Tag: england

  • ಸೂರ್ಯಕುಮಾರ್ ಯಾದವ್, ಪೃಥ್ವಿ ಶಾ ಇಂಗ್ಲೆಂಡ್‍ಗೆ ಕಳುಹಿಸುವುದರಲ್ಲಿ ಯಾವುದೇ ಬದಲಾವಣೆ ಇಲ್ಲ: ಜೇ ಶಾ

    ಸೂರ್ಯಕುಮಾರ್ ಯಾದವ್, ಪೃಥ್ವಿ ಶಾ ಇಂಗ್ಲೆಂಡ್‍ಗೆ ಕಳುಹಿಸುವುದರಲ್ಲಿ ಯಾವುದೇ ಬದಲಾವಣೆ ಇಲ್ಲ: ಜೇ ಶಾ

    ಲಂಡನ್: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಗಾಯಾಳು ಆಟಗಾರರ ಬದಲಿ ಆಟಗಾರರಾಗಿ ಆಯ್ಕೆಯಾಗಿದ್ದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಇಂಗ್ಲೆಂಡ್‍ಗೆ ಕಳುಹಿಸುವುದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜೇ ಶಾ ತಿಳಿಸಿದ್ದಾರೆ.

    ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಭಾರತ ತಂಡದ ಆಟಗಾರರಾದ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಗಾಯಕ್ಕೆ ತುತ್ತಾಗಿ ತವರಿಗೆ ಮರಳಿದ್ದಾರೆ. ಹಾಗಾಗಿ ಇವರ ಸ್ಥಾನಕ್ಕೆ ಬದಲಿ ಆಟಗಾರರಾಗಿ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಕಳುಹಿಸಲು ಬಿಸಿಸಿಐ ಪ್ಲಾನ್ ಮಾಡಿತ್ತು. ಆದರೆ ಇದೀಗ ಈ ನಿರ್ಧಾರದಲ್ಲಿ ಬದಲಾವಣೆ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ ಎಂಬ ಕುರಿತು ವರದಿಯಾಗಿತ್ತು. ಇದನ್ನೂ ಓದಿ: ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?

    ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ತಂಡದಲ್ಲಿ ಯಾದವ್ ಮತ್ತು ಪೃಥ್ವಿ ಶಾ ಆಡಿದ್ದರು. ಆದರೆ ಎರಡನೇ ಟಿ20 ಪಂದ್ಯದ ವೇಳೆ ಕೃನಾಲ್ ಪಾಂಡ್ಯ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಹಾಗಾಗಿ ಅವರೊಂದಿಗೆ ಸಂಪರ್ಕದಲ್ಲಿದ್ದ 8 ಮಂದಿ ಆಟಗಾರರನ್ನು ಪರೀಕ್ಷೆ ಒಳಪಡಿಸಲಾಗಿದೆ. ಆ 8 ಮಂದಿ ಆಟಗಾರರ ಪೈಕಿ ಯಾದವ್ ಮತ್ತು ಪೃಥ್ವಿ ಶಾ ಕೂಡ ಇಬ್ಬರಾಗಿದ್ದಾರೆ. ಆದರೆ ಅವರು ಪರೀಕ್ಷಿಸಿದಾಗ ನೆಗೆಟಿವ್ ಬಂದಿದೆ. ಹಾಗಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಕಳುಹಿಸಿ ಕೊಡುವ ನಿರ್ಧರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜೇ ಶಾ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

    ನಾವು ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಇಂಗ್ಲೆಂಡ್‍ಗೆ ಕಳುಹಿಸಿಕೊಡುವ ಬಗ್ಗೆ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿ ಅವರೊಂದಿಗೆ ಚರ್ಚಿಸಿದ್ದೇವೆ. ಇವರಿಬ್ಬರು ಐಸೋಲೇಷನ್‍ನಲ್ಲಿರುವುದರಿಂದಾಗಿ ಕೆಲ ಬದಲಾವಣೆಗಳನ್ನು ಮಾಡಿಕೊಂಡು ಇಂಗ್ಲೆಂಡ್‍ಗೆ ಕಳುಹಿಸಿಕೊಡುತ್ತೇವೆ. ಎಂದು ಜೇ ಶಾ ಸ್ಪಷ್ಟ ಪಡಿಸಿದ್ದಾರೆ.

  • ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?

    ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?

    ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡದಿಂದ ಮೂವರು ಆಟಗಾರರು ಗಾಯದಿಂದಾಗಿ ಹೊರಬಿದ್ದಿದ್ದಾರೆ. ಈ ನಡುವೆ ಈ ಮೂವರಿಗೆ ಬದಲಿ ಆಟಗಾರರಾಗಿ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್‍ಗೆ ತೆರಳಲಿದ್ದಾರೆ ಎಂಬ ಕುರಿತು ವರದಿಯಾಗಿದೆ.

    ಭಾರತ ತಂಡದ ಆಟಗಾರರಾದ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಗಾಯಕ್ಕೆ ತುತ್ತಾಗಿ ತವರಿಗೆ ಮರಳಿದ್ದಾರೆ. ಹಾಗಾಗಿ ಇವರ ಸ್ಥಾನಕ್ಕೆ ಬದಲಿಆಟಗಾರರಾಗಿ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಕಳುಹಿಸಲು ಬಿಸಿಸಿಐ ಪ್ಲಾನ್ ಮಾಡಿದೆ. ಹಾಗೆ ಜಯಂತ್ ಯಾದವ್ ಅವರನ್ನು ಕಳುಹಿಸಿಕೊಡುವ ಸಾಧ್ಯತೆ ಇದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೋರ್ವರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

    ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಈಗಾಗಲೇ ಭಾರತ ಹಾಗೂ ಶ್ರೀಲಂಕಾ ಸರಣಿಗಾಗಿ ಲಂಕಾ ಪ್ರವಾಸ ಕೈಗೊಂಡಿದ್ದಾರೆ. ಈ ಸರಣಿಯ ಏಕದಿನ ಪಂದ್ಯದಲ್ಲಿ ಇಬ್ಬರು ಆಟಗಾರರು ಕೂಡ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹಾಗಾಗಿ ಬಿಸಿಸಿಐ ಈ ಇಬ್ಬರು ಆಟಗಾರರನ್ನು ಇಂಗ್ಲೆಂಡ್‍ಗೆ ಕಳುಹಿಸಿಕೊಡಲು ತೀರ್ಮಾನಿಸಿದೆ. ಇವರೊಂದಿಗೆ ಜಯಂತ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದ್ದು, ಇನ್ನೂ ಕೆಲ ದಿನಗಳಲ್ಲಿ ಈ ಕುರಿತು ಬಿಸಿಸಿಐ ಸ್ಪಷ್ಟ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.

  • ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

    ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

    – ಗಿಲ್ ಬಳಿಕ ಮತ್ತಿಬ್ಬರಿಗೆ ಗಾಯ

    ಲಂಡನ್: ಇಂಗ್ಲೆಂಡ್ ಸರಣಿ ಆರಂಭಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಕಾಡುತ್ತಿದೆ. ಇದೀಗ ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ.

    ಕೆಲ ದಿನಗಳ ಹಿಂದೆ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಗಾಯದಿಂದಾಗಿ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ಆಲ್‍ರೌಂಡರ್ ವಾಷಿಂಗ್ಟನ್ ಸುಂದರ್ ಮತ್ತು ವೇಗಿ ಅವೇಶ್ ಖಾನ್ ಕೂಡ ಸರಣಿಯಿಂದ ಹೊರಗುಳಿಯುವಂತೆ ಆಗಿದೆ.

    ವಾಷಿಂಗ್ಟನ್ ಸುಂದರ್ ಮತ್ತು ವೇಗಿ ಅವೇಶ್ ಖಾನ್ ಅಭ್ಯಾಸ ಪಂದ್ಯದಲ್ಲಿ ಅಡುವ ವೇಳೆ ಇಬ್ಬರಿಗೂ ಕೂಡ ಕೈ ಬೆರಳಿನ ಗಾಯವಾಗಿದೆ ಎಂದು ವರದಿಯಾಗಿದೆ. ಅದರಲ್ಲೂ ಆವೇಶ್ ಖಾನ್ ಅವರ ಕೈ ಬೆರಳು ಮುರಿತಕ್ಕೆ ಒಳಗಾಗಿದೆ ಎಂದು ಮೂಲಗಳು ತಿಳಿಸಿವೆ. ಅಭ್ಯಾಸ ಪಂದ್ಯದಲ್ಲಿ ಸುಂದರ್ ಹಾಗೂ ಆವೇಶ್ ಖಾನ್ ಜೊತೆಯಾಗಿ ಕಂಟ್ರಿ ಇಲೆವೆನ್ ತಂಡದ ಪರ ಆಡಿದ್ದರು. ಈ ವೇಳೆ ಗಾಯವಾಗಿದೆ. ಈ ಮೂಲಕ ಭಾರತದ 3 ಮಂದಿ ಆಟಗಾರರು ಸರಣಿಯ ಆರಂಭಕ್ಕೂ ಮೊದಲೇ ತಂಡದಿಂದ ಹೊರ ಬಿದ್ದಂತಾಗಿದೆ. ಇದನ್ನೂ ಓದಿ: ಹಿಟ್‍ಮ್ಯಾನ್ ಹಸ್ತಾಕ್ಷರ ಹಾಕಿಸಿಕೊಂಡ ಫ್ಯಾನ್‍ಬಾಯ್ ಅವೇಶ್ ಖಾನ್

    ಬಿಸಿಸಿಐ ಶುಭಮನ್ ಗಿಲ್ ಅವರ ಜಾಗಕ್ಕೆ ಬದಲಿ ಆಟಗಾರನನ್ನು ಇಂಗ್ಲೆಂಡ್ ಕಳುಹಿಸಿಲ್ಲ. ಇದೀಗ ಈ ಇಬ್ಬರು ಆಟಗಾರರು ಕೂಡ ಗಾಯಲು ಆಗಿರುವುದರಿಂದ ಬದಲಿ ಆಟಗಾರರನ್ನು ಕಳುಹಿಸಲಿದೆಯೆ ಎಂಬುದನ್ನು ಕಾದು ನೋಡಬೇಕಾಗಿದೆ.

    ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 4ರಂದು ನಾಟಿಂಗ್ ಹ್ಯಾಮ್‍ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭಗೊಳ್ಳಲಿದೆ. ಇದನ್ನೂ ಓದಿ: 515 ಓವರ್ ಎಸೆದ ಬಳಿಕ ಸಣ್ಣ ತಪ್ಪು ಮಾಡಿದ ಭುವಿ

  • ಸಹ ಆಟಗಾರನ ಫುಟ್‍ಬಾಲ್ ಆಟಕಂಡು ನೆಲದಲ್ಲಿ ಹೊರಳಾಡಿ ನಕ್ಕ ಕೊಹ್ಲಿ

    ಸಹ ಆಟಗಾರನ ಫುಟ್‍ಬಾಲ್ ಆಟಕಂಡು ನೆಲದಲ್ಲಿ ಹೊರಳಾಡಿ ನಕ್ಕ ಕೊಹ್ಲಿ

    ಲಂಡನ್: ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತ ತಂಡದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಈ ನಡುವೆ ಅಭ್ಯಾಸದ ವೇಳೆ ಸಹ ಆಟಗಾರನ ಫುಟ್‍ಬಾಲ್ ಆಟಕಂಡು ತಂಡದ ನಾಯಕ ವಿರಾಟ್ ಕೊಹ್ಲಿ ನೆಲದಲ್ಲಿ ಬಿದ್ದು ಹೊರಳಾಡಿ ನಕ್ಕಿದ್ದಾರೆ.

    ಇಂಗ್ಲೆಂಡ್‍ನಲ್ಲಿ ನಡೆದ ವಿಶ್ವಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಬಳಿಕ ಸ್ವಲ್ಪ ವಿರಾಮದಲ್ಲಿದ್ದ ಭಾರತ ತಂಡ ಮತ್ತೆ ಇದೀಗ ಇಂಗ್ಲೆಂಡ್ ಸರಣಿಗೆ ಅಭ್ಯಾಸ ಆರಂಭಿಸಿದೆ. ಈ ನಡುವೆ ತಂಡದ ಸಹ ಆಟಗಾರರಲ್ಲಿ ಕೊರೊನಾ ದೃಢಪಟ್ಟಿರುವ ಆತಂಕದ ನಡುವೆ ಭಾರತ ತಂಡದ ಸದಸ್ಯರು ಡರ್ಹಾಮ್‍ಗೆ ತೆರಳಿ ಅಭ್ಯಾಸ ಅರಂಭಿಸಿದ್ದಾರೆ.

    ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಸಹಿತ ಎಲ್ಲ ಆಟಗಾರರು ಫುಟ್‍ಬಾಲ್ ಆಟದಲ್ಲಿ ತೊಡಗಿದ್ದಾರೆ. ಈ ವೇಳೆ ಸಹ ಆಟಗಾರರು ಕಾಲು ಮತ್ತು ತಲೆಯಲ್ಲಿ ಬಾಲ್‍ನ್ನು ಒದೆಯುತ್ತಿದ್ದರು. ಈ ಸಂದರ್ಭ ಕನ್ನಡಿಗ ಪ್ರಸಿದ್ಧ್ ಕೃಷ್ಣ ಫುಟ್‍ಬಾಲ್ ಆಡುವುದನ್ನು ಕಂಡು ವಿರಾಟ್ ಕೊಹ್ಲಿ ಮತ್ತು ಕೆ.ಎಲ್ ರಾಹುಲ್ ಅಣಕಿಸಿದ್ದಾರೆ.

    ವಿರಾಟ್ ಕೊಹ್ಲಿ ಮತ್ತು ರಾಹುಲ್ ತಲೆಯಲ್ಲಿ ಪ್ರಸಿದ್ಧ್ ಕೃಷ್ಣರಂತೆ ಆ್ಯಕ್ಷನ್ ಮಾಡುವ ಮೂಲಕ ನಗಲು ಆರಂಭಿಸಿದ್ದಾರೆ. ಕೊಹ್ಲಿ ನಕ್ಕು, ನಕ್ಕು ಕೊನೆಗೆ ಮೈದಾನದಲ್ಲಿ ಹೊರಳಾಡಿದ್ದಾರೆ. ಇದನ್ನೂ ಓದಿ: ಸಚಿನ್, ಸೆಹ್ವಾಗ್ ಬಳಿಕ ಆರಂಭಿಕನಾಗಿ ಶಿಖರ್ ಧವನ್ ನೂತನ ಮೈಲಿಗಲ್ಲು

    ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ  ಟೆಸ್ಟ್ ಸರಣಿ  ಆಗಸ್ಟ್ 4 ರಂದು ಆರಂಭವಾಗಲಿದೆ.

  • ಪಂತ್ ಬಳಿಕ ದಯಾನಂದ್ ಗರಾನಿಗೆ ಕೊರೊನಾ ದೃಢ

    ಪಂತ್ ಬಳಿಕ ದಯಾನಂದ್ ಗರಾನಿಗೆ ಕೊರೊನಾ ದೃಢ

    – ಮೂವರು ಆಟಗಾರರು ಐಸೋಲೇಷನ್

    ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡದ ಕೀಪರ್ ರಿಷಭ್ ಪಂತ್ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ, ತಂಡದ ಥ್ರೋಡೌನ್ ತಜ್ಞ ದಯಾನಂದ್ ಗರಾನಿ ಅವರಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಬಿಸಿಸಿಐ ತಿಳಿಸಿದೆ.

    ಇಂದು ಪಂತ್ ಅವರಿಗೆ ಕೊರೊನಾ ಸೋಂಕು ತಗುಲಿರುವುದನ್ನು ಬಿಸಿಸಿಐ ದೃಢಪಡಿಸಿತ್ತು. ಆ ಬಳಿಕ ಇದೀಗ ಗರಾನಿ ಅವರಿಗೆ ಸೋಂಕು ತಗುಲಿರುವುದನ್ನು ಬಿಸಿಸಿಐ ಸ್ಪಷ್ಟಪಡಿಸಿದೆ. ಇವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ವೃದ್ಧಿಮಾನ್ ಸಹಾ ಸಹಿತ ಇನ್ನಿಬ್ಬರೂ ಆಟಗಾರು ಐಸೋಲೇಷನ್‍ಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಇದನ್ನೂ ಓದಿ: ರಿಷಭ್ ಪಂತ್‍ಗೆ ಕೊರೊನಾ ಪಾಸಿಟಿವ್

    ಪಂತ್ ಕೊರೊನಾ ಸೋಂಕು ದೃಢಪಟ್ಟ ಬಳಿಕ ಗರಾನಿ ಅವರಿಗೆ ಆರ್‍ಟಿಪಿಸಿಆರ್ ಟೆಸ್ಟ್ ಮಾಡಲಾಯಿತು ಈ ವೇಳೆ ಇವರಿಗೆ ಪಾಸಿಟಿವ್ ಬಂದಿದೆ. ಆ ಬಳಿಕ ಇವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಬೌಲಿಂಗ್ ಕೋಚ್ ಭರತ್ ಅರುಣ್, ನೆಟ್ ಬೌಲರ್ ಅಭಿಮನ್ಯು ಈಶ್ವರನ್ ಮತ್ತು ವೃದ್ಧಿಮಾನ್ ಸಹಾ ಅವರನ್ನು 10 ದಿನಗಳ ಕಾಲ ಐಸೋಲೇಷನ್‍ಗೆ ಒಳಪಡಿಸಲಾಗಿದೆ ಎಂದು ಬಿಸಿಸಿಐ ಟ್ವಿಟ್ಟರ್‍ ನಲ್ಲಿ ಟ್ವೀಟ್ ಮಾಡಿದೆ.

    ಭಾರತ ತಂಡದ ಇತರ ಸದಸ್ಯರು ಗುರುವಾರ ಡರ್ಹಾಮ್‍ಗೆ ತೆರಳಿ ಬಳಿಕ ಅಭ್ಯಾಸ ಪಂದ್ಯವಾಡಲಿದ್ದಾರೆ. ಪಂತ್ ಮತ್ತು ಸಹಾ ಅಭ್ಯಾಸ ಪಂದ್ಯದಿಂದ ಹೊರಗುಳಿಯಲಿದ್ದಾರೆ.

  • ಪಾಕಿಸ್ತಾನ ತಂಡದಲ್ಲಿ ಕೊಹ್ಲಿ- ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

    ಪಾಕಿಸ್ತಾನ ತಂಡದಲ್ಲಿ ಕೊಹ್ಲಿ- ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

    ಲಂಡನ್: ಪಾಕಿಸ್ತಾನ ತಂಡದ ಯುವ ಆಟಗಾರನೋರ್ವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹೋಲುವ ರೀತಿ ಕಾಣುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಪಾಕಿಸ್ತಾನ ತಂಡದ ಯುವ ಆಟಗಾರ ಸೌದ್ ಶಕೀಲ್ ಇತ್ತೀಚೆಗೆ ಪಾಕಿಸ್ತಾನ ತಂಡದ ಪರ ಏಕದಿನ ಕ್ರಿಕೆಟ್ ಮೂಲಕ ಪದಾರ್ಪಣೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಆಡುತ್ತಿರುವ ಶಕೀಲ್ ಬ್ಯಾಟಿಂಗ್ ವೇಳೆ ಹೆಲ್ಮೆಟ್ ಧರಿಸಿ ನಿಂತಿರುವ ಕೆಲವು ಭಂಗಿಗಳು ಇದೀಗ ವೈರಲ್ ಆಗುತ್ತಿದ್ದು, ಇದರಲ್ಲಿ ಶಕೀಲ್ ಅವರ ಗಡ್ಡ ಮತ್ತು ಬ್ಯಾಟ್ ಹಿಡಿದು ನಿಂತಿರುವ ಭಂಗಿ ವಿರಾಟ್ ಕೊಹ್ಲಿಯನ್ನು ಹೋಲುತ್ತಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಪರ ಕಣಕ್ಕಿಳಿದ ಶಕೀಲ್, ಮೊದಲ ಏಕದಿನ ಪಂದ್ಯದಲ್ಲಿ 5 ರನ್‍ಗಳಿಸಿ ನಿರಾಸೆ ಮೂಡಿಸಿದ್ದರು. ಬಳಿಕ ಎರಡನೇ ಏಕದಿನ ಪಂದ್ಯದಲ್ಲಿ 56 ರನ್(77 ಎಸೆತ, 4 ಬೌಂಡರಿ) ಸಿಡಿಸಿ ಪಾಕಿಸ್ತಾನದ ಪರ ಮಿಂಚಿದ್ದರು. ಇದನ್ನೂ ಓದಿ: ಟಿ20 ಕ್ರಿಕೆಟ್‍ನಲ್ಲಿ ಗೇಲ್ ವಿಶ್ವದಾಖಲೆ ಆಟ – ವಿಂಡೀಸಿಗೆ ಸರಣಿ

    ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಏಕದಿನ ಸರಣಿ ಆಡುತ್ತಿದೆ. ಈ ನಡುವೆ ಭಾರತ ತಂಡ ಕೂಡ ಇಂಗ್ಲೆಂಡ್‍ನಲ್ಲಿದೆ ಹಾಗಾಗಿ ಕೊಹ್ಲಿ ಪಾಕಿಸ್ತಾನ ತಂಡದ ಪರ ಅಡುತ್ತಿದ್ದಾರೆ ಎಂದು ಶಕೀಲ್ ಅವರನ್ನು ಕಂಡು ಹಲವು ರೀತಿಯ ಚರ್ಚೆ, ಹಾಸ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

  • ಹರ್ಲೀನ್ ಡಿಯೋಲ್‍ಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿ ಮೋದಿ

    ಹರ್ಲೀನ್ ಡಿಯೋಲ್‍ಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿ ಮೋದಿ

    ನವದೆಹಲಿ: ಭಾರತ ಮಹಿಳಾ ತಂಡದ ಆಟಗಾರ್ತಿ ಹರ್ಲೀನ್ ಡಿಯೋಲ್ ಹಿಡಿದ ಅದ್ಭುತ ಕ್ಯಾಚ್‍ನಿಂದ ಇಡೀ ವಿಶ್ವದ ಗಮನಸೆಳೆದಿದ್ದಾರೆ. ಇದೀಗ ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಡಿಯೋಲ್ ಅವರ ಕ್ಯಾಚ್‍ನ ವೀಡಿಯೋವನ್ನು ಸ್ಟೋರಿ ಹಾಕುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಹರ್ಲೀನ್ ಡಿಯೋಲ್ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಿಡಿದ ಅದ್ಭುತ ಕ್ಯಾಚ್‍ಗೆ ದಿಗ್ಗಜ ಕ್ರಿಕೆಟಿಗರು ಸಹಿತ ಅಭಿಮಾನಿಗಳು ಮನಸೋತಿದ್ದರು. ಇದೀಗ ಮೋದಿ ಕೂಡ ಈ ಮಹಿಳಾ ಕ್ರಿಕೆಟ್ ತಾರೆಯ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಅದ್ಭುತ, ಉತ್ತಮ ಪ್ರದರ್ಶನ ಇದನ್ನು ನೋಡದೆ ಇರಬೇಡಿ ಎಂದು ವೀಡಿಯೋದ ತುಣುಕನ್ನು ಇನ್‍ಸ್ಟಾ ಸ್ಟೋರಿ ಹಾಕಿಕೊಂಡಿದ್ದಾರೆ.

    ಭಾರತ ಹಾಗೂ ಇಂಗ್ಲೆಂಡ್ ವನಿತೆಯರ ನಡುವಿನ ಮೊದಲ ಟ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿತ್ತು. ಇಂಗ್ಲೆಂಡ್ ಬ್ಯಾಟಿಂಗ್ ವೇಳೆ 18.5ನೇ ಓವರ್‍ ನಲ್ಲಿ ಎಮಿ ಜೋನ್ಸ್ ಬಾರಿಸಿದ ಬಿಗ್ ಶಾಟ್ ಒಂದನ್ನು ಲಾಂಗ್ ಆಫ್‍ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಹರ್ಲೀನ್ ಕ್ಷಣ ಮಾತ್ರದಲ್ಲಿ ಜಿಂಕೆಯಂತೆ ನೆಗೆದು ಸ್ಟನ್ನಿಂಗ್ ಕ್ಯಾಚ್ ಹಿಡಿದು ವೀಕ್ಷರನ್ನು ನಿಬ್ಬೆರಗಾಗುವಂತೆ ಮಾಡಿದರು. ಇದನ್ನೂ ಓದಿ: ಹರ್ಲೀನ್ ಡಿಯೋಲ್ ದಿ ಬೆಸ್ಟ್ ಕ್ಯಾಚ್ – ದಿಗ್ಗಜರು ಬೆರಗು

    ಜೋನ್ಸ್ ಹೊಡೆದ ಬಿಗಿಯಾದ ಹೊಡೆತ ಇನ್ನೆನೂ ಸಿಕ್ಸರ್ ಹೊಗಬೇಕೆನ್ನುವಷ್ಟರಲ್ಲಿ ಚಂಗನೆ ಜಿಗಿದ ಹರ್ಲೀನ್ ಬಾಲ್ ಹಿಡಿದರು. ಈ ವೇಳೆ ಸಮತೋಲನ ಕಳೆದುಕೊಂಡು ಚೆಂಡನ್ನು ಮತ್ತೆ ಮೇಲಕ್ಕೆಸೆದರು. ಬಳಿಕ ಬೌಂಡರಿ ಗೆರೆ ದಾಟಿ ಮತ್ತೆ ಮೈದಾನದೊಳಗೆ ಹಾರಿ ಕ್ಯಾಚ್ ಹಿಡಿಯುವ ಮೂಲಕ ಸ್ವತಃ ಭಾರತ ತಂಡದ ನಾಯಕಿ ಸೃತಿ ಮಂಧಾನ ಅವರನ್ನೂ ಕೂಡ ದಂಗುಬಡಿಸಿದರು.

  • ಹರ್ಲೀನ್ ಡಿಯೋಲ್ ದಿ ಬೆಸ್ಟ್ ಕ್ಯಾಚ್ – ದಿಗ್ಗಜರು ಬೆರಗು

    ಹರ್ಲೀನ್ ಡಿಯೋಲ್ ದಿ ಬೆಸ್ಟ್ ಕ್ಯಾಚ್ – ದಿಗ್ಗಜರು ಬೆರಗು

    ಲಂಡನ್: ಭಾರತ ಮಹಿಳಾ ತಂಡದ ಆಟಗಾರ್ತಿ ಹರ್ಲೀನ್ ಡಿಯೋಲ್ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಿಡಿದ ಅದ್ಭುತ ಕ್ಯಾಚ್‍ಗೆ ದಿಗ್ಗಜ ಕ್ರಿಕೆಟಿಗರು ಸಹಿತ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಭಾರತ ಹಾಗೂ ಇಂಗ್ಲೆಂಡ್ ವನಿತೆಯರ ನಡುವಿನ ಮೊದಲ ಟ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿತ್ತು. ಇಂಗ್ಲೆಂಡ್ ಬ್ಯಾಟಿಂಗ್ ವೇಳೆ 18.5ನೇ ಓವರ್‍ ನಲ್ಲಿ ಎಮಿ ಜೋನ್ಸ್ ಬಾರಿಸಿದ ಬಿಗ್ ಶಾಟ್ ಒಂದನ್ನು ಲಾಂಗ್ ಆಫ್‍ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಹರ್ಲೀನ್ ಕ್ಷಣ ಮಾತ್ರದಲ್ಲಿ ಜಿಂಕೆಯಂತೆ ನೆಗೆದು ಸ್ಟನ್ನಿಂಗ್ ಕ್ಯಾಚ್ ಹಿಡಿದು ವೀಕ್ಷರನ್ನು ನಿಬ್ಬೆರಗಾಗುವಂತೆ ಮಾಡಿದರು.

    ಜೋನ್ಸ್ ಹೊಡೆದ ಬಿಗಿಯಾದ ಹೊಡೆತ ಇನ್ನೆನೂ ಸಿಕ್ಸರ್ ಹೊಗಬೇಕೆನ್ನುವಷ್ಟರಲ್ಲಿ ಚಂಗನೆ ಜಿಗಿದ ಹರ್ಲೀನ್ ಬಾಲ್ ಹಿಡಿದರು. ಈ ವೇಳೆ ಸಮತೋಲನ ಕಳೆದುಕೊಂಡು ಚೆಂಡನ್ನು ಮತ್ತೆ ಮೇಲಕ್ಕೆಸೆದರು. ಬಳಿಕ ಬೌಂಡರಿ ಗೆರೆ ದಾಟಿ ಮತ್ತೆ ಮೈದಾನದೊಳಗೆ ಹಾರಿ ಕ್ಯಾಚ್ ಹಿಡಿಯುವ ಮೂಲಕ ಸ್ವತಃ ಭಾರತ ತಂಡದ ನಾಯಕಿ ಸೃತಿ ಮಂಧಾನ ಅವರನ್ನೂ ಕೂಡ ದಂಗುಬಡಿಸಿದರು. ಇದನ್ನೂ ಓದಿ: ಸ್ಮೃತಿ ಮಂಧಾನ ರೋಚಕ ಕ್ಯಾಚ್ – Fly Smriti Fly ಅಭಿಮಾನಿಗಳ ಹರ್ಷೋದ್ಘಾರ

    ಹರ್ಲೀನ್ ಕ್ಯಾಚ್ ಕಂಡ ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಸಹಿತ ಹಲವು ಆಟಗಾರರು ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರ್ಲೀನ್ ಕ್ಯಾಚ್ ವೈರಲ್ ಆಗುತ್ತಿದೆ.

    ಈ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 18 ರನ್ ಗಳ ಸೋಲು ಅನುಭವಿಸಿದೆ. ಈ ಮೂಲಕ 3 ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡ 1-0 ಪಂದ್ಯಗಳ ಮುನ್ನಡೆಗಳಿಸಿಕೊಂಡಿದೆ.

  • ಬ್ರಿಟಿಷ್ ಸೈನ್ಯ ಸೇರಿದ ಶಹಪುರ ಗ್ರಾಮದ ಹೈದ ಗೋಪಾಲ್ ವಾಕೋಡೆ

    ಬ್ರಿಟಿಷ್ ಸೈನ್ಯ ಸೇರಿದ ಶಹಪುರ ಗ್ರಾಮದ ಹೈದ ಗೋಪಾಲ್ ವಾಕೋಡೆ

    ಕೊಪ್ಪಳ: ಬಡತನ ಮತ್ತು ಅನಕ್ಷರತೆಯಿಂದ ಕೂಡಿದ್ದ ಕುಟುಂಬದಲ್ಲಿ ಜನಿಸಿದ್ದ ಶಹಪುರ ಗ್ರಾಮದ ಗೋಪಾಲ್ ವಾಕೋಡೆ ಎಂಬ ವ್ಯಕ್ತಿ ಬ್ರಿಟಿಷ್ ಸೈನ್ಯ ಸೇರಿದ್ದಾರೆ. ಇಂಗ್ಲೆಂಡ್ ನ ಈಸ್ಟ್ ಮಿಡ್ಲ್ ನಲ್ಲಿರುವ ಬ್ರಿಟೀಷ್ ಮಿಲಿಟರಿಯಲ್ಲಿ ಇದೀಗ ಸೇವೆ ಸಲ್ಲಿಸುತ್ತಿದ್ದಾರೆ.

    ಮೂಲತಃ ಕೊಪ್ಪಳ ಜಿಲ್ಲೆಯ ಶಹಪುರ ಗ್ರಾಮದ ಯಲ್ಲಪ್ಪ ವಾಕೋಡೆ ಮತ್ತು ಫಕೀರವ್ವರ ಅವರ ಐವರು ಮಕ್ಕಳಲ್ಲಿ ಗೋಪಾಲರವರು ಕೂಡ ಒಬ್ಬರಾಗಿದ್ದು, ಇವರಿಗೆ ಒಬ್ಬ ಅಣ್ಣ ಮತ್ತು ಮೂವರು ಸಹೋದರಿಯರಿದ್ದಾರೆ. ಗೋಪಾಲರವರು ಬಾಲ್ಯದಲ್ಲಿದ್ದಾಗ ತಂದೆ ಯಲ್ಲಪ್ಪ ವಾಕೋಡೆ ಕುಟುಂಬ ಸಮೇತ ಗೋವಾಕ್ಕೆ ತೆರಳುತ್ತಾರೆ. ಆಗ ಮದ್ಯವ್ಯಸನಿಯಾಗಿ ರೂಪುಗೊಂಡ ಯಲ್ಲಪ್ಪ ವಾಕೋಡೆ 1995ರಲ್ಲಿ ಸಾವಿಗೀಡಾಗುತ್ತಾರೆ. ತಂದೆಯ ನಿಧನದ ಬಳಿಕ ತಾಯಿಯೂ ಮೃತಪಟ್ಟಿದ್ದಾರೆ. ಅಣ್ಣ ಮದುವೆಯಾಗಿ ಕೆಲವೇ ದಿನಗಳಲ್ಲಿ ಇಹಲೋಕ ತ್ಯಜಿಸಿದರು. ಸದ್ಯ ಗೋಪಾಲನ ಅತ್ತಿಗೆ ಶಹಪುರ ಗ್ರಾಮದಲ್ಲಿಯೇ ಇದ್ದು, ಅವರ ಮೂವರು ಸೋದರಿಯರಿಗೆ ಮದುವೆ ಮಾಡಿದ್ದಾರೆ.

    ಯಲ್ಲಪ್ಪ ವಾಕೋಡೆಯವರು ಗೋವಾಗೆ ತಲುಪಿದಾಗ ಗೋಪಾಲರಿಗೆ 10 ವರ್ಷ. ಈ ವೇಳೆ ತಂದೆ ಮದ್ಯವ್ಯಸನರಾಗಿ ತಾಯಿಗೆ ಕಿರುಕುಳ ನೀಡುತ್ತಿರುವುದನ್ನು ನೋಡಿ, ಜೀವನ ನಡೆಸುವ ಉದ್ದೇಶದಿಂದ ಬೀಚ್ ಗಳಲ್ಲಿ ಕಡಲೆ ಮಾರಾಟ ಮಾಡಲು ಮುಂದಾಗುತ್ತಾರೆ. ದೈಹಿಕ ಶ್ರಮ, ಹಣಕಾಸಿನ ಸ್ಥಿತಿ ಲೆಕ್ಕಿಸದೇ ಕುಟುಂಬ ನಿರ್ವಹಣೆಗೆ ಹಗಲಿರುಳೂ ಶ್ರಮಿಸಲು ಆರಂಭಿಸುತ್ತಾರೆ.

    ಈ ವೇಳೆ ಬ್ರಿಟ್ಸ್ ಕೊರೊಲ್ ಥಾಮಸ್ ಮತ್ತು ಕೊಲಿನ್ ಹ್ಯಾನ್ಸನ್ ಎನ್ನುವ ಬ್ರಿಟಿಷ್ ಹಿರಿಯ ದಂಪತಿ ಪ್ರವಾಸ ಕೈಗೊಂಡಾಗ ಗೋವಾದ ಬೆತೆಲ್ ಬಾತಿ ಬೀಚ್ ನಲ್ಲಿ ಗೋಪಾಲರವರು ಕಡಲೆ ಮಾರಾಟ ಮಾಡುವುದನ್ನು ಆಕಸ್ಮಿಕವಾಗಿ ಗಮನಿಸಿದ್ದಾರೆ. ಬಿಸಿಲನ್ನೂ ಲೆಕ್ಕಿಸದೇ ಬೀಚಿನಲ್ಲಿ ಬಾಲಕರಾಗಿದ್ದ ಗೋಪಾಲರವರು ಪ್ರವಾಸಿಗರಿಗೆ ಕಡಲೆ ತಗೊಳ್ಳಿ ಎಂದು ವಿನಂತಿಸುವ ಪರಿ, ಮುಗ್ಧತೆ, ಜೀವನ ಪ್ರೀತಿ ಕಂಡು ಮಮ್ಮಲ ಮರುಗುತ್ತಾರೆ. ಅಂತಃಕರಣದಿಂದ ಈತನಿಗೆ ಹತ್ತಿರದ ಬಟ್ಟೆ ಅಂಗಡಿಗೆ ಕರೆದುಕೊಂಡು ಹೋಗಿ ಹೊಸ ಬಟ್ಟೆ ಹಾಗೂ ಕಡಲೆ ಮಾರಾಟ ಮಾಡುವ ಬಿದಿರಿನ ಬುಟ್ಟಿ, ವಾಚು ಕೊಡಿಸುತ್ತಾರೆ. ನಂತರ ಮಡಗಾಂವ್ ನಗರದ ರಸ್ತೆಯ ಪಕ್ಕದಲ್ಲಿರುವ ಅವರ ಟೆಂಟ್ ಮತ್ತು ತಾಯಿಯನ್ನೂ ನೋಡಿ ಮರುಕ ಪಡುತ್ತಾರೆ. ನಂತರ ಅವರಿಗೆ ಆ ವರ್ಷ ಬೀಳ್ಕೊಟ್ಟು ಮುಂದಿನ ವರ್ಷ ಭೇಟಿಯಾಗುವ ಭರವಸೆ ನೀಡಿ ವಿದಾಯ ಹೇಳುತ್ತಾರೆ.

    ನಂತರ ವರ್ಷಕ್ಕೊಮ್ಮೆ ಬರುತ್ತಿದ್ದ ಬ್ರಿಟಿಷ್ ದಂಪತಿ ಗೋಪಾಲರಿಗೆ ಹಣಕಾಸಿನ ನೆರವು ನೀಡುತ್ತಿದ್ದರು. 19 ವರ್ಷ ಆಗುತ್ತಿದ್ದಂತೆ ಗೋಪಾಲರನ್ನು ಇಂಗ್ಲೆಂಡ್ ಗೆ ಕರೆದುಕೊಂಡು ಹೋದರು. ಅಲ್ಲದೇ ಬ್ರಿಟ್ಸ್ ಕೊರೊಲ್ ಮತ್ತು ಕೊಲಿನ್ ಹ್ಯಾನ್ಸನ್ ದಂಪತಿ ಅಲ್ಲಿಂದಲೇ ಗೋಪಾಲರವರ ಕುಟುಂಬದವರಿಗೆ ಹಣಕಾಸಿನ ನೆರವು ನೀಡುತ್ತಿದ್ದರು. ಜೊತೆಗೆ ಗೋಪಾಲರವರ ಸಹೋದರಿಯರ ಮದುವೆ ಮತ್ತು ಮನೆ ಕಟ್ಟಲು ನೆರವಾದರು. ಈ ನಡುವೆ ಗೋಪಾಲರಿಗೆ ಇಂಗ್ಲೆಂಡ್ ನ ಸ್ಥಳೀಯ ಮಿಲಿಟರಿ ಬ್ಯಾರಕ್ ನಲ್ಲಿ ಕ್ರಿಕೆಟ್ ತರಬೇತಿ ಕೊಡಿಸಿದರು. ಹಂತ ಹಂತವಾಗಿ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಗೋಪಿ ಸ್ಥಳೀಯ ಕ್ರಿಕೆಟ್ ತಂಡದ ನಾಯಕನಾಗಿ ಗಮನ ಸೆಳೆದಿದ್ದಾರೆ. ಅವರ ನಡೆ, ನುಡಿ, ಆಟೋಟದಲ್ಲಿನ ಪ್ರತಿಭೆಗೆ ಸಂಘ-ಸಂಸ್ಥೆಗಳು ಅಭಿನಂದಿಸಿ ಆದರಿಸುತ್ತವೆ. ಪ್ರಶಸ್ತಿ, ಮಾನ ಸನ್ಮಾನಗಳನ್ನು ನೀಡಿ ಗೌರವಿಸುತ್ತವೆ. ಕ್ರಿಕೆಟ್ ಆಟದಲ್ಲಿನ ಗೋಪಾಲರವರ ಚಾಣಾಕ್ಷತೆ ಕಂಡು ಮಿಲಿಟರಿ ಪಡೆಯ ಅಧಿಕಾರಿಯೊಬ್ಬರು ಸೈನ್ಯಕ್ಕೆ ಸೇರಿಸಿಕೊಳ್ಳುವೆಯಾ? ಎಂದಾಗ ಗೋಪಾಲರವರು ಸಮ್ಮತಿಸಿದ್ದಾರೆ.

    ನಂತರ ಇಂಗ್ಲೆಂಡ್ ನ ಜಾಸ್ಮಿನ್ ಎಂಬ ಯುವತಿಯನ್ನು ವಿವಾಹವಾಗಿರುವ ಗೋಪಾಲ್‍ರವರು, ಡೈಸಿ ಎಂಬ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಕಳೆದ 10 ವರ್ಷದಿಂದ ಇಂಗ್ಲೆಂಡ್ ನಲ್ಲಿ ವಾಸ ಮಾಡಿಕೊಂಡಿದ್ದು, ಕ್ರಿಕೆಟ್ ಮತ್ತು ಮಿಲಿಟರಿ ಸೇವೆಗಾಗಿ ಅಫ್ಘಾನಿಸ್ತಾನ, ಕೀನ್ಯಾ ಮತ್ತು ಜರ್ಮನಿಯಲ್ಲೂ ಸಂಚರಿಸಿದ್ದಾರೆ. ಬ್ರಿಟಿಷ್ ಪ್ರಜೆಯಾದರೂ ಭಾರತದ ಬಗ್ಗೆ ಹೆಮ್ಮೆ, ಹುಟ್ಟೂರಿನ ಬಗ್ಗೆ ಅಭಿಮಾನ ಹೊಂದಿದ್ದಾರೆ ಮೂರು ವರ್ಷಕ್ಕೊಮ್ಮೆ ಜನ್ಮ ನೀಡಿದ ಗ್ರಾಮಕ್ಕೆ ಆಗಮಿಸಿ ಬಂಧುಗಳೊಂದಿಗೆ ಬೆರೆಯುತ್ತಾರೆ. ಬಡತನದ ಬೇಗುದಿಯಲ್ಲಿ ಬೆಂದ ಗೋಪಾಲ ವಾಕೋಡೆ ಸ್ವಸಾಮಥ್ರ್ಯದಿಂದ ಬ್ರಿಟಿಷ್ ಮಿಲಿಟರಿ ಪಡೆ ಸೇರಿದ ಬಗೆ ಅಚ್ಚರಿಗೆ ಕಾರಣವಾಗಿದೆ. ಗೋಪಾಲರವರ ನಡೆ, ನುಡಿ, ವಿನಮ್ರತೆ, ಕ್ರೀಡೆ ಹಾಗೂ ಸಾಮಾಜಿಕ ಸೇವೆ ಗುರುತಿಸಿ ವಿದೇಶೀ ಮಾಧ್ಯಮಗಳು ಈಗಾಗಲೇ ವರದಿ ಮಾಡಿವೆ.

    ಕೊಪ್ಪಳದ ಕುಗ್ರಾಮವೊಂದರಲ್ಲಿ ಜನಿಸಿದವರು ಬ್ರಿಟಿಷ್ ಮಿಲಿಟರಿ ಹೇಗೆ ಸೇರಿದರು? ಎನ್ನುವ ಕುರಿತು ಇಷ್ಟರಲ್ಲಿಯೇ ಇವರ ಜೀವನಗಾಥೆ ಚಿತ್ರೀಕರಣವಾಗಲಿದೆ. ಇದೇ ಜು.12ರಂದು ಗೋಪಾಲರವರ ಸ್ಫೂರ್ತಿದಾಯಕ ಕಥೆ ಆಲಿಸಲು ದೇಶ ವಿದೇಶಗಳ ಮಾಧ್ಯಮ ಪ್ರತಿನಿಧಿಗಳು, ಮಿಲಿಟರಿ ಪಡೆಯ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಸಹೋದರಿಯ ಮೇಲೆಯೇ ಹಲ್ಲೆಗೈದ ಅಣ್ಣ-ತಮ್ಮ..!

  • ಮಹಿಳಾ ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್ ನೂತನ ವಿಶ್ವದಾಖಲೆ

    ಮಹಿಳಾ ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್ ನೂತನ ವಿಶ್ವದಾಖಲೆ

    ಲಂಡನ್: ಭಾರತ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ದಾಖಲಿಸಿದ ಆಟಗಾರ್ತಿಯಾಗಿ ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ.

    ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮಿಥಾಲಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಇಂಗ್ಲೆಂಡ್‍ನ ಮಾಜಿ ಆಟಗಾರ್ತಿ ಚಾರ್ಲೋಟ್ ಎಡ್ವರ್ಡ್ಸ್ ದಾಖಲೆಯನ್ನು ಮುರಿದಿದ್ದಾರೆ.  ಎಡ್ವರ್ಡ್ಸ್  ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿ ಒಟ್ಟು 10,273 ರನ್ ಗಳಿಸಿದ್ದರು. ಇದೀಗ ಮಿಥಾಲಿ ಒಟ್ಟು 10,377 ರನ್ ಬಾರಿಸುವ ಮೂಲಕ ವಿಶ್ವ ಮಹಿಳಾ ಕ್ರಿಕೆಟ್‍ನ ಕ್ವೀನ್ ಆಗಿ ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ: ಖೇಲ್ ರತ್ನ ಪ್ರಶಸ್ತಿಗೆ ಅಶ್ವಿನ್, ಮಿಥಾಲಿ ರಾಜ್ ಹೆಸರು ಶಿಫಾರಸು

    ಈ ಹಿಂದೆ ಏಕದಿನ ಕ್ರಿಕೆಟ್‍ನಲ್ಲಿ 7,000ರನ್ ಗಳಿಸಿದ ಮೊದಲ ಮಹಿಳಾ ಆಟಗಾರ್ತಿಯೆಂದು ಗುರುತಿಸಿಕೊಂಡಿದ್ದ ಮಿಥಾಲಿ, ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ಒಟ್ಟು 10,000 ರನ್ ಗಡಿದಾಟಿದ್ದಾರೆ. ಈ ಮೂಲಕ 10,000 ರನ್ ಗಡಿದಾಟಿದ ಮಹಿಳಾ ಕ್ರಿಕಟ್‍ನ ಎರಡನೇ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೊದಲು ಚಾರ್ಲೋಟ್ ಎಡ್ವರ್ಡ್ಸ್ 10,000 ರನ್ ಸಿಡಿಸಿದ್ದರು. ಇದೀಗ ಮಿಥಾಲಿ ಕೂಡ ಈ ಸಾಧನೆ ಮಾಡಿದ್ದಾರೆ.

    ಮಿಥಾಲಿ ಒಟ್ಟು 317 ಪಂದ್ಯಗಳಿಂದ 10,377 ರನ್ ಸಿಡಿಸಿದ್ದರೆ. ಚಾರ್ಲೋಟ್ ಎಡ್ವರ್ಡ್ಸ್ 309 ಪಂದ್ಯಗಳಿಂದ 10,273 ರನ್ ಕಲೆಹಾಕಿದ್ದಾರೆ. ಎಡ್ವರ್ಡ್ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ನೀಡಿದ್ದಾರೆ. ಮಿಥಾಲಿ ಇನ್ನೂ ಕೂಡ ಭಾರತ ತಂಡದ ಪರ ಆಡುತ್ತಿದ್ದಾರೆ. ಇದನ್ನೂ ಓದಿ: ಏಕದಿನ ಕ್ರಿಕೆಟ್‌ನಲ್ಲಿ ಮಿಥಾಲಿ ರಾಜ್‌ ವಿಶ್ವದಾಖಲೆ