ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನ ಫೈನಲ್ (WTC Finals) ಪಂದ್ಯಗಳನ್ನು 2031ರ ವರೆಗೆ ಇಂಗ್ಲೆಂಡ್‌ನಲ್ಲೇ ನಡೆಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ನಿರ್ಧರಿಸಿದೆ. ಈ ಕುರಿತು ಐಸಿಸಿ ಭಾನುವಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಹೌದು. ಸಿಂಗಾಪುರದಲ್ಲಿ ನಡೆದ ಮಹತ್ವದ ಸಭೆಯ ನಂತರ ಐಸಿಸಿ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮುಂದಿನ ಮೂರು ಆವೃತ್ತಿಗಳ ಫೈನಲ್‌ಗಳನ್ನು ಇಂಗ್ಲೆಂಡ್‌ನಲ್ಲೇ (England) ನಡೆಸಲು ತೀರ್ಮಾನಿಸಿದ್ದು, ಅನುಮೋದನೆಯನ್ನೂ ನೀಡಲಾಗಿದೆ. ಕಳೆದ ಮೂರು ಆವೃತ್ತಿಯ WTC ಫೈನಲ್ ಪಂದ್ಯಗಳು ಇಂಗ್ಲೆಂಡ್‌ನಲ್ಲೇ ನಡೆದಿದೆ ಅನ್ನೋದು ವಿಶೇಷ.
ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (England Cricket Board)ಯೇ ಮೊದಲ ಆವೃತ್ತಿಯಿಂದಲೂ WTC ಫೈನಲ್ ಪಂದ್ಯಗಳಿಗೆ ಆತಿಥ್ಯ ವಹಿಸುತ್ತಿದೆ. ಈಗ ಮುಂದೆ 2027, 2029, 2031ರ ಆವೃತ್ತಿಗಳೂ ಇಂಗ್ಲೆಂಡ್‌ನಲ್ಲೇ ನಡೆಸಲು ಅನುಮತಿ ಪಡೆದಿದೆ. ಇಂಗ್ಲೆಂಡ್‌ನಲ್ಲಿ ವ್ಯವಸ್ಥೆಗಳ ಅನುಕೂಲ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಐಸಿಸಿ ಹೇಳಿದೆ. ಆದ್ರೆ ಇನ್ನೂ ಸ್ಥಳಗಳನ್ನ ನಿಗದಿಪಡಿಸಿಲ್ಲ.
2021ರಲ್ಲಿ ಚೊಚ್ಚಲ ಆವೃತ್ತಿಯ ಫೈನಲ್ ಪಂದ್ಯವನ್ನು ಇಂಗ್ಲೆಂಡ್‌ನ ಸೌತಾಂಪ್ಟನ್, 2023ರಲ್ಲಿ ದಿ ಓವಲ್ ಹಾಗೂ ಪ್ರಸಕ್ತ ವರ್ಷ ಲಾರ್ಡ್ಸ್ ನಲ್ಲಿ WTC ಫೈನಲ್ ಪಂದ್ಯ ನಡೆದಿತ್ತು. ಮೊದಲೆರಡು ಆವೃತ್ತಿಗಳಲ್ಲಿ ಕ್ರಮವಾಗಿ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಚಾಂಪಿಯನ್ ಆಗಿದ್ದರೆ, ಭಾರತ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. 3ನೇ ಆವೃತ್ತಿಯಲ್ಲಿ ಭಾರತ ನಾಕೌಟ್‌ನಿಂದ ಹೊರಗುಳಿದ ಕಾರಣ ದಕ್ಷಿಣ ಆಫ್ರಿಕಾ ಹಾಗೂ ಆಸೀಸ್ ನಡುವೆ ಫೈನಲ್ ಪಂದ್ಯ ನಡೆದಿತ್ತು. ಲಾರ್ಡ್ ಅಂಗಳದಲ್ಲಿ ಚಾಂಪಿಯನ್ ಆದ ದಕ್ಷಿಣ ಆಫ್ರಿಕಾ ಚಾಂಪಿಯನ್ ಆಗಿ ಚೋಕರ್ಸ್ ಹಣೆಪಟ್ಟಿಯನ್ನೂ ಕಳಚಿತು.
ಲಂಡನ್: ಇತ್ತೀಚಿನ ಕ್ರಿಕೆಟ್ ಟೂರ್ನಿಗಳಲ್ಲಿ ಅಂಪೈರ್ ತೆಗೆದುಕೊಳ್ಳುವ ನಿರ್ಧಾರಗಳು ಕ್ರಿಕೆಟ್ ಲೋಕದಲ್ಲಿ ಭಾರೀ ವಿವಾದಗಳನ್ನ ಸೃಷ್ಟಿಸುತ್ತಿವೆ. ಆದ್ರೆ ಇಂಗ್ಲೆಂಡ್-ಆಸೀಸ್ ನಡುವಿನ ಆಶಸ್ (Ashes 2023) ಟೂರ್ನಿಯ 2ನೇ ಟೆಸ್ಟ್ ಪಂದ್ಯದಲ್ಲಿ ವಿವಾದಕ್ಕೀಡಾಗುತ್ತಿದ್ದ ಇಂಗ್ಲೆಂಡ್ ಬ್ಯಾಟ್ಸ್‌ಮ್ಯಾನ್ ಬೆನ್ ಡಕೆಟ್ (Ben Duckett) ಅವರ ಕ್ಯಾಚ್ 3ನೇ ಅಂಪೈರ್‌ನ ಸಮಯ ಪ್ರಜ್ಞೆಯಿಂದ ತಪ್ಪಿದೆ.
ಹೌದು. ಆಶಸ್ ಟೂರ್ನಿಯಲ್ಲಿ 2ನೇ ಟೆಸ್ಟ್‌ನ 4ನೇ ದಿನದಾಟದಲ್ಲಿ ಆಸ್ಟ್ರೇಲಿಯಾ (Australia) ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಬೌಲಿಂಗ್‌ನಲ್ಲಿ ಬೆನ್ ಡಕೆಟ್ ಅವರು ಬಾರಿಸಿದ ಹೊಡೆತ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ಆಗಿತ್ತು. ವೇಗಿ ಮಿಚೆಲ್ ಸ್ಟಾರ್ಕ್ ಕ್ಯಾಚ್ ಹಿಡಿಯುತ್ತಿದ್ದಂತೆ ಇಡೀ ತಂಡ ಕುಣಿದು ಕುಪ್ಪಳಿಸಿತ್ತು. ಇದರಿಂದ ಬಾಡಿದ ಮುಖಹೊತ್ತು ಪೆವಿಲಿಯನ್‌ನತ್ತ ಹೊರಟಿದ್ದರು. ಆಗ ಕ್ರೀಸ್‌ನಲ್ಲಿದ್ದ ನಾಯಕ ಬೆನ್‌ಸ್ಟೋಕ್ಸ್ (Ben Stokes) 3ನೇ ಅಂಪೈರ್ ಪರಿಶೀಲನೆಗೆ ತೆಗೆದುಕೊಂಡರು. ನಂತರ ಸ್ಟಾರ್ಕ್ ಕ್ಯಾಚ್ ಹಿಡಿದು ನಿಯಂತ್ರಿಸಲಾಗದೇ ಚೆಂಡನ್ನು ನೆಲಕ್ಕೆ ತಾಕಿಸಿದ್ದದ್ದು ಕಂಡುಬಂದಿತು. ಇದರಿಂದ 3ನೇ ಅಂಪೈರ್ ನಾಟೌಟ್ ತೀರ್ಪು ನೀಡಿದರು.
In relation to the below incident, Law 33.3 clearly states that a catch is only completed when the fielder has “complete control over the ball and his/her own movement.”
— Marylebone Cricket Club (@MCCOfficial) July 1, 2023
ಈ ಬಗ್ಗೆ ಮೈದಾನದಲ್ಲಿ ಭಾರೀ ಚರ್ಚೆ ಸಹ ನಡೆಯಿತು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಆನ್-ಫೀಲ್ಡ್ ಅಂಪೈರ್‌ನೊಂದಿಗೆ ಏಕೆ ಔಟ್ ಇಲ್ಲ ಎಂದು ವಾಗ್ವಾದಕ್ಕಿಳಿದರು. ಆದ್ರೆ ಕ್ಯಾಚ್ ಹಿಡಿದ ನಂತರ ಸ್ಟಾರ್ಕ್ ಚೆಂಡನ್ನು ನೆಲಕ್ಕೆ ತಾಕಿಸಿದ್ದಾರೆ. ಕ್ಯಾಚ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸದ ಕಾರಣ, ಬ್ಯಾಟರ್ ಪರವಾಗಿ ನಿರ್ಧಾರ ನೀಡಬೇಕಾಯಿತು ಎಂದು ಅಂಪೈರ್ ಸಮಾಧಾನಪಡಿಸಿದರು. ಹಾಗಾಗಿ ಆಸ್ಟ್ರೇಲಿಯಾ ತಂಡ ನಿರಾಶೆಗೊಂಡಿತು. ಇದನ್ನೂ ಓದಿ: 48 ವರ್ಷಗಳ ಇತಿಹಾಸದಲ್ಲೇ ಫಸ್ಟ್ ಟೈಂ ವಿಶ್ವಕಪ್ ಟೂರ್ನಿಯಿಂದಲೇ ವೆಸ್ಟ್ ಇಂಡೀಸ್ ಔಟ್
ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಲ್ಲಿ ಟೀಂ ಇಂಡಿಯಾ (Team India) ಆಟಗಾರ ಶುಭಮನ್ ಗಿಲ್ ಅವರ ಕ್ಯಾಚ್ ವಿಚಾರ ಭಾರೀ ವಿವಾದ ಹುಟ್ಟುಹಾಕಿತ್ತು. ದೇಶ-ವಿದೇಶ ಕ್ರಿಕೆಟ್ ದಿಗ್ಗಜರಿಂದಲೂ ಟೀಕೆಗಳು ಕೇಳಿಬಂದಿತ್ತು. ಅಲ್ಲದೇ ಸ್ಟೀವ್ ಸ್ಮಿತ್ ತೆಗೆದುಕೊಂಡಿದ್ದ ಜೋ ರೂಟ್ ಅವರ ಕ್ಯಾಚ್ ಸಹ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ:ಕೊಹ್ಲಿ ಮತ್ತು ಬಾಬರ್ ಇಬ್ಬರಲ್ಲಿ ಯಾರು ಶ್ರೇಷ್ಠ? – ಭಜ್ಜಿ ಪ್ರಶ್ನೆಗೆ ಶಾಕಿಂಗ್ ಉತ್ತರ ಕೊಟ್ಟ ಅಖ್ತರ್
ಆಶಸ್ ಟೂರ್ನಿಯ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್‌ನ 47ನೇ ಓವರ್‌ನಲ್ಲಿ ವೇಗಿ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಜೋ ರೂಟ್ ಪುಲ್ ಮಾಡಲು ಪ್ರಯತ್ನಿಸಿದರು. ಚೆಂಡು ಬ್ಯಾಟ್ ಸರಿಯಾಗಿ ಸಿಗದ ಬ್ಯಾಕ್‌ವಾರ್ಡ್ ಪಾಯಿಂಟ್ ಕಡೆ ಹಾರಿತು. ಈ ವೇಳೆ ಸ್ಟೀವ್ ಸ್ಮಿತ್ ಕ್ಯಾಚ್ ಪಡೆದರು. ಕ್ಯಾಚ್ ಪಡೆದ ತಕ್ಷಣ ಸ್ಮಿತ್ ಕುಣಿದು ಕುಪ್ಪಳಿಸಿದರು. ಈ ವೇಳೆ ಗೊಂದಲಕ್ಕೆ ಒಳಗಾದ ಫೀಲ್ಡ್ ಅಂಪೈರ್‌ಗಳು 3ನೇ ಅಂಪೈರ್ ಸಹಾಯಕ್ಕೆ ಮೊರೆ ಹೋದರು. ಇದನ್ನೂ ಓದಿ: ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್
3ನೇ ಅಂಪೈರ್‌ಗಳು ಹಲವು ಬಾರಿ ವಿಡಿಯೋ ರೀಪ್ಲೇ ವೀಕ್ಷಿಸಿದ ಬಳಿಕ ಅಂತಿಮವಾಗಿ ಜೋ ರೂಟ್ ಔಟ್ ಎಂದು ತೀರ್ಪು ನೀಡಲಾಯಿತು. ಈ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳು ಆಸೀಸ್ ತಂಡ ಹಾಗೂ 3ನೇ ಅಂಪೈರ್ ವಿರುದ್ಧ ಕಿಡಿ ಕಾರಿದರು. ಸ್ಟೀವ್ ಸ್ಮಿತ್ ಚೆಂಡನ್ನು ಪಡೆಯುವಾಗ ನೆಲಕ್ಕೆ ತಾಗಿಸಿದ್ದಾರೆಂದು ಫೋಟೋ ಸಹಿತ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಅಲ್ಲದೇ 2ನೇ ಟೆಸ್ಟ್ನ ನಾಲ್ಕನೇ ದಿನದಾಟದಲ್ಲಿ ಮಿಚೆಲ್ ಸ್ಟಾರ್ಕ್ ಹಿಡಿದ ಬೆನ್ ಡಕೆಟ್ ಅವರ ಕ್ಯಾಚರ್ ಡಿಆರ್‌ಎಸ್‌ಗೆ ಮನವಿ ಮಾಡಲಾಗಿತ್ತು. ಆದ್ರೆ, ಅಂಪೈರ್ ನಿಗಾ ವಹಿಸಿ ನಾಟೌಟ್ ತೀರ್ಪು ಪ್ರಕಟಿಸಿದರು.
ಲಂಡನ್: ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದ್ದು, ಇದು ನನ್ನ ಕೊನೆಯ ಪಂದ್ಯ ಎಂದು ತಿಳಿಸಿದ್ದಾರೆ.
ಡರ್ಹಾಮ್‌ನಲ್ಲಿ ಮಂಗಳವಾರ ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್‌ಗಾಗಿ ನನ್ನ ಕೊನೆಯ ಪಂದ್ಯವನ್ನು ಆಡುತ್ತೇನೆ. ಆ ಮೂಲಕ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಇದು ಕಠಿಣ ನಿರ್ಧಾರವಾಗಿದೆ. ನಾನು ಇಂಗ್ಲೆಂಡ್‌ಗಾಗಿ ನನ್ನ ಸಹ ಆಟಗಾರರೊಂದಿಗೆ ಆಡಿದ ಪ್ರತಿ ಕ್ಷಣವನ್ನು ಪ್ರೀತಿಸುತ್ತೇನೆ ಎಂದು ಟ್ವೀಟ್ ಮಾಡಿ ಸ್ಟೋಕ್ಸ್ ತಿಳಿಸಿದ್ದಾರೆ.
ನಾನು ಇಲ್ಲಿಯವರೆಗೆ ಆಡಿದ ಎಲ್ಲಾ 104 ಪಂದ್ಯಗಳನ್ನು ಆನಂದಿಸಿದ್ದೇನೆ. ನನಗೆ ಇನ್ನೊಂದು ಪಂದ್ಯ ಸಿಕ್ಕಿದೆ. ಡೆರ್ಹಾಮ್‌ನಲ್ಲಿರುವ ನನ್ನ ತವರು ಮೈದಾನದಲ್ಲಿ ಕೊನೆಯ ಪಂದ್ಯವನ್ನು ಆಡುತ್ತಿರುವುದು ಸ್ಮರಣೀಯವಾಗಿದೆ. ಎಂದಿನಂತೆ ಇಂಗ್ಲೆಂಡ್ ಅಭಿಮಾನಿಗಳು ಸದಾ ನನ್ನೊಂದಿಗೆ ಇದ್ದಾರೆ, ಮುಂದೆಯೂ ಇರುತ್ತಾರೆ. ಮಂಗಳವಾರ ಪಂದ್ಯವನ್ನು ಗೆಲ್ಲುತ್ತೇವೆಂಬ ಭರವಸೆ ಎಂದು ಹೇಳಿದ್ದಾರೆ.
ಕಳೆದ ಬೇಸಿಗೆಯಲ್ಲಿ ಪಾಕಿಸ್ತಾನದ ವಿರುದ್ಧ 3-0 ಅಂತರದ ವಿಜಯದ ಸಂದರ್ಭದಲ್ಲಿ ಅವರು ಏಕದಿನ ಕ್ರೆಕೆಟ್‌ನಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದರು. ಸ್ಪೂರ್ತಿದಾಯಕ ನಾಯಕರಾಗಿ ಹೊರಹೊಮ್ಮಿದ್ದರು.
Live Tv
[brid partner=56869869 player=32851 video=960834 autoplay=true]
ಆಂಟಿಗುವಾ: 2022ರ ಅಂಡರ್-19 ವಿಶ್ವಕಪ್ ಫೈನಲ್‍ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು 4 ವಿಕೆಟ್‍ಗಳಿಂದ ಬಗ್ಗು ಬಡಿದು ವಿಶ್ವಕಪ್ ಮುಡಿಗೇರಿಸಿಕೊಂಡಿದೆ.
ಮೊದಲ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಟೀಂ ಇಂಡಿಯಾದ ಯುವ ಆಟಗಾರರಾದ ರಾಜ್ ಬಾವಾ ಮತ್ತು ರವಿ ಕುಮಾರ್ ದಾಳಿಗೆ ಪತರುಗಟ್ಟಿ 44.5 ಓವರ್‌ಗಳಲ್ಲಿ 189 ರನ್‍ಗಳಿಗೆ ಆಲೌಟ್ ಆಯಿತು.
ಭಾರತದ ಪರ ಬೌಲಿಂಗ್ ವಿಭಾಗದಲ್ಲಿ ರವಿ ಕುಮಾರ್ 34 ರನ್‍ಗಳನ್ನು ನೀಡಿ 4 ವಿಕೆಟ್ ಹಾಗೂ ರಾಜ್ ಬಾವ 31 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು. ಇಬ್ಬರೂ ಬೌಲರ್‍ಗಳು ತಲಾ 1 ಮೆಡಿನ್ ಓವರ್ ಮಾಡಿದರು.
ಇಂಗ್ಲೆಂಡ್‍ನ ಸಾಧಾರಣ ಮೊತ್ತ ಬೆನ್ನಟ್ಟಿದ ಭಾರತ ತಂಡಕ್ಕೆ ಆಂಗ್ಕ್ರಿಶ್ ರಘುವಂಶಿ ಎರಡು ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೇ ವಿಕೆಟ್ ನೀಡಿದ್ದು ಆರಂಭಿಕ ಆಘಾತವಾಯಿತು. ಮತ್ತೋರ್ವ ಆರಂಭಿಕ ಆಟಗಾರ ಹರ್ನೂರ್ ಸಿಂಗ್ ಸಹ 46 ಎಸೆತಗಳನ್ನು ಎದುರಿಸಿ 21 ರನ್‍ಗಳ ಸಾಧಾರಣ ಮೊತ್ತವನ್ನು ಕಲೆಹಾಕಿದ್ದು, 2ನೇ ಕ್ರಮಾಂಕದ ಬ್ಯಾಟ್ಸ್‍ಮನ್‍ಗಳ ಮೇಲೆ ಒತ್ತಡ ಹೆಚ್ಚಿಸಿತ್ತು. ನಂತರ 84 ಎಸೆತಗಳನ್ನು ಎದುರಿಸಿ 50 ರನ್ ಗಳಿಸುವ ಮೂಲಕ ಶೇಖ್ ರಶೀದ್ ತಂಡಕ್ಕೆ ಚೇತರಿಕೆ ನೀಡಿದರಾದರೂ ಯಶ್ ಧುಲ್ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ.
ನಿಶಾಂತ್ ಸಿಂಧು 54 ಎಸೆತಗಳಲ್ಲಿ 50 ರನ್ ಗಳಿಸಿ ತಂಡದ ಗೆಲುವಿನ ಕನಸನ್ನು ಜೀವಂತವಾಗಿರಿಸಿದರು. ರಾಜ್ ಬಾವ 54 ಎಸೆತಗಳಲ್ಲಿ 34 ರನ್ ಗಳಿಸಿದರೆ, ನಿಶಾಂತ್ ಸಿಂಧು ಹಾಗೂ ದಿನೇಶ್ ಬನಾ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದನ್ನೂ ಓದಿ:ರಾಜ್ ಭಾವ, ರವಿ ದಾಳಿಗೆ ಬೆವರಿದ ಇಂಗ್ಲೆಂಡ್ – ಭಾರತಕ್ಕೆ 190 ರನ್ ಗುರಿ
Congratulations to the under 19 team and the support staff and the selectors for winning the world cup in such a magnificent way ..The cash prize announced by us of 40 lakhs is a small token of appreciation but their efforts are beyond value .. magnificent stuff..@bcci
ಅಂಡರ್-19 ಇತಿಹಾಸದಲ್ಲಿ ಟೀಂ ಇಂಡಿಯಾ 7 ಬಾರಿ ಫೈನಲ್ ತಲುಪಿದೆ. ಭಾರತ 2000ದಲ್ಲಿ ಮೊಹಮ್ಮದ್ ಕೈಫ್, 2008ರಲ್ಲಿ ವಿರಾಟ್ ಕೊಹ್ಲಿ, 2012ರಲ್ಲಿ ಉನ್ಮುಕ್ ಚಾಂದ್ ಮತ್ತು 2018ರಲ್ಲಿ ಪೃಥ್ವಿ ಶಾ ಮತ್ತು 2022ರಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದು ಬೀಗಿದೆ.
ಲಂಡನ್: ಇಂಗ್ಲೆಂಡ್‍ನ ಆಲ್ ರೌಂಡರ್ ಟಿಮ್ ಬ್ರೆಸ್ನನ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಅವರ ದೇಸಿ ಕ್ಲಬ್ ವಾರ್ವಿಕ್ ಶೈರ್ ಕ್ರಿಕೆಟ್ ಮಂಡಳಿ ಖಚಿತಪಡಿಸಿದೆ.
ಈ ಬಗ್ಗೆ ಬ್ರೆಸ್ನನ್ ಮಾತನಾಡಿ, ಇದು ನನಗೆ ನಂಬಲಾಗದಷ್ಟು ಕಠಿಣ ನಿರ್ಧಾರವಾಗಿದೆ. ಆದರೆ ಇದು ನನಗೆ ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ನನ್ನ ತಂಡದ ಸಹ ಆಟಗಾರರು ನಿರೀಕ್ಷಿಸಿದಷ್ಟು ಉನ್ನತ ಗುಣಮಟ್ಟವನ್ನು ತಲುಪಿಲ್ಲ. 2022ರ ಋತುವಿನಲ್ಲೂ ಕ್ರಿಕೆಟ್ ಆಡಲು ನನಗೆ ಉತ್ಸಾಹವಿದೆ ಹಾಗೂ ಮನಸಿದೆ. ಆದರೆ ನನ್ನ ದೇಹಕ್ಕಿಲ್ಲ ಎಂದು ತಿಳಿಸಿದರು.
ನಾನು ಯಾವಾಗಲೂ ನನ್ನ ವೃತ್ತಿಜೀವನವನ್ನು ಅಪಾರ ಹೆಮ್ಮೆಯಿಂದ ಹಿಂತಿರುಗಿ ನೋಡುತ್ತೇನೆ ಮತ್ತು ನನ್ನ ತವರು ಕೌಂಟಿ ಮತ್ತು ದೇಶವಾದ ವಾರ್ವಿಕ್‍ಷೈರ್ ಅನ್ನು ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ. ನಾನು ಕೆಲವು ಸಾಧಕರೊಂದಿಗೆ ಹಾಗೂ ಅವರ ವಿರುದ್ಧವಾಗಿ ಆಡಿದ್ದೇನೆ. ಅದಕ್ಕೆ ನನ್ನನ್ನು ನಾನು ಅದೃಷ್ಟಶಾಲಿ ಎಂದುಕೊಳ್ಳುತ್ತೇನೆ ಎಂದರು. ಇದನ್ನೂ ಓದಿ: ಟೋಯಿಂಗ್ ವಾಹನ ಸಿಬ್ಬಂದಿ ಅಮಾನುಷವಾಗಿ ವರ್ತಿಸಿಲ್ಲ, ಅದೆಲ್ಲಾ ಸುಳ್ಳು: ಆರಗ ಜ್ಞಾನೇಂದ್ರ
ಲಂಡನ್: ಕೋವಿಡ್-19 ಮಹಾಮಾರಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯಗಳಲ್ಲಿ ವಿಶೇಷ ಬದಲಾವಣೆಯೊಂದನ್ನು ತರಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ಇಸಿಬಿ) ಚಿಂತನೆ ನಡೆಸಿದೆ. ಇದುವರೆಗೂ ಪಂದ್ಯದ ಸಮಯದಲ್ಲಿ ಆಟಗಾರ ಗಾಯಗೊಂಡರೆ ಕನ್ಕೂಷನ್ ಸಬ್‍ಸ್ಟಿಟ್ಯೂಟ್ ಪ್ಲೇಯರ್ ಅಥವಾ ಸಬ್‍ಸ್ಟಿಟ್ಯೂಟ್ ಫಿಲ್ಡರನ್ನು ತೆಗೆದುಕೊಳ್ಳಲು ಐಸಿಸಿ ನಿಯಮಗಳ ಅಡಿ ಅವಕಾಶ ನೀಡಲಾಗಿದೆ. ಆದರೆ ಈಗ ಕೊರೊನಾ ವೈರಸ್ ರಿಪ್ಲೇಸ್ಮೆಂಟ್ (ಸಬ್‍ಸ್ಟಿಟ್ಯೂಟ್)ಗೆ ಅವಕಾಶ ನೀಡಬೇಕು ಎಂದು ಐಸಿಸಿಗೆ ಇಸಿಬಿ ಮನವಿ ಮಾಡಿದೆ. ಅಲ್ಲದೇ ತಮ್ಮ ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ಬರಲಿದೆ ಎಂಬ ವಿಶ್ವಾಸವನ್ನು ಇಸಿಬಿ ವ್ಯಕ್ತಪಡಿಸಿದೆ.
ಕೋವಿಡ್-19 ಸಬ್‍ಸ್ಟಿಟ್ಯೂಟ್ ಕುರಿತ ಅಂಶಗಳ ಬಗ್ಗೆ ಐಸಿಸಿ ಇನ್ನು ಕೆಲ ಅಂಶಗಳನ್ನು ಪರಿಗಣೆಗೆ ತೆಗೆದುಕೊಳ್ಳಬೇಕಿದೆ. ಅಲ್ಲದೇ ನಮ್ಮ ಮನವಿಗೆ ಅಂಗೀಕಾರ ನೀಡುವ ಅಗತ್ಯವಿದೆ. ಜುಲೈನಲ್ಲಿ ವೆಸ್ಟ್ ಇಂಡೀಸ್ ಟೂರ್ನಿಗೂ ಮುನ್ನವೇ ಈ ಮನವಿಯನ್ನು ಜಾರಿ ಮಾಡುವ ಪ್ರಯತ್ನ ಸಾಗುತ್ತದೆ ಎಂದು ಇಸಿಬಿ ಈವೆಂಟ್ ಡೈರೆಕ್ಟರ್ ಸ್ಟೀವ್ ಎಲ್ವರ್ತಿ ತಿಳಿಸಿದ್ದಾರೆ. ಅಲ್ಲದೇ ಏಕದಿನ ಮತ್ತು ಟಿ20 ಕ್ರಿಕೆಟ್‍ನಿಂದ ಈ ಬದಲಾವಣೆಯನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ಕೊರೊನಾ ಕಾರಣದಿಂದ ದೇಶೀಯ ಕ್ರಿಕೆಟ್ ಟೂರ್ನಿಯನ್ನು ಆಗಸ್ಟ್ ನಿಂದ ಇಸಿಬಿ ಪ್ರಾರಂಭಿಸಲಿದೆ. ಬಯೋ ಸೆಕ್ಯೂಲರ್ ವಾತಾವರಣದಲ್ಲಿ ವೆಸ್ಟ್ ಇಂಡೀಸ್, ಪಾಕಿಸ್ತಾನ ವಿರುದ್ಧದ ಟೂರ್ನಿಗಳನ್ನು ಆಯೋಜಿಸುವುದಾಗಿ ಇಸಿಬಿ ಈ ಹಿಂದೆಯೇ ತಿಳಿಸಿತ್ತು. ಇಂಗ್ಲೆಂಡ್ ಸರ್ಕಾರ ಅನುಮತಿ ಮತ್ತು ಮಾರ್ಗದರ್ಶಗಳ ಅನ್ವಯ ಟೂರ್ನಿಯನ್ನು ಏರ್ಪಡಿಸುವುದಾಗಿ ಇಸಿಬಿ ಸ್ಪಷ್ಟಪಡಿಸಿದೆ. ಜೂನ್ ಮೊದಲ ವಾರದವರೆಗೂ ಎಲ್ಲಾ ಕ್ರಿಕೆಟ್ ಚಟುವಟಿಕೆಗಳನ್ನು ಇಂಗ್ಲೆಂಡ್ ಸರ್ಕಾರ ನಿಷೇಧ ಮಾಡಿದೆ. ಜುಲೈ 1 ರಿಂದ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಟೂರ್ನಿ ಆರಂಭವಾಗಲಿದೆ. ಇದನ್ನು ಓದಿ: ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಲೋಚನೆ ಅವಾಸ್ತವಿಕ: ರಾಹುಲ್ ದ್ರಾವಿಡ್
ಐಸಿಸಿ ನಿಯಮಗಳ ಅನ್ವಯ ಟೆಸ್ಟ್ ಪಂದ್ಯವೊಂದರ ಸಮಯದಲ್ಲಿ ಆಟಗಾರ ಗಾಯಗೊಂಡ ಸಂದರ್ಭದಲ್ಲಿ ಆತನ ಬದಲಿಗೆ ಮತ್ತೊಬ್ಬ ಆಟಗಾರರನ್ನು (ಕನೂಷ್ಕನ್ ಸಬ್‍ಸ್ಟಿಟ್ಯೂಟ್) ಆಡಿಸಬಹುದು. ಬದಲಿ ಆಟಗಾರ ಬ್ಯಾಟ್ ಅಥವಾ ಬೌಲ್ ಮಾಡಬಹುದು. ಆದರೆ ಎರಡೂ ಮಾಡಲು ಸಾಧ್ಯವಿಲ್ಲ. ಉಳಿದಂತೆ ಸಬ್‍ಸ್ಟಿಟ್ಯೂಟ್ ಫಿಲ್ಡರನ್ನು ತೆಗೆದುಕೊಳ್ಳಲು ಅವಕಾಶವಿದೆ.