Tag: Equality

  • ಸತ್ಯ, ಸಮಾನತೆಯ ಮೊದಲ ಹೆಜ್ಜೆಗೆ ನನ್ನ ಪ್ರಣಾಮಗಳು: ರಾಹುಲ್ ಗಾಂಧಿ

    ಸತ್ಯ, ಸಮಾನತೆಯ ಮೊದಲ ಹೆಜ್ಜೆಗೆ ನನ್ನ ಪ್ರಣಾಮಗಳು: ರಾಹುಲ್ ಗಾಂಧಿ

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಡಿನ ಸಮಸ್ತ ಜನರಿಗೆ 73ನೇ ಗಣರಾಜ್ಯೋತ್ಸವ ಶುಭಾಶಯ ಕೋರಿದ್ದಾರೆ. 1950ರಲ್ಲಿ ಆಚರಿಸಲಾದ ಮೊದಲ ಗಣರಾಜ್ಯೋತ್ಸವ ಸತ್ಯ, ಸಮಾನತೆ ಮೊದಲ ಹೆಜ್ಜೆಯಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: 1950ರಲ್ಲಿ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ದೇಶ ಸರಿಯಾದ ದಿಕ್ಕಿನಲ್ಲಿ ಮತ್ತು ವಿಶ್ವಾಸದಿಂದ ಮೊದಲ ಹೆಜ್ಜೆ ಇಟ್ಟಿತು. ಅಂತಹ ಸತ್ಯ ಮತ್ತು ಸಮಾನತೆಯ ಮೊದಲ ಹೆಜ್ಜೆಗೆ ನನ್ನ ಪ್ರಣಾಮಗಳು. ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

    50 ವರ್ಷಗಳ ನಂತರ ಇಂಡಿಯಾ ಗೇಟ್‍ನಲ್ಲಿ ನಂದಿಸಲಾದ ಶಾಶ್ವತ ಜ್ಯೋತಿಯ ಚಿತ್ರದೊಂದಿಗೆ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ. ರಾಷ್ಟ್ರೀಯ ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ಅಮರ್ ಜ್ಯೋತಿಯನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ವಿಲೀನಗೊಳಿಸಿತ್ತು. ಈ ಕ್ರಮವನ್ನು ಕಾಂಗ್ರೆಸ್ ಮತ್ತು ಇತರ ವಿರೋಧಿ ಪಕ್ಷಗಳು ಸೇರಿದಂತೆ ಹಲವರು ಟೀಕಿಸಿದ್ದಾರೆ. ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಅಗತ್ಯ ಕ್ರಮ: ಡಾ.ಕೆ.ಸುಧಾಕರ್

    ನಮ್ಮ ವೀರ ಯೋಧರಿಗಾಗಿ ಉರಿಯುತ್ತಿದ್ದ ಅಮರ ಜ್ಯೋತಿ ಇಂದು ಆರಿರುವುದು ಅತೀವ ದುಃಖದ ಸಂಗತಿ ಎಂದು ರಾಗುಲ್ ಗಾಧಿ ಈ ಹಿಂದೆ ಟ್ವೀಟ್ ಮಡಿ ಬೇಸರ ವ್ಯಕ್ತಪಡಿಸಿದ್ದರು.

  • ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿ ಬಿಜೆಪಿಯನ್ನು ಧ್ವಂಸ ಮಾಡಬೇಕು: ಚೇತನ್

    ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿ ಬಿಜೆಪಿಯನ್ನು ಧ್ವಂಸ ಮಾಡಬೇಕು: ಚೇತನ್

    ಬೆಂಗಳೂರು: ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನನ್ನು ಬೇಕಾದರೂ ಮಾಡುತ್ತದೆ. ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‍ಎಸ್‍ಎಸ್ ಸ್ಥಾಪಿಸಿದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೆ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಂಕೆಯಲ್ಲಿ ‘ಪಿಪಿಪಿ’ ಸಾಂಗ್ ಗುಂಗು – ಭರ್ಜರಿ ಸ್ಟೆಪ್ಸ್ ಹಾಕಿದ ಯೋಗಿ, ಕೃಷಿ ತಾಪಂಡ

    ಈ ಮುನ್ನ ಸೆಪ್ಟೆಂಬರ್ 6ರಂದು ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಚಂದನವನದ ಹಿರಿಯ ನಿರ್ಮಾಪಕ ಸಿ.ಜಯರಾಮ್ ಇನ್ನಿಲ್ಲ

  • ವರನ ಮದ್ವೆ ವರ್ಷ 18ಕ್ಕೆ ಇಳಿಸಿ: ಅರ್ಜಿ ಹಾಕಿದ ವಕೀಲನಿಗೆ ದಂಡ

    ವರನ ಮದ್ವೆ ವರ್ಷ 18ಕ್ಕೆ ಇಳಿಸಿ: ಅರ್ಜಿ ಹಾಕಿದ ವಕೀಲನಿಗೆ ದಂಡ

    ನವದೆಹಲಿ: ಮದುವೆಯಾಗುವ ವರನ ವಯಸ್ಸಿನ ಮಿತಿಯನ್ನು ಇಳಿಸಿ ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ವಕೀಲ ಅಶೋಕ್ ಪಾಂಡೆ ಮದುವೆಯಾಗಲು ಈಗ ವಧುವಿಗೆ ಕನಿಷ್ಟ 18 ವರ್ಷ ನಿಗದಿಯಾಗಿದ್ದರೆ ವರನಿಗೆ 21 ವರ್ಷ ನಿಗದಿಯಾಗಿದೆ. ಇದು ಸಮಾನತೆಯ ಉಲ್ಲಂಘನೆ ಎಂದು ಹೇಳಿ ಅರ್ಜಿ ಸಲ್ಲಿಸಿದ್ದರು.

    ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೊಯ್ ಮತ್ತು ನ್ಯಾ. ಸಂಜಯ್ ಕಿಶನ್ ಕೌಲ್ ಅವರಿದ್ದ ದ್ವಿಸದಸ್ಯ ಪೀಠ ಈ ಅರ್ಜಿಯಲ್ಲಿ ಸಾರ್ವಜನಿಕಾ ಹಿತಾಸಕ್ತಿ ಉದ್ದೇಶ ಕಾಣುತ್ತಿಲ್ಲ. ಯಾರಾದರೂ ವಯಸ್ಸಿನ ಸಮಸ್ಯೆಯಿಂದ ತೊಂದರೆ ಅನುಭವಿಸಿದ್ದರೆ ಆಗ ಮಾತ್ರ ಪರಿಗಣಿಸಬಹುದು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು. ಅಷ್ಟೇ ಅಲ್ಲದೇ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನು ವಿಧಿಸಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv