Tag: england

  • ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ

    ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ

    ಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ (Indian Womens Cricket Team) ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ (Smriti Mandhana) ಐಸಿಸಿ (ICC) ರ‍್ಯಾಂಕಿಂಗ್‌ಪಟ್ಟಿಯಲ್ಲಿ 2ನೇ ಸ್ಥಾನ ಗಳಿಸುವ ಮೂಲಕ ಟಿ20 ವೃತ್ತಿಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

    ಐಸಿಸಿ ಪ್ರಕಟಿಸಿದ ರ‍್ಯಾಂಕ್ (ICC Ranking) ಪಟ್ಟಿಯಲ್ಲಿ ವಿಶ್ವದ ಬ್ಯಾಟರ್‌ಗಳ ಪೈಕಿ 2ನೇ ಸ್ಥಾನ ಪಡೆದುಕೊಂಡಿದ್ದು, ಏಕದಿನ ಕ್ರಿಕೆಟ್‌ನಲ್ಲಿ (Cricket) 7ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: ಸ್ಮೃತಿ ಮಂಧಾನಗೆ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ

    ಆಸ್ಟ್ರೇಲಿಯಾ ಕ್ರಿಕೆಟರ್ ಬೆತ್ ಮೂನಿ 743 ಶ್ರೇಯಾಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, 731 ಶ್ರೇಯಾಂಕಗಳನ್ನು ಗಳಿಸಿರುವ ಸ್ಮೃತಿ ಮಂಧಾನ 2ನೇ ಸ್ಥಾನದಲ್ಲಿ ಮಿಂಚಿದ್ದಾರೆ. ಐಸಿಸಿಯ 2021ರ ರಾಚೆಲ್ ಹೇಹೋ ಫ್ಲಿಂಟ್ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸ್ಮೃತಿ ಮಂಧಾನ ಇದೀಗ ವೃತ್ತಿ ಜೀವನದ ಸಾಧನೆ ಮಾಡಿದ್ದಾರೆ. ಟಿ20 ಅಗ್ರಕ್ರಮಾಂಕದಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ.

    ಇತ್ತೀಚೆಗೆ ನಡೆದ ಭಾರತ-ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ಸರಣಿಯ 3 ಪಂದ್ಯಗಳಲ್ಲಿ 111 ರನ್‌ಗಳಿಸಿದ್ದು, ಐಸಿಸಿ ರ‍್ಯಾಂಕಿಂಗೆ ಇನ್ನಷ್ಟು ಸಹಕಾರಿಯಾಯಿತು. ಹಾಗೆಯೇ ಏಕದಿನ ಕ್ರಿಕೆಟರ್‌ಗಳ ಪಟ್ಟಿಯಲ್ಲೂ ಟಾಪ್-10ನಲ್ಲಿರುವ ಮಂಧಾನ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೇ 91 ರನ್‌ಗಳಿಸಿ 7ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: T20 WorldCupಗೆ ಡಿಕೆ ಓಕೆ, ರಿಷಭ್ ಯಾಕೆ – ಪಂತ್ ಕೈಬಿಡೋದು ಸೂಕ್ತ ಅಂದ ಮಾಜಿ ಕ್ರಿಕೆಟಿಗ

    ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ 13ನೇ ಸ್ಥಾನದಲ್ಲಿದ್ದ ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ (Harmanpreet Kaur) 9ನೇ ಸ್ಥಾನಕ್ಕೆ ಜಿದ್ದಾರೆ. ಆಲ್‌ರೌಂಡರ್ ದೀಪ್ತಿ ಶರ್ಮಾ 33 ರಿಂದ 32ನೇ ಸ್ಥಾನಕ್ಕೆ ಹಾಗೂ ವಿಕೆಟ್ ಕೀಪರ್ ಯಾಸ್ತಿಕಾ ಭಾಟಿಯಾ 45 ರಿಂದ 37ನೇ ಸ್ಥಾನಕ್ಕೇರಿದ್ದಾರೆ. ಬೌಲರ್ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದ ದೀಪ್ತಿ 12ನೇ ಸ್ಥಾನಕ್ಕೆ ಜಿಗಿದು ಸಾಧನೆ ಮಾಡಿದ್ದಾರೆ.

    ಟಿ20 ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಹರ್ಮನ್ ಪ್ರೀತ್ ಕೌರ್ 14ನೇ ಸ್ಥಾನಕ್ಕೆ, ಬೌಲಿಂಗ್‌ನಲ್ಲಿ ರೇಣುಕಾ ಸಿಂಗ್ 10ನೇ ಸ್ಥಾನಕ್ಕೆ ಹಾಗೂ ರಾಧಾ ಯಾದವ್ 14ನೇ ಸ್ಥಾನಕ್ಕೆ ಜಿಗಿದರೇ, ಆಲ್‌ರೌಂಡರ್ ವಿಭಾಗದಲ್ಲಿ ಸ್ನೇಹಾ ರಾಣಾ ಹಾಗೂ ಪೂಜಾ ವಸ್ತ್ರಕರ್ ಇಬ್ಬರೂ 41ನೇ ಸ್ಥಾನ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವರ್ಕ್ ಫ್ರಮ್ ಹೋಮ್‌ನಿಂದ ಸೆಕ್ಸ್ ವೀಡಿಯೋ ನೋಡುವವರ ಸಂಖ್ಯೆ ಹೆಚ್ಚಳ!

    ವರ್ಕ್ ಫ್ರಮ್ ಹೋಮ್‌ನಿಂದ ಸೆಕ್ಸ್ ವೀಡಿಯೋ ನೋಡುವವರ ಸಂಖ್ಯೆ ಹೆಚ್ಚಳ!

    ಲಂಡನ್: ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ನೀಡಿದ್ದು, ಇದರಿಂದ ಯುಕೆ ನಲ್ಲಿ ಅಶ್ಲೀಲ ವೀಡಿಯೋ ಹಾಗೂ ಫೋಟೋಗಳನ್ನು ನೋಡುವವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ ಹೆಚ್ಚಿನ ಜನ ವ್ಯಸನಿಗಳಾಗುತ್ತಿದ್ದಾರೆ ಎಂಬವುದು ಸರ್ವೇಯೊಂದರಲ್ಲಿ ಬಯಲಾಗಿದೆ.

    ವರ್ಕ್ ಫ್ರಂ ಹೋಮ್ ಜನಪ್ರಿಯವಾದಾಗಿನಿಂದ ಪೋರ್ನೋಗ್ರಫಿ ನೋಡುವ ಯುಕೆ ನಾಗರಿಕರ ಸಂಖ್ಯೆ ವಾಸ್ತವವಾಗಿ ದ್ವಿಗುಣಗೊಂಡಿದೆ ಎಂದು ವರದಿಯಾಗಿದೆ. ತಜ್ಞರ ಪ್ರಕಾರ, ವರ್ಕ್ ಫ್ರಮ್ ಹೋಮ್ ಸಾಂದರ್ಭಿಕ ಅಶ್ಲೀಲ ವೀಕ್ಷಕರನ್ನೂ ವ್ಯಸನಿಗಳನ್ನಾಗಿ ಮಾಡಲು ಕಾರಣವಾಗಿದೆ. ಈ ಮೂಲಕ ಸಮಸ್ಯೆಗೆ ಸಿಲುಕಿ ವೈದ್ಯಕೀಯ ಆರೈಕೆ ಪಡೆಯುತ್ತಿರುವವರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ. ಆದ್ದರಿಂದ ಅಶ್ಲೀಲ ವ್ಯಸನಿಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಾಗುತ್ತಿದೆ. ಇದನ್ನೂ ಓದಿ: ‘ರಾಕೆಟ್ರಿ’ ಸಿನಿಮಾದಲ್ಲಿ ಇಸ್ರೊಗೆ ಕಳಂಕ ತರುವಂತಹ ಸುಳ್ಳುಗಳನ್ನು ಹೇಳಲಾಗಿದೆ: ಮಾಜಿ ವಿಜ್ಞಾನಿಗಳ ಆರೋಪ

    ಅಶ್ಲೀಲ ವ್ಯಸನವು ಲೈಂಗಿಕ ವ್ಯಸನದ ಒಂದು ಭಾಗವಾಗಿದೆ. ಇದರಿಂದ ಮುಕ್ತರಾಗಲು ಲಂಡನ್ನಿನ ಲಾರೆಲ್ ಸೆಂಟರ್ ಲೈಂಗಿಕ ಚಿಕಿತ್ಸಾಲಯದಲ್ಲಿ, ದಿನಕ್ಕೆ 14 ಗಂಟೆ ಕೆಲಸ ಮಾಡುತ್ತಾ ಅಶ್ಲೀಲತೆ ವೀಕ್ಷಿಸುವವರಿಗೆ ರಿಮೋಟ್ ಚಿಕಿತ್ಸೆ ನೀಡುತ್ತಿದೆ ಎಂದು ಹೇಳಿದೆ. ಇದನ್ನೂ ಓದಿ: ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ

    ಕೇಂದ್ರದ ಕ್ಲಿನಿಕಲ್ ನಿರ್ದೇಶಕಿ ಪೌಲಾ ಹಾಲ್ ಈ ಕುರಿತು ಮಾತನಾಡಿದ್ದು, ಡಬ್ಲ್ಯುಎಫ್‌ಎಚ್ ಎಂದರೆ ಜನರು ಈಗ ತಮ್ಮ ಕಂಪ್ಯೂಟರ್ಗಳ ಮುಂದೆ ಹಿಂದೆಂದಿಗಿಂತಲೂ ಹೆಚ್ಚು ಸಮಯವನ್ನು ಏಕಾಂಗಿಯಾಗಿ ಕಳೆಯುತ್ತಿದ್ದಾರೆ ಎಂಬುದನ್ನು ಅಂದಾಜಿಸುವುದು ಆಗಿದೆ. ಲಾರೆಲ್ ಚಿಕಿತ್ಸಾಲಯವು 2019ರಲ್ಲಿ 950 ಮಂದಿಗೆ ಲೈಂಗಿಕ ವ್ಯಸನದಿಂದ ಮುಕ್ತರಾಗಲು ಚಿಕಿತ್ಸೆ ನೀಡಿತ್ತು. ಆದರೆ ಪ್ರಸಕ್ತ 2022ರ ವರ್ಷದಲ್ಲಿ ಈಗಾಗಲೇ 750 ಮಂದಿಗೆ ಚಿಕಿತ್ಸೆ ನೀಡುತ್ತಿದೆ. ಹೀಗಾಗಿ ಲೈಂಗಿಕ ವ್ಯಸನಿಗಳ ಸಂಖ್ಯೆ ಹೆಚ್ಚಾಗ್ತಿದೆ ಎಂದು ವರದಿ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • CWG 2022: ಇಂಗ್ಲೆಂಡ್ ವಿರುದ್ಧ 4 ರನ್‍ಗಳ ರೋಚಕ ಜಯ – ಫೈನಲ್‍ಗೆ ಲಗ್ಗೆಯಿಟ್ಟ ಭಾರತ

    CWG 2022: ಇಂಗ್ಲೆಂಡ್ ವಿರುದ್ಧ 4 ರನ್‍ಗಳ ರೋಚಕ ಜಯ – ಫೈನಲ್‍ಗೆ ಲಗ್ಗೆಯಿಟ್ಟ ಭಾರತ

    ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 4 ರನ್‍ಗಳ ರೋಚಕ ಜಯ ಸಾಧಿಸಿದ ಭಾರತದ ಮಹಿಳಾ ತಂಡ ಫೈನಲ್‍ಗೆ ಲಗ್ಗೆಯಿಟ್ಟಿದೆ.

    22ನೇ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಕ್ರಿಕೆಟ್ ಸೇರ್ಪಡೆಗೊಂಡಿದ್ದು, ಚೊಚ್ಚಲ ಆವೃತ್ತಿಯಲ್ಲೇ ಭಾರತ ತಂಡ ಫೈನಲ್ ಪ್ರವೇಶಿಸಿ ದಾಖಲೆ ಬರೆದಿದೆ. ಭಾರತ ನೀಡಿದ 165 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ವನಿತೆಯರು 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಸಿಡಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡ 4 ರನ್‍ಗಳ ರೋಚಕ ಜಯ ಸಾಧಿಸಿ ಸಂಭ್ರಮಿಸಿತು. ಇದನ್ನೂ ಓದಿ: CWG 2022: ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಅವಿನಾಶ್ ಸಬ್ಲೆ, ಪ್ರಿಯಾಂಕಾ ಗೋಸ್ವಾಮಿ

    ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್ ಗೆಲುವಿಗೆ 14 ರನ್ ಬೇಕಿತ್ತು. ಸ್ನೇಹ ರಾಣಾ ಎಸೆದ ಕೊನೆಯ ಓವರ್‌ನಲ್ಲಿ ಕೇವಲ 9 ರನ್ ಅಷ್ಟೇ ಸಿಡಿಸಲು ಶಕ್ತರಾದ ಇಂಗ್ಲೆಂಡ್ ಬ್ಯಾಟರ್‌ಗಳು ತವರಿನಲ್ಲಿ ಸೋತು ನಿರಾಸೆ ಅನುಭವಿಸಿದರು. ಇಂಗ್ಲೆಂಡ್ ಪರ ಡ್ಯಾನಿ ವ್ಯಾಟ್ 35 ರನ್ (27 ಎಸೆತ, 6 ಬೌಂಡರಿ), ನ್ಯಾಟ್ ಸಿವರ್ 41 ರನ್ (43 ಎಸೆತ, 2 ಬೌಂಡರಿ, 1 ಸಿಕ್ಸ್) ಮತ್ತು ಆಮಿ ಜೋನ್ಸ್ 31 ರನ್ (24 ಎಸೆತ, 3 ಬೌಂಡರಿ) ಸಿಡಿಸಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಭಾರತೀಯ ಫೇಮಸ್ ಫುಟ್ಬಾಲ್ ಆಟಗಾರ ಇನ್ನಿಲ್ಲ

    ಈ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ಸ್ಮೃತಿ ಮಂದಾನ ಭರ್ಜರಿ ಆರಂಭ ನೀಡಿದರು. ಉತ್ತಮ ಲಯದಲ್ಲಿ ಕಾಣಿಸಿಕೊಂಡ ಮಂದಾನ ಇಂಗ್ಲೆಂಡ್ ಬೌಲರ್‌ಗಳ ಬೆವರಿಳಿಸಿದರು. ಇವರಿಗೆ ಅಗ್ರಕ್ರಮಾಂಕದ ಬ್ಯಾಟರ್ ಜೆಮಿಮಾ ರಾಡ್ರಿಗಸ್ ಉತ್ತಮ ಬೆಂಬಲ ನೀಡಿದರು. ಮಂದಾನ 61 ರನ್ (32 ಎಸೆತ, 8 ಬೌಂಡರಿ, 3 ಸಿಕ್ಸ್) ಚಚ್ಚಿ ಔಟ್ ಆದರೆ, ಜೆಮಿಮಾ ರಾಡ್ರಿಗಸ್ ಅಜೇಯ 44 ರನ್ (31 ಎಸೆತ, 7 ಬೌಂಡರಿ) ಸಿಡಿಸಿ ತಂಡದ ಮೊತ್ತವನ್ನು 160ರ ಗಡಿದಾಟಿಸಿದರು. ಅಂತಿಮವಾಗಿ ಭಾರತ ನಿಗದಿತ ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಪೇರಿಸಿತು.

    ಇಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ನಡುವೆ 2ನೇ ಸೆಮಿಫೈನಲ್‌ ಪಂದ್ಯಾಟ ನಡೆಯಲಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡ ಭಾರತವನ್ನು ಫೈನಲ್‌ನಲ್ಲಿ ಎದುರಿಸಲಿದೆ. ಆಗಸ್ಟ್‌ 7 ರಂದು ಫೈನಲ್‌ ಪಂದ್ಯಾಟ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • Commonwealth Games: ಆಂಗ್ಲರ ವಿರುದ್ಧ ಗೆಲ್ಲುವ ಅವಕಾಶ ಕೈಚೆಲ್ಲಿದ ಭಾರತದ ಹಾಕಿ ತಂಡ

    Commonwealth Games: ಆಂಗ್ಲರ ವಿರುದ್ಧ ಗೆಲ್ಲುವ ಅವಕಾಶ ಕೈಚೆಲ್ಲಿದ ಭಾರತದ ಹಾಕಿ ತಂಡ

    ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಭಾರತದ ಪುರುಷರ ಹಾಕಿ ತಂಡವು ಇಂಗ್ಲೆಂಡ್ ವಿರುದ್ಧ ನಡೆದ ತನ್ನ ಪೂಲ್ ಪಂದ್ಯದಲ್ಲಿ ಗೆಲ್ಲುವ ಅವಕಾಶ ಕಳೆದುಕೊಂಡು ನಿರಾಶೆಗೆ ಒಳಗಾಗಿದೆ. 4-4 ರಲ್ಲಿ ಪಂದ್ಯವನ್ನು ಡ್ರಾ ಮಾಡಿಕೊಂಡು, ಸುಲಭದಲ್ಲಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿದೆ.

    ಪೂಲ್-ಬಿ ನಲ್ಲಿ ನಡೆದ ಈ ಪಂದ್ಯದಲ್ಲಿ, ಕೊನೆಯ ಕ್ವಾರ್ಟರ್‌ನಲ್ಲಿ ಭಾರತ ತಂಡವು ಒಂದರ ನಂತರ ಒಂದರಂತೆ ಹಲವು ಬಾರಿ ಎಡವಿತು. ಇದರಿಂದಾಗಿ ಟೀಂ ಇಂಡಿಯಾ ದೀರ್ಘಕಾಲ ಆಂಗ್ಲರ ವಿರುದ್ಧ ಸೆಣಸಬೇಕಾಯಿತು. ತಂಡದಲ್ಲಿದ್ದ ಗೊಂದಲಗಳಿಂದಾಗಿ ಇಂಗ್ಲೆಂಡ್ ಮೂರು ಗೋಲ್‌ಗಳ ಲಾಭ ಪಡೆಯಿತು. ಈ ಮೂಲಕ ಇಂಗ್ಲೆಂಡ್ ತಂಡ ಪಂದ್ಯವನ್ನು ಡ್ರಾ ಮಾಡುವುದರಲ್ಲಿ ಯಶಸ್ವಿಯಾಯಿತು. ಈ ಫಲಿತಾಂಶದ ನಂತರ, ಭಾರತ ತಂಡವು ಪೂಲ್‌ನ ಅಗ್ರಸ್ಥಾನಕ್ಕೆ ಹೋಗುವ ಅವಕಾಶವನ್ನೂ ಕಳೆದುಕೊಂಡಿತು. ಇದನ್ನೂ ಓದಿ: Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

    ಪಂದ್ಯದಲ್ಲಿ, ಭಾರತ ತಂಡವು ಮೊದಲ ಕ್ವಾರ್ಟರ್‌ನಲ್ಲಿಯೇ 2-0 ಮುನ್ನಡೆ ಸಾಧಿಸಿತ್ತು. ಇದು 2ನೇ ಕ್ವಾರ್ಟರ್‌ನ ಅಂತ್ಯದಲ್ಲಿ 3-0 ಸಾಧಿಸುವ ಮೂಲಕ ಇಂಗ್ಲೆಂಡ್ ಅನ್ನು ಹಿಂದಕ್ಕೆ ತಳ್ಳಿತ್ತು. ಆದಾಗ್ಯೂ ಇಂಗ್ಲೆಂಡ್ 3ನೇ ಕ್ವಾರ್ಟರ್‌ನಲ್ಲಿ ಪುನರಾಗಮನದ ಕಡೆಗೆ ಮೊದಲ ಹೆಜ್ಜೆ ಇಡುತ್ತಾ, 3-1 ಅಂತರಕ್ಕೆ ಅಂಕ ಗಳಿಸಿತ್ತು. ನಂತರ 4ನೇ ಕ್ವಾರ್ಟರ್‌ನಲ್ಲಿ, ಭಾರತ ತಕ್ಷಣವೇ ಸ್ಕೋರ್ ಅನ್ನು 4-1 ಗೆ ಇಳಿಸಿತು. ಆದರೆ ಕೊನೆಯ 10 ನಿಮಿಷಗಳಲ್ಲಿ ಭಾರತೀಯ ಆಟಗಾರರು ಫೌಲ್ ಮಾಡುತ್ತಲೇ ಇದ್ದರು, ಇದರಿಂದಾಗಿ ಇಬ್ಬರು ಆಟಗಾರರು ಎಲ್ಲೋ ಕಾರ್ಡ್ ಪಡೆದು ಹೊರಹೋಗಬೇಕಾಯಿತು. ಕಡಿಮೆ ಆಟಗಾರರಿಂದಾಗಿ ಗೇಲನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ ಭಾರತ ತಂಡ ಸಂಪೂರ್ಣ ಹಿನ್ನಡೆ ಅನುಭವಿಸಿತು.

    Live Tv
    [brid partner=56869869 player=32851 video=960834 autoplay=true]

  • ಪಂತ್, ಪಾಂಡ್ಯ ಪರಾಕ್ರಮ ಭಾರತಕ್ಕೆ ಏಕದಿನ ಸರಣಿ – ಇಂಗ್ಲೆಂಡ್‍ಗೆ ತವರಿನಲ್ಲಿ ಮುಖಭಂಗ

    ಪಂತ್, ಪಾಂಡ್ಯ ಪರಾಕ್ರಮ ಭಾರತಕ್ಕೆ ಏಕದಿನ ಸರಣಿ – ಇಂಗ್ಲೆಂಡ್‍ಗೆ ತವರಿನಲ್ಲಿ ಮುಖಭಂಗ

    ಲಂಡನ್: ರಿಷಭ್ ಪಂತ್ ಶತಕದಾಟ ಮತ್ತು ಹಾರ್ದಿಕ್ ಪಾಂಡ್ಯ ಆಲ್‍ರೌಂಡರ್ ಪ್ರದರ್ಶನದಿಂದಾಗಿ ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಅಂತರದ ಜಯ ಗಳಿಸಿ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

    ಇಂಗ್ಲೆಂಡ್ ನೀಡಿದ 260 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಪರ ಪಂತ್ ಆರ್ಭಟಿಸಿದರು. 38 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡ ವೇಳೆ ಕ್ರೀಸ್‌ಗೆ ಬಂದ ಪಂತ್ ಭಾರತದ ಗೆಲುವಿಗೆ ಟೊಂಕ ಕಟ್ಟಿ ನಿಂತರು. ಅಂತಿಮವಾಗಿ ಪಂತ್ ಅಜೇಯ 125 ರನ್ (113 ಎಸೆತ, 16 ಬೌಂಡರಿ, 1 ಸಿಕ್ಸ್) ಬಾರಿಸಿ 42.1 ಓವರ್‌ಗಳ ಅಂತ್ಯಕ್ಕೆ 261 ರನ್ ಚಚ್ಚಿ ಭಾರತಕ್ಕೆ 5 ವಿಕೆಟ್‍ಗಳ ಅಂತರದ ಜಯ ತಂದುಕೊಟ್ಟರು. ಈ ಮೂಲಕ ಇಂಗ್ಲೆಂಡ್ ತಂಡ ಟಿ20 ಹಾಗೂ ಏಕದಿನ ಸರಣಿ ಸೋತು ತವರಿನಲ್ಲಿ ಮುಖಭಂಗ ಅನುಭವಿಸಿದೆ.

    ಚೇಸಿಂಗ್‌ ವೇಳೆ ಪಂತ್‍ಗೆ ಹಾರ್ದಿಕ್ ಪಾಂಡ್ಯ ಸಾಥ್ ನೀಡಿದರು. ಈ ಜೋಡಿ ತಂಡದ ಗೆಲುವಿಗಾಗಿ 5ನೇ ವಿಕೆಟ್‍ಗೆ 133 ರನ್ (115 ಎಸೆತ)ಗಳ ಜೊತೆಯಾಟವಾಡಿ ಬೇರ್ಪಟ್ಟಿತು. ಪಾಂಡ್ಯ 71 ರನ್ (55 ಎಸೆತ, 10 ಬೌಂಡರಿ) ಸಿಡಿಸಿ ಔಟ್ ಆದರು. ಬಳಿಕ ಜಡೇಜಾ ಜೊತೆಗೂಡಿದ ಪಂತ್ 6ನೇ ವಿಕೆಟ್‍ಗೆ ಅಜೇಯ 56 ರನ್ (40 ಎಸೆತ) ಜೊತೆಯಾಟವಾಡಿ ಇನ್ನೂ 47 ಎಸೆತ ಬಾಕಿ ಇರುವಂತೆ 5 ವಿಕೆಟ್‍ಗಳ ಗೆಲುವು ತಂದುಕೊಟ್ಟರು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಇಂಗ್ಲೆಂಡ್ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಮೊಹಮ್ಮದ್ ಸಿರಾಜ್ ದಾಳಿಗೆ ನಲುಗಿದ ಇಂಗ್ಲೆಂಡ್‍ನ ಟಾಪ್ ಆಡರ್ ಬ್ಯಾಟ್ಸ್‌ಮ್ಯಾನ್‌ಗಳಾದ ಬೈರ್‌ಸ್ಟೋವ್ ಮತ್ತು ಜೋ ರೂಟ್ ಶೂನ್ಯ ಸುತ್ತಿದರು. ಇತ್ತ ಜೇಸನ್ ರಾಯ್ ಕೆಲ ಕಾಲ ಉತ್ತಮ ಆಟ ಪ್ರದರ್ಶಿಸಿದರೂ ಅವರ ಆಟ 41 ರನ್ (31 ಎಸೆತ, 7 ಬೌಂಡರಿ)ಗೆ ಕೊನೆಗೊಂಡಿತು.

    ಪಾಂಡ್ಯ, ಚಹಲ್ ಚಮಕ್:
    ಆ ಬಳಿಕ ಬಂದ ನಾಯಕ ಜೋಸ್ ಬಟ್ಲರ್ ಏಕಾಂಗಿಯಾಗಿ ಇಂಗ್ಲೆಂಡ್ ರನ್ ಹೆಚ್ಚಿಸುವ ಜವಾಬ್ದಾರಿ ಹೊತ್ತರು ಇವರಿಗೆ ಮೊಯಿನ್ ಅಲಿ 34 ರನ್ (44 ಎಸೆತ, 2 ಸಿಕ್ಸ್), ಲಿವಿಂಗ್‍ಸ್ಟೋನ್ 27 ರನ್ (31 ಎಸೆತ, 2 ಬೌಂಡರಿ, 2 ಸಿಕ್ಸ್) ಸಿಡಿಸಿ ಉತ್ತಮ ಬೆಂಬಲ ನೀಡಿದರು. ಬಟ್ಲರ್ 60 ರನ್ (80 ಎಸೆತ, 3 ಬೌಂಡರಿ, 2 ಸಿಕ್ಸ್) ಚಚ್ಚಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಜಡೇಜಾ ಹಿಡಿದ ಸೂಪರ್ ಕ್ಯಾಚ್‍ಗೆ ಬಲಿಯಾದರು. ಇತ್ತ ಕೆಲ ಕ್ರಮಾಂಕದ ಬ್ಯಾಟ್ಸ್‌ಬ್ಯಾನ್‌ಗಳ ಅಬ್ಬರಕ್ಕೆ ಹಾರ್ದಿಕ್ ಪಾಂಡ್ಯ ಮತ್ತು ಯಜುವೇಂದ್ರ ಚಹಲ್ ಸೇರಿಕೊಂಡು ಕಡಿವಾಣ ಹಾಕಿದರು.

    ಅಂತಿಮವಾಗಿ ಕ್ರೇಗ್ ಓವರ್ಟನ್ 32 ರನ್ (33 ಎಸೆತ, 1 ಬೌಂಡರಿ, 1 ಸಿಕ್ಸ್) ನೆರವಿನಿಂದ ಇಂಗ್ಲೆಂಡ್ ತಂಡ 250ರ ಗಡಿದಾಟಿ 45.5 ಓವರ್‌ಗಳಲ್ಲಿ 259 ರನ್ ಸಿಡಿಸಿ ಆಲೌಟ್ ಆಯಿತು. ಭಾರತದ ಪರ ಪಾಂಡ್ಯ 4 ವಿಕೆಟ್ ಕಿತ್ತು ಮಿಂಚಿದರೆ, ಚಹಲ್ 3 ವಿಕೆಟ್ ಪಡೆದು ಶೈನ್ ಆದರು. ಉಳಿದಂತೆ ಸಿರಾಜ್ 2 ಮತ್ತು ಜಡೇಜಾ 1 ವಿಕೆಟ್ ಪಡೆದರು.

    Live Tv
    [brid partner=56869869 player=32851 video=960834 autoplay=true]

  • ಇಂದು ಏಕದಿನ ಸರಣಿ ಕೊನೆಯ ಪಂದ್ಯ, ಸರಣಿ ಗೆಲ್ಲುವ ತವಕದಲ್ಲಿ ಭಾರತ

    ಇಂದು ಏಕದಿನ ಸರಣಿ ಕೊನೆಯ ಪಂದ್ಯ, ಸರಣಿ ಗೆಲ್ಲುವ ತವಕದಲ್ಲಿ ಭಾರತ

    ಲಂಡನ್: ಏಕದಿನ ಸರಣಿಯಲ್ಲಿ 1-1 ಅಂತರದಲ್ಲಿ ಗೆಲುವು ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇಂದು ಸರಣಿ ಜಯಕ್ಕಾಗಿ ಸೆಣಸಲಿವೆ.

    ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ರ ವೇಳೆಗೆ ಪಂದ್ಯ ಆರಂಭವಾಗಲಿದ್ದು, 2ನೇ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ ಶಾಕ್‌ನಿಂದ ಕಂಗೆಟ್ಟಿರುವ ಭಾರತ ಅಂತಿಮ ಪಂದ್ಯದಲ್ಲಿ ತನ್ನ ಬ್ಯಾಟಿಂಗ್ ಪ್ಲಾನ್ ಬದಲಿಸಿಕೊಂಡು ಸರಣಿ ಜಯದ ಎದುರು ನೋಡುತ್ತಿದೆ. ಇದನ್ನೂ ಓದಿ: ಈ ಸಮಯ ಕಳೆದು ಹೋಗುತ್ತದೆ ಕೊಹ್ಲಿ ಬೆಂಬಲಕ್ಕೆ ನಿಂತ ಬಾಬರ್ ಅಜಮ್

    ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದ ಭಾರತ 2ನೇ ಪಂದ್ಯದಲ್ಲಿ ಸೋಲು ಕಂಡಿತು. 247 ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ರೋಹಿತ್ ಶರ್ಮಾ ಪಡೆ 100 ರನ್‌ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್ ಪಾಂಡ್ಯ, ಜಡೇಜಾ ಹೋರಾಡಿದರೂ ಅವರ ಬ್ಯಾಟಿಂಗ್ ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾಗಲಿಲ್ಲ. ಇದೀಗ ಅಂತಿಮ ಪಂದ್ಯದಲ್ಲಿ ಟಿ20 ಮಾದರಿಯಂತೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿ ಕೈವಶ ಮಾಡಿಕೊಳ್ಳಲು ಭಾರತ ಮುಂದಾಗಿದೆ.

    ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರೊಂದಿಗೆ ಉತ್ತಮ ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ 2ನೇ ಪಂದ್ಯದಲ್ಲಿ ನಿರೀಕ್ಷಿತ ಆಟವಾಡದೇ ಇರುವುದು ತಂಡಕ್ಕೆ ಹಿನ್ನಡೆ ಉಂಟು ಮಾಡಿತು. ಅಲ್ಲದೆ ವಿರಾಟ್ ಕೊಹ್ಲಿ ಸಹ ಅಲ್ಪಮೊತ್ತಕ್ಕೆ ನಿರ್ಗಮಿಸಿದ್ದರು. ಅಂತಿಮ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಿಂದ ಆಟಗಾರರಿಂದಲೂ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: 2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ

    ಜಸ್ಪ್ರಿತ್‌ ಬುಮ್ರಾ ನೇತೃತ್ವದ ಬೌಲಿಂಗ್ ಪಡೆ ಉತ್ತಮ ಲಯದಲ್ಲಿದೆಯಾದರೂ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಪರಿಣಾಮಕಾರಿಯಾಗುತ್ತಿಲ್ಲ. ಹೀಗಾಗಿ ಇನ್ನಿಂಗ್ಸ್ ಮಧ್ಯದಲ್ಲಿ ಜೊತೆಯಾಟಗಳನ್ನು ಮುರಿಯುವುದರಲ್ಲಿ ಭಾರತ ಹಿಂದೆ ಬೀಳುತ್ತಿದೆ.

    ಮತ್ತೊಂದೆಡೆ ಇಂಗ್ಲೆಂಡ್ ಅಂತಿಮ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ನೀಡಲು ಕಾಯುತ್ತಿದೆ. ಟಿ20 ನಲ್ಲಿ ಭಾರತದ ವಿರುದ್ಧ ಸೋಲು ಕಂಡ ಇಂಗ್ಲೆಂಡ್ ಇದೀಗ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತದ ವಿರುದ್ಧ ಸೇಡು ತೀರಿಕೊಳ್ಳಲು ಕಾತರವಾಗಿದೆ.

    Live Tv

    [brid partner=56869869 player=32851 video=960834 autoplay=true]

  • ಈ ಸಮಯ ಕಳೆದು ಹೋಗುತ್ತದೆ ಕೊಹ್ಲಿ ಬೆಂಬಲಕ್ಕೆ ನಿಂತ ಬಾಬರ್ ಅಜಮ್

    ಈ ಸಮಯ ಕಳೆದು ಹೋಗುತ್ತದೆ ಕೊಹ್ಲಿ ಬೆಂಬಲಕ್ಕೆ ನಿಂತ ಬಾಬರ್ ಅಜಮ್

    ಇಸ್ಲಾಮಾಬಾದ್: ರನ್ ಬರ ಅನುಭವಿಸುತ್ತಿರುವ ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್‌ಮ್ಯಾನ್‌ ವಿರಾಟ್ ಕೊಹ್ಲಿಗೆ ವಿಶೇಷ ಸಂದೇಶದ ಮೂಲಕ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಬೆಂಬಲಕ್ಕೆ ನಿಂತಿದ್ದಾರೆ.

    ಟ್ವಿಟ್ಟರ್‌ನಲ್ಲಿ ಕೊಹ್ಲಿ ಜೊತೆಗಿರುವ ಫೋಟೋ ಹಂಚಿಕೊಂಡಿರುವ ಬಾಬರ್ ಅಜಮ್, ಈ ಸಮಯ ಕಳೆದು ಹೋಗುತ್ತದೆ. ದೃಢವಾಗಿರಿ ಎಂದು ಟ್ವೀಟ್ ಮಾಡಿ ಕೊಹ್ಲಿಗೆ ಬೆಂಬಲ ನೀಡಿ ಮರಳಿ ಕಿಂಗ್ ಕೊಹ್ಲಿಯಾಗಿ ಕಂಬ್ಯಾಕ್ ಮಾಡಲು ಪ್ರೇರಣೆ ನೀಡಿದ್ದಾರೆ. ಇದನ್ನೂ ಓದಿ: 2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ

    ಆಟಗಾರನಾಗಿ ನನಗೆ ಚೆನ್ನಾಗಿ ಗೊತ್ತು ಕೆಲವೊಮ್ಮೆ ಆಟದಲ್ಲಿ ಏರಿಳಿತ ಕಂಡುಬರುವುದು ಸಾಮಾನ್ಯ. ಈ ಸಮಯದಲ್ಲಿ ಆಟಗಾರನಿಗೆ ಬೆಂಬಲ ನೀಡಿ ಮತ್ತೆ ಆತ ಕಂಬ್ಯಾಕ್ ಮಾಡಲು ಸಹಕರಿಸುವುದು ತುಂಬಾ ಮುಖ್ಯ. ನಾನು ಕೂಡ ಮಾಡಿರುವುದು ಇದನ್ನೇ ಕೊಹ್ಲಿ ಬೆಂಬಲಕ್ಕೆ ನಿಂತಿದ್ದೇನೆ ಖಂಡಿತವಾಗಿಯುವ ಅವರು ಮತ್ತೆ ಹಿಂದಿರುಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಮೀರಾ ಸಾಲ್ವಿಯನ್ನು ಭೇಟಿಯಾದ ರೋಹಿತ್ – ಹಿಟ್‍ಮ್ಯಾನ್ ನಡೆಯನ್ನು ಮೆಚ್ಚಿದ ನೆಟ್ಟಿಗರು

    ನಿನ್ನೆ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 16 ರನ್ (25 ಎಸೆತ, 3 ಬೌಂಡರಿ) ಸಿಡಿಸಿ ಔಟ್ ಆಗುತ್ತಿದ್ದಂತೆ ಕೊಹ್ಲಿ ವೈಫಲ್ಯ ಅನುಭವಿಸುತ್ತಿರುವ ಬಗ್ಗೆ ಟೀಕೆ ಕೇಳಿಬರುತ್ತಿದೆ. ಅಲ್ಲದೇ 2019ರ ಬಳಿಕ ಮೂರು ಮಾದರಿ ಕ್ರಿಕೆಟ್‍ನಲ್ಲೂ ಕೊಹ್ಲಿ ಬ್ಯಾಟ್‍ನಿಂದ ಮೂರಂಕಿ ಮೊತ್ತ ದಾಖಲಾಗಿಲ್ಲ. ಹಾಗಾಗಿ ಕೊಹ್ಲಿ ರನ್ ಬರ ಎದುರಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • 2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ

    2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ

    ಲಂಡನ್: ಆರಂಭಿಕ ಪಂದ್ಯದಲ್ಲಿ ಮಾರಕ ವೇಗದ ಬೌಲಿಂಗ್ ಹಾಗೂ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮುಗ್ಗರಿಸಿತು. ರೀಸ್ ಟೋಪ್ಲಿ ಮಾರಕ ಬೌಲಿಂಗ್‌ಗೆ ತತ್ತರಿಸಿದ ಭಾರತ 100 ರನ್‌ಗಳ ಅಂತರದಿಂದ ಸೋಲು ಕಂಡಿತು.

    ಲಾರ್ಡ್ಸ್ ಅಂಗಳದಲ್ಲಿ ನಡೆದ 2ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 49 ಓವರಲ್ಲಿ 246 ಗಳ ಸಾಧಾರಣ ಮೊತ್ತ ಗಳಿಸಿ ಆಲೌಟಾಯಿತು. ಈ ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ 38.5 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 146 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಅತಿಥೇಯ ಇಂಗ್ಲೆಂಡ್ 3 ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲಗೊಂಡಿತು. ಇದನ್ನೂ ಓದಿ: ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

    ಆರಂಭಿಕ ಆಘಾತ, ಬ್ಯಾಟಿಂಗ್ ವೈಫಲ್ಯ:
    ಟಾಸ್ ಗೆದ್ದು ನಂತರ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕದಲ್ಲೇ ಆಘಾತ ಎದುರಿಸಿತು. ನಾಯಕ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಶೂನ್ಯ ಸುತ್ತಿದರು. ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 16 ರನ್ ಗಳಿಸಿ ಮತ್ತೆ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 27, ಹಾರ್ದಿಕ್ ಪಾಂಡ್ಯ 44 ಎಸೆತಗಳಲ್ಲಿ 29 ಹಾಗೂ ರವೀಂದ್ರ ಜಡೇಜಾ 44 ಎಸೆತಗಳಲ್ಲಿ 29 ರನ್‌ಗಳಿಸಿ ತಂಡಕ್ಕೆ ನೆರವಾದರು. ಆದರೆ ಅದನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಿ ಗೆಲುವು ದಾಖಲಿಸುವಲ್ಲಿ ವಿಫಲರಾದರು. ಇದನ್ನೂ ಓದಿ: ಸ್ಫೋಟಕ ಶತಕ- ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಸೂರ್ಯ ಭಾರೀ ಹೈಜಂಪ್‌

    ವಿಲಿ, ಮೊಯಿನ್ ಅಲಿ ಆಸರೆ:
    ಭಾರತದ ಬೌಲಿಂಗ್ ಪಡೆಯ ಪರಿಣಾಮಕಾರಿ ದಾಳಿಯಿಂದಾಗಿ ಇಂಗ್ಲೆಂಡ್ ತಂಡವು 102 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ 33ರನ್ (2 ಸಿಕ್ಸರ್, 2 ಬೌಂಡರಿ), ಮೊಯಿನ್ ಅಲಿ 47 (2 ಬೌಂಡರಿ, 2 ಸಿಕ್ಸರ್) ಜೊತೆಯಾಟದಲ್ಲಿ 6ನೇ ವಿಕೆಟ್‌ಗೆ 62 ರನ್‌ಗಳನ್ನು ಸಿಡಿಸಿದರು. ನಂತರದಲ್ಲಿ ಕ್ರೀಸ್‌ಗಿಳಿದು ಅಬ್ಬರಿಸಿದ ಡೇವಿಡ್ ವಿಲಿ 41 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ಜೇಸನ್ ರಾಯ್ 23ರನ್ ಗಳಿಸಿದರೆ ಜಾನಿ ಬೈರ್‌ಸ್ಟೋವ್ 6 ಬೌಂಡರಿಗಳೊಂದಿಗೆ 38 ರನ್ ಸಿಡಿಸಿದರು.

    ಭಾರತ ತಂಡಕ್ಕೆ ಈ ಪಂದ್ಯದಲ್ಲಿ ಆರಂಭದಲ್ಲಿ ಯಶಸ್ಸು ಸಿಗಲಿಲ್ಲ. ಆದರೆ 9ನೇ ಓವರ್‌ನಲ್ಲಿ ಜೇಸನ್ ರಾಯ್ ವಿಕೆಟ್ ಕಬಳಿಸಿದ ಹಾರ್ದಿಕ್ ಪಾಂಡ್ಯ ಮೊದಲ ಯಶಸ್ಸು ಪಡೆದರು. ಚಾಹಲ್ ಜಾನಿ ಬೈರ್‌ಸ್ಟೋವ್ ವಿಕೆಟ್ ಅನ್ನು 15ನೇ ಓವರ್‌ನಲ್ಲಿ ಉರುಳಿಸಿದ ಚಾಹಲ್ ತಮ್ಮ ಖಾತೆ ತೆರೆದರು. ಜೋ ರೂಟ್ ಅವರನ್ನು LBW ಮಾಡಿ ಪೆವಿಲಿಯನ್‌ಗೆ ಕಳುಹಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ನಲ್ಲಿ ಅಬ್ಬರಿಸುತ್ತಿದ್ದ ಡೇವಿಡ್ ವಿಲಿಗೆ ಅರ್ಧಶತಕ ಗಳಿಸಲು ಬುಮ್ರಾ ಬ್ರೇಕ್ ಹಾಕಿದರು. ಮೊದಲ ಪಂದ್ಯದಲ್ಲಿ 6 ವಿಕೆಟ್ ಗಳಿಸಿದ್ದ ಬುಮ್ರಾ ಇಲ್ಲಿ ಡೇವಿಡ್ ಸೇರಿದಂತೆ ಎರಡು ವಿಕೆಟ್ ಗಳಿಸಿದರು.

    ಒಟ್ಟಿನಲ್ಲಿ ಮೊದಲ ಪಂದ್ಯದಲ್ಲಿ ಬೌಲಿಂಗ್, ಬ್ಯಾಟಿಂಗ್ ವಿಭಾಗದಲ್ಲಿ ಅಬ್ಬರಿಸಿದ ಟೀಂ ಇಂಡಿಯಾ 2ನೇ ಪಂದ್ಯದಲ್ಲಿ ಎರಡೂ ವಿಭಾಗಗಳ ವೈಫಲ್ಯದಿಂದಾಗಿ ಸೋಲನ್ನು ಅನುಭವಿಸಿತು.

    Live Tv
    [brid partner=56869869 player=32851 video=960834 autoplay=true]

  • ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

    ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

    ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಕಾತರವಾಗಿದೆ.

    ಲಂಡನ್‌ನ ಓವೆಲ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 110 ರನ್ ಗಳಿಸಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ಇಂದು 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಲಿದೆ. ಲಂಡನ್‌ನ ಲಾರ್ಡ್ಸ್ ಅಂಗಳದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ 2ನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಗುರಿ ಹೊಂದಿದ್ದು, ಬೌಲಿಂಗ್ ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಿದೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ಟಿ20 ಸರಣಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ, ಮೊದಲ ಏಕದಿನದಲ್ಲಿ ಆಂಗ್ಲರನ್ನು ಮಣ್ಣುಮುಕ್ಕಿಸಿತ್ತು. ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ ತನ್ನ ಲಯ ಮುಂದುವರಿಸಲು ಎದುರು ನೋಡುತ್ತಿದ್ದರೆ, ಇಂಗ್ಲೆಂಡ್ ಸಮಬಲ ಸಾಧಿಸಿ ಮುಖಭಂಗ ತಪ್ಪಿಸಿಕೊಳ್ಳುವ ಕಾತರದಲ್ಲಿದೆ.

    ನಂ.1 ಸ್ಥಾನಕ್ಕೆ ಮರಳಿರುವ ಬುಮ್ರಾ ಮತ್ತೊಮ್ಮೆ ಭಾರತದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದು, ಮೊಹಮದ್ ಶಮಿ, ಪ್ರಸಿದ್ಧ್ ಕೃಷ್ಣ ಬೆಂಬಲಿಸಲಿದ್ದಾರೆ. ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ರವೀಂದ್ರ ಜಡೇಜಾ ಸ್ಥಾನ ಉಳಿಸಿಕೊಳ್ಳುವುದು ಖಚಿತವಾಗಿದೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ ಬೆಂಕಿ ಬೌಲಿಂಗ್‌ ಇದೀಗ ಬುಮ್ರಾ ಏಕದಿನ ಕ್ರಿಕೆಟ್‌ನ ನಂ.1 ಬೌಲರ್‌

    ರೋಹಿತ್ ಅಬ್ಬರದ ಫಾರ್ಮ್ ಭಾರತಕ್ಕೆ ಮತ್ತಷ್ಟು ಬಲ ತುಂಬಿದ್ದು, ಶಿಖರ್ ಧವನ್ ಸಹ ಭರವಸೆ ಮೂಡಿಸಿದ್ದಾರೆ. ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅಲಭ್ಯರಾಗಲಿದ್ದು, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್, ರಿಷಬ್ ಸಂತ್, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾಗಿ ಕಣಕ್ಕಿಳಿದು ಅಬ್ಬರಿಸಲಿದ್ದಾರೆ.

    ಇಂಗ್ಲೆಂಡ್ ಬ್ಯಾಟರ್‌ಗಳು, ಬೌಲರ್‌ಗಳೂ ನಿರಂತರವಾಗಿ ಒತ್ತಡಕ್ಕೆ ಸಿಲುಕುತ್ತಿದ್ದು, ಇದರ ಲಾಭ ಪಡೆಯಲು ಭಾರತ ಇನ್ನಷ್ಟು ರಣತಂತ್ರಗಳನ್ನು ಹೂಡಿದೆ.

    ವಿರಾಟ್ ಕೊಹ್ಲಿ ಅಲಭ್ಯ: ಸತತ ಬ್ಯಾಟಿಂಗ್ ಲಯದ ಸಮಸ್ಯೆ ಎದುರಿಸುತ್ತಿರುವ ವಿರಾಟ್ ಕೊಹ್ಲಿಗೆ ಗಾಯದ ಸಮಸ್ಯೆಯೂ ಕಾಡುತ್ತಿದ್ದು, ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು 2ನೇ ಏಕದಿನ ಪಂದ್ಯಕ್ಕೂ ಆಯ್ಕೆಗೆ ಲಭ್ಯರಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಸ್ಫೋಟಕ ಶತಕ- ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಸೂರ್ಯ ಭಾರೀ ಹೈಜಂಪ್‌

    ಸ್ಫೋಟಕ ಶತಕ- ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಸೂರ್ಯ ಭಾರೀ ಹೈಜಂಪ್‌

    ದುಬೈ: ಇಂಗ್ಲೆಂಡ್‌ ವಿರುದ್ಧ ಕೊನೆಯ ಟಿ-20 ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿದ್ದ ಸೂರ್ಯಕುಮಾರ್‌ ಯಾದವ್‌ ಐಸಿಸಿ ಟಿ-20  ಬ್ಯಾಟರ್‌  ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಜೀವಮಾನ ಶ್ರೇಷ್ಠ ಸಾಧನೆ ಮಾಡಿದ್ದಾರೆ.

    ಸೂರ್ಯಕುಮಾರ್‌ ಯಾದವ್‌ 44 ಸ್ಥಾನ ಏರಿ 732 ರೇಟಿಂಗ್‌ ಪಡೆದು ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ. ಸೂರ್ಯ ಹೊರತು ಪಡಿಸಿ ಟಾಪ್‌ 10 ಪಟ್ಟಿಯಲ್ಲಿ ಯಾವೊಬ್ಬ ಟೀಂ ಇಂಡಿಯಾ ಆಟಗಾರರು ಸ್ಥಾನ ಪಡೆದಿಲ್ಲ. ಪಟ್ಟಿಯಲ್ಲಿ ಪಾಕಿಸ್ತಾನ ಬಾಬರ್‌ ಅಜಂ ಮತ್ತು ಮೊಹಮ್ಮದ್‌ ರಿಜ್ವಾನ್‌ ಅನುಕ್ರಮವಾಗಿ ಮೊದಲ ಎರಡು ಸ್ಥಾನದಲ್ಲೇ ಮುಂದುವರಿದಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ ಬೆಂಕಿ ಬೌಲಿಂಗ್‌ ಇದೀಗ ಬುಮ್ರಾ ಏಕದಿನ ಕ್ರಿಕೆಟ್‌ನ ನಂ.1 ಬೌಲರ್‌

    ಪಟ್ಟಿಯಲ್ಲಿ ಇಶನ್‌ ಕಿಶನ್‌ 12, ರೋಹಿತ್‌ ಶರ್ಮಾ 18, ಶ್ರೇಯಸ್‌ ಅಯ್ಯರ್‌ 21, ವಿರಾಟ್‌ ಕೊಹ್ಲಿ 25ನೇ ಸ್ಥಾನ ಪಡೆದಿದ್ದಾರೆ.

    ಇಂಗ್ಲೆಂಡ್‌ ವಿರುದ್ಧ ಮೂರನೇ ಟಿ 20 ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ 117 ರನ್‌(55 ಎಸೆತ, 14 ಬೌಂಡರಿ, 6 ಸಿಕ್ಸರ್‌) ಸಿಡಿಸಿದ್ದರು. ಸೂರ್ಯ ಸ್ಫೋಟಕ ಶತಕ ಸಿಡಿಸಿದ್ದರೂ ಭಾರತ ತಂಡ 17 ರನ್‌ಗಳಿಂದ ಸೋತಿತ್ತು.

    ಕಳೆದ ವರ್ಷ ಮಾರ್ಚ್‌ ತಿಂಗಳಿನಲ್ಲಿ ಇಂಗ್ಲೆಂಡ್‌ ವಿರುದ್ಧ ಮೊದಲ ಟಿ 20 ಪಂದ್ಯವಾಡಿರುವ 31 ವರ್ಷದ ಸೂರ್ಯ ಇಲ್ಲಿಯವರೆಗೆ 19 ಪಂದ್ಯವಾಡಿದ್ದಾರೆ. 17 ಇನ್ನಿಂಗ್ಸ್‌ಗಳಿಂದ 38.35 ಸರಾಸರಿಯಲ್ಲಿ ಒಟ್ಟು 537 ರನ್‌ ಹೊಡೆದಿದ್ದಾರೆ. 4 ಅರ್ಧಶತಕ, 1 ಶತಕ ಸಿಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]