Tag: Emergency Land

  • ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

    ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

    ವಾಷಿಂಗ್ಟನ್: ಗುರುವಾರ ಕೋಸ್ಟ್ರಿಕಾದಲ್ಲಿ ತುರ್ತು ಭೂಸ್ಪರ್ಶದ ವೇಳೆ ಕಾರ್ಗೋ ವಿಮಾನವೊಂದು ತುಂಡಾಗಿರುವ ಘಟನೆ ನಡೆದಿದೆ. ಡಿಹೆಚ್‌ಎಲ್ ಕಾರ್ಗೋ ವಿಮಾನ ರನ್‌ವೇಯಿಂದ ಜಾರಿದ ಪರಿಣಾಮ ಮುರಿದು ಬಿದ್ದಿದೆ.

    ಘಟನೆ ಸಂಭವಿಸಿದ ವೇಳೆ ಸ್ಯಾನ್ ಜೋಸ್‌ನಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು. ಘಟನೆ ವೇಳೆ ವಿಮಾನದಲ್ಲಿ ಇಬ್ಬರು ಸಿಬ್ಬಂದಿ ಇದ್ದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಬ್ಬರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಇದನ್ನೂ ಓದಿ: E-ಸೈಕಲ್ ಖರೀದಿಗೆ ಬಂಪರ್ ಆಫರ್ ಕೊಟ್ಟ ದೆಹಲಿ ಸರ್ಕಾರ : ಯಾರಿಗೆ ಸಿಗುತ್ತೆ?

    ಗುರುವಾರ ಬೆಳಗ್ಗೆ ವಿಮಾನ ಜುವಾಮ್ ಸಾಂತಾಮಾರಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ಇದಾದ 25 ನಿಮಿಷಗಳಲ್ಲಿ ವಿಮಾನದಲ್ಲಿ ತಾಂತ್ರಿಕ ವೈಫಲ್ಯ ಕಂಡುಬಂದಿತ್ತು. ಹೀಗಾಗಿ ವಿಮಾನವನ್ನು ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದರು. ಈ ಸಂದರ್ಭ ಘಟನೆ ನಡೆದಿದೆ. ಇದನ್ನೂ ಓದಿ: ಸ್ಪೇಸ್‌ ಎಕ್ಸ್‌ ರಾಕೆಟ್‌ ಮೂಲಕ ಕಾಫಿನಾಡು ಯುವಕನ ಶಕುಂತಲಾ ಉಪಗ್ರಹ ಉಡಾವಣೆ

     

  • ಪೇಜಾವರ ಶ್ರೀ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ

    ಪೇಜಾವರ ಶ್ರೀ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ

    ಬಳ್ಳಾರಿ: ಉಡುಪಿಯ ಪೇಜಾವರ ಶ್ರೀಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶವಾಗಿ ಮಾಡಿದೆ.

    ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಸರ್ವ ಧರ್ಮ ರಥೋತ್ಸವ ಕಾರ್ಯಕ್ರಮದ ಬಳಿಕ ಶಿವಮೊಗ್ಗಕ್ಕೆ ತೆರಳುವ ವೇಳೆ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಹೀಗಾಗಿ ಕೂಡಲೇ ಎಚ್ಚೆತ್ತ ಪೈಲೆಟ್ ಕಾಪ್ಟರನ್ನು ಹಡಗಲಿ ತಾಲೂಕಿನ ಹೊಳಲು ಗ್ರಾಮದ ಸಾಧನಾ ಶಾಲಾ ಮೈದಾನದಲ್ಲಿ ಇಳಿಸಿದ್ದಾರೆ. ಈ ಮೂಲಕ ನಡೆಬಹುದಾಗಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.

    ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶವಾಗುತ್ತಿದ್ದಂತೆ ಗ್ರಾಮಸ್ಥರು, ಶಾಲಾ ಮಕ್ಕಳು ಸ್ಥಳಕ್ಕೆ ಧಾವಿಸಿ ಶ್ರೀಗಳನ್ನು ವಿಚಾರಿಸಿದ್ದಾರೆ. ಸುಮಾರು ಅರ್ಧ ಗಂಟೆ ಬಳಿಕ ಕಾಪ್ಟರ್ ತಾಂತ್ರಿಕ ದೋಷ ಸರಿಪಡಿಸಿ ಮತ್ತೆ ಶ್ರೀಗಳು ತಮ್ಮ ಪ್ರಯಾಣವನ್ನು ಮುಂದುವರೆಸಿದ್ದಾರೆ.