Tag: environment

  • ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು: ಸಿದ್ದರಾಮಯ್ಯ

    ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು: ಸಿದ್ದರಾಮಯ್ಯ

    ಬೆಂಗಳೂರು: ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು (Media) ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)  ಹೇಳಿದ್ದಾರೆ

    ಇಂದು ಬೆಂಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

    ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದರು.  ಇದನ್ನೂ ಓದಿ:  ಜಾತಿಗಣತಿ ಮುಂದೂಡಲ್ಲ, ಮುಂದೂಡಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

    ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು ಮಾದರಿಯಾಗಲಿ ಎಂದು ಹೇಳಿದರು.

    ಮಾಧ್ಯಮಗಳ ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಸುದ್ದಿಗಳಲ್ಲಿ ಊಹಾ ಪತ್ರಿಕೋದ್ಯಮ ಕಾಣುತ್ತದೆ, ಅದು ಆಗಬಾರದು. ಸತ್ಯ – ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

    ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮಗಳು ಮಾಡಬೇಕು ಎಂದರು.

    ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಬ್ರೇಕಿಂಗ್ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ ಎಂದು ಹೇಳಿದರು.

    ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ. ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

  • ಪರಿಸರ ಸಂರಕ್ಷಿಸಲು ಜೀವನ ಮುಡಿಪಾಗಿಟ್ಟರು: ತುಳಸಿ ಗೌಡ ನಿಧನಕ್ಕೆ ಮೋದಿ ಸಂತಾಪ

    ಪರಿಸರ ಸಂರಕ್ಷಿಸಲು ಜೀವನ ಮುಡಿಪಾಗಿಟ್ಟರು: ತುಳಸಿ ಗೌಡ ನಿಧನಕ್ಕೆ ಮೋದಿ ಸಂತಾಪ

    ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ (Ankola) ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ (Tulsi Gowda) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

    ಈ ಕುರಿತು  ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮೋದಿ (Narendra Modi) ಬೇಸರ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇವರು ಪರಿಸರ ಸಂರಕ್ಷಣೆಗೆ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತಾರೆ. ಅವರ ಕೆಲಸ ನಮ್ಮ ಭೂಮಿಯನ್ನು ರಕ್ಷಿಸಲು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ

    ತುಳಸಿ ಗೌಡ ಯಾರು?
    ತುಳಸಿ ಗೌಡ ಅವರು ವಯೋಸಹಜತೆಯಿಂದ ಸೋಮವಾರ ಸಂಜೆ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಹಾಲಕ್ಕಿ ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ಇವರಿಗೆ ಸುಬ್ರಾಯ ಮತ್ತು ಸೋಮಿ ಎಂಬ ಇಬ್ಬರು ಮಕ್ಕಳಿದ್ದಾರೆ. ತುಳಸಿ ಗೌಡ ನಾಲ್ಕು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನ- ಒಂದೇ ದಿನ 15 ಗಂಟೆ ವಿಧಾನಸಭಾ ಕಲಾಪ

    ವರ್ಷಕ್ಕೆ ಮೂವತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು ತುಳಸಿ ಗೌಡ ಅವರು ನೆಟ್ಟು ಬೆಳೆಸುತ್ತಿದ್ದರು. ಈವರೆಗೆ ಲಕ್ಷಾಂತರ ಗಿಡಗಳನ್ನು ಬೆಳೆಸಿ ಪಾಲನೆ ಮಾಡಿದ ಕೀರ್ತಿ ಇವರದ್ದು. ಚಿಕ್ಕ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡು ಇಬ್ಬರು ಮಕ್ಕಳನ್ನು ಸಾಕಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ ಇವರು ಅಲ್ಲಿಯೇ ಗಿಡಗಳ ಆರೈಕೆ ಪೋಷಣೆ ಮಾಡುತ್ತಾ ಇಲಾಖೆಯಿಂದ ಹೇಳದಿದ್ದರೂ ಸಂಬಳ ಬಯಸದೇ ಸೇವೆ ರೂಪದಲ್ಲಿ ಅರಣ್ಯ ಬೆಳಸುವ ಕಾಯಕಕ್ಕೆ ಕೈಹಾಕಿದರು. ಇದಲ್ಲದೇ ಅರಣ್ಯದಲ್ಲಿ ಅಳವಿನಂಚಿನಲ್ಲಿ ಇರುವ ಹಲವು ಕಾಡು ಗಿಡಗಳ ಬೀಜ ಸಂಗ್ರಹಿಸಿ ಸಸಿಗಳನ್ನು ಮಾಡಿ ಕಾಡಿನಲ್ಲಿ ನೆಡುವ ಮೂಲಕ ಸದ್ದಿಲ್ಲದೇ ಹಸಿರು ಕ್ರಾಂತಿ ಮಾಡಿದರು. ಇದನ್ನೂ ಓದಿ: Bengaluru| ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣು

    ಹಾಲಕ್ಕಿ ಜನಾಂಗದಲ್ಲಿ ಹುಟ್ಟಿದ ಇವರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಸಿರು ಬೆಳಸುವ ಕಾಯಕ ಮಾಡುತ್ತಾ ಸಾಗಿದರು. ಅಳಿವಿನಂಚಿನ ಸಸ್ಯಗಳನ್ನು ಬೆಳೆಸಿದ ಕೀರ್ತಿ ಇವರದ್ದು. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್ – ಮಹಿಳಾ ಕಾರ್ಮಿಕರು ಸಿಗದೇ ರೈತರ ಪರದಾಟ

  • ಡ್ರೋನ್‌ ಪ್ರತಾಪ್‌ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರು ನಿಗಿನಿಗಿ ಕೆಂಡ!

    ಡ್ರೋನ್‌ ಪ್ರತಾಪ್‌ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರು ನಿಗಿನಿಗಿ ಕೆಂಡ!

    ಬೆಂಗಳೂರು: ಸೈನ್ಸ್ ವಿಡಿಯೋ ಹೆಸರಿನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದು, ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ (Chemical Blast) ಮಾಡಿದ ವಿಡಿಯೋ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದೆ. ಪ್ರತಾಪ್ ಹುಚ್ಚಾಟಕ್ಕೆ ಕಿಡಿ ಕಾರಿದ್ದಾರೆ.

    ವೀವ್ಸ್ ಸಿಗಲು ಸೋಶಿಯಲ್ ಮೀಡಿಯಾದಲ್ಲಿ (Social Media) ಅದೆಂಥಹ ವಿಡಿಯೋ ಅಪ್ಲೋಡ್ ಮಾಡೋದಕ್ಕೂ ಕೆಲವ್ರು ಸೈ. ಈಗ ಡ್ರೋನ್‌ ಪ್ರತಾಪ್ ಕೂಡ ಇಂತಹದ್ದೇ ಎಡವಟ್ಟು ಮಾಡಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ. ವಿಜ್ಞಾನ ಪ್ರಯೋಗದ ಹೆಸರಿನಲ್ಲಿ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್‌ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್‌ ಬಿಲ್ಡಪ್ ಬೇರೆ ಕೊಟ್ಟಿದ್ದಾರೆ. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಅಂತ ಪ್ರತಾಪ್‌ ಕೂಗಿದ್ದಾರೆ.

    ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ. ಯಾವೆಲ್ಲ ಕೆಮಿಕಲ್ ಹಾಕಿದ್ರೇ ಬ್ಲಾಸ್ಟ್ ಆಗುತ್ತೆ ಅಂತಾನೂ ಲೈವ್‌ನಲ್ಲಿ ಹೇಳಿದ್ದು, ಇದನ್ನು ಕಿಡಿಗೇಡಿಗಳು ಕುಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಅಂತಾ ಪರಿಸತವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ – ಟೆಕ್ಕಿ ಅತುಲ್ ಆತ್ಮಹತ್ಯೆ ಕುರಿತು ಕಂಗನಾ ಪ್ರತಿಕ್ರಿಯೆ

    ಈ ರೀತಿಯ ಪ್ರಯೋಗ ಅಪಾಯಕಾರಿ ಮತ್ತು ಕಾನೂನು ಬಾಹಿರವಾದದ್ದು. ಈ ಬ್ಲಾಸ್ಟ್ ವಿಡಿಯೋ ಮಾಡುವ ಮುನ್ನ ಕನಿಷ್ಟ ಪಕ್ಷ ಡ್ರೋನ್‌ ಪ್ರತಾಪ್ ಯೋಚನೆ ಮಾಡಬೇಕಾಗಿತ್ತು ಇದ್ಯಾವ ಸೀಮೆ ವಿಜ್ಞಾನದ ಬಗ್ಗೆ ಮಾಹಿತಿ ಕೊಡ್ತಾ ಇರೋದು ಅವರಿಗೆ ಗೊತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವೈದ್ಯನ ಕೈಹಿಡಿದ್ರೂ ಸುಖವಿಲ್ಲದ ಬದುಕು, 4 ವರ್ಷದಿಂದ ಗೃಹಬಂಧನದಲ್ಲಿ ಗೃಹಿಣಿ!

  • ಸತತ 4ನೇ ದಿನ ವಾಯುಗುಣಮಟ್ಟ ಕುಸಿತ – ದೆಹಲಿಯಲ್ಲಿ ಹೈವೋಲ್ಟೇಜ್‌ ಸಭೆ ಕರೆದ ಸಿಎಂ

    ಸತತ 4ನೇ ದಿನ ವಾಯುಗುಣಮಟ್ಟ ಕುಸಿತ – ದೆಹಲಿಯಲ್ಲಿ ಹೈವೋಲ್ಟೇಜ್‌ ಸಭೆ ಕರೆದ ಸಿಎಂ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಸತತ 4ನೇ ದಿನ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದೆ. CPCB ಮಾಹಿತಿ ಪ್ರಕಾರ ಸೋಮವಾರ ಬೆಳಗ್ಗೆ 9 ಗಂಟೆ ವೇಳೆಗೆ ವಾಯು ಗುಣಮಟ್ಟ ಸೂಚ್ಯಂಕವು (AQI) 437 ರಷ್ಟು ದಾಖಲಾಗಿದೆ. ಆರೋಗ್ಯದ ದೃಷ್ಟಿಯಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 10ರ ವರೆಗೆ ಮುಚ್ಚುವಂತೆ ದೆಹಲಿ ಸರ್ಕಾರ ಆದೇಶಿಸಿದೆ. ಈ ನಡುವೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇಂದೇ ಉನ್ನತ ಮಟ್ಟದ ಸಭೆ ಕರೆದ್ದಾರೆ.

    ಸಭೆಯಲ್ಲಿ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಸೇರಿದಂತೆ ಸಾರಿಗೆ, ಮುನ್ಸಿಪಲ್‌ ಕಾರ್ಪೊರೇಷನ್‌, ದೆಹಲಿ ಪೊಲೀಸ್, ದೆಹಲಿ ಟ್ರಾಫಿಕ್ ಪೋಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ. ಸಭೆಯಲ್ಲಿ ನಗರದಾದ್ಯಂತ ಕೈಗೊಳ್ಳಬಹುದಾದ ಹೆಚ್ಚುವರಿ ತುರ್ತು ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ.

    ದೆಹಲಿಯಲ್ಲಿ AQI 450 ಮಾರ್ಕ್ ಅನ್ನು ಮೀರುವ ಕನಿಷ್ಠ ಮೂರು ದಿನಗಳ ಮೊದಲು ಮಾಲಿನ್ಯ-ವಿರೋಧಿ ಯೋಜನೆಯ ಅಂತಿಮ ಹಂತವನ್ನು ಸಕ್ರಿಯಗೊಳಿಸಲಾಗುತ್ತದೆ. ಆದರೆ, ಈ ಬಾರಿ ಕ್ರಿಯಾಶೀಲ ಅನುಷ್ಠಾನ ಸಾಧ್ಯವಾಗಿಲ್ಲ. ಇದರಿಂದ ವಾಯು ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೇದಾರನಾಥದಲ್ಲಿ ಕಾಯುತ್ತಿರುವ ಯಾತ್ರಾರ್ಥಿಗಳಿಗೆ ಚಹಾ ಹಂಚಿದ ರಾಗಾ

    ಸೋಮವಾರ ಬೆಳಗ್ಗೆ 9 ಗಂಟೆಗೆ ಬವಾನಾದಲ್ಲಿ 478, ದ್ವಾರಕಾ ಸೆಕ್ಟರ್ 8ರಲ್ಲಿ 459, ಜಹಾಂಗೀರಪುರಿಯಲ್ಲಿ 475, ಮುಂಡ್ಕಾದಲ್ಲಿ 466, ನರೇಲಾದಲ್ಲಿ 460, ನ್ಯೂ ಮೋತಿ ಬಾಗ್‌ನಲ್ಲಿ 444, ಓಖ್ಲಾ ಹಂತ-2ರಲ್ಲಿ 446 ರಷ್ಟು ವಾಯುಗುಣಮಟ್ಟ ಸೂಚ್ಯಂಕ ದಾಖಲಾಗಿದೆ. ಪಂಜಾಬಿ ಬಾಗ್‌ನಲ್ಲಿ 469, ಆರ್‌ಕೆ ಪುರಂನಲ್ಲಿ 462, ರೋಹಿಣಿಯಲ್ಲಿ 478, ಸಿರಿ ಫೋರ್ಟ್‌ನಲ್ಲಿ 430 ಮತ್ತು ವಜೀರ್‌ಪುರದಲ್ಲಿ 482 ರಷ್ಟು ದಾಖಲಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ

    ಈಗಾಗಲೇ ವಾಯು ಮಾಲಿನ್ಯಕ್ಕೆ ನಿಖರ ಕಾರಣ ಪತ್ತೆಹಚ್ಚಲು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ 1,119 ಅಧಿಕಾರಿಗಳನ್ನೊಳಗೊಂಡ 517 ತಂಡಗಳನ್ನ ರಚಿಸಿದೆ. ಈ ತಂಡದ ಮೂಲಕ ಚಳಿಗಾಲದ ಕ್ರಿಯಾಯೋಜನೆ ಅಡಿಯಲ್ಲಿ ತೆರೆದ ಪ್ರದೇಶದಲ್ಲಿ ವಸ್ತುಗಳ ಸುಡುವಿಕೆ, ಅನಗತ್ಯ ತ್ಯಾಜ್ಯ ಮತ್ತು ಇತರೇ ಕಾರಣಗಳಿಂದ ಉಂಟಾಗುತ್ತಿರುವ ಧೂಳನ್ನು ಪರಿಶೀಲಿಸಲು ಈ ತಂಡವನ್ನು ನಿಯೋಜಿಸಿದೆ. ಈ ನಡುವೆ ಉನ್ನತ ಮಟ್ಟದ ಸಭೆಯಲ್ಲಿ ಇನ್ನಷ್ಟು ತುರ್ತು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಮ್ಮ ಕ್ರಿಕೆಟ್‌ ತಂಡ ಮತ್ತೊಮ್ಮೆ ವಿಜಯಶಾಲಿಯಾಗಿದೆ: ಭಾರತದ ಗೆಲುವಿಗೆ ಮೋದಿ ಅಭಿನಂದನೆ

  • 20% ಎಥೆನಾಲ್ ಮಿಶ್ರಿತ ಪೆಟ್ರೋಲ್: ಲಾಭ, ಸವಾಲುಗಳೇನು?

    20% ಎಥೆನಾಲ್ ಮಿಶ್ರಿತ ಪೆಟ್ರೋಲ್: ಲಾಭ, ಸವಾಲುಗಳೇನು?

    ಪ್ರಸ್ತುತ ಭಾರತದಲ್ಲಿ (India) ಪೆಟ್ರೋಲ್‌ಗೆ (Petrol) 10% ಎಥೆನಾಲ್ (Ethanol) ಬೆರೆಸಲಾಗುತ್ತಿದೆ. ಇದನ್ನೂ ಮುಂದಿನ 2025ರ ವೇಳೆಗೆ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ವಾಹನಗಳು ಹೊರ ಸೂಸುವ ಇಂಗಾಲದ ಪ್ರಮಾಣ ಕಡಿತಗೊಳಿಸಲು ಹಾಗೂ ಜೈವಿಕ ಇಂಧನಗಳ ಬಳಕೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಪ್ರಮುಖವಾಗಿ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ನಿರ್ಧಾರ ಕೈಗೊಂಡಿದೆ.

    ಎಥೆನಾಲ್ ಮಿಶ್ರಣ ಎಂದರೇನು ಮತ್ತು ಅದು ಹೇಗೆ ಸಹಾಯ ಮಾಡುತ್ತದೆ?

    ಎಥೆನಾಲ್ ಮಿಶ್ರಣವು ಈಥೈಲ್ ಆಲ್ಕೋಹಾಲ್‌ನ್ನು ಒಳಗೊಂಡಿರುವ ಇಂಧನವಾಗಿದೆ. ಇದನ್ನು ಕೃಷಿ ಉತ್ಪನ್ನಗಳಿಂದ ತಯಾರಿಸಿ ಬಳಿಕ ಪೆಟ್ರೋಲ್‌ಗೆ ಮಿಶ್ರಣ ಮಾಡಲಾಗುತ್ತದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಎರಡು ಅಂಶಗಳಲ್ಲಿ ಸಹಾಯ ಮಾಡುತ್ತದೆ. ಜೈವಿಕ ಇಂಧನವಾಗಿ ಪರಿಸರಕ್ಕೆ (Environment) ಆಗುವ ಹಾನಿಯ ಪ್ರಮಾಣವನ್ನು ತಗ್ಗಿಸುತ್ತದೆ. ಅಲ್ಲದೇ ಇದು ಕಚ್ಚಾ ತೈಲ ಆಮದನ್ನು ಕಡಿಮೆ ಮಾಡುತ್ತದೆ.

    ಸರ್ಕಾರದ ಯೋಜನೆ ಏನು?

    ಭಾರತದಾದ್ಯಂತ ಮುಂದಿನ ಎರಡು ವರ್ಷಗಳಲ್ಲಿ ಪ್ರಸ್ತುತ 10% ಎಥೆನಾಲ್ ಮಿಶ್ರಿತ ಪೆಟ್ರೋಲ್‌ನ್ನು 20%ಗೆ ಹೆಚ್ಚಿಸಲು ಯೋಜಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಕೆಲಸ ಎರಡು ಹಂತಗಳಲ್ಲಿ ನಡೆಯುತ್ತಿದೆ. ಮೊದಲ ಹಂತದಲ್ಲಿ 15 ನಗರಗಳನ್ನು ಒಳಗೊಳ್ಳುತ್ತದೆ. ಮುಂದಿನ ಎರಡು ವರ್ಷಗಳಲ್ಲಿ ಇದನ್ನು ದೇಶಾದ್ಯಂತ ವಿಸ್ತರಿಸಲಾಗುತ್ತದೆ. ಒಟ್ಟಾರೆ 2025ರ ವೇಳೆಗೆ ಸರ್ಕಾರ ತನ್ನ ಗುರಿಯನ್ನು ಸಾಧಿಸಲು ಕ್ರಮ ಕೈಗೊಂಡಿದೆ.

    E20 ಪೆಟ್ರೋಲ್ ಪ್ರಸ್ತುತ ಲಭ್ಯವಿದೆಯೇ?

    E20 (20% ಎಥೆನಾಲ್‌ನೊಂದಿಗೆ ಪೆಟ್ರೋಲ್ ಮಿಶ್ರಣ) ಆರಂಭದಲ್ಲಿ ದೇಶದ 84 ಪೆಟ್ರೋಲ್ ಪಂಪ್‌ಗಳಲ್ಲಿ ಮಾತ್ರ ಲಭ್ಯವಿತ್ತು. ಈಗ ಪ್ರಸ್ತುತ ಸುಮಾರು 1,000 ಪೆಟ್ರೋಲ್ ಪಂಪ್‌ಗಳಲ್ಲಿ ಲಭ್ಯವಿದೆ ಎಂದು ವರದಿಯಾಗಿದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಬೆಲೆ ಗ್ರಾಹಕರಿಗೆ ಇದೇ ದರದಲ್ಲಿ ಸಿಗುತ್ತಿದೆ ಎಂಬುದು ಗಮನಾರ್ಹ ವಿಚಾರ.

    ಉದ್ಯಮ ಎದುರಿಸುತ್ತಿರುವ ಸವಾಲುಗಳೇನು?

    ಪ್ರಸ್ತುತ ಉತ್ಪಾದಿಸಲಾಗುವ ಹೆಚ್ಚಿನ ಎಥೆನಾಲ್ ಅಕ್ಕಿ ಮತ್ತು ಕಬ್ಬನ್ನು ಬಳಸಿ ತಯಾರಿಸಲಾಗುತ್ತಿದೆ. ಈ ಎರಡೂ ಬೆಳೆಗಳಿಗೂ ಹೆಚ್ಚಿನ ನೀರಿನ ಅಗತ್ಯವಿದೆ. ಇತ್ತೀಚೆಗೆ ಅಕ್ಕಿ ಬೆಲೆಗಳು ಏರಿದಾಗ ಉದ್ಯಮಕ್ಕೆ ಅಕ್ಕಿ ಪೂರೈಕೆಯನ್ನು ನಿಲ್ಲಿಸಲಾಗಿತ್ತು. ಆಗ ಎಥೆನಾಲ್ ತಯಾರಕರು ತೊಂದರೆ ಎದುರಿಸಿದ್ದರು. 

    2025ರ ವೇಳೆಗೆ 20% ಮಿಶ್ರಣ ಮಾಡುವ ಗುರಿಯನ್ನು ಸಾಧಿಸಲು ಭಾರತಕ್ಕೆ 1,400 ಕೋಟಿ ಲೀಟರ್ ಎಥೆನಾಲ್ ಅಗತ್ಯವಿದೆ ಎಂದು ನೀತಿ ಆಯೋಗ ಅಂದಾಜಿಸಿದೆ. ಇದು ಸಕ್ಕರೆ ಉತ್ಪಾದನೆಗೆ ತೊಡಕಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

    ಎಥೆನಾಲ್ ಮಿಶ್ರಣ ಹೆಚ್ಚಾದ ಬಳಿಕ ರೈತರು 40,600 ಕೋಟಿ ರೂ. ಆದಾಯ ಗಳಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಭಾಷಣವೊಂದರಲ್ಲಿ ಉಲ್ಲೇಖಿಸಿದ್ದರು.

    ಎಥೆನಾಲ್ ಮಿಶ್ರಣದ ಪ್ರಯೋಜನಗಳೇನು?

    ಪ್ರಸ್ತುತ ಭಾರತ ತನ್ನ ಅಗತ್ಯದ 85% ಇಂಧನವನ್ನು ವಿದೇಶಗಳಿಂದ ಆಮದು ಮಾಡುತ್ತದೆ. ಎಥೆನಾಲ್ ಮಿಶ್ರಣ ಯಶಸ್ವಿಯಾದರೆ ಅದು ಭಾರತದ ಪೆಟ್ರೋಲಿಯಂ ಮೇಲಿನ ವಿದೇಶಿ ಅವಲಂಬನೆಯನ್ನು ಕಡಿತಗೊಳಿಸುತ್ತದೆ. 2020-21ರಲ್ಲಿ ಭಾರತದ ಪೆಟ್ರೋಲಿಯಂ ಆಮದು 15.5 ಕೋಟಿ ಟನ್ ಆಗಿದ್ದು, ಅದಕ್ಕಾಗಿ ಭಾರತ 15800 ಕೋಟಿ ರೂ. ಮೊತ್ತವನ್ನು ಪಾವತಿಸಿದೆ. ಆದ್ದರಿಂದ ಈ ಎಥೆನಾಲ್ ಮಿಶ್ರಣ ಆರ್ಥಿಕವಾಗಿ ಉಳಿತಾಯ ಮಾಡಲು ಸಹಕರಿಸುತ್ತದೆ. ಅದಲ್ಲದೆ ಎಥೆನಾಲ್ ಒಂದು ಸಸ್ಯಜನ್ಯ ಇಂಧನವಾದ್ದರಿಂದ ಇದನ್ನು ನವೀಕರಿಸಬಹುದಾದ ಇಂಧನ ಎಂದು ಪರಿಗಣಿಸಲಾಗಿದೆ.

    ಎಥೆನಾಲ್ ಮತ್ತು ಪರಿಸರ

    ಧಾನ್ಯ ಅಥವಾ ಕೃಷಿ ಆಧಾರಿತ ಎಥೆನಾಲ್ ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಗಮನಾರ್ಹವಾಗಿ 44% ರಿಂದ 52% ರಷ್ಟು ಕಡಿತಗೊಳಿಸುತ್ತದೆ. ಮುಂದೆ ತಂತ್ರಜ್ಞಾನಗಳ ಸಹಾಯದಿಂದ ಇದನ್ನು 70%ಗೆ ಇಳಿಸಲು ಪ್ರಯತ್ನಗಳು ನಡೆಯುತ್ತಿದೆ.

    ಮೊದಲೆಲ್ಲ ಕೇವಲ ಕಬ್ಬನ್ನು ಬಳಸಿ ಎಥೆನಾಲ್ ಉತ್ಪಾದಿಸಲಾಗುತ್ತಿತ್ತು. ಆದರೆ ಈಗ ಎಥೆನಾಲ್ ಉತ್ಪಾದನೆಗೆ ಜೋಳ, ಭತ್ತ, ಹಣ್ಣು ಹಾಗೂ ತರಕಾರಿ ಉತ್ಪನ್ನಗಳನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ. ಇದು ಭಾರತೀಯ ಕೃಷಿಕರಿಗೆ ಹೆಚ್ಚಿನ ಆದಾಯ ಗಳಿಸಲು ಸಹಕರಿಸುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ

    ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ

    ಬೆಂಗಳೂರು: ಪ್ರಕೃತಿಯ ಮೇಲಿನ ಪ್ರೀತಿ ಮತ್ತು ಗೌರವ, ಸರಳ ಜೀವನ ಹಾಗೂ ಪರಿಸರ ಸಂರಕ್ಷಣೆ ಕಡೆಗೆ ಹೊಸ ಪ್ರಜ್ಞೆಯನ್ನು ಯುವಪೀಳಿಗೆಯಲ್ಲಿ ಜಾಗೃತಗೊಳಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

    ನಗರದ ಮೌಂಟ್ ಕಾರ್ಮಲ್ ಕಾಲೋಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರೊಂದಿಗೆ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ: ಜನವರಿಯಿಂದ ಪಕ್ಷಾಂತರ ಪರ್ವ ಆರಂಭ – ಪ್ರಭಾವಿ ಲಿಂಗಾಯತ ಲೀಡರ್ ಬಿಜೆಪಿ ಸೇರ್ಪಡೆ?: ಸತೀಶ್ ಜಾರಕಿಹೊಳಿ

    ಪ್ರಸ್ತುತ ಜಾಗತಿಕ ತಾಪಮಾನ, ಹವಾಮಾನ ಬದಲಾವಣೆ ಮತ್ತು ಗಾಳಿಯ ಗುಣಮಟ್ಟದಲ್ಲಿನ ಏರುಪೇರಿನಿಂದಾಗಿ ನಾವು ಪರಿಸರ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ, ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ಲಿಮಾದ ಸೇಂಟ್ ರೋಸ್‌ನ ಮದರ್ ತೆರೇಸಾ ಅವರು ಶಿಕ್ಷಣದಲ್ಲಿ ಮಹಿಳಾ ಸಬಲೀಕರಣದ ಬದ್ಧತೆಯೊಂದಿಗೆ 1948 ರಲ್ಲಿ ಮಹಿಳೆಯರ ಉನ್ನತ ಶಿಕ್ಷಣಕ್ಕಾಗಿ ಮೌಂಟ್ ಕಾರ್ಮೆಲ್ ಕಾಲೇಜನ್ನು ಸ್ಥಾಪಿಸಿದರು. ಇಂದು ಈ ಸಂಸ್ಥೆಯು ದೇಶದ ಪ್ರಸಿದ್ಧ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಸಮಗ್ರ ಶಿಕ್ಷಣವನ್ನು ಒದಗಿಸುವ ದೃಷ್ಟಿಕೋನದಿಂದ ಕಾರ್ಯನಿರ್ವಹಿಸುತ್ತಿರುವುದು ಅಭಿನಂದನಾರ್ಹ. 74 ವರ್ಷಗಳ ನಿರಂತರ ಮತ್ತು ಅವಿರತ ಪ್ರಯತ್ನದಿಂದ ಈ ಸಂಸ್ಥೆಯು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ ಮತ್ತು ವಿವಿಧ ಚಟುವಟಿಕೆಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ದೇಶವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯನ್ನು “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಎಂದು ಆಚರಿಸುತ್ತಿರುವ ಸಮಯದಲ್ಲಿ ಮೌಂಟ್ ಕಾರ್ಮೆಲ್ ಕಾಲೇಜಿನ 75 ನೇ ವಾರ್ಷಿಕೋತ್ಸವ ಆಚರಣೆ ಕಾಕತಾಳೀಯವಾಗಿದೆ ಎಂದು ಹೇಳಿದರು.

    ಸ್ವಾತಂತ್ರ್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಸ್ವಾತಂತ್ರ್ಯದ ಪಯಣವು ಭಾರತೀಯರ ಕಠಿಣ ಪರಿಶ್ರಮ, ನಾವಿನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ. ಈ ವರ್ಷಗಳಲ್ಲಿ ಅವರು ಸ್ವಾವಲಂಬಿ ಭಾರತವನ್ನು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸ್ಥಳೀಯರಿಗೆ ಗಾಯನದ ಉತ್ಸಾಹದಲ್ಲಿ ಕೆಲಸ ಮಾಡಿದ್ದಾರೆ. ಆರ್ಥಿಕತೆಯನ್ನು ಸುಧಾರಿಸಲು ಸಕ್ರಿಯ ಪ್ರಯತ್ನ ನಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್ ಅಮರನಾಥ ಚಾಲೆಂಜ್ ಆಗಿದೆ: ಕರ್ನಲ್ ವಿ.ಎಂ. ನಾಯಕ್

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶಿಕ್ಷಣ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳನ್ನು ಸಂಪರ್ಕಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತ, ಸ್ವಾವಲಂಬಿ ಭಾರತವನ್ನು ಮಾಡಲು ಬದ್ಧರಾಗಿದ್ದಾರೆ. ರಾಷ್ಟ್ರದ ಹೊಸ ಶಿಕ್ಷಣ ನೀತಿಯು 21 ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ. ಇದು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುತ್ತದೆ ಮತ್ತು ಅಂತಹ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ. ಇದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೆ ಇಡೀ ಮಾನವಕುಲಕ್ಕೆ ಪ್ರಯೋಜನವನ್ನು ನೀಡುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಮತ್ತು ಕ್ರೀಡೆಗೆ ಆದ್ಯತೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

    ಮೌಂಟ್ ಕಾರ್ಮೆಲ್ ಕಾಲೇಜಿನ ಆಡಳಿತ ಮಂಡಳಿ ಮತ್ತು ಸದಸ್ಯರು ತಮ್ಮ 75 ವರ್ಷಗಳ ಪಯಣವನ್ನು ಪೂರೈಸಿದ ಸೇವಾ ಮನೋಭಾವನೆಯೊಂದಿಗೆ ಮುಂದೆಯೂ ಇದೇ ಸೇವಾ ಮನೋಭಾವನೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಪಾಲರಾದ ಮಾರ್ಗೆರೇಟ ಆಳ್ವ, ಸಿಸ್ಟರ್ ಡಾ.ಕ್ರಿಸ್, ಸಿಸ್ಟರ್ ಅಪರ್ಣಾ, ಸಿಸ್ಟರ್ ಅರ್ಪಣಾ, ಬೆಂಗಳೂರಿನ ಆರ್ಚಿಬಿಷಪ್ ಡಾ.ಪೀಟರ್ ಮಚಾಡೊ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗಿಡ ನೆಡುವುದರ ಜೊತೆಗೆ ಸಂರಕ್ಷಿಸಿ: ರಾಜ್ಯಪಾಲರ ಕರೆ

    ಗಿಡ ನೆಡುವುದರ ಜೊತೆಗೆ ಸಂರಕ್ಷಿಸಿ: ರಾಜ್ಯಪಾಲರ ಕರೆ

    ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಭೂಮಿ ಮೇಲಿನ ತಾಪಮಾನ ಹೆಚ್ಚಾಗುತ್ತಿದ್ದು, ನೈಸರ್ಗಿಕ ಸಂಪನ್ಮೂಲದ ಮೇಲೆ ಇದು ಪರಿಣಾಮ ಬೀರುತ್ತಿದೆ. ಹಾಗಾಗಿ, ಪ್ರತಿಯೊಬ್ಬರು ಮರ ಮತ್ತು ಜಲ ಸಂರಕ್ಷಣೆಗೆ ಮುಂದಾಗುವ ಮೂಲಕ ಪರಿಸರ ಕಾಪಾಡಿಕೊಳ್ಳಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

    ನಗರದ ಗೊಟ್ಟಿಗೆರೆಯಲ್ಲಿ ಮಂಗಳವಾರ ಬ್ರಹ್ಮಕುಮಾರೀಸ್ ವತಿಯಿಂದ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದಿಂದ ಸುವರ್ಣ ಭಾರತದತ್ತ ಹೆಜ್ಜೆಯಾಗಿ ಬ್ರಹ್ಮಕುಮಾರಿಯರ ರಾಷ್ಟ್ರೀಯ ಕಲ್ಪತರು ಯೋಜನೆಗೆ ಚಾಲನೆ ನೀಡಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಸ್ಥಿರ ಕೃಷಿ, ನೀರಿನ ಸಂಸ್ಕರಣೆ, ಮರ ನೆಡುವಿಕೆ, ಸರಳ ಮತ್ತು ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವುದು ಸೇರಿದಂತೆ ಬ್ರಹ್ಮಕುಮಾರಿ ಅವರ ‘ಕಲ್ಪತರು’ ಎಂಬ ಪ್ರಮುಖ ಮರ ನೆಡುವ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಇದು ವ್ಯಕ್ತಿಗಳು ತಮ್ಮ ಪರಿಸರದ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತದೆ ಎಂದರು. ಇದನ್ನೂ ಓದಿ: ಕಡೇ ಕ್ಷಣದ ಬದಲಾವಣೆ ಮಧ್ಯೆ ಟಿಕೆಟ್ ಘೋಷಣೆ – ಹೈಡ್ರಾಮಾ ಮೂಲಕ ಕಮಲ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ 

    ಗಿಡಗಳನ್ನು ನೆಡುವುದರ ಜೊತೆಗೆ ಸಂರಕ್ಷಣೆ ಮಾಡಬೇಕು. ಅಲ್ಲದೇ ಪ್ರತಿಯೊಬ್ಬರು ನೀರಿನ ಮಹತ್ವವನ್ನು ಅರಿತು ಹಿತಮಿತವಾಗಿ ಬಳಸಬೇಕು. ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕರೆ ನೀಡಿದರು.

    ಬ್ರಹ್ಮ ಕುಮಾರೀಸ್ ವಿಶ್ವಾದ್ಯಂತ ಆಧ್ಯಾತ್ಮಿಕ ಸಂಸ್ಥೆಯಾಗಿದ್ದು, ವೈಯಕ್ತಿಕ ರೂಪಾಂತರ ಮತ್ತು ವಿಶ್ವ ನವೀಕರಣಕ್ಕೆ ಮೀಸಲಾಗಿದೆ. ಇವರ ನಿಜವಾದ ಬದ್ಧತೆಯು ಭೌತಿಕದಿಂದ ಆಧ್ಯಾತ್ಮಿಕವಾಗಿ ತನ್ನ ದೃಷ್ಟಿಕೋನದಲ್ಲಿ ಬದಲಾವಣೆಯನ್ನು ಮಾಡಲು ವ್ಯಕ್ತಿಯನ್ನು ಪ್ರೇರೇಪಿಸುತ್ತದೆ. ಪ್ರತಿ ಆತ್ಮವು ಶಾಂತಿ ಮತ್ತು ವೈಯಕ್ತಿಕ ಘನತೆಯ ಆಳವಾದ ಸಾಮೂಹಿಕ ಪ್ರಜ್ಞೆಯನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

    ಬ್ರಹ್ಮ ಕುಮಾರೀಸ್ ವರ್ಲ್ಡ್ ಸ್ಪಿರಿಚ್ಯುಯಲ್ ಯೂನಿವರ್ಸಿಟಿ ಒಂದು ಸಾಮಾಜಿಕ-ಆಧ್ಯಾತ್ಮಿಕ ಮತ್ತು ಅಂತರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದೆ. ಶಾಂತಿ ಮತ್ತು ಜಾಗತಿಕ ಸಾಮರಸ್ಯವನ್ನು ಉತ್ತೇಜಿಸಲು ಹಲವಾರು ಯೋಜನೆಗಳ ಮೂಲಕ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯೊಂದಿಗೆ ಕೆಲಸ ಮಾಡುತ್ತಿದೆ. ಬ್ರಹ್ಮಾಕುಮಾರಿಯರು ಮೌಂಟ್ ಅಬುನಲ್ಲಿರುವ ತಮ್ಮ ಅಂತರಾಷ್ಟ್ರೀಯ ಪ್ರಧಾನ ಕಛೇರಿಯ ಮೂಲಕ ಮತ್ತು 136ಕ್ಕೂ ಹೆಚ್ಚು ದೇಶಗಳಲ್ಲಿನ ಶಾಖೆಗಳ ಮೂಲಕ ಜೀವನದ ಪ್ರತಿಯೊಂದು ಸಂಭವನೀಯ ಕ್ಷೇತ್ರಗಳಲ್ಲಿ 8 ದಶಕಗಳಿಂದ ಮಾನವಕುಲಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

    ಬ್ರಹ್ಮಾಕುಮಾರೀಸ್ ಮಹಿಳೆಯರಿಂದ ನಡೆಸಲ್ಪಡುವ ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಸಂಸ್ಥೆಯಾಗಿದೆ. ಈ ಸಂಸ್ಥೆಯ ಸಂಸ್ಥಾಪಕರಾದ ಪ್ರಜಾಪಿತ ಬ್ರಹ್ಮ ಬಾಬಾ ಅವರು ಮೊದಲಿನಿಂದಲೂ ತಾಯಂದಿರು ಮತ್ತು ಸಹೋದರಿಯರನ್ನು ಮುಂಚೂಣಿಯಲ್ಲಿರಿಸಲು ನಿರ್ಧರಿಸಿದರು. ಇದರಿಂದಾಗಿ ಬ್ರಹ್ಮಕುಮಾರಿಯರು ವಿಶ್ವದ ಇತರ ಎಲ್ಲ ಆಧ್ಯಾತ್ಮಿಕ ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ತಮ್ಮ ಪ್ರತ್ಯೇಕ ಅಸ್ತಿತ್ವವನ್ನು ಉಳಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅತಿಹೆಚ್ಚು ಟಿವಿ ನೋಡುವವರಿಗೆ 16% ಹೃದಯ ಕಾಯಿಲೆ ಬರುವ ಸಾಧ್ಯತೆ: ತಜ್ಞರು 

    ಬ್ರಹ್ಮಕುಮಾರಿಯವರ ಧೈರ್ಯ, ಕ್ಷಮಿಸುವ ಸಾಮರ್ಥ್ಯ ಮತ್ತು ಏಕತೆಗೆ ಅವರ ಆಳವಾದ ಬದ್ಧತೆಯನ್ನು ಸತತವಾಗಿ ಸಾಬೀತುಪಡಿಸಿದೆ. ಬ್ರಹ್ಮಬಾಬಾ ಕಲಿಸಿದ ಜೀವನ ಕೌಶಲ್ಯಗಳು ಸಮಯದ ಪರೀಕ್ಷೆಯಾಗಿ ನಿಂತಿವೆ. ಅವರು ಮುಂಚೂಣಿಯಲ್ಲಿಟ್ಟ ಯುವ ಸಹೋದರಿಯರು ಈಗ ತಮ್ಮ 80-90 ವರ್ಷಗಳಲ್ಲಿ ಶಾಂತಿ, ಪ್ರೀತಿ ಮತ್ತು ಜ್ಞಾನದ ಜ್ಯೋತಿಯಾಗಿ ಮುನ್ನಡೆಯುತ್ತಿದ್ದಾರೆ ಎಂದು ಶ್ಲಾಘಿಸಿದರು.

    ರಾಜಯೋಗಿನಿ, ಬ್ರಹ್ಮಕುಮಾರಿಗಳ ಜಂಟಿ ಮುಖ್ಯಸ್ಥ ಡಾ.ನಿರ್ಮಲಾ, ಮೌಂಟ್ ಅಬುವಿನ ಬ್ರಹ್ಮಕುಮಾರಿಗಳ ಕಾರ್ಯನಿರ್ವಾಹಕ ಕಾರ್ಯದರ್ಶಿ ರಾಜಯೋಗಿ ಡಾ. ಮೃತ್ಯುಂಜಯ್, ಗೃಹ ಸಚಿವ ಅರಗ ಜ್ಞಾನೇಂದ್ರ, ರಾಜಯೋಗಿನಿ ಬ್ರಹ್ಮಕುಮಾರಿ ಅಂಬಿಕಾ ಅವರು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

  • ಪ್ರತಿದಿನವೂ ಪರಿಸರ ದಿನ ಆಚರಿಸಿ: ಜ್ಯೂನಿಯರ್ ವಿಷ್ಣುವರ್ಧನ್, ಶಂಕರ್ ನಾಗ್ ಕರೆ

    ಪ್ರತಿದಿನವೂ ಪರಿಸರ ದಿನ ಆಚರಿಸಿ: ಜ್ಯೂನಿಯರ್ ವಿಷ್ಣುವರ್ಧನ್, ಶಂಕರ್ ನಾಗ್ ಕರೆ

    ನೆಲಮಂಗಲ: ಕಾಡು ವಿಥ್ ನಾಡು ಪರಿಕಲ್ಪನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪ್ರಾದೇಶಿಕ ಸಾರಿಗೆ ಅಧಿಕಾರಿ ಡಾ.ಧನ್ವಂತರಿ ಒಡೆಯರ್ ಸೇರಿ ಪರಿಸರ ಸ್ನೇಹಿ ಕಾಳಜಿಗಾಗಿ, ಚಲನಚಿತ್ರ ಕಲಾವಿದರು ಹಾಗೂ ರಂಗಭೂಮಿ ಕಲಾವಿದರಾದ ಜ್ಯೂನಿಯರ್ ವಿಷ್ಣುವರ್ಧನ್, ಜ್ಯೂನಿಯರ್ ಶಂಕರ್ ನಾಗ್ ಜೊತೆಗೆ ಗಿಡ ನೆಟ್ಟು ಜನರಲ್ಲಿ ಪರಿಸರ ಜಾಗೃತಿಗೆ ಮುಂದಾಗಿದ್ದಾರೆ.

    ಸಮೀಪದ ತೋಟದ ಗುಡ್ಡದಹಳ್ಳಿ ಬಳಿ ಚಾಲಕರು ಹಾಗೂ ಜ್ಯೂನಿಯರ್ ಕಲಾವಿದರ ಜೊತೆ ಸೇರಿ ಪರಿಸರ ಉಳಿಸಿ ನಾಡು ಬೆಳೆಸಿ ಮುಂದಿನ ಪೀಳಿಗೆಗೆ ಇದೇ ದಾರಿ ದೀಪ ಎಂದು ಜಾಗೃತಿ ಸಾರಿದ್ದಾರೆ. ನಂತರ ಮಾತನಾಡಿದ ನೆಲಮಂಗಲ ಆರ್.ಟಿ.ಓ ಕಚೇರಿಯ ಹಿರಿಯ ಮೋಟಾರು ನಿರೀಕ್ಷಕ ಡಾ.ಧನ್ವಂತರಿ ಒಡೆಯರ್, ವಿಶ್ವ ಪರಿಸರ ದಿನವನ್ನು ಪ್ರತಿದಿನವು ಆಚರಿಸಬೇಕು, ಮನೆಗೊಂದು ಗಿಡವನ್ನು ನೆಡಬೇಕೆಂದು ಕರೆ ನೀಡಿದ್ದಾರೆ.

    ಇದು ಪ್ರತಿಯೊಬ್ಬರ ಕರ್ತವ್ಯ, ಉತ್ತಮ ಪರಿಸರದಿಂದ ನಾಡಿನಲ್ಲಿ ಮಳೆ, ಬೆಳೆ, ಪರಿಸರ, ತಂಪಾದ ಹಾಗೂ ಉತ್ತಮ ಗಾಳಿಯಿಂದ ಜೀವ ಸಂಕುಲಗಳು ಉಳಿಯುವ ಕೆಲಸವನ್ನು ಪ್ರತಿಯೊಬ್ಬರೂ ಕೈಜೋಡಿಸಿ ಪರಿಸರ ಕಾಳಜಿಯನ್ನ ಮೆರೆಯಬೇಕು ಎಂದು ತಿಳಿಸಿದರು. ಅದರ ಜೊತೆಗೆ ಚಾಲಕರು ಸಮಯ ಪ್ರಜ್ಞೆ, ಕಾಳಜಿ, ಹಾಗೂ ಸಾರಿಗೆ ನಿಯಮಗಳನ್ನ ಪಾಲಿಸಿ ವಾಹನಗಳ ಸಂಚಾರ ಮಾಡಬೇಕು ಎಂದು ಜಾಗೃತಿ ಮೂಡಿಸಿದ್ದಾರೆ.

    ಜ್ಯೂನಿಯರ್ ವಿಷ್ಣುವರ್ಧನ್(ಅಲಿ) ಜ್ಯೂನಿಯರ್ ಶಂಕರ್ ನಾಗ್ ವೃತ್ತಿಯಲ್ಲಿ ಚಲನಚಿತ್ರ ಕಲಾವಿದರು ರಂಗಭೂಮಿ ಕಲಾವಿದರಾಗಿದ್ದು, ಪರಿಸರ ರಕ್ಷಣೆಯಲ್ಲಿ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಸಂದೇಶ ನೀಡಿದರು. ನಾಡು ವಿಥ್ ಕಾಡು ಎಂಬ ಕಲ್ಪನೆ ಯಲ್ಲಿ 30 ಸಸಿಗಳನ್ನು ಜೈ ಮಾರುತಿ ಟ್ರಾವೆಲ್ಸ್ ಆವರಣದಲ್ಲಿ ನೆಡಲಾಯಿತು. ಇದನ್ನೂ ಓದಿ:  ಇಂದು ಆಷಾಢ ಅಮಾವಾಸ್ಯೆ, ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ತಾಯಿಯ ದರ್ಶನಕ್ಕಿಲ್ಲ ಅವಕಾಶ

  • ಪೊಲೀಸರಿಂದ ಪರಿಸರ ಪ್ರೇಮ – ಬೀಟ್‍ಗೊಂದು ಮರ ಅಭಿಯಾನ

    ಪೊಲೀಸರಿಂದ ಪರಿಸರ ಪ್ರೇಮ – ಬೀಟ್‍ಗೊಂದು ಮರ ಅಭಿಯಾನ

    ಹುಬ್ಬಳ್ಳಿ: ಪರಿಸರ ಪ್ರೇಮದಿಂದ ಪೊಲೀಸರು ಬೀಟ್ ಗೊಂದು ಮರ ಎಂಬ ಅಭಿಯಾನ ಮೂಲಕವಾಗಿ ಹುಬ್ಬಳ್ಳಿ ಪೊಲೀಸರು ಪರಿಸರ ಕಾಳಜಿ ಮೆರೆದಿದ್ದಾರೆ.

    ಕ್ರೈಂಗಳಿಗೆ ಕಡಿವಾಣ ಹಾಕಲು ಶ್ರಮಿಸುತ್ತಿದ್ದ ಪೊಲೀಸ್ ಇಲಾಖೆ ಈಗ ಮತ್ತೊಂದು ಸಾಮಾಜಿಕ ಜವಾಬ್ದಾರಿಗೆ ಮುಂದಾಗಿದೆ. ಹುಬ್ಬಳ್ಳಿ ಪೊಲೀಸರು ಈಗ ಪರಿಸರ ಬಗ್ಗೆ ಕಾಳಜಿ ತೋರುತ್ತಿದ್ದಾರೆ. ಬೀಟ್ ಗೊಂದು ಮರ ಅಂತ ಗೋಕುಲ್ ಪೊಲೀಸರು ಅಭಿಯಾನ ಆರಂಭಿಸಿದ್ದು ಪೊಲೀಸರ ಪರಸರ ಪ್ರೇಮಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್ ಸಾಕಷ್ಟು ಜನಮನ್ನಣೆ ಪಡೆದಿರುವ ವಿಭಾಗವಾಗಿದೆ. ಈಗ ಹುಬ್ಬಳ್ಳಿ- ಧಾರವಾಡ ಕಮೀಷನರೇಟ್ ಪರಿಸರ ಕಾಳಜಿ ಮೆರೆಯುತ್ತಿದೆ.

    ಹುಬ್ಬಳ್ಳಿ, ಧಾರವಾಡ ಪೊಲೀಸ್ ಕಮಿಷನರೇಟ್‍ನ ಗೋಕುಲ ರೋಡ್ ಠಾಣೆ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಆಯೋಜಿಸಿರುವ ಬೀಟ್‍ಗೊಂದು ಮರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಗೋಕುಲ್ ಠಾಣಿ ಇನ್‍ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ಅವರ ನೇತೃತ್ವದಲ್ಲಿ ಕೊಲ್ಲೂರು ಲೇಔಟ್ ಹಾಗೂ ಅಕ್ಷಯ ಕಾಲನಿಯಲ್ಲಿ ಸಸಿ ನೆಡುವ ಮೂಲಕವಾಗಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದರು.

    ಮನುಷ್ಯ ಮಾಡಿದ ತಪ್ಪಿಗೆ ಕೊರೊನಾದಂತ ರೋಗಗಳು ಇದರಿಂದ ಸೃಷ್ಟಿಯಾಗುತ್ತಿವೆ. ನಿಸರ್ಗದ ಪರಿಸ್ಥಿತಿ ಬಿಗಡಾಯಿಸಿ, ಉಸಿರಾಟಕ್ಕೆ ಬೇಕಾದ ಆಮ್ಲಜನಕವನ್ನೂ ಖರೀದಿಸಬೇಕಾದ ದುಸ್ಥಿತಿ ಬಂದಿದೆ. ನಿಸರ್ಗದತ್ತವಾದ ಸಸ್ಯ ಸಂಪತ್ತಿನ ಮೂಲಕ ಕೊಡುಗೆಯಾಗಿ ಕೊಟ್ಟಿರುವ ಆಮ್ಲಜನಕವನ್ನು ಸರಿಯಾಗಿ ಬಳಸಿಕೊಂಡು, ಉಳಿಸಿಕೊಂಡು ಹೋಗಬೇಕು ಎಂಬ ಸದುದ್ದೇಶದಿಂದ ಈ ಯೋಜನೆಯನ್ನು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರೇಟ್ ಕೈಗೆತ್ತಿಕೊಂಡಿದೆ. ಇದನ್ನೂ ಓದಿ:  ಡಾನ್ಸರ್ಸ್ ಕಷ್ಟಕ್ಕೆ ನಿಂತ ನಿಖಿಲ್ ಕುಮಾರಸ್ವಾಮಿ

    ಠಾಣೆಯ 68 ಬೀಟ್‍ನಲ್ಲಿ 68 ಸಸಿ ನೆಟ್ಟು ಪೋಷಿಸಲಾಗುವುದು. ಅದಕ್ಕೆ ಪೊಲೀಸ್ ಮರ ಎಂದು ನಾಮಕರಣ ಮಾಡಲಾಗಿದ್ದು, ಇದಕ್ಕೆ ವಿವಿಧ ಸಂಘ ಸಂಸ್ಥೆಗಳು, ಸ್ಥಳೀಯರು ಕೈಜೋಡಿಸಿರುವುದು ವಿಶೇಷವಾಗಿದೆ.

  • ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

    ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ

    ಚಿಕ್ಕೋಡಿ: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಸಿ ನೆಟ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸಿದರೆ ವಾಯುಮಾಲಿನ್ಯ ನಿರ್ಮೂಲನೆ ಆಗುವುದರ ಜೊತೆಗೆ ಆಕ್ಸಿಜನ್ ಉತ್ಪಾದನೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆರೆಗಳು ಅಳಿವಿನಂಚಿಗೆ ಸಾಗುತ್ತಿರುವುದು ವಿಷಾದನೀಯ: ಶಶಿಕಲಾ ಜೊಲ್ಲೆ

    ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ. ಜೀವ ವಾಯು ಆಕ್ಸಿಜನ್ ಪ್ರಮಾಣ ಹೆಚ್ಚಿಸಲು ಕಾಡನ್ನ ಉಳಿಸಿ ಬೆಳೆಸಬೇಕಾಗುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ಪ್ರತಿಯೊಬ್ಬರು ಮರಗಳನ್ನ ನೆಟ್ಟು ಪರಿಸರವನ್ನ ರಕ್ಷಿಸಬೇಕು. ಪರಿಸರ ನಾಶದಿಂದ ಭೂಮಿ ವಿನಾಶದತ್ತ ತೆರಳುತ್ತಿದೆ. ಹೀಗಾಗಿ ಮರಗಳನ್ನ ಉಳಿಸಿ ಬೆಳೆಸುವ ಕಾರ್ಯ ನಮ್ಮದಾಗಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಹುಕ್ಕೇರಿ ತಹಶೀಲ್ದಾರ ಡಿ.ಎಂ.ಹೂಗಾರ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ, ಪಿ ಎಸ್ ಐ ಸಿದ್ದರಾಮಪ್ಪ ಉನ್ನದ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಟೊಮೆಟೊ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ