Tag: Engaged

  • ಭಾವಿಪತಿ 14 ವರ್ಷಗಳಿಂದ ಪರಿಚಯ: ಟೀಕೆಗೆ ಉತ್ತರಿಸಿದ ನಟಿ ವರಲಕ್ಷ್ಮಿ

    ಭಾವಿಪತಿ 14 ವರ್ಷಗಳಿಂದ ಪರಿಚಯ: ಟೀಕೆಗೆ ಉತ್ತರಿಸಿದ ನಟಿ ವರಲಕ್ಷ್ಮಿ

    ರಲಕ್ಷ್ಮಿ ಶರತ್‌ಕುಮಾರ್ ತಮ್ಮ ಅಭಿಮಾನಿಗಳಿಗೆ ಮಾರ್ಚ್ 1ರಂದು ಗುಡ್ ನ್ಯೂಸ್ ಕೊಟ್ಟಿದ್ದರು. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆದರು. ಎಂಗೇಜ್‌ಮೆಂಟ್‌ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನಂತರ ಈ ಕುರಿತಂತೆ ಸಾಕಷ್ಟು ನೆಗೆಟಿವ್ ಮಾತುಗಳು ಕೇಳಿ ಬಂದಿದ್ದವು. ಅದಕ್ಕೆಲ್ಲ ವರಲಕ್ಷ್ಮಿ ಉತ್ತರ ಕೊಟ್ಟಿದ್ದಾರೆ. ಇದು ದಿಢೀರ್ ಬೆಳವಣಿಗೆ ಅಲ್ಲ, ನನ್ನ ಭಾವಿಪತಿ ನನಗೆ 14 ವರ್ಷಗಳಿಂದಲೂ ಪರಿಚಯ ಎಂದಿದ್ದಾರೆ.

    ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಅವರು ನಿಕೋಲಾಯ್ ಸಚ್‌ದೇವ್ (Nicholai Sachdev) ಎಂಬುವರ ಜೊತೆ ಮದುವೆ ನಿಶ್ಚಯವಾಗಿದೆ. ಇವರು ಅಥ್ಲೆಟ್ ಆಗಿದ್ದು ವೇಟ್‌ಲಿಫ್ಟಿಂಗ್‌ನಲ್ಲಿ ಹೆಸರು ಮಾಡಿದ್ದಾರೆ. ಈಗಾಗಲೇ ಅವರಿಗೆ ಮದುವೆಯಾಗಿದ್ದು, 15 ವರ್ಷದ ಮಗಳಿದ್ದಾಳೆ ಎನ್ನಲಾಗ್ತಿದೆ. ಇವರ ಜೊತೆ ವರಲಕ್ಷ್ಮಿ ನಿಶ್ಚಿತಾರ್ಥ ಹಲವು ಚರ್ಚೆಗೆ ಕಾರಣವಾಗಿದೆ.

    ನಿಕೋಲಾಯ್ ಅವರು ಖ್ಯಾತ ಮಾಡೆಲ್ ಕವಿತಾ (Kavitha) ಅವರನ್ನು ಮದುವೆಯಾಗಿದ್ದರು. ಅವರಿಗೆ 15 ವರ್ಷದ ಮಗಳೂ ಸಹ ಇದ್ದಾರೆ ಎನ್ನಲಾಗಿದೆ. ಈ ಜೋಡಿಗೆ ಮದುವೆ ಬಳಿಕ ಹೊಂದಾಣಿಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಬ್ಬರು ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದರು. ಆ ಬಳಿಕ ವರಲಕ್ಷ್ಮಿ ಜೊತೆ ಎಂಗೇಜ್ ಆದರು. ನಿಕೋಲಾಯ್ ಹಾಗೂ ಕವಿತಾ ಡಿವೋರ್ಸ್ ಬಳಿಕವಷ್ಟೇ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಾಗಿತ್ತು ಎಂದು ವರದಿಯಾಗಿವೆ.

    ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

  • ಮದುವೆ ಆಗಿಲ್ಲ, ಎಂಗೇಜ್ಮೆಂಟ್ ಅಷ್ಟೇ ನಡೆದಿದ್ದು: ಅದಿತಿ ಸ್ಪಷ್ಟನೆ

    ಮದುವೆ ಆಗಿಲ್ಲ, ಎಂಗೇಜ್ಮೆಂಟ್ ಅಷ್ಟೇ ನಡೆದಿದ್ದು: ಅದಿತಿ ಸ್ಪಷ್ಟನೆ

    ಬಾಲಿವುಡ್ ನಟಿ ಅದಿತಿ ರಾವ್ ಹೈದರಿ(Aditi Rao Hydari) ಕಾಲಿವುಡ್ ನಟ ಸಿದ್ಧಾರ್ಥ್  (Siddarth) ಸದ್ದಿಲ್ಲದೇ ಮದುವೆಯಾ ಆಗಿದ್ದಾರೆ ಎಂದು ನಿನ್ನೆಯಷ್ಟೇ ಭರ್ಜರಿ ಸುದ್ದಿ ಆಗಿತ್ತು. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎಂದು ಹೇಳಲಾಗಿತ್ತು. ಈ ಮದುವೆಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿದ್ದವು.

    ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಅವರ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗಿತ್ತು. ಶೂಟಿಂಗ್ ಎಂದು ಸುಳ್ಳು ಹೇಳಿ ಇಬ್ಬರೂ ಮದುವೆ ಆಗಿದ್ದಾರೆ ಎಂದು ಆರೋಪಿಸಲಾಗಿತ್ತು. ಎಲ್ಲದಕ್ಕೂ ಅದಿತಿ ಉತ್ತರ ನೀಡಿದ್ದಾರೆ. ಹಿ ಸೇಡ್ ಎಸ್.. ಎಂಗೇಜ್ಡ್’ (Engaged) ಎಂದು ಸಿದ್ಧಾರ್ಥನ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ. ಇದೀಗ ತಾವು ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ಘೋಷಣೆ ನೀಡಿದ್ದಾರೆ.

    ಈ  ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿತ್ತು. ಆದರೆ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ (Wedding) ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್.

    ನ್ಯೂ ಇಯರ್ ಸಂಭ್ರಮವನ್ನು ನಟಿ ಅದಿತಿ- ಸಿದ್ಧಾರ್ಥ್ ಜೋಡಿ ವಿದೇಶದಲ್ಲಿ ಸೆಲೆಬ್ರೇಟ್ ಮಾಡಿದ್ದರು. ಈ ಕುರಿತ ಇಬ್ಬರೂ ಕೂಡ ಚೆಂದದ ಫೋಟೋ ಶೇರ್ ಮಾಡಿ ಅಭಿಮಾನಿಗಳಿಗೆ ಶುಭಕೋರಿದ್ದರು. ಈ ಮೂಲಕ ಎಂಗೇಜ್ ಆಗಿರೋದು ಖಚಿತವಾಗಿತ್ತು. ಫೋಟೋ ಶೇರ್ ಮಾಡ್ತಿದ್ದಂತೆ ಮದುವೆ ಯಾವಾಗ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದರು.

    2021ರಲ್ಲಿ ‘ಮಹಾ ಸಮುದ್ರಂ’ ಸಿನಿಮಾ ವೇಳೆ, ಅದಿತಿ- ಸಿದ್ಧಾರ್ಥ್ ಪರಿಚಿತರಾದರು. ಅಲ್ಲಿಂದ ಶುರುವಾದ ಸ್ನೇಹ ಪ್ರೀತಿಗೆ ತಿರುಗಿತ್ತು. ಸಾಕಷ್ಟು ಪಾರ್ಟಿ ಮತ್ತು ಸೆಲೆಬ್ರಿಟಿ ಮದುವೆ ಸಮಾರಂಭಗಳಲ್ಲಿ ಇಬ್ಬರೂ ಜೊತೆಯಾಗಿಯೇ ಹೋಗುವ ಮೂಲಕ ಹೈಲೆಟ್ ಆದರು.

     

    ಇಬ್ಬರೂ ಪ್ರೀತಿ ಬಗ್ಗೆ ಅಧಿಕೃತವಾಗಿ ಹೇಳದೇ ಇದ್ದರೂ ಹೊಸ ಫೋಟೋ ಶೇರ್ ಮಾಡಿ ಮದುವೆ ಬಗ್ಗೆ ಪರೋಕ್ಷವಾಗಿ ಹೇಳಿದ್ರಾ ಎಂಬ ಅನುಮಾನ ಅಭಿಮಾನಿಗಳನ್ನ ಕಾಡ್ತಿತ್ತು. ಇದೀಗ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದೆ ಜೋಡಿ.

  • ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ: ತಾಂಬೂಲ ಬದಲಿಸಿಕೊಂಡ ಕುಟುಂಬ

    ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ: ತಾಂಬೂಲ ಬದಲಿಸಿಕೊಂಡ ಕುಟುಂಬ

    ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥದ ಬಗ್ಗೆ ಹಲವು ದಿನಗಳಿಂದ ಗಾಸಿಪ್ ಕಾಲಂನಲ್ಲಿ ಸುದ್ದಿ ಹರಿದಾಡುತ್ತಿತ್ತು. ಮೊನ್ನೆಯಷ್ಟೇ ಅಂಥದ್ದೇನೂ ಇಲ್ಲ ಎಂದೇ ಸುಮಲತಾ ಅಂಬರೀಶ್ ಹೇಳಿದ್ದರು. ಹುಡುಗಿಯನ್ನು ನೀವೇ ಹುಡುಕಿಕೊಡಿ ಎಂದೂ ತಮಾಷೆಯಾಗಿ ಅಭಿಷೇಕ್ ಹೇಳಿದ್ದರು. ಆದರೆ, ಅಭಿಷೇಕ್ ಅವರ ಎಂಗೇಜ್ ಮೆಂಟ್ ಕುರಿತು ಅವರ ಆಪ್ತರು ಖಚಿತ ಪಡಿಸಿದ್ದಾರೆ. ನಿನ್ನೆ ಅಂಬರೀಶ್ ಅವರ ಮನೆಯಲ್ಲೇ ತಾಂಬೂಲ ಬದಲಿಸಿಕೊಳ್ಳುವ ಶಾಸ್ತ್ರ ಕೂಡ ಮುಗಿದಿದೆ. ಡಿಸೆಂಬರ್ 11 ರಂದು ಅಭಿಷೇಕ್ ಎಂಗೇಜ್ ಆಗಲಿದ್ದಾರೆ ಎನ್ನಲಾಗುತ್ತಿದೆ.

    ಹಲವು ವರ್ಷಗಳಿಂದ ಪರಿಚಯವಿರುವ ತಮ್ಮ ಗೆಳತಿಯನ್ನೇ ಅಭಿಷೇಕ್ ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರು ಖ್ಯಾತ ಫ್ಯಾಷನ್ ಡಿಸೈನರ್ ಪುತ್ರಿ ಎನ್ನುತ್ತವೆ ಆಪ್ತ ಮೂಲಗಳು. ಅಭಿಷೇಕ್ ಎಂಗೇಜ್ ಮೆಂಟ್ ಬೆಂಗಳೂರಿನ ಪ್ರತಿಷ್ಠಿತ ಸ್ಟಾರ್ ಹೋಟೆಲ್ ನಲ್ಲಿ ನಡೆಯಲಿದ್ದು, ಈಗಾಗಲೇ ರಜನಿಕಾಂತ್ ಸೇರಿದಂತೆ ದಕ್ಷಿಣದ ಹಲವು ದಿಗ್ಗಜರಿಗೆ ಆಹ್ವಾನ ಕೂಡ ಹೋಗಿದೆಯಂತೆ. ಇದನ್ನೂ ಓದಿ: ಪ್ರತಿಷ್ಠಿತ ಆಭರಣ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಸ್ಥಾನದಿಂದ ರಶ್ಮಿಕಾ ಔಟ್

    ಅಭಿಷೇಕ್ ಅಂಬರೀಶ್ ಅವರ ಸ್ನೇಹಿತೆಯಾಗಿರುವ ಅವಿವಾ ಬಿದ್ದಪ್ಪ ಅವರೇ ಅಭಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಇವರು ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರು ಪುತ್ರಿಯಾಗಿದ್ದಾರೆ. ಹಲವು ವರ್ಷಗಳಿಂದ ಅಭಿಷೇಕ್ ಮತ್ತು ಅವಿದಾ ಫ್ರೆಂಡ್ಸ್ ಎನ್ನುವುದು ಗುಟ್ಟಿನ ಸಂಗತಿಯೇನೂ ಅಲ್ಲ. ಈ ಗೆಳೆತನವೇ ಪ್ರೇಮಕ್ಕೆ ತಿರುಗಿ ಇದೀಗ ಹಸಮಣೆ ಹತ್ತಿಸುತ್ತಿದೆ.

    ನಿನ್ನೆಯಷ್ಟೇ ಅಭಿಷೇಕ್ ಅವರ ಹೊಸ ಸಿನಿಮಾದ ಮುಹೂರ್ತವಾಗಿದ್ದು, ಈ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಮುಂಗಾರು ಮಳೆ ಖ್ಯಾತಿಯ ಕೃಷ್ಣ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಭಿ ಅವರ ಎಂಗೇಜ್ ಮೆಂಟ್ ಮುಗಿದ ನಂತರ ಚಿತ್ರೀಕರಣ ಶುರು ಆಗಲಿದೆ. ಅಲ್ಲದೇ, ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲೂ ಅಭಿ ನಟಿಸಿದ್ದು, ಈ ಸಿನಿಮಾ ಸಂಪೂರ್ಣ ಚಿತ್ರೀಕರಣ ಮುಗಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಫಿಸಿಕಲ್ ಟ್ರೈನರ್‌ಗೆ ಉಂಗುರ ತೊಡಿಸಿ ಎಂಗೇಜ್ಡ್ ಆದ ಆಮೀರ್ ಖಾನ್ ಪುತ್ರಿ

    ಫಿಸಿಕಲ್ ಟ್ರೈನರ್‌ಗೆ ಉಂಗುರ ತೊಡಿಸಿ ಎಂಗೇಜ್ಡ್ ಆದ ಆಮೀರ್ ಖಾನ್ ಪುತ್ರಿ

    ಬಾಲಿವುಡ್ (Bollywood) ಖ್ಯಾತ ನಟ ಆಮೀರ್ ಖಾನ್ (Aamir Khan) ಪುತ್ರಿ ಇರಾ ಖಾನ್ (Ira Khan) ಕೊನೆಗೂ ನಿಶ್ಚಿತಾರ್ಥ (Engaged) ಮಾಡಿಕೊಂಡಿದ್ದಾರೆ. ತನ್ನ ಪ್ರಿಯಕರಿಗೆ ಉಂಗುರ ತೊಡಿಸಿ, ಮುತ್ತಿಡುವ ಮೂಲಕ ಎಂಗೇಜ್ಡ್ ಆಗಿರುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಇರಾ ಖಾನ್ ಮತ್ತು ನೂಪುರ್ ಶಿಖಾರೆ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆ ಪ್ರೀತಿ ಇಂದು ಮತ್ತೊಂದು ಹಂತ ಪಡೆದುಕೊಂಡಿದೆ. ಪ್ರೀತಿಸುತ್ತಿರುವಾಗಲೇ ಒಟ್ಟಿಗೆ ವಾಸವಿದ್ದ ಈ ಜೋಡಿ ಇದೀಗ ಅಧಿಕೃತವಾಗಿ ಸತಿ ಪತಿಯಾಗಲು ಹೊರಟಿದೆ.

    ನೂಪುರ್ ಶಿಖಾರೆ (Nupur Shikhare) ಮತ್ತು ಇರಾ ಖಾನ್ ಪ್ರೀತಿಗೆ ಹಲವು ವರ್ಷಗಳು. ಆಕೆಗೆ ಫಿಸಿಕಲ್ ಟ್ರೈನರ್ ಆಗಿದ್ದ ನೂಪುರ್ ನನ್ನು ಇರಾ ಇಷ್ಟಪಡುತ್ತಾಳೆ. ಅವನ ಜೊತೆಯೇ ಹಲವು ಟ್ರಿಪ್ ಗಳನ್ನು ಕೂಡ ಮಾಡಿದ್ದಾರೆ. ಅಲ್ಲದೇ ಇಬ್ಬರೂ ಒಂದೇ ಮನೆಯಲ್ಲೇ ಹಲವು ದಿನಗಳಿಂದ ವಾಸಿಸುತ್ತಿದ್ದರು. ಇದೊಂದು ಸಹಜೀವನ ಎಂದೇ ಬಾಲಿವುಡ್ ಮಾತಾಡಿಕೊಂಡಿತ್ತು. ಅದಕ್ಕೀಗ ಫುಲ್ ಸ್ಟಾಪ್ ಇಡುವಂತಹ ಕೆಲಸವನ್ನು ಈ ಜೋಡಿ ಮಾಡಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಮನೆಗೆ ಬ್ರಹ್ಮಾಂಡ ಗುರೂಜಿ ಹೋದರೆ ಮಜವಾಗಿರತ್ತೆ ಅಂತಿದ್ದಾರೆ ನೆಟ್ಟಿಗರು

    ಮೊನ್ನೆಯಷ್ಟೇ ಬಿಕಿನಿಯಲ್ಲಿ ಇರಾ ಹುಟ್ಟು ಹಬ್ಬವನ್ನು ಆಚರಿಸಿಕೊಂಡಾಗ ಮತ್ತು ಪೂಲ್ ಸೈಡ್ ಪಾರ್ಟಿ ಮಾಡಿದಾಗಲೂ ನೂಪುರ್ ಶಿಖಾರೆ ಜೊತೆಯಲ್ಲೇ ಇದ್ದರು. ಅಲ್ಲದೇ ಈಜುಕೊಳದಲ್ಲಿ ಇಬ್ಬರೂ ತಬ್ಬಿಕೊಂಡ ಫೋಟೋವನ್ನು ಸ್ವತ: ಇರಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ನಿಶ್ಚಿತಾರ್ಥಕ್ಕಿಂತ ಮುಂಚೆನೇ ಈ ಜೋಡಿ ಸಖತ್ ಫೇಮಸ್ ಮತ್ತು ವೈರಲ್ ಕೂಡ ಆಗಿತ್ತು. ಬಹಿರಂಗವಾಗಿಯೇ ತಾವಿಬ್ಬರೂ ಪ್ರೀತಿಸುತ್ತಿರುವ ವಿಚಾರವನ್ನೂ ಅವರು ಹಂಚಿಕೊಂಡಿದ್ದರು.

    ಕೊನೆಗೂ ತಾನು ಮೆಚ್ಚಿದ್ದ ಮತ್ತು ಜೊತೆ ಜೊತೆಯಲ್ಲೇ ಓಡಾಡುತ್ತಿದ್ದ ಹುಡುಗನನ್ನೇ ಮದುವೆ ಆಗುತ್ತಿರುವ ಇರಾ ಬಗ್ಗೆ ಬಾಲಿವುಡ್ ಮೆಚ್ಚುಗೆ ವ್ಯಕ್ತಪಡಿಸಿದೆ. ಅಲ್ಲದೇ ಈ ಜೋಡಿಗೆ ಶುಭ ಹಾರೈಸಿದೆ. ಮೆಚ್ಚಿದವರ ಜೊತೆಯೇ ಜೀವನ ನಡೆಸುವುದು ಸಂತೋಷಕ್ಕೆ ಮಹಾದಾರಿಯನ್ನುವ ಸಂದೇಶವನ್ನೂ ಈ ಜೋಡಿ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • 2ನೇ ಮದುವೆಗೆ ತಯಾರಾದ ಐಎಎಸ್ ಟಾಪರ್ ಟೀನಾ

    2ನೇ ಮದುವೆಗೆ ತಯಾರಾದ ಐಎಎಸ್ ಟಾಪರ್ ಟೀನಾ

    ನವದೆಹಲಿ: ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಟೀನಾ ದಾಬಿ, ಐಎಎಸ್ ಅಧಿಕಾರಿ ಪ್ರದೀಪ್ ಗವಾಂಡೆ ಅವರ ಜೊತೆಗೆ 2ನೇ ಮದುವೆಯಾಗುತ್ತಿದ್ದಾರೆ. ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಮ್‍ನಲ್ಲಿ ಟೀನಾ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಭಾವಿ ಪತಿ ಪ್ರದೀಪ್ ಗಾವಂಡೆ ಅವರಿಗೂ ಇದು ಎರಡನೇ ಮದುವೆ. ಐಎಎಸ್ ಆಗುವ ಮೊದಲು ಅವರು ವೈದ್ಯರಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಐಎಎಸ್‌ ಟಾಪರ್‌ ಟೀನಾ ಡಾಬಿ, ಅಥರ್‌ ಖಾನ್‌ ಜೋಡಿಯಿಂದ ವಿಚ್ಛೇದನಕ್ಕೆ ಅರ್ಜಿ

     

    View this post on Instagram

     

    A post shared by Tina Dabi (@dabi_tina)

     

    2015 ರಲ್ಲಿ, ಟೀನಾ ದಾಬಿ ದಲಿತ ಸಮುದಾಯದಿಂದ ಪ್ರತಿಷ್ಠಿತ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಮೊದಲ ವ್ಯಕ್ತಿಯಾದರು. ಟೀನಾ ದಾಬಿ ಮತ್ತು ಅಥರ್ ಖಾನ್ ಇಬ್ಬರೂ ತರಬೇತಿ ಸಮಯದಲ್ಲಿ ಪರಸ್ಪರ ಪ್ರೀತಿಯಲ್ಲಿ ಬಿದ್ದಿದ್ದರು. 2018 ರಲ್ಲಿ ಅವರಿಬ್ಬರ ವಿವಾಹವು ಬಹಳಷ್ಟು ಸುದ್ದಿ ಮಾಡಿತ್ತು. ಟೀನಾ 2020ರ ನವೆಂಬರ್‍ನಲ್ಲಿ ಮೊದಲ ಪತಿ ಅಮೀರ್ ಉಲ್‍ಶಫಿ ಖಾನ್ ಅವರಿಂದ ವಿಚ್ಚೇದನ ಪಡೆದಿದ್ದಾರೆ. ಮದುವೆಯಾಗಿ ಎರಡೇ ವರ್ಷಕ್ಕೆ ಈ ದಂಪತಿ ಬೇರೆಯಾಗಿದ್ದರು. ಇದನ್ನೂ ಓದಿ:  ಅತ್ತೆ-ಸೊಸೆ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ್ರಾ ಶಂಕರಣ್ಣ..?

    ಅಥರ್ ಖಾನ್ ಮೊದಲು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ವಿಚ್ಛೇದನದ ನಂತರ ಅವರು ಜಮ್ಮು ಮತ್ತು ಕಾಶ್ಮೀರ ಕೇಡರ್‍ನೊಂದಿಗೆ ತಮ್ಮ ರಾಜ್ಯಕ್ಕೆ ಹೋದರು. ಟೀನಾ ದಾಬಿ ಮೂಲತಃ ದೆಹಲಿಯವರು. ಕಳೆದ ವರ್ಷ ಅವರ ಸಹೋದರಿ ರಿಯಾ ದಾಬಿ ಕೂಡ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದರು. ಇದೀಗ ಟೀನಾ ಮತ್ತೆ 2ನೇ ಮದುವೆಗೆ ಸಿದ್ಧರಾಗಿದ್ದು, ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ: ಡಿಕೆಶಿ

  • ಪುತ್ರಿಯ ನಿಶ್ಚಿತಾರ್ಥದ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ

    ಪುತ್ರಿಯ ನಿಶ್ಚಿತಾರ್ಥದ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ

    ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಶಾನೆಲ್ ನಿಶ್ವಿತಾರ್ಥ ಅರ್ಜುನ್ ಭಲ್ಲಾ ಅವರೊಂದಿಗೆ ನಡೆದಿದ್ದು, ಈ ಫೋಟೋವನ್ನು ಸ್ಮೃತಿ ಇರಾನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಭಾವಿ ಅಳಿಯನೊಂದಿಗೆ ಮಗಳ ಕ್ಯೂಟ್ ಫೋಟೋವನ್ನು ಸ್ಮೃತಿ ಇರಾನಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಅರ್ಜುನ್ ಶಾಲೆನ್‍ಗೆ ಪ್ರಪೋಸ್ ಮಾಡಿ ಉಂಗುರ ತೊಡಿಸಿರುವುದನ್ನು ಕಾಣಬಹುದಾಗಿದೆ. ಮತ್ತೊಂದು ಫೋಟೋದಲ್ಲಿ ಶಾನೆಲ್ ಹಾಗೂ ಅರ್ಜುನ್ ಸಂತಸದಿಂದ ಕ್ಲೋಸ್ ಆಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್

    ಈ ಕ್ಯೂಟ್ ಫೋಟೋಗಳ ಜೊತೆಗೆ ಕ್ಯಾಪ್ಷನ್‍ನಲ್ಲಿ, ಅರ್ಜುನ್ ಭಲ್ಲಾ ನಮ್ಮ ಹೃದಯ ಗೆದ್ದ ವ್ಯಕ್ತಿ. ನಮ್ಮ ಕ್ರೇಜಿ ಕುಟುಂಬಕ್ಕೆ ನಿಮಗೆ ಸ್ವಾಗತ. ಇನ್ನು ಮುಂದೆ ನಿಮ್ಮ ಮಾವ ಮತ್ತು ನಮ್ಮೆಲ್ಲರ ಹುಚ್ಚುತನವನ್ನು ಸಹಿಸಿಕೊಳ್ಳಬೇಕಾಗುತ್ತದೆ. ನಿಮಗೆ ದೇವರು ಒಳ್ಳೆಯದು ಮಾಡಲಿ ಎಂದು ಹಾಸ್ಯಮಯವಾಗಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Smriti Irani (@smritiiraniofficial)

    ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನಟಿ ಮೌನಿ ರಾಯ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಕಾಮೆಂಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

  • ಎಂಗೇಜ್ಮೆಂಟ್ ಮಾಡಿಕೊಂಡ ನಟಿ – ಅಭಿಮಾನಿಗಳಿಗೆ ನಯನತಾರಾ ಗುಡ್ ನ್ಯೂಸ್

    ಎಂಗೇಜ್ಮೆಂಟ್ ಮಾಡಿಕೊಂಡ ನಟಿ – ಅಭಿಮಾನಿಗಳಿಗೆ ನಯನತಾರಾ ಗುಡ್ ನ್ಯೂಸ್

    ಹೈದರಾಬಾದ್: ಲೇಡಿ ಸೂಪರ್ ಸ್ಟಾರ್ ಎಂದೇ ಸಖತ್ ಫೇಮಸ್ ಆಗಿರುವ ಬಹುಭಾಷಾ ನಟಿ ನಯನತಾರಾ ಕೊನೆಗೂ ತಾವು ಎಂಗೇಜ್ ಎಂದು ತಿಳಿಸಿದ್ದಾರೆ.

    ಖಾಸಗಿ ಚಾನೆಲ್‍ವೊಂದು ನಡೆಸಿದ ಸಂದರ್ಶನದಲ್ಲಿ ಭಾಗಿಯಾಗಿದ್ದ ನಯನ ತಾರಾ ತಮ್ಮ ಬಹುಕಾದ ಗೆಳೆಯ ವಿಘ್ನೇಶ್ ಶಿವನ್ ಒಟ್ಟಿಗೆ ತಾವು ಎಂಗೇಜ್‍ಮೆಂಟ್ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ತಮ್ಮ ಎಂಗೇಜ್‍ಮೆಂಟ್ ರೀಂಗ್‍ಅನ್ನು ಬಹಿರಂಗವಾಗಿ ತೋರಿಸಿದ್ದು, ಆದಷ್ಟು ಬೇಗ ಹಸೆಮಣೆ ಏರುತ್ತಿರೋದಾಗಿ ಹೇಳಿದ್ದಾರೆ. ಈ ಮೂಲಕವಾಗಿ ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ನಾನು ರೌಡಿದಾನ್ ಸಿನಿಮಾ ಸೆಟ್‍ನಲ್ಲಿ ವಿಘ್ನೇಶ್ ಅವರನ್ನು ಮೊದಲಿದೆ ಭೇಟಿಯಾಗಿದ್ದೆ, ಎಂದು ಹೇಳುತ್ತ ತಮ್ಮ ಕೈಯಲ್ಲಿ ಇರುವ ಎಂಗೇಜ್‍ಮೆಂಟ್ ರೀಂಗ್ ಎಂದು ತಿಳಿಸಿದ್ದಾರೆ.

     

    View this post on Instagram

     

    A post shared by nayanthara???? (@nayantharaaa)

    ಈ ಹಿಂದೆ ಹಲವು ಬಾರಿ ನಯನತಾರಾ ವಿಘ್ನೇಷ್ ಅವರ ಜೊತೆಗೆ ಇರುವ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಭಿಮಾನಿಗಳು ಮದುವೆಯಾಗಿದ್ದೀರ ಎಂದು ಕೇಳುತ್ತಿದ್ದರು. ಆದರೆ ನಯನತಾರಾ ಅವರು ಎಂಗೇಜ್‍ಮೆಂಟ್ ಆಗಿದ್ದೇವೆ ಎಂದು ಹೇಳಿದ್ದಾರೆ.

     

    View this post on Instagram

     

    A post shared by nayanthara???? (@nayantharaaa)

  • ಪ್ರಿಯತಮನ ಜೊತೆ ‘ಅರಗಿಣಿ’ ಖ್ಯಾತಿಯ ನಟಿ ಎಂಗೇಜ್

    ಪ್ರಿಯತಮನ ಜೊತೆ ‘ಅರಗಿಣಿ’ ಖ್ಯಾತಿಯ ನಟಿ ಎಂಗೇಜ್

    ಬೆಂಗಳೂರು: ಕಿರುತೆರೆ ನಟಿ ನವ್ಯಾ ರಾವ್ ಸದ್ಯದಲ್ಲೇ ತಮ್ಮ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ನಟಿ ನವ್ಯಾ ರಾವ್ 2013ರಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅರಗಿಣಿ’ ಸೀರಿಯಲ್‍ನಲ್ಲಿ ಅಭಿನಯಿಸಿದ್ದರು. ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿ ನಟಿ ಮೇಘನಾ ಮತ್ತು ಹರೀಶ್ ನಟಿಸಿದ್ದರು. ನೆಗೆಟಿವ್ ಪಾತ್ರದಲ್ಲಿ ಹೀರೋ ಸಿದ್ದಾರ್ಥ್ ಗರ್ಲ್‍ಫ್ರೆಂಡ್ ಆಗಿ ನವ್ಯಾ ರಾವ್, ಪೂಜಾ ಸಿಂಧ್ಯಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಿದ್ದಾರ್ಥ್ ಮತ್ತು ಖುಷಿಯ ಮಧ್ಯೆ ವಿಲನ್ ಆಗಿ ಪೂಜಾ ಸಿಂಧ್ಯಾ ತೆರೆ ಮೇಲೆ ಮಿಂಚಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ.

    ನವ್ಯಾ ಸ್ನೇಹಿತರೊಬ್ಬರ ಮದುವೆಯಲ್ಲಿ ವರುಣ್ ಎಂಬುವವರನ್ನು ಭೇಟಿ ಮಾಡಿದ್ದರು. ಅಲ್ಲಿ ಇವರಿಬ್ಬರಿಗೂ ಪರಿಚಯವಾಗಿ ಸ್ನೇಹಿತರಾಗಿದ್ದರು. ನಂತರ ವರುಣ್, ನವ್ಯಾಗೆ ಪ್ರಪೋಸ್ ಮಾಡಿದ್ದಾರೆ. ಆಗ ನವ್ಯಾ ಕೂಡ ಅವರ ಪ್ರೀತಿಯನ್ನು ಒಪ್ಪಿಕೊಂಡಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಮನೆಯಲ್ಲಿ ಪ್ರೀತಿಯ ವಿಚಾರವನ್ನು ತಿಳಿಸಿದ್ದಾರೆ. ಎರಡು ಮನೆಯವರು ಕೂಡ ಖುಷಿಯಿಂದ ಒಪ್ಪಿಕೊಂಡು ಬೇಗ ಮದುವೆ ಮಾಡಲು ನಿರ್ಧರಿಸಿದ್ದಾರೆ.

    ಅದರಂತೆಯೇ 2020 ಮಾರ್ಚ್ 18ರಂದು ಬೆಂಗಳೂರಿನ ನಂದನಾ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನವ್ಯಾ ಮತ್ತು ವರುಣ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ನಿಶ್ಚಿತಾರ್ಥದ ಫೋಟೋಗಳನ್ನು ನವ್ಯಾ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಿಶೇಷ ಅಂದರೆ ಇವರಿಬ್ಬರ ಪರಿಚಯ ಆಗಿ ಕೇವಲ 8 ತಿಂಗಳು ಕಳೆದಿದೆ. ಅಷ್ಟು ಬೇಗ ಮದುವೆಯಾಗುತ್ತಿದ್ದಾರೆ.

    ವರುಣ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಕೊರೊನಾ ವೈರಸ್ ಸಮಸ್ಯೆ ಮುಗಿದ ನಂತರ ಜೂನ್ 7 ಮತ್ತು 8ರಂದು ಬೆಂಗಳೂರಿನಲ್ಲಿಯೇ ಈ ಜೋಡಿ ಮದುವೆಯಾಗಲಿದೆ ಎಂದು ತಿಳಿದುಬಂದಿದೆ.

    ನಟಿ ನವ್ಯಾ ಮೊದಲಿಗೆ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಇದಾದ ಬಳಿಕ ಅವರಿಗೆ ‘ಅರಗಿಣಿ’ ಧಾರಾವಾಹಿಯಲ್ಲಿ ನೆಗೆಟಿವ್ ಶೇಡ್‍ನಲ್ಲಿ ಕಾಣಿಸಿಕೊಳ್ಳಲು ಅವಕಾಶ ಬಂದಿತ್ತು. ಈ ಮೂಲಕ ನವ್ಯಾ ಕಿರುತೆರೆಗೆ ಕಾಟ್ಟಿದ್ದರು. ನವ್ಯಾ ಕನ್ನಡ ಮಾತ್ರವಲ್ಲದೇ ತೆಲುಗು ಸೀರಿಯಲ್‍ನಲ್ಲೂ ಅಭಿನಯಿಸಿದ್ದಾರೆ. ಸದ್ಯಕ್ಕೆ ನವ್ಯಾ ‘ರಾಮಸೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

    https://www.instagram.com/p/B-KaDVwpa41/

     

  • ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

    ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

    – ಅವರಿಬ್ಬರಿಗೂ ಚಾಮುಂಡಿ ತಾಯಿಯೇ 6 ತಿಂಗ್ಳಲ್ಲಿ ಶಿಕ್ಷೆ ನೀಡ್ತಾಳೆ

    ಮೈಸೂರು: ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಿಡಿ ಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

    ತಪ್ಪಿತಸ್ಥರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಕಳೆದ ರಾತ್ರಿ ಯುವ ದಸರಾ ವೇದಿಕೆಯಲ್ಲಿ ನಡೆದ ಘಟನೆಗೆ ನಾನು ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ಚಂದನ್ ಶೆಟ್ಟಿ ಸುಸಂಸ್ಕೃತ ವ್ಯಕ್ತಿ ಎಂದುಕೊಂಡಿದ್ದೆ. ಆತ ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಂಗಳೂರಿನ ನಾಗರಬಾವಿಯ ನಿವಾಸಿ. ಕಳೆದ ರಾತ್ರಿ ಯುವ ದಸರಾ ವೇದಿಕೆಯಲ್ಲಿ ಆತ ಮಾಡಿರುವುದು ಅತ್ಯಂತ ಹೇಯ ಕೃತ್ಯ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

    ಪಾರಂಪರಿಕ ಮತ್ತು ಸಾಂಪ್ರದಾಯಿಕ ವೇದಿಕೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದಿತ್ತು. ನಾನು ಸಹ ಯುವ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ನಾನು ಅರಮನೆ ಕಾರ್ಯಕ್ರಮಕ್ಕೆ ಹೊರಡಲು ಮುಂದಾದಾಗ, ಚಂದನ್ ಶೆಟ್ಟಿ, ನಿವೇದಿತಾ ಪೋಷಕರು ನನ್ನನ್ನು ತಡೆದು ಇನ್ನೂ ಸ್ವಲ್ಪ ಸಮಯ ಇರುವಂತೆ ಒತ್ತಾಯಿಸಿದರು. ಆದರೆ ನಾನು ಅರಮನೆಗೆ ಹೋಗಬೇಕಾಗಿದ್ದರಿಂದ ಅಲ್ಲಿಂದ ನಿರ್ಗಮಿಸಿದೆ. ನಾನು ಹೊರಟ ನಂತರ ಈ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂತು ಎಂದು ವಿವರಿಸಿದ್ದಾರೆ.

    ಯುವ ದಸರಾ ವೇದಿಕೆಯಲ್ಲಿ ಶುಕ್ರವಾರ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಸಹ ಯುವ ದಸರಾ ವೇದಿಕೆಯಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು.

    ಈ ಕುರಿತು ಪ್ರತಿಕ್ರಿಯಿಸಿದ ಗಾಯಕ ಚಂದನ್ ಶೆಟ್ಟಿ, ತಪ್ಪಾಗಿದ್ದರೆ ಕ್ಷಮೆ ಇರಲಿ. ಪ್ರೇಮ ನಿವೇದನೆ ಮಾಡಿಕೊಳ್ಳಲು ಒಳ್ಳೆಯ ದಿನ ಅಂದುಕೊಂಡು, ನನ್ನ ಜೀವನದಲ್ಲಿ ಸಹ ಪ್ರಮುಖ ದಿನ ಎಂದುಕೊಂಡು ಮೈಸೂರಿನ ಯುವ ದಸರಾದಲ್ಲಿ ಈ ರೀತಿ ಮಾಡಿದೆ. ನನಗನ್ನಿಸಿದ್ದನ್ನು ನಾನು ಹೇಳಿದೆ, ಈ ಕುರಿತು ತಪ್ಪಾಗಿದ್ದಲ್ಲಿ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ಶುಕ್ರವಾರದ ಆ ಕಾರ್ಯಕ್ರಮಕ್ಕೆ ಸೇರಿದವರಲ್ಲಿ ಬಹುತೇಕರು ನಮ್ಮ ಹಿತೈಶಿಗಳು. ಸಪ್ರ್ರೈಸ್ ಕೊಡಬೇಕು ಎಂದುಕೊಂಡು, ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದೆ ಎಂದು ತಿಳಿಸಿದ್ದರು.

    ಆಗ ನನ್ನ ಹಾಗೂ ಅಲ್ಲಿ ಸೇರಿದ್ದ ಪ್ರತಿಯೊಬ್ಬರ ಮನಸ್ಸಿನಲ್ಲಿ ಖುಷಿ ಇತ್ತು. ಅಂತಹ ದೊಡ್ಡ ಕಾರ್ಯಕ್ರಮದಲ್ಲಿ ಸಪ್ರ್ರೈಸ್ ನೀಡುವುದರ ಜೊತೆಗೆ ನಮ್ಮಿಬ್ಬರ ಕುರಿತ ಊಹಾಪೋಹಗಳಿಗೆ ಸ್ಪಷ್ಟನೆ ನೀಡಬೇಕಾಗಿತ್ತು. ಈ ರೂಮರ್ಸ್‍ಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ವೇದಿಕೆಯ ಮೇಲೆ ಪ್ರಪೋಸ್ ಮಾಡಿದೆ. ನಾನೂ ಮೈಸೂರಿನಲ್ಲಿಯೇ ಓದಿದವನು, ಹೀಗಾಗಿ ದಸರಾದಲ್ಲಿ ಪ್ರಪೋಸ್ ಮಾಡಿದೆ ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು.

  • ಗೆಳೆಯನ ಜೊತೆ ‘ಸರ್ವಮಂಗಳ ಮಾಂಗಲ್ಯೇ’ ಖ್ಯಾತಿಯ ಐಶ್ವರ್ಯ ಎಂಗೇಜ್

    ಗೆಳೆಯನ ಜೊತೆ ‘ಸರ್ವಮಂಗಳ ಮಾಂಗಲ್ಯೇ’ ಖ್ಯಾತಿಯ ಐಶ್ವರ್ಯ ಎಂಗೇಜ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರ್ವಮಂಗಳ ಮಾಂಗಲ್ಯೇ’ ಧಾರಾವಾಹಿ ಖ್ಯಾತಿಯ ನಟಿ ಐಶ್ವರ್ಯಾ ಪಿಸ್ಸೆ ಅವರ ನಿಶ್ಚಿತಾರ್ಥ ಇತ್ತೀಚೆಗಷ್ಟೆ ನೆರವೇರಿದೆ.

    ನಟಿ ಐಶ್ವರ್ಯಾ ಅವರು ತಮ್ಮ ಬಹುಕಾಲದ ಗೆಳೆಯ ಹರಿ ವಿನಯ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇವರಿಬ್ಬರು ಕುಟುಂಬದವರ ಸಮ್ಮುಖದಲ್ಲಿ ರಿಂಗ್ ಬದಲಾಯಿಸುವ ಮೂಲಕ ಎಂಗೇಜ್ ಆಗಿದ್ದಾರೆ. ಈ ಕಾರ್ಯಕ್ರಮಕ್ಕೆ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರು ಬಂದು ಜೋಡಿಗೆ ಶುಭಕೋರಿದ್ದಾರೆ.

    ನಟಿ ಐಶ್ವರ್ಯ ಅವರು ‘ಸರ್ವಮಂಗಳ ಮಾಂಗಲ್ಯೇ’ ಧಾರಾವಾಹಿಯಲ್ಲಿ ಪಾರ್ವತಿ ಎಂಬ ಪಾತ್ರ ಮಾಡುತ್ತಿದ್ದು, ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ನಟ ಚಂದನ್ ಕುಮಾರ್ ಸಹ ಈ ಧಾರಾವಾಹಿಯಲ್ಲಿ ಮುಖ್ಯ ಭೂಮಿಕೆಯಲ್ಲಿದ್ದಾರೆ.

    ಅಷ್ಟೇ ಅಲ್ಲದೇ ಐಶ್ವರ್ಯ ಯಶ್ ಅಭಿನಯದ ‘ಸಂತು ಸ್ಟ್ರೈಟ್ ಫಾರ್ವಡ್’ ಸಿನಿಮಾದಲ್ಲಿ ಯಶ್ ಅವರಿಗೆ ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಸದ್ಯಕ್ಕೆ ಅವರು ಕನ್ನಡ ಮತ್ತು ತೆಲುಗು ಎರಡೂ ಭಾಷೆಯ ಸೀರಿಯಲ್ ಅಭಿನಯಿಸುತ್ತಿದ್ದಾರೆ.