Tag: Entry

  • ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ನಟ ರವಿಶಂಕರ್

    ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ನಟ ರವಿಶಂಕರ್

    ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮಧ್ಯಾಹ್ನದ ಮನರಂಜನೆಯಾಗಿ ಆರಂಭವಾದ ‘ಸುವರ್ಣ ಗೃಹಮಂತ್ರಿ’ ಎಂಬ ಹೊಸ ಬಗೆಯ ರಿಯಾಲಿಟಿ ಶೋ ಈಗಾಗಲೇ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಆದರೆ ಇದೀಗ ಮತ್ತಷ್ಟು ಮೆರುಗು ನೀಡಲು ಇದೇ ಮೊದಲ ಬಾರಿಗೆ ಸುವರ್ಣ ವಾಹಿನಿಯ ಮೂಲಕ ಖ್ಯಾತ ನಟ ರವಿಶಂಕರ್ ಕಿರುತೆರೆಗೆ ಪದಾರ್ಪಣೆ ಮಾಡಿದ್ದಾರೆ. ಇನ್ಮುಂದೆ ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ನಟ ರವಿಶಂಕರ್ (Ravi Shankar)  ಹೊರಲಿದ್ದಾರೆ. ವರ್ಷಗಳ ಬಳಿಕ ನಟ ರವಿ ಶಂಕರ್ ಅವರನ್ನು ಗೃಹಮಂತ್ರಿ ಪ್ರೋಮೋದಲ್ಲಿ ನೋಡಿದ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಸಂತಸವನ್ನು ವ್ಯಕ್ತ ಪಡಿಸಿದ್ದು, ‘ಸುವರ್ಣ ಗೃಹಮಂತ್ರಿ’ಯ ಸಂಚಿಕೆಯಲ್ಲಿ ರವಿಶಂಕರ್ ರವರ ನಿರೂಪಣೆಯನ್ನು ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ.

    ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡೋ ಗೃಹಿಣಿಯರನ್ನು, ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ, ಮನೆ ಮಂದಿಯನ್ನು ಅವ್ರು ಎಷ್ಟೇ ಚೆನ್ನಾಗಿ ನೋಡ್ಕೊಂಡ್ರು ‘ಥ್ಯಾಂಕ್ ಯು’ ಅಂತನೂ ಹೇಳಲ್ಲ. ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡ್ತಿಯ ಅನ್ಯೂನ್ಯತೆಯ ಬಗ್ಗೆ ತಿಳಿದು, ಅವರಿಗೆ ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜೊತೆ ರೇಷ್ಮೆ ಜೊತೆ ಮತ್ತಷ್ಟು ಬೆಲೆಬಾಳುವ ಬಹುಮಾನಗಳನ್ನು ನೀಡುವುದೇ “ಸುವರ್ಣ ಗೃಹಮಂತ್ರಿ” ಕಾರ್ಯಕ್ರಮದ ಶೈಲಿಯಾಗಿದೆ.

     

    ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಇನ್ಮುಂದೆ ನಟ ರವಿಶಂಕರ್ ರವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆಯನ್ನು ಕೊಟ್ಟು ಮನೆ ಗೃಹಿಣಿಯನ್ನು ಹಾರೈಸಿ, ರಾಣಿ ಸೀಟಿನಲ್ಲಿ ಕೂರಿಸಿ ಗೌರವಿಸಲಿದ್ದಾರೆ. ಅಷ್ಟೇ ಅಲ್ಲದೆ ಅವರ ಮನೆಗೆ ಬಂದಿರುವ ಆಪ್ತ ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೂ ಆಟವನ್ನು ಆಡಿಸಿ ಬಹುಮಾನಗಳನ್ನು ನೀಡಲಿದ್ದಾರೆ. ಇದೇ ಸೋಮವಾರದಿಂದ ಶನಿವಾರ ಮಧ್ಯಾಹ್ನ 1 ಗಂಟೆಗೆ ಈ ಸಂಚಿಕೆಗಳು ಪ್ರಸಾರವಾಗಲಿವೆ.

  • Bigg Boss Kannada: ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟ ನಟಿ ತಾರಾ

    Bigg Boss Kannada: ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟ ನಟಿ ತಾರಾ

    ನ್ನಡದ ಹಿರಿಯ ನಟಿ ತಾರಾ ಬಿಗ್ ಬಾಸ್  ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ದಸರಾ ಹಬ್ಬದ ಪ್ರಯುಕ್ತವಾಗಿ ತಾರಾ (Tara) ಅವರನ್ನು ಮನೆಯೊಳಗೆ ಕಳುಹಿಸಲಾಗಿದೆ. ಹಬ್ಬವನ್ನು ಮನೆಮಂದಿ ಸಂಭ್ರಮದಿಂದ ಆಚರಿಸುತ್ತಿರುವ ಪ್ರೊಮೋವನ್ನು ವಾಹಿನಿಯು ಬಿಡುಗಡೆ ಮಾಡಿದೆ. ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ, ಭರ್ಜರಿ ಮನೆರಂಜನೆಯನ್ನು ಮನೆಯೊಳಗೆ ಇದ್ದವರ ಜೊತೆ ಪಡೆದಿದ್ದಾರೆ.

    ಒಂದು ಕಡೆ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದರೆ, ಮತ್ತೊಂದು ಕಡೆ ಸೂತಕದ ಛಾಯೆಯೂ ಆವರಿಸಿಕೊಂಡಿದೆ. ಅದನ್ನು ಮರೆಸುವುದಕ್ಕಾಗಿಯೇ ಬಿಗ್ ಬಾಸ್ ಹೊಸ ಎಂಟ್ರಿಯೊಂದನ್ನು ಕೊಡಿಸಿದೆ. ಹಾಗಂತ ತಾರಾ ಸ್ಪರ್ಧಿಯಾಗಿ ಮನೆಯೊಳಗೆ ಹೋಗಿಲ್ಲ. ಅತಿಥಿಯಾಗಿ ಎಂಟ್ರಿ ಕೊಟ್ಟು, ಹಬ್ಬ ಮುಗಿಸಿಕೊಂಡು ವಾಪಸ್ಸಾಗಲಿದ್ದಾರೆ. ಸೂತಕದ ಛಾಯೆಯಾಗಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಸ್ಪರ್ಧಿಯೊಬ್ಬರನ್ನು ಮನೆಯಿಂದಲೇ ಬಂಧಿಸಲಾಗಿದೆ.

    ಬಿಗ್ ಬಾಸ್ (Bigg Boss Kannada) ಸ್ಪರ್ಧಿ ವರ್ತೂರು ಸಂತೋಷ್ (Varthur Santhosh) ಜೈಲು ಪಾಲಾಗಿದ್ದಾರೆ. ಹುಲಿ ಉಗುರು ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೊನ್ನೆ ರಾತ್ರಿ ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು(Arrest). ಅರಣ್ಯ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಸಂತೋಷ್ ಅವರನ್ನು ಹಾಜರು ಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ನ್ಯಾಯಾಧೀಶರು ನ್ಯಾಯಾಂಗ ಬಂಧನ (Jail) ವಿಧಿಸಿದ್ದಾರೆ.

    ಮೊನ್ನೆ ರಾತ್ರಿಯಿಂದಲೇ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ತನ್ನಲ್ಲಿರುವ ಹುಲಿ ಉಗುರು ಬಂದಿದ್ದು ಹೇಗೆ? ಯಾರು ಕೊಟ್ಟರು? ಎಲ್ಲಿಂದ ಖರೀದಿ ಮಾಡಿದಿದ್ದೀರಿ? ಮಾರಿದವರು ಈಗ ಎಲ್ಲಿದ್ದಾರೆ? ಎಷ್ಟು ಮಂದಿಗೆ ಈ ರೀತಿ ಉಗುರು ಮಾರಲಾಗಿದೆ ಹೀಗೆ ಇತ್ಯಾದಿ ಪ್ರಶ್ನೆಗಳನ್ನು ಅರಣ್ಯಾಧಿಕಾರಿಗಳು ಸಂತೋಷ್ ಮುಂದೆ ಇಟ್ಟಿದ್ದರು. ಅದಕ್ಕೆ ಸಂತೋಷ್ ಕೂಡ ಉತ್ತರ ನೀಡಿದ್ದಾರೆ ಎನ್ನುವ ಮಾಹಿತಿ ಇದೆ.

    ಅಪರಿಚಿತರು ಹುಲಿ ಉಗುರನ್ನು ಮಾರಕ್ಕೆ ತಂದಿದ್ದರು. ಅವರು ಎಲ್ಲಿಂದ ಬಂದಿದ್ದರು, ಯಾರು ಎನ್ನುವುದು ನನಗೆ ಗೊತ್ತಿಲ್ಲ. ಮಾರಾಟ ಮಾಡುತ್ತಿರುವ ವಿಷಯ ಗೆಳೆಯರಿಂದ ತಿಳಿಯಿತು. ಹಣ ಕೊಟ್ಟು ಇದನ್ನು ಖರೀದಿ ಮಾಡಿದ್ದೇನೆ ಎಂದು ಅಧಿಕಾರಿಗಳ ಮುಂದೆ ಸಂತೋಷ್ ಹೇಳಿದ್ದಾರೆ ಎನ್ನುವುದು ಸಿಕ್ಕಿರುವ ವರ್ತಮಾನ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada 10: ದೊಡ್ಮನೆಗೆ ಜಗ್ಗೇಶ್ ಎಂಟ್ರಿ: ನಟ ಹೇಳಿದ್ದೇನು?

    Bigg Boss Kannada 10: ದೊಡ್ಮನೆಗೆ ಜಗ್ಗೇಶ್ ಎಂಟ್ರಿ: ನಟ ಹೇಳಿದ್ದೇನು?

    ಬಿಗ್ ಬಾಸ್ ಮನೆಗೆ ಈ ಬಾರಿ ಜಗ್ಗೇಶ್ ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಜಗ್ಗೇಶ್ (Jaggesh) ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಾಗಿ ಹೋಗುವುದಿಲ್ಲವೆಂದು ಕೆಲವರು ಸುದ್ದಿಗಳಿಗೆ ಕಾಮೆಂಟ್ ಕೂಡ ಮಾಡಿದ್ದರು. ಇದೀಗ ಸ್ವತಃ ಜಗ್ಗೇಶ್ ಅವರೇ ಈ ಸುದ್ದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಬಿಗ್ ಬಾಸ್ ಮನೆಗೆ ಹೋಗುತ್ತಿದ್ದೇನೆ ಎನ್ನುವುದು ಸತ್ಯಕ್ಕೆ ದೂರವಾದ ವಿಷಯ. ನನ್ನ ಅಭಿಮಾನಿಗಳ ಮಾಹಿತಿಗಾಗಿ’ ಎಂದು ಜಗ್ಗೇಶ್ ಎಕ್ಸ್‍ (ಟ್ವಿಟರ್)ನಲ್ಲಿ ಬರೆದುಕೊಂಡಿದ್ದಾರೆ.

    ಬಿಗ್ ಬಾಸ್ ಸ್ಪರ್ಧಿಗಳಲ್ಲಿ ಯಾರೆಲ್ಲ ಹೆಸರು?

    ಬಿಗ್ ಬಾಸ್ ಕನ್ನಡ ಸೀಸನ್ 10 (Bigg Boss Kannada 10) ಆಟ ಶುರುವಾಗಲು ನಾಲ್ಕು ದಿನ ಬಾಕಿಯಿದ್ದು, ಈ ಬಾರಿ ದೊಡ್ಮನೆ ಆಟದಲ್ಲಿ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬುದರ ಮತ್ತೊಂದು ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಹರಿದಾಡುತ್ತಿದೆ. ಅಕ್ಟೋಬರ್ 8ಕ್ಕೆ ಬಿಗ್ ಬಾಸ್ ಗ್ರ್ಯಾಂಡ್ ಓಪ್‌ನಿಂಗ್‌ಗೆ ಸಾಕಷ್ಟು ತಯಾರಿ ನಡೆಯುತ್ತಿದ್ದು, ಈಗ ಮತ್ತೆ ಒಂದಿಷ್ಟು ಹೊಸ ಸ್ಪರ್ಧಿಗಳ ಹೆಸರು ವೈರಲ್ ಆಗುತ್ತಿದೆ.

    ದೊಡ್ಮನೆಗೆ ಆಟಕ್ಕೆ ಮೊದಲ ಸ್ಪರ್ಧಿಯಾಗಿ ‘777 ಚಾರ್ಲಿ’ ಎಂಟ್ರಿ ಕೊಡುವ ವಿಚಾರ ಅಧಿಕೃತವಾಗಿ ಹೊರಬಿದ್ದಿದೆ. ನಟ ಸುನೀಲ್ ರಾವ್, ಭವ್ಯಾ ಗೌಡ(Bhavya Gowda), ರಘು ಮುಖರ್ಜಿ, ಸಮಾಜ ಸೇವಕಿ ಅಕ್ಕ ಅನು, ಪ್ರಕಾಶ್ ತುಮ್ಮಿನಾಡು, ರಂಜನಿ ರಾಘವನ್, ಹುಲಿ ಕಾರ್ತಿಕ್, ನಮ್ರತಾ ಗೌಡ, ಚಂದ್ರಪ್ರಭ, ಅಗ್ನಿಸಾಕ್ಷಿ ಖ್ಯಾತಿಯ ರಾಜೇಶ್ ಧ್ರುವ (Rajesh Dhruva), ‘ಕೆಜಿಎಫ್’ ನಟಿ ರೂಪಾ ರಾಯಪ್ಪ, ಮಿಮಿಕ್ರಿ ಗೋಪಿ, ಕ್ರಿಕೆಟರ್ ವಿನಯ್ ಕುಮಾರ್, ಪೋಷಕ ನಟಿ ಸ್ವಾತಿ, ರಕ್ಷಕ್ ಬುಲೆಟ್ ಪ್ರಕಾಶ್, ರ‍್ಯಾಪರ್ ಇಶಾನಿ ಸೇರಿದಂತೆ ಹಲವರು ಬಿಗ್ ಬಾಸ್ ಸ್ಪರ್ಧಿಸುವ ಸ್ಯಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ಬಿಗ್ ಬಾಸ್ ಕನ್ನಡ ಸೀಸನ್ 10ಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಹಲವು ಪ್ರೋಮೋಗಳನ್ನು ರಿಲೀಸ್ ಮಾಡುವ ಮೂಲಕ ವಾಹಿನಿಯು ಪ್ರೇಕ್ಷಕರಲ್ಲಿ ಕುತೂಹಲವನ್ನುಂಟು ಮಾಡುತ್ತಿದೆ. ಈಗಾಗಲೇ ಬಿಗ್ ಬಾಸ್ ಯಾವಾಗಿಂದ ಶುರುವಾಗುತ್ತದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ. ಈಗ ಪ್ರಸಾರದ ವೇಳೆಯನ್ನೂ ಅದು ಹೇಳಿಕೊಂಡಿದೆ.

    ಅಕ್ಟೋಬರ್ 8ರಿಂದ ಪ್ರಾರಂಭವಾಗುವ ಬಿಗ್ ಬಾಸ್ ಶೋ, ಮೊದಲ ದಿನ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಮರುದಿನದಿಂದ ಪ್ರತಿ ರಾತ್ರಿ 9.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ವಾಹಿನಿಯು ರಿಲೀಸ್ ಮಾಡಿದ ಪ್ರೋಮೋದಲ್ಲಿ ತಿಳಿಸಲಾಗಿದೆ. ಇದಕ್ಕಾಗಿಯೇ ವಿಶೇಷ ಪ್ರೋಮೋ ಕೂಡ ಮಾಡಿದೆ.

     

    ಬಿಗ್ ಬಾಸ್‌ಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ. ರಕ್ಷಿತ್ ಶೆಟ್ಟಿ ಜೊತೆ ನಟಿಸಿದ ಚಾರ್ಲಿ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿತ್ರರಂಗಕ್ಕೆ ಲಂಕೇಶ್ ಮೊಮ್ಮಗ ಸಮರ್ಜಿತ್ ಗ್ರ್ಯಾಂಡ್ ಎಂಟ್ರಿ

    ಚಿತ್ರರಂಗಕ್ಕೆ ಲಂಕೇಶ್ ಮೊಮ್ಮಗ ಸಮರ್ಜಿತ್ ಗ್ರ್ಯಾಂಡ್ ಎಂಟ್ರಿ

    ಸಾಹಿತ್ಯ ಮತ್ತು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಲಂಕೇಶ್ ಅವರ ಮೊಮ್ಮಗ ಸಮರ್ಜಿತ್ ಲಂಕೇಶ್ ಗ್ಯಾಂಡ್ ಆಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಲಂಕೇಶ್ ಅವರ ಪುತ್ರ ಇಂದ್ರಜಿತ್ ಲಂಕೇಶ್ (Indrajit Lankesh) ಮತ್ತು ಪುತ್ರಿ ಕವಿತಾ ಲಂಕೇಶ್ ಸಿನಿಮಾ ರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹೊಸ ಬಗೆಯ ಸಿನಿಮಾಗಳನ್ನು ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮಿಂಚಿದ್ದಾರೆ. ಇದೀಗ ಇಂದ್ರಜಿತ್ ಪುತ್ರ ಸಮರ್ಜಿತ್ (Samarjit Lankesh) ಮೂರನೇ ತಲೆಮಾರಾಗಿ ಸ್ಯಾಂಡಲ್ ವುಡ್ (Sandalwood) ಪ್ರವೇಶ (Entry) ಮಾಡುತ್ತಿದ್ದಾರೆ.

    ತಂದೆ ಸಿನಿಮಾ ನಿರ್ದೇಶಕ ಅನ್ನುವ ಕಾರಣಕ್ಕಾಗಿ ಸಮರ್ಜಿತ್ ಚಿತ್ರರಂಗ ಪ್ರವೇಶ ಮಾಡುತ್ತಿಲ್ಲ. ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡೇ ಅಖಾಡಕ್ಕೆ ಇಳಿಯುತ್ತಿದ್ದಾರೆ. ಹಾಗಾಗಿ ಎಂಟ್ರಿಯಲ್ಲೇ ಭರವಸೆ ಮೂಡಿಸುತ್ತಾರೆ. ಈಗಾಗಲೇ ರಂಗಭೂಮಿಯಲ್ಲೂ ಕೆಲಸ ಮಾಡಿದ ಅನುಭವವೂ ಅವರ ಜೊತೆಗಿದೆ. ಇದನ್ನೂ ಓದಿ:‘ಪುನರ್ ವಿವಾಹ’ ನಟ ಅಥರ್ವ್‌ ಹೊಸ ಚಿತ್ರಕ್ಕೆ ಸುದೀಪ್ ಸಾಥ್

    ನ್ಯೂಯಾರ್ಕ್ ಅಕಾಡೆಮಿಯಲ್ಲಿ ಸಿನಿಮಾ ಸಂಬಂಧಿಸಿದ ಕೋರ್ಸ್ ಮಾಡಿರುವ ಸಮರ್ಜಿತ್, ಅಲ್ಲಿ ನಟನಾ ತರಬೇತಿಯನ್ನು ಪಡೆದಿದ್ದಾರೆ. ಚೇತನ್ ಡಿಸೋಜಾ ಬಳಿ ಸಾಹಸ ಕಲೆಯನ್ನು ಕಲಿತುಕೊಂಡರೆ, ಮುರಳಿ ಬಳಿ ಡಾನ್ಸ್ ಮತ್ತು ಇಬ್ಬರು ನೀನಾಸಂ ಶಿಕ್ಷಕರು ಸಮರ್ಜಿತ್ ತರಬೇತಿ ನೀಡಿದ್ದಾರೆ.

    ಜೊತೆಗೆ ಯೋಗರಾಜ್ ಭಟ್ ಅವರ ಬಳಿ ಎರಡು ಸಿನಿಮಾಗಳಿಗೆ ಸಮರ್ಜಿತ್ ಅಸಿಸ್ಟೆಂಟ್ ಡೈರೆಕ್ಟರ್ ಆಗಿ  ಕೆಲಸ ಮಾಡಿದ ಅನುಭವ ಕೂಡ ಇದೆ. ಇಷ್ಟೆಲ್ಲ ತರಬೇತಿಯ ಜೊತೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಮತ್ತು ಜಾಹೀರಾತು ಕ್ಷೇತ್ರದಲ್ಲೂ ಒಂದಷ್ಟು ಅನುಭವ ಪಡೆದಿದ್ದಾರೆ. ಈ ರೀತಿ ತಯಾರಿ ಮಾಡಿಕೊಂಡು ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ.

    ಸಮರ್ಜಿತ್ ನಟನೆಯ ಸಿನಿಮಾ ನಿರ್ದೇಶಕರು ಯಾರು, ಯಾರು ನಿರ್ಮಾಣ ಮಾಡುತ್ತಾರೆ ಇತ್ಯಾದಿ ವಿಷಯಗಳನ್ನು ಸದ್ಯಕ್ಕೆ ಬಹಿರಂಗಗೊಳಿಸಿಲ್ಲ. ಆದರೆ, ಅದ್ದೂರಿಯಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುವುದನ್ನು ಸಮರ್ಜಿತ್ ಅವರ ತಂದೆ, ನಿರ್ದೇಶಕ ಇಂದ್ರಜಿತ್ ಖಚಿತ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

     

    ಸಮರ್ಜಿತ್ ಸಿನಿಮಾ ರಂಗಕ್ಕೆ ಬರುತ್ತಿರುವುದು ನಿಜ. ಎಲ್ಲ ರೀತಿಯ ತರಬೇತಿಯನ್ನು ಪಡೆದುಕೊಂಡೇ ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದಾರೆ. ನಟನೆಯ ಜೊತೆ ಜೊತೆಗೆ ತಾಂತ್ರಿಕ ಅಂಶಗಳನ್ನು ತಿಳಿದುಕೊಂಡು ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿರುವುದು ಖುಷಿಯಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಲೆನಾಡಿನ ಕುವರಿ

    ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಲೆನಾಡಿನ ಕುವರಿ

    ನ್ನಡ ಚಿತ್ರಕ್ಕೆ ಮಲೆನಾಡಿನ ಮತ್ತೊಬ್ಬಳು ಕುವರಿ ಪ್ರವೇಶ ವಾಗಿದೆ. ಕನ್ನಡದ ‘ರೆಡ್ರಮ್’ ಚಿತ್ರದಲ್ಲಿ ಕುಶಾಲನಗರದ ಮಧುರಾ ಗೌಡ ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೇ, ಈ ಚಿತ್ರ ಚಿತ್ರೀಕರಣದಲ್ಲಿರುವಾಗಲೇ ಇನ್ನೊಂದು ಹೆಸರಿಡದ ಬಹು ತಾರಾಗಣದ ಭಾರಿ ಬಜೆಟ್  ಚಿತ್ರಕ್ಕೆ ಆಯ್ಕೆ ಆಗಿದ್ದಾರೆ. ಹಾಗೆ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ ಎಂದು ಮಧುರಾ ತಿಳಿಸಿದ್ದಾರೆ.

    ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತಿರುವ ಈ ಸಮಯದಲ್ಲಿ ಮಧುರಾ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ. ಮಾಡೆಲಿಂಗ್ ಹಾಗೂ ಅಭಿನಯ ಕ್ಷೇತ್ರದಲ್ಲಿ ತರಬೇತಿ ಪಡೆದಿರುವ ಮಧುರಾ ಕೌಟಿಲ್ಯ ಸಿನಿಮಾಸ್ ಹಾಗೂ ಹನಿ ಚೌಧರಿ ಫಿಲಂಸ್ ಲಾಂಛನದ ದಡಿಯಲ್ಲಿ ಪ್ರಾರಂಭವಾದ ‘ರೆಡ್ರಮ್’ ಕನ್ನಡ ಚಿತ್ರದಲ್ಲಿ ಯು.ಪಿ.ಯಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ಪಕ್ಕಾ ತಯಾರಿಯೊಂದಿಗೆ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ಮಾಡೆಲಿಂಗ್ ನಲ್ಲಿ ಹೆಚ್ಚು ಆಸಕ್ತಿಯಿದ್ದರೂ, ಅಭಿನಯದಲ್ಲೂ ಪಳಗಬೇಕು ಎನ್ನುವ ಕಾರಣಕ್ಕಾಗಿ ಸೂಕ್ತ ತರಬೇತಿಯನ್ನೂ ಮಧುರಾ ಪಡೆದಿದ್ದಾರಂತೆ. ಪಾತ್ರವನ್ನು ಸರಿಯಾಗಿ ಅರ್ಥಮಾಡಿಕೊಂಡು ನಟಿಸಲು ಇದೆಲ್ಲವೂ ನನಗೆ ಸಹಾಯ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Special- ನಟಿ ಶ್ರುತಿ ಕುಟುಂಬದ ಮೂರನೇ ತಲೆಮಾರು ಸಿನಿ ರಂಗಕ್ಕೆ ಎಂಟ್ರಿ

    Special- ನಟಿ ಶ್ರುತಿ ಕುಟುಂಬದ ಮೂರನೇ ತಲೆಮಾರು ಸಿನಿ ರಂಗಕ್ಕೆ ಎಂಟ್ರಿ

    ತ್ತೀಚೆಗೆ ನಟ ಶರಣ್ (Sharan) ಅವರ ಮಗ ‘ಗುರು ಶಿಷ್ಯರು’ ಚಿತ್ರದಲ್ಲಿ ಪಾತ್ರವೊಂದನ್ನು ನಿಭಾಯಿಸಿದ್ದರು. ಈಗ ಶರಣ್ ಅವರ ಕೊನೆಯ ಸಹೋದರಿ ಉಷಾ ಕೃಷ್ಣ (Usha Krishna) ಅವರ ಮಗಳು  ಕೀರ್ತಿ ಕೃಷ್ಣ (Keerthi Krishna) ಕೂಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ದೊಡ್ಡಮ್ಮ ಶ್ರುತಿ (Shruti) ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಕಲಾವಿದೆ. ಮಾವ ಶರಣ್ ಕನ್ನಡ ಚಿತ್ರರಂಗದ ಸ್ಟಾರ್ ನಟ. ಈ ನಡುವೆ ಕೀರ್ತಿ ಕೃಷ್ಣ ಯಾವ ಸಿನಿಮಾದೊಂದಿಗೆ ಚಿತ್ರರಂಗದಲ್ಲಿ ಲಾಂಚ್ ಆಗಬಹುದು ಎನ್ನುವ ಕುತೂಹಲ ಎಲ್ಲರಲ್ಲೂ ಇತ್ತು. ಚಿತ್ರರಂಗದಲ್ಲಿ ಸಾಕಷ್ಟು ಜನ ಕೀರ್ತಿ ಕೃಷ್ಣ ಅವರನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಲು ತುದಿಗಾಲಲ್ಲಿ ನಿಂತಿದ್ದರು. ಅಂತಿಮವಾಗಿ ಈಗ ಕೀರ್ತಿ ತಮ್ಮ ಮೊದಲ ಸಿನಿಮಾವನ್ನು ಒಪ್ಪಿದ್ದಾರೆ. ಅದು ಧರಣಿ (Dharani) ಮೂಲಕ ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ.

    ಮನೋಜ್ ನಾಯಕನಾಗಿ ನಟಿಸುತ್ತಿರುವ ʻಧರಣಿʼ ಫಸ್ಟ್ ಲುಕ್  ಪೋಸ್ಟರ್  ಮೂಲಕವೇ ಎಲ್ಲರ ಗಮನ ಸೆಳೆದಿತ್ತು. ಕೋಳಿ ಪಂದ್ಯದ ಜೊತೆಗೆ ಕಾಡುವ ಕಥೆಯೊಂದು ಈ ಚಿತ್ರದಲ್ಲಿದೆ ಅಂತಾ ಚಿತ್ರತಂಡ ಹೇಳಿಕೊಂಡಿತ್ತು. ಈಗ ಕೀರ್ತಿ ಆಯ್ಕೆಯಾಗುವ ಮೂಲಕ ʻಧರಣಿʼಯ ಕುರಿತು ಕ್ಯೂರಿಯಾಸಿಟಿ ಹೆಚ್ಚಾಗಿದೆ. ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ಸರಿ ಸುಮಾರು ಹನ್ನೆರಡು ವರ್ಷಗಳ ಹಿಂದೆ ತೆರೆ ಕಂಡಿದ್ದ ರಾಮ್ ಕುಮಾರ್ ಮತ್ತು ಶ್ರುತಿ  ಅಭಿನಯದ ʻಶ್ರೀ ನಾಗ ಶಕ್ತಿʼ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಮುಖಕ್ಕೆ ಬಣ್ಣ ಹಚ್ಚಿದ್ದವರು ಕೀರ್ತಿ. ವಿದ್ಯಾಭ್ಯಾಸದ ಕಾರಣಕ್ಕೆ ಚಿತ್ರರಂಗದಿಂದ ದೂರವೇ ಉಳಿದಿದ್ದರು. ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಕಾಲೇಜಿನಲ್ಲಿ ಬಿಬಿಎ ಮುಗಿಸಿರುವ ಕೀರ್ತಿ ಈಗ ಪೂರ್ಣ ಪ್ರಮಾಣದಲ್ಲಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಳ್ಳುವ ಮನಸ್ಸು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ಕಥೆ ಸಿಕ್ಕರೆ ಮಾತ್ರ ಒಪ್ಪಬೇಕು ಅಂತಾ ಕಾದಿದ್ದ ಕೀರ್ತಿ ಮತ್ತು ಅವರ ಕುಟುಂಬದವರಿಗೆ ʻಧರಣಿʼಯ ಕತೆ ಅಪಾರವಾಗಿ ಇಷ್ಟವಾಗಿದ್ದರಿಂದ ಈ ಚಿತ್ರದ ಮೂಲಕ ನಾಯಕಿಯಾಗಲು ಒಪ್ಪಿಗೆ ನೀಡಿದ್ದಾರೆ.

    ಶ್ರುತಿ ಅವರ ಇಡೀ ಕುಟುಂಬ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದೆ. ತಂದೆ ಕೃಷ್ಣ, ತಾಯಂದಿರಾದ ರಾಧ-ರುಕ್ಮಿಣಿ ರಂಗಭೂಮಿ ಮತ್ತು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಕೃಷ್ಣ ಅವರ ತಾಯಿ ಕೂಡಾ ನಟಿಯಾಗಿದ್ದವರು. ನಂತರ ಶ್ರುತಿ ಮತ್ತು ಶರಣ್ ಕೂಡಾ ಬಣ್ಣದ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಿದವರು. ಈಗ ಮೂರನೇ ತಲೆಮಾರಿನ ಕೀರ್ತಿ ಕೃಷ್ಣ ಕೂಡಾ ಭರವಸೆ ಮೂಡಿಸಿದ್ದಾರೆ.

    ಅನಂತು ವರ್ಸಸ್ ನುಸ್ರತ್ ಖ್ಯಾತಿಯ ಸುಧೀರ್ ಶಾನುಭೋಗ್ ನಿರ್ದೇಶನದ ʻಧರಣಿʼ ಚಿತ್ರವನ್ನು ಯಂಗ್ ಥಿಂಕರ್ಸ್ ಫಿಲಂಸ್ ಲಾಂಛನದಲ್ಲಿ ಜಿ.ಕೆ.ಉಮೇಶ್ ಕೆ. ಗಣೇಶ್ ಐತಾಳ್ ಅವರು  ನಿರ್ಮಿಸುತ್ತಿದ್ದಾರೆ.  ಶಶಾಂಕ್ ಶೇಷಗಿರಿ ಸಂಗೀತ, ಅರುಣ್ ಸುರೇಶ್ ಛಾಯಾಗ್ರಹಣ, ಅರುಣೋದಯ ಕಥೆ , ಶ್ರೀನಿಧಿ ಡಿ ಎಸ್ ಸಂಭಾಷಣೆ ಜೊತೆಗೆ ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಶಿವಕುಮಾರ್ ಮಾವಲಿ ಸಾಹಿತ್ಯ, ಟೈಗರ್ ಶಿವು ಸಾಹಸ ಸಂಯೋಜನೆ ಇದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಗ್ ಬಾಸ್ ಮನೆಗೆ ಅಚ್ಚರಿಯ ಎಂಟ್ರಿ : ಹಾವು ಏಣಿ ಆಟದಲ್ಲಿ ಮಂಜು ಪಾವಗಡ

    ಬಿಗ್ ಬಾಸ್ ಮನೆಗೆ ಅಚ್ಚರಿಯ ಎಂಟ್ರಿ : ಹಾವು ಏಣಿ ಆಟದಲ್ಲಿ ಮಂಜು ಪಾವಗಡ

    ಬಿಗ್ ಬಾಸ್ (Bigg Boss) ಮನೆಯ ಆಟ ಇದೀಗ ಕಡೆಯ ಘಟ್ಟದತ್ತ ಸಾಗುತ್ತಿದೆ. ಫಿನಾಲೆಗೆ ಕೆಲವೇ ದಿನಗಳು ಬಾಕಿಯಿದೆ. ಈ ವೇಳೆಯಲ್ಲಿ ‌ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಅದೂ ಅಚ್ಚರಿಯ ರೀತಿಯಲ್ಲಿ ಎನ್ನುವುದು ವಿಶೇಷ. ಹೌದು, ದೊಡ್ಮನೆಗೆ ಬಿಗ್ ಬಾಸ್ ಸೀಸನ್ 8ರ ವಿನ್ನರ್ ಮಂಜು ಪಾವಗಡ ಪ್ರವೇಶ ಪಡೆದಿದ್ದಾರೆ. ಫಿನಾಲೆ ಕೆಲವೇ ದಿನಗಳು ಬಾಕಿ ಇರುವಾಗ ಈ ಎಂಟ್ರಿ ಕುತೂಹಲವನ್ನು ಮೂಡಿಸಿದೆ.

    ಕಳೆದ ಸೀಸನ್ ನಲ್ಲಿ ಮನೆ ಮಾತಾಗಿದ್ದ ಸ್ಪರ್ಧಿ ಮಂಜು ಪಾವಗಡ (Manju Pavagada). ನಗಿಸುತ್ತಲೇ, ಕಾಲೆಳೆಯುತ್ತದೇ ಸಖತ್ ಮನರಂಜನೆ ನೀಡಿದ್ದ ಸ್ಪರ್ಧಿ. ಇದೀಗ ಅವರು ದೊಡ್ಮನೆಗೆ ಲಗ್ಗೆ ಇಟ್ಟಿದ್ದು, ಸ್ವತಃ ಮನೆ ಒಳಗೆ ಇರುವವರಿಗೆ ಅಚ್ಚರಿ ಮೂಡಿಸಿದೆ. ಮಂಜು ಪ್ರವೇಶ ಸಾಕಷ್ಟು ಚರ್ಚೆಗೂ ಕಾರಣವಾಗಿದೆ. ಅನುಪಮಾ ಎಲಿಮಿನೇಷನ್ ನಂತರ 8 ಜನ ಸ್ಪರ್ಧಿಗಳಿರುವ‌ ಮನೆಯಲ್ಲಿ, ಕೇವಲ  ಜಟಾಪಟಿ ಮಾತ್ರ ಕಾಣಿಸುತ್ತಿತ್ತು. ಅದನ್ನು ಶಮನ ಮಾಡಲು ಮಂಜು ಬಂದಿದ್ದಾರೆ ಎನ್ನುವ ಮಾತೂ ಕೇಳಿ ಬರುತ್ತಿದೆ. ಇದನ್ನೂ ಓದಿ: ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಹಾವು – ಏಣಿ  ಟಾಸ್ಕ್ ವೇಳೆ ಮಂಜು ಪಾವಗಡ ಕೂಡ ಸ್ಪರ್ಧಿಗಳ ಜೊತೆಗೆ ಆಟವಾಡಿದ್ದಾರೆ. ಸ್ಪರ್ಧಿಗಳು ಹೇಳುವ ಸಂಖ್ಯೆಗೆ ದಾಳ ಕೂಡ ಹಾಕಿದ್ದಾರೆ. ಈ ವೇಳೆ, ಮಂಜುಗೆ ಅಮೂಲ್ಯ (Amulya) ಪ್ರಪೋಸ್ ಮಾಡಿದ್ದು, ಇದನ್ನ ನೋಡಿರೋ ರಾಕಿ, ಅಯ್ಯೋ ನನಗೆ ಹಾವು ಕಚ್ಚಿದ ಹಾಗೇ ಆಗುತ್ತಿದೆ ಎಂದಿದ್ದಾರೆ. ರಾಕಿ ಮಾತಿಗೆ ಮನೆಮಂದಿ ನಕ್ಕಿದ್ದಾರೆ.

    ಕಳೆದ ಸೀಸನ್ ನಲ್ಲಿ ಸ್ಪರ್ಧಿಯಾಗಿ ಮನೆ ಒಳಗೆ ಪ್ರವೇಶ ಬಯಸಿದ್ದ ಮಂಜು ಪಾವಗಡ ಈ ಬಾರಿ ಮನೆಗೆ ಸ್ಪೆಷಲ್ ಗೆಸ್ಟ್ ಆಗಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಎಷ್ಟು ಸಮಯ ಅವರು ಮನೆಯಲ್ಲಿ ಇರುತ್ತಾರೋ, ಅಷ್ಟು ಹೊತ್ತು ನೋಡುಗರಿಗೆ ಮನರಂಜನೆ ದುಪ್ಪಟ್ಟಾಗುವುದು ಖಚಿತ.

    Live Tv
    [brid partner=56869869 player=32851 video=960834 autoplay=true]

  • ಕುದುರೆ ಬದಲು ರೋಡ್‌ ರೋಲರ್‌ನಲ್ಲಿ  ಮದ್ವೆಗೆ ಎಂಟ್ರಿ ಕೊಟ್ಟ ವರ: ವಿಡಿಯೋ ವೈರಲ್

    ಕುದುರೆ ಬದಲು ರೋಡ್‌ ರೋಲರ್‌ನಲ್ಲಿ ಮದ್ವೆಗೆ ಎಂಟ್ರಿ ಕೊಟ್ಟ ವರ: ವಿಡಿಯೋ ವೈರಲ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯಲ್ಲಿ ವರನೊಬ್ಬ ತನ್ನ ಮದುವೆಗೆ ಕುದುರೆ ಬದಲು ರೋಡ್‌ ರೋಲರ್‌ನಲ್ಲಿ ಎಂಟ್ರಿ ಕೊಟ್ಟು ಸುದ್ದಿಯಾಗಿದ್ದಾನೆ.

    ವರ ಅರ್ಕಾ ಪತ್ರಾ ಅಕ್ಕಸಾಲಿಗನ ಮಗನಾಗಿದ್ದು, ತನ್ನ ಮದುವೆಯಲ್ಲಿ ರೋಡ್‌ ರೋಲರ್‌ನಲ್ಲಿ ಎಂಟ್ರಿ ನೀಡಿದ್ದಾನೆ. ಅರ್ಕಾ ಜಿಲ್ಲೆಯ ಕೃಷ್ಣನಗರದ ಉಖಿಲ್ಪಾರದಲ್ಲಿದ್ದ ಮದುವೆ ಮನೆಗೆ ಅಲಂಕರಿಸಿದ ರೋಡ್ ರೋಲರ್ ನಿಂದ ಹೊರಗೆ ಬರುವಾಗ ಆತನ ಸ್ವಾಗತಕ್ಕೆಂದು ನಿಂತಿದ್ದ ಅತಿಥಿಗಳು ವರನನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ.

    ನಾನು ನನ್ನ ಮದುವೆಯನ್ನು ನೆನಪಿಗಾಗಿ ಹಾಗೂ ವಿಭಿನ್ನವಾಗಿ ಮಾಡಬೇಕು ಎಂದು ನಿರ್ಧರಿಸಿದೆ. ನಾನು ವಿಂಟೇಜ್ ಕಾರಿನಲ್ಲೇ ಮದುವೆಗೆ ಎಂಟ್ರಿ ಕೊಡಬಹುದಿತ್ತು. ಆದರೆ ಇದು ಹೊಸದಾಗಿ ಇರುವುದಿಲ್ಲ. ಈ ಹಿಂದೆ ಯಾರೋ ಜೆಸಿಬಿಯಲ್ಲಿ ಮದುವೆಗೆ ಎಂಟ್ರಿ ನೀಡಿದ್ದರು ಎಂದು ಕೇಳಿದೆ. ಆದರೆ ರೋಡ್‌ ರೋಲರ್‌ನಲ್ಲಿ ಇದುವರೆಗೂ ಯಾರೊಬ್ಬ ವರ ಮದುವೆಗೆ ಆಗಮಿಸಿಲ್ಲ ಎಂದು ತಿಳಿಯಿತು. ಹಾಗಾಗಿ ನಾನು ರೋಡ್‌ ರೋಲರ್‌ನಲ್ಲಿ ಎಂಟ್ರಿ ಕೊಡಲು ನಿರ್ಧರಿಸಿದೆ ಎಂದು ಅರ್ಕಾ ತಿಳಿಸಿದ್ದಾನೆ. ಇದನ್ನು ಓದಿ: ಮದುವೆಯಲ್ಲೂ ಕೆಲಸದ ಪ್ರೀತಿ ಮೆರೆದ ವರ- ಜೆಸಿಬಿಯಲ್ಲೇ ದಿಬ್ಬಣ!

    ಅರ್ಕಾ ತನ್ನ ಮದುವೆಗೆ ಕುದುರೆ ಬದಲು ರೋಡ್‌ ರೋಲರ್‌ನಲ್ಲಿ ಆಗಮಿಸುತ್ತಿರುವುದು ಆತನ ಪತ್ನಿ ಆರುಂಧತಿ ತರಫ್‍ದಾರ್ ಗೆ ಯಾವುದೇ ಅಭ್ಯಂತರ ಇರಲಿಲ್ಲ. ಮದುವೆ ಮೊದಲೇ ಇಬ್ಬರು ಈ ವಿಚಾರದ ಬಗ್ಗೆ ಮಾತನಾಡಿಕೊಂಡಿದ್ದರು.

    ಅರ್ಕಾ ಮದುವೆಯಲ್ಲಿ ಯಾವುದೇ ಡಿಜೆ ಇರಲಿಲ್ಲ. ಡಿಜೆ ಬದಲು ವ್ಯಕ್ತಿಯೊಬ್ಬ ಮದುವೆ ಮನೆಯಲ್ಲಿ ಕೊಳಲು ನುಡಿಸುತ್ತಿದ್ದ. ಕೊಳಲು ನುಡಿಸಿದರೆ ಮದುವೆ ಬಂದಿರುವ ಅತಿಥಿಗಳಿಗೆ ಇಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಡಿಜಿ ಆಯೋಜಿಸಿರಲಿಲ್ಲ ಎಂದು ಅರ್ಕಾ ಹೇಳಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಫೋಟೋಶೂಟ್ ಮಾಡಿಸಿ ಮಾನ್ವಿತಾ ಬಾಲಿವುಡ್‍ಗೆ ಎಂಟ್ರಿ!

    ಫೋಟೋಶೂಟ್ ಮಾಡಿಸಿ ಮಾನ್ವಿತಾ ಬಾಲಿವುಡ್‍ಗೆ ಎಂಟ್ರಿ!

    ಬೆಂಗಳೂರು: ಸ್ಯಾಂಡಲ್‍ವುಡ್ ಬೆಡಗಿ ಮಾನ್ವಿತಾ ಕಾಮತ್ ಫೋಟೋಶೂಟ್ ಮಾಡಿಸಿ ಬಾಲಿವುಡ್‍ಗೆ ಎಂಟ್ರಿ ನೀಡಲು ಸಜ್ಜಾಗಿದ್ದಾರೆ.

    ‘ಟಗರು’ ಚಿತ್ರ ಮೂಲಕ ಖ್ಯಾತಿಗೊಂಡಿರುವ ಮಾನ್ವಿತಾ ಕಾಮತ್ ಈಗ ಮುಂಬೈನಲ್ಲಿದ್ದಾರೆ. ಅಲ್ಲದೇ ಇತ್ತೀಚೆಗೆ ಅವರು ಮೋಹಿತ್ ಹೋಲಾನಿ ಜೊತೆ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳ ಬಗ್ಗೆ ಈಗ ಹೆಚ್ಚು ಚರ್ಚೆ ಆಗುತ್ತಿದೆ.

     

    View this post on Instagram

     

    Hey tell me something girl…are you happy in this modern world?? 🙂 . . ???? @mholani ???????? @juveria_k ???????? @agneeshbanerjee

    A post shared by Manvitha Kamath (@manvithaharish_official) on

    ಈ ಬಗ್ಗೆ ಮಾನ್ವಿತಾ ಅವರನ್ನು ಪ್ರಶ್ನಿಸಿದ್ದಾಗ, “ನನ್ನ ಜೀವನದಲ್ಲಿ ಈಗ ಸಾಕಷ್ಟು ಒಳ್ಳೆಯ ವಿಷಯಗಳು ನಡೆಯುತ್ತಿವೆ. ಆದರೆ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ನನಗೆ ಹೇಳಲಾಗಿದೆ. ಈಗ ನನಗೆ ಹಂಚಿಕೊಳ್ಳಲು ಸಾಕಷ್ಟು ವಿಷಯವಿದೆ. ಒಳ್ಳೆಯ ಸಮಯಕ್ಕಾಗಿ ಕಾಯುತ್ತಿದ್ದೇನೆ” ಎಂದು ಹೇಳಿದ್ದಾರೆ.

     

    View this post on Instagram

     

    Shine a spotlight on ???? . . . PC @mholani Mua @juveria_k Styling @agneeshbanerjee Wearing @zara Location @truetrammtrunk @puneetgidwani

    A post shared by Manvitha Kamath (@manvithaharish_official) on

    ಮಾನ್ವಿತಾ ಅವರು ನಾಗತಿಹಳ್ಳಿ ಚಂದ್ರಶೇಖರ್ ಅವರು ನಿರ್ದೇಶಿಸುತ್ತಿರುವ ಶೀರ್ಷಿಕೆ ಅಂತಿಮವಾಗದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮಾನ್ವಿತಾ ಜೊತೆ ನಟ ವಶಿಷ್ಟ ಸಿಂಹ ನಟಿಸಿದ್ದಾರೆ. ಕೇವಲ ಹತ್ತು ದಿನಗಳಲ್ಲಿ ಈ ಸಿನಿಮಾದ ಚಿತ್ರೀಕರಣ ಮುಗಿಯುತ್ತದೆ ಎಂದು ವರದಿಯಾಗಿದೆ.

    ಮಾನ್ವಿತಾ ಈಗ ‘ದಾರಿ ತಪ್ಪಿದ ಮಗ’ ಚಿತ್ರತಂಡದ ಜೊತೆ ಜನವರಿ 16ರಂದು ಸೇರುತ್ತಿದ್ದಾರೆ. ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸುತ್ತಿದ್ದು, ದೀರೇನ್ ರಾಜ್‍ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರತಂಡ ಈಗ ದೀರೇನ್ ರಾಜ್‍ಕುಮಾರ್ ಪಾತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.

     

    View this post on Instagram

     

    Early morning shenanigans ????☀️ . . . PC @mholani Mua @juveria_k Styled by @agneeshbanerjee

    A post shared by Manvitha Kamath (@manvithaharish_official) on

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ – ವೀರೇಂದ್ರ ಹೆಗ್ಗಡೆ ಅಸಮಾಧಾನ

    ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ – ವೀರೇಂದ್ರ ಹೆಗ್ಗಡೆ ಅಸಮಾಧಾನ

    ಮಂಗಳೂರು: ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ.

    ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಪ್ರವೇಶದಿಂದ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯ ಮತ್ತೆ ಓಪನ್

    ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

    44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv