Tag: Employees

  • ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ

    ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ

    ನವದೆಹಲಿ: ಯುಗಾದಿ (Yugadi) ಹಬ್ಬದ ಹೊತ್ತಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (DA) ಶೇ.2ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

    ಈ ಮೂಲಕ ತುಟ್ಟಿಭತ್ಯೆ ಶೇ.53ರಿಂದ ಶೇ.55ಕ್ಕೇರುತ್ತದೆ. ತುಟ್ಟಿಭತ್ಯೆ ಹೆಚ್ಚಳದಿಂದಾಗಿ 1.5 ಕೋಟಿ ಕೇಂದ್ರ ಸರ್ಕಾರಿ ನೌಕರರು (Central Government Employess) ಹಾಗೂ ಪಿಂಚಣಿದಾರರು ಅನುಕೂಲ ಪಡೆದುಕೊಳ್ಳಲಿದ್ದಾರೆ.ಇದನ್ನೂ ಓದಿ:ಇಂದು ಬಿಬಿಎಂಪಿ ಬಜೆಟ್‌ ಮಂಡನೆ – ಪ್ರಸಕ್ತ ವರ್ಷ 6,000 ಕೋಟಿ ತೆರಿಗೆ ವಸೂಲಿಗೆ ಪ್ರಸ್ತಾವನೆ ಸಾಧ್ಯತೆ!

    ಇನ್ನೂ ಕಳೆದ ವರ್ಷ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.50ರಿಂದ ಶೇ.53ಕ್ಕೇರಿಕೆಯಾಗಿತ್ತು. ಇದೀಗ ಸರ್ಕಾರ ಅದನ್ನು ಶೇ.2ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಡಿಎ ಇದೇ ಜನವರಿಯಿಂದ ಅನ್ವಯವಾಗಲಿದ್ದು, ಮಾರ್ಚ್ ತಿಂಗಳ ಸಂಬಳದಲ್ಲಿ ಮೂರು ತಿಂಗಳ ಅರಿಯರ್ಸ್ ಸೇರಿ ಖಾತೆಗೆ ಜಮೆಯಾಗಲಿದೆ.

    ಹಣದುಬ್ಬರದಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ನೌಕರರಿಗೆ ತುಟ್ಟಿಭತ್ಯೆ ನೆರವಾಗುತ್ತದೆ. ಹೆಚ್ಚುತ್ತಿರುವ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ತುಟ್ಟಿಭತ್ಯೆಯು ಸಹಾಯವಾಗುತ್ತದೆ. ವೇತನ ಆಯೋಗದ ಪ್ರಕಾರ, ಪ್ರತಿ 10 ವರ್ಷಕ್ಕೊಮ್ಮೆ ಮೂಲ ವೇತನವು ಪರಿಷ್ಕರಣೆಗೊಂಡರೆ, ತುಟ್ಟಿಭತ್ಯೆಯನ್ನು ಹಣದುಬ್ಬರ ಆಧಾರದ ಮೇಲೆ ಹೊಂದಾಣಿಕೆ ಮಾಡಲಾಗುತ್ತದೆ.ಇದನ್ನೂ ಓದಿ:ಪರಿಹಾರದ ಹಣದಲ್ಲಿ ಬೆಟ್ಟಿಂಗ್ – ವಂಚನೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

  • 17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು

    17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು

    ವಾಷಿಂಗ್ಟನ್: ಹೆಸರಾಂತ ವಿಮಾನ, ರಾಕೆಟ್ ತಯಾರಿಕಾ ಸಂಸ್ಥೆ ಬೋಯಿಂಗ್ (Boeing) ತನ್ನ ಕಂಪನಿಯಿಂದ 17,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಮುಂದಾಗಿದೆ. ಈ ನಿರ್ಧಾರದ ಬೆನ್ನಲ್ಲೇ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ (ವಜಾಗೊಳಿಸುವ ಕುರಿತು ಪತ್ರ) ಕಳುಹಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

    ಜಾಗತಿಕಮಟ್ಟದಲ್ಲಿ ಇರುವ ಒಟ್ಟು ಉದ್ಯೋಗಿಗಳ ಪೈಕಿ 10%ನಷ್ಟು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಾಗುವುದು. ಕಂಪನಿಯ ದಕ್ಷತೆ ಹೆಚ್ಚಿಸಲು ಹಾಗೂ ವೆಚ್ಚ ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

    ಪ್ರಸಕ್ತ ವರ್ಷದ ಆರಂಭದಿಂದಲೂ ಬೋಯಿಂಗ್ ಕಂಪನಿ ಹಲವು ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಮೆರಿಕದಲ್ಲಿ 33,000 ಉದ್ಯೋಗಿಗಳು ಹಲವು ವಾರಗಳವರೆಗೆ ಪ್ರತಿಭಟನೆ ನಡೆಸಿದ್ದರು. ಇದರಿಂದ ಕಂಪನಿಯ ವಾಣಿಜ್ಯ ವಿಮಾನಗಳ ತಯಾರಿಕೆಗೆ ಪೆಟ್ಟು ಬಿದ್ದಿತ್ತು. ಇದನ್ನೂ ಓದಿ: ದೆಹಲಿಗೆ ಬರುತ್ತಿದ್ದಂತೆ ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದಂತಾಯ್ತು: ಪ್ರಿಯಾಂಕಾ ಗಾಂಧಿ

    ಸ್ಪೇಸ್ ಎಕ್ಸ್, ಬ್ಲ್ಯೂ ಓರಿಜಿನ್ ಎಲ್‌ಎಲ್‌ಸಿ ಮತ್ತು ಅಮೆಜಾನ್‌ನಂತಹ ಸಂಸ್ಥೆಗಳು ಅಮೆರಿಕಾದ ಸೀಟಲ್‌ನಲ್ಲಿ ಬಹಳ ವೇಗವಾಗಿ ಬೆಳೆಯುತ್ತಿರುವ ಪ್ರತಿಸ್ಪರ್ಧಿಗಳು. ಈ ಕಂಪನಿಗಳಲ್ಲಿ ಹೊಸ ನೇಮಕಾತಿಗಳಿಗೆ ಅವಕಾಶಗಳು ಹೆಚ್ಚಿದ್ದು, ಬೋಯಿಂಗ್‌ನಿಂದ ಹೊರಬಿದ್ದ ಉದ್ಯೋಗಿಗಳು ಇಲ್ಲಿ ಕೆಲಸ ಗಿಟ್ಟಿಸಿಕೊಳ್ಳಬಹುದಾಗಿದೆ. ಬೋಯಿಂಗ್ ಹೆಚ್ಚಿನ ವಾಣಿಜ್ಯ ವಿಮಾನಗಳನ್ನು ತಯಾರಿಸುತ್ತದೆ ಎಂದು ಬಾಹ್ಯಾಕಾಶ ಉದ್ಯಮ ವಿಶ್ಲೇಷಕ ಮತ್ತು ಸಲಹೆಗಾರರಾದ ಸ್ಟಾನ್ ಶುಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್

    ಅಲಯನ್ಸ್ ವೆಲಾಸಿಟಿ ಎಲ್‌ಎಲ್‌ಸಿ, ಎಲಾನ್ ಮಸ್ಕ್ ಅವರ ಬಾಹ್ಯಾಕಾಶದ ಸ್ಟಾರ್‌ಲಿಂಕ್ ಉಪಗ್ರಹಗಳಲ್ಲಿ ಕೆಲಸ ಮಾಡುವುದರಿಂದ ಹಿಡಿದು ಅಮೆಜಾನ್ ಮಾಲೀಕ ಜೆಫ್ ಬೆಜೋಸ್ ಅವರ ಸಂಸ್ಥೆಗಳಲ್ಲಿ ರಾಕೆಟ್‌ಗಳು, ಚಂದ್ರನ ಲ್ಯಾಂಡರ್‌ಗಳು ಮತ್ತು ಮುಂತಾದವುಗಳಿಗೆ ಸಹಾಯ ಮಾಡುವವರಿಗೆ ಇಲ್ಲಿ ಉತ್ತಮವಾದ ಅವಕಾಶವಿದೆ. ಅಲ್ಲಿ ಕೆಲಸ ಕಳೆದುಕೊಂಡವರು, ಬೋಯಿಂಗ್ ಪ್ರತಿಸ್ಪರ್ಧಿ ಕಂಪನಿಗಳಲ್ಲಿ ಉದ್ಯೋಗ ಪಡೆಯಬಹುದು ಎಂದು ಸ್ಟಾನ್ ಶುಲ್ ಸಲಹೆ ನೀಡಿದ್ದಾರೆ. ಇದನ್ನೂ ಓದಿ: 50 ಶಾಸಕರಿಗೆ 2,500 ಕೋಟಿ ಬೇಕು, ಯಾರ ಬಳಿ ಇದೆ ಅಷ್ಟೊಂದು ಹಣ? – ಬೊಮ್ಮಾಯಿ

  • ಆಫೀಸ್‌ಗೆ ಬರದೇ ಹೋದ್ರೆ ಕೆಲ್ಸದಿಂದ ವಜಾ – ಉದ್ಯೋಗಿಗಳಿಗೆ ಖಡಕ್ ವಾರ್ನಿಗ್ ಕೊಟ್ಟ ಮೆಟಾ

    ಆಫೀಸ್‌ಗೆ ಬರದೇ ಹೋದ್ರೆ ಕೆಲ್ಸದಿಂದ ವಜಾ – ಉದ್ಯೋಗಿಗಳಿಗೆ ಖಡಕ್ ವಾರ್ನಿಗ್ ಕೊಟ್ಟ ಮೆಟಾ

    ವಾಷಿಂಗ್ಟನ್: ಫೇಸ್‌ಬುಕ್ (Facebook) ಮಾತೃಸಂಸ್ಥೆ ಮೆಟಾ (Meta) ತನ್ನ ಉದ್ಯೋಗಿಗಳಿಗೆ ಆಫೀಸ್‌ಗೆ (Office) ಮರಳುವಂತೆ ಸೂಚಿಸಿದ್ದು, ಮರಳದೇ ಇದ್ದಲ್ಲಿ ಉದ್ಯೋಗಿಗಳನ್ನು ಕೆಲಸದಿಂದಲೇ ಕಿತ್ತು ಹಾಕುವುದಾಗಿ ಮೆಟಾ ಖಡಕ್ ಎಚ್ಚರಿಕೆಯನ್ನು ನೀಡಿದೆ.

    ಕೋವಿಡ್ ಬಳಿಕ ಮೆಟಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅನ್ನು ಕೊನೆಗೊಳಿಸಿ ಆಫೀಸ್‌ಗೆ ಮರಳುವಂತೆ ತಿಳಿಸಿತ್ತು. ಆದರೆ ಬಹುತೇಕ ಉದ್ಯೋಗಿಗಳು ಮನೆಯಿಂದಲೇ ಕೆಲಸವನ್ನು ಮುಂದುವರಿಸಲು ಆದ್ಯತೆ ನೀಡಿದ್ದಾರೆ. ಇದೀಗ ರಿಟರ್ನ್ ಟು ಆಫೀಸ್ (RTO) ನೀತಿಯ ಮೇಲೆ ಮೆಟಾ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ.

    ಈ ಬಗ್ಗೆ ಮೆಟಾದ ಮಾನವ ಸಂಪನ್ಮೂಲ ಮುಖ್ಯಸ್ಥರಾದ ಲೋರಿ ಗೋಲರ್ ಕಂಪನಿಯಲ್ಲಿ ಆರ್‌ಟಿಒ ಕುರಿತಾಗಿ ಉದ್ಯೋಗಳಿಗೆ ಇ-ಮೇಲ್ ಕಳುಹಿಸಿದ್ದಾರೆ. ಹೊಸ ನೀತಿಯಂತೆ ಕಂಪನಿಯ ಉದ್ಯೋಗಿಗಳು ನಿಯೋಜಿಸಲಾದ ಕಚೇರಿಯಿಂದಲೇ ಕೆಲಸ ಮಾಡಬೇಕು ಅಥವಾ ವಾರಕ್ಕೆ ಕನಿಷ್ಠ 3 ದಿನವಾದರೂ ಕಚೇರಿಯಲ್ಲಿ ಹಾಜರಿರಬೇಕು. ಆದರೆ ಈಗಾಗಲೇ ಮನೆಯಿಂದ ಕೆಲಸ ಮಾಡಲು ಅನುಮೋದನೆ ನೀಡಲಾಗಿರುವ ಉದ್ಯೋಗಿಗಳಿಗೆ ಈ ನೀತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೇಡ್‌ ಇನ್‌ ಚೈನಾಗೆ ಭಾರತ ಶಾಕ್‌!

    ಆರ್‌ಟಿಒ ನೀತಿ ಸೆಪ್ಟೆಂಬರ್ 5 ರಿಂದ ಜಾರಿಗೆ ಬರಲಿದೆ. ಇತರ ಕಂಪನಿಗಳಂತೆ ಈ ನೀತಿಯನ್ನು ಉದ್ಯೋಗಿಗಳು ಉಲ್ಲಂಘನೆ ಮಾಡಿದ್ದಲ್ಲಿ ಅವರ ಮೇಲೆ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಕಂಪನಿಯ ಕೆಲಸವೂ ಕೂಡಾ ಭವಿಷ್ಯದಲ್ಲಿ ತಂತ್ರಜ್ಞಾನ ಬೆಳೆದಂತೆ ಸುಧಾರಿಸುತ್ತದೆ ಎಂಬ ಭರವಸೆಯಿದೆ ಎಂದು ಮೆಟಾ ವಕ್ತಾರರು ತಿಳಿಸಿದ್ದಾರೆ.

    ಈ ಹಿಂದೆ ಟ್ವಿಟ್ಟರ್ ಸೇರಿದಂತೆ ಹಲವು ಕಂಪನಿಗಳು ಕೂಡಾ ತನ್ನ ಉದ್ಯೋಗಿಗಳನ್ನು ಕಚೇರಿಗಳಿಗೆ ಮರಳುವಂತೆ ಎಚ್ಚರಿಕೆಯನ್ನು ನೀಡಿದ್ದವು. ಈಗ ಎಕ್ಸ್ ಆಗಿ ಬದಲಾಗಿರುವ ಟ್ವಿಟ್ಟರ್ ಅನ್ನು ಎಲೋನ್ ಮಸ್ಕ್ ಸ್ವಾಧೀನಪಡಿಸಿಕೊಂಡ ಬಳಿಕ ಉದ್ಯೋಗಿಗಳಿಗೆ ವಾರಕ್ಕೆ 40 ಗಂಟೆ ಕಚೇರಿಯಲ್ಲಿ ಹಾಜರಿರುವಂತೆ ತಿಳಿಸಲಾಗಿತ್ತು. ಒಂದು ವೇಳೆ ಉದ್ಯೋಗಿಗಳು ವರ್ಕ್ ಫ್ರಂ ಹೋಮ್ ಕೊನೆಗೊಳಿಸಿ ಕಚೇರಿಗೆ ಮರಳಲು ಇಷ್ಟಪಡದೇ ಹೋದರೆ ಅವರು ದಾರಾಳವಾಗಿ ರಾಜೀನಾಮೆ ಸಲ್ಲಿಸಬಹುದು ಎಂದು ಮಸ್ಕ್ ಹೇಳಿದ್ದರು. ಇದನ್ನೂ ಓದಿ: ಸಿಮ್‌ ಕಾರ್ಡ್‌ ಡೀಲರ್‌ಗಳ ಪೊಲೀಸ್‌ ಪರಿಶೀಲನೆ ಕಡ್ಡಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೊಂದು ಸುತ್ತಿನ ವಜಾ ಪ್ರಕ್ರಿಯೆ ಪ್ರಾರಂಭಿಸಿದ ಮೆಟಾ – 4,000 ನುರಿತ ಉದ್ಯೋಗಿಗಳು ಟಾರ್ಗೆಟ್

    ಮತ್ತೊಂದು ಸುತ್ತಿನ ವಜಾ ಪ್ರಕ್ರಿಯೆ ಪ್ರಾರಂಭಿಸಿದ ಮೆಟಾ – 4,000 ನುರಿತ ಉದ್ಯೋಗಿಗಳು ಟಾರ್ಗೆಟ್

    ವಾಷಿಂಗ್ಟನ್: ವಿಶ್ವದ ಅತಿ ದೊಡ್ಡ ಸಾಮಾಜಿಕ ನೆಟ್‌ವರ್ಕಿಂಗ್ ಕಂಪನಿ ಮೆಟಾ (Meta) ಬುಧವಾರದಿಂದ ಮತ್ತೊಂದು ಸುತ್ತು ಉದ್ಯೋಗಿಗಳನ್ನು (Employees) ಸಾಮೂಹಿಕವಾಗಿ ವಜಾಗೊಳಿಸಲು (Layoff) ಸಿದ್ಧವಾಗಿದೆ. ಈ ಬಾರಿಯ ವಜಾ ಪ್ರಕ್ರಿಯೆ ಫೇಸ್‌ಬುಕ್, ವಾಟ್ಸಪ್ ಹಾಗೂ ಇನ್‌ಸ್ಟಾಗ್ರಾಮ್‌ನ ಸುಮಾರು 4,000ಕ್ಕೂ ಅಧಿಕ ನುರಿತ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ.

    ಕಳೆದ ತಿಂಗಳು ಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ (Mark Zuckerberg) ಏಪ್ರಿಲ್‌ನಲ್ಲಿ ಕಂಪನಿಯ ಸುಮಾರು 10,000 ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದೀಗ ಮೆಟಾ ವಜಾ ಪ್ರಕ್ರಿಯೆ ಪ್ರಾರಂಭಿಸಲು ಮುಂದಾಗಿದ್ದು, ಈ ವಾರದೊಳಗೆ 4,000 ಕ್ಕೂ ಅಧಿಕ ನುರಿತ ಉದ್ಯೋಗಿಗಳನ್ನೇ ವಜಾಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಮ್ಮದು ವೈಭವೀಕರಿಸಿದ ಕಾರ್ಯಕರ್ತರ ಸಂಘಟನೆಯಲ್ಲ: ಟ್ವಿಟ್ಟರ್‌ 6 ಸಾವಿರ ಉದ್ಯೋಗ ಕಡಿತಕ್ಕೆ ಮಸ್ಕ್‌ ಸ್ಪಷ್ಟನೆ

    ಕಂಪನಿ ತನ್ನ ತಾಂತ್ರಿಕ ತಂಡದಲ್ಲಿನ ವಜಾಗೊಳ್ಳುತ್ತಿರುವ ಉದ್ಯೋಗಿಗಳಿಗೆ ಈ ಬಗೆಗಿನ ಮಾಹಿತಿಯನ್ನು ತಿಳಿಸಲು ಪ್ರಾರಂಭಿಸಿದೆ. ನಮ್ಮ ತಂಡದ ಗಾತ್ರವನ್ನು ಸುಮಾರು 10,000 ಉದ್ಯೋಗಿಗಳಿಗೆ ಸೀಮಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಜುಕರ್‌ಬರ್ಗ್ ಹೇಳಿದ್ದಾರೆ.

    ಕಳೆದ ವರ್ಷ ನವೆಂಬರ್‌ನಲ್ಲಿ ಕಂಪನಿಯ ಶೇ.13 ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಸುಮಾರು 11,000 ಉದ್ಯೋಗಿಗಳನ್ನು ಮೆಟಾ ಮೊದಲ ಬಾರಿಗೆ ವಜಾಗೊಳಿಸಿತ್ತು. ಇದೀಗ ಮತ್ತೆ ಕಂಪನಿ ಉದ್ಯೋಗಿಗಳನ್ನು ಕಡಿತಗೊಳಿಸಲು ಮುಂದಾಗುತ್ತಿದೆ. ಇದನ್ನೂ ಓದಿ: ಭಾರತದ ಮೊದಲ ಆ್ಯಪಲ್ ಸ್ಟೋರ್ ಮುಂಬೈನಲ್ಲಿ ಉದ್ಘಾಟನೆ – ಗ್ರಾಹಕರಿಗೆ ಅನುಕೂಲಗಳೇನಿದೆ?

  • ಡಿಸ್ನಿಯಲ್ಲೂ ಶುರುವಾಯ್ತು ಜಾಬ್ ಕಟ್ – ಮುಂದಿನ 4 ದಿನದಲ್ಲಿ 7,000 ಉದ್ಯೋಗಿಗಳು ವಜಾ

    ವಾಷಿಂಗ್ಟನ್: ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು (Layoff) ಇತ್ತೀಚೆಗೆ ನಡೆಯುತ್ತಲೇ ಇದೆ. ಇದೀಗ ಪ್ರಸಿದ್ಧ ಮನರಂಜನಾ ಸಂಸ್ಥೆ ಡಿಸ್ನಿ (Disney) ಕೂಡಾ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲು ಮುಂದಾಗಿದೆ.

    ಕಂಪನಿ ಸುಮಾರು 5.5 ಬಿಲಿಯನ್ ಡಾಲರ್ ವೆಚ್ಚ ಕಡಿತ ಮಾಡುವ ಸಲುವಾಗಿ ಮೊದಲ ಸುತ್ತಿನ ವಜಾವನ್ನು ಕಾರ್ಯಗತಗೊಳಿಸಲು ಮುಂದಾಗಿದೆ. ಇದು ಈ ವಾರದಲ್ಲಿ ಜಾರಿಗೆ ಬರಲಿದ್ದು, ಸುಮಾರು 7,000 ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಮತ್ತೆ ಚೀನಾಗೆ ಮರಳಿದ ಜಾಕ್ ಮಾ

    ವರದಿಗಳ ಪ್ರಕಾರ ಡಿಸ್ನಿ ಎಂಟರ್ಟೈನ್ಮೆಂಟ್, ಡಿಸ್ನಿ ಪಾರ್ಕ್ಸ್, ಅನುಭವ ಹಾಗೂ ಉತ್ಪನ್ನ, ಕಾರ್ಪೊರೇಟ್ ಸೇರಿದಂತೆ ಸಂಸ್ಥೆಯ ಹಲವು ಪ್ರಮುಖ ವಿಭಾಗಗಳ ಮೇಲೆ ಈ ವಜಾ ಪ್ರಕ್ರಿಯೆ ಪರಿಣಾಮ ಬೀರಲಿದೆ. ಸದ್ಯ ಈ ಬಾರಿ ಇಎಸ್‌ಪಿಎನ್‌ನ ಉದ್ಯೋಗಿಗಳ ಮೇಲೆ ಇದು ಪ್ರಭಾವ ಬೀರುವುದಿಲ್ಲ ಎನ್ನಲಾಗಿದ್ದು, ಮುಂದಿನ ವಜಾ ಪ್ರಕ್ರಿಯೆಗಳಲ್ಲಿ ಅಲ್ಲಿನ ಉದ್ಯೋಗಿಗಳನ್ನೂ ಕಡಿತಗೊಳಿಸಲಾಗುತ್ತದೆ ಎಂದು ಊಹಿಸಲಾಗಿದೆ.

    ಮೊದಲ ಸುತ್ತಿನ ವಜಾ ಪ್ರಕ್ರಿಯೆ ಈ ವಾರದ ಒಳಗಾಗಿ ನಡೆಯಲಿದ್ದು, ಬಳಿಕ ಏಪ್ರಿಲ್‌ನಲ್ಲಿ ಇನ್ನೂ ಹೆಚ್ಚಿನ ಉದ್ಯೋಗಿಗಳನ್ನು ತೆಗೆದುಹಾಕಲಾಗುತ್ತದೆ ಎಂದು ಕಂಪನಿ ತನ್ನ ಉದ್ಯೋಗಿಗಳಿಗೆ ಕಳುಹಿಸಿದ ಮೆಮೋದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಸಂಚಾರ ದಟ್ಟಣೆ ನಿವಾರಣೆಗೆ ಪ್ಲಾನ್- ಇದೇ ವರ್ಷ ತಲೆ ಎತ್ತಲಿವೆ 5 ಫ್ಲೈಓವರ್‌ಗಳು!

  • ಅಮೆಜಾನ್‌ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ – 3 ತಿಂಗಳೊಳಗೆ 27 ಸಾವಿರ ಮಂದಿ ಮನೆಗೆ

    ಅಮೆಜಾನ್‌ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ – 3 ತಿಂಗಳೊಳಗೆ 27 ಸಾವಿರ ಮಂದಿ ಮನೆಗೆ

    ವಾಷಿಂಗ್ಟನ್: ಇ-ಕಾಮರ್ಸ್ ದೈತ್ಯ ಅಮೆಜಾನ್ (Amazon) ಈ ವರ್ಷದ 2ನೇ ಸುತ್ತಿನ ಉದ್ಯೋಗಿಗಳ ಕಡಿತವನ್ನು ಘೋಷಿಸಿದೆ. ಕಳೆದ ಬಾರಿ 18,000 ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದ ಅಮೆಜಾನ್ ಈ ಬಾರಿ 9,000 ಉದ್ಯೋಗಿಗಳನ್ನು (Employees) ವಜಾಗೊಳಿಸುವುದಾಗಿ (Layoffs) ಹೇಳಿದೆ.

    ಅಮೆಜಾನ್ ಸಿಇಒ ಆಂಡಿ ಜಾಸ್ಸಿ ತನ್ನ ಉದ್ಯೋಗಿಗಳಿಗೆ ಪತ್ರ ಬರೆದು, ವಜಾಗೊಳಿಸುತ್ತಿರುವ ಬಗ್ಗೆ ತಿಳಿಸಿದ್ದಾರೆ. ಈ ಮೂಲಕ ಕಳೆದ 3 ತಿಂಗಳುಗಳಿಂದ ಕಂಪನಿ 27,000ಕ್ಕೂ ಅಧಿಕ ಉದ್ಯೋಗಿಗಳನ್ನು ಕಡಿತಗೊಳಿಸುತ್ತಿದೆ. ಇದು ಕಂಪನಿಯ ಇತಿಹಾಸದಲ್ಲೇ ಅತಿ ದೊಡ್ಡ ವಜಾ ಆಗಿದೆ.

    ಅನಿಶ್ಚಿತ ಆರ್ಥಿಕತೆ ಹಾಗೂ ಭವಿಷ್ಯದ ಕಾರಣದಿಂದ ಕಂಪನಿ ತನ್ನ ವೆಚ್ಚಗಳನ್ನು ಹೆಚ್ಚು ಸುವ್ಯವಸ್ಥಿತವಾಗಿಡಲು ಯೋಜಿಸುತ್ತಿದೆ. ಇದರ ಪರಿಣಾಮವಾಗಿ ಕಂಪನಿಯ ಕೆಲ ಸ್ಥಾನಗಳನ್ನು ತೆಗೆದುಹಾಕಲಾಗುತ್ತಿದೆ. ಈ ಹಿಂದೆ ಘೋಷಿಸಲಾಗಿದ್ದ 18,000 ಉದ್ಯೋಗಿಗಳ ವಜಾದೊಂದಿಗೆ 9,000 ಉದ್ಯೋಗಿಗಳ ಕಡಿತವನ್ನೂ ಮಾಡಲಾಗುತ್ತಿದೆ ಎಂದು ಆಂಡಿ ಜಾಸ್ಸಿ ತಮ್ಮ ಉದ್ಯೋಗಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಐಫೋನ್‌ ತಯಾರಿಸುವ ಫಾಕ್ಸ್‌ಕಾನ್ ಸೇರಿ 18 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ

    ವಜಾಗೊಳ್ಳುತ್ತಿರುವ ಉದ್ಯೋಗಿಗಳಿಗಾಗಿ ಕಂಪನಿ ಪಾವತಿ, ಆರೋಗ್ಯ ವಿಮೆಯ ಪ್ರಯೋಜನ ಹಾಗೂ ಬಾಹ್ಯ ಉದ್ಯೋಗ ನಿಯೋಜನೆಗೆ ಬೆಂಬಲ ಸೇರಿದಂತೆ ಹಲವು ಭರವಸೆಗಳನ್ನೂ ನೀಡಲಾಗಿದೆ. ಆದರೆ ಇತ್ತೀಚೆಗೆ ವಿಶ್ವದ ಜನಪ್ರಿಯ ಬೃಹತ್ ಕಂಪನಿಗಳು ಈ ರೀತಿ ಉದ್ಯೋಗ ಕಡಿತಗಳನ್ನು ನಡೆಸುತ್ತಿರುವುದು ಭಾರೀ ಆತಂಕ ಮೂಡಿಸುತ್ತಿದೆ.

    2022ರಲ್ಲಿ 11,000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಫೇಸ್‌ಬುಕ್ ಕಳೆದ ವಾರವಷ್ಟೇ ಮತ್ತೆ 10,000 ಸಿಬ್ಬಂದಿಯನ್ನು ತೆಗೆದುಹಾಕುವುದಾಗಿ ಹೇಳಿದೆ. ಈ ಮೂಲಕ ಫೇಸ್‌ಬುಕ್ 2ನೇ ಸುತ್ತಿನ ವಜಾಗೆ ಕೈ ಹಾಕಿದ್ದು, ಅಮೆಜಾನ್ ಕೂಡಾ ಇಂತಹದ್ದೇ ತೀರ್ಮಾನಕ್ಕೆ ಬಂದಿದೆ. ಇದನ್ನೂ ಓದಿ: Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ

  • ಯುರೋಪ್‌ನಲ್ಲಿ ಗೂಗಲ್ ಉದ್ಯೋಗಿಗಳ ಸಾಮೂಹಿಕ ವಜಾ- ಕಚೇರಿಯಲ್ಲಿ ಪ್ರತಿಭಟನೆ

    ಯುರೋಪ್‌ನಲ್ಲಿ ಗೂಗಲ್ ಉದ್ಯೋಗಿಗಳ ಸಾಮೂಹಿಕ ವಜಾ- ಕಚೇರಿಯಲ್ಲಿ ಪ್ರತಿಭಟನೆ

    ಬರ್ನ್: ಗೂಗಲ್ (Google) ಕಂಪನಿ ಉದ್ಯೋಗಿಗಳ (Employees) ಸಾಮೂಹಿಕ ವಜಾ (Layoff) ಮುಂದುವರಿಸಿದ್ದು, ಇದೀಗ 200 ಉದ್ಯೋಗಿಗಳನ್ನು ವಜಾಗೊಳಿಸಿರುವ ಹಿನ್ನೆಲೆ ಸ್ವಿಟ್ಜರ್‌ಲೆಂಡ್‌ನ (Switzerland) ಜ್ಯೂರಿಯಲ್ಲಿರುವ ಕಂಪನಿಯ ಕಚೇರಿಯಲ್ಲಿ ಉದ್ಯೋಗಿಗಳು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆ ನಡೆಸಿದ್ದಾರೆ.

    ಗೂಗಲ್‌ನ ಮೂಲ ಕಂಪನಿ ಆಲ್ಫಾಬೆಟ್ ಜನವರಿಯಲ್ಲಿ ಪ್ರಪಂಚದಾದ್ಯಂತ ಸುಮಾರು 12,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿತ್ತು. ಇದು ಜಾಗತಿಕವಾಗಿ ಶೇ.9 ರಷ್ಟು ಕಂಪನಿಯ ಉದ್ಯೋಗಿಗಳಿಗೆ ಸಮವಾದ ಸಂಖ್ಯೆಯಾಗಿದೆ. ಇದೀಗ ಗೂಗಲ್ ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ.

    ಸುಮಾರು 5,000 ಉದ್ಯೋಗಿಗಳಿರುವ ಗೂಗಲ್‌ನ ಜ್ಯೂರಿ ಕಚೇರಿಯಲ್ಲಿ ಕಳೆದ ತಿಂಗಳು ಉದ್ಯೋಗಿಗಳನ್ನು ಕಡಿತಗೊಳಿಸುವುದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ವಜಾಗೊಳ್ಳುತ್ತಿರುವ ಉದ್ಯೋಗಿಗಳಿಗೆ ಬೆಂಬಲಿಸಿ ಇತರ ಉದ್ಯೋಗಿಗಳು ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಉದ್ಯೋಗಿಗಳಿಗೆ ಈಗ ಬೋನಸ್ ಇಲ್ಲ, ಹೊಸ ನೇಮಕಾತಿ ಸ್ಥಗಿತಗೊಳಿಸಿದ ಆಪಲ್

    ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವಲ್ಲಿ ಪಾರದರ್ಶಕತೆಯನ್ನು ತೋರ್ಪಡಿಸಲಾಗುತ್ತಿಲ್ಲ. ಕಂಪನಿ ಪ್ರತಿ ವರ್ಷ ಭಾರೀ ಲಾಭ ಗಳಿಸುತ್ತಿರುವ ಸಮಯದಲ್ಲಿಯೂ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದು ಅವರಲ್ಲಿ ನಿರಾಸೆ ಮೂಡಿಸಲು ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಉದ್ಯೋಗಿಗಳನ್ನು ಕಡಿತಗೊಳಿಸುತ್ತಿರುವುದರ ಬಗ್ಗೆ ಗೂಗಲ್ ವಕ್ತಾರರು, ಕಂಪನಿಯು ಅಗತ್ಯಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಹಿನ್ನೆಲೆ ಕಡಿತಗೊಳಿಸಲು ಮುಂದಾಗಿರುವುದಾಗಿ ತಿಳಿಸಿದೆ. ಇದನ್ನೂ ಓದಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ – ಒಂದೇ ಬೆಡ್ ಮೇಲೆ ಇಬ್ಬರು ರೋಗಿಗಳ ನರಳಾಟ

  • ಮತ್ತೆ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ

    ಮತ್ತೆ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ

    ವಾಷಿಂಗ್ಟನ್: ಫೇಸ್‌ಬುಕ್ (Facebook) ಹಾಗೂ ಇನ್‌ಸ್ಟಾಗ್ರಾಮ್‌ನ (Instagram) ಮಾತೃಕಂಪನಿ ಮೆಟಾ (Meta), ಮತ್ತೆ ತನ್ನ ಉದ್ಯೋಗಿಗಳನ್ನು (Employees) ಕಡಿತಗೊಳಿಸಲು ಯೋಜಿಸಿದೆ. ಈ ವಾರದಲ್ಲಿ ಮೆಟಾ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲಿದೆ (Layoff) ಎಂದು ವರದಿಯಾಗಿದೆ.

    ವಿಶ್ವದ ಅತಿ ದೊಡ್ಡ ಸಾಮಾಜಿಕ ನೆಟ್‌ವರ್ಕಿಂಗ್ ಕಂಪನಿಯಾಗಿರುವ ಮೆಟಾ ಕಳೆದ ವರ್ಷ ನವೆಂಬರ್‌ನಲ್ಲಿ ಸುಮಾರು ಶೇ.13ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಸುಮಾರು 11,000 ಉದ್ಯೋಗಿಗಳನ್ನು ಕಂಪನಿ ಮೊದಲ ಬಾರಿಗೆ ವಜಾಗೊಳಿಸಿತ್ತು. ಇದೀಗ ಮತ್ತೆ ಉದ್ಯೋಗಿಗಳನ್ನು ಕಡಿತಗೊಳಿಸಲು ಕಂಪನಿ ಯೋಜಿಸಿದ್ದು, ಇದು ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

    ಮೂಲಗಳ ಪ್ರಕಾರ, ವಜಾಗೊಳಿಸುವ ಪ್ರಕ್ರಿಯೆ ಈ ವಾರದಲ್ಲಿಯೇ ಪ್ರಾರಂಭವಾಗಿ ಮುಂದಿನ ವಾರದಲ್ಲಿ ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮಾರ್ಕ್ ಜುಕರ್‌ಬರ್ಗ್ ತಮ್ಮ 3ನೇ ಮಗುವಿಗೆ ಪೋಷಕ ರಜೆ ತೆಗೆದುಕೊಳ್ಳಲಿದ್ದು, ಇದಕ್ಕೂ ಮುನ್ನ ಈ ಎಲ್ಲಾ ಪ್ರಕ್ರಿಯೆಗಳು ಕೊನೆಗೊಳ್ಳಲಿದೆ ಎನ್ನಲಾಗಿದೆ. ಇದನ್ನೂ ಓದಿ: 1,300 ಉದ್ಯೋಗಿಗಳ ಬಳಿಕ ಅಧ್ಯಕ್ಷನನ್ನೂ ವಜಾಗೊಳಿಸಿದ ಜೂಮ್ ಕಂಪನಿ

    ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ಬಗ್ಗೆ ಮೆಟಾ ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗೆ ಕಂಪನಿ ಉದ್ಯೋಗಿಗಳ ಕಾರ್ಯಕ್ಷಮತೆಯ ಬಗ್ಗೆ ವಿಮರ್ಶೆ ಮಾಡಿದ್ದು, ಇದು ಉದ್ಯೋಗಿಗಳನ್ನು ವಜಾಗೊಳಿಸಲು ಕಾರಣ ಎನ್ನಲಾಗುತ್ತಿದೆ. ಮಾತ್ರವಲ್ಲದೇ ಕೆಲ ಉದ್ಯೋಗಿಗಳಿಗೆ ಕಾರ್ಯಕ್ಷಮತೆಯ ಬಗ್ಗೆ ಕಡಿಮೆ ರೇಟಿಂಗ್‌ಗಳನ್ನು ನೀಡಿದ್ದು, ಅವರಲ್ಲಿ ಹೆಚ್ಚಿನವರು ಉದ್ಯೋಗ ತೊರೆಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾದ ಬಿಸಿಗಾಳಿ – ಬೇಸಿಗೆ ಗೈಡ್‌ಲೈನ್ಸ್ ಹೊರಡಿಸಿದ ಆರೋಗ್ಯ ಇಲಾಖೆ

  • 7 ಸಾವಿರ ಉದ್ಯೋಗಿಗಳನ್ನ ಕೆಲಸದಿಂದ ತೆಗೆಯಲು ಮುಂದಾದ The Walt Disney

    7 ಸಾವಿರ ಉದ್ಯೋಗಿಗಳನ್ನ ಕೆಲಸದಿಂದ ತೆಗೆಯಲು ಮುಂದಾದ The Walt Disney

    ವಾಷಿಂಗ್ಟನ್: ಅಮೆರಿಕದ (US) ದಿ ವಾಲ್ಟ್ ಡಿಸ್ನಿ ಕಂಪನಿ (The Walt Disney Company), ವೆಚ್ಚದಲ್ಲಿ ಉಳಿತಾಯ ಮಾಡುವ ಸಲುವಾಗಿ ಏಕಾಏಕಿ 7 ಸಾವಿರ ಉದ್ಯೋಗಿಗಳನ್ನ ವಜಾಗೊಳಿಸಲು (Layoff) ಮುಂದಾಗಿದೆ. ಕಂಪನಿಗೆ ತಗಲುವ ವೆಚ್ಚ ಕಡಿಮೆ ಮಾಡಲು ಈ ನಿರ್ಧಾರ ಕೈಗೊಂಡಿದೆ.

    ವಿಶ್ವದ ದೈತ್ಯ ಟೆಕ್ ಕಂಪನಿಗಳಲ್ಲಿ (Tech Company) ಸರಣಿಯಾಗಿ ಉದ್ಯೋಗಿಗಳನ್ನು (Employees) ಕೆಲಸದಿಂದ ತೆಗೆಯುವ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಡಿಸ್ನಿ ಕೂಡಾ ಈ ನಿರ್ಧಾರ ಕೈಗೊಂಡಿದೆ. 2022ರ ನವೆಂಬರ್‌ನಲ್ಲಿ ಮಾಜಿ ಸಿಇಒ ಬಾಬ್ ಚಾಪೆಕ್ ಅವರಿಂದ ರಾಬರ್ಟ್ ಇಗರ್ (Robert Iger) ಅವರು ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ನಂತರ ಕಂಪನಿಯ ಆರ್ಥಿಕ ವೆಚ್ಚ ಕಡಿತಗೊಳಿಸಲು ನಿರ್ಧರಿಸಿದ್ದು, ಅದಕ್ಕಾಗಿ ಉದ್ಯೋಗಿಗಳನ್ನ ಕಡಿತಗೊಳಿಸಲು ಮುಂದಾಗಿದ್ದಾರೆ.

    ಡಿಸ್ನಿಯು ತನ್ನ ಪ್ರತಿಸ್ಪರ್ಧಿ ನೆಟ್‌ಫ್ಲಿಕ್ಸ್‌ ನಂತೆಯೇ (Netflix) ಚಂದಾದಾರರ ಬೆಳವಣಿಗೆಯಲ್ಲಿ ನಿಧಾನವಾಗಿದೆ. ಯುಎಸ್ ಮತ್ತು ಕೆನಡಾದಲ್ಲಿ ಕೇವಲ 2 ಲಕ್ಷ ಚಂದಾದಾರರನ್ನು ತಲುಪಿದ್ದು, ಒಟ್ಟು ಬಳಕೆದಾರರ ಸಂಖ್ಯೆ 46.6 ಮಿಲಿಯನ್‌ಗೆ ತಂದಿದೆ. ಹಾಟ್‌ಸ್ಟಾರ್ (Hotstar) ಹೊರತುಪಡಿಸಿ ಸ್ಟ್ರೀಮಿಂಗ್ ಸೇವೆಯು 12 ಲಕ್ಷ ಸದಸ್ಯರ ಸಂಖ್ಯೆಯಷ್ಟು ಹೆಚ್ಚಾಗಿದೆ. ಈ ನಡುವೆ ಇತರ ವೇದಿಕೆಗಳಾದ ಹುಲು ಮತ್ತು ಇಎಸ್‌ಪಿಎನ್ ಪ್ಲಸ್ ಬಳಕೆದಾರರಲ್ಲೂ ಕ್ರಮವಾಗಿ 8 ಮತ್ತು 6 ಲಕ್ಷ ಏರಿಕೆ ಕಂಡಿದೆ. ಇದನ್ನೂ ಓದಿ: 18 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಲಿದೆ amazon

    ಡಿಸ್ನಿ ತನ್ನ ತ್ರೈಮಾಸಿಕ ಬೆಳವಣಿಗೆಯನ್ನು ಗಮನಿಸಿದ ನಂತರ ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರ ಕೈಗೊಂಡಿದೆ. ವಿಶ್ವದಾದ್ಯಂತ ನಮ್ಮ ಉದ್ಯೋಗಿಗಳ ಪ್ರತಿಭೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಕಂಪನಿಯಾದ್ಯಂತ 5.5 ಶತಕೋಟಿ ಡಾಲರ್ ಉಳಿತಾಯದ ಗುರಿ ಹೊಂದಿದ್ದು, ಅದಕ್ಕಾಗಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಇಒ ಹೇಳಿದ್ದಾರೆ.

    ನಿರಂತರವಾಗಿ ಬೆಳವಣಿಗೆಯೊಂದಿಗೆ ಲಾಭದಾಯಕತೆ ಸಾಧಿಸುವುದು ನಮ್ಮ ಗುರಿಯಾಗಿದೆ. ಪ್ರಸ್ತುತ ನಮ್ಮ ಈ ನಿರ್ಧಾರದಿಂದ 2024 ಆರ್ಥಿಕ ವರ್ಷದ ವೇಳೆಗೆ ಡಿಸ್ನಿ ಪ್ಲಸ್ ಗರಿಷ್ಠ ಲಾಭದ ಗುರಿ ತಲುಪುತ್ತದೆ ಎಂದು ಇಗರ್ ಹೇಳಿದ್ದಾರೆ. ಆದರೆ, ಯಾವ ವಿಭಾಗಗಳಿಗೆ ಇದರ ಪರಿಣಾಮ ಬೀರುತ್ತದೆ ಅನ್ನುವ ಬಗ್ಗೆ ಬಹಿರಂಗಪಡಿಸಿಲ್ಲ. ಇದನ್ನೂ ಓದಿ: 1,337 ಕೋಟಿ ಪೈಕಿ ಶೇ.10 ರಷ್ಟು ದಂಡವನ್ನು ಠೇವಣಿ ಇಡಿ – ಗೂಗಲ್‌ಗೆ NCALT ಆದೇಶ

    ಈಗಾಗಲೇ ಅಮೆಜಾನ್ 18 ಸಾವಿರ, ಸೇಲ್ಸ್‌ಫೋರ್ಸ್‌ 8 ಸಾವಿರ, ಮೈಕ್ರೋಸಾಫ್ಟ್ (Microsoft) 10 ಸಾವಿರ ಹಾಗೂ ಗೂಗಲ್ 12 ಸಾವಿರ ಸೇರಿದಂತೆ ವಿವಿಧ ಕಂಪನಿಗಳು ಕಳೆದ ಒಂದು ವಾರದಲ್ಲಿ 50 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನ ಮನೆಗೆ ಕಳುಹಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಜಾ ದಿನಗಳಲ್ಲಿ ಸಹೋದ್ಯೋಗಿಗೆ ತೊಂದರೆ ನೀಡಿದ್ರೆ 1 ಲಕ್ಷ ದಂಡ..!

    ರಜಾ ದಿನಗಳಲ್ಲಿ ಸಹೋದ್ಯೋಗಿಗೆ ತೊಂದರೆ ನೀಡಿದ್ರೆ 1 ಲಕ್ಷ ದಂಡ..!

    ಮುಂಬೈ: ತಾಂತ್ರಿಕ ಬದುಕಿನಿಂದಾಗಿ ಬಹುತೇಕ ಉದ್ಯೋಗಿಗಳಿಗೆ (Employees) ಬಿಡುವೇ ಇಲ್ಲದಂತಾಗಿದೆ. ರಜಾ ದಿನಗಳಿದ್ದರೂ ತುರ್ತು ಕರೆಗಳು ಬರುತ್ತಲೇ ಇರುತ್ತವೆ. ಇದರಿಂದ ಮಾನಸಿಕ ಒತ್ತಡ ಹೆಚ್ಚಾಗಿ ದೈಹಿಕ ಸಾಮರ್ಥ್ಯ ಕುಗ್ಗುವಂತಾಗಿದೆ. ಆದ್ದರಿಂದ ಸಂಸ್ಥೆಯ ಸಿಬ್ಬಂದಿ ರಜಾ ದಿನಗಳನ್ನು ಆರಾಮದಾಯಕವಾಗಿ ಕಳೆಯುವಂತೆ ಮಾಡಲು ಮುಂಬೈ (Mumbai) ಮೂಲದ ಕಂಪನಿ ಹೊಸ ನಿಯಮ ಜಾರಿಗೊಳಿಸಿದೆ.

    ಸಂಸ್ಥೆಯ ಉದ್ಯೋಗಿಗಳು ರಜೆಯಲ್ಲಿದ್ದಾಗಲೂ ಕೆಲ ಸಹೋದ್ಯೋಗಿಗಳು ಅವರಿಗೆ ಉದ್ಯಮದ ವಿಚಾರದಲ್ಲಿ ಕಿರಿಕಿರಿ ಮಾಡುವುದು, ದೂರವಾಣಿ ಕರೆ, ಇಮೇಲ್ ಕಳಿಸಿ ತೊಂದರೆ ನೀಡದಂತೆ ತಾಕೀತು ಮಾಡಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ದಳಪತಿಗಳಿಗೆ ನಡುಕ ಹುಟ್ಟಿಸಿದ ಸುಮಲತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಎಂಟ್ರಿ?

    ಫ್ಯಾಂಟಸಿ ಸ್ಪೋರ್ಟ್ಸ್ (Fantasy Sports) ಪ್ಲಾಟ್‌ಫಾರ್ಮ್ ನಡೆಸುತ್ತಿರುವ ಮುಂಬೈ ಮೂಲದ ಡ್ರೀಮ್-11 (Dream11) ತನ್ನ ಸಹೋದ್ಯೋಗಿಗಳು ರಜೆಯಲ್ಲಿದ್ದಾಗ ಉದ್ಯಮದ ವಿಚಾರದಲ್ಲಿ ಕಿರಿಕಿರಿ ಮಾಡುವುದು, ಕರೆ, ಇಮೇಲ್ ಕಳಿಸಿ ತೊಂದರೆ ನೀಡುವುದು ಮಾಡಿದ್ರೆ 1 ಲಕ್ಷ ದಂಡ ಪಾವತಿಸಬೇಕಾಗುತ್ತದೆ ಎಂದು ಡ್ರೀಮ್ 11 ಸಹ-ಸಂಸ್ಥಾಪಕ ಭವಿತ್ ಶೇತ್ ತಿಳಿಸಿದ್ದಾರೆ.

    2008ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ತನ್ನ ನೀತಿಯ ಪ್ರಕಾರ ಕಾರ್ಮಿಕರಿಗೆ ವಾರ್ಷಿಕವಾಗಿ ಕನಿಷ್ಠ 1 ವಾರಗಳ ದೀರ್ಘ ರಜೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಿದೆ. ಡ್ರೀಮ್ 11 ಮೂಲಕ ರಜೆಯಲ್ಲಿರುವ ಉದ್ರೋಗಿಯನ್ನು ಲಾಗ್‌ಆಫ್ ಮಾಡಲಾಗುತ್ತದೆ. ಆಗ ಅವರೊಂದಿಗೆ ಕಂಪನಿಯಿಂದ ಯಾರೊಬ್ಬರೂ ಅವರನ್ನು ಸಂಪರ್ಕಿಸುವುದಿಲ್ಲವೆಂದು ಕಂಪನಿ ಹೇಳಿದೆ. ಇದನ್ನೂ ಓದಿ: ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರಿಡಲು ಬಿಬಿಎಂಪಿಗೆ ಮನವಿ

    ಪ್ರೀತಿ-ಪಾತ್ರರೊಂದಿಗೆ ಗುಣಮಟ್ಟದ ಸಮಯ ಕಳೆಯುವುದರಿಂದ, ರಜೆಯಲ್ಲಿ ಸಂಪೂರ್ಣ ಮಾನಸಿಕ ಮತ್ತು ದೈಹಿಕ ವಿಶ್ರಾಂತಿ ಪಡೆಯುವುದರಿಂದ ಕೆಲಸದಲ್ಲಿ ಉತ್ಸಾಹ ಹೆಚ್ಚುತ್ತದೆ. ಉದ್ಯೋಗಿ ಸಂತೋಷದಿಂದ ಕೆಲಸದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k