Tag: Emergency Meeting

  • ಕಲುಷಿತ ನೀರು ಕುಡಿದು ಸಾವು ಪ್ರಕರಣ – ಮೃತರ ಕುಟುಂಬಕ್ಕೆ ನಗರಸಭೆಯಿಂದ ತಲಾ 10 ಲಕ್ಷ ರೂ. ಪರಿಹಾರ

    ಕಲುಷಿತ ನೀರು ಕುಡಿದು ಸಾವು ಪ್ರಕರಣ – ಮೃತರ ಕುಟುಂಬಕ್ಕೆ ನಗರಸಭೆಯಿಂದ ತಲಾ 10 ಲಕ್ಷ ರೂ. ಪರಿಹಾರ

    ರಾಯಚೂರು: ಎಲ್ಲಾ ಲೂಟಿಯಾದ ಮೇಲೆ ಕೋಟೆ ಬಾಗಿಲು ಹಾಕಿದ ಹಾಗೆ ರಾಯಚೂರು ನಗರಸಭೆ ಈಗ ಎಚ್ಚೆತ್ತಿದೆ. ನಗರದ ಟ್ಯಾಂಕ್‍ಗಳ ಶುದ್ಧೀಕರಣದ ಬಗ್ಗೆ ಈಗ ಅರಿವಿಗೆ ಬಂದಿದೆ. ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ ಬಳಿಕ ತುರ್ತು ಸಭೆ ಕರೆದು ಪರಿಹಾರ ಘೋಷಣೆ ಮಾಡಿದ್ದಾರೆ.

    ರಾಯಚೂರು ನಗರಸಭೆಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನಕ್ಕೆ ಕೊನೆಯೇ ಇಲ್ಲ ಎನ್ನುವುದಕ್ಕೆ ಇಂದು ನಡೆದ ನಗರಸಭೆ ಸದಸ್ಯರ ತುರ್ತು ಸಭೆ ಸಾಕ್ಷಿಯಾಗಿತ್ತು. ನಗರಸಭೆಯಿಂದ ಸರಬರಾಜಾದ ಕಲುಷಿತ ನೀರನ್ನು ಕುಡಿದು ಮೂರು ಜನ ಪ್ರಾಣ ಬಿಟ್ಟಿದ್ದರ ಹಿಂದೆ 25 ವರ್ಷಗಳ ನಿರ್ಲಕ್ಷ್ಯವಿದೆ. ನೀರು ಕುಡಿದ ನೂರಾರು ಜನ ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿರುವುದರ ಹಿಂದೆ ಭ್ರಷ್ಟಾಚಾರ, ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಕೊನೆಗೂ ಎಚ್ಚೆತ್ತಂತೆ ತುರ್ತು ಸಭೆ ಕರೆದ ಆಡಳಿತ ಮಂಡಳಿ ನಗರಸಭೆ ನೀರು ಕುಡಿದು ಸಾವನ್ನಪ್ಪಿದ ಮೂವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ 20 ಸಾವಿರ ರೂಪಾಯಿ ಚಿಕಿತ್ಸಾ ವೆಚ್ಚ ಭರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್

    ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಆಡಳಿತ ಮಂಡಳಿ ವೈಫಲ್ಯದ ಬಗ್ಗೆ ಕಿಡಿಕಾರಿದರು. ಶುದ್ಧೀಕರಣ ಘಟಕ ನಿರ್ವಹಣೆಯಲ್ಲಿನ ಲೋಪವನ್ನು ಇನ್ನು ಮುಂದಾದರೂ ಸರಿಪಡಿಸುವಂತೆ ಒತ್ತಾಯಿಸಿದರು. ನಗರದಲ್ಲಿನ 35 ಕ್ಕೂ ಹೆಚ್ಚು ನೀರಿನ ಟ್ಯಾಂಕ್‍ಗಳನ್ನು 25 ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ. ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಸದಸ್ಯರು ಒತ್ತಾಯಿಸಿದರು.  ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

    4.75 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ ನೀರು ಶುದ್ಧೀಕರಣ ಘಟಕ ಆರಂಭಿಸಲಾಗಿದೆ. ನೀರು ಸರಬರಾಜು ಮಂಡಳಿ ಮೂರು ತಿಂಗಳು ನೀರು ಪೂರೈಕೆ ಕೂಡ ಮಾಡಿತ್ತು. ನಂತರ ಹಸ್ತಾಂತರಕ್ಕೆ ಮುಂದಾದರೆ ನಗರಸಭೆ ನಿರ್ಲಕ್ಷ್ಯ ಮಾಡಲಾಗಿತ್ತು. ಈಗ ಘಟಕ ಉಪಯೋಗವಿಲ್ಲದಂತಾಗಿ 58 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ತಿ ಮಾಡಬೇಕಾಗಿದೆ ಅಂತ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಲುಷಿತ ನೀರಿನಿಂದ ಮೂವರು ಸಾವನ್ನಪ್ಪಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖಾ ಸಮಿತಿಯನ್ನ ರಚಿಸಿದೆ. ಮೂರು ದಿನಗಳಲ್ಲಿ ವರದಿ ನೀಡುವಂತೆ ಸಮಿತಿಗೆ ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ. ಅದೇನೇ ಇದ್ದರೂ ಒಟ್ಟಿನಲ್ಲಿ ನಗರಸಭೆಯ ದೀರ್ಘಕಾಲದ ನಿರ್ಲಕ್ಷ್ಯಕ್ಕೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ.

  • ರಾಮನಗರದಲ್ಲಿ ಹಿರಿಯ ನಾಯಕರ ತುರ್ತುಸಭೆ ಕರೆದ ಸಿದ್ದರಾಮಯ್ಯ

    ರಾಮನಗರದಲ್ಲಿ ಹಿರಿಯ ನಾಯಕರ ತುರ್ತುಸಭೆ ಕರೆದ ಸಿದ್ದರಾಮಯ್ಯ

    ರಾಮನಗರ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಿರಿಯ ನಾಯಕರನ್ನು ತುರ್ತು ಸಭೆ ಕರೆದಿದ್ದಾರೆ.

    ಸರ್ಕಾರ ಪಾದಯಾತ್ರೆ ನಿಷೇಧಿಸಿದ ಹಿನ್ನೆಲೆ ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಹಿರಿಯ ಮುಖಂಡರು, ಶಾಸಕರು, ಸಂಸದರು, ಹಾಲಿ ಮತ್ತು ಮಾಜಿ ಶಾಸಕರನ್ನು ಸಿದ್ದರಾಮಯ್ಯ ಅವರು ತುರ್ತು ಸಭೆ ಕರೆದಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ಲೋಪ ಪೂರ್ವ ನಿಯೋಜಿತ: ಯೋಗಿ ಆದಿತ್ಯನಾಥ್

    ಈ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ಹಿರಿಯ ನಾಯಕರು ಉಪಸ್ಥಿತರಿರುತ್ತಾರೆ. ಈ ಸಭೆಯ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ತೀರ್ಮಾನ ಕಾಂಗ್ರೆಸ್ ಕೈಗೊಳ್ಳಲಿದೆ. ಇದನ್ನೂ ಓದಿ: ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ: ಡಿ.ಕೆ ಸುರೇಶ್

    ಸರ್ಕಾರ ವರ್ಸಸ್ ಕಾಂಗ್ರೆಸ್ ನಡುವಿನ ಮೇಕೆದಾಟು ಪಾದಯಾತ್ರೆ ಈಗ ನಿರ್ಣಾಯಕ ಹಂತವನ್ನು ತಲುಪಿದ್ದು, ಬೆಂಗಳೂರಿನಲ್ಲೇ ಪಾದಯಾತ್ರೆಯನ್ನು ಅಂತ್ಯಗೊಳಿಸುತ್ತೇವೆ ಎಂದು ಹಠ ತೊಟ್ಟಿದ್ದ ಕಾಂಗ್ರೆಸ್ ಈಗ ಧರ್ಮಸಂಕಟಕ್ಕೆ ಸಿಲುಕಿದ್ದು, ಪ್ರತಿಭಟನೆ ಮುಂದುವರಿಸಬೇಕೇ? ಬೇಡವೇ ಎಂಬುದರ ಬಗ್ಗೆ ಕಾಂಗ್ರೆಸ್‍ನಲ್ಲಿ ಗೊಂದಲ ಮೂಡಿದೆ.

    ರಾಜ್ಯದಲ್ಲಿ ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡು 4 ದಿನ ಕಂಪ್ಲೀಟ್ ಮಾಡಿದೆ. ಆದರೆ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿ ದಿನ 10 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗುತ್ತಿದೆ. ಇದನ್ನೂ ಓದಿ: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

    ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಬುಧವಾರ ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಬುಧವಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ.