Tag: employment

  • ಉದ್ಯೋಗ ಅರಸಿ ವಿದೇಶಕ್ಕೆ ತೆರಳಿ ವಂಚನೆಗೊಳಗಾಗಿದ್ದ 28 ಕನ್ನಡಿಗರ ರಕ್ಷಣೆ

    ಉದ್ಯೋಗ ಅರಸಿ ವಿದೇಶಕ್ಕೆ ತೆರಳಿ ವಂಚನೆಗೊಳಗಾಗಿದ್ದ 28 ಕನ್ನಡಿಗರ ರಕ್ಷಣೆ

    – ಒತ್ತೆಯಾಳಾಗಿರಿಸಿಕೊಂಡಿದ್ದ ಭಾರತೀಯರಿಂದ ದಿನಕ್ಕೆ 15 ಗಂಟೆ ಕೆಲಸ

    ನವದೆಹಲಿ: ಉದ್ಯೋಗ (Job) ಅರಸಿ ವಿದೇಶಕ್ಕೆ ತೆರಳಿ ವಂಚನೆಗೆ ಒಳಗಾಗಿದ್ದ ನಾಲ್ವರು ಮಹಿಳೆಯರು ಸೇರಿ 28 ಮಂದಿ ಕನ್ನಡಿಗರನ್ನು ವಿದೇಶಾಂಗ ಸಚಿವಾಲಯ (Ministry of External Affairs) ರಕ್ಷಣೆ ಮಾಡಿದೆ. ರಕ್ಷಣೆಗೊಳಗಾದವರನ್ನು ದೆಹಲಿಯ ಕರ್ನಾಟಕ ಭವನದ ಅಧಿಕಾರಗಳ ನೆರವಿನೊಂದಿಗೆ ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ‌.

    ಸೋಶಿಯಲ್ ಮೀಡಿಯಾ ಮೂಲಕ ಉದ್ಯೋಗ ನೀಡುವ ಭರವಸೆ ನೀಡಿ 283 ಭಾರತೀಯರನ್ನು ಥೈಲ್ಯಾಂಡ್‌ಗೆ ಕರೆಸಿಕೊಳ್ಳಲಾಗಿತ್ತು. ಥೈಲ್ಯಾಂಡ್‌ಗೆ (Thailand) ತೆರಳಿದ್ದ ಭಾರತೀಯರನ್ನ (Indians) ರಸ್ತೆ ಮಾರ್ಗದ ಮೂಲಕ ಮಯನ್ಮಾರ್‌ಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪಾಸ್‌ಪೊರ್ಟ್ ಕಿತ್ತುಕೊಂಡು ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು.

    ಒತ್ತೆಯಾಳಾಗಿಟ್ಟುಕೊಂಡಿದ್ದ ಭಾರತೀಯರನ್ನು ದಿನಕ್ಕೆ 15 ಗಂಟೆಗೂ ಅಧಿಕ ಕೆಲಸ ಮಾಡಿಸಲಾಗುತ್ತಿತ್ತು. ಈ ವಿಷಯ ವಿದೇಶಾಂಗ ಸಚಿವಾಲಯ ಗಮನಕ್ಕೆ ಬಂದ ಬಳಿಕ ವಂಚನೆಗೊಳಾದವರನ್ನು ಗುರುತಿಸಿ ಮಯನ್ಮಾರ್, ಥೈಲ್ಯಾಂಡ್ ರಾಯಭಾರ ಕಚೇರಿಗಳ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಯಿತು‌.

    ಭಾರತಕ್ಕೆ ಬಂದ 28 ಕನ್ನಡಿಗರನ್ನು ಕರ್ನಾಟಕ ಭವನದ ಅಧಿಕಾರಿಗಳು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಕಳುಹಿಸಲಾಯಿತು.

  • ಉದ್ಯೋಗಿಗಳಿಗೆ 17,500 ರೂ. ಉಳಿತಾಯ –  ಮೊದಲು ತೆರಿಗೆ ಎಷ್ಟಿತ್ತು? ಈಗ ಏನು ಬದಲಾವಣೆಯಾಗಿದೆ?

    ಉದ್ಯೋಗಿಗಳಿಗೆ 17,500 ರೂ. ಉಳಿತಾಯ – ಮೊದಲು ತೆರಿಗೆ ಎಷ್ಟಿತ್ತು? ಈಗ ಏನು ಬದಲಾವಣೆಯಾಗಿದೆ?

    ನವದೆಹಲಿ: ತೆರಿಗೆ ಪಾವತಿದಾರರಿಗೆ (Salaried Class) ಬಜೆಟ್‌ನಲ್ಲಿ (Union Budget) ಗುಡ್‌ ನ್ಯೂಸ್‌ ಸಿಕ್ಕಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸಂಬಳ ಪಡೆಯುವ ಉದ್ಯೋಗಿಗಳು ವರ್ಷಕ್ಕೆ 17,500 ರೂ. ಆದಾಯ ತೆರಿಗೆ ಉಳಿತಾಯ ಮಾಡಬಹುದು.

    ಸಂಬಳ ಪಡೆಯುವ ಉದ್ಯೋಗಿಗಳಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ 50,000 ರೂ. ನಿಂದ 75,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: Union Budget 2024: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್;‌ ಚಿನ್ನ, ಬೆಳ್ಳಿ, ಪ್ಲಾಟಿನಂ ದರ ಇಳಿಕೆ – Live Updates‌‌

     
    ಎಷ್ಟು ತೆರಿಗೆ?
    0-3 ಲಕ್ಷ ರೂ. ವರೆಗೆ ಯಾವುದೇ ತೆರಿಗೆ ಇಲ್ಲ (ಯಾವುದೇ ಬದಲಾವಣೆ ಇಲ್ಲ)
    3-7 ಲಕ್ಷ ರೂ. ವರೆಗೆ 5% (ಮೊದಲು 3-6 ಲಕ್ಷ ರೂ. ಗೆ 5% ಇತ್ತು)
    7-10 ಲಕ್ಷ ರೂ. ವರೆಗೆ 10 % (ಮೊದಲು 6-9 ಲಕ್ಷ ರೂ. 10% ಇತ್ತು)
    10-12 ಲಕ್ಷ ರೂ. ವರೆಗೆ 15% ( ಮೊದಲು 9-12 ಲಕ್ಷ ರೂ. 15% ಇತ್ತು)
    12-15 ಲಕ್ಷ ರೂ. ವರೆಗೆ 20% (ಯಾವುದೇ ಬದಲಾವಣೆ ಇಲ್ಲ)
    15 ಲಕ್ಷ ರೂ. ಗಿಂತ ಮೇಲ್ಪಟ್ಟು 30% (ಯಾವುದೇ ಬದಲಾವಣೆ ಇಲ್ಲ)

  • Budget 2024 | ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ.

    Budget 2024 | ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ.

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಿರುದ್ಯೋಗ (Unemployment) ಸಮಸ್ಯೆ ದೊಡ್ಡ ಸದ್ದು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ತನ್ನ ಬಜೆಟ್‌ನಲ್ಲಿ ಪ್ರಕಟಿಸಿದೆ.

    ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ.

    ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ (Budget Speech) ನಿರ್ಮಲಾ ಸೀತಾರಾಮನ್‌, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯ ಭಾಗವಾಗಿ, ಔಪಚಾರಿಕ ವಲಯ ಮತ್ತು ಉತ್ಪಾದನಾ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಪಡೆದ ಎಲ್ಲರಿಗೂ ಸರ್ಕಾರ ಒಂದು ತಿಂಗಳ ವೇತನವನ್ನು ನೀಡಲಿದೆ ಎಂದು ಹೇಳಿದರು.

    ಒಂದು ತಿಂಗಳ ಸಂಬಳದ ನೇರ ಲಾಭ ವರ್ಗಾವಣೆ (DBT) ಮೂಲಕ 15,000 ರೂ. ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಇದನ್ನೂ ಓದಿ: Union Budget 2024: ಗ್ರಾಮೀಣ, ನಗರ ಪ್ರದೇಶಗಳಲ್ಲಿ 3 ಕೋಟಿ ಹೆಚ್ಚುವರಿ ಮನೆಗಳು – Live Updates‌‌

     

    ತಿಂಗಳಿಗೆ ಗರಿಷ್ಟ 1 ಲಕ್ಷ ರೂ. ಸಂಬಳ ಪಡೆಯುವ ಉದ್ಯೋಗಿಗಳು ಈ ಯೋಜನೆಯ ಲಾಭ ಪಡೆಯಬಹುದು. ಈ ಪ್ರಯೋಜನಗಳನ್ನು ಪಡೆಯಲು ಉದ್ಯೋಗಿಗಳು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಈ ಯೋಜನೆಯಿಂದ ಸುಮಾರು 2.10 ಹೊಸ ಉದ್ಯೋಗಿಗಳಿಗೆ ಲಾಭ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

  • ಖಾಸಗಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗಾವಕಾಶ ಕೊಡದಿದ್ದರೆ ಲೈಸೆನ್ಸ್ ರದ್ದು; ಸಚಿವ ಪರಮೇಶ್ವರ್ ಎಚ್ಚರಿಕೆ

    ಖಾಸಗಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗಾವಕಾಶ ಕೊಡದಿದ್ದರೆ ಲೈಸೆನ್ಸ್ ರದ್ದು; ಸಚಿವ ಪರಮೇಶ್ವರ್ ಎಚ್ಚರಿಕೆ

    ತುಮಕೂರು: ಜಿಲ್ಲೆಯಲ್ಲಿರುವ ಖಾಸಗಿ ಕಂಪನಿಗಳು (Private Company) ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ (Employment) ಕೊಡದಿದ್ದರೇ ಅವರ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ನೂತನ ಸಚಿವ ಡಾ.ಜಿ ಪರಮೇಶ್ವರ್ (G Parameshwar) ಎಚ್ಚರಿಕೆ ನೀಡಿದ್ದಾರೆ.

    ತುಮಕೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶ ನೀಡುತ್ತಿಲ್ಲ ಎಂಬ ಸಾಕಷ್ಟು ದೂರುಗಳು ಬಂದಿದೆ. ಈ ಕುರಿತಂತೆ ಚಿಂತನೆ ನಡೆಸಿ ಅಂತಹ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ಯುವಕರು ಉದ್ಯೋಗ ದೊರೆಯುತ್ತಿಲ್ಲ ಎಂದು ಆತಂಕಪಡಬೇಕಿಲ್ಲ. ಕಾಂಗ್ರೆಸ್‌ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಿದೆ ಎಂಧು ಅಭಯ ನೀಡಿದ್ದಾರೆ. ಇದನ್ನೂ ಓದಿ: ಕೇಂದ್ರದ 5 ಕೆ.ಜಿ ಜೊತೆಗೆ ಒಟ್ಟು 15 ಕೆ.ಜಿ ಅಕ್ಕಿ ಕೊಡಬೇಕು: ಅಶ್ವಥ್ ನಾರಾಯಣ್ ಒತ್ತಾಯ

    ನಾನು ಯುವಕನಾಗಿದ್ದಾಗ ತುಮಕೂರು ನಗರದ ಜೂನಿಯರ್ ಕಾಲೇಜು ಗ್ರೌಂಡ್ ನಲ್ಲಿ ಅಥ್ಲೆಟಿಕ್ಸ್ ನಲ್ಲಿ ಪಾಲ್ಗೊಳ್ಳಲು ಅಭ್ಯಾಸ ಮಾಡುತ್ತಿದ್ದೆ. ಅಲ್ಲಿಂದ ಬೆಂಗಳೂರಿಗೆ ಹೋದೆ, ನಂತರ ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಹೋದೆ, ಕೊನೆಗೆ ನನ್ನ ಊರು ತುಮಕೂರಿಗೆ ಬಂದು ಸೇರಿದ್ದೇನೆ. ಎಲ್ಲೆಲ್ಲೋ ಹೋಗಿ ಬಂದರೂ ಏನೂ ಮಾಡೋಕೆ ಆಗ್ಲಿಲ್ಲ. ಹಾಗಾಗಿ ವಾಪಸ್ ತುಮಕೂರು ಹೊರವಲಯದ ಗೊಲ್ಲಳ್ಳಿಗೆ ಬಂದು ಸೇರಿದ್ದೇನೆ. ಇಲ್ಲಿನ ಜನರ ಪ್ರೀತಿ ವಿಶ್ವಾಸ ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸುಮಲತಾರ ಚೊಚ್ಚಲ ತಮಿಳು ಚಿತ್ರದಲ್ಲಿ ನಟಿಸಿದ್ದರು ಶರತ್ ಬಾಬು : ನೆನಪು ಹಂಚಿಕೊಂಡ ಸಂಸದೆ

  • ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ ಸೃಷ್ಟಿ: ಬೊಮ್ಮಾಯಿ

    ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ ಸೃಷ್ಟಿ: ಬೊಮ್ಮಾಯಿ

    ಹಾವೇರಿ: ಕಳೆದ 4 ವರ್ಷಗಳಲ್ಲಿ ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ (Employment) ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಭಾನುವಾರ ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲ್ಯಾಣ ಗ್ರಾಮದ ಜಿಟಿಟಿಸಿ (GTTC) ನಿವೇಶನದ ಬಳಿ ಆಯೋಜಿಸಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಕಲ್ಯಾಣ ಗ್ರಾಮದಲ್ಲಿ ನೂತನ ತರಬೇತಿ ಸಂಕೀರ್ಣ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಈ ಮಾಹಿತಿ ಪ್ರಾವಿಡೆಂಟ್ ಫಂಡ್ ಮತ್ತು ಇಎಸ್‌ಐನಲ್ಲಿ ದಾಖಲಾಗಿರುವ 18 ರಿಂದ 25 ವರ್ಷಗಳೊಳಗಿನವರು ದಾಖಲಿಸಿಕೊಂಡಿರುವುದನ್ನು ಆಧರಿಸಿ, ಅಧ್ಯಯನ ಮಾಡಿ ಮಾಹಿತಿ ನೀಡಲಾಗಿದೆ ಎಂದರು.

    ಅನುತ್ತೀರ್ಣರಾದವರಿಗೂ ಅವಕಾಶ: ಕೇವಲ ಎಂಜಿನಿಯರಿಂಗ್, ಐಟಿ ಬಿಟಿ ಕಲಿತವರಿಗಷ್ಟೇ ಅಲ್ಲ, ಪಿಯುಸಿ ಅನುತ್ತೀರ್ಣರಾದವರಿಗೆ ಕೆಲಸ ದೊರೆಯಬೇಕು. ಆಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಸಾಧ್ಯ ಎಂದು ಹಲವು ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಗ್ಗಾಂವಿ, ಬಂಕಾಪುರ, ಉಡಚೆನ್ನಾಪುರ ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿಗ್ಗಾಂವಿ ಹಾಗೂ ಸವಣೂರು ಐಟಿಐಗಳು ತಲಾ 3 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಕೆಎಸ್‌ಆರ್‌ಟಿಐ ಪಾಲಿಟೆಕ್ನಿಕ್ ನಿರ್ಮಾಣವಾಗುತ್ತಿದೆ. ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದ ಕೌಶಲ್ಯಾಭಿವೃದ್ಧಿ, ತರಬೇತಿಯನ್ನು ಎಲ್ಲಾ ಸಂಸ್ಥೆಗಳಲ್ಲಿಯೂ ದೊರೆಯುವಂತಾಗಬೇಕೆನ್ನುವ ಕನಸು ನನ್ನದು ಎಂದರು.

    ಸವಣೂರಿನಲ್ಲಿ ಜವಳಿ ತರಬೇತಿಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿಗ್ಗಾಂವಿಯ ಪಶು ವೈದ್ಯಕೀಯ ಪಾಲಿಟೆಕ್ನಿಕ್ ಅನ್ನು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಎಲ್ಲಾ ಸಂಸ್ಥೆಗಳು ಸದೃಢವಾಗಿ ಬೆಳೆದು ಸಾವಿರಾರು ಯುವಕರಿಗೆ ತರಬೇತಿ ನೀಡಿದರೆ ಬದುಕಿನಲ್ಲಿ ಮುಂದೆ ಸಾಗುತ್ತಾರೆ. ಕಳೆದ 4 ವರ್ಷಗಳಲ್ಲಿ ಕೋವಿಡ್ ಇದ್ದರೂ ಕೂಡಾ ಆರ್ಥಿಕತೆ ಕಾಪಾಡಿಕೊಂಡು ಬಂದಿದ್ದರ ಪರಿಣಾಮವಾಗಿ ವಿದೇಶಿ ಬಂಡವಾಳ ಹೆಚ್ಚು ಹರಿದು ಬಂದಿದೆ. ಕರ್ನಾಟಕ ಪ್ರಗತಿಪರ ಆಡಳಿಗಾರರ ಕೈಯಲ್ಲಿ ಇದ್ದುದರಿಂದ ಇದು ಸಾಧ್ಯವಾಗಿದೆ ಎಂದರು.

    ಸ್ವಾಭಿಮಾನದ ಬದುಕು: ಮುಂದಿನ ದಿನಗಳಲ್ಲಿ ಹೆಚ್ಚಿನ ಆರ್ಥಿಕತೆ, ಮೂಲ ಸೌಕರ್ಯ, ತರಬೇತಿ ಕೇಂದ್ರಗಳು ದೊಡ್ಡ ಪ್ರಮಾಣದಲ್ಲಿ ಆದರೆ ಕರ್ನಾಟಕದ ಯುವಕರಿಗೆ ಕೆಲಸ, ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಎಂಬ ನಿಟ್ಟಿನಲ್ಲಿ ಪ್ರಗತಿಪರ, ದೂರದೃಷ್ಟಿ ಇರುವ ಯುವಕರ ಭವಿಷ್ಯವನ್ನು ಬರೆಯಲು ಈ ನಿರ್ಣಯಗಳನ್ನು ಮಾಡಲಾಗಿದೆ ಎಂದರು.

    ಜವಳಿ ಪಾರ್ಕ್‌ನಲ್ಲಿ 10 ಸಾವಿರ ಉದ್ಯೋಗ: ಸುಮಾರು 73 ಕೋಟಿ ರೂ.ಗಳ ಜಿಟಿಟಿಸಿ ಇಲ್ಲಿ ಬರಲಿದೆ. 4 ವರ್ಷಗಳ ಡಿಪ್ಲೊಮಾ ಕೋರ್ಸ್, ಅಲ್ಪಾವಧಿ, ಸರ್ಟಿಫೈಡ್ ಕೋರ್ಸ್ಗಳು ಲಭ್ಯವಿದೆ. ಜಗತ್ತಿನ ಆಧುನಿಕ ತರಬೇತಿಯನ್ನು ಇಲ್ಲಿ ಪಡೆಯಬಹುದು. ಜವಳಿ ಪಾರ್ಕ್, ಪಶು ವೈದ್ಯಕೀಯ ಪಾಲಿಟೆಕ್ನಿಕ್ ಬರುತ್ತಿದ್ದು, ಜವಳಿ ಪಾರ್ಕ್‌ನಲ್ಲಿಯೇ 10 ಸಾವಿರ ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಇದನ್ನು ಹೊರತುಪಡಿಸಿ 5 ಸಾವಿರ ಜನರಿಗೆ ಗಾರ್ಮೆಂಟ್‌ಗಳಲ್ಲಿ ಕೆಲಸ ದೊರೆಯುತ್ತದೆ. ಯುವಕರಿಗೆ ಉದ್ಯೋಗದ ಭವಿಷ್ಯ ಬರೆಯಲು ಕಾರ್ಯಕ್ರಮ ರೂಪಿಸಿದ್ದು ಇದರ ಪ್ರಯೋಜನವನ್ನು ಯುವಕರು ಪಡೆಯಬೇಕೆಂದರು.

    ಕೆಲಸ ಸಿಗುವ ಗ್ಯಾರಂಟಿ: ಜಿಟಿಟಿಸಿ ಬಹಳ ಪ್ರಮುಖ ಸಂಸ್ಥೆ. ಎಂಜಿನಿಯರಿಂಗ್ ಮುಗಿಸಿದ ನಂತರ ಜಿಟಿಟಿಸಿ ಬೆಂಗಳೂರಿನಲ್ಲಿ 6 ತಿಂಗಳ ತರಬೇತಿ ಪಡೆದಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಒಂದು ಭಾಗ ಎಂಜಿನಿಯರಿಂಗ್‌ನಲ್ಲಿ ಕಲಿತಿದ್ದಾರೆ. ಜಿಟಿಟಿಸಿಯಲ್ಲಿ 10 ಭಾಗ ಕಲಿತೆವು. ಇದರ ಪರಿಣಾಮವಾಗಿ ಟಾಟಾ ಮೋಟರ್ಸ್‌ನಲ್ಲಿ ನೌಕರಿ ಲಭಿಸಿತು. ಇಲ್ಲಿ ತರಬೇತಿ ಪಡೆದವರಿಗೆ ಶೇ.100 ರಷ್ಟು ಕೆಲಸ ಸಿಗುವ ಗ್ಯಾರಂಟಿ ಇದೆ. ಇಲ್ಲಿನ ತರಬೇತಿ ವಿಧಾನ ಬಹಳಷ್ಟು ಉತ್ತಮವಾಗಿದೆ. ಪ್ರಮಾಣಪತ್ರವಿದ್ದರೆ ಶೇ.50 ರಷ್ಟು ಅಂಕಗಳನ್ನು ಉದ್ಯೋಗದಲ್ಲಿ ನೀಡುತ್ತಾರೆ. ಜಿಟಿಟಿಸಿ ಪ್ರವೇಶ ಪಡೆದು ತರಬೇತಿ ಪಡೆದರೆ ಉಜ್ವಲ ಭವಿಷ್ಯವಿರುತ್ತದೆ ಎಂದರು. ಇದನ್ನೂ ಓದಿ: ಮಾನ ಇದ್ದವರು ಮಾನದ ಬಗ್ಗೆ ಯೋಚನೆ ಮಾಡುತ್ತಾರೆ : ಡಿಕೆಶಿ ವಿರುದ್ಧ ಸಿ.ಟಿ.ರವಿ ವ್ಯಂಗ್ಯ

    1.80 ಲಕ್ಷ ಯುವಕರಿಗೆ ಸ್ಕಿಲ್ ಇಂಡಿಯಾ ಅಡಿ ತರಬೇತಿ: ಭಾರತಕ್ಕೆ ಕೌಶಲ್ಯವಿರುವ ಯುವಕರು ಅಗತ್ಯ. ನಮ್ಮ ಪ್ರಧಾನಿಗಳು ಜನಸಂಖ್ಯೆಯನ್ನು ಬಂಡವಾಳ ಎಂದು ಪರಿಗಣಿಸಿ, ಶೇ.40 ರಷ್ಟಿರುವ ಯುವಜನಾಂಗಕ್ಕೆ ಕೌಶಲ್ಯ ನೀಡಿದರೆ. ಕೈಗಾರೀಕರಣಕ್ಕೆ ಬಹಳ ದೊಡ್ಡ ಕೊಡುಗೆ ನೀಡಬಹುದು ಎಂದು ಸ್ಕಿಲ್ ಇಂಡಿಯಾ ಯೋಜನೆ ಪ್ರಾರಂಭ ಮಾಡಿದರು. ಇದರಲ್ಲಿ ಹಲವಾರು ವಿಧದ ತರಬೇತಿ ನೀಡಿ ಯುವಕರನ್ನು ತಯಾರು ಮಾಡಬಹುದಾಗಿದೆ. ರಾಜ್ಯದಲ್ಲಿ 1.80 ಲಕ್ಷ ಯುವಕರಿಗೆ ಸ್ಕಿಲ್ ಇಂಡಿಯಾ ಅಡಿ ತರಬೇತಿ ನೀಡಲಾಗಿದೆ ಎಂದರು.

    ಸಂಸ್ಥೆಯಾಗಿ ಪರಿವರ್ತನೆ: ಈ ವರ್ಷ ಜಿಟಿಟಿಸಿ ಒಂದು ಸಂಸ್ಥೆಯನ್ನಾಗಿ ಪರಿವರ್ತನೆ ಮಾಡಲಾಗುತ್ತಿದ್ದು ಹೊಸ ಸಂರಚನೆ ನೀಡಲು ತೀರ್ಮಾನಿಸಿ ಜಿಟಿಟಿಸಿ, ಐಟಿಐ, ಪಾಲಿಟೆಕ್ನಿಕ್ ಮೇಲ್ದರ್ಜೆಗೇರಿಸಲು ಬಹಳಷ್ಟು ಒತ್ತು ನೀಡಲಾಗಿದೆ. ಪಿಯುಸಿ ಅನುತ್ತೀರ್ಣರಾದವರಿಗೂ ವಿಶೇಷ ತರಬೇತಿಗೆ ಪ್ರವೇಶ ದೊರೆಯಲಿದೆ. 3-6 ತಿಂಗಳು ತರಬೇತಿ ನೀಡಿ ಉದ್ಯೋಗ ದೊರೆಯುವವರೆಗೆ ವಿದ್ಯಾರ್ಥಿ ವೇತನ ನೀಡುವ ವ್ಯವಸ್ಥೆ ಕಲ್ಪಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯಗೆ ಜ್ಞಾನ ಕಡಿಮೆ ಅನ್ಸುತ್ತೆ : ಆರ್. ಅಶೋಕ್

    ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವ ಶಿವರಾಮ್ ಹೆಬ್ಬಾರ್, ಮೊದಲಾದವರು ಉಪಸ್ಥಿತರಿದ್ದರು.

  • ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ

    ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ

    ಬೆಂಗಳೂರು: ಒಂದೆಡೆ ಪ್ರಧಾನಿ ಮೋದಿ (Narendra Modi) ಹೋದಲ್ಲಿ ಬಂದಲ್ಲಿ, ರಾಜಕೀಯ ಪಕ್ಷಗಳು ಎಗ್ಗಿಲ್ಲದೇ ಘೋಷಿಸ್ತಿರೋ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಗೆ ಹೊಡೆತ ಬೀಳುತ್ತೆ ಅಂತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ (Congress) ಮತದಾರರನ್ನ ಸೆಳೆಯಲು ನಿರಂತರವಾಗಿ ಒಂದಾದ ಮೇಲೊಂದರಂತೆ ಉಚಿತ ಕೊಡುಗೆಗಳ ಘೋಷಣೆ ಮಾಡುತ್ತಿದೆ. ಇದಕ್ಕೆ ಬಿಜೆಪಿ ಸಹ ತಿರುಗೇಟು ನೀಡಿದ್ದು, ಕಾಂಗ್ರೆಸ್ ಪಕ್ಷದ ಈ ಉಚಿತ ಭರವಸೆಗಳನ್ನು ಈಡೇರಿಸಲು ಆಗಲ್ಲ ಎಂದು ಕಿಡಿ ಕಾರಿದೆ.

    ಬಿಜೆಪಿ ನಾಯಕರ ಪ್ರಕಾರ, ಕಾಂಗ್ರೆಸ್‌ ಘೋಷಣೆ ಮಾಡಿರುವ ನಾಲ್ಕು ಗ್ಯಾರಂಟಿಗಳಿಗೆ 60 ರಿಂದ 65 ಸಾವಿರ ಕೋಟಿ ಬೇಕಾಗುತ್ತೆ. ಅಷ್ಟೊಂದು ದುಡ್ಡು ಒದಗಿಸಿ, ಈ ಭರವಸೆ ಈಡೇರಿಸಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಈ ಬೆನ್ನಲ್ಲೇ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ವಿತರಣೆ ಮಾಡುವ ನೆಪದಲ್ಲಿ ಮತದಾರರ ದತ್ತಾಂಶ ಸಂಗ್ರಹ ಮಾಡ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಇದನ್ನೂ ಓದಿ: ಮೋದಿ ಯುವಜನರನ್ನ ಸ್ವಾವಲಂಬಿಗಳಾಗಿ ಮಾಡಿದ್ರೆ, ಕಾಂಗ್ರೆಸ್‌ 3 ಸಾವಿರ ಕೊಡ್ತೀನಿ ಅಂತಿದೆ – ತೇಜಸ್ವಿ‌ ಸೂರ್ಯ

    ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಉಚಿತ ಯೋಜನೆಗಳ ಆಮಿಷ ಒಡ್ಡುವ ಕೆಲಸ ಮಾಡ್ತಿದ್ದಾರೆ. ಮತದಾರರ ವೋಟರ್ ಐಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಕಲೆಕ್ಟ್ ಮಾಡ್ತಿದ್ದಾರೆ. ಫೋನ್ ಪೇ, ಗೂಗಲ್ ಪೇ ನಂಬರ್ಸ್ ಕಲೆಕ್ಟ್ ಮಾಡುತ್ತಿದ್ದಾರೆ. ಇದನ್ನು ತಡೆದು, ಕಾಂಗ್ರೆಸ್ ವಿರುದ್ಧ ಕ್ರಮ ತಗೋಬೇಕು ಎಂದು ಮನವಿ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಲಕ್ಷ ಯುವಕರಿಗೆ ಉದ್ಯೋಗ – ರಾಹುಲ್ ಗಾಂಧಿ ಭರವಸೆ

    ಕಾಂಗ್ರೆಸ್‌ ಯುವಕ್ರಾಂತಿ ಸಮಾವೇಶದಲ್ಲಿ 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ (Unemployment) ಪದವೀಧರರಿಗೆ 3 ಸಾವಿರ ರೂ. ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುವ `ಯುವನಿಧಿ’ (YuvaNidhi) ಯೋಜನೆಯನ್ನ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ ಈವರೆಗೆ ನೀಡಿರುವ ಭರವಸೆಗಳಿಗೆ ಎಷ್ಟು ವೆಚ್ಚ ಆಗಬಹುದು? ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಎಷ್ಟಿದೆ? ಇತರೆ ರಾಜ್ಯಗಳಲ್ಲಿ ಕಾಂಗ್ರೆಸ್ ಕೊಟ್ಟಿದ್ದ ಭರವಸೆಗಳು ಏನಾಗಿವೆ ಎಂಬುದನ್ನ ದಾಖಲೆ ಸಮೇತ ಮುಂದಿಟ್ಟಿದೆ.

    ಕಾಂಗ್ರೆಸ್ (Punjab) ಗ್ಯಾರಂಟಿಗೆ ಬಿಜೆಪಿ ಕಿಡಿ: ಪಂಜಾಬ್‌ನಲ್ಲಿ ಕಾಂಗ್ರೆಸ್‌ 2017ರಲ್ಲಿ ನೀಡಿದಂತೆ ನಿರುದ್ಯೋಗಿಗಳಿಗೆ 2000 ರೂ. ಭತ್ಯೆ ನೀಡುವ ಭರವಸೆ ಈಡೇರಿಸಿಲ್ಲ. 2018ರಲ್ಲಿ ರಾಜಸ್ಥಾನದಲ್ಲಿ‌ ನಿರುದ್ಯೋಗಿಗಳಿಗೆ 3,500 ರೂ. ಭತ್ಯೆ ಭರವಸೆಯನ್ನೂ ಭಾಗಶಃ ಈಡೇರಿಸಿಲ್ಲ (ಎರಡೂವರೆ ಲಕ್ಷಕ್ಕಿಂತ ಹೆಚ್ಚು ಆದಾಯ ಇರುವ ಕುಟುಂಬಗಳನ್ನು ಕಾಂಗ್ರೆಸ್ ಈ ಯೋಜನೆಯಿಂದ ಹೊರಗಿಟ್ಟಿದೆ.. 18 ಲಕ್ಷ ನಿರುದ್ಯೋಗಿಗಳಿದ್ದಾರೆ). 2018ರಲ್ಲಿ ಛತ್ತೀಸ್‌ಘಡ ಸರ್ಕಾರ ಹೇಳಿದಂತೆ ನಿರುದ್ಯೋಗಿಗಳಿಗೆ 2,500 ರೂ. ಭತ್ಯೆ ಭರವಸೆಯನ್ನು ಈಡೇರಿಸಿಲ್ಲ (ಎರಡೂವರೆ ಲಕ್ಷಕ್ಕಿಂತ ಹೆಚ್ಚು ಆದಾಯ ಇರುವ ಕುಟುಂಬಗಳನ್ನು ಕಾಂಗ್ರೆಸ್ ಈ ಯೋಜನೆಯಿಂದ ಹೊರಗಿಟ್ಟಿದೆ.. 3000 ಕೋಟಿ ಬೇಕಿದ್ದ ಜಾಗದಲ್ಲಿ 250 ಕೋಟಿ ಮೀಸಲಿಟ್ಟಿದೆ). ಹಿಮಾಚಲ ಪ್ರದೇಶದಲ್ಲಿ 1 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಭರವಸೆಯಯನ್ನೂ ಕಾಂಗ್ರೆಸ್ ಈಡೇರಿಸಿಲ್ಲ. ಈ ಪಟ್ಟಿಯಲ್ಲಿ ಇದೊಂದು ಸುಳ್ಳಿನ ಗ್ಯಾರಂಟಿ ಕಾರ್ಡ್‌ ಸೇರಿದೆ ಎಂದು ಬಿಜೆಪಿ ಕಿಡಿ ಕಾರಿದೆ.

    ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ (ಸಿಎಂಐಇ ಪ್ರಕಾರ): ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆ ಇದೆ ಎಂದು ಸಿಎಂಐಇ ಹೇಳಿದೆ. ಜನವರಿ ತಿಂಗಳಲ್ಲಿ ರಾಜ್ಯದಲ್ಲಿದ್ದ ನಿರುದ್ಯೋಗ ಪ್ರಮಾಣ ಶೇ.2.5 (ರಾಜಸ್ಥಾನದಲ್ಲಿ ಶೇ.28, ದೆಹಲಿಯಲ್ಲಿ ಶೇ.20ರಷ್ಟಿದೆ), ಫೆಬ್ರವರಿ ತಿಂಗಳಲ್ಲಿ ರಾಜ್ಯದ ನಿರುದ್ಯೋಗ ಪ್ರಮಾಣ ಶೇ. 1.8ಕ್ಕೆ ಇಳಿಕೆಯಾಗಿದೆ ಎಂದು ಹೇಳಲಾಗಿದೆ.

  • ಮೋದಿ ಯುವಜನರನ್ನ ಸ್ವಾವಲಂಬಿಗಳಾಗಿ ಮಾಡಿದ್ರೆ, ಕಾಂಗ್ರೆಸ್‌ 3 ಸಾವಿರ ಕೊಡ್ತೀನಿ ಅಂತಿದೆ – ತೇಜಸ್ವಿ‌ ಸೂರ್ಯ

    ಮೋದಿ ಯುವಜನರನ್ನ ಸ್ವಾವಲಂಬಿಗಳಾಗಿ ಮಾಡಿದ್ರೆ, ಕಾಂಗ್ರೆಸ್‌ 3 ಸಾವಿರ ಕೊಡ್ತೀನಿ ಅಂತಿದೆ – ತೇಜಸ್ವಿ‌ ಸೂರ್ಯ

    ಬೆಂಗಳೂರು: `ಯುವಕ್ರಾಂತಿ’ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ (Rahul Gandhi) 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ (Unemployment) ಪದವೀಧರರಿಗೆ 3 ಸಾವಿರ ರೂ. ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುವ `ಯುವನಿಧಿ’ (YuvaNidhi) ಯೋಜನೆಯನ್ನ ಘೋಷಣೆ ಮಾಡಿದ್ದಾರೆ.

    ಕಾಂಗ್ರೆಸ್ ಘೋಷಣೆ ಮಾಡಿರುವ 4ನೇ ಗ್ಯಾರಂಟಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi_Surya) ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ.: ಕಾಂಗ್ರೆಸ್‌ 4ನೇ ಗ್ಯಾರಂಟಿ ಘೋಷಣೆ

    `ಒಂದೆಡೆ ಪ್ರಧಾನಿ ನರೇಂದ್ರ ಮೋದಿ (NarendraModi) ಅವರು, ಸ್ಟಾರ್ಟ್ಅಪ್, ಡಿಜಿಟಲ್ ಇಂಡಿಯಾ (Digital India), ಮುದ್ರಾ ಮತ್ತು ಇನ್ನಿತರ ಯೋಜನೆಗಳಿಂದ ಯುವಜನರನ್ನು ಸ್ವಾವಲಂಭಿಗಳಾಗಿ ಮಾಡಲು ಪ್ರಯತ್ನಿಸುತ್ತಿದ್ದರೇ, ಇನ್ನೊಂದೆಡೆ ರಾಹುಲ್‌ಗಾಂಧಿ ಅವರು 3 ಸಾವಿರ ರೂ. ಭತ್ಯೆ ಕೊಡುವ ಮಹಾನ್ ಯೋಜನೆಯನ್ನು ಕರ್ನಾಟಕದ ಯುವಜನತೆಗೆ ಘೋಷಿಸುತ್ತಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇಂದಿನ ಆಶಾದಾಯಿ ಯುವ ಪೀಳಿಗೆಯಿಂದ ಕಾಂಗ್ರೆಸ್ ಪಕ್ಷ ಎಷ್ಟು ದೂರ ಸರಿದಿದೆ ಎಂಬುದಕ್ಕೆ ಇದು ನಿದರ್ಶನ. ದೇಶದ ಆಶಾದಾಯಕ, ಭರವಸೆಯ ಯುವಜನತೆಗೆ ನಿರುದ್ಯೋಗಿ ಕಾಂಗ್ರೆಸ್ ಪಕ್ಷವು ಮಾಡುತ್ತಿರುವ ದ್ರೋಹ ಅಕ್ಷಮ್ಯ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಲಕ್ಷ ಯುವಕರಿಗೆ ಉದ್ಯೋಗ – ರಾಹುಲ್ ಗಾಂಧಿ ಭರವಸೆ

    ಈಗಾಗಲೇ ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡುವುದಾಗಿ ಘೋಷಿಸಿರುವ ಕಾಂಗ್ರೆಸ್ ತನ್ನ 4ನೇ ಗ್ಯಾರಂಟಿಯಾಗಿ `ಯುವನಿಧಿ’ ಯೋಜನೆಯನ್ನ ಘೋಷಣೆ ಮಾಡಿದೆ.

  • ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಲಕ್ಷ ಯುವಕರಿಗೆ ಉದ್ಯೋಗ – ರಾಹುಲ್ ಗಾಂಧಿ ಭರವಸೆ

    ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಲಕ್ಷ ಯುವಕರಿಗೆ ಉದ್ಯೋಗ – ರಾಹುಲ್ ಗಾಂಧಿ ಭರವಸೆ

    ಬೆಳಗಾವಿ: ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ್ರೆ ಮುಂದಿನ 5 ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗಾವಕಾಶ (Employment) ನೀಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭರವಸೆ ನೀಡಿದರು.

    ಬೆಳಗಾವಿಯಲ್ಲಿ (Belagavi) ನಡೆದ `ಯುವಕ್ರಾಂತಿ’ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 5 ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ ನೀಡಲಿದೆ. ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ 2.5 ಲಕ್ಷ  ಉದ್ಯೋಗವನ್ನು ರಾಜ್ಯದ ಯುವಜನರಿಗೆ ಸಿಗುವಂತೆ ಮಾಡಲಿದೆ ಎಂದು ಘೋಷಣೆ ಮಾಡಿದರು.

    ಮುಂದುವರಿದು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಅವರು ಭರವಸೆ ನೀಡಿದರು. ದನ್ನೂ ಓದಿ: ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ.: ಕಾಂಗ್ರೆಸ್‌ 4ನೇ ಗ್ಯಾರಂಟಿ ಘೋಷಣೆ

    ಕೆಲ ತಿಂಗಳ ಹಿಂದೆ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಭಾರತ್ ಜೋಡೋ ಯಾತ್ರೆ (Bharat Jodo Yatra) ನಡೆಸಲಾಯಿತು. ಅದಕ್ಕೆ ರಾಜ್ಯದಿಂದಲೂ ಜನರು ಅಪಾರ ಬೆಂಬಲ ಕೊಟ್ಟಿದ್ದರು. ನಾನು ಅವರಿಗೆ ಧನ್ಯವಾದ ತಿಳಿಸುತ್ತೇನೆ. ನಾವು ರಾಜ್ಯದಲ್ಲಿ ಭಾರತ್ ಜೋಡೊ ಯಾತ್ರೆ ಕೈಗೊಂಡ ಸಂದರ್ಭದಲ್ಲಿ ಯುವಕರು ನಮಗೆ ಕೆಲ ಸಂದೇಶ ಕೊಟ್ಟರು. ಯಾವುದೇ ಪದವೀಧರರಿಗೂ ಕರ್ನಾಟಕ ಸರ್ಕಾರ ಉದ್ಯೋಗ ಕೊಡುತ್ತಿಲ್ಲ, ಯಾವುದೇ ಕೆಲಸ ಆಗಬೇಕು ಅಂದರೂ 40 ಪರ್ಸೆಂಟ್ ಕಮಿಷನ್ ಕೊಡಬೇಕಾಗಿದೆ. ಇಡೀ ದೇಶದಲ್ಲೇ ಕರ್ನಾಟಕ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂಬ ಸಂದೇಶಗಳನ್ನ ನೀಡಿದರು. ಯುವಕರಿಗೆ ನಿರುದ್ಯೋಗದಿಂದ ಸಮಸ್ಯೆಗಳಾಗುತ್ತಿವೆ. ಸಾಕಷ್ಟು ಮುಜುಗರ ಎದುರಿಸುತ್ತಿದ್ದಾರೆ. ಇದೆಲ್ಲವನ್ನು ಮನಗಂಡು ನಮ್ಮ ಸರ್ಕಾರ `ಯುವನಿಧಿ’ಯನ್ನ ಘೋಷಣೆ ಮಾಡಿದೆ ಎಂದು ಹೇಳಿದರು.

    ದೇಶದಲ್ಲಿ ಎಲ್ಲ ಕೈಗಾರಿಕೆಗಳನ್ನ ಅದಾನಿ ಕೈಗೆ ಕೊಡುತ್ತಿದ್ದಾರೆ. ರಸ್ತೆ ಏರ್‌ಪೋರ್ಟ್‌ಗಳನ್ನ ಅವರಿಗೇ ಬಿಟ್ಟುಕೊಡಲಾಗುತ್ತಿದೆ. ಬಿಜೆಪಿ ಸರ್ಕಾರದಿಂದ ತಮ್ಮ ಗೆಳೆಯರಿಗೆ ಮಾತ್ರ ಲಾಭವಾಗುತ್ತಿದೆ. ಇದರಿಂದಲೇ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಇದೆಲ್ಲವನ್ನೂ ಕಾಂಗ್ರೆಸ್ ಯುವಕರಿಗೆ ತಿಳಿಸುವ ಕೆಲಸ ಮಾಡಿದೆ ಎಂದು ತಿಳಿಸಿದರು.

  • ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಲಾಟರಿ ಮಾರಾಟ ಆರಂಭಿಸಿ – 15 ವರ್ಷಗಳ ಬಳಿಕ ರಾಜ್ಯದಲ್ಲಿ ಮತ್ತೆ ಲಾಟರಿ?

    ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಲಾಟರಿ ಮಾರಾಟ ಆರಂಭಿಸಿ – 15 ವರ್ಷಗಳ ಬಳಿಕ ರಾಜ್ಯದಲ್ಲಿ ಮತ್ತೆ ಲಾಟರಿ?

    ಬೆಂಗಳೂರು: 15 ವರ್ಷಗಳ ಬಳಿಕ ಕರ್ನಾಟಕದಲ್ಲಿ (Karnataka) ಲಾಟರಿ (Lottery) ಮಾರಾಟವನ್ನು ಸರ್ಕಾರ ಅಧಿಕೃತಗೊಳಿಸುತ್ತಾ? ಈ ಬಗ್ಗೆ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಖುದ್ದು ರಾಜ್ಯಪಾಲರ ಕಛೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.

    ಲಾಟರಿ ಮಾರಾಟ ಬ್ಯುಸಿನೆಸ್, ನೆರೆಯ ಕೇರಳ (Kerala) ರಾಜ್ಯದಲ್ಲಿ ಎಷ್ಟು ಫೇಮಸ್ ಆಗಿದ್ದು, ನಮ್ಮ ರಾಜ್ಯದಲ್ಲಿಯೂ ಇದು ಚಾಲ್ತಿಯಲ್ಲಿತ್ತು. ಲಾಟರಿ ಮಾರಾಟದಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ವು ಅಂತ 2007ರಲ್ಲಿ ರಾಜ್ಯ ಸರ್ಕಾರ ಲಾಟರಿ ಮಾರಾಟವನ್ನು ನಿಷೇಧಿಸಿತು. ಆದ್ರೆ ಇದೀಗಾ ಮತ್ತೆ ಲಾಟರಿ ಮಾರಾಟವನ್ನು ಶುರು ಮಾಡಬೇಕು ಎಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ. ಈ ಬಗ್ಗೆ ಸಿಎಂ ಹಾಗೂ ರಾಜ್ಯಪಾಲರಿಗೂ ಪತ್ರ ಬರೆದಿದ್ದು, ಪುನರಾರಂಭ ಮಾಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಈ ಬಗ್ಗೆ ರಾಜ್ಯಪಾಲರ ಕಛೇರಿಯಿಂದ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರ ಬರೆಯಲಾಗಿದ್ದು, ಮತ್ತೆ ಲಾಟರಿ ಶುರುವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇದನ್ನೂ ಓದಿ: ನನ್ನನ್ನ `ಟಗರು’ ಅಂತಾರೆ, ನಾನು ಯಾರಿಗೆ ಗುಮ್ಮಿದ್ದೇನೆ – ಸಿದ್ದು ಪ್ರಶ್ನೆ

    ರಾಜ್ಯದಲ್ಲಿ 2007ಕ್ಕಿಂತ ಮುಂಚೆ, ಸರ್ಕಾರವೇ 7 ಲಾಟರಿಗಳನ್ನು ನಡೆಸ್ತಿತ್ತು. ವಾರ್ಷಿಕ ನೂರು ಕೋಟಿ ಆದಾಯ ಸರ್ಕಾರಕ್ಕೆ ಬರ್ತಿತ್ತು. ಈ ಮೂಲಕ ಲಾಟರಿ ಮಾರಾಟ ಮಾಡುವ ಏಜೆಂಟ್‍ಗಳು ಕೂಡ ಬದುಕು ಸಾಗಿಸ್ತಿದ್ರು. ಆದ್ರೆ ರಾಜ್ಯ ಸರ್ಕಾರ ನಿಷೇಧ ಮಾಡಿದ ಬಳಿಕ, ಕೆಲವರು 2014ರಲ್ಲಿ ಸುಪ್ರೀಂಕೋರ್ಟ್‍ನಲ್ಲಿ ಮೊಕದ್ದಮೆ ಹೂಡ್ತಾರೆ. ಸುಪ್ರೀಂಕೋರ್ಟ್ ಕೂಡ ಇದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿವೇಚನೆ ಅಂತ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಮತ್ತೆ ಲಾಟರಿ ಮಾರಾಟವನ್ನು ಪುನರಾರಂಭಿಸಬೇಕೆಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಒತ್ತಾಯಿಸಿದೆ. ಇದನ್ನೂ ಓದಿ: ಕಾಸಿಲ್ಲದೆ ಏನೂ ನಡೆಯಲ್ಲ ಅನ್ನೋದು ವಿಧಾನಸೌಧದ ಪ್ರತಿ ಗೋಡೆಗೂ ಗೊತ್ತು: ಡಿಕೆಶಿ

    ಲಾಟರಿ ಮಾರಾಟ ಮರು ಅನುಷ್ಠಾನ ಹಾಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಹಾಗೂ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ನಿರ್ದೇಶನಾಲಯಕ್ಕೂ ರಾಜ್ಯಪಾಲರ ಕಛೇರಿಯಿಂದ ಪತ್ರ ಬರೆಯಲಾಗಿದ್ದು, ಸರ್ಕಾರದ ಅಂಗ ಸಂಸ್ಥೆ MSIL ಮೂಲಕ ಲಾಟರಿಯನ್ನು ಸರ್ಕಾರ ನಡೆಸುತಿತ್ತು. ರಾಜ್ಯದಲ್ಲಿ ಸಾಂಪ್ರದಾಯಿಕ ಲಾಟರಿ ವ್ಯವಸ್ಥೆ ಪುನರಾರಂಭಕ್ಕೆ ಸರ್ಕಾರ ಮುಂದಾಗಬೇಕು, ಲಾಟರಿ ಮಂತ್ರಿಯನ್ನು ನೇಮಕ ಮಾಡಬೇಕು. ರಾಜ್ಯದ ಸಂಪನ್ಮೂಲ ಹೆಚ್ಚಳದ ಜೊತೆಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಲಾಟರಿ ಮಾರಾಟ ವ್ಯವಸ್ಥೆಯನ್ನು ಶುರುಮಾಡಬೇಕೆಂದು ಸಂಘಟನೆಯಿಂದ ತೀವ್ರ ಒತ್ತಡವಿದೆ. ಆದ್ರೆ ಇದು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಆಗಿರೋದ್ರಿಂದ ಸರ್ಕಾರ ಏನು ನಿಲುವು ತೆಗೆದುಕೊಳ್ಳುತ್ತೆ ಎಂಬುದನ್ನು ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 71 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

    71 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

    ನವದೆಹಲಿ: ಕೇಂದ್ರ ಸರ್ಕಾರದ (Union Government) ಮಹತ್ವಾಕಾಂಕ್ಷಿ ರೋಜಗಾರ್ ಮೇಳದಲ್ಲಿ (RozgarMela) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಹೊಸದಾಗಿ ನೇಮಕಗೊಂಡ ನೌಕರರಿಗೆ 71 ಸಾವಿರ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದಿದ್ದಾರೆ.

    ವರ್ಚುವಲ್ ಮೂಲಕ ಕಾರ್ಯಮಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ (Narendra Modi), ಶಿಕ್ಷಕರು, ನರ್ಸ್, ಫಾರ್ಮಾಸಿಸ್ಟ್, ವೈದ್ಯರು ಸೇರಿದಂತೆ ವಿವಿಧ ಕ್ಷೇತ್ರದ 71 ಸಾವಿರ ವಿವಿಧ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ಹಸ್ತಾಂತರ ಮಾಡಿದ್ದಾರೆ. ಅಲ್ಲದೇ ನೇಮಕಗೊಂಡ ನೌಕರರಿಗೆ ಆನ್‌ಲೈನ್‌ನಲ್ಲಿ ತರಬೇತಿ ನೀಡುವ `ಕರ್ಮಯೋಗಿ ಪ್ರಾರಂಭ್’ (Karmayogi Prarambh) ಆನ್‌ಲೈನ್ ಕಾರ್ಯಕ್ರಮಕ್ಕೂ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ದೊಡ್ಡ ಅನಾಹುತ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದ: ADGP ಅಲೋಕ್ ಕುಮಾರ್

    ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು 45 ಪ್ರಮುಖ ನಗರಗಳಲ್ಲಿ 71 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇದು ಸಾವಿರಾರು ಯುವಜನರಿಗೆ ಸಂತಸದ ವಿಷಯ. ಕಳೆದ ತಿಂಗಳೂ ಸಹ 75 ಸಾವಿರ ಯುವಜನರಿಗೆ ನೇಮಕಾತಿ ನೀಡಲಾಗಿದೆ. ಇದು ರಾಷ್ಟ್ರದ ಅಭಿವೃದ್ಧಿಯ ವೇಗ ಹೆಚ್ಚಿಸುವ ನಮ್ಮ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: `ಕಾಂತಾರ’ ಚಿತ್ರದ ಹಾಡಿಗೆ ಧ್ವನಿಯಾದ ಜರ್ಮನ್ ಅಂದ ಗಾಯಕಿ

    ಕೇಂದ್ರ ಸರ್ಕಾರ ಇನ್ನು 1 ವರ್ಷದಲ್ಲಿ 10 ಲಕ್ಷ ಉದ್ಯೊಗಿಗಳ ನೇಮಕ ಗುರಿ ಹೊಂದಿದೆ. ಈ ನಿಮಿತ್ತ ಕಳೆದ ಅಕ್ಟೊಬರ್‌ನಲ್ಲಿ ಸಹ ಮೋದಿ ನೇಮಕಗೊಂಡ 75 ಸಾವಿರ ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದರು. ಇದರ 2ನೇ ಭಾಗವಾಗಿ ಇಂದು 71 ಸಾವಿರ ಜನರಿಗೆ ನೇಮಕಾತಿ ಪತ್ರವನ್ನು ವಿತರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]