Tag: english

  • ಕೆಂಪೇಗೌಡ ಪ್ಯಾನ್ ವರ್ಲ್ಡ್ ಸಿನಿಮಾ, ಯಾರಿಂದಲೂ ತಡೆಯೋಕೆ ಸಾಧ್ಯವಿಲ್ಲ: ನಿರ್ಮಾಪಕ ಕಿರಣ್

    ಕೆಂಪೇಗೌಡ ಪ್ಯಾನ್ ವರ್ಲ್ಡ್ ಸಿನಿಮಾ, ಯಾರಿಂದಲೂ ತಡೆಯೋಕೆ ಸಾಧ್ಯವಿಲ್ಲ: ನಿರ್ಮಾಪಕ ಕಿರಣ್

    ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಕುರಿತಂತೆ ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ತಾತ್ಕಾಲಿಕ ತಡೆಯಾಜ್ಞೆ ತಂದಿದ್ದಾರೆ. ದಿನೇಶ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ (Dharmabeeru Nadaprabhu Kempegowda) ಚಿತ್ರಕ್ಕೆ ಅನುಮತಿ ನೀಡಬಾರದು ಎಂದು ಅವರು ಕೋರ್ಟಿಗೆ ಮೊರೆ ಹೋಗಿದ್ದರು. ಈ ಕುರಿತಂತೆ ಧರ್ಮಭೀರು ನಾಡಪ್ರಭು ಕೆಂಪೇಗೌಡ ಚಿತ್ರದ ನಿರ್ಮಾಪಕ ಕಿರಣ್ (Kiran), ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದು, ತಮ್ಮ ಪ್ಯಾನ್ ವರ್ಲ್ಡ್ ಸಿನಿಮಾ. ಅದು ಮೊದಲು ಇಂಗ್ಲಿಷ್ (English) , ನಂತರದಲ್ಲಿ ಕನ್ನಡ ಚಿತ್ರವಾಗಿ ಬರಲಿದೆ. ಯುಕೆಯಲ್ಲಿ ನಾವು ಟೈಟಲ್ ಸೇರಿದಂತೆ ಹಕ್ಕು ಸ್ವಾಮ್ಯವನ್ನು ಅಲ್ಲಿಯೇ ಮಾಡುತ್ತೇವೆ ಎಂದಿದ್ದಾರೆ.

    ಏನಿದು ಪ್ರಕರಣ?

    ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಟಿ. ಎಸ್. ನಾಗಾಭರಣ ಅವರ ನಿರ್ದೇಶನದಲ್ಲಿ ಮೂಡಿ ಬರಬೇಕಿರುವ, ಕೆಂಪೇಗೌಡರ ಪಾತ್ರಕ್ಕೆ ಡಾಲಿ ಧನಂಜಯ್ ಆಯ್ಕೆಯಾಗಿರುವ ಸಿನಿಮಾದ ಚಿತ್ರೀಕರಣದ ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆಯೇ ಧರ್ಮಭೀರು ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಸಿನಿಮಾವೊಂದು ಘೋಷಣೆ ಆಗಿತ್ತು. ಈ ಸಿನಿಮಾವನ್ನು ನಿಲ್ಲಿಸುವಂತೆ ನಾಗಾಭರಣ ಕೋರ್ಟ್ ಮೆಟ್ಟಿಲು ಏರಿದ್ದರು.

    ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು (Court)  ಮಧ್ಯಂತರ ಆದೇಶದ ಅನುಸಾರ, ನಿರ್ಮಾಪಕ ಕಿರಣ್ ತೋಟಂಬೈಲ್, ಚೇತನ್ ರಾಜ್, ಧರ್ಮೇಂದ್ರ ಕುಮಾರ್ ಅರೇಹಳ್ಳಿ ಮತ್ತು ದಿನೇಶ್ ಬಾಬೂ, ಅವರ ಉದ್ಯೋಗಿಗಳು, ಏಜೆಂಟರು, ಪಾಲುದಾರರು, ಸಹವರ್ತಿ, ಅಧಿಕಾರಿ, ಪ್ರತಿನಿಧಿ ಮತ್ತು ಅವರ ಪರವಾಗಿ ವರ್ತಿಸುವ ಇತರ ಎಲ್ಲ ವ್ಯಕ್ತಿಗಳ ವಿರುದ್ಧ  ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಶೀರ್ಷಿಕೆಯ ಚಲನಚಿತ್ರವನ್ನು ಅಥವಾ ಆ ವಿಷಯವನ್ನು ಹೊಂದಿರುವ ಯಾವುದೇ ಚಲನಚಿತ್ರವನ್ನು ನಿರ್ಮಾಣ, ಪ್ರಸಾರ, ಸಾರ್ವಜನಿಕರಿಗೆ ಸಂವಹನ, ಪುನರುತ್ಪಾದನೆ, ಧ್ವನಿಮುದ್ರಣ, ವಿತರಣೆ, ಪ್ರಸಾರ, ಜಾಹೀರಾತು, ನಿರ್ದೇಶನ ಅಥವಾ ಇತರ ಯಾವುದೇ ರೀತಿಯಲ್ಲಿ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.

    ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಈಶ್ವರ ಎಂಟರ್‌ಟೈನ್‌ಮೆಂಟ್ ಪ್ರೈವೇಟ್‌ ಲಿಮಿಟೆಡ್ ಪ್ರತಿನಿಧಿಗಳಾದ ನಿರ್ಮಾಪಕರಾದ ಎಂ. ಎನ್. ಶಿವರುದ್ರಪ್ಪ  ಮತ್ತು ರಾಹುಲ್ ಗುಂಡಾಲ, ನಿರ್ದೇಶಕ ಟಿ.ಎಸ್. ನಾಗಾಭರಣ, ಸಹಲೇಖಕಿ ಪ್ರತಿಭಾ ನಂದಕುಮಾರ್ ಇವರ “ನಾಡಪ್ರಭು ಕೆಂಪೇಗೌಡ” ಚಿತ್ರದ ಚಿತ್ರಕಥೆಯ ಟ್ರೇಡ್‌ಮಾರ್ಕ್, ಶೀರ್ಷಿಕೆ, ಬ್ರಾಂಡ್, ಪೂರ್ವಪ್ರತ್ಯಯ ಮತ್ತು ಪ್ರತ್ಯಯ ಸೇರಿಕೆ,  ರಿಮೇಕ್, ಅಳವಡಿಕೆ ಕುರಿತ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿ ಯಾವುದೇ ರೀತಿಯಲ್ಲಿ ಪ್ರಸ್ತಾವಿತ  ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಲನಚಿತ್ರ ಕುರಿತ ನಿರ್ಮಾಣ, ನಿರ್ದೇಶನ, ಜಾಹೀರಾತು, ವಿತರಣೆ ಅಥವಾ ಸಾರ್ವಜನಿಕರಿಗೆ ಸಂವಹನಗಳನ್ನು ಮಾಡದಂತೆ ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.

     

    ನಾಡಪ್ರಭು ಕೆಂಪೇಗೌಡ ಕುರಿತಂತೆ ಟಿ.ಎಸ್. ನಾಗಾಭರಣ ಮತ್ತು ನಿರ್ಮಾಪಕ ಎಂ ಎನ್ ಶಿವರುದ್ರಪ್ಪ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿ, ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬೆಂಗಳೂರು, ಇಲ್ಲಿ ದಾವೆ ಹೂಡಿದ್ದರು.

  • ಪ್ರಭಾಸ್ ನಟನೆಯ ‘ಸಲಾರ್’ ಇಂಗ್ಲಿಷ್ ನಲ್ಲೂ ರಿಲೀಸ್

    ಪ್ರಭಾಸ್ ನಟನೆಯ ‘ಸಲಾರ್’ ಇಂಗ್ಲಿಷ್ ನಲ್ಲೂ ರಿಲೀಸ್

    ಲಾರ್ ಸಿನಿಮಾವನ್ನು ನೆಟ್ ಫ್ಲಿಕ್ಸ್ (OTT) ಖರೀದಿಸಿದ್ದು ಈಗಾಗಲೇ ಹಲವು ಭಾಷೆಗಳಲ್ಲಿ ಅದು ಸ್ಟ್ರೀಮಿಂಗ್ ಆರಂಭಿಸಿದೆ. ಇದರ ಜೊತೆ ಜೊತೆಗೆ ಸಲಾರ್ ಸಿನಿಮಾ ಇಂಗ್ಲಿಷ್ (English) ನಲ್ಲೂ ರಿಲೀಸ್ ಆಗಿದೆ. ಜೊತೆಗೆ ಸ್ಪ್ಯಾನಿಷ್ (Spanish) ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದ್ದು, ಮಾರ್ಚ್ 7 ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಸಂಸ್ಥೆ ತಿಳಿಸಿದೆ.

    ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಈವರೆಗೂ 627 ಕೋಟಿ ರೂಪಾಯಿಗೂ ಅಧಿಕ ಗಳಿಸಿ, ಇನ್ನೂ ಮುನ್ನುಗ್ಗುತ್ತಿದೆ. ಈ ನಡುವೆ ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಿದೆ. ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಸಲಾರ್ 2 ಸಿನಿಮಾದ ಕುರಿತಂತೆ ನಿರ್ದೇಶಕ ಪ್ರಶಾಂತ್ ನೀಲ್ ಕೆಲಸ ಕೂಡ ಶುರು ಮಾಡಲಿದ್ದಾರಂತೆ. ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಸಲಾರ್ (Salaar) ಸಿನಿಮಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿಶ್ವದಾದ್ಯಂತ  ಕೋಟಿ ಕೋಟಿ ಹಣವನ್ನು ಗಳಿಸಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ ದಾಖಲೆಯನ್ನು ಮಾಡಿದೆ. ಕನ್ನಡದ ನಿರ್ಮಾಣದ ಸಂಸ್ಥೆಯೊಂದು ರಾಷ್ಟ್ರೀಯ ಮಟ್ಟದಲ್ಲಿ ಇಂಥದ್ದೊಂದು ದಾಖಲೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

     

    ಸಲಾರ್’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

  • ಇಂಗ್ಲಿಷ್ ಬೋರ್ಡ್ ಹರಿದು, ಕಲ್ಲು ತೂರಾಟ ಮಾಡಿ ಆಕ್ರೋಶ- ಕರವೇ ಕಾರ್ಯಕರ್ತರ ಮೇಲೆ FIR

    ಇಂಗ್ಲಿಷ್ ಬೋರ್ಡ್ ಹರಿದು, ಕಲ್ಲು ತೂರಾಟ ಮಾಡಿ ಆಕ್ರೋಶ- ಕರವೇ ಕಾರ್ಯಕರ್ತರ ಮೇಲೆ FIR

    ಬೆಂಗಳೂರು: ಕನ್ನಡ ನಾಮಫಲಕ (Kannada Board) ಹಾಕದ ಅಂಗಡಿ ಮುಂಗಟ್ಟುಗಳ ಮುಂದೆ ಇಂಗ್ಲಿಷ್ ಬೋರ್ಡ್ (English Board) ಹರಿದು, ಕಲ್ಲು ತೂರಾಟ ನಡೆಸಿದ್ದ ಕರವೇ, ಆಕ್ರೋಶ ಹೊರಹಾಕಿತ್ತು. ಇದೀಗ ಕಾನೂನು ಉಲ್ಲಂಘನೆ ಆರೋಪದ ಮೇಲೆ ಕರವೇ ಕಾರ್ಯಕರ್ತರ ಮೇಲೆ ಎಫ್‍ಐಆರ್ ದಾಖಲಾಗಿದೆ.

    ಕನ್ನಡ ಬಳಸಿ ಇಲ್ಲವೇ ಕರ್ನಾಟಕ ಬಿಟ್ಟು ತೊಲಗಿ, ಅಂಗಡಿ ಮುಂಗಟ್ಟುಗಳ ಬೋರ್ಡ್ ಕನ್ನಡದಲ್ಲಿರಬೇಕು. ಕನ್ನಡ ಭಾಷೆ (Kannada Language) ಬಳಕೆಗಾಗಿ ಒತ್ತಾಯಿಸಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆಗೆ ಇಳಿದಿದ್ರು. ಬೆಂಗಳೂರಿನಲ್ಲಿ ಇರುವ ಇಂಗ್ಲಿಷ್ ನಾಮಫಲಕ ಹರಿದು ಆಕ್ರೋಶ ಹೊರಹಾಕಿದ್ರು. ಈ ಮಧ್ಯೆ ಉದ್ರಿಕ್ತಗೊಂಡ ಕಾರ್ಯಕರ್ತರು ಇಂಗ್ಲೀಷ್ ಬೋರ್ಡ್‍ಗಳ ಮೇಲೆ ಹಲವೆಡೆ ಕಲ್ಲು ತೂರಾಟ ಕೂಡ ಮಾಡಿದ್ರು. ಕರವೇ ಪ್ರತಿಭಟನೆ ಹತ್ತಿಕ್ಕಲು ಮಧ್ಯಾಹ್ನದಿಂದ ವಶಕ್ಕೆ ಪಡೆದ ಕಾರ್ಯಕರ್ತರನ್ನ ಸಂಜೆ ಆಗ್ತಿದ್ದಂತೆ ಬಿಡುಗಡೆ ಮಾಡಲಾಯ್ತು. ಅವರ ಜೊತೆಗೆ 250 ಕಾರ್ಯಕರ್ತರನ್ನ ಸಹ ಪೊಲೀಸ್ ವಾಹನ ತರಬೇತಿ ಶಾಲೆಯಲ್ಲೇ ಇರಿಸಲಾಗಿತ್ತು. ಹೀಗಾಗಿ ತಡ ಆಗಿದ್ರಿಂದ ದೂರದೂರುಗಳಿಗೆ ತೆರಳುವ ಕಾರ್ಯಕರ್ತರಿಗೆ ಕಷ್ಟ ಆಗತ್ತೆ ಅಂತಾ ಪೊಲೀಸ್ ವಾಹನ ಚಾಲನಾ ಕೇಂದ್ರದಲ್ಲಿಯೇ ರಾತ್ರಿ ಉಳಿದುಕೊಳ್ಳುವ ನಿರ್ಧಾರ ಮಾಡಿದರು.

    ಲ್ಯಾವೆಲ್ಲೆ ರಸ್ತೆಯಲ್ಲಿ ಇಂಗ್ಲಿಷ್ ನಾಮಫಲಕ ಹರಿದಿದ್ದಕ್ಕಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 15 ಜನ ಕರವೇ ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಲಾಗಿತ್ತು. ಇನ್ನುಳಿದಂತೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಂಪೈರ್ ಹೋಟೆಲ್‍ಗೆ ಕಲ್ಲು ತೂರಾಟ ನಡೆಸಿದಕ್ಕೆ ಎಫ್‍ಐಆರ್ ದಾಖಲಾದ್ರೆ, ಅಶೋಕನಗರದಲ್ಲಿ ಲ್ಯಾವೆಲೆ ರಸ್ತೆ ಇಂಗ್ಲಿಷ್ ಬೋರ್ಡ್ ಧ್ವಂಸ ಮಾಡಿದಕ್ಕಾಗಿ ದೂರು ದಾಖಲಾಗಿದೆ. ಕಾಟನ್ ಪೇಟೆಯಲ್ಲಿ ಒಂದು ಎಫ್‍ಐಆರ್ ಆದ್ರೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಬಿಎಂಟಿಸಿ ಬಸ್ ಗಾಜು ಒಡೆದಿದ್ದಕ್ಕೆ ಸೇರಿದಂತೆ, ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಉಗುಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮತ್ತು ರಸ್ತೆತಡೆ ನಡೆಸಿ ಗಲಾಟೆ ಮಾಡಿ ಅಡಚಣೆ ಮಾಡಿದ್ದಕ್ಕೆ ಮೂರು ಪ್ರತ್ಯೇಕ ಎಫ್‍ಐಆರ್ ದಾಖಲಿಸಲಾಗಿದೆ.

    ಇನ್ಸ್ ಪೆಕ್ಟರ್ ಗಿರೀಶ್ ವಿರುದ್ಧ ಕರವೇ ಕಿಡಿ: ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರ ಮೇಲೆ ಕಬ್ಬನ್ ಪಾರ್ಕ್ ಠಾಣೆ ಇನ್ಸ್ ಪೆಕ್ಟರ್ ಗಿರೀಶ್ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಲಾಠಿ ಚಾರ್ಜ್‍ನಲ್ಲಿ ಓರ್ವನ ಕೈ ಮೂಳೆ ಮುರಿದಿದ್ರೆ, ಮತ್ತೋರ್ವನ ಕಾಲಿಗೆ ಇನ್ಸ್ ಪೆಕ್ಟರ್ ಹೊಡೆದು ಗಾಯ ಮಾಡಿದ್ದಾರಂತೆ. ಅಲ್ಲದೇ 15 ಜನ ಅಮಾಯಕರ ವಿರುದ್ಧ ಎಫ್‍ಐಆರ್ ಮಾಡಿ ಬಂಧಿಸಿದ್ದಾರೆಂದು ಆರೋಪಿಸಿ ಠಾಣೆ ಎದುರು ಅರೆಬೆತ್ತಲೆಯಾಗಿಯೇ ಪ್ರತಿಭಟಿಸಿದ್ರು.

  • ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್

    ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್

    ಬೆಂಗಳೂರು: ಇಂಗ್ಲಿಷ್ (English) ಇರೋದೇ ತಪ್ಪು ಮಾತಾಡೋಕೆ, ಆದರೆ ಕನ್ನಡ (Kannada) ಇರೋದು ಸರಿಯಾಗಿ ಮಾತನಾಡಲು ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.

    ವಿಧಾನಸಭೆಯಲ್ಲಿ (Visdhana Sabha) ಮಾತನಾಡಿದ ಅವರು, ಬಡವರ ದೇವಾಲಯ ಕನ್ನಡ ಶಾಲೆ. ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯಾ ಎನ್ನುವ ಹಾಗೆ ಬಡವರ ಮಕ್ಕಳು ವಿಧಾನಸೌಧಕ್ಕೆ ಬರಲು ಸಾಧ್ಯವಾಗಿರುವುದು ಸಂವಿಧಾನದಿಂದ. ನಮ್ಮ ಪಕ್ಷದ ನಾಯಕರು ನನ್ನಂತ ಬಡವರ ಮಗನನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ ಮಂತ್ರಿಗಳ ಜೊತೆ ನಮ್ಮ ಅಡ್ಜಸ್ಟ್‌ಮೆಂಟ್‌ ರಾಜಕೀಯ ಇಲ್ಲ: ಯತ್ನಾಳ್‌

    ಅನ್ನಭಾಗ್ಯ (Annabhagya) ಶ್ರೀಮಂತರ ದೃಷ್ಟಿಯಲ್ಲಿ ರೇಷನ್ ಅಷ್ಟೇ. ಆದರೆ ನನ್ನಂತವನ ದೃಷ್ಟಿಯಲ್ಲಿ ಅನ್ನ ಎನ್ನುವುದು ದೇವರು. ಗೃಹಜ್ಯೋತಿ (Gruhajyothi) ಕೇವಲ ಮನೆಯನ್ನು ಬೆಳಗುತ್ತಿಲ್ಲ. ಕೋಟ್ಯಂತರ ಮಕ್ಕಳು ತಡರಾತ್ರಿಯವರೆಗೆ ಓದಲು ಸಹಾಯಕವಾಗಿದೆ. ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸಲು ಆದ್ಯತೆ ನೀಡಬೇಕಿದೆ. ಅದರ ಬಗ್ಗೆ ಸಂಬಂಧಿಸಿದ ಸಚಿವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸಾರಿಗೆ ಇಲಾಖೆಯಲ್ಲಿ ಸಂಚರಿಸ್ತಿವೆಯಾ ನಿರುಪಯುಕ್ತ ಬಸ್‌ಗಳು? – ಸಾರಿಗೆ ಅಧಿಕಾರಿಯಿಂದಲೇ ಹೊರಬಿತ್ತು ಸತ್ಯ

    ಸರ್ಕಾರಿ ಆಸ್ಪತ್ರೆಯ ಚಿಕಿತ್ಸಾ ಗುಣಮಟ್ಟ ಚೆನ್ನಾಗಿರುವಂತೆ ನೋಡಿಕೊಳ್ಳಬೇಕು. ಉತ್ತಮ ಚಿಕಿತ್ಸೆ ಸಿಗದೆ ನನ್ನ ಅಪ್ಪ-ಅಮ್ಮನನ್ನು ಕಳೆದುಕೊಂಡೆ. ಅಂತಹ ಸ್ಥಿತಿ ಯಾರಿಗೂ ಬರಬಾರದು. ಅದಕ್ಕಾಗಿ ಸರ್ಕಾರಿ ಆಸ್ಪತ್ರೆ ಉಳಿಸಬೇಕು. ಸಿದ್ದರಾಮನಹುಂಡಿಯಲ್ಲಿ ಹುಟ್ಟಿದ ಸಿದ್ದರಾಮಯ್ಯನವರಿಗೆ (Siddaramaiah) ಹಸಿವಿನ ಅನುಭವವಿದೆ. ಅದಕ್ಕಾಗಿ ಅನ್ನಭಾಗ್ಯ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಬಲ್‌ ಮರ್ಡರ್‌ ಬಳಿಕ ಪಬ್ಲಿಕ್‌ ಟಿವಿ ಸುದ್ದಿಯ ಸ್ಟೇಟಸ್ – ವೃತ್ತಿ ವೈಷಮ್ಯವೇ ಕೊಲೆಗೆ ಕಾರಣ?

    ಐಎಎಸ್ ಮತ್ತು ಮೆಡಿಕಲ್ ಓದಲು ಬರುವ ಕನ್ನಡ ಮಾಧ್ಯಮದವರನ್ನು (Kannada Medium) ಸರ್ಕಾರ ಆದ್ಯತೆ ಮೇಲೆ ಪರಿಗಣಿಸಬೇಕು. ಉನ್ನತ ಶಿಕ್ಷಣ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಗೆ ಮರಿಚೀಕೆ ಆಗಬಾರದು. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಆನ್‌ಲೈನ್‌ ಗೇಮ್ಸ್‌ಗೆ 28% ಜಿಎಸ್‌ಟಿ – ಸ್ಟಾರ್ಟಪ್‌ ಮಾಲೀಕರ ರಾಜಕೀಯ ಪ್ರವೇಶಕ್ಕೆ ಸೂಕ್ತ ಕಾಲ ಎಂದ ಭಾರತ್‌ಪೇ ಸಂಸ್ಥಾಪಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಟಲಿಯಲ್ಲಿ ಇಂಗ್ಲಿಷ್ ಭಾಷೆ ಬ್ಯಾನ್ – ಸಂವಹನ ನಡೆಸಿದರೆ ಭಾರೀ ದಂಡ

    ಇಟಲಿಯಲ್ಲಿ ಇಂಗ್ಲಿಷ್ ಭಾಷೆ ಬ್ಯಾನ್ – ಸಂವಹನ ನಡೆಸಿದರೆ ಭಾರೀ ದಂಡ

    ರೋಮ್: ಇನ್ನು ಮುಂದೆ ಸರ್ಕಾರಿ ಸಂವಹನ ಇಟಲಿ ಭಾಷೆಯಲ್ಲಿ (Italy language) ನಡೆಯಬೇಕು. ಒಂದು ವೇಳೆ ಇಂಗ್ಲಿಷ್ (English) ಅಥವಾ ಬೇರೆ ಯಾವುದೇ ವಿದೇಶಿ ಭಾಷೆಯಲ್ಲಿ ನಡೆದರೆ ದಂಡವನ್ನು ವಿಧಿಸುವ ಪ್ರಸ್ತಾಪ ಇರುವ ಚರ್ಚೆಗೆ ಗ್ರಾಸವಾಗುವ ಮಸೂದೆಯೊಂದನ್ನು ಮಂಡನೆ ಮಾಡಲು ಇಟಲಿ ಸರ್ಕಾರ ಮುಂದಾಗಿದೆ.

    ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿಯ (Giorgia Meloni) ಅವರ ಬ್ರದರ್ಸ್ ಆಫ್ ಇಟಲಿ (Brothers of Italy) ಪಕ್ಷ ಕರಡು ಮಸೂದೆಯನ್ನು ಸಿದ್ದಪಡಿಸಿದೆ. ಇದರ ಪ್ರಕಾರ ದೇಶದಲ್ಲಿ ಅಧಿಕೃತ ಸಂವಹನಕ್ಕೆ ಇಟಲಿ ಭಾಷೆಯಲ್ಲಿ ನಡೆಯಬೇಕು. ಯಾವುದೇ ವಿದೇಶಿ ಭಾಷೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಮಾಡುವಂತಿಲ್ಲ ಎಂಬ ನಿಯಮವನ್ನು ಒಳಗೊಂಡಿದೆ. ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದರೆ 100,000 ಯುರೋ (ಸುಮಾರು 90 ಲಕ್ಷ ರೂ.) ವರೆಗೆ ದಂಡವನ್ನು ವಿಧಿಸಲಾಗುವ ಪ್ರಸ್ತಾಪವನ್ನು ಒಳಗೊಂಡಿದೆ.

    ಈ ಮಸೂದೆ ಈಗ ಸಂಸತ್ತಿನ ಚರ್ಚೆಯ ಹಾದಿಯಲ್ಲಿದೆ. ಇಟಾಲಿಯನ್ ಭಾಷೆಯನ್ನೇ ಲಿಖಿತ ಹಾಗೂ ಮೌಖಿಕವಾಗಿ ಬಳಸಲು ಹಾಗೂ ಸಾರ್ವಜನಿಕರಿಗೆ ಈ ಭಾಷೆಯ ಜ್ಞಾನ ಹಾಗೂ ಪಾಂಡಿತ್ಯವನ್ನು ಹೆಚ್ಚಿಸಲು ಈ ನಿರ್ಧಾರ ಮಾಡಲಾಗಿದೆ. ಇದೀಗ ವಿದೇಶಿ ಭಾಷೆಗಳ ಬ್ಯಾನ್ ಇಟಲಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಗಳಲ್ಲಿ ಅಧಿಕೃತ ದಾಖಲೆಗಳಲ್ಲಿರುವ ಇಂಗ್ಲಿಷ್ ಬಳಕೆಯನ್ನು ನಿಷೇಧಿಸುತ್ತದೆ. ಇದನ್ನೂ ಓದಿ: ಚೀನಾದ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲವ್‌ ಮಾಡಲು ಒಂದು ವಾರ ರಜೆ

    ಇಷ್ಟು ಮಾತ್ರವಲ್ಲದೇ ದೇಶದಲ್ಲಿ ಸಾರ್ವಜನಿಕ ಸರಕು ಹಾಗೂ ಸೇವೆಗಳ ಪ್ರಚಾರ ಮತ್ತು ಬಳಕೆಗೆ ಈ ನಿಯಮ ಕಡ್ಡಾಯವಾಗಿದೆ. ಒಂದು ವೇಳೆ ಉಲ್ಲಂಘನೆಯಾದರೆ 5,000 ಯುರೋದಿಂದ 100,000 ಯುರೋ ವರೆಗೆ ದಂಡ ವಿಧಿಸುವ ಪ್ರಸ್ತಾಪವನ್ನು ಒಳಗೊಂಡಿದೆ.

    ಇಂಗ್ಲಿಷ್ ಭಾಷೆಯ ವ್ಯಾಮೋಹಕ್ಕೆ ಯುವ ಜನತೆ ಬೀಳುತ್ತಿದ್ದರೆ. ಇದರಿಂದಾಗಿ ಇಟಲಿಯ ಸಂಸ್ಕೃತಿ ಮತ್ತು ಆರ್ಥಿಕತೆಗೆ ಸಮಸ್ಯೆಯಾಗುತ್ತದೆ. ಈ ಕಾರಣಕ್ಕೆ ಈ ಇಂಗ್ಲಿಷ್ ಬಳಕೆಯ ಮೇಲೆ ನಿರ್ಬಂಧ ಹೇರುವ ಮಸೂದೆ ಮಂಡನೆ ಮಂಡಲಾಗಿದೆ ಎಂದು ಬ್ರದರ್ಸ್ ಆಫ್ ಇಟಲಿ ಪಕ್ಷ ಸಮರ್ಥನೆ ಮಾಡಿಕೊಂಡಿದೆ.  ಇದನ್ನೂ ಓದಿ: ಭಾರತದಿಂದ 85 ದೇಶಗಳಿಗೆ ರಕ್ಷಣಾ ಸಾಮಾಗ್ರಿ ರಫ್ತು – 1,5920 ಕೋಟಿ ದಾಖಲೆ

  • ಇಂಗ್ಲಿಷಿನಲ್ಲೂ ‘ಕಾಂತಾರ’ ರಿಲೀಸ್ : ಮಾರ್ಚ್ 1ರಿಂದ ಲಭ್ಯ

    ಇಂಗ್ಲಿಷಿನಲ್ಲೂ ‘ಕಾಂತಾರ’ ರಿಲೀಸ್ : ಮಾರ್ಚ್ 1ರಿಂದ ಲಭ್ಯ

    ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿರುವ ‘ಕಾಂತಾರ’ ಸಿನಿಮಾ ಇದೀಗ ಇಂಗ್ಲಿಷ್ ನಲ್ಲೂ ಸಿದ್ಧವಾಗಿದೆ. ಈಗಾಗಲೇ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲೂ ಈ ಸಿನಿಮಾ ರಿಲೀಸ್ ಆಗಿದ್ದು, ಈಗ ಇಂಗ್ಲಿಷ್ ನಲ್ಲೂ ಚಿತ್ರವನ್ನು ಡಬ್ ಮಾಡಲಾಗಿದೆ. ಮಾರ್ಚ್ 1 ರಿಂದ ಓಟಿಟಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಸಿನಿಮಾ ಶತದಿನೋತ್ಸವ ಕಂಡಿದೆ. ಈ ವೇಳೆಯಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಗಿದೆ.

    ಕಡಿಮೆ ವೆಚ್ಚದಲ್ಲಿ ತಯಾರಾದ ಈ ಸಿನಿಮಾ ನಾಲ್ಕುನೂರಕ್ಕೂ ಅಧಿಕ ಕೋಟಿ ಹಣವನ್ನು ಗಳಿಸಿದೆ. ನೂರು ದಿನಗಳ ಪ್ರದರ್ಶನ ಕಂಡಿದೆ. ಹಲವು ಭಾಷೆಗಳಲ್ಲಿ ಡಬ್ ಆಗಿ, ಅಷ್ಟೂ ಭಾಷೆಗಳಲ್ಲೂ ಯಶಸ್ವಿ ಪ್ರದರ್ಶನ ಕಂಡಿದೆ. ಈಗ ಇಂಗ್ಲಿಷಿನವರಿಗೂ ಈ ಸಿನಿಮಾವನ್ನು ತೋರಿಸಲು ನೆಟ್ ಫ್ಲಿಕ್ಸ್ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ ಮೊದಲ ವಾರದಲ್ಲೇ ನೋಡಲು ಲಭ್ಯವಿದೆ. ಇದನ್ನೂ ಓದಿ: ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ಕಾಂತಾರ ನಂತರ ಕಾಂತಾರ 2 ಸಿನಿಮಾ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ರಿಷಬ್ ಶೆಟ್ಟಿ ಬೇರೆಯದ್ದೇ ಅಚ್ಚರಿಯನ್ನು ನೀಡಿದ್ದಾರೆ. ಈಗಾಗಲೇ ನೋಡಿದ್ದು ಕಾಂತಾರ 2, ಮುಂದಿನ ದಿನಗಳಲ್ಲಿ ಬರುವುದು ಕಾಂತಾರ 1 ಎಂದು ಅವರು ಹೇಳಿಕೆ ನೀಡಿದ್ದಾರೆ. ಈಗಾಗಲೇ ನೋಡಿರುವ ಕಥೆಯ ಮುಂಚಿನ ಕಥೆಯನ್ನು ಮುಂದಿನ ಕಾಂತಾರ ಚಿತ್ರದಲ್ಲಿ ನೋಡಲಿದ್ದೀರಿ ಎಂದು ರಿಷಬ್ ತಿಳಿಸಿದ್ದಾರೆ. ಈ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡ ಮಾತಾಡಿದ ಯುವತಿಗೆ ಕೇರಳ ಯುವತಿ ಹಲ್ಲೆ- ಒಂದೇ ಪಿಜಿಯಲ್ಲಿದ್ರೂ ಭಾಷಾ ತಾರತಮ್ಯ

    ಕನ್ನಡ ಮಾತಾಡಿದ ಯುವತಿಗೆ ಕೇರಳ ಯುವತಿ ಹಲ್ಲೆ- ಒಂದೇ ಪಿಜಿಯಲ್ಲಿದ್ರೂ ಭಾಷಾ ತಾರತಮ್ಯ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನ್ಯಭಾಷಿಕರ ಉಪಟಳ ಹೆಚ್ಚಾಗಿದೆ. ನನಗೆ ಅರ್ಥವಾಗದ ಕನ್ನಡ ಭಾಷೆ, ನನ್ಮುಂದೆ ಮಾತನಾಡಬೇಡ ಅಂತ, ತಲೆಗೆ ರಕ್ತ ಹೆಪ್ಪುಗಟ್ಟುವಂತೆ ಕನ್ನಡದ ಯುವತಿಗೆ, ಕೇರಳ (Kerala) ದ ಯುವತಿ ಹಲ್ಲೆ ಮಾಡಿದ್ದಾರೆ.

    ಹೌದು. ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿ ಸೃಷ್ಟಿ ಬಿಟಿಎಂ ಲೇಔಟ್‍ನ ಪಿಜಿಯಲ್ಲಿದ್ರು. ಇವರಿಗೆ ಕೇರಳ ಮೂಲದ ಅಸ್ಸೇಲಾ ಎಂಬ ಯುವತಿ ರೂಂಮೇಟ್ ಆಗಿದ್ರು. ಮೊನ್ನೆ ಸೃಷ್ಟಿ ಫೋನಲ್ಲಿ ಕನ್ನಡ (Kannada Language) ಮಾತನಾಡ್ತಿರುವಾಗ, ನನಗೆ ಕನ್ನಡ ಅರ್ಥ ಆಗಲ್ಲ. ಇಂಗ್ಲೀಷ್‍ನಲ್ಲೇ ಮಾತನಾಡು ಅಂತ ಕನ್ನಡ ಭಾಷೆಗೆ ಅವಮಾನಿಸಿ, ಧಮ್ಕಿ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಸೃಷ್ಟಿ ತಲೆಗೆ ಬಲವಾಗಿ ಹೊಡೆದಿದ್ದಾರೆ. ಪರಿಣಾಮ ತಲೆಯಲ್ಲಿ ರಕ್ತಹೆಪ್ಪುಗಟ್ಟಿದ್ದು, ಸಿಟಿ ಸ್ಕ್ಯಾನಿಂಗ್‍ಗೆ ನಿಮಾನ್ಸ್ ಆಸ್ಪತ್ರೆಗೆ ಹೋಗುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ – ಪತಿಯಿಂದಲೇ ಕೊಲೆಯಾದ ಶಂಕೆ

    2 ವರ್ಷದಿಂದ ಒಟ್ಟಿಗೆ ವಾಸವಿರುವ ಇವರಿಬ್ಬರ ಮಧ್ಯೆ ಆಗಾಗ ಸಣ್ಣಪುಟ್ಟ ಮನಸ್ತಾಪ, ಗಲಾಟೆಗಳು ಭಾಷೆಯ ವಿಚಾರವಾಗಿ ನಡೆದಿತ್ತಂತೆ. ಆದರೆ ಮೊನ್ನೆ ಕನ್ನಡ ಭಾಷೆಯನ್ನ ತೀರಾ ಕೆಟ್ಟದಾಗಿ ಮಾತನಾಡಿದ್ದಕ್ಕೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಘಟನೆ ಬಳಿಕ ಪಿಜಿ ಮಾಲೀಕರು ಕೇರಳ ಮೂಲದ ಅಸ್ಸೇಲಾ ಎಂಬ ಯುವತಿಯನ್ನ ಹೊರ ಕಳಿಸಿದ್ದಾರೆ. ಇನ್ನೂ ಸೃಷ್ಟಿ ಅಸ್ಸೇಲಾ ವಿರುದ್ದ ಮೈಕೋಲೇಔಟ್ ಪೊಲೀಸ್ ಠಾಣೆ (Mico Layout Police Station) ಯಲ್ಲಿ ದೂರು ದಾಖಲಿಸಿದ್ದಾರೆ.

    ವಿವಿಧ ಕನ್ನಡ ಪರ ಸಂಘಟನೆಗಳು, ಕರ್ನಾಟಕದ ಯುವತಿ ಸೃಷ್ಟಿ ಬೆಂಬಲಕ್ಕೆ ನಿಂತಿದ್ದು, ಹಲ್ಲೆ ಮಾಡಿದ ಯುವತಿಯ ಮೇಲೆ ಕ್ರಮಕ್ಕೆ ಆಗ್ರಹಿಸಿವೆ. ಅದೇನೆ ಆಗ್ಲಿ, ಕನ್ನಡದ ನೆಲದಲ್ಲಿ, ಕನ್ನಡ ಭಾಷೆಗೆ ಅವಮಾನ ಮಾಡಿ, ಕರ್ನಾಟಕದ ಯುವತಿಯ ಮೇಲೆನೇ ಹಲ್ಲೆ ಮಾಡಿದ್ದಕ್ಕೆ ಕನ್ನಡ ಸಂಘಟನೆಗಳು ನಿಗಿನಿಗಿ ಕೆಂಡ ಕಾರುತ್ತಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂಗ್ಲಿಷ್ ಓದಲು ಕಷ್ಟ – ಬಾಲಕ ಆತ್ಮಹತ್ಯೆಗೆ ಯತ್ನ

    ಇಂಗ್ಲಿಷ್ ಓದಲು ಕಷ್ಟ – ಬಾಲಕ ಆತ್ಮಹತ್ಯೆಗೆ ಯತ್ನ

    ತುಮಕೂರು: ಇಂಗ್ಲಿಷ್ ಓದಲು ಕಷ್ಟವಾಗುತ್ತದೆ ಎಂದು ಬಾಲಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಊರ್ಡಿಗೆರೆಯಲ್ಲಿ ನಡೆದಿದೆ.

    ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಂಗ್ಲಿಷ್ ಓದಲು ಕಷ್ಟವಾಗುತ್ತದೆ ಎಂದು ಹೆದರಿ ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹಠ ಮಾಡಿದ್ದನು. ಬಾಲಕನ ಮನವೊಲಿಸಿದ್ದ ಪೋಷಕರು ಶಾಲೆಗೆ ಕಳುಹಿಸಿದ್ದರು. ಆದರೆ ಧೃತಿಗೆಟ್ಟ ಬಾಲಕ ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

    ಶಾಲೆಗೆ ಹೋಗುವುದಿಲ್ಲ ಎಂದು ಕ್ರಿಮಿನಾಶಕ ಸೇವಿಸಿ ಅಸ್ವಸ್ಥನಾಗಿ ಮನೆಯಲ್ಲಿಯೇ ಬಾಲಕ ಕುಸಿದು ಬಿದ್ದಿದ್ದನು. ಕೂಡಲೇ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್

    ತುಮಕೂರು ನಗರದ ಕೋತಿ ತೋಪು ಮೂಲದ ಸೋಮಶೇಖರ್, ಜಯಮ್ಮ ದಂಪತಿಯ ಮಗ ಇವನಾಗಿದ್ದು, ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿರುವ ಸೋಮಶೇಖರ್ ದಂಪತಿ ಮಗನ ಕೃತ್ಯದಿಂದ ಕಂಗಲಾಗಿದ್ದಾರೆ. ಕೂಲಿ ಕೆಲಸ ನಿಮಿತ್ತ ಊರ್ಡಿಗೆರೆ ಗ್ರಾಮಕ್ಕೆ ದಂಪತಿ ವಲಸೆ ಬಂದಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ತುಮಕೂರಿನ ಕೋತಿತೋಪು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದ ಬಾಲಕನಿಗೆ 7ನೇ ತರಗತಿಗೆ ಊರ್ಡಿಗೆರೆಯಲ್ಲಿ ಶಾಲೆಗೆ ಸೇರಿಸಲಾಗಿತ್ತು. ಮೇ 16ನೇ ತಾರೀಖಿನಿಂದ ಶಾಲೆ ಶುರುವಾಗಿದ್ದು, ಬಾಲಕ ಒಂದೆರಡು ದಿನ ಶಾಲೆಗೆ ಸರಿಯಾಗಿ ಹೋಗಿದ್ದನು. ಬಳಿಕ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿದ್ದಾನೆ. ಇದೀಗ ಈ ವಿಚಾರ ತಿಳಿಯುತ್ತಿದ್ದಂತೆ ಬಿಇಒ ಹನುಮನಾಯಕ್ ಆಸ್ಪತ್ರೆಗೆ ಭೇಟಿ ನೀಡಿ, ಬಾಲಕನ ಆರೋಗ್ಯ ವಿಚಾರಿಸಿದ್ದಾರೆ.

  • ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: TN ಸಚಿವ ಪೊನ್ಮುಡಿ

    ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: TN ಸಚಿವ ಪೊನ್ಮುಡಿ

    ಚೆನ್ನೈ: ಹಿಂದಿ ಮಾತನಾಡುವವರು ಕೀಳು ಕೆಲಸಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಿದ್ದಾರೆ ಎಂದು ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಪರೋಕ್ಷವಾಗಿ ಹೇಳಿದ್ದಾರೆ.

    ಕೊಯಮತ್ತೂರಿನ ಭಾರತಿಯಾರ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಪೊನ್ಮುಡಿ ಅವರು, ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಆದರೆ ಹಿಂದಿ ಐಚ್ಛಿಕವಾಗಿರಬೇಕೆ ಹೊರತು ಕಡ್ಡಾಯವಾಗಿರಬಾರದು ಎಂದರು. ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪ್ರಯೋಜನಕಾರಿ ಅಂಶಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದರು. ಆದರೆ ರಾಜ್ಯ ಸರ್ಕಾರವು ಕೇವಲ ದ್ವಿಭಾಷಾ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಕಾಳಿ ಸ್ವಾಮಿಗೆ ಮಸಿ ಬಳೆದಿದ್ದು ಅಕ್ಷಮ್ಯ ಅಪರಾಧ: ಮುತಾಲಿಕ್

    ಈಗಾಗಲೇ ಅಂತರಾಷ್ಟ್ರೀಯ ಭಾಷೆಯಾದ ಇಂಗ್ಲಿಷ್ ಕಲಿಯುತ್ತಿರುವಾಗ ಹಿಂದಿಯನ್ನು ಏಕೆ ಕಲಿಯಬೇಕು? ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ತಮಿಳುನಾಡು ಮುಂಚೂಣಿಯಲ್ಲಿದೆ. ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಆದರೆ, ಹಿಂದಿ ಐಚ್ಛಿಕ ಭಾಷೆಯಾಗಿರಬೇಕೇ ಹೊರತು ಕಡ್ಡಾಯವಲ್ಲ. ಹಿಂದಿಗಿಂತ ಇಂಗ್ಲಿಷ್‍ಗೆ ಹೆಚ್ಚು ಬೆಲೆಯಿದೆ. ಆದರೆ ಹಿಂದಿ ಭಾಷೆಯನ್ನು ಮಾತನಾಡುವವರು ಕೀಳು ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಅದು ಒಂದು ಕಾಲದಲ್ಲಿ ಹಿಂದಿ ಕಲಿತರೆ ಉದ್ಯೋಗ ಸಿಗುತ್ತದೆ ಎಂದು ಹೇಳುತ್ತಿದ್ದರು, ಆದರೆ ಅದು ನಿಜ ನಾ? ಕೊಯಮತ್ತೂರಿನಲ್ಲಿ ಈಗ ಯಾರು ಪಾನಿ ಪುರಿ ಮಾರುತ್ತಿರುವವರನ್ನು ನೋಡಿದ್ದೀರಾ? ಈಗ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಮ್ಯಾಗೆ ಕೋಪ ಇದ್ರೆ ಬೈಯಲಿ ಆದ್ರೆ ಟ್ವೀಟ್‍ನಲ್ಲಿ ಬೇಡ: ನಲಪಾಡ್

  • ರಾಷ್ಟ್ರೀಯ ಭಾಷೆ ಹಿಂದಿ, ಜಗತ್ತಿನ ಭಾಷೆ ಇಂಗ್ಲಿಷ್ ಕಲಿಯಲೇಬೇಕು: ಉಮೇಶ್ ಕತ್ತಿ

    ರಾಷ್ಟ್ರೀಯ ಭಾಷೆ ಹಿಂದಿ, ಜಗತ್ತಿನ ಭಾಷೆ ಇಂಗ್ಲಿಷ್ ಕಲಿಯಲೇಬೇಕು: ಉಮೇಶ್ ಕತ್ತಿ

    ಮಡಿಕೇರಿ: ರಾಷ್ಟ್ರೀಯ ಭಾಷೆಯನ್ನು ಯಾರಿಗೆ ಯಾರೂ ಹೇರಿಕೆ ಮಾಡಲು ಸಾಧ್ಯವಿಲ್ಲ. ತಮ್ಮ ತಮ್ಮ ಭಾಷೆಗಳನ್ನು ಮಾತನಾಡುವ ಜೊತೆಯಲ್ಲಿ ರಾಷ್ಟ್ರೀಯ ಭಾಷೆ ಹಿಂದಿ ಹಾಗೂ ಜಗತ್ತಿನ ಭಾಷೆ ಇಂಗ್ಲಿಷ್ ಅನ್ನು ಕಲಿಯಲೇಬೇಕು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದರು.

    ದೇಶದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದ ಹಿಂದಿ ಹೇರಿಕೆ ವಿವಾದವನ್ನು ತಮ್ಮ ಹೇಳಿಕೆ ಮೂಲಕ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮತ್ತೆ ಹೊರತೆಗೆದಿದ್ದಾರೆ. ಇದೀಗ ಕೇಂದ್ರ ಸರ್ಕಾರ ಎಲ್ಲರ ಮೇಲೂ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಮುಂದಾಗಿದ್ದು, ದೇಶದ ಜನತೆ ಹಿಂದಿಯಲ್ಲೇ ಮಾತನಾಡಬೇಕು ಎಂದು ಮೌಖಿಕವಾಗಿ ಹುಕುಂ ಹೊರಡಿಸಿದೆ. ಇದನ್ನೂ ಓದಿ: ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಭಾಷೆ ಬಳಕೆಯಾಗಬೇಕು: ಅಮಿತ್ ಶಾ

    Amith

    ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಮಿತ್ ಶಾ, ಬೇರೆ ಬೇರೆ ರಾಜ್ಯದ ಜನರು ಪರಸ್ಪರ ಸಂವಹನ ನಡೆಸುವಾಗ ದೇಶದ ಭಾಷೆ ಹಿಂದಿಯಲ್ಲಿ ಮಾತನಾಡಬೇಕೇ ವಿನಃ ಇಂಗ್ಲಿಷ್ ಭಾಷೆಯಲ್ಲಿ ಅಲ್ಲ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಪ್ರಗತಿ ನಿಲ್ಲಿಸಲು ಸಾಧ್ಯವಿಲ್ಲ, ತಮಿಳುನಾಡು, ತೆಲಂಗಾಣ ರಾಜ್ಯಗಳಿಗೆ ಹತಾಶೆ ಕಾಡುತ್ತಿದೆ: ಬೊಮ್ಮಾಯಿ

    ಅಮಿತ್ ಶಾ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಉಮೇಶ್ ಕತ್ತಿ, ಬದುಕು ನಡೆಸಲು ಹಿಂದಿ ಹಾಗೂ ಇಂಗ್ಲಿಷ್ ಭಾಷೆಯನ್ನು ಕಲಿಯಲೇಬೇಕು ಎಂದು ಹೇಳಿಕೆ ನೀಡಿದರು.