ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಭಾರತದ ಸ್ಟಾರ್ ಬ್ಯಾಟ್ಸ್‌ಮ್ಯಾನ್ ವಿರಾಟ್ ಕೊಹ್ಲಿ 2ನೇ ಏಕದಿನ ಪಂದ್ಯವನ್ನು ಆಡಲ್ಲ ಎಂದು ಮೂಲಗಳಿಂದ ವರದಿಯಾಗಿದೆ.
ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯವಾಡಿದ್ದ ಕೊಹ್ಲಿ ನಂತರ ತೊಡೆಸಂದು ಗಾಯದಿಂದಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಗಾಯದಿಂದ ಚೇತರಿಕೆ ಕಾಣದಿರುವ ಕಾರಣ ಲಾರ್ಡ್ಸ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಿಂದಲೂ ಕೊಹ್ಲಿ ಹೊರಗುಳಿಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ
ಕೆನ್ನಿಂಗ್ಟನ್ ಓವಲ್‍ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್‍ಗಳ ಭರ್ಜರಿ ಜಯದೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇಂಗ್ಲೆಂಡ್ ತಂಡ ತವರಿನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಕೇವಲ 25.2 ಓವರ್‌ಗಳಲ್ಲಿ 110 ರನ್‍ಗಳಿಗೆ ಆಲೌಟ್ ಆಗಿ ಹೀನಾಯ ಪ್ರದರ್ಶನ ತೋರಿತ್ತು. ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಕಂಬ್ಯಾಕ್ ಮಾಡುವ ಹುಮ್ಮಸ್ಸಿನಲ್ಲಿದೆ. ಇತ್ತ ಭಾರತ ತಂಡ ಎರಡನೇ ಪಂದ್ಯದಲ್ಲೂ ಉತ್ತಮ ಪ್ರದರ್ಶನ ತೋರಿ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ. ಇದನ್ನೂ ಓದಿ: 9 ವರ್ಷದ ಬಾಲಕನಾಗಿದ್ದಾಗ ನನ್ನನ್ನು ಕಳ್ಳಸಾಗಣೆ ಮಾಡಲಾಗಿತ್ತು: ಒಲಿಂಪಿಕ್, ವಿಶ್ವ ಚಾಂಪಿಯನ್‌ನ ಸ್ಫೋಟಕ ಹೇಳಿಕೆ
ಏಕೈಕ ಟೆಸ್ಟ್ ಪಂದ್ಯದಲ್ಲಿ ಸೋತ ಭಾರತ ತಂಡ ಬಳಿಕ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದಿತ್ತು. ಇದೀಗ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದ್ದು, ಸರಣಿ ಗೆಲ್ಲಲು ಇನ್ನೊಂದು ಜಯ ಅಗತ್ಯವಿದೆ. ನಾಳೆ ಲಾರ್ಡ್ಸ್‌ನಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದೆ.
Live Tv
[brid partner=56869869 player=32851 video=960834 autoplay=true]
ಲಂಡನ್: ಜಸ್ಪಿತ್ ಬುಮ್ರಾ, ಮೊಹಮದ್ ಶಮಿ ಮಾರಕ ಬೌಲಿಂಗ್ ದಾಳಿ ಹಾಗೂ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ಇಂಗ್ಲೆಂಡ್‌ನ ಕೆನ್ನಿಂಗ್ಟನ್‌ನ ಓವಲ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಇಂಗ್ಲೆಂಡ್ ತಂಡ 25.2 ಓವರ್‌ಗಳಲ್ಲಿ 110 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಭಾರತ 18.4 ಓವರ್‌ಗಳಲ್ಲೇ ಯಾವುದೇ ವಿಕೆಟ್ ನಷ್ಟವಿಲ್ಲದೇ 114 ರನ್‌ಗಳಿಸಿ ಆಂಗ್ಲರನ್ನು ಮೊದಲ ಪಂದ್ಯದಲ್ಲೇ ಮಣ್ಣು ಮುಕ್ಕಿಸಿತು.
ರೋಹಿತ್ ಆಕರ್ಷಕ ಅರ್ಧ ಶತಕ:
ಐಪಿಎಲ್‌ನಲ್ಲಿ ತೀವ್ರ ಮುಖಭಂಗಕ್ಕೀಡಾಗಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದು, ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರೋಹಿತ್ ಶರ್ಮಾ 58 ಎಸೆತಗಳಲ್ಲಿ 76 ರನ್ (7 ಬೌಂಡರಿ, 5 ಸಿಕ್ಸರ್) ಗಳಿಸಿದರು. ಇದಕ್ಕೆ ಜೊತೆಯಾಗಿ ಸಾಥ್ ನೀಡಿದ ಶಿಖರ್ ಧವನ್ 54 ಎಸೆತಗಳಲ್ಲಿ 31 ರನ್ ( 4 ಬೌಂಡರಿ) ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ನೆರವಾದರು.
ಬೂಮ್ರಾ ಬೌಲಿಂಗ್, ಶಮಿ ಶೈನ್:
ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ತನ್ನ ಮೊದಲ ಓವರ್‌ನಿಂದಲೇ ಆರ್ಭಟಿಸಲು ಆರಂಭಿಸಿದ್ದರು. ತನ್ನ ಪ್ರಥಮ ಓವರ್‌ನಲ್ಲಿ ಜೇಸನ್ ರಾಯ್ ಹಾಗೂ ಜೋ ರೂಟ್ ಇಬ್ಬರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಬಳಿಕ 7 ರನ್‌ಗಳಿಸಿದ್ದ ಬೈರ್‌ಸ್ಟೋವ್ ಕೂಡ ಬೂಮ್ರಾ ದಾಳಿಗೆ ಬಲಿಯಾದರು. ನಂತರದಲ್ಲಿ ಕ್ರೀಸ್‌ಗಿಳಿದ ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರಿಡನ್ ಕೇರ್ಸ್ ಶೂನ್ಯ ಸುತ್ತಿ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಮೊಹಮದ್ ಶಮಿ 3 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ ಒಂದು ವಿಕೆಟ್ ಪಡೆದು ಮಿಂಚಿದರು.
ಇಂಗ್ಲೆಂಡ್‌ಗೆ ಆರಂಭಿಕ ಆಘಾತ:
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಜೇಸನ್ ರಾಯ್ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಆಘಾತ ಅನುಭವಿಸಿತು. ನಂತರ ಬಂದ ಜೋ ರೂಟ್, ಬೆನ್‌ಸ್ಟೋಕ್ಸ್ ಸಹ ಶೂನ್ಯ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ಸಂಕಷ್ಟಕ್ಕೆ ತುತ್ತಾಯಿತು. ಇದನ್ನೂ ಓದಿ: ವೈರಲ್ ಆಗುತ್ತಿದೆ SKY ಸಿಡಿಸಿದ ಬ್ಯಾಕ್‍ವರ್ಡ್ ಪಾಯಿಂಟ್ ಸಾಲಿಡ್ ಸಿಕ್ಸ್
ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಜೋಸ್ ಬಟ್ಲರ್ ತಂಡಕ್ಕೆ ಆಸರೆಯಾಗಲು ಮುಂದಾದರು ಆದರೆ ಸಿಕ್ಸರ್ ಸಿಡಿಸುವ ಭರದಲ್ಲಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಆದರೂ ತಂಡಕ್ಕೆ 30 ರನ್‌ಗಳನ್ನು ತಂದುಕೊಟ್ಟರು. ನಂತರಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಇಂಗ್ಲೆಂಡ್ ತಂಡವು ಹೀನಾಯವಾಗಿ ಸೋಲನ್ನು ಅನುಭವಿಸಿತು. ಡೇವಿಡ್ ವಿಲ್ಲಿ 21 ರನ್ ಗಳಿಸಿದರೂ ಭಾರತದ ಬೌಲರ್‌ಗಳ ಪರಾಕ್ರಮದ ಮುಂದೆ ಇಂಗ್ಲೆಂಡ್ ಮಂಕಾಯಿತು. ಅಂತಿಮವಾಗಿ 25.2 ಓವರ್‌ಗಳಲ್ಲಿ 110ಕ್ಕೆ ಇಂಗ್ಲೆಂಡ್ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.
Live Tv
[brid partner=56869869 player=32851 video=960834 autoplay=true]
ಲಂಡನ್: ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮ್ಯಾನ್ ಸೂರ್ಯಕುಮಾರ್ ಯಾದವ್ ಬ್ಯಾಕ್‍ವರ್ಡ್ ಪಾಯಿಂಟ್ ಮೂಲಕ ಸಿಡಿಸಿದ ಭರ್ಜರಿ ಸಿಕ್ಸ್ ಒಂದು ವೈರಲ್ ಆಗುತ್ತಿದೆ.
ನಿನ್ನೆ ನಡೆದ ಇಂಗ್ಲೆಂಡ್ ಮತ್ತು ಭಾತರತ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಸ್ಫೋಟಕ ಆಟದ ಮೂಲಕ ಶತಕ ಸಿಡಿಸಿ ಮಿಂಚಿದ್ದರು. ಇಂಗ್ಲೆಂಡ್ ನೀಡಿದ 216 ರನ್‍ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡ ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕ್ರಿಸ್‍ಗೆ ಆಗಮಿಸಿದ ಸೂರ್ಯಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ 117 ರನ್ (55 ಎಸೆತ, 14 ಬೌಂಡರಿ, 6 ಸಿಕ್ಸ್) ಚಚ್ಚಿ ತಂಡದ ಗೆಲುವಿಗಾಗಿ ಹೋರಾಡಿ ಅಭಿಮಾನಿಗಳ ಮನಗೆದ್ದಿದ್ದಾರೆ. ಅದರಲ್ಲೂ ಸೂರ್ಯಕುಮಾರ್ ಯಾದವ್ ಸಿಡಿಸಿದ 6 ಸಿಕ್ಸರ್‌ಗಳು ಮನಮೋಹಕವಾಗಿತ್ತು. ಈ ಪೈಕಿ ಇದೀಗ ಬ್ಯಾಕ್‍ವರ್ಡ್ ಪಾಯಿಂಟ್‍ನತ್ತ ಸಿಡಿಸಿದ ಸಾಲಿಡ್ ಸಿಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪಂದ್ಯ ಸೋತು ಸರಣಿ ಗೆದ್ದ ಭಾರತ – ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್‌ಗೆ 17 ರನ್‌ಗಳ ಜಯ
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 215 ರನ್ ಬಾರಿಸಿತು. 216 ರನ್‍ಗಳ ಗುರಿ ಬೆನ್ನಟ್ಟಿದ ಭಾರತ ತಂಡದ ಪರ ಸೂರ್ಯಕುಮಾರ್ ಯಾದವ್ 18 ಓವರ್ ಅಂತ್ಯದ ವರೆಗೆ ಹೋರಾಡಿ ಕೊನೆ ಕ್ಷಣದಲ್ಲಿ ವಿಕೆಟ್ ಕೈಜೆಲ್ಲಿಕೊಂಡರು. ಈ ಮೂಲಕ ಭಾರತದ ಗೆಲುವಿನ ಆಸೆ ಕಮರಿತು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿ ಸೋಲುಂಡಿತು. ಇತ್ತ ಸೂರ್ಯಕುಮಾರ್ ಯಾದವ್ ಸಿಡಿಸಿದ ಚೊಚ್ಚಲ ಶತಕ ವ್ಯರ್ಥವಾದರೂ, ಟೀಂ ಇಂಡಿಯಾ ಪರ ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ 5ನೇ ಆಟಗಾರ ಎಂಬ ಹೆಗ್ಗಳಿಕೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿಯ ಜಾಹೀರಾತು ನಿಲ್ಲಿಸಿದ ವಿವೋ
🙌👑 BOW DOWN! The entirety of Trent Bridge stood and applauded the heroics of SKY!
ಲಂಡನ್: ಡೇವಿಡ್ ಮಲನ್ ಸ್ಫೋಟಕ ಅರ್ಧ ಶತಕದ ನೆರವಿನಿಂದ ನಾಟಿಂಗ್ ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 17ರನ್‌ಗಳ ಜಯ ಸಾಧಿಸಿತು.
ಟಾಸ್‌ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 215ರನ್ ಗಳಿಸಿ 216 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 198 ರನ್‌ಗಳನ್ನು ಗಳಿಸುವ ಮೂಲಕ ತನ್ನ ಸೋಲನ್ನು ಒಪ್ಪಿಕೊಂಡಿತು. ಇದನ್ನೂ ಓದಿ: ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಲು ರೋಹಿತ್ ಶರ್ಮಾಗೆ ಇನ್ನೊಂದೆ ಹೆಜ್ಜೆ
ಮೂರು ಪಂದ್ಯಗಳ ಸರಣಿಯನ್ನು ಭಾರತ ಈಗಾಗಲೇ 2–0 ಅಂತರದಲ್ಲಿ ಗೆದ್ದುಕೊಂಡಿದೆ. ಸರಣಿಯನ್ನು ಕೈವಶ ಮಾಡಿಕೊಂಡಿದ್ದ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ದೊಡ್ಡ ಬದಲಾವಣೆಯೊಂದಿಗೆ ಕಣಕ್ಕಿಳಿದು ಯುವ ಆಟಗಾರರಿಗೆ ಅವಕಾಶ ಮಾಡಿಕೊಟ್ಟಿತು.
ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ:
ಟಾಸ್ ಸೋತು ನಂತರ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪವರ್ ಪ್ಲೇನಲ್ಲೇ ವಿಕೆಟ್‌ಗಳನ್ನು ಕಳೆದುಕೊಂಡಿತು. ಆರಂಭಿಕರಾದ ನಾಯಕ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಬೇಗನೆ ನಿರ್ಗಮಿಸಿದರು. ರೋಹಿತ್ 12 ಎಸೆತಗಳಲ್ಲಿ 11 ರನ್ ಹಾಗೂ ರಿಷಭ್ 5 ಎಸೆತಗಳಲ್ಲಿ 1 ರನ್‌ಗಳಿಸಿ ಹೊರನಡೆದರು. ಸತತ ಬ್ಯಾಟಿಂಗ್ ವೈಫಲ್ಯ ಕಂಡಿರುವ ವಿರಾಟ್ ಕೊಹ್ಲಿ 6 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರು.
ಸೂರ್ಯಕುಮಾರ್ ಸ್ಫೋಟಕ ಶತಕ:
3ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಸೂರ್ಯಕುಮಾರ್ ಸ್ಪೋಟಕ ಶತಕ ಸಿಡಿಸಿದರು. ಗೆಲುವಿನ ವಿಶ್ವಾಸಕ ಕಳೆದುಕೊಂಡಿದ್ದ ಟೀ ಇಂಡಿಯಾಕ್ಕೆ ಮತ್ತೆ ಗೆಲುವಿನ ಆಸೆ ಚಿಗುರಿಸಿದ್ದರು. ಆಂಗ್ಲ ಬೌಲರ್‌ಗಳರ ಬೆಂಡೆತ್ತಿದ್ದ ಯಾದವ್ 48 ಎಸೆಗಳಲ್ಲೇ 5 ಸಿಕ್ಸರ್ ಮತ್ತು 12 ಬೌಂಡರಿಗಳನ್ನು ಚಚ್ಚಿ 101 ರನ್‌ಗಳಿಸಿದರು. ನಂತರವೂ ಆಂಗ್ಲರ ವಿರುದ್ಧ ದಾಳಿ ಮುಂದುವರಿಸಿದರು. ಸೂರ್ಯಕುಮಾರ್ ಯಾದವ್ 117 ರನ್(6 ಸಿಕ್ಸರ್, 14 ಬೌಂಡರಿ) ಗಳಿಸಿದರೆ, ಶ್ರೇಯಸ್ ಅಯ್ಯರ್ 28 ರನ್ (23 ಎಸೆತ, 2 ಸಿಕ್ಸರ್) ಗಳಿಸಿ ತಂಡಕ್ಕೆ ನೆರವಾದರು. ದಿನೇಶ್ ಕಾರ್ತಿಕ್ 6ರನ್, ರವಿಂದ್ರ ಜಡೇಜಾ 7 ರನ್ ಹಾಗೂ ಹರ್ಷಲ್ ಪಟೇಲ್ 5 ರನ್‌ಗಳಿಸಿದರು.
ಟಾಸ್‌ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡದಿಂದ ಆರಂಭಿಕರಾಗಿ ಕಣಕ್ಕಿಳಿದ ಜೇಸನ್ ರಾಯ್ ಹಾಗೂ ಜೋಸ್ ಬಟ್ಲರ್ ನಿಧಾನಗತಿಯಲ್ಲೇ ಬ್ಯಾಟಿಂಗ್ ಆರಂಭಿಸಿದ್ದರು. ರಾಯ್ 26 ಎಸೆತಗಳಲ್ಲಿ 27 ರನ್‌ಗಳಿಸಿದರೆ, ಬಟ್ಲರ್ 2 ಬೌಂಡರಿ 1 ಸಿಕ್ಸರ್‌ಗಳೊಂದಿಗೆ 9 ಎಸೆತಗಳಲ್ಲಿ 18 ರನ್‌ಗಳಿಸಿ ಪೆವಿಲಿಯನ್ ಸೇರಿದರು. 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಡೇವಿಡ್ ಮಲನ್ ತಮ್ಮ ಸ್ಫೋಟಕ ಅರ್ಧ ಶತಕದ ನೆರವಿಂದ ತಂಡವನ್ನು 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಲಿಯಾಂ ಲಿವಿಂಗ್‌ಸ್ಟೋನ್ ಸಹ ಇದಕ್ಕೆ ಜೊತೆಯಾದರು.
ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ 39 ಎಸೆತಗಳಲ್ಲಿ 77 ರನ್ (6 ಬೌಂಡರಿ, 5ಸಿಕ್ಸರ್) ಗಳಿಸಿದರೆ, 4ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಲಿಯಾಂ ಲಿವಿಂಗ್‌ಸ್ಟೋನ್ 29 ಎಸೆತಗಳಲ್ಲಿ 42 ರನ್ (4 ಸಿಕ್ಸರ್) ಗಳಿಸಿ ಅಜೇಯರಾಗುಳಿದರು. ಇಬ್ಬರ ಸಾಂಘಿಕ ಬ್ಯಾಟಿಂಗ್ ಪ್ರದರ್ಶನದಿಂದ ಇಂಗ್ಲೆಂಡ್ ತಂಡವು 200ರ ಗಡಿ ದಾಟಿತು. ಫಿಲ್‌ಸಾಲ್ಟ್ 8 ರನ್, ಹ್ಯಾರಿಬುಕ್ 19, ಚೆರೀಸ್ ಜೊರ್ಡನ್ 11 ರನ್‌ಗಳಿಸಿದರೆ ಭರವಸೆ ಆಟಗಾರ ಮೊಯಿನ್ ಅಲಿ ಶೂನ್ಯಕ್ಕೆ ನಿರ್ಗಮಿಸಿದರು.
ರನ್ ಏರಿದ್ದು ಹೇಗೆ?
34 ಎಸೆತ 50 ರನ್
68 ಎಸೆತ 100 ರನ್
88 ಎಸೆತ 150 ರನ್
120 ಎಸೆತ 215 ರನ್
ಟೀಂ ಇಂಡಿಯಾದಲ್ಲಿ ಮೆಘಾ ಬದಲಾವಣೆ: ಭಾರತ ಈ ಬಾರಿ ನಾಲ್ಕು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು ವಿಶೇಷವಾಗಿತ್ತು. ಯಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಅಂತಿಮ ಪಂದ್ಯದಲ್ಲಿ ಕೈಬಿಡಲಾಗಿತ್ತು. ಶೀಘ್ರವೇ ಭಾರತ ಮತ್ತು ಇಂಗ್ಲೆಂಡ್ ನಡುವೆ ಏಕದಿನ ಸರಣಿ ಆರಂಭವಾಗಲಿದ್ದು, ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಇವರ ಬದಲಾಗಿ ರವಿ ಬಿಶ್ನೋಯ್, ಉಮ್ರಾನ್ ಮಲಿಕ್, ಅವೇಶ್ ಖಾನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಐರ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ದೀಪಕ್ ಹೂಡಾ ಅವರನ್ನು ಪಂದ್ಯದಿಂದ ಕೈಬಿಟ್ಟದ್ದು ಹಲವು ಹಿರಿಯ ಕ್ರಿಕೆಟಿಗರಲ್ಲಿ ಬೇಸರ ತರಿಸಿತು.
Live Tv
[brid partner=56869869 player=32851 video=960834 autoplay=true]
ಮುಂಬೈ: ಟೀಂ ಇಂಡಿಯಾ ನಾಯಕ ಹಾಗೂ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತದ ಯಶಸ್ವಿ ಪ್ರದರ್ಶನ ಮುಂದುವರಿದಿದೆ. ಐಪಿಎಲ್‌ನಲ್ಲಿ ಶೂನ್ಯ ಸುತ್ತಿ ತೀವ್ರ ಮುಖಭಂಗಕ್ಕೀಡಾಗಿದ್ದ ರೋಹಿತ್ ಶರ್ಮಾ ಈಗ ಫಾರ್ಮ್‌ನಲ್ಲಿದ್ದು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ಈಗಾಗಲೇ ಇಂಗ್ಲೆಂಡ್ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ರೋಹಿತ್ ಶರ್ಮಾ ನೇತೃತ್ವದಲ್ಲಿ ಮುನ್ನಡೆ ಸಾಧಿಸಿದೆ. ಬೆಸ್ಟ್ ಆಫ್ 3ರಲ್ಲಿ ಕ್ರಮವಾಗಿ 50 ಹಾಗೂ 49 ರನ್‌ಗಳ ಅಂತರದಿಂದ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 3ನೇ ಪಂದ್ಯದಲ್ಲಿ ಗೆದ್ದು ಇಂಗ್ಲೆಂಡ್ ತವರಲ್ಲೇ ವೈಟ್‌ವಾಶ್ ಮಾಡುವ ಗುರಿ ಹೊಂದಿದೆ. ಈ ನಡುವೆ ನಾಯಕ ರೋಹಿತ್ ಶರ್ಮಾ ಮತ್ತೊಂದು ವಿಶ್ವದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಇದನ್ನೂ ಓದಿ: ಕ್ಯಾಪ್ಟನ್ ಪಟ್ಟದಿಂದ ಇಳಿಯಲಿದ್ದಾರೆ ಕೊಹ್ಲಿ, ರೋಹಿತ್‍ಗೆ ನಾಯಕತ್ವ
ರಿಕಿ ಪಾಂಟಿಂಗ್ ವಿಶ್ವದಾಖಲೆ ಸರಿಗಟ್ಟುವ ಅವಕಾಶ: ಇಂಗ್ಲೆಂಡ್ ವಿರುದ್ಧದ ಟಿ20ಯ 2 ಪಂದ್ಯಗಳಲ್ಲಿ ಗೆಲ್ಲುವ ಮೂಲಕ ರೋಹಿತ್ ನಾಯಕನಾಗಿ ಸತತ 19 ಪಂದ್ಯಗಳನ್ನ ಗೆದ್ದಂತಹ ಸಾಧನೆ ಮಾಡಿದ್ದಾರೆ. ಟ್ರೆಂಟ್‌ಬ್ರಿಡ್ಜ್‌ನಲ್ಲಿ ನಡೆಯಲಿರುವ 3ನೇ ಪಂದ್ಯವನ್ನೂ ಗೆದ್ದರೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಲಿದ್ದಾರೆ. ಇದನ್ನೂ ಓದಿ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ನೇಮಕ
2003ರಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ರಿಕಿ ಪಾಂಟಿಂಗ್ ಅವರ ನೇತೃತ್ವದಲ್ಲಿ ಆಸ್ಟ್ರೇಲಿಯಾ ತಂಡವು 20 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದು ಪುರುಷರ ಕ್ರಿಕೆಟ್ ಪಂದ್ಯದಲ್ಲಿ ಅತಿದೊಡ್ಡ ಗೆಲುವಾಗಿದೆ. ಆದರೆ ಈಗಾಗಲೇ 19 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ರೋಹಿತ್ ಶರ್ಮಾ ತಂಡವು ಇನ್ನೊಂದು ಪಂದ್ಯದಲ್ಲಿ ಗೆದ್ದರೆ ರೋಹಿತ್ ವಿಶ್ವದಾಖಲೆಗೆ ಖ್ಯಾತಿಯಾಗಲಿದ್ದಾರೆ.
ಟಿ20 ನಾಯಕತ್ವದ ದಾಖಲೆ: ಟೀಂ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಅಮೋಘ ದಾಖಲೆ ಬರೆದಿದ್ದಾರೆ. ಇದುವರೆಗೆ 30 ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಭಾರತವನ್ನ ಮುನ್ನಡೆಸಿರುವ ರೋಹಿತ್ ಶರ್ಮಾ 26 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದು, ಇವರ ನಾಯಕತ್ವದಲ್ಲಿ ಕೇವಲ 4 ಪಂದ್ಯಗಳನ್ನಷ್ಟೇ ಭಾರತ ಸೋತಿದೆ. ಇನ್ನು ಗೆಲುವಿನಲ್ಲಿ ಶೇ.86.66ರಷ್ಟು ಸರಾಸರಿ ಹೊಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಲಂಡನ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 49 ರನ್‍ಗಳ ಭರ್ಜರಿ ಜಯಗಳಿಸಿದ ಬಳಿಕ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ನಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಕಾಣಿಸಿಕೊಂಡಿದ್ದಾರೆ.
ಟೀಂ ಇಂಡಿಯಾ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. 2ನೇ ಟಿ20 ಪಂದ್ಯ ಗೆದ್ದ ಬಳಿಕ ಧೋನಿ ಭಾರತ ತಂಡದ ಡ್ರೆಸ್ಸಿಂಗ್ ರೂಮ್‍ಗೆ ತೆರಳಿ ಟೀಂ ಇಂಡಿಯಾ ಆಟಗಾರೊಂದಿಗೆ ಮಾತನಾಡಿದ್ದಾರೆ. ಧೋನಿ ತಂಡದ ಆಟಗಾರೊಂದಿಗಿರುವ ಫೋಟೋವನ್ನು ಬಿಸಿಸಿಐ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಆಂಗ್ಲರ ವಿರುದ್ಧ 49 ರನ್‌ಗಳ ಜಯ- ಸರಣಿ ಗೆದ್ದ ಭಾರತ
ನಿನ್ನೆ ನಡೆದ ಪಂದ್ಯದಲ್ಲಿ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿ ಇಂಗ್ಲೆಂಡ್‍ಗೆ 171 ರನ್‍ಗಳ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ಭಾರತದ ಬೌಲರ್‌ಗಳ ಬಿಗಿ ದಾಳಿಗೆ ನಲುಗಿ ಕೇವಲ 121 ರನ್‍ಗಳಿಗೆ ಗಂಟುಮೂಟೆ ಕಟ್ಟಿ ಸೋಲನುಭವಿಸಿತು. ಭಾರತ ತಂಡ 49 ರನ್‍ಗಳ ಅಂತರದ ಜಯದೊಂದಿಗೆ ತವರಿನ ತಂಡಕ್ಕೆ ಟಕ್ಕರ್ ನೀಡಿತು. ಇದನ್ನೂ ಓದಿ: ರಿಮೋಟ್ ಕಂಟ್ರೋಲ್ ಕಾರ್ ಮೂಲಕ ಗ್ರೌಂಡ್‌ಗೆ ಪ್ರವೇಶಿಸಿತು ಕ್ರಿಕೆಟ್ ಚೆಂಡು
ಭಾರತದ ಪರ ರವೀಂದ್ರ ಜಡೇಜಾ ಅಜೇಯ 46 ರನ್ (29 ಎಸೆತ, 5 ಬೌಂಡರಿ) ಸಿಡಿಸಿ ಬ್ಯಾಟಿಂಗ್‍ನಲ್ಲಿ ಮಿಂಚಿದರೆ, ಬೌಲಿಂಗ್‍ನಲ್ಲಿ ಭುವನೆಶ್ವರ್ ಕುಮಾರ್ 3 ವಿಕೆಟ್, ಬುಮ್ರಾ ಮತ್ತು ಚಹಾಲ್ ತಲಾ 2 ವಿಕೆಟ್ ಕಿತ್ತು ಗೆಲುವು ತಂದುಕೊಟ್ಟರು.
Live Tv
[brid partner=56869869 player=32851 video=960834 autoplay=true]
ಲಂಡನ್: ಇಂಗ್ಲೆಂಡ್ ವಿರುದ್ಧದ ಎರಡನೇ ಟಿ-20 ಪಂದ್ಯವನ್ನು ಭಾರತ 49 ರನ್‍ಗಳಿಂದ ಜಯಗಳಿಸಿದೆ. ಈ ಮೂಲಕ ಒಂದು ಪಂದ್ಯ ಇರುವಂತೆಯೇ ಸರಣಿಯನ್ನು 2-0 ಅಂತರದಿಂದ ಜಯಗಳಿಸಿದೆ.
ಗೆಲ್ಲಲು 170 ರನ್‍ಗಳ ಗುರಿಯನ್ನು ಪಡೆದ ಇಂಗ್ಲೆಂಡ್ 17 ಓವರ್ ಗಳಲ್ಲಿ 121 ರನ್‍ಗಳಿಗೆ ಆಲೌಟ್ ಆಯ್ತು. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ(31) ಗ್ಲೀಸನ್ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಆದರೆ, ಏಕಾಂಗಿಯಾಗಿ ಹೋರಾಟ ನಡೆಸಿದ ರವೀಂದ್ರ ಜಡೇಜಾ 46ರನ್ ಗಳಿಕೆ ಮಾಡಿ ಅಜೇಯರಾಗಿ ಉಳಿದರು. ಇವರಿಗೆ ಹರ್ಷಲ್ ಪಟೇಲ್(12) ಸಾಥ್ ನೀಡಿದರು. ಒಟ್ಟಾರೆಯಾಗಿ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 170 ರನ್‍ಗಳನ್ನು ಕಲೆ ಹಾಕಿತ್ತು. ಇಂಗ್ಲೆಂಡ್ ಪರವಾಗಿ ಗ್ಲೀಸನ್ 15 ರನ್‌ಗೆ ಮೂರು ವಿಕೆಟ್ ಪಡೆದರೆ, ಜೋರ್ಡಾನ್ 27 ರನ್‌ಗೆ ನಾಲ್ಕು ವಿಕೆಟ್ ಗಳಿಸಿದರು. ಇದನ್ನೂ ಓದಿ: ಸರಣಿ ಗೆಲ್ಲುವ ತವಕದಲ್ಲಿ ರೋಹಿತ್ ಪಡೆ – ತಂಡಕ್ಕೆ ಮರಳಿದ ಕೊಹ್ಲಿ, ಜಡೇಜಾ, ಬುಮ್ರಾ
ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಇಂಗ್ಲೆಂಡ್ ಮೊದಲ ಓವರ್‌ನಲ್ಲೇ ವಿಕೆಟ್ ಕಳೆದುಕೊಂಡು ತೀವ್ರ ಆಘಾತಕ್ಕೆ ಒಳಗಾಯಿತು. ನಂತರದಲ್ಲಿ ತನ್ನೆಲ್ಲಾ ವಿಕೆಟ್‍ನ್ನು ಕಳೆದುಕೊಂಡು 121 ರನ್‌ಗಳಿಸಿ ಸೋಲು ಒಪ್ಪಿಕೊಂಡಿತು. ಭುವನೇಶ್ವರ ಕುಮಾರ್ 3, ಬುಮ್ರಾ ಹಾಗೂ ಚಾಹಲ್ 2 ಹಾಗೂ ಹಾರ್ದಿಕ್ ಪಾಂಡ್ಯ, ಹರ್ಷದ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು. ಇದನ್ನೂ ಓದಿ:ರಿಮೋಟ್ ಕಂಟ್ರೋಲ್ ಕಾರ್ ಮೂಲಕ ಗ್ರೌಂಡ್‌ಗೆ ಪ್ರವೇಶಿಸಿತು ಕ್ರಿಕೆಟ್ ಚೆಂಡು
Live Tv
[brid partner=56869869 player=32851 video=960834 autoplay=true]
ಲಂಡನ್: ಯಾವುದೇ ಮನೋರಂಜನಾ ಕಾರ್ಯಕ್ರಮಗಳಲ್ಲೂ ಹೊಸ ಹೊಸ ಆವಿಷ್ಕಾರಗಳನ್ನು ಬಳಸಿ ಪ್ರೇಕ್ಷಕರ ಗಮನ ಸೆಳೆಯುವುದು ಇದೀಗ ಸರ್ವೇ ಸಾಮಾನ್ಯ. ಇದು ಕ್ರಿಕೆಟ್‌ಗೂ ಹೊರತೇನಲ್ಲ, ಹೊಸ ಹೊಸ ಐಡಿಯಾಗಳನ್ನು ಬಳಸಿ ಆಟಗಾರರನ್ನು ಪರಿಚಯಿಸುವುದು ಟ್ರೆಂಡ್. ಇದು ಅಭಿಮಾನಿಗಳಿಗೆ ಕುತೂಹಲ ಕೆರಳಿಸುವಂತೆ ಮಾಡುತ್ತದೆ.
ಇತ್ತೀಚೆಗೆ ಇಂಗ್ಲೆಂಡ್‌ನಲ್ಲಿ ನಡೆದ ಟಿ20 ಬ್ಲಾಸ್ಟ್ ಪಂದ್ಯದಲ್ಲಿ ಒಂದು ವಿನೂತನ ಉಪಾಯವನ್ನು ಮಾಡಲಾಗಿತ್ತು. ಪಂದ್ಯದಲ್ಲಿ ಬಳಸಬೇಕಿದ್ದ ಚೆಂಡನ್ನು ಮೈದಾನಕ್ಕೆ ಅಂಪೈರ್ ಹಿಡಿದುಕೊಂಡು ಬಂದಿರಲಿಲ್ಲ. ಬದಲಿಗೆ ರಿಮೋಟ್ ಕಂಟ್ರೋಲ್‌ನ ಪುಟ್ಟ ಕಾರೊಂದು ಮೈದಾನ ಪ್ರವೇಶಿಸಿ, ಚೆಂಡನ್ನು ಹಿಡಿದುಕೊಂಡು ಬಂದಿದೆ. ಇದನ್ನೂ ಓದಿ: ಸರಣಿ ಗೆಲ್ಲುವ ತವಕದಲ್ಲಿ ರೋಹಿತ್ ಪಡೆ – ತಂಡಕ್ಕೆ ಮರಳಿದ ಕೊಹ್ಲಿ, ಜಡೇಜಾ, ಬುಮ್ರಾ
ಟಿ20 ಬ್ಲಾಸ್ಟ್ 2022ಯ ಸರ‍್ರೆ ಹಾಗೂ ಯಾರ್ಕ್‌ಷೈರ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರಿಮೋಟ್ ನಿಯಂತ್ರಿತ ಕಾರೊಂದು ಚೆಂಡನ್ನು ಎತ್ತಿಕೊಂಡು ಬೌಂಡರಿಯಿಂದ ಮೈದಾನದ ಮಧ್ಯ ಭಾಗದವರೆಗೆ ಹೋಗಿದೆ. ಇದರ ವೀಡಿಯೋವನ್ನು ಪಂದ್ಯಾವಳಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಟಾಸ್ ಗೆದ್ದ ಸರ‍್ರೆ ನಾಯಕ ವಿಲ್ ಜಾಕ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಯಾರ್ಕ್‌ಷೈರ್ ತನ್ನ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಟಾಮ್ ಕೊಹ್ಲರ್ ಕ್ಯಾಡ್ಮೋರ್ ಅವರು 62 ರನ್ ಗಳಿಸುವ ಮೂಲಕ ತಂಡದ ಪರ ಗರಿಷ್ಠ ಸ್ಕೋರ್ ಮಾಡಿದ್ದರು. ಆದರೆ ವಿಲ್ ಫ್ರೇನ್ ಅವರು 14 ಎಸೆತಗಳಲ್ಲಿ ಅಜೇಯ 32 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.
Live Tv
[brid partner=56869869 player=32851 video=960834 autoplay=true]
ಲಂಡನ್: ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಗೆದ್ದಿರುವ ಭಾರತಕ್ಕೆ ಇಂದು ಎರಡನೇ ಸವಾಲು ಎದುರಾಗಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ ಇದೆ.
ಮೊದಲ ಟಿ20 ಪಂದ್ಯದಲ್ಲಿ 50 ರನ್‍ಗಳ ಭರ್ಜರಿ ಜಯದೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ಭಾರತ ತಂಡ ಇಂದು ನಡೆಯಲಿರುವ 2ನೇ ಪಂದ್ಯವನ್ನು ಗೆದ್ದು 3 ಪಂದ್ಯಗಳ ಟಿ20 ಸರಣಿಯನ್ನು ಕೈವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ಇತ್ತ ಇಂಗ್ಲೆಂಡ್ ತಂಡ ಈ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ಪ್ಲಾನ್ ಮಾಡುತ್ತಿದೆ. ಇದನ್ನೂ ಓದಿ: T20 ಕ್ರಿಕೆಟ್‍ನಲ್ಲಿ ಟೀಂ ಇಂಡಿಯಾ ನಾಯಕನಾಗಿ ಈವರೆಗೆ ಯಾರೂ ಮಾಡದ ದಾಖಲೆ ಬರೆದ ರೋಹಿತ್ ಶರ್ಮಾ
ಈ ನಡುವೆ 2ನೇ ಟಿ20 ಪಂದ್ಯಕ್ಕೆ ಭಾರತ ತಂಡ ಪೂರ್ಣ ಪ್ರಮಾಣದ ಸಾಮರ್ಥ್ಯದ ತಂಡದೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೊದಲ ಟಿ20 ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ತಂಡಕ್ಕೆ ವಾಪಸ್ ಆಗಿದ್ದಾರೆ. ಹಾಗಾಗಿ ನಾಯಕ ರೋಹಿತ್ ಶರ್ಮಾಗೆ ಪ್ಲೇಯಿಂಗ್ 11 ಆಯ್ಕೆಯ ಸವಾಲು ಎದುರಾಗಿದೆ. ಇದನ್ನೂ ಓದಿ: 51 ರನ್ ಚಚ್ಚಿ 4 ವಿಕೆಟ್ ಕಿತ್ತ ಪಾಂಡ್ಯ – ನಂಬರ್ ಗೇಮ್‍ನಲ್ಲಿ ಸೋತ ಆಂಗ್ಲರು
ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅಥವಾ ದೀಪಕ್ ಹೂಡಾ, ಶ್ರೇಯಸ್ ಅಯ್ಯರ್ ಅಥವಾ ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಚಹಾಲ್, ಜಸ್ಪ್ರೀತ್ ಬುಮ್ರಾ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಪಂತ್ ಮತ್ತು ಬುಮ್ರಾಗಾಗಿ ಮೊದಲ ಪಂದ್ಯವಾಡಿದ್ದ ದಿನೇಶ್ ಕಾರ್ತಿಕ್ ಮತ್ತು ಹರ್ಷದೀಪ್ ಸಿಂಗ್ ಸ್ಥಾನ ಬಿಟ್ಟುಕೊಡುವ ಸಾಧ್ಯತೆ ಹೆಚ್ಚಿದೆ.
ಇಂಗ್ಲೆಂಡ್ ತಂಡ ಮೊದಲ ಪಂದ್ಯ ಸೋತಿರುವುದರಿಂದಾಗಿ ಕಂಬ್ಯಾಕ್ ಮಾಡಲು ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲನ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‍ಸ್ಟೋನ್, ಹ್ಯಾರಿ ಬ್ರೂಕ್, ಸ್ಯಾಮ್ ಕರಾನ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ರಿಚರ್ಡ್ ಗ್ಲೀಸನ್, ಮ್ಯಾಟ್ ಪಾರ್ಕಿನ್ಸನ್ ಅವರನ್ನೊಳಗೊಂಡ ತಂಡವನ್ನು ಮತ್ತೊಮ್ಮೆ ಮುಂದುವರಿಸಲು ಬಟ್ಲರ್ ನಿರ್ಧರಿಸಬಹುದು.
ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿರುವುದರಿಂದಾಗಿ ಎರಡನೇ ಪಂದ್ಯದಲ್ಲೂ ರನ್ ಹೊಳೆ ಹರಿಯುವ ನಿರೀಕ್ಷೆ ಇದ್ದು, ಪಂದ್ಯ ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಆರಂಭವಾಗಲಿದೆ.
Live Tv
[brid partner=56869869 player=32851 video=960834 autoplay=true]
ಲಂಡನ್: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್‍ನಲ್ಲಿ ಸತತ 13 ಪಂದ್ಯಗಳಲ್ಲಿ ಜಯ ದಾಖಲಿಸಿ ನಾಯಕನಾಗಿ ನೂತನ ದಾಖಲೆ ಬರೆದಿದ್ದಾರೆ.
ಇಂಗ್ಲೆಂಡ್‍ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 50 ರನ್‍ಗಳ ಅಂತರದ ಜಯ ದಾಖಲಿಸಿದ ಬಳಿಕ ರೋಹಿತ್ ಈ ಮಹತ್ವದ ದಾಖಲೆ ಬರೆದರು. ರೋಹಿತ್ ಶರ್ಮಾ ನೇತೃತ್ವದಲ್ಲಿ ಬಾಂಗ್ಲಾದೇಶ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ತಂಡ ಸತತ 12 ಪಂದ್ಯಗಳನ್ನು ನಾಯಕರಾಗಿ ಶರ್ಮಾ ಗೆದ್ದುಗೊಂಡಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಜಯದೊಂದಿಗೆ ಸತತ 13 ಪಂದ್ಯ ಗೆದ್ದ ನಾಯಕ ಎಂಬ ದಾಖಲೆಯ ಒಡೆಯನಾಗಿದ್ದಾರೆ. ಇದನ್ನೂ ಓದಿ: 51 ರನ್ ಚಚ್ಚಿ 4 ವಿಕೆಟ್ ಕಿತ್ತ ಪಾಂಡ್ಯ – ನಂಬರ್ ಗೇಮ್‍ನಲ್ಲಿ ಸೋತ ಆಂಗ್ಲರು
2021ರ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಟೀಂ ಇಂಡಿಯಾ ಟಿ20 ತಂಡದ ನೂತನ ನಾಯಕರಾಗಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]