ಬೆಂಗಳೂರು: ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಹೆಚ್‌ಎಸ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ.
ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್‌ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್‌ಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್‌ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸೂಪರ್ ಮಾರ್ಟ್‌ನಲ್ಲಿ ಖರೀದಿಸಿ, ಬಳಿಕ ಬಿಲ್ ಕಟ್ಟು ಅಂದ್ರೆ ಚಾಕು ತೋರಿಸಿ ಎಸ್ಕೇಪ್
ಅಭ್ಯರ್ಥಿಗಳು ಸೀಟ್ ಮ್ಯಾಟ್ರಿಕ್ಸ್ ನೋಡಿಕೊಂಡು ಇಚ್ಛೆ/ಆಯ್ಕೆಗಳನ್ನು ದಾಖಲಿಸುವಾಗ ಆದ್ಯತಾ ಕ್ರಮಗಳನ್ನು ಅನುಸರಿಸಬೇಕು. ಈ ಕುರಿತ ಹೆಚ್ಚಿನ ಮಾಹಿತಿಯನ್ನು ಯುಜಿಸಿಇಟಿ-25 ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು. ಅಲ್ಲದೆ, ಕೆಇಎ ವಿಕಸನ ಯೂಟ್ಯೂಬ್ ಚಾನಲ್‌ನಲ್ಲಿ ಇರುವ ವೀಡಿಯೊ ಕೂಡ ನೋಡಬಹುದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ
ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮತ್ತು ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಹಾಗೂ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳ ಪ್ರಕಾರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಹೆಚ್‌ಡಿ ಕುಮಾರಸ್ವಾಮಿ
ಮಂಗಳೂರು: ವಿಟಿಯು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ (VTU Engineering Exam) ಸುಚಿತಾ ಮಡಿವಾಳ (Suchita Madiwala) ಅವರು ಡಾಟಾ ಸೈನ್ಸ್‌ನ ಪ್ರಥಮ ಬ್ಯಾಚ್‌ಗೆ ರಾಜ್ಯಕ್ಕೆ ಮೊದಲ ರ‍್ಯಾಂಕ್ ಜೊತೆಗೆ ಚಿನ್ನದ ಪದಕ ಪಡೆದಿದ್ದಾರೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024-25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು (Putturu) ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ (Vivekananda Engineering College) ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ 9.60 cgpa ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ್ ಜೊತೆಗೆ ಚಿನ್ನದ ಪದಕ ಪಡೆದಿರುತ್ತಾರೆ. ಇದನ್ನೂಓದಿ: 46 ರೂ. ಆಗಿದ್ರೂ 50 ರೂ. ಟಿಕೆಟ್ – ಭಾರೀ ಟೀಕೆ ಬೆನ್ನಲ್ಲೇ KSRTC ಆದೇಶ ರದ್ದು
ದಿ.ರಮೇಶ ಮಡಿವಾಳ ಹಾಗೂ ಮೋಹಿನಿಯವರ ಮಗಳಾದ ಇವರು ಗ್ರಾಮೀಣ ಪ್ರದೇಶದಿಂದ ಬಂದವರಾದರೂ ಶಿಕ್ಷಣದ ಜೊತೆಗೆ ಇತರ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಅಣ್ಣನ ಸಹಾಯ, ತಾಯಿಯ ಪ್ರೋತ್ಸಾಹದಿಂದ ಇಂತಹ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಆಡಳಿತ ಮಂಡಳಿಯ ಅಧ್ಯಕ್ಷರು ಸಂಚಾಲಕರು ನಿರ್ದೇಶಕರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹೇಶ್ ಪ್ರಸನ್ನ ಕೆ ಅವರ ಮುಂದಾಳತ್ವದಲ್ಲಿ ಡೇಟಾ ಸೈನ್ಸ್ ವಿಭಾಗದ ಮುಖ್ಯಸ್ಥೆ ಪ್ರೊ ರೂಪ ಜಿಕೆ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಇವರನ್ನು ಅಭಿನಂದಿಸಿದ್ದಾರೆ.
ಬೆಂಗಳೂರು: ಎಂಜಿನಿಯರಿಂಗ್ (Engineering) ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ ಡಿಸಿಇಟಿ-25 (DCET 25) ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜೂ.5 ರಿಂದ 8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
#DCET-25: ಅರ್ಜಿಗಳಲ್ಲಿನ ತಪ್ಪುಗಳನ್ಜು ಸರಿಪಡಿಸಿಕೊಳ್ಳಲು ಜೂ 5ರಿಂದ 8ರವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ನೀಡಲಾಗಿದೆ. ಅಭ್ಯರ್ಥಿಯ ಹೆಸರು, ತಂದೆ- ತಾಯಿ ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ನಂಬರ್ ಬದಲಾವಣೆಗೆ ಅವಕಾಶ ಇರುವುದಿಲ್ಲ. @CMofKarnataka@drmcsudhakar@KEA_karnatakapic.twitter.com/1D30ZdqwJr
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) June 5, 2025
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಎಂಜಿನಿಯರಿಂಗ್ (Engineering) ತಂಡವು ಸ್ವತಃ ಸಿದ್ಧಪಡಿಸಿದ ಎಐ ತಾಂತ್ರಿಕತೆಯ ಮೊಬೈಲ್ ಆಧರಿತ ಅಭ್ಯರ್ಥಿ ದೃಢೀಕರಣ (ಮೊಬೈಲ್-ಬೇಸ್ಡ್ ಕ್ಯಾಂಡಿಡೇಟ್ ಅಥೆಂಟಿಕೇಷನ್) ವ್ಯವಸ್ಥೆಯನ್ನು ಶನಿವಾರ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಮೊತ್ತಮೊದಲ ಬಾರಿಗೆ ಯಶಸ್ವಿಯಾಗಿ ಬಳಸಲಾಗಿದೆ. ಇದು, ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದನ್ನು ಸಂಪೂರ್ಣವಾಗಿ ತೊಡೆದು ಹಾಕಲಿದೆ.
ವಿಧಾನ ಪರಿಷತ್‌ನಲ್ಲಿ (Vidhana Parishad) ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹಾಗೂ ಇನ್ನಿತರ ಹುದ್ದೆಗಳಿಗೆ ನಾಲ್ಕು ದಿನಗಳ ಪರೀಕ್ಷೆಯು ಶನಿವಾರ ಆರಂಭವಾಗಿದ್ದು, ಇದರಲ್ಲಿ ಕೆಇಎ ಎಂಜಿನಿಯರಿಂಗ್ ತಂಡದವರು ಅಭಿವೃದ್ಧಿಪಡಿಸಿರುವ ಈ ತಾಂತ್ರಿಕತೆಯನ್ನು ಪ್ರಯೋಗಾರ್ಥವಾಗಿ ಬಳಸಲಾಯಿತು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶಿಸುವಾಗ ಮೊಬೈಲ್ ಆಪ್ ಬಳಸಿ ಅವರ ಮುಖದ ಚಿತ್ರವನ್ನು ಸೆರೆ ಹಿಡಿಯಲಾಗುತ್ತದೆ. ಇದು, ತಕ್ಷಣವೇ ಕೆಇಎ ಸರ್ವರ್‌ಗೆ ಆನ್‌ಲೈನ್ ಮೂಲಕ ಸಂಪರ್ಕಗೊಂಡು ಅಭ್ಯರ್ಥಿಗಳು ಅರ್ಜಿ ಹಾಕುವ ಸಂದರ್ಭದಲ್ಲಿ ಹಾಕಿದ್ದ ಭಾವಚಿತ್ರದೊಂದಿಗೆ ತಾಳೆ ನೋಡಿ, ಅಭ್ಯರ್ಥಿಯ ನೈಜತೆಯನ್ನು ತತ್ ಕ್ಷಣವೇ ದೃಢಪಡಿಸುತ್ತದೆ. ಇದರಿಂದ, ನಕಲಿ ಅಭ್ಯರ್ಥಿಗಳನ್ನು ಪರೀಕ್ಷಾ ಕೊಠಡಿ ಪ್ರವೇಶಿಸದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ 74 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 267 ಅಭ್ಯರ್ಥಿಗಳು ಪರೀಕ್ಷೆ ಬರೆದರು. ಈ ತಾಂತ್ರಿಕ ವ್ಯವಸ್ಥೆಯ ಮೊದಲ ದಿನದ ಪ್ರಯೋಗ ಯಶಸ್ವಿಯಾಗಿದ್ದು, ಇನ್ನು ಮುಂದೆ ಇತರ ಪರೀಕ್ಷೆಗಳಿಗೂ ಇದರ ಬಳಕೆಯನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ವೆಬ್‌ಸೈಟ್‌ನಲ್ಲಿ ಓಎಂಆರ್ ಶೀಟ್
ಇಂದು ನಡೆದ ವಿಧಾನ ಪರಿಷತ್ತಿನ ನೇಮಕಾತಿ ಪರೀಕ್ಷೆ ಮುಗಿದ ತಕ್ಷಣವೇ ಅಭ್ಯರ್ಥಿಗಳ ಓಎಂಆರ್ ಶೀಟ್‌ಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ಕೆಲಸವನ್ನೂ ಇದೇ ಮೊದಲು ಮಾಡಲಾಯಿತು. ಇದು ಪಾರದರ್ಶಕ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದ್ದು, ಯಾರು ಬೇಕಾದರೂ ಓಎಂಆರ್ ಶೀಟ್ ಗಳನ್ನು ನೋಡಬಹುದು. ಇದರಿಂದ ಅಕ್ರಮ/ಅನುಮಾನಗಳಿಗೆ ಅವಕಾಶವೇ ಇಲ್ಲದಂತಾಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಯುಜಿಸಿಇಟಿ ಎರಡನೇ ಮುಂದುವರಿದ ಸುತ್ತಿನ ಪ್ರವೇಶ ಪ್ರಕ್ರಿಯೆ ನಂತರ ಒಟ್ಟು 16,004 ಸೀಟುಗಳು ಭರ್ತಿಯಾಗದೆ ಉಳಿದಿದ್ದು ಇಷ್ಟೂ ಸೀಟುಗಳ ವಿವರಗಳನ್ನು (ಕಾಲೇಜು ಮತ್ತು ಕೋರ್ಸ್‌ವಾರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಸರ್ಕಾರ ಮತ್ತು ಕರ್ನಾಟಕ ಅನುದಾನ ರಹಿತ ಎಂಜಿನಿಯರಿಂಗ್ (Engineering) ಕಾಲೇಜುಗಳ ಸಂಘದ ನಡುವಿನ ಒಪ್ಪಂದದ ಪ್ರಕಾರ ಪ್ರವೇಶ ಪ್ರಕ್ರಿಯೆ ನಂತರ ಬಾಕಿ ಉಳಿದ ಸೀಟುಗಳನ್ನು ಕಾಲೇಜುಗಳಿಗೆ ಬಿಟ್ಟು ಕೊಡಬೇಕು. ಆ ಪ್ರಕಾರ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. ಹಾಗೆಯೇ ಸರ್ಕಾರಕ್ಕೂ ಈ ಬಗ್ಗೆ ಪತ್ರದ ಮೂಲಕ ತಿಳಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಎಂಜಿನಿಯರಿಂಗ್‌ನ ವಿವಿಧ ವಿಭಾಗಗಳಲ್ಲಿ 13,089 ಸೀಟು ಬಾಕಿ ಉಳಿದಿವೆ. ಆರ್ಕಿಟೆಕ್ಚರ್ (Architecture) ಕೋರ್ಸ್‌ನಲ್ಲಿ 569 ಸೀಟು ಭರ್ತಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಒಟ್ಟು 2,208 ಮಂದಿಗೆ ವಿವಿಧ ಕಾಲೇಜುಗಳಲ್ಲಿ ಸೀಟು ಹಂಚಿಕೆಯಾಗಿದ್ದರೂ ಶುಲ್ಕ ಪಾವತಿಸಿಲ್ಲ. 95 ಮಂದಿ ಶುಲ್ಕ ಪಾವತಿಸಿದ್ದರೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ಹೋಗಿಲ್ಲ. 45 ಮಂದಿ ಅಲ್ಪಸ್ವಲ್ಪ ಶುಲ್ಕ ಪಾವತಿಸಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಇಂದು (ಮೇ 12) ದೇಶಾದ್ಯಂತ ಕಾಮೆಡ್-ಕೆ (COMEDK) ಪರೀಕ್ಷೆ ನಡೆಯಲಿದೆ. ಬೆಂಗಳೂರು (Bengaluru) ಸೇರಿ ದೇಶದ 182 ನಗರಗಳ 264 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ.
ಒಂದೇ ದಿನ 3 ಅವಧಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 1.18 ಲಕ್ಷ ವಿದ್ಯಾರ್ಥಿಗಳು (Students) ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ಬೆಳಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ 4 ಗಂಟೆ ಹಾಗೂ ಸಂಜೆ 5.30ರಿಂದ 8.30ರ ವರೆಗೆ ಮೂರು ಸೆಷನ್‌ಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಕಾಮೆಡ್-ಕೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕೋಟೆನಾಡಲ್ಲಿ ಧಾರಾಕಾರ ಮಳೆ – 10 ಮನೆಗಳಿಗೆ ಹಾನಿ, ಐವರು ಆಸ್ಪತ್ರೆಗೆ ದಾಖಲು
ಚಿಕ್ಕಬಳ್ಳಾಪುರ: ಪಬ್ಲಿಕ್ ಟಿವಿಯ ಬೆಳಕು (PBLiC TV Belaku) ಕಾರ್ಯಕ್ರಮದ ಮತ್ತೊಂದು ಇಂಪ್ಯಾಕ್ಟ್ ಆಗಿದೆ. ಬಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಭವ್ಯ ಅವರಿಗೆ ಶಿಡ್ಲಘಟ್ಟ ಶಾಸಕ ರವಿಕುಮಾರ್ ನೆರವು ನೀಡಿದ್ದಾರೆ.
ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ವರಸಂದ್ರ ಗ್ರಾಮದ ಬಡ ಕುಟುಂಬದ ಹೆಣ್ಣು ಮಗಳು ಭವ್ಯಗೆ ಬೆಂಗಳೂರಿನ ಪ್ರತಿಷ್ಠಿತ ನ್ಯೂ ಹಾರಿಜನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ 2ನೇ ವರ್ಷದ ಶುಲ್ಕ ಕಟ್ಟಲು ಕಷ್ಟವಾಗಿತ್ತು. ಅಪ್ಪ-ಅಮ್ಮನ ಬಳಿ ಹಣ ಕೇಳಿದರೆ ಓದೋದೇ ಸಾಕು ಮನೆಗೆ ಬಂದುಬಿಡು ಮದುವೆ ಮಾಡ್ತೀವಿ ಅಂದಿದ್ದರು. ದಿಕ್ಕು ತೋಚದ ಭವ್ಯಾ ಸೀದಾ ಪಬ್ಲಿಕ್ ಟಿವಿ ಕಚೇರಿಗೆ ಬಂದು ಸಂಸ್ಥೆಯ ಮುಖ್ಯಸ್ಥರಾದ ಹೆಚ್. ಆರ್ ರಂಗನಾಥ್ (HR Ranganath) ಅವರಿಗೆ ಪತ್ರ ಬರೆದಿದ್ದಳು.
ನವೆಂಬರ್ 17ರಂದು ಪ್ರಸಾರಗೊಂಡ ಬೆಳಕು ಕಾರ್ಯಕ್ರಮವನ್ನು ವೀಕ್ಷಿಸಿದ ಶಿಡ್ಲಘಟ್ಟ ಶಾಸಕ ಮೇಲೂರು ರವಿಕುಮಾರ್ ಅವರು ವಿದ್ಯಾರ್ಥಿನಿಯ ಎಂಜಿನಿಯರಿಂಗ್ ಓದುವ ಸಂಪೂರ್ಣ ವೆಚ್ಚ ಭರಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಅಲ್ಲದೆ 2ನೇ ವರ್ಷದ ಕಾಲೇಜು ಶುಲ್ಕ 1 ಲಕ್ಷದ 27 ಸಾವಿರ ರೂಪಾಯಿಯ ಚೆಕ್ ನೀಡಿದ್ದಾರೆ. ಶಾಸಕರ ನೆರವು ಸಿಕ್ಕಿದ್ದರಿಂದ ಪಬ್ಲಿಕ್ ಟಿವಿಗೆ ವಿದ್ಯಾರ್ಥಿನಿ ಭವ್ಯಾ ಹಾಗೂ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಲಭ್ಯವಿರುವ ಎಂಜಿನಿಯರಿಂಗ್ ಸೀಟುಗಳ ಜೊತೆಗೆ 2ನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ನಂತರ ರದ್ದುಪಡಿಸಿಕೊಂಡಿರುವ ಪ್ರವೇಶ ಪಡೆಯದಿರುವ ಕಾರಣಕ್ಕೆ ಖಾಲಿ ಸೀಟುಗಳು ಎಂದು ಗುರುತಿಸಲಾಗಿರುವ ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಸೀಟುಗಳ ಹಂಚಿಕೆ ಅಕ್ಟೋಬರ್ 30ರಂದು ನಡೆಯಲಿದೆ. ಈ ಕುರಿತು ಮಾಧ್ಯಮ ಹೇಳಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಬಿಡುಗಡೆ ಮಾಡಿದೆ.
ಅಕ್ಟೋಬರ್ 27ರ ಮಧ್ಯಾಹ್ನ 1:00 ರಿಂದ ಇಚ್ಚೆ ಆಯ್ಕೆಗಳನ್ನು ದಾಖಲಿಸಲು ಆನ್‌ಲೈನ್ ಪೋರ್ಟಲ್ ಸಕ್ರಿಯಗೊಳಿಸಲಾಗುವುದು. 2023ನೇ ಸಾಲಿನಲ್ಲಿ ಯಾವುದೇ ಕೋರ್ಸಿಗೆ ಸೀಟು ಹಂಚಿಕೆ ಮಾಡಿಕೊಳ್ಳದಿರುವವರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಇಚ್ಚೆ ಆಯ್ಕೆಗಳನ್ನು ದಾಖಲಿಸಲು ಅಕ್ಟೋಬರ್ 29ರ ಬೆಳಗ್ಗೆ 10 ರವರೆಗೆ ಕಾಲಾವಕಾಶವಿರುತ್ತದೆ. ಇಲ್ಲಿಯವರೆಗೆ 2023ನೇ ಸಾಲಿನಲ್ಲಿ ಯಾವುದೇ ಸೀಟನ್ನು ಪ್ರಾಧಿಕಾರದ ಮೂಲಕ ಹಂಚಿಕೆ ಮಾಡಿಕೊಳ್ಳದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಪೋರ್ಟಲ್‌ನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಹಾಗೂ ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಸೀಟುಗಳ ಲಭ್ಯತೆಯನ್ನು ಗಮನಿಸಿ, ನಂತರ ತಮ್ಮ ಇಚ್ಛೆ ಆಯ್ಕೆಗಳನ್ನು ಆದ್ಯತೆಯ ಮೇರೆಗೆ ದಾಖಲಿಸಬಹುದು. ಇದನ್ನೂ ಓದಿ: ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾ
ವಿಶೇಷ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಅಕ್ಟೋಬರ್ 29ರ ಸಂಜೆ 6 ಗಂಟೆಯ ನಂತರ ಪ್ರಕಟಿಸಲಾಗುವುದು. ವಿಶೇಷ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಅಕ್ಟೋಬರ್ 30ರಂದು ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಿ, ಪ್ರವೇಶ ಆದೇಶ ಡೌನ್‌ಲೋಡಿ ಮಾಡಿಕೊಂಡು ಅದೇ ದಿನವೇ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು (Deemed Admission). ಉಳಿದಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಸೀಟುಗಳ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಎಂಜಿನಿಯರಿಂಗ್ ಕಾಲೇಜುಗಳನ್ನು ನೇರವಾಗಿ ಸಂಪರ್ಕಿಸಿ ಸರ್ಕಾರಿ ಕೋಟಾ ಶುಲ್ಕ ಪಾವತಿಸಿ ಎಂಜಿನಿಯರಿಂಗ್ ಸೀಟನ್ನು ಅಕ್ಟೋಬರ್ 30ರ ಸಂಜೆ 5:30 ರೊಳಗೆ ಪಡೆಯಬಹುದಾಗಿದೆ. ಇದನ್ನೂ ಓದಿ: 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಇದುವರೆಗೂ ಪ್ರತ್ಯಕವಾಗಿಯೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸುತ್ತಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಸಕ್ತ ಸಾಲಿನಿಂದ (2023-24) ಎಲ್ಲವನ್ನೂ ಒಟ್ಟಿಗೆ ನಡೆಸಲು ತೀರ್ಮಾನಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅನಗತ್ಯ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಈ ಸುಧಾರಣಾ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ, ಕೃಷಿ, ನರ್ಸಿಂಗ್, ಆರ್ಕಿಟೆಕ್ಟ್ ಹಾಗೂ ಫಾರ್ಮಸಿ ಕೋರ್ಸ್‌ಗಳ ಪ್ರವೇಶಕ್ಕೆ ಸಂಯೋಜಿತ ಸೀಟು ಹಂಚಿಕೆ (Combined Seat Allotment) ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಹೀಗೆ ಮಾಡುತ್ತಿರುವುದು ಇದೇ ಮೊದಲು ಎಂದು ರಮ್ಯಾ ವಿವರಿಸಿದ್ದಾರೆ. ಇದನ್ನೂ ಓದಿ: ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ
ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯಿಂದಾಗಿ ಸಾಕಷ್ಟು ಅನಾನುಕೂಲಗಳು ಇದ್ದವು. ಒಬ್ಬ ಅಭ್ಯರ್ಥಿ ಒಮ್ಮೆಗೆ ಒಂದಕ್ಕಿಂತ ಹೆಚ್ಚು ಕೋರ್ಸ್‌ಗಳಲ್ಲಿ ಸೀಟು ಪಡೆದು, ನಂತರ ಆತ ಯಾವುದಾದರು ಒಂದಕ್ಕೆ ಪ್ರವೇಶ ಪಡೆಯುವವರೆಗೂ ಉಳಿದ ಕೋರ್ಸ್‌ಗಳಲ್ಲಿನ ಸೀಟು ಬೇರೆಯ ಅಭ್ಯರ್ಥಿಗಳಿಗೆ ಲಭ್ಯವಾಗುತ್ತಿರಲಿಲ್ಲ. ಇದರಿಂದ ಪ್ರತಿಭಾವಂತರಿಗೆ ಆಯ್ಕೆ ಸುತ್ತಿನಲ್ಲಿ ಸೀಟು ಕೈತಪ್ಪುತ್ತಿತ್ತು ಎಂದು ನಿರ್ದೇಶಕಿ ರಮ್ಯಾ ಹೇಳಿದ್ದಾರೆ. ಅಲ್ಲದೇ ಅಭ್ಯರ್ಥಿಗಳು ಯಾವುದೇ ಕೋರ್ಸ್‌ಗಳಿಗೆ ಪ್ರವೇಶ ಬಯಸಿದ್ದಲ್ಲಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಶುಲ್ಕ ಮತ್ತು ಲಭ್ಯವಿರುವ ಸೀಟುಗಳನ್ನು ಪರಿಶೀಲಿಸಿ, ನಂತರ ತಮ್ಮ ಆದ್ಯತೆಯನುಸಾರ ಸೀಟುಗಳ ಆಯ್ಕೆಯನ್ನು ನಮೂದಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಆ.10 ಡೆಡ್‌ಲೈನ್ – ಬಂದ್ ಹಿಂಪಡೆದ ಖಾಸಗಿ ಸಾರಿಗೆ ಸಂಘಟನೆಗಳು
ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?
ಅಭ್ಯರ್ಥಿಯು ಆಯ್ಕೆಯನ್ನು ನಮೂದಿಸುವಾಗ ತನ್ನ ಮೊದಲ ಆದ್ಯತೆಯ ಕೋರ್ಸ್‌ಗಳನ್ನು ಮೊದಲು ದಾಖಲಿಸಬೇಕು. ಒಂದು ವೇಳೆ ಮೊದಲ ಆದ್ಯತೆಯ ಕೋರ್ಸ್ ಸಿಗದಿದ್ದರೆ ಅದರ ನಂತರದ ಆಯ್ಕೆಯ ಕೋರ್ಸ್ ಯಾವುದು ಎನ್ನುವುದನ್ನು ಎರಡನೇ ಆದ್ಯತೆಯಾಗಿ ದಾಖಲಿಸಬೇಕು. ಉದಾಹರಣೆಗೆ ವೈದ್ಯಕೀಯ (Medical) ಕೋರ್ಸ್ ಬೇಕೆಂದು ಮೊದಲ ಆದ್ಯತೆ ನೀಡುವ ಅಭ್ಯರ್ಥಿ, ಒಂದು ವೇಳೆ ಅದು ಸಿಗದಿದ್ದಾಗ ತನ್ನ ಆದ್ಯತೆ ಎಂಜಿನಿಯರಿಂಗ್ (Engineering) ಎನ್ನುವುದನ್ನು ದಾಖಲಿಸಬೇಕು. ಆಗ ವೈದ್ಯಕೀಯ ಸೀಟು ಸಿಗದಿದ್ದಾಗ ನಂತರದ ಆದ್ಯತೆಯಾದ ಎಂಜಿನಿಯರಿಂಗ್‌ನಲ್ಲಿ ಸೀಟು ಹಂಚಿಕೆ ಆಗುತ್ತದೆ. ಇದೇ ರೀತಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಎಷ್ಟು ಕೋರ್ಸ್‌ಗಳು ಇವೆಯೋ ಅಷ್ಟೂ ಕೋರ್ಸ್‌ಗಳಿಗೆ ಆದ್ಯತೆಯನುಸಾರ ತನ್ನ ಆಯ್ಕೆಯನ್ನು ನಮೂದಿಸುವ ಮೂಲಕ ಸೀಟು ಪಡೆಯಬಹುದು.
ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಆಯ್ಕೆಯ ನಮೂದಿನ ಆಧಾರದ ಮೇಲೆ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯುತ್ತದೆ. ಕೆಲ ಅಭ್ಯರ್ಥಿಗಳಿಗೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಎರಡೂ ಕೋರ್ಸ್‌ಗಳಲ್ಲಿ ಸೀಟು ದೊರೆಯುವ ಸಾಧ್ಯತೆ ಇರುತ್ತದೆ. ಅಂತಹವರು ಚಾಯ್ಸ್ ಎಂಟ್ರಿ ಸ್ಕ್ರೀನ್‌ನಲ್ಲಿ ವೈದ್ಯಕೀಯ ಅಥವಾ ಎಂಜಿನಿಯರಿಂಗ್ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಚಲನ್ ಮೂಲಕ ಶುಲ್ಕ ಪಾವತಿಸಿ ಅಡ್ಮಿಷನ್ ಆರ್ಡರ್ ಅನ್ನು ಆನ್‌ಲೈನ್ ಮೂಲಕ ಪಡೆದು ಸಂಬಂಧಪಟ್ಟ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ಬಳಿಕ ಅದನ್ನು ಕಾಲೇಜಿನ ಪೋರ್ಟಲ್‌ನಲ್ಲಿ ತಪ್ಪದೇ ಅಪ್‌ಡೇಟ್ ಮಾಡಿಸಬೇಕು. ಒಂದು ವೇಳೆ ಹಾಗೆ ಮಾಡದಿದ್ದರೆ ಸದರಿ ಸೀಟು ಖಾಲಿ ಇದೆ ಎಂದು ಭಾವಿಸಿ ಅದನ್ನು ಮುಂದಿನ ಸುತ್ತಿನ ಹಂಚಿಕೆಗೂ ಬಳಸಿಕೊಳ್ಳುವ ಸಾಧ್ಯತೆಯಿರುತ್ತದೆ.
ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಅಭ್ಯರ್ಥಿ ನಮೂದಿಸಿರುವ ಆಯ್ಕೆಯ ಪ್ರಕಾರ ಯಾವುದಾದರೊಂದು ಕೋರ್ಸ್‌ನಲ್ಲಿ (ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ ಇತ್ಯಾದಿ) ಸೀಟು ಪಡೆಯಬೇಕು. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ಕಡ್ಡಾಯವಾಗಿ ತಮಗೆ ಹಂಚಿಕೆಯಾದ ಸೀಟಿಗೆ ಶುಲ್ಕ ಪಾವತಿಸಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಸದರಿ ಸೀಟುಗಳನ್ನು ದಂಡದ ಮೊತ್ತ ಪಾವತಿಸಿ ರದ್ದುಪಡಿಸಬೇಕು. ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಲು ಅರ್ಹತೆ ಇರುವುದಿಲ್ಲ. ಆದರೆ ಎರಡನೇ ಸುತ್ತಿನಲ್ಲಿ ದಂತ ವೈದ್ಯಕೀಯ ಸೀಟು ದೊರೆತ ಅಭ್ಯರ್ಥಿಗಳು ಸೀಟನ್ನು ರದ್ದುಪಡಿಸದೇ ವೈದ್ಯಕೀಯ ಕೋರ್ಸ್‌ನ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ಎಂಜಿನಿಯರಿಂಗ್ ಸೀಟುಗಳಿಗೆ ಮೂರನೇ ಸುತ್ತಿನವರೆಗೂ ಭಾಗವಹಿಸಬಹುದು. ಆದರೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಮೂರನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಚಾಯ್ಸ್-3 ಕೊಟ್ಟಿರುವ ಅಭ್ಯರ್ಥಿಗಳು ಹಾಗೂ ಯಾವುದೇ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳ ಮೊದಲೆರಡು ಸುತ್ತಿನಲ್ಲಿ ನಮೂದಿಸಿದ್ದ ಆಯ್ಕೆಗಳನ್ನು ಡಿಲೀಟ್ ಮಾಡಲಾಗಿರುತ್ತದೆ. ಅಭ್ಯರ್ಥಿಯು ಮೂರನೇ ಸುತ್ತಿಗೆ ಹೊಸದಾಗಿ ಆಯ್ಕೆಯನ್ನು ನಮೂದಿಸಬೇಕು. ಮೂರನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟನ್ನು ರದ್ದುಪಡಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳು ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಎಚ್ಚರಿಕೆಯಿಂದಲೇ ಮೂರನೇ ಸುತ್ತಿನ ಆಯ್ಕೆಯನ್ನು ನಮೂದಿಸಬೇಕು.
ಮಾಪ್‌ಅಪ್ ಸುತ್ತು:
ಎರಡನೇ ಸುತ್ತಿನಲ್ಲಿ ಎಂಜಿನಿಯರಿಂಗ್, ನರ್ಸಿಂಗ್, ಆರ್ಕಿಟೆಕ್ಚರ್, ಪಶುವೈದ್ಯಕೀಯ, ಕೃಷಿ ಸೀಟು ದೊರೆತ ಅಭ್ಯರ್ಥಿಗಳು ದಂಡ ಪಾವತಿಸಿ, ತಮ್ಮ ಸೀಟನ್ನು ರದ್ದುಪಡಿಸಿದ ನಂತರವೇ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ನ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಬಹದು. ಅದೇ ರೀತಿ ಎರಡನೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳು ಹಂಚಿಕೆಯಾದ ಅಭ್ಯರ್ಥಿಗಳು ಸದರಿ ಸೀಟುಗಳನ್ನು ದಂಡ ಪಾವತಿಸಿ ರದ್ದುಪಡಿಸಿದ ನಂತರ ಎಂಜಿನಿಯರಿಂಗ್ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಬಹುದು. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ – ಸೈಬರ್ ಕೇಂದ್ರಗಳಿಗೆ ಬೀಗ ಜಡಿದ ಅಧಿಕಾರಿಗಳು
ಬೆಂಗಳೂರು: ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ಎಂದು ಡೆತ್‍ನೋಟ್ ಬರೆದಿಟ್ಟು ಮೆಕ್ಯಾನಿಕಲ್ ಎಂಜಿನಿಯರಿಂಗ್ (Mechanical Engineering Student) ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ತೇಜಸ್ (22) ಆತ್ಮಹತ್ಯೆಗೆ ಶರಣಾದವ. ಯಲಹಂಕದ (Yalahanka) ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದು, ಕಾಲೇಜಿಗೆ ಟಾಪರ್ ಆಗಿದ್ದ.
ತೇಜಸ್ ತನ್ನ ಸ್ನೇಹಿತ ಮಹೇಶ್‍ಗಾಗಿ ಚೈನಿಸ್ ಲೋನ್ ಆಪ್ (Chinees Loan App) ಮೂಲಕ ಸಾಲ ಪಡೆದಿದ್ದನು. ಸ್ನೇಹಿತ ಮಹೇಶ್ ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದನು. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ನೀಡಿದ್ದ ಲೋನ್ ಕಂಪನಿಗಳು ವಿಪರೀತ ಟಾರ್ಚರ್ ಕೊಡುತ್ತಿದ್ದವು. ಈ ಟಾರ್ಚರ್ ತಾಳಲಾರದೆ ಮಂಗಳವಾರ ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಡಬಲ್ ಮರ್ಡರ್ ಬಳಿಕ ಹೋಟೆಲ್ ರೂಂನಲ್ಲಿ ತಣ್ಣಗೆ ಎಣ್ಣೆ ಪಾರ್ಟಿ – ಫೆಲಿಕ್ಸ್ ಸೇರಿ ಮೂವರು ಲಾಕ್
ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಹೆಚ್‍ಎಂಟಿ ಕ್ವಾಟ್ರಸ್ ನಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.
ಡೆತ್‍ನೋಟ್‍ನಲ್ಲೇನಿದೆ..?: ಅಮ್ಮ ಅಪ್ಪ ನನ್ನನ್ನು ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ. ನಾನು ಮಾಡಿರುವ ಸಾಲ ತೀರಿಸಲು ಆಗೋದಿಲ್ಲ ಅದಕ್ಕಾಗಿ ಇದು ನನ್ನ ಕೊನೆಯ ತೀರ್ಮಾನ. ಥ್ಯಾಂಕ್ಸ್ ಗುಡ್ ಬಾಯ್ ಎಂದು ತೇಜಸ್ ಬರೆದುಕೊಂಡಿದ್ದಾನೆ.