Tag: ENG Vs IND

  • ಕನ್ನಡಿಗ ರಾಹುಲ್‌ ಆಕರ್ಷಕ ಶತಕ; ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದ ಟೀಂ ಇಂಡಿಯಾ

    ಕನ್ನಡಿಗ ರಾಹುಲ್‌ ಆಕರ್ಷಕ ಶತಕ; ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದ ಟೀಂ ಇಂಡಿಯಾ

    ಲಾರ್ಡ್ಸ್‌: ಕನ್ನಡಿಗ ಕೆ.ಎಲ್.ರಾಹುಲ್‌ ಆಕರ್ಷಕ ಶತಕ, ಪಂತ್‌, ಜಡೇಜಾ ಅರ್ಧಶತಕ ನೆರವಿನಿಂದ ಟೀಂ ಇಂಡಿಯಾ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದೆ.

    ಲಾರ್ಡ್ಸ್‌ನಲ್ಲಿ ಶುರುವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 387 ರನ್‌ ಗಳಿಸಿ ಆಲೌಟ್‌ ಆಯಿತು. ಇದಕ್ಕೆ ಉತ್ತರವಾಗಿ ಭಾರತ ತಂಡ ಕೂಡ ಅಷ್ಟೇ ರನ್‌ ಗಳಿಸಿ ಆಲೌಟ್‌ ಆಯಿತು.

    2ನೇ ದಿನದಾಟದ ಅಂತ್ಯಕ್ಕೆ ಭಾರತ 3 ವಿಕೆಟ್‌ಗೆ 145 ರನ್‌ ಗಳಿಸಿತ್ತು. ಶನಿವಾರ ತಂಡಕ್ಕೆ ರಾಹುಲ್‌ ಮತ್ತು ಪಂತ್‌ ನೆರವಾದರು. 117 ಬಾಲ್‌ಗಳಿಗೆ ರಾಹುಲ್‌ 100 ರನ್‌ ಗಳಿಸಿ ಜವಾಬ್ದಾರಿಯುತ ಆಟವಾಡಿದರು. ಪಂತ್‌ 112 ಎಸೆತಗಳಲ್ಲಿ 74 ರನ್‌ ಗಳಿಸಿದರು.

    ರವೀಂದ್ರ ಜಡೇ 72, ನಿತೀಶ್‌ ಕುಮಾರ್‌ ರೆಡ್ಡಿ 30, ವಾಷಿಂಗ್ಟನ್‌ ಸುಂದರ್‌ 23 ರನ್‌ ಗಳಿಸಿ ಸಮಬಲ ಸಾಧಿಸಲು ನೆರವಾದರು. ಇಂಗ್ಲೆಂಡ್‌ ಪರ ಕ್ರಿಸ್ ವೋಕ್ಸ್ 3, ಜೋಫ್ರಾ ಆರ್ಚರ್ ಮತ್ತು ಬೆನ್‌ ಸ್ಟೋಕ್ಸ್‌ ತಲಾ 2, ಬ್ರೈಡನ್ ಕಾರ್ಸೆ, ಶೋಯೆಬ್ ಬಶೀರ್ ತಲಾ 1 ವಿಕೆಟ್‌ ಪಡೆದರು.

  • ಮಳೆಗೆ 3ನೇ ದಿನದಾಟ ಅಂತ್ಯ; 2ನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 96 ರನ್‌ ಮುನ್ನಡೆ – ಕನ್ನಡಿಗ ಕೆ.ಎಲ್.ರಾಹುಲ್‌ ಆಸರೆ

    ಮಳೆಗೆ 3ನೇ ದಿನದಾಟ ಅಂತ್ಯ; 2ನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 96 ರನ್‌ ಮುನ್ನಡೆ – ಕನ್ನಡಿಗ ಕೆ.ಎಲ್.ರಾಹುಲ್‌ ಆಸರೆ

    – ಆಂಗ್ಲರ ಪಡೆಯ 5 ವಿಕೆಟ್‌ ಕಬಳಿಸಿ ಮಿಂಚಿದ ಬುಮ್ರಾ

    ಲೀಡ್ಸ್‌: ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಯ ಮೊದಲ ಪಂದ್ಯದ 3ನೇ ದಿನದಾಟ ಅಂತ್ಯವಾಗಿದ್ದು, ಭಾರತ ತಂಡ 96 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

    ಲೀಡ್ಸ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ 471 ರನ್‌ ಗಳಿಸಿತ್ತು. ನಂತರ ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ 465ಕ್ಕೆ ಆಲೌಟ್‌ ಆಯಿತು.

    2ನೇ ಇನ್ನಿಂಗ್ಸ್‌ನಲ್ಲಿ ಕನ್ನಡಿಗ ಕೆ.ಎಲ್.ರಾಹುಲ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನದಿಂದಾಗಿ ಭಾರತವು 96 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. 47 ರನ್‌ ಗಳಿಸಿರುವ ರಾಹುಲ್‌ ಅಜೇಯರಾಗಿ ಉಳಿದಿದ್ದಾರೆ. ಅವರಿಗೆ ಶುಭಮನ್‌ ಗಿಲ್‌ ಸಾಥ್‌ ನೀಡಲಿದ್ದಾರೆ.

    ಒಲಿ ಪೋಪ್‌ ಶತಕ
    ಇಂಗ್ಲೆಂಡ್‌ 2ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿತ್ತು. ಒಲಿ ಪೋಪ್‌ ಶತಕ ಗಳಿಸಿ ಮಿಂಚಿದ್ದರು. ಭಾನುವಾರ 3ನೇ ದಿನದಾಟದಲ್ಲಿ ಶತಕಕ್ಕೆ ಕೇವಲ 6 ರನ್‌ ಗಳಿಸಿ ಬೇಗನೆ ಔಟಾದರು. ಬಳಿಕ ಬ್ರೂಕ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿ 99 ರನ್‌ ಗಳಿಸಿದರು. ಶತಕದ ಹೊಸ್ತಿಲಲ್ಲಿದ್ದ ಅವರನ್ನು ಕನ್ನಡಿಗ ಪ್ರಸಿದ್ಧ ಕೃಷ್ಣ ಔಟ್‌ ಮಾಡಿದರು. ಅಂತಿಮವಾಗಿ ಇಂಗ್ಲೆಂಡ್‌ 465 ಕ್ಕೆ ಆಲೌಟ್‌ ಆಯಿತು.

    ಬೌಲಿಂಗ್‌ನಲ್ಲಿ ಬುಮ್ರಾ ಪರಾಕ್ರಮ
    ಭಾರತ ಪರ ಜಸ್ಪ್ರಿತ್‌ ಬುಮ್ರಾ ಬೌಲಿಂಗ್‌ನಲ್ಲಿ ಪರಾಕ್ರಮ ಮೆರೆದರು. 83 ರನ್‌ ನೀಡಿ ಪ್ರಮುಖ 5 ವಿಕೆಟ್‌ ಕಿತ್ತು ಮಿಂಚಿದರು. ಪ್ರಸಿದ್ಧ ಕೃಷ್ಣ 3, ಮೊಹಮ್ಮದ್‌ ಸಿರಾಜ್‌ 2 ವಿಕೆಟ್‌ ಪಡೆದರು.

  • ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ‘ಚಕ್ಡಾ ಎಕ್ಸ್ ಪ್ರೆಸ್’ ಜೂಲನ್ ಗೋಸ್ವಾಮಿಗೆ ಗೆಲುವಿನ ವಿದಾಯ

    ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ‘ಚಕ್ಡಾ ಎಕ್ಸ್ ಪ್ರೆಸ್’ ಜೂಲನ್ ಗೋಸ್ವಾಮಿಗೆ ಗೆಲುವಿನ ವಿದಾಯ

    ಲಂಡನ್: ಭಾರತ (India) ಮಹಿಳಾ ಕ್ರಿಕೆಟ್ (Womens Cricket) ದಂತಕಥೆ ಜೂಲನ್ ಗೋಸ್ವಾಮಿ (Jhulan Goswami) ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಹೇಳಿದ್ದಾರೆ. ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ (England) ವಿರುದ್ಧದ ತಮ್ಮ ಅಂತಿಮ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ ಜೂಲನ್ ಗೋಸ್ವಾಮಿಗೆ ಗೆಲುವಿನ ವಿದಾಯ ಸಿಕ್ಕಿದೆ.

    ಇಂಗ್ಲೆಂಡ್‍ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 169 ರನ್‍ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 43.3 ಓವರ್‌ಗಳಲ್ಲಿ 153 ರನ್‍ಗಳಿಗೆ ಸರ್ವಪತನ ಕಂಡು ಸೋಲುಂಡಿತು. ಇತ್ತ ಭಾರತ 16 ರನ್‍ಗಳ ಜಯದೊಂದಿಗೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಜಯದೊಂದಿಗೆ ಟೀಂ ಇಂಡಿಯಾದ ಲೆಜೆಂಡ್ ಆಟಗಾರ್ತಿ ಜೂಲನ್ ಗೋಸ್ವಾಮಿಗೆ ಗೆಲುವಿನ ವಿದಾಯ ಸಿಕ್ಕಂತಾಗಿದೆ. ತನ್ನ ವೃತ್ತಿಜೀವನದ ಕೊನೆಯ ಪಂದ್ಯದಲ್ಲೂ ಜೂಲನ್ 10 ಓವರ್ ಎಸೆದು 3 ಓವರ್ ಮೇಡನ್ ಸಹಿತ 2 ವಿಕೆಟ್ ಕಿತ್ತು ಸ್ಮರಣೀಯವಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಸ್ನೇಹಿತನ ವಿದಾಯಕ್ಕೆ ಕಣ್ಣೀರಿಟ್ಟ ರಫೇಲ್ ನಡಾಲ್ – ಕ್ರೀಡೆಯ ಸುಂದರವಾದ ಕ್ಷಣ ಎಂದ ಕೊಹ್ಲಿ

    39 ವರ್ಷ ವಯಸ್ಸಿನ ಜೂಲನ್, ತನ್ನ 20 ವರ್ಷಗಳ ವೃತ್ತಿಜೀವನಕ್ಕೆ ಇಂದು ಅಂತ್ಯ ಹಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 12 ಟೆಸ್ಟ್, 205 ಏಕದಿನ ಮತ್ತು 68 ಟಿ20 ಪಂದ್ಯಗಳನ್ನಾಡಿರುವ ಜೂಲನ್ ಗೋಸ್ವಾಮಿ, ಒಟ್ಟು 355 ವಿಕೆಟ್ ಕಬಳಿಸಿದ್ದಾರೆ. ಇದನ್ನೂ ಓದಿ: ಬುಮ್ರಾ ಯಾರ್ಕರ್‌ಗೆ ಫಿಂಚ್ ಶಬ್ಬಾಸ್‍ಗಿರಿ – ಪಲ್ಟಿ ಹೊಡೆದು ಬೆರಗಾದ ಸ್ಮಿತ್

    ಬೌಲಿಂಗ್ ಜೊತೆಗೆ ಬ್ಯಾಟಿಂಗ್‍ನಲ್ಲಿ ಮೂರು ಮಾದರಿ ಕ್ರಿಕೆಟ್‍ನಲ್ಲಿ ಒಟ್ಟು 283 ಪಂದ್ಯಗಳಿಂದ 1,924 ರನ್ ಬಾರಿಸಿ ಮಹಿಳಾ ಲೆಜೆಂಡ್ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ವೇಗದ ಬೌಲರ್ ಆಗಿರುವ ಜೂಲನ್ ಗೋಸ್ವಾಮಿ ಮಹಿಳಾ ವಿಶ್ವಕಪ್‍ನಲ್ಲಿ ಒಟ್ಟು 40 ವಿಕೆಟ್ ಪಡೆದು ಅತಿ ಹೆಚ್ಚು ವಿಕೆಟ್‍ಗಳ ಪಡೆದಿರುವ ದಾಖಲೆಯನ್ನು ಹೊಂದಿದ್ದಾರೆ. ಮಿಥಾಲಿ ರಾಜ್ ಬಳಿಕ ಏಕದಿನ ಕ್ರಿಕೆಟ್‍ನಲ್ಲಿ ಸುದೀರ್ಘ ವೃತ್ತಿಜೀವನವನ್ನು ಹೊಂದಿರುವ ಎರಡನೇ ಮಹಿಳಾ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಜೂಲನ್ ಗೋಸ್ವಾಮಿ 20 ವರ್ಷಕ್ಕೂ ಅಧಿಕ ದಿನ ಕ್ರಿಕೆಟ್ ಆಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ, 1,000 ರನ್, 50 ವಿಕೆಟ್ ಮತ್ತು 50 ಕ್ಯಾಚ್ ಪಡೆದಿರುವ ದಾಖಲೆಯನ್ನು ಜೂಲನ್ ಗೋಸ್ವಾಮಿ ಬರೆದಿದ್ದಾರೆ.

    ಜೂಲನ್ ಗೋಸ್ವಾಮಿ 2006ರಲ್ಲಿ ಇಂಗ್ಲೆಂಡ್ ವಿರುದ್ಧ ಟೌಂಟನ್‍ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‍ಗಳನ್ನು ಕಬಳಿಸಿ ದಾಖಲೆ ನಿರ್ಮಿಸಿದ್ದರು. ಆಗ ಕೇವಲ 23 ವರ್ಷ ವಯಸ್ಸಿನವರಾಗಿದ್ದ ಅವರು, ಮಹಿಳಾ ಟೆಸ್ಟ್ ಕ್ರಿಕೆಟ್‍ನಲ್ಲಿ 10 ವಿಕೆಟ್‍ಗಳನ್ನು ಪಡೆದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಡೆದಿದ್ದರು. 2006ರಲ್ಲಿ ಇಂಗ್ಲೆಂಡ್ ವಿರುದ್ಧ 78 ರನ್ ನೀಡಿ 10 ವಿಕೆಟ್ ಕಬಳಿಸಿದ್ದರು.

    ಜೂಲನ್ ಜೀವನದ ಕುರಿತಾಗಿ ‘ಚಕ್ಡಾ ಎಕ್ಸ್ ಪ್ರೆಸ್’ (Chakda Xpress) ಎಂಬ ಹೆಸರಿನ ಚಿತ್ರ ಬಾಲಿವುಡ್‍ನಲ್ಲಿ ನಿರ್ಮಾಣವಾಗುತ್ತಿದೆ. ಬಾಲಿವುಡ್ ತಾರೆ ಅನುಷ್ಕಾ ಶರ್ಮಾ (Anushka Sharma) ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ʼಚಕ್ಡಾ ಎಕ್ಸ್ ಪ್ರೆಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – ತಂಡದಲ್ಲಿ ಯಾರೆಲ್ಲಾ ಇದ್ದಾರೆ?

    ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – ತಂಡದಲ್ಲಿ ಯಾರೆಲ್ಲಾ ಇದ್ದಾರೆ?

    ಲಂಡನ್: ಭಾರತದ ವಿರುದ್ಧ ನಾಳೆಯಿಂದ ಆರಂಭವಾಗಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದೆ.

    ಎಡ್ಜ್‌ಬಾಸ್ಟನ್‌ನಲ್ಲಿ ನಾಳೆಯಿಂದ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಇಂಗ್ಲೆಂಡ್ ತಂಡದ ಪಂದ್ಯ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಹೊರ ನಡೆದಿದ್ದ ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆಂಡರ್ಸನ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ ಫೋಕ್ಸ್ ಕೊರೊನಾದಿಂದಾಗಿ ತಂಡದಿಂದ ಹೊರಗುಳಿದಿದ್ದು ಅವರ ಬದಲಿಗೆ ಸ್ಯಾಮ್ ಬಿಲ್ಲಿಂಗ್ಸ್ ವಿಕೆಟ್ ಕೀಪರ್ ಆಗಿ ಆಯ್ಕೆ ಗೊಂಡಿದ್ದಾರೆ.


    ತಂಡ ಹೀಗಿದೆ:
    ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (C), ಸ್ಯಾಮ್ ಬಿಲ್ಲಿಂಗ್ಸ್ (WK), ಮ್ಯಾಥ್ಯೂ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್. ಇದನ್ನೂ ಓದಿ: ನಾಳೆಯಿಂದ ಭಾರತ – ಇಂಗ್ಲೆಂಡ್ ಹೈವೋಲ್ಟೇಜ್ ಟೆಸ್ಟ್ ಕ್ರಿಕೆಟ್: ಬುಮ್ರಾಗೆ ನಾಯಕನ ಪಟ್ಟ

    ಕಳೆದ ವರ್ಷ 5 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿತ್ತು. ಕೋವಿಡ್ ಹೆಚ್ಚಾದ ಬಳಿಕ 5ನೇ ಪಂದ್ಯ ನಡೆಸದೆ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಈ ಪಂದ್ಯವನ್ನು ಮುಂದುವರಿಸುತ್ತಿದ್ದು, ಏಕೈಕ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭವಾಗುತ್ತಿದೆ. ಈಗಾಗಲೇ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-1 ಅಂತರದ ಮುನ್ನಡೆ ಪಡೆದುಕೊಂಡಿದೆ. ನಾಳೆ ಮಧ್ಯಾಹ್ನ 3:00 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಇದನ್ನೂ ಓದಿ: ರ್‍ಯಾಂಕಿಂಗ್‌ನಲ್ಲಿ ಕೊಹ್ಲಿಯ ಅಪರೂಪದ ವಿಶ್ವ ದಾಖಲೆ ಮುರಿದ ಬಾಬರ್ ಅಜಮ್

    ಈ ನಡುವೆ ಭಾರತ ತಂಡಕ್ಕೆ ಕೊರೊನಾ ಅಡ್ಡಿಯಾಗುತ್ತಿದೆ. ಕೊರೊನಾ ಕಾಣಿಸಿಕೊಂಡ ಪರಿಣಾಮ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಂಡದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ರೋಹಿತ್ ಅನುಪಸ್ಥಿತಿಯಲ್ಲಿ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂಡವನ್ನು ನಾಯಕನಾಗಿ ಮುನ್ನಡೆಸುವ ಸಾಧ್ಯತೆ ಇದೆ. ಆದರೆ ರೋಹಿತ್ ಶರ್ಮಾ ಕೊರೊನಾ ವರದಿ ಇಂದು ಸಂಜೆ ನೆಗೆಟಿವ್ ಬಂದರೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುಳಿವು ಕೋಚ್ ರಾಹುಲ್ ದ್ರಾವಿಡ್ ನೀಡಿದ್ದಾರೆ.

    Live Tv