Tag: employment

  • JDS ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಉದ್ಯೋಗ, ಕುಟುಂಬಕ್ಕೊಂದು ಮನೆ- HDK ಆಶ್ವಾಸನೆ

    JDS ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಉದ್ಯೋಗ, ಕುಟುಂಬಕ್ಕೊಂದು ಮನೆ- HDK ಆಶ್ವಾಸನೆ

    ಬೆಂಗಳೂರು: ನವೆಂಬರ್ 1 ರಿಂದ ಪ್ರಾರಂಭವಾಗಲಿರುವ ಜೆಡಿಎಸ್ (JDS) ಪಂಚರತ್ನ ರಥಯಾತ್ರೆಗೆ (Pancharatna Yatra) ಇಂದು ಸಾಂಕೇತಿಕ ಚಾಲನೆ ನೀಡಲಾಯಿತು. ಗವಿಗಂಗಾಧರೇಶ್ವರ ಸನ್ನಿದಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy), ರಥಯಾತ್ರೆ ವಾಹನಕ್ಕೆ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್‌ಗೆ (JDS) ಒಂದು ಬಾರಿ ಪೂರ್ಣ ಬಹುಮತ ನೀಡಿ. ರಾಜ್ಯದ ಚಿತ್ರಣವನ್ನೇ ಬದಲಾಯಿಸುತ್ತೇವೆ ಅಂತ ಭರವಸೆ ನೀಡಿದರು. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳ ಚುನಾವಣೆ ಸ್ಟಂಟ್: ಕುಮಾರಸ್ವಾಮಿ

    ಜೆಡಿಎಸ್ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ (Education), ಉದ್ಯೋಗ (Employment), ಆರೋಗ್ಯ ಸೇವೆ (Health Services), ರೈತ ಚೈತನ್ಯ, ಪ್ರತಿ ಮನೆಗೊಂಡು ಮನೆ ಕೊಡುವ ಯೋಜನೆ ಜಾರಿ ಮಾಡೋದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.

    ಬಿಜೆಪಿ-ಕಾಂಗ್ರೆಸ್ (BJP- Congress) ಪಾಪದ ಕೊಡ ತುಂಬಿದೆ. ಎರಡು ರಾಷ್ಟ್ರೀಯ ಪಕ್ಷಗಳು ಯಾವುದೇ ಯಾತ್ರೆ ಮಾಡಿದರೂ, ಸಂಕಲ್ಪ ಕಾರ್ಯಕ್ರಮ ಮಾಡಿದರೂ ಜನರು ನಂಬೋದಿಲ್ಲ ಅಂತಾ ಕಿಡಿಕಾರಿದರು. ಇದನ್ನೂ ಓದಿ: ತಲೆಯಲ್ಲಿ “ಗಂಧದಗುಡಿ” ಹೇರ್ ಸ್ಟೈಲ್ – ಪ್ರಚಾರಕ್ಕಿಳಿದ ಕಾಫಿನಾಡು ಚಂದು

    ಇನ್ನು ನವೆಂಬರ್ 1 ರಂದು ಮನೆ ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸುವ ಮೂಲಕ ಕನ್ನಡ ತಾಯಿಗೆ ನಮನ ಸಲ್ಲಿಸುವಂತೆ ಕರೆ ನೀಡಿದರು. ನವೆಂಬರ್ 1 ರಿಂದ ಕೋಲಾರದ ಮುಳಬಾಗಿಲಿನಿಂದ ಪಂಚರತ್ನ ರಥಯಾತ್ರೆ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 36 ವಿಧಾನಸಭಾ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಲಿದೆ. ನವೆಂಬರ್ 1 ರಂದು 2023ರ ಚುನಾವಣೆಗೆ ಜೆಡಿಎಸ್ ನ 90-100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇನೆ ಅಂತ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕೊಲೆ ಖಂಡನೀಯ – 1 ಕೋಟಿ ರೂ. ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ

    ಪ್ರವೀಣ್ ಕೊಲೆ ಖಂಡನೀಯ – 1 ಕೋಟಿ ರೂ. ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ

    ಕಲಬುರಗಿ: ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಅವರ ಕೊಲೆ ಕೃತ್ಯ ಖಂಡನೀಯವಾಗಿದ್ದು, ಪ್ರವೀಣ್ ಅವರ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಹಾಗೂ ಅವರ ಧರ್ಮಪತ್ನಿಗೆ ಸರ್ಕಾರಿ ನೌಕರಿಯನ್ನು ಘೋಷಿಸಬೇಕು ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಲದ ಅಧ್ಯಕ್ಷ ಶ್ರೀ ಡಾ. ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

    ಬಿಲ್ಲವ ಸಮುದಾಯದ ಕುಲಬಾಂಧವರು, ಗೆಜ್ಜೆಗಿರಿ ಕೋಟಿ ಚೆನ್ನಯ್ಯ ಕ್ಷೇತ್ರದ ಸಕ್ರಿಯ ಸೇವಾ ಕಾರ್ಯಕರ್ತರು, ಯುವ ವಾಹಿನಿ ಮುಖಂಡರು ಹಾಗೂ ರಾಜಕೀಯ, ಸಾಮಾಜಿಕ ಕಾರ್ಯಕರ್ತರಾಗಿದ್ದ ಪ್ರವೀಣ್ ನೆಟ್ಟಾರು ಅವರ ಕೊಲೆಗೆ ಪೂಜ್ಯ ಸ್ವಾಮೀಜಿಯವರು ಅತೀವ ದುಃಖವನ್ನು ವ್ಯಕ್ತಪಡಿಸಿದ್ದಾರೆ.

    ದಕ್ಷಿಣ ಕನ್ನಡ ಮತ್ತು ಉಡುಪಿಯ ಬಿಲ್ಲವ ಸಮುದಾಯವರು ಈ ಘಟನೆಯನ್ನು ಒಕ್ಕೊರಲಿನಿಂದ ತೀವ್ರವಾಗಿ ಖಂಡಿಸಬೇಕಾಗಿದೆ. ಈ ಘಟನೆಯಿಂದ ಎಚ್ಚೆತ್ತುಕೊಂಡು ಯಾವುದೇ ಪಕ್ಷದಲ್ಲಿದ್ದರೂ ಪ್ರಚೋದನೆಗೆ ಒಳಪಡದೇ ಪಕ್ಷದ ಸಿದ್ಧಾಂತದಂತೆ ಸಂಯಮದಿಂದ ಇರಬೇಕೆಂದು ಶ್ರೀಗಳು ಸೂಚಿಸಿದ್ದಾರೆ.  ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- ಬಂಧಿತ ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ

    ಈ ಹಿಂದಿನ ದಿನಗಳಲ್ಲಿ ಸಾಕಷ್ಟು ಬಿಲ್ಲವ ಯುವಕರು ಹತ್ಯೆಗೀಡಾಗಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಯಾವ ಒಬ್ಬ ಬಿಲ್ಲವ ಯುವಕನು ಕೂಡ ಈ ರೀತಿ ಕೊಲೆಯಾಗುವಂತಹ ಸನ್ನಿವೇಶ ಸೃಷ್ಟಿಯಾಗದಂತೆ ಸಮುದಾಯದ ಜನ ಜಾಗೃತಿ ವಹಿಸಬೇಕಾಗಿದೆ. ನಾವು ಬ್ರಹ್ಮಶ್ರೀ ನಾರಾಯಣ ಗುರುಗಳ ಅಹಿಂಸಾ ಸಿದ್ಧಾಂತದ ಹಾದಿಯಲ್ಲಿ ಮುಂದುವರಿಯಬೇಕೆಂದು ಸ್ವಾಮೀಜಿ ಹೇಳಿದ್ದಾರೆ. ಇದನ್ನೂ ಓದಿ: ಪ್ರವೀಣ್‌ ಹಂತಕರನ್ನು ಕೇರಳ ಗಡಿಯವರೆಗೆ ಕಳುಹಿಸಿ ಕೊಟ್ಟಿದ್ದೇವೆ: ಬಂಧಿತ ಆರೋಪಿಗಳು

    ಶೀಘ್ರದಲ್ಲಿಯೇ ಮೃತ ಪ್ರವೀಣ್ ನೆಟ್ಟಾರು ಮನೆಗೆ ಸ್ವಾಮೀಜಿಯವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಇವರೊಂದಿಗೆ ಬಿಲ್ಲವ, ಈಡಿಗ ಸಮಾಜದ ಮುಂದಾಳುಗಳು ತೆರಳಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆರ್ಥಿಕ ಬಿಕ್ಕಟ್ಟು – ಒಂದೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆ ಹಾದಿ ಹಿಡಿಯುತ್ತಿರುವ ಲಂಕಾ ಮಹಿಳೆಯರು

    ಆರ್ಥಿಕ ಬಿಕ್ಕಟ್ಟು – ಒಂದೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆ ಹಾದಿ ಹಿಡಿಯುತ್ತಿರುವ ಲಂಕಾ ಮಹಿಳೆಯರು

    ಕೊಲಂಬೊ: ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟು ವಿಷಮಸ್ಥಿತಿ ತಲುಪುತ್ತಿದೆ. ಸುಮಾರು 60 ಲಕ್ಷ ಜನರು ಆಹಾರದ ಕೊರತೆ ಎದುರಿಸುತ್ತಿದ್ದಾರೆ. ಈ ನಡುವೆ ಅಗತ್ಯ ಔಷಧಗಳು ಹಾಗೂ ಎರಡು ಹೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ವರದಿಯಾಗಿದೆ.

    ಅಂಕಿ-ಅಂಶಗಳ ವರದಿಯ ಪ್ರಕಾರ ಜನರು ಈಗ ಆಹಾರ ಉಳಿಸಲು ದಿನಕ್ಕೆ ಒಮ್ಮೆ ಮಾತ್ರ ಊಟ ಮಾಡುತ್ತಿದ್ದಾರೆ. ಶೇ.25 ರಷ್ಟು ಜನರು ತೀವ್ರ ತೊಂದರೆಯಲ್ಲಿದ್ದು ವೇಶ್ಯಾವಾಟಿಕೆಯಲ್ಲಿ ತೊಡಗಿರುವವರು ಹೆಚ್ಚಾಗುವುದರೊಂದಿಗೆ ಮಹಿಳೆಯರನ್ನು ಬಲವಂತದಿಂದಲೂ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

    ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಹಣಕ್ಕಾಗಿ ಮಹಿಳೆಯರು ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾಡುತ್ತಿದೆ. ಆಯುರ್ವೇದ ಮತ್ತು ಸ್ಪಾ ಕೇಂದ್ರಗಳು ಈಗ ವೇಶ್ಯಾವಾಟಿಕೆಗೆ ಬಳಕೆಯಾಗುತ್ತಿವೆ. ಮಹಿಳೆಯರು ಈ ವ್ಯವಹಾರದಲ್ಲಿ ವೇಗವಾಗಿ ಸೇರಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಕೊಂಚ ಹಣ ಸಂಪಾದಿಸಲು ಸಾಧ್ಯವಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಸ್ಪಾ-ಕೇಂದ್ರಗಳಲ್ಲಿ ಕರ್ಟನ್‌ಗಳನ್ನು ನೇತುಹಾಕುವ ಮೂಲಕ ಲೈಂಗಿಕ ಕ್ರಿಯೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜವಳಿ ಉದ್ಯಮದಲ್ಲಿ ತೊಡಗಿರುವ ಮಹಿಳೆಯರು ಅತ್ಯಂತ ವೇಗವಾಗಿ ಈ ವ್ಯವಹಾರಕ್ಕೆ ಸೇರುತ್ತಿದ್ದಾರೆ. ಈ ವರ್ಷದ ಅಂತ್ಯದ ವೇಳೆಗೆ, ಈ ದೇಶದಲ್ಲಿ ಈ ಪರಿಸ್ಥಿತಿ ಸಂಪೂರ್ಣವಾಗಿ ಹರಡುತ್ತದೆ ಎಂದು ಇಲ್ಲಿನ ತಜ್ಞರು ಹೇಳುತ್ತಿದ್ದಾರೆ. ಜವಳಿ ಉದ್ಯಮ ಮುಚ್ಚುವ ಭೀತಿಯೂ ಎದುರಾಗಿದ್ದು, ಮಹಿಳೆಯರು ಜೀವನ ನಿರ್ವಹಣೆಗಾಗಿ ಪರ್ಯಾಯ ಮಾರ್ಗಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಅದರಲ್ಲಿ ಕೆಲವರು ವೇಶ್ಯಾವಾಟಿಕೆಯನ್ನೇ ವೃತ್ತಿಯಾಗಿ ಮಾಡಿಕೊಳ್ಳುತ್ತಿದ್ದಾರೆ.

    ಈ ಕುರಿತು ಲೈಂಗಿಕ ಕಾರ್ಯಕರ್ತರೊಬ್ಬರು ಮಾತನಾಡಿ, ದೇಶದ ಆರ್ಥಿಕತೆ ಹದಗೆಟ್ಟಿರುವುದು ಮಹಿಳೆಯರನ್ನು ಈ ಉದ್ಯಮಕ್ಕೆ ಬರುವಂತೆ ಮಾಡಿದೆ. ಈ ಸಮಯದಲ್ಲಿ ನಾವು ನೋಡಬಹುದಾದ ಉತ್ತಮ ಪರಿಹಾರವೆಂದರೆ ಲೈಂಗಿಕ ಕೆಲಸ ಎಂದು ನಾವು ನಂಬಿದ್ದೇವೆ. ನಮ್ಮ ತಿಂಗಳ ಸಂಬಳ ಸುಮಾರು 28,000 ರೂ. ಮತ್ತು ನಾವು ಓವರ್‌ಟೈಮ್ ಮೂಲಕ 35 ಸಾವಿರದವರೆಗೆ ಗಳಿಸಬಹುದು. ಲೈಂಗಿಕ ಕೆಲಸದಲ್ಲಿ ತೊಡಗಿಸಿಕೊಳ್ಳುವುದರಿಂದ ನಾವು ಇದಕ್ಕಿಂತ ಹೆಚ್ಚಿನದನ್ನು ಗಳಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 5 ವರ್ಷದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಆಪ್‌ನಿಂದ ರೋಜ್‌ಗಾರ್ ಬಜೆಟ್ ಮಂಡನೆ

    5 ವರ್ಷದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಆಪ್‌ನಿಂದ ರೋಜ್‌ಗಾರ್ ಬಜೆಟ್ ಮಂಡನೆ

    ನವದೆಹಲಿ: ಆಮ್‌ಆದ್ಮಿ ಪಕ್ಷದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರದಿಂದ 2022-23ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಈ ಬಾರಿ ಉದ್ಯೋಗಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ 75,800 ಕೋಟಿ ರೂ. ಗಾತ್ರ ಬಜೆಟ್ ಮಂಡನೆ ಮಾಡಿದ್ದಾರೆ.

    ARVIND KEJRIWAL

    ಆಪ್ ಸರ್ಕಾರವು 2014ರಲ್ಲಿ 30,940 ಕೋಟಿ ರೂ. ಹಾಗೂ 2021-22ರಲ್ಲಿ 69 ಸಾವಿರ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿತ್ತು. ಆದರೆ, ಈ ಬಾರಿ 2014ಕ್ಕಿಂತಲೂ ಶೇ.50 ರಷ್ಟು ಹಾಗೂ ಕಳೆದ ಸಾಲಿಗಿಂತಲೂ ಶೇ.9.86 ರಷ್ಟು ಹೆಚ್ಚು ಗಾತ್ರದ ಬಜೆಟ್ ಮಂಡಿಸಿದೆ. ಇದನ್ನೂ ಓದಿ: ನಾನು ವಿಶ್ವದ ಸ್ವೀಟೆಸ್ಟ್‌ ಭಯೋತ್ಪಾದಕ: ಅರವಿಂದ್‌ ಕೇಜ್ರಿವಾಲ್‌

    ಇದು ಬಜೆಟ್ ಮಂಡಿಸಿದ ಮನಿಷ್ ಸಿಸೋಡಿಯಾ ಮಾತನಾಡಿ, ಆಪ್ ಸರ್ಕಾರವು ಕಳೆದ 7 ವರ್ಷಗಳಲ್ಲಿ 1.78 ಲಕ್ಷ ಯುವಸಮೂಹಕ್ಕೆ ಖಾಯಂ ಉದ್ಯೋಗ ಕಲ್ಪಿಸಿದೆ. ಈ ಬಾರಿಯೂ `ರೋಜ್‌ಗಾರ್’ ಬಜೆಟ್ ಮಂಡಿಸಿದ್ದು ಮುಂದಿನ 5 ವರ್ಷದಲ್ಲಿ 20 ಲಕ್ಷ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ. ಚಿಲ್ಲರೆ ವ್ಯಾಪಾರ ವಲಯ, ಆಹಾರ ಮತ್ತು ಪಾನಿಯ, ಪೂರೈಕೆ ಸರಪಳಿ, ಪ್ರವಾಸೋದ್ಯಮ, ಮನರಂಜನೆ, ಕನ್‌ಸ್ಟಕ್ಷನ್ಸ್, ರಿಯಲ್‌ಎಸ್ಟೇಟ್, ಹಸಿರು ವಲಯಗಳಲ್ಲಿ ಉದ್ಯೋಗ ಸೃಷ್ಟಿಸುವ ಮೂಲಕ ಒಟ್ಟು ದುಡಿಯುವ ವರ್ಗದ ಸಂಖ್ಯೆಯನ್ನು ಶೇ.33-45ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.  ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‍ರಿಂದ ದೆಹಲಿ ಜನತೆಗೆ ಉಚಿತ ವಿದ್ಯುತ್

    ARVINDA KEJRIWAL

    ದೆಹಲಿಯನ್ನು ಪ್ರವಾಸೋದ್ಯಮ ಆಕರ್ಷಿತ ಕೇಂದ್ರವಾಗಿ ಮಾಡಬೇಕಿದೆ. ಅದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಜೊತೆಗೆ ಮುಂದಿನ 5 ವರ್ಷಗಳಲ್ಲಿ ಕನಿಷ್ಠ 1.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಸಲು ಯೋಜನೆ ರೂಪಿಸಲಾಗುವುದು. ಇದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾದರೆ, ಹೋಟೆಲ್ ಉದ್ಯಮ, ಪ್ರವಾಸೋದ್ಯಮ ಹಾಗೂ ಇತರ ವಾಣಿಜ್ಯ ಚಟುವಟಿಕೆಗಳಿಗೂ ಉತ್ತೇಜನ ನೀಡಿದಂತಾಗುತ್ತದೆ ಎಂದು ತಿಳಿಸಿದರು.

  • ರೈಲ್ವೆ ಉದ್ಯೋಗಕ್ಕಾಗಿ ಪ್ರತಿಭಟನೆ – ರೈಲಿನ ಭೋಗಿಗೆ ಬೆಂಕಿ ಹಚ್ಚಿ ಆಕ್ರೋಶ

    ರೈಲ್ವೆ ಉದ್ಯೋಗಕ್ಕಾಗಿ ಪ್ರತಿಭಟನೆ – ರೈಲಿನ ಭೋಗಿಗೆ ಬೆಂಕಿ ಹಚ್ಚಿ ಆಕ್ರೋಶ

    ನವದೆಹಲಿ: ದೆಹಲಿ-ಕೋಲ್ಕತ್ತಾ ಮಾರ್ಗದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ವೇಳೆ ಕೆಲವು ಪ್ರತಿಭಟನಾಕಾರರು ರೈಲಿನ ಭೋಗಿಗೆ ಬೆಂಕಿ ಹಚ್ಚಿ ರೈಲನ್ನು ಧ್ವಂಸಗೊಳಿಸಿದ್ದಾರೆ ಎನ್ನಲಾಗುತ್ತಿದೆ.

    ರೈಲ್ವೆ ನಿಲ್ದಾಣದ ಫ್ಲಾಟ್‍ಫಾರ್ಮ್‍ನಾದ್ಯಂತ ಆಕ್ರೋಶಗೊಂಡ ಪ್ರತಿಭಟನಾ ನಿರತರು ಕಲ್ಲು ತೂರಾಟ ನಡೆಸಿದ್ದು, ರೈಲಿನ ಕಿಟಕಿಗಳನ್ನು ಒಡೆದು ಹಾಕಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ರೈಲ್ವೇ ನೇಮಕಾತಿ ಪರೀಕ್ಷೆ ಆಯ್ಕೆ ಪ್ರಕ್ರಿಯೆಯನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದನ್ನೂ ಓದಿ: ಹೆದ್ದಾರಿಯನ್ನು ಅಡವಿಟ್ಟು ಸಾಲ ಪಡೆದ ಪಾಕಿಸ್ತಾನ

    ಹಿಂಸಾಚಾರದ ಘಟನೆಯ ಬಳಿಕ, ಭಾರತೀಯ ರೈಲ್ವೇಯು ಎನ್‍ಟಿಪಿಸಿ ಮತ್ತು ಹಂತ 1 ಪರೀಕ್ಷೆಗಳನ್ನು ಸ್ಥಗಿತಗೊಳಿಸಿದೆ. ಬಿಹಾರದಲ್ಲಿ ಸೋಮವಾರ ರೈಲ್ವೆ ನೇಮಕಾತಿ ಮಂಡಳಿಯು (RRB) ನಡೆಸಿದ ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳ (NTPC) ಸ್ಪರ್ಧಾತ್ಮಕ ಪರೀಕ್ಷೆ, 2021ರಲ್ಲಿ ಫಲಿತಾಂಶಗಳು ತಪ್ಪಾಗಿ ಬಂದಿವೆ ಎಂದು ಆರೋಪಿಸಿ ಸೋಮವಾರ ಬಿಹಾರದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು.

    ಇದೀಗ ಉಭಯ ಪಕ್ಷಗಳ ಮಾತುಗಳನ್ನು ಆಲಿಸಿದ ನಂತರ ಸಮಿತಿಯು ರೈಲ್ವೆ ಸಚಿವಾಲಯಕ್ಕೆ ವರದಿ ಸಲ್ಲಿಸಲಿದೆ. ಮಂಗಳವಾರ ರೈಲ್ವೇ ತನ್ನ ಉದ್ಯೋಗಾಕಾಂಕ್ಷಿಗಳಿಗೆ ಜನರಲ್ ನೋಟಿಸ್ ನೀಡಿದ್ದು, ಪ್ರತಿಭಟನೆಯ ಸಮಯದಲ್ಲಿ ವಿಧ್ವಂಸಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಗೆ ರೈಲ್ವೆಯಲ್ಲಿ ನೇಮಕಾತಿ ನೀಡುವುದನ್ನು ನಿರ್ಬಂಧಿಸಲಾಗುವುದು ಎಂದು ಎಚ್ಚರಿಸಿದೆ. ಇದನ್ನೂ ಓದಿ: ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ

    ಬಿಹಾರದ ಹಲವಾರು ಸ್ಥಳಗಳಲ್ಲಿ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಧರಣಿ ನಡೆಸಿದ ಒಂದು ದಿನದ ನಂತರ ಈ ರೀತಿ ಆದೇಶ ಹೊರಡಿಸಲಾಗಿದೆ.

  • ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ವಂಚನೆ – ಐವರು ಅರೆಸ್ಟ್

    ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ವಂಚನೆ – ಐವರು ಅರೆಸ್ಟ್

    ಮುಂಬೈ: ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ವಂಚನೆ ಎಸಗಿದ ಆರೋಪದ ಮೇಲೆ ಥಾಣೆಯ ಐವರನ್ನು ಅರೆಸ್ಟ್ ಮಾಡಲಾಗಿದೆ.

    ಪೊಲೀಸ್ ಚಾಲಕರ ನೇಮಕಾತಿಗಾಗಿ ಭಾನುವಾರ ಥಾಣೆ ಮತ್ತು ಪಾಲ್ಘರ್ ಜಿಲ್ಲೆಯಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ವೇಳೆ ಥಾಣೆ ಕಮಿಷನರೇಟ್ ವ್ಯಾಪ್ತಿಯಲ್ಲಿ ಸುಮಾರು 18,000 ಉದ್ಯೋಗ ಆಕಾಂಕ್ಷಿಗಳು ಪರೀಕ್ಷೆಗೆ ಹಾಜರಾಗಿದ್ದರು.

    ನಗರದ ಬಾಲ್ಕಮ್ ಪ್ರದೇಶದ ಪರೀಕ್ಷಾ ಕೇಂದ್ರದಲ್ಲಿ ಐದು ಜನರು ಪರೀಕ್ಷೆಯಲ್ಲಿ ವಂಚನೆ ಮತ್ತು ಇತರ ದುಷ್ಕøತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಕಪುರ್ಬಾವಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನ ನಿರ್ಮಾಣದ ಸ್ಥಳಕ್ಕೆ ರಾತ್ರಿ ದಿಢೀರ್ ಭೇಟಿ ಕೊಟ್ಟ ಮೋದಿ

    ಈ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 419(ಮತ್ತೊಬ್ಬನಂತೆ ನಟಿಸಿ ವಂಚನೆ) ಮತ್ತು 34(ಒಂದೇ ಉದ್ದೇಶಕ್ಕಾಗಿ ಹಲವು ವ್ಯಕ್ತಿಗಳು ಮಾಡಿದ ಕೃತ್ಯ) ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

  • ಯುಎಇಯಲ್ಲಿ ಸಿಲುಕಿದ್ದ 49ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರಿಗೆ ಉದ್ಯೋಗ

    ಯುಎಇಯಲ್ಲಿ ಸಿಲುಕಿದ್ದ 49ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರಿಗೆ ಉದ್ಯೋಗ

    ಒಮಾನ್: ಏಜೆಂಟ್‍ನಿಂದ ವಂಚನೆಗೊಳಗಾಗಿ ಯುಎಇಯ ಅಪಾರ್ಟ್‍ಮೆಂಟ್ ಒಂದರಲ್ಲಿ 64ಕ್ಕೂ ಹೆಚ್ಚಿನ ಭಾರತೀಯ ಕಾರ್ಮಿಕರು ಸಿಲುಕಿಕೊಂಡಿದ್ದರು. ಇದೀಗ ಅವರಲ್ಲಿ 49 ಕಾರ್ಮಿಕರಿಗೆ ಉದ್ಯೋಗ ನೀಡಿ ಸಹಾಯ ಮಾಡಲು 20 ಕಂಪನಿಗಳು ಮುಂದಾಗಿದೆ. ಉಳಿದವರನ್ನು ತಮ್ಮ ತಾಯ್ನಾಡಿಗೆ ಮರಳಿ ಕಳುಹಿಸಲಾಗಿದೆ.

    ಈ ಪ್ರಕರಣವನ್ನು ನಿಭಾಯಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತರಾದ ಶಿರಾಲಿ ಶೇಖ್ ಮುಜಾಫರ್ ಮತ್ತು ಹಿದಾಯತ್ ಅಡೂರ್‍ರವರನ್ನು ಕಂಪನಿಗಳು ಸಂಪರ್ಕಿಸಿ ಕಾರ್ಮಿಕರ ಸಿವಿಗಳನ್ನು ಕಳುಹಿಸುವಂತೆ ತಿಳಿಸಲಾಯಿತು. ಕರ್ನಾಟಕದ ಎನ್‍ಆರ್‍ಐ ಅಧ್ಯಕ್ಷ ಮತ್ತು ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಒಡೆತನದ ಫಾರ್ಚೂನ್ ಪ್ಲಾಜಾ ಹೋಟೆಲ್‍ನಲ್ಲಿ ನಿರುದ್ಯೋಗಿಗಳಿಗೆ ಇಂಟರ್ ವ್ಯೂ ನಡೆಸಲಾಯಿತು. ಅಲ್ಲದೆ ತೊಂದರೆಗೀಡಾದ ಕಾರ್ಮಿಕರಿಗೆ ಹೋಟೆಲ್‍ನಲ್ಲಿ ಆಶ್ರಯ ನೀಡುವುದಾಗಿ ಭರವಸೆ ನೀಡಲಾಗಿದೆ.

    ಬಹುತೇಕ ಕಾರ್ಮಿಕರು ಬಡಗಿಗಳು ಮತ್ತು ಭಾರತ ಉತ್ತರ ಪ್ರದೇಶ, ಬಿಹಾರ ಮತ್ತು ದೆಹಲಿಯ ಎಸಿ ತಂತ್ರಜ್ಞರಾಗಿದ್ದಾರೆ. ನುರಿತ ಕಾರ್ಮಿಕರ ಅವಶ್ಯಕತೆ ಹಲವಾರು ಕಂಪನಿಗಳಿಗಿದ್ದು, ಸಹಾಯ ಮಾಡಲು ಸಂತೋಷದಿಂದ ಒಪ್ಪಿಕೊಂಡಿದೆ. ಅವರಿಗೆ ವಸತಿ ಸೌಕರ್ಯಗಳನ್ನು ಮತ್ತು ಊಟದ ವ್ಯವಸ್ಥೆಯನ್ನು ಸಹ ಕಂಪನಿಯೇ ನೋಡಿಕೊಳ್ಳಲಿದೆ.

  • ಕೊರೊನಾದಿಂದ ಡೆಲಿವರಿ ಬಾಯ್ ಆದ 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್

    ಕೊರೊನಾದಿಂದ ಡೆಲಿವರಿ ಬಾಯ್ ಆದ 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್

    -ಈಗ ದಿನಕ್ಕೆ 2 ಸಾವಿರ ಗಳಿಸೋದು ಕಷ್ಟ
    -ಹಳೆಯದೆಲ್ಲ ನೆನಪು ಬಂದಾಗ ವಿಮಾನ ನೋಡ್ತೀನಿ

    ‎ಬ್ಯಾಂಗ್‌ಕಾಕ್: ಕೊರೊನಾದಿಂದ ತಿಂಗಳಿಂದ 4 ರಿಂದ 5 ಲಕ್ಷ ರೂ. ಸಂಬಳ ಪಡೆಯುತ್ತಿದ್ದ ಪೈಲಟ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದಾರೆ.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ.

    42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

    ಈ ಕುರಿತಿ ಮಾತನಾಡಿರುವ ನಾಕರಿನ್, ನಮ್ಮ ಏರ್ ಲೈನ್ಸ್ ಬಹುತೇಕ ಸಿಬ್ಬಂದಿಯನ್ನು ಸಂಬಳ ರಹಿತ ರಜೆಯ ಮೇಲೆ ಕಳುಹಿಸಿದೆ. ನನ್ನ ಸಹೋದ್ಯೋಗಿಗಳು ಬೇರೆ ವ್ಯವಹಾರಗಳಲ್ಲಿ ತೊಡಗಿಕೊಂಡು ಜೀವನ ನಡೆಸುತ್ತಿದ್ದಾರೆ. ಆದ್ರೆ ಎಲ್ಲರೂ ಏರ್ ಲೈನ್ಸ್ ನಲ್ಲಿ ಪಡೆಯುತ್ತಿದ್ದ ಸಂಬಳಕ್ಕಿಂತ ಕಡಿಮೆ ಹಣಕ್ಕಾಗಿ ಉದ್ಯೋಗ ಮಾಡುತ್ತಿದ್ದಾರೆ. ಆದ್ರೆ ಏರ್ ಲೈನ್ಸ್ ಯಾರನ್ನೂ ಕೆಲಸದಿಂದ ತೆಗೆದು ಹಾಕಿಲ್ಲ. ಮತ್ತೆ ನಮ್ಮನ್ನು ಕೆಲಸಕ್ಕೆ ಕರೆಯುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

    ಓರ್ವ ಪೈಲಟ್ ತಿಂಗಳಿಗೆ 4 ರಿಂದ 5 ಲಕ್ಷ ರೂ. ಸಂಬಳ ಪಡೆಯುತ್ತಿದ್ದರು. ಈಗ ಅವರಿಗೆ ದಿನಕ್ಕೆ 2 ಸಾವಿರ ರೂ. ಹೊಂದಿಸಲು ಕಷ್ಟವಾಗ್ತಿದೆ. ನನ್ನ ಕ್ಯಾಪ್ಟನ್, ಸಿಬ್ಬಂದಿ ನೆನಪು ಆದಾಗ ಆಕಾಶದಲ್ಲಿ ಹಾರುತ್ತಿರುವ ವಿಮಾನವನ್ನು ನೋಡುತ್ತೇನೆ. ಡೆಲಿವರಿ ಬಾಯ್ ಆಗಿ ಕೆಲಸಕ್ಕೆ ಸೇರಿದಾಗ ಮೊದಲು ಆರ್ಡರ್ ಬಂದಾಗ ನೀಡಿದ ಸೇವೆಯ ಅನುಭವ ತುಂಬಾ ವಿಭಿನ್ನವಾಗಿತ್ತು ಎಂದು ನಾಕರಿನ್ ಹೇಳುತ್ತಾರೆ.

  • ಹುತಾತ್ಮ ಕರ್ನಲ್ ಕುಟುಂಬಕ್ಕೆ 5 ಕೋಟಿ ಪರಿಹಾರ- ಪತ್ನಿಗೆ ಸರ್ಕಾರಿ ಉದ್ಯೋಗ

    ಹುತಾತ್ಮ ಕರ್ನಲ್ ಕುಟುಂಬಕ್ಕೆ 5 ಕೋಟಿ ಪರಿಹಾರ- ಪತ್ನಿಗೆ ಸರ್ಕಾರಿ ಉದ್ಯೋಗ

    ಹೈದರಾಬಾದ್: ಲಡಾಖ್‍ನ ಗಾಲ್ವಾನ್ ಗಡಿಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಅವರ ಕುಟುಂಬಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಐದು ಕೋಟಿ ರೂ. ಪರಿಹಾರ ನೀಡುವುದಾಗಿ ಫೋಷಿಸಿದ್ದಾರೆ. ಇದನ್ನೂ ಓದಿ: ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

    ಸಿಎಂ ಕೆ.ಚಂದ್ರಶೇಖರ್ ರಾವ್ ಕರ್ನಲ್ ಸಂತೋಷ್ ಬಾಬು ಅವರ ಮನೆಗೆ ಹೋಗಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಐದು ಕೋಟಿ ರೂ. ಪರಿಹಾರದ ಜೊತೆಗೆ ಕುಟುಂಬಕ್ಕೆ ನಿವಾಸ ಮತ್ತು ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಣೆ ಮಾಡಿದರು. ಹುತಾತ್ಮರಾದ ಇತರ 19 ಸೈನಿಕರಿಗೆ ತಲಾ 10 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಸಿಎಂ ರಾವ್ ಹೇಳಿದ್ದಾರೆ. ಇದನ್ನೂ ಓದಿ: ನನಗೆ ಒಬ್ಬನೇ ಮಗ- ಕಣ್ಣೀರಿಟ್ಟ ಕರ್ನಲ್ ಸಂತೋಷ್ ಬಾಬು ತಾಯಿ

    “ಇಡೀ ದೇಶವು ನಮ್ಮ ದೇಶದ ಗಡಿಗಳನ್ನು ಕಾಪಾಡುವ ಮಿಲಿಟರಿ ಸಿಬ್ಬಂದಿಯೊಂದಿಗೆ ನಿಲ್ಲಬೇಕು. ಹುತಾತ್ಮ ಯೋಧರ ಕುಟುಂಬಸ್ಥರೊಂದಿಗೆ ನಾವು ನಿಲ್ಲಬೇಕು. ಜೊತೆಗೆ ಕುಟುಂಬ ಸದಸ್ಯರಿಗೆ ಸಹಾಯ ಮಾಡಬೇಕು. ಇಂತಹ ಸಂದರ್ಭದಲ್ಲಿ ಸೈನ್ಯದ ಸಿಬ್ಬಂದಿಯಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಇಡೀ ದೇಶ ಅವರೊಂದಿಗೆ ಇದೆ ಎಂಬ ಸಂದೇಶವನ್ನು ನಾವು ರವಾನಿಸಬೇಕು” ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರವು ಹುತಾತ್ಮರಾದ ಯೋಧ ಕುಟುಂಬದವರಿಗೆ ಸಹಾಯವನ್ನು ನೀಡುತ್ತದೆ. ಆದರೆ ರಾಜ್ಯಗಳು ಸಹ ಅವರಿಗೆ ಸಹಾಯ ಮಾಡಬೇಕು. ಆಗ ಮಾತ್ರ ಸೇನಾ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ದೇಶವು ನಮ್ಮ ಬೆಂಬಲವಾಗಿ ನಿಂತಿದ್ದಾರೆ ಎಂಬ ವಿಶ್ವಾಸವನ್ನು ಬರುತ್ತದೆ. ನಾವೆಲ್ಲರೂ ಒಟ್ಟಾಗಿ ರಕ್ಷಣಾ ಪಡೆಗಳ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕು ಎಂದು ಸಿಎಂ ರಾವ್ ತಿಳಿಸಿದ್ದಾರೆ.

    ಗಾಲ್ವಾನ್ ನದಿ ಪ್ರದೇಶದಲ್ಲಿ ಪೆಟ್ರೋಲಿಂಗ್ ಪಾಯಿಂಟ್ 14ರ ಬಳಿ ಚೀನಾ ಟೆಂಟ್ ನಿರ್ಮಿಸಿತ್ತು. ಕಳೆದ ವಾರ ಲೆಫ್ಟಿನೆಂಟ್ ಕಮಾಂಡರ್ ಮಟ್ಟದಲ್ಲಿ ಪಾಯಿಂಟ್ 14ನಲ್ಲಿ ಸಭೆ ನಡೆಸಿತ್ತು. ಮಾತುಕತೆಯಂತೆ ಟೆಂಟ್ ತೆರವು ಆಗಿದ್ಯಾ? ಇಲ್ವಾ? ಅಂತ ಪರಿಶೀಲನೆಗೆ ಭಾರತ ಹೋಗಿತ್ತು. ವಾಹನದಲ್ಲಿ ಕರ್ನಲ್ ಸಂತೋಷ್ ಬಾಬು, ಪಳನಿ, ಓಝೋ ಗಸ್ತು ಹೋಗಿದ್ದರು.

    ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್ ತೆರವು ಮಾಡದ ಹಿನ್ನೆಲೆಯಲ್ಲಿ ಮಾತುಕತೆ ನಡೆಸುತ್ತಿದ್ದಾಗಲೇ ಚೀನಿ ಸೈನಿಕರು ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದ ವಿಚಾರ ತಿಳಿದು ಭಾರತದ ಸೈನಿಕರು ಮತ್ತಷ್ಟು ಸಂಖ್ಯೆಯಲ್ಲಿ ಸ್ಥಳಕ್ಕೆ ಬಂದಾಗ ಚೀನಿಯರು ಕಲ್ಲು ತೂರಾಟ ನಡೆಸಿ ಕಬ್ಬಿಣದ ರಾಡ್‍ಗಳಿಂದ ಹೊಡೆದಿದ್ದಾರೆ. ಪರಿಣಾಮ ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ. ಈ ವೇಳೆ ಭಾರತದ ಸೈನಿಕರು ತಿರುಗೇಟು ನೀಡಿ 43 ಚೀನಿ ಸೈನಿಕರನ್ನು ಹತ್ಯೆ ಮಾಡಿದ್ದಾರೆ.

  • ನರೇಗ ಕೂಲಿ ಕೆಲಸ ಮಾಡ್ತಿದ್ದ ಎಂಎಸ್ಸಿ ಪದವೀಧರೆ- ಸಚಿವರಿಂದ ಉದ್ಯೋಗದ ಭರವಸೆ

    ನರೇಗ ಕೂಲಿ ಕೆಲಸ ಮಾಡ್ತಿದ್ದ ಎಂಎಸ್ಸಿ ಪದವೀಧರೆ- ಸಚಿವರಿಂದ ಉದ್ಯೋಗದ ಭರವಸೆ

    – ಕೊರೊನಾ ಸಂಕಷ್ಟದಲ್ಲಿ ಪೋಷಕರಿಗೆ ನೆರವಾಗ್ತಿರೋ ಮಗಳು

    ಚಿತ್ರದುರ್ಗ: ಲಾಕ್‍ಡೌನ್ ಆದಾಗಿನಿಂದ ತೀವ್ರ ಸಂಕಷ್ಟಕ್ಕೊಳಗಾಗಿರುವ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ ಕೂಲಿ ಕೆಲಸ ಮಾಡಲು ಪೋಷಕರೊಂದಿಗೆ ಬರುತ್ತಿದ್ದಾರೆ.

    ಇದನ್ನು ಗಮನಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಪದವೀಧರೆಯ ಕೆಲಸವನ್ನು ಮೆಚ್ಚಿ, ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗಣಿತ ವಿಷಯದಲ್ಲಿ ಎಂಎಸ್ಸಿ ಮಾಡಿರುವ ದೀಪಶ್ರೀ ಅವರ ತಂದೆ-ತಾಯಿಯೊಂದಿಗೆ ನಿತ್ಯ ಬಂದು ನರೇಗ ಕೂಲಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

    ಸಚಿವ ಕೆ.ಎಸ್. ಈಶ್ವರಪ್ಪ ಅವರು ಶುಕ್ರವಾರ ಸಂಜೆ ನರೇಗಾ ಕಾಮಗಾರಿ ವೀಕ್ಷಿಸಲು ಬಂದಾಗ, ವಿದ್ಯಾರ್ಥಿನಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಜೊತೆಗೆ ಕೊರೊನಾ ಬಿಕ್ಕಟ್ಟು ಮುಗಿದ ನಂತರ ವಿದ್ಯಾರ್ಥಿನಿಗೆ ನನ್ನನ್ನು ಸಂಪರ್ಕಿಸಲು ವ್ಯವಸ್ಥೆ ಮಾಡಿ ಉದ್ಯೋಗ ಕೊಡಿಸುತ್ತೇನೆ ಎಂದು ಸಚಿವರು ಜಿಲ್ಲಾ ಪಂಚಾಯಿತಿ ಸಿಇಒ ಯೋಗೀಶ್ ಅವರಿಗೆ ಸೂಚಿಸಿದ್ದಾರೆ.

    ಸಚಿವರು ಯುವತಿಯ ಬಗ್ಗೆ ತಿಳಿದುಕೊಂಡು ಯಾಕಮ್ಮ ಓದಿ ಕೂಲಿ ಕೆಲಸ ಮಾಡುತ್ತೀದ್ದೀಯಾ ನಿನಗೆ ಸರ್ಕಾರಿ ಉದ್ಯೋಗ ಮಾಡುವ ಗುರಿ ಇಲ್ಲವಾ ಎಂದು ಪ್ರಶ್ನಿಸಿದ್ದಾರೆ. ಆಗ ಮುಂಬರುವ ಜೀವನದಲ್ಲಿ ಉಪನ್ಯಾಸಕಿ ಆಗುವ ಬಯಕೆ ಇದೆ ಎಂದು ದೀಪಶ್ರೀ ಪ್ರತಿಕ್ರಿಯಿಸಿದ್ದಾರೆ ಹಾಗೂ ಕೊರೊನಾ ಸಂಕಷ್ಟದ ಕಾಲದಲ್ಲಿ ತಂದೆ-ತಾಯಿಗೆ ನೆರವಾಗುವ ಉದ್ದೇಶದಿಂದ ನರೇಗಾ ಕೂಲಿ ಕೆಲಸ ಮಾಡುತ್ತಿದ್ದೇನೆ ಎಂದು ದೀಪಶ್ರೀ ತಿಳಿಸಿದ್ದಾರೆ.