Tag: engineering students

  • ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    – ಕಾರು ಚಾಲಕ ಗಂಭೀರ

    ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು (Engineering Students) ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.

    ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ (Lorry) ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹಿಂಗೆ ಮಾಡಿ ನನ್‌ ತಲೆಗೆ ತಂದಿದ್ದಾರೆ: ದರ್ಶನ್‌ ಅಳಲು

    ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ

  • ಕಾರು ಅಪಘಾತ- 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ಕಾರು ಅಪಘಾತ- 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ದಿಸ್ಪುರ್: ಸ್ಕಾರ್ಪಿಯೋ ಕಾರ್ (Scorpio SUV) ಹಾಗೂ ಬೊಲೆರೊ ಟ್ರಕ್ (Truck) ನಡುವೆ ನಡೆದ ಅಪಘಾತದಲ್ಲಿ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ (Guwahati) ಸೋಮವಾರ ನಡೆದಿದೆ.

    ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಮಿತಿ ಮೀರಿದ ವೇಗದ ಪರಿಣಾಮದಿಂದಾಗಿ ಈ ಅವಘಡ ಸಂಭವಿಸಿದೆ. ಇದರಿಂದಾಗಿ ಸ್ಥಳದಲ್ಲಿಯೇ 7 ಜನ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ

    ಕಾರಿನಲ್ಲಿ 10 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರೆಲ್ಲ ಅಸ್ಸಾಂನ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದರು. ಅವರೆಲ್ಲರು ಹಾಸ್ಟೆಲ್‍ನಲ್ಲಿದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ ಎಂದು ಅವರು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ!

  • ಸ್ನಾನಕ್ಕೆಂದು ಹೋದ 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ

    ಸ್ನಾನಕ್ಕೆಂದು ಹೋದ 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ

    ಹೈದರಾಬಾದ್: ಅನಕಾಪಲ್ಲಿಯ DIET ಎಂಜಿನಿಯರಿಂಗ್ ಕಾಲೇಜಿನ ಏಳು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆಂಧ್ರಪ್ರದೇಶದ ಪುಡಿಮಡಕ ಬೀಚ್‍ನಲ್ಲಿ ನಾಪತ್ತೆಯಾಗಿದ್ದಾರೆ.

    ಶುಕ್ರವಾರ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿದ್ದು, ಅವರಲ್ಲಿ ಪವನ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದು, ಮತ್ತೋರ್ವ ತೇಜ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆ: ಮಾಧುಸ್ವಾಮಿ

    ಸ್ನಾನ ಮಾಡಲೆಂದು ಏಳು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಜೋರಾಗಿ ಬಂದ ಅಲೆ ಅವರನ್ನು ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೀಗ ಶನಿವಾರ ರಕ್ಷಣಾ ಅಧಿಕಾರಿಗಳು ಮತ್ತಿಬ್ಬರು ವಿದ್ಯಾರ್ಥಿಗಳ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮೃತರನ್ನು ಜಸ್ವಂತ್ ಕುಮಾರ್ ಮತ್ತು ಪೆಂಟಕೋಟ ಗಣೇಶ್ ಎಂದು ಗುರುತಿಸಲಾಗಿದೆ.

    ಉಳಿದ ಮೂವರು ವಿದ್ಯಾರ್ಥಿಗಳಾದ ಕಂಪಾರ ಜಗದೀಶ್, ಬಯ್ಯಪುನೇನಿ ಸತೀಶ್ ಕುಮಾರ್ ಮತ್ತು ಪುಡಿ ರಾಮಚಂದು ಅವರನ್ನು ಹುಡುಕಲು ಹೆಲಿಕಾಪ್ಟರ್ ಮತ್ತು ಕೋಸ್ಟ್ ಗಾರ್ಡ್ ಬೋಟ್‍ಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

    ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇನ್ಸ್ ಪೆಕ್ಟರ್ ಮಗ್ಳ ಮೇಲೆ ಗ್ಯಾಂಗ್‍ರೇಪ್

    ಇನ್ಸ್ ಪೆಕ್ಟರ್ ಮಗ್ಳ ಮೇಲೆ ಗ್ಯಾಂಗ್‍ರೇಪ್

    – ಸಂತ್ರಸ್ತೆಯನ್ನು ಪೊಲೀಸ್ ಠಾಣೆ ಮುಂದೆ ಎಸೆದ ಎಂಜಿನಿಯರಿಂಗ್ ವಿದ್ಯಾರ್ಥಿಗಳು

    ಲಕ್ನೋ: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು 11ನೇ ತರಗತಿಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಪೊಲೀಸ್ ಠಾಣೆಯ ಮುಂದೆಯೇ ಸಂತ್ರಸ್ತೆಯನ್ನು ಎಸೆದು ಹೋಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ್ ನಲ್ಲಿ ನಡೆದಿದೆ.

    ಆರೋಪಿಗಳು ಕಾನ್ಪುರದ ಬಾಬುಪುರ್ವಾ ಪೊಲೀಸ್ ಠಾಣೆಯ ಬಳಿ ಸಂತ್ರಸ್ತೆಯನ್ನು ಎಸೆದು ಎಸ್ಕೇಪ್ ಆಗಿದ್ದಾರೆ. ಸಂತ್ರಸ್ತೆಯ ತಂದೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದು, ಆರೋಪಿಗಳನ್ನು ಅನುರಾಗ್ ಯಾದವ್ ಮತ್ತು ಆತನ ಸ್ನೇಹಿತರಾದ ಜಾಕಿ, ಶುಭಮ್ ಮತ್ತು ಅಭಿಷೇಕ್ ಎಂದು ಗುರುತಿಸಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.

    ನಾಲ್ವರು ಆರೋಪಿಗಳು ಬೇರೆ ಬೇರೆ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ನಮ್ಮ ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಸಂತ್ರಸ್ತೆ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಗುರುತಿಸಿದ್ದು, ಆತ ಮಂಗಳವಾರ ಸಂಜೆ ಕಕಡಿಯೋ ಪಟ್ಟಣದಲ್ಲಿರುವ ತನ್ನ ಫ್ಲಾಟ್‍ ಗೆ ಕರೆದುಕೊಂಡು ಹೋಗಿ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಎಸ್‍ಪಿ ಸಂಜೀವ್ ಹೇಳಿದ್ದಾರೆ.

    ಆರೋಪಿಗಳು ಅತ್ಯಾಚಾರ ಮಾಡಿದ ಬಳಿಕ ಕಾರಿನಲ್ಲಿ ಕರೆದುಕೊಂಡು ಬಂದು ಬಾಬುಪುರ್ವಾ ಪೊಲೀಸ್ ಠಾಣೆಯ ಮುಂದೆಯೇ ಎಸೆದು ಹೋಗಿದ್ದರು. ನಂತರ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸಂತ್ರಸ್ತೆಗೆ ಪ್ರಜ್ಞೆ ಬಂದಾಗ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾಳೆ.

    ಸದ್ಯಕ್ಕೆ ನಾವು ವಿಚಾರಣೆಗಾಗಿ ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ವಿಚಾರಣೆ ಮುಗಿದ ಬಳಿಕ ಅವರನ್ನು ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ಅನಂತ್ ಡಿಯೋ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv