಹೋಗಿರುವ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸುತ್ತಿದ್ದಾರೆ. ಭಾರತದ ಸ್ವಾತಂತ್ರ‍್ಯ ಚಳವಳಿಯಲ್ಲಿ ಯಾವುದೇ ಕೊಡುಗೆ ನೀಡದವರು ಈಗ ಸಂವಿಧಾನ ರಚನೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶ | ಕುಲುವಿನಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ – ಉಕ್ಕಿ ಹರಿದ ಪಾರ್ವತಿ ನದಿ

  • ತುರ್ತು ಪರಿಸ್ಥಿತಿ ಕಾಂಗ್ರೆಸ್‌ನ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯ ಪ್ರತಿಬಿಂಬವಾಗಿತ್ತು: ಅಮಿತ್ ಶಾ

    ತುರ್ತು ಪರಿಸ್ಥಿತಿ ಕಾಂಗ್ರೆಸ್‌ನ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯ ಪ್ರತಿಬಿಂಬವಾಗಿತ್ತು: ಅಮಿತ್ ಶಾ

    – ತುರ್ತು ಪರಿಸ್ಥಿತಿ ಕಾಂಗ್ರೆಸ್‌ನ ಅಧಿಕಾರ ದಾಹದ ಅನ್ಯಾಯದ ಯುಗ

    ನವದೆಹಲಿ: ತುರ್ತು ಪರಿಸ್ಥಿತಿ (Emergency) ಕಾಂಗ್ರೆಸ್ (Congress) ಪಕ್ಷದ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯ ಪ್ರತಿಬಿಂಬವಾಗಿತ್ತು. ಮೋದಿ (Narendra Modi) ಸರ್ಕಾರ ಈ ದಿನವನ್ನು ‘ಸಂವಿಧಾನ ಹತ್ಯೆ ದಿವಸ್’ ಎಂದು ಆಚರಿಸುತ್ತಿದೆ. ಈ ಮೂಲಕ ತುರ್ತು ಪರಿಸ್ಥಿತಿಯ ಕರಾಳತೆಯ ಬಗ್ಗೆ ದೇಶದ ಯುವ ಪೀಳಿಗೆಗೆ ಅರಿವು ಮೂಡಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ. ಪೋಸ್ಟ್‌ನಲ್ಲಿ, ಇಂದಿರಾ ಗಾಂಧಿ ಸರ್ಕಾರ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 50 ವರ್ಷ ಕಳೆದಿದೆ. ಆಳುವವರು ಸರ್ವಾಧಿಕಾರಿಗಳಾದಾಗ, ಅವರನ್ನು ಉರುಳಿಸುವ ಶಕ್ತಿಯನ್ನು ಜನರು ಹೊಂದಿರುತ್ತಾರೆ ಎಂಬುದನ್ನು ಈ ದಿನ ನೆನಪಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಯಾವ ಭಾರತೀಯನು ಎಂದಿಗೂ ಮರೆಯುವುದಿಲ್ಲ: ತುರ್ತು ಪರಿಸ್ಥಿತಿ ಕರಾಳತೆ ನೆನೆದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

    ತುರ್ತು ಪರಿಸ್ಥಿತಿ ಸಮಯದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ನ್ಯಾಯಾಂಗದ ಕೈಗಳನ್ನು ಕಟ್ಟಿ ಹಾಕಲಾಯಿತು. ಸಾಮಾಜಿಕ ಕಾರ್ಯಕರ್ತರನ್ನು ಜೈಲಿಗೆ ಹಾಕಲಾಯಿತು. ಈ ಸಮಯದಲ್ಲಿ ದೇಶದ ಜನ ಇಂದಿರಾ ಗಾಂಧಿಯವರ ವಿರುದ್ಧ ಅಧಿಕಾರ ತ್ಯೆಜಿಸುವಂತೆ ಧ್ವನಿ ಎತ್ತಿದರು. ಸರ್ವಾಧಿಕಾರಿ ಕಾಂಗ್ರೆಸ್‌ನ್ನು ಬೇರುಸಹಿತ ಕಿತ್ತುಹಾಕಿದರು. ಈ ಹೋರಾಟದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ವೀರರಿಗೆ ನಾನು ಗೌರವಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

    ಕಳೆದ ವರ್ಷ ಜೂನ್ 25ನ್ನು ‘ಸಂವಿಧಾನ ಹತ್ಯೆ ದಿವಸ್’ ಎಂದು ಆಚರಿಸುವುದಾಗಿ ಅಮಿತ್‌ ಶಾ ಘೋಷಿಸಿದ್ದರು. ʻಸಂವಿಧಾನ ಹತ್ಯೆ ದಿವಸ್’ ಆಚರಣೆ ಪ್ರತಿಯೊಬ್ಬ ಭಾರತೀಯನಲ್ಲೂ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಬಗೆಗಿನ ಚಿಂತನೆಗಳನ್ನು ಜೀವಂತವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೇ ಕಾಂಗ್ರೆಸ್‌ನಂತಹ ಸರ್ವಾಧಿಕಾರಿ ಶಕ್ತಿಗಳ ಭಯಾನಕತೆಯನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಫಸ್ಟ್‌ ಟೈಂ ಲಂಡನ್‌ಗೆ ಕರ್ನಾಟಕದ ನೇರಳೆ ಹಣ್ಣು ರಫ್ತು

  • ಯಾವ ಭಾರತೀಯನು ಎಂದಿಗೂ ಮರೆಯುವುದಿಲ್ಲ: ತುರ್ತು ಪರಿಸ್ಥಿತಿ ಕರಾಳತೆ ನೆನೆದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

    ಯಾವ ಭಾರತೀಯನು ಎಂದಿಗೂ ಮರೆಯುವುದಿಲ್ಲ: ತುರ್ತು ಪರಿಸ್ಥಿತಿ ಕರಾಳತೆ ನೆನೆದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

    – ತುರ್ತು ಪರಿಸ್ಥಿತಿ ಕರಾಳತೆ ಅನುಭವಿಸಿದವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ: ಪಿಎಂ ಕರೆ

    ನವದೆಹಲಿ: ಯಾವ ಭಾರತೀಯನು ಎಂದಿಗೂ ಮರೆಯುವುದಿಲ್ಲ ಎಂದು ಇಂದಿರಾ ಗಾಂಧಿ ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭ ನೆನಪಿಸಿಕೊಂಡು ಪ್ರಧಾನಿ ಮೋದಿ (PM Modi) ವಾಗ್ದಾಳಿ ನಡೆಸಿದ್ದಾರೆ.

    ದೇಶದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿ ಇಂದಿಗೆ 50 ವರ್ಷ. ಪ್ರಧಾನಿ ನರೇಂದ್ರ ಮೋದಿ ಆ ವರ್ಷಗಳಲ್ಲಿನ ತಮ್ಮ ಅನುಭವ ಮತ್ತು ನಾಯಕನಾಗಿ ಅವರನ್ನು ಹೇಗೆ ರೂಪಿಸಿತು ಎಂಬುದನ್ನು ವಿವರಿಸುವ ಪುಸ್ತಕವನ್ನು ಪ್ರಕಟಿಸಿದ್ದಾರೆ. ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಪ್ರಸ್ತುತಪಡಿಸಿದ ‘ದಿ ಎಮರ್ಜೆನ್ಸಿ ಡೈರೀಸ್’ನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಇಂದು ಮಧ್ಯಾಹ್ನ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ

    ಮೋದಿ ಎಕ್ಸ್‌ ಪೋಸ್ಟ್‌ನಲ್ಲೇನಿದೆ?
    ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬಿವೆ. ಭಾರತದ ಜನರು ಈ ದಿನವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುತ್ತಾರೆ. ಈ ದಿನದಂದು, ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳನ್ನು ಬದಿಗಿಡಲಾಯಿತು, ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು, ಪತ್ರಿಕಾ ಸ್ವಾತಂತ್ರ್ಯವನ್ನು ಅಳಿಸಿಹಾಕಲಾಯಿತು ಮತ್ತು ಹಲವಾರು ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಜೈಲಿಗೆ ಹಾಕಲಾಯಿತು. ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವವನ್ನು ಬಂಧನದಲ್ಲಿ ಇರಿಸಿದಂತೆ ಇತ್ತು!

    ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ದೃಢವಾಗಿ ನಿಂತ ಪ್ರತಿಯೊಬ್ಬ ವ್ಯಕ್ತಿಗೂ ನಾವು ನಮಸ್ಕರಿಸುತ್ತೇವೆ! ಭಾರತದಾದ್ಯಂತ, ಎಲ್ಲಾ ಹಂತಗಳಿಂದ, ವೈವಿಧ್ಯಮಯ ಸಿದ್ಧಾಂತಗಳಿಂದ ಬಂದ ಜನರು ಇವರು, ಒಂದೇ ಗುರಿಯೊಂದಿಗೆ ಪರಸ್ಪರ ನಿಕಟವಾಗಿ ಕೆಲಸ ಮಾಡಿದರು. ಭಾರತದ ಪ್ರಜಾಪ್ರಭುತ್ವದ ರಚನೆಯನ್ನು ರಕ್ಷಿಸುವುದು ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನು ಮುಡಿಪಾಗಿಟ್ಟ ಆದರ್ಶಗಳನ್ನು ಸಂರಕ್ಷಿಸುವುದು. ಆಗಿನ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಮತ್ತು ಹೊಸ ಚುನಾವಣೆಗಳಿಗೆ ಕರೆ ನೀಡಬೇಕಾಗಿತ್ತು ಎಂದು ಖಚಿತಪಡಿಸಿದ್ದು ಅವರ ಸಾಮೂಹಿಕ ಹೋರಾಟ, ಆದರೆ ಅವರು ಅದನ್ನು ತೀವ್ರವಾಗಿ ಸೋತರು.

    ನಮ್ಮ ಸಂವಿಧಾನದಲ್ಲಿನ ತತ್ವಗಳನ್ನು ಬಲಪಡಿಸುವ ಮತ್ತು ವಿಕಸಿತ ಭಾರತದ ನಮ್ಮ ದೃಷ್ಟಿಕೋನವನ್ನು ಸಾಕಾರಗೊಳಿಸಲು ಒಟ್ಟಾಗಿ ಕೆಲಸ ಮಾಡುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ನಾವು ಪ್ರಗತಿಯ ಹೊಸ ಎತ್ತರವನ್ನು ಏರೋಣ ಮತ್ತು ಬಡವರು ಮತ್ತು ದೀನದಲಿತರ ಕನಸುಗಳನ್ನು ನನಸಾಗಿಸೋಣ.

    ‘ದಿ ಎಮರ್ಜೆನ್ಸಿ ಡೈರೀಸ್’ ತುರ್ತು ಪರಿಸ್ಥಿತಿಯ ವರ್ಷಗಳಲ್ಲಿ ನನ್ನ ಪ್ರಯಾಣವನ್ನು ವಿವರಿಸುತ್ತದೆ. ಅದು ಆ ಕಾಲದ ಅನೇಕ ನೆನಪುಗಳನ್ನು ಮರಳಿ ತಂದಿತು. ತುರ್ತು ಪರಿಸ್ಥಿತಿಯ ಆ ಕರಾಳ ದಿನಗಳನ್ನು ನೆನಪಿಸಿಕೊಳ್ಳುವ ಎಲ್ಲರೂ ಅಥವಾ ಆ ಸಮಯದಲ್ಲಿ ಬಳಲಿದ ಕುಟುಂಬಗಳು ತಮ್ಮ ಅನುಭವಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲು ನಾನು ಕರೆ ನೀಡುತ್ತೇನೆ. ಇದು 1975 ರಿಂದ 1977 ರವರೆಗಿನ ನಾಚಿಕೆಗೇಡಿನ ಸಂದರ್ಭವು ಯುವಕರಲ್ಲಿ ಜಾಗೃತಿ ಮೂಡಿಸುತ್ತದೆ. ಇದನ್ನೂ ಓದಿ: ಶಾಸಕರ ಅಸಮಾಧಾನ ಎಲ್ಲವನ್ನೂ ಸಿಎಂ ಹ್ಯಾಂಡಲ್ ಮಾಡ್ತಾರೆ: ಸಚಿವ ಎಂಬಿ ಪಾಟೀಲ್

    ತುರ್ತು ಪರಿಸ್ಥಿತಿ ಹೇರಿದಾಗ, ನಾನು ಯುವ ಆರ್‌ಎಸ್‌ಎಸ್ ಪ್ರಚಾರಕನಾಗಿದ್ದೆ. ತುರ್ತು ಪರಿಸ್ಥಿತಿ ವಿರೋಧಿ ಚಳುವಳಿ ನನಗೆ ಕಲಿಕೆಯ ಅನುಭವವಾಗಿತ್ತು. ಇದು ನಮ್ಮ ಪ್ರಜಾಪ್ರಭುತ್ವ ಚೌಕಟ್ಟನ್ನು ಸಂರಕ್ಷಿಸುವ ಚೈತನ್ಯವನ್ನು ಪುನರುಚ್ಚರಿಸಿತು. ಅದೇ ಸಮಯದಲ್ಲಿ, ರಾಜಕೀಯ ವರ್ಣಪಟಲದಾದ್ಯಂತ ಜನರಿಂದ ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು. ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಆ ಅನುಭವಗಳಲ್ಲಿ ಕೆಲವನ್ನು ಪುಸ್ತಕ ರೂಪದಲ್ಲಿ ಸಂಗ್ರಹಿಸಿದೆ ಎಂದು ನನಗೆ ಸಂತೋಷವಾಗಿದೆ. ಅದರ ಮುನ್ನುಡಿಯನ್ನು ಸ್ವತಃ ತುರ್ತು ಪರಿಸ್ಥಿತಿ ವಿರೋಧಿ ಚಳುವಳಿಯ ಪ್ರಮುಖರಾದ ಹೆಚ್‌.ಡಿ.ದೇವೇಗೌಡರು ಬರೆದಿದ್ದಾರೆ ಎಂದು ಮೋದಿ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ

    `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ

    ಇಸ್ಲಾಮಾಬಾದ್: ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ’ದಿಂದಾಗಿ ಪಾಕ್ ತತ್ತರಿಸಿ ಹೋಗಿದ್ದು, ಪಾಕಿಸ್ತಾನದಲ್ಲಿ (Pakistan) ಸದ್ಯ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.

    ಏ.22ರಂದು ಪಹಲ್ಗಾಮ್‌ನ (Pahalgam Terrorist Attack) ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣತೆತ್ತರು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದರ ಮಧ್ಯೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸೇಡು ತೀರಿಸಿಕೊಂಡಿದೆ.ಇದನ್ನೂ ಓದಿ:

    ಭಾರತದ ವಾಯುದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ. ಹೀಗಾಗಿ ಪಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಆದರೆ ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಇದರ ನಡುವೆ ಪಾಕ್ ಉಗ್ರರ ಸಾವಿನ ಅಂಕಿ-ಸಂಖ್ಯೆಯನ್ನು ಮುಚ್ಚಿಡಲು ಪ್ರಯತ್ನಿಸಿದೆ. ಭಾರತದ ಏರ್‌ಸ್ಟ್ರೈಕ್‌ನಲ್ಲಿ 26 ಜನರು ಸಾವನ್ನಪ್ಪಿದ್ದು, 40 ಜನರಿಗೆ ಗಾಯವಾಗಿದೆ. 6 ಸ್ಥಳಗಳ ಮೇಲೆ ದಾಳಿ ನಡೆದಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.ಇದನ್ನೂ ಓದಿ:

  • ತುರ್ತು ಪರಿಸ್ಥಿತಿಯ ಕಳಂಕವನ್ನು ಕಾಂಗ್ರೆಸ್‌ನಿಂದ ಎಂದಿಗೂ ಅಳಿಸಲು ಸಾಧ್ಯವಿಲ್ಲ: ಮೋದಿ

    ತುರ್ತು ಪರಿಸ್ಥಿತಿಯ ಕಳಂಕವನ್ನು ಕಾಂಗ್ರೆಸ್‌ನಿಂದ ಎಂದಿಗೂ ಅಳಿಸಲು ಸಾಧ್ಯವಿಲ್ಲ: ಮೋದಿ

    ನವದೆಹಲಿ: ಕಾಂಗ್ರೆಸ್‌ (Congress) ಹಿಂದೆ ಹೇರಿದ್ದ ತುರ್ತು ಪರಿಸ್ಥಿತಿಯ (Emergency) ಕಳಂಕವನ್ನು ಎಂದಿಗೂ ಅಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಟೀಕಿಸಿದ್ದಾರೆ.

    ಸಂಸತ್ತಿನಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಅವರು ಉತ್ತರಿಸಿದರು. ನಾವು ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದೇವೆ. ಈ ವೇಳೆ ಹಿಂತಿರುಗಿ ನೋಡಿದರೆ, ಭಾರತದ ಸಂವಿಧಾನವು 25 ವರ್ಷಗಳನ್ನು ಪೂರೈಸಿದಾಗ, ತುರ್ತು ಪರಿಸ್ಥಿತಿಯನ್ನು ಬಳಸಿ ಅದನ್ನು ಕಿತ್ತುಕೊಂಡು ಭಾರತವನ್ನು ಜೈಲಿನಂತೆ ಮಾಡಲಾಯಿತು. ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ಸಂವಿಧಾನದ ಬಗ್ಗೆ ಚರ್ಚೆ ನಡೆಯುವಾಗ ನಾವು ಯಾವಾಗಲೂ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತೇವೆ. ಇದನ್ನು ಕಾಂಗ್ರೆಸ್‌ನಿಂದ ಅಳಿಸಲು ಸಾಧ್ಯವಿಲ್ಲ ಎಂದು ಅವರು ಕುಟುಕಿದ್ದಾರೆ.

    ಕಾಂಗ್ರೆಸ್ ಪಕ್ಷವು ರಾಜಕೀಯವಾಗಿ ಸೋಲನುಭವಿಸುತ್ತಿರುವಾಗ ತುರ್ತು ಪರಿಸ್ಥಿತಿ ಹೇರಿತ್ತು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂವಿಧಾನದಲ್ಲಿ ನಂಬಿಕೆ ಇರಲಿಲ್ಲ. ಇಂದಿರಾ ಗಾಂಧಿಯವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಲಾಯಿತು. ಆ ನಂತರ ಅವರು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಕೋಪದಿಂದ ತುರ್ತು ಪರಿಸ್ಥಿತಿಯನ್ನು ಹೇರಿದರು. ಅವರು ಸಂವಿಧಾನವನ್ನು ದುರುಪಯೋಗಪಡಿಸಿಕೊಂಡರು ಎಂದು ವಾಗ್ದಾಳಿ ನಡೆಸಿದ್ದಾರೆ.

    ಆ ಅನ್ಯಾಯದ ಸಮಯದಲ್ಲಿ ನೂರಾರು ಜನರನ್ನು ಜೈಲಿಗೆ ತಳ್ಳಲಾಯಿತು. ಸರ್ಕಾರ ಜನರ ಮಾತನ್ನು ಕೇಳಲಿಲ್ಲ. ಅಲ್ಲದೇ ನ್ಯಾಯಕ್ಕಾಗಿ ಹೋರಾಡುವ ಮಹಿಳೆಗೆ ಸಹಾಯ ಮಾಡುವ ಬದಲು ಅವರು ಕೆಟ್ಟ ಜನರನ್ನು ಬೆಂಬಲಿಸಿದರು. ನೆಹರೂ ಜಿ ಅದನ್ನು ಪ್ರಾರಂಭಿಸಿದರು, ಇಂದಿರಾಜಿ ಅದನ್ನು ಮುಂದಕ್ಕೆ ಕೊಂಡೊಯ್ದರು. ನಂತರ ರಾಜೀವ್ ಗಾಂಧಿಯವರಿಗೂ ಅದರ ರುಚಿ ಸಿಕ್ಕಿತು. ಮುಂದಿನ ಪೀಳಿಗೆಯೂ ಅದನ್ನೇ ಮುಂದುವರಿಸುತ್ತದೆ ಎಂದಿದ್ದಾರೆ.

  • ಕಂಗನಾಗೆ ನಿರಾಳ: ಬಾಂಬೆ ಹೈಕೋರ್ಟ್ ಹೇಳಿದ್ದೇನು?

    ಕಂಗನಾಗೆ ನಿರಾಳ: ಬಾಂಬೆ ಹೈಕೋರ್ಟ್ ಹೇಳಿದ್ದೇನು?

    ಕಂಗನಾ ರಣಾವತ್ (Kangana Ranaut) ನಟನೆಯ ಬಹುನಿರೀಕ್ಷಿತ ‘ಎಮರ್ಜೆನ್ಸಿ’ (Emergency Film) ಸಿನಿಮಾಗೆ ಕೇಂದ್ರ ಸೆನ್ಸಾರ್ ಮಂಡಳಿಯು ಸರ್ಟಿಫಿಕೇಟ್ ಕೊಡದೇ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಕಂಗನಾ ಬಾಂಬೆ ಹೈಕೋರ್ಟ್ (Court) ಮೆಟ್ಟಿಲು ಏರಿದ್ದರು. ಈಗ ಹೈರ್ಕೋಟ್ ಸೆನ್ಸಾರ್ ಮಂಡಳಿಗೆ ಸೂಚನೆ ನೀಡಿದ್ದು, ಒಂದು ವಾರದ ಒಳಗೆ ಪ್ರಮಾಣ ಪತ್ರದ ತೀರ್ಮಾನ ತಗೆದುಕೊಳ್ಳಬೇಕು ಎಂದಿದೆ.

    ಮೊನ್ನೆಯಷ್ಟೇ ಸಿನಿಮಾದ ಟ್ರೈಲರ್ ಈಗ ರಿಲೀಸ್ ಆಗಿದೆ. ಇಂದಿರಾ ಗಾಂಧಿ (Indira Gandhi) ಪಾತ್ರದಲ್ಲಿ ಕಂಗನಾ ಪರಕಾಯ ಪ್ರವೇಶ ಮಾಡಿದ್ದಾರೆ. ಇಂಡಿಯಾ ಅಂದರೆ ಇಂದಿರಾ ಎಂದು ಖಡಕ್ ಆಗಿ ನಟಿ ಡೈಲಾಗ್ ಹೊಡೆದಿದ್ದಾರೆ.

    1975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ ಐತಿಹಾಸಿಕ ಸನ್ನಿವೇಶದ ಚಿತ್ರಣ ಹೊಂದಿರುವ ಸಿನಿಮಾ ಇದಾಗಿದೆ. ರಾಜಕೀಯ ಮತ್ತು ಭಾವನಾತ್ಮಕ ಸನ್ನಿವೇಶಗಳನ್ನು ಇಂದಿರಾ ಗಾಂಧಿ ಅವರು ಎದುರಿಸಿದ ರೀತಿಯನ್ನು ಟ್ರೈಲರ್ ಮೂಲಕ ಝಲಕ್ ತೋರಿಸಲಾಗಿದೆ.

    ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ರಾಷ್ಟ್ರ ವ್ಯಾಪಿ ನಡೆದ ಪ್ರತಿಭಟನೆಗಳು, ಕರ್ಫ್ಯೂ, ರಾಜಕೀಯ ವಿರೋಧ ಹೀಗೆ ಹಲವು ಸನ್ನಿವೇಶಗಳನ್ನು ಟ್ರೈಲರ್‌ನಲ್ಲಿ ಹೈಲೆಟ್ ಮಾಡಲಾಗಿದೆ. ಕಂಗನಾ ‘ಇಂದಿರಾ ಗಾಂಧಿ’ ಪಾತ್ರಕ್ಕೆ ಜೀವ ತುಂಬಿದ್ದಾರೆ. ಇಂಡಿಯಾ ಅಂದರೆ ಇಂದಿರಾ, ಇಂದಿರಾ ಅಂದರೆ ಇಂಡಿಯಾ ಎಂದಿದ್ದಾರೆ ಕಂಗನಾ. ದೇಶದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಮಹಿಳೆ. ಆದರೆ, ಇತಿಹಾಸದಲ್ಲಿ ಅವರು ಬರೆದ ಕರಾಳ ಅಧ್ಯಾಯ! (ಎಮರ್ಜೆನ್ಸಿ). ಸಾಕ್ಷಿಯ ಮಹತ್ವಾಕಾಂಕ್ಷೆಯು ದಬ್ಬಾಳಿಕೆಯೊಂದಿಗೆ ಘರ್ಷಿಸುತ್ತದೆ ಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಈ ಟ್ರೈಲರ್ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಸಿನಿಮಾ ಕುರಿತು ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ.

     

    ಈ ಚಿತ್ರದಲ್ಲಿ ಕಂಗನಾ ಜೊತೆ ಅನುಪಮ್ ಖೇರ್, ಮಹಿಮಾ ಚೌಧರಿ, ಶ್ರೇಯಸ್ ತಲ್ಪಾಡೆ ಸೇರಿದಂತೆ ಅನೇಕರು ನಟಿಸಿದ್ದಾರೆ. ಇದೇ ಸೆ.6ರಂದು ‘ಎಮೆರ್ಜೆನ್ಸಿ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸುವ ಜೊತೆ ನಿರ್ದೇಶನ ಕೂಡ ಮಾಡಿದ್ದಾರೆ ಕಂಗನಾ. ರಿಂಕು ಪಿಟ್ಟಿ ಜೊತೆ ಸಹ ನಿರ್ಮಾಪಕಿಯಾಗಿ ಕೂಡ ಕಂಗನಾ ಸಾಥ್ ನೀಡಿದ್ದಾರೆ.

  • ಸಿಖ್ಖರ ಅವಹೇಳನ ಆರೋಪ – ಚಂಡೀಗಢ ಕೋರ್ಟ್‌ನಿಂದ ಕಂಗನಾಗೆ ʻಎಮರ್ಜೆನ್ಸಿʼ ನೋಟಿಸ್‌!

    ಸಿಖ್ಖರ ಅವಹೇಳನ ಆರೋಪ – ಚಂಡೀಗಢ ಕೋರ್ಟ್‌ನಿಂದ ಕಂಗನಾಗೆ ʻಎಮರ್ಜೆನ್ಸಿʼ ನೋಟಿಸ್‌!

    ಚಂಡೀಗಢ: ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಅವರು ಸದ್ಯ ಟೆನ್ಶನ್‌ನಲ್ಲಿದ್ದಾರೆ. ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂಬಂಧಿಸಿದ ‘ಎಮರ್ಜೆನ್ಸಿ’ ಸಿನಿಮಾವನ್ನು (Emergency cinema) ನಟಿ ಕಂಗನಾ ಅವರು ನಿರ್ದೇಶಿಸಿ, ನಿರ್ಮಾಣ ಮಾಡಿದ್ದಾರೆ. ಜೊತೆಗೆ ಇದರಲ್ಲಿ ಇಂದಿರಾ ಗಾಂಧಿ  ಪಾತ್ರವನ್ನು ಕೂಡ ಅವರೇ ನಿಭಾಯಿಸಿದ್ದಾರೆ. ಆದರೆ ಅಂದುಕೊಂಡ ಸಮಯಕ್ಕೆ ಈ ಸಿನಿಮಾ ಬಿಡುಗಡೆ ಮಾಡಲು ಆಗಿಲ್ಲ. ಒಂದಿಲ್ಲೊಂದು ವಿವಾದಗಳ ಸುಳಿಗೆ ಸಿನಿಮಾ ಸಿಲುಕುತ್ತಲೇ ಇದೆ. ಈ ನಡುವೆ ಹೊಸದೊಂದಿ ಟೆನ್ಶನ್‌ ಶುರುವಾಗಿದೆ.

    ವಿವಾದಾತ್ಮಕ ಚಿತ್ರ ʻಎಮರ್ಜೆನ್ಸಿʼಗೆ ಸಂಬಂಧಿಸಿದಂತೆ ಕಂಗನಾ ಅವರಿಗೆ ಚಂಡೀಗಢದ ಜಿಲ್ಲಾ ನ್ಯಾಯಾಲಯ (Chandigarh Court) ನೋಟಿಸ್ ಜಾರಿ ಮಾಡಿದೆ. ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು, ಈ ಚಿತ್ರದಲ್ಲಿ ಸಿಖ್ಖರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಖ್ಖರ ಚಿತ್ರಣವನ್ನು ತಪ್ಪಾಗಿ ಪ್ರದರ್ಶಿಸಲಾಗಿದೆ. ಜೊತೆಗೆ ಸಿಖ್‌ ಸಮುದಾಯದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹಾಗಾಗಿ ಕಂಗನಾ ವಿರುದ್ಧ ಕೇಸ್‌ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ಇದನ್ನೂ ಓದಿ: Bigg Boss Kannada 11: ವೈರಲ್‌ ಆಗ್ತಿದೆ ದೊಡ್ಮನೆ ಸ್ಪರ್ಧಿಗಳ ಸಂಭಾವ್ಯ ಪಟ್ಟಿ

    ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌ ಕಂಗನಾ ಅವರಿಗೆ ನೋಟಿಸ್‌ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 5ಕ್ಕೆ ಮುಂದೂಡಿದೆ. ಇದನ್ನೂ ಓದಿ: ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಹಿನಾ ಖಾನ್ ರ‍್ಯಾಂಪ್ ವಾಕ್- ಮದುಮಗಳಂತೆ ಮಿಂಚಿದ ನಟಿ

    ಸಿಖ್‌ ಸಂಘಟನೆಗಳಿಂದಲೂ ವ್ಯಾಪಕ ವಿರೋಧ:
    ʻಎಮರ್ಜೆನ್ಸಿʼ ಸಿನಿಮಾ ಆರಂಭದಿಂದಲೂ ವಿವಾದದ ಸುಳಿಯಲ್ಲಿ ಸಿಲುಕಿದೆ. ಈ ನಡುವೆ ಶಿರೋಮಣಿ ಅಕಾಲಿ ದಳ ಸೇರಿದಂತೆ ಅನೇಕ ಸಿಖ್‌ ಸಂಘಟನೆಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಆರಂಭದಿಂದಲೂ ಸಿಖ್ ಸಮುದಾಯವನ್ನು (Sikh Community) ತಪ್ಪಾಗಿ ಬಿಂಬಿಸಲಾಗಿದೆ, ಸಿಖ್ಖರ ಸಮುದಾಯಗಳ ಬಗೆಗಿನ ನೈಜತೆಯನ್ನು ತಿರುಚಲಾಗಿದೆ ಎಂದು ಆರೋಪಿಸಿವೆ. ಇದನ್ನೂ ಓದಿ: ದರ್ಶನ್ & ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ – ಇನ್ನೂ 14 ದಿನ ಜೈಲೇ ಗತಿ

    ‘ಎಮರ್ಜೆನ್ಸಿ’ ಸಿನಿಮಾ ಪೋಸ್ಟ್‌ಪೋನ್‌
    ‘ಎಮರ್ಜೆನ್ಸಿ’ ಚಿತ್ರವನ್ನು ಸೆ.6ರಂದು ರಿಲೀಸ್ ಮಾಡಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಬಿಡುಗಡೆಗೆ ಹಲವು ಅಡ್ಡಿ ಆತಂಕಗಳು ಎದುರಾಗಿವೆ. ಸೆನ್ಸಾರ್‌ಗೆ ಸಂಬಂಧಿಸಿದ ಸಮಸ್ಯೆಗಳಿಂದ ತೊಂದರೆ ಸಿಲುಕಿಕೊಂಡಿರುವ ಈ ಸಿನಿಮಾಗೆ ಇನ್ನೂ ಕೂಡ ಪ್ರಮಾಣ ಪತ್ರ ಸಿಕ್ಕಿಲ್ಲ. ಹಾಗಾಗಿ, ಕಂಗನಾ ಸಂಕಷ್ಟಕ್ಕೆ ಈಡಾಗಿದ್ದಾರೆ. ಅದೇ ಬೇಸರದಲ್ಲಿ ಅವರು ಒಂದಿಷ್ಟು ಹೇಳಿಕೆಗಳನ್ನು ನೀಡಿದ್ದಾರೆ. ಈ ಹಿಂದೆ ಸೆನ್ಸಾರ್ ಸಮಸ್ಯೆಗೆ ಸಿಲುಕಿದ್ದ ದೀಪಿಕಾ ಪಡುಕೋಣೆ ಅವರ ‘ಪದ್ಮಾವತ್’ ಮತ್ತು ಆಲಿಯಾ ಭಟ್ ಅವರ ‘ಉಡ್ತಾ ಪಂಜಾಬ್’ ಸಿನಿಮಾಗಳನ್ನು ಕಂಗನಾ ನೆನಪು ಮಾಡಿದ್ದಾರೆ.

    ಇತ್ತೀಚೆಗೆ ನಟಿ ಕಂಗನಾ ಸಿನಿಮಾಗಾಗಿ ಬಾಂದ್ರಾದ ಪಾಲಿ ಹಿಲ್‌ನಲ್ಲಿರುವ ತಮ್ಮ ಬಂಗಲೆಯನ್ನೇ 32 ಕೋಟಿ ರೂ.ಗೆ ಮಾರಾಟ ಮಾಡಿರುವ ಬಗ್ಗೆ ವರದಿಯಾಗಿತ್ತು. ಇದನ್ನೂ ಓದಿ: ದರ್ಶನ್‌ಗೆ ರಾಜಾತಿಥ್ಯ – ಕಲಬುರಗಿ ಜೈಲಿಗೆ ವಿಲ್ಸನ್‌ ಗಾರ್ಡನ್‌ ನಾಗ ಶಿಫ್ಟ್‌

  • ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬಸವರಾಜ ಬೊಮ್ಮಾಯಿ

    ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬಸವರಾಜ ಬೊಮ್ಮಾಯಿ

    ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ನವದೆಹಲಿಯಲ್ಲಿ (New Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಐವತ್ತು ವರ್ಷದ ಹಿಂದೆ ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿದ್ದು, ಇದೊಂದು ಕರಾಳ ದಿನ. ಅಂದಿನ ಪ್ರಧಾನಿ ಇಂದಿರಾಗಾಂಧಿಯವರು (Indira Gandhi) ಪ್ರಧಾನ ಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು. ಆಗ ಸರ್ಕಾರದ ವಿರುದ್ಧ ಯಾರೂ ಮಾತನಾಡದಂತೆ ಮಾಡಿದರು. ಮಾನವ ಹಕ್ಕುಗಳು ಹಾಗೂ ರಾಜಕೀಯ ಸ್ವಾತಂತ್ರ್ಯ ಎರಡನ್ನೂ ಮೊಟಕುಗೊಳಿಸಲಾಗಿತ್ತು. ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ತೆಗೆದು ಹಾಕಲಾಗಿತ್ತು. ಪತ್ರಿಕೆಗಳ ಮೇಲೆ ಸಂಪೂರ್ಣ ನಿಬಂರ್ಧ ಹೇರಲಾಗಿತ್ತು. ಏನಾದರೂ ಸುದ್ದಿ ಪ್ರಕಟಿಸಬೇಕೆಂದರೆ ಸರ್ಕಾರದ ಅನುಮತಿ ಪಡೆದು ಪ್ರಕಟಿಸಬೇಕಿತ್ತು ಎಂದು ಹೇಳಿದರು. ಇದನ್ನೂ ಓದಿ: ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

    ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಡೀ ಸಂವಿಧಾನವನ್ನು ತಿರುಚಿ ಹಕ್ಕುಗಳನ್ನು ಮೊಟಕುಗೊಳಿಸಿದ್ದಂತಹ ಕಾಂಗ್ರೆಸ್ ಲೋಕಸಭೆಯಲ್ಲಿ ಸಂವಿಧಾನದ ಉಳಿವಿನ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ. ಅದೂ ಕೂಡ ಮೊಟಕುಗೊಳಿಸಿರುವ ಸಂವಿಧಾನ, ಸಂಪೂರ್ಣವಾದ ಸಂವಿಧಾನವಿಲ್ಲ. ಅವರು ಐವತ್ತು ವರ್ಷದ ಹಿಂದೆ ಇದೇ ಸಂವಿಧಾನವನ್ನು ನಾವು ತಿರುಚಿದ್ದೆವು. ಪ್ರಜಾಪ್ರಭುತ್ವದ ಕೊಲೆ ಮಾಡಿದ್ದೆವು ಎಂದು ನೆನಪು ಮಾಡಿಕೊಳ್ಳಬೇಕು. ಎಲ್ಲ ಹಕ್ಕುಗಳ ಹರಣ ಮಾಡಿದ್ದೇವೆ ಎಂದು ನೆನಪು ಮಾಡಿಕೊಳ್ಳದಿರುವುದು ಕಾಂಗ್ರೆಸ್ಸಿನ ಭಂಡತನ ಎಂದು ಕುಟುಕಿದರು.

    ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ಬಹಳಷ್ಟು ಗಟ್ಟಿಯಾಗಿದೆ. ಅದಕ್ಕೆ ಸುಪ್ರೀಂ ಕೋರ್ಟಿನ ತೀರ್ಪುಗಳು ಹಾಗೂ ಅಂದಿನ ಸಂಸತ್ತಿನಲ್ಲಿ ಇನ್ನು ಮುಂದೆ ಯಾರೂ ತುರ್ತು ಪರಿಸ್ಥಿತಿ ಹೇರಬಾರದು ಎಂದು ತಿದ್ದುಪಡಿ ಮಾಡಿದರು. ಅದರ ಪ್ರಕಾರ ಯಾರೂ ಕೂಡ ಮೂಲ ಸಂವಿಧಾನ ತಿರುಚುವುದು ಹಾಗೂ ಹಕ್ಕುಗಳನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎನ್ನವುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷ ಇದನ್ನು ದೊಡ್ಡ ಬಂಡವಾಳ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ. ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ. ನಮ್ಮದು ಅತ್ಯಂತ ಶ್ರೇಷ್ಠವಾದ ಸಂವಿಧಾನ, ಹಲವಾರು ದೇಶಗಳಲ್ಲಿ ನೋಡಿದಾಗ ಇದು ಅತ್ಯಂತ ಸಂವೇದನಾಶೀಲ ಇರುವ ಸಂವಿಧಾನ ಹಾಗೂ ಜನರ ಹಕ್ಕುಗಳ ರಕ್ಷಣೆ ಮಾಡುವ ಸಂವಿಧಾನ ಇರುವುದರಿಂದ ಕಾಂಗ್ರೆಸ್‌ನವರು ಭ್ರಮೆಯನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಭ್ರಮೆ ಜನರಲ್ಲಿ ಇಲ್ಲ. ಹೀಗಾಗಿ ಜನರು ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ 50 ವರ್ಷ – ಕರಾಳ ದಿನಗಳನ್ನು ನೆನೆದ ಪ್ರಧಾನಿ

    ಸಂವಿಧಾನ ವಿರೋಧಿಗಳೇ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಹೇಳಿದರು. ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ದೇಶದಲ್ಲಿ ಯಾವ ಹಕ್ಕು ಹರಣವಾಗಿದೆ. ವ್ಯಕ್ತಿ ಸ್ವಾತಂತ್ರ್ಯ ಹರಣವಾಗಿದೆಯಾ, ಪತ್ರಿಕಾ ಸ್ವಾತಂತ್ರ್ಯವಾಗಿದೆಯಾ, ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಪಜಾಪಭುತ್ವ ಇದೆ ಎಂದರ್ಥ. ಇದೊಂದು ನೆಪ ಅವರಿಗೆ ಮತಬ್ಯಾಂಕ್‌ಗಳನ್ನು ಸೃಷ್ಟಿಸಲು. ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

  • ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

    ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

    ನವದೆಹಲಿ: ಪಕ್ಷಗಳನ್ನು ಒಡೆಯುವುದು, ಚುನಾಯಿತ ಸರ್ಕಾರಗಳನ್ನು ಹಿಂಬಾಗಿಲಿನಿಂದ ಬೀಳಿಸುವುದು, ಇಡಿ, ಸಿಬಿಐ, ಐಟಿಯನ್ನು 95% ಪ್ರತಿಪಕ್ಷಗಳ ನಾಯಕರ ಮೇಲೆ ಪ್ರಯೋಗಿಸುವುದು, ಮುಖ್ಯಮಂತ್ರಿಗಳನ್ನೂ ಜೈಲಿಗೆ ಹಾಕುವುದು, ಚುನಾವಣೆಗೆ ಮುನ್ನ ಅಧಿಕಾರವನ್ನು ಬಳಸಿ ಗುಣಮಟ್ಟದ ಸ್ಪರ್ಧೆ ಹಾಳು ಮಾಡುವುದು ಅಘೋಷಿತ ತುರ್ತು ಪರಿಸ್ಥಿತಿಯಲ್ಲವೇ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಪ್ರಶ್ನಿಸಿದ್ದಾರೆ.

    ತುರ್ತು ಪರಿಸ್ಥಿತಿಗೆ 50 ವರ್ಷ ಪೂರ್ಣವಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೆ ಎಕ್ಸ್ ಪೊಸ್ಟ್ ನಲ್ಲಿ ತಿರುಗೇಟು ನೀಡಿರುವ ಅವರು, ಕಳೆದ 10 ವರ್ಷಗಳಲ್ಲಿ140 ಕೋಟಿ ಭಾರತೀಯರನ್ನು ಅನುಭವಿಸುವಂತೆ ಮಾಡಿದ “ಅಘೋಷಿತ ತುರ್ತು ಪರಿಸ್ಥಿತಿ” ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಆಳವಾದ ಹೊಡೆತವನ್ನು ನೀಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ 50 ವರ್ಷ – ಕರಾಳ ದಿನಗಳನ್ನು ನೆನೆದ ಪ್ರಧಾನಿ

    ನರೇಂದ್ರ ಮೋದಿ ಅವರು ಒಮ್ಮತ ಮತ್ತು ಸಹಕಾರದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಕಾರ್ಯಗಳು ಇದಕ್ಕೆ ವಿರುದ್ಧವಾಗಿವೆ. 146 ವಿರೋಧ ಪಕ್ಷದ ಸಂಸದರನ್ನು ಸಂಸತ್ತಿನಿಂದ ಅಮಾನತುಗೊಳಿಸಿ, ಭಾರತೀಯ ನಾಗರಿಕ ಸಂರಕ್ಷಣಾ ಸಂಹಿತೆ, 2023, ಭಾರತೀಯ ನ್ಯಾಯ ಸಂಹಿತೆ, 2023 ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ, 2023 ಅದನ್ನು ಅಂಗೀಕರಿಸಿದಾಗ ಒಮ್ಮತದ ಪದ ಎಲ್ಲಿತ್ತು? ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಗಾಂಧೀಜಿ ಮತ್ತು ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಪ್ರತಿಮೆಗಳನ್ನು ಪ್ರತಿಪಕ್ಷಗಳು ಕೇಳದೆ ಸಂಸತ್ತಿನ ಅಂಗಳದಿಂದ ಮೂಲೆಗೆ ಸ್ಥಳಾಂತರಿಸಿದಾಗ ಒಮ್ಮತದ ಪದ ಎಲ್ಲಿತ್ತು ಎಂದು ಪ್ರಶ್ನಿಸಿದ್ದಾರೆ.

    ನಮ್ಮ 15 ಕೋಟಿ ರೈತ ಕುಟುಂಬಗಳ ಮೇಲೆ ಮೂರು ಕರಾಳ ಕಾನೂನನ್ನು ಹೇರಿ ತಿಂಗಳಾನುಗಟ್ಟಲೆ ಅವರದ್ದೇ ನಾಡಿನಲ್ಲಿ ಬೀದಿಗಿಳಿದು ಹಿಂಸಿಸಿದಾಗ ಒಮ್ಮತದ ಮಾತು ಎಲ್ಲಿತ್ತು? ನೋಟು ಅಮಾನ್ಯೀಕರಣವಾಗಲಿ, ತರಾತುರಿಯಲ್ಲಿ ಜಾರಿಯಾದ ಲಾಕ್‌ಡೌನ್ ಆಗಲಿ ಅಥವಾ ಎಲೆಕ್ಟೋರಲ್ ಬಾಂಡ್‌ಗಳ ಕಾನೂನು ಆಗಿರಲಿ, ಮೋದಿ ಸರ್ಕಾರವು ಒಮ್ಮತ/ಸಹಕಾರವನ್ನು ಬಳಸದ ನೂರಾರು ಉದಾಹರಣೆಗಳಿವೆ.

    17 ನೇ ಲೋಕಸಭೆಯಲ್ಲಿ ಇತಿಹಾಸದಲ್ಲಿ ಕೇವಲ 16% ಮಸೂದೆಗಳು ಮಾತ್ರ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಹೋದವು. ಮತ್ತು ಲೋಕಸಭೆಯಲ್ಲಿ 35% ಮಸೂದೆಗಳು ಒಂದು ಗಂಟೆಯೊಳಗೆ ಅಂಗೀಕಾರಗೊಂಡವು. ರಾಜ್ಯಸಭೆಯಲ್ಲೂ ಈ ಪ್ರಮಾಣ 34% ರಷ್ಟಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ದುಸ್ಥಿತಿಗೆ ಬಿಜೆಪಿ ಕಾರಣವಾಗಿದೆ. ಕಾಂಗ್ರೆಸ್ ಯಾವಾಗಲೂ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬೆಂಬಲಿಸುತ್ತದೆ ಎಂದು ಸಮರ್ಥಿಸಿಕೊಂಡರು.