Tag: ernakulam

  • ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

    ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

    ತಿರುವನಂತಪುರಂ: ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ (Kenya) ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ಹೃದಯಸ್ತಂಭನದಿಂದ (Cardiac Arrest) ಇಂದು ಮುಂಜಾನೆ ನಿಧನರಾಗಿದ್ದಾರೆ.

    80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ (Ayurvedic Treatment) ಕೇರಳದ ಎರ್ನಾಕುಲಂ (Ernakulam) ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

    ಸದ್ಯ ರೈಲಾ ಒಡಿಂಗಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಮೃತದೇಹ ಹಸ್ತಾಂತರ ಸೇರಿದಂತೆ ಮುಂದಿನ ಪ್ರಕ್ರಿಯೆಗಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ

    ರೈಲಾ ಒಡಿಂಗಾ ಕುಟುಂಬ ಇದಕ್ಕೂ ಮೊದಲು ಈ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಹಿಂದೆ ರೈಲಾ ಒಡಿಂಗಾ ಅವರ ಪುತ್ರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು. ಇದನ್ನೂ ಓದಿ: ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

  • ಹಾಸ್ಟೆಲ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

    ಹಾಸ್ಟೆಲ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

    ತಿರುವನಂತಪುರಂ: ಕೇರಳದ (Kerala) ಎರ್ನಾಕುಲಂ (Ernakulam) ಸರ್ಕಾರಿ ವೈದ್ಯಕೀಯ ಕಾಲೇಜಿನ (Medical College) ಹಾಸ್ಟೆಲ್ ರೂಮ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಮೃತ ಯುವತಿಯನ್ನು ಕಾಸರಗೋಡು (Kasaragod) ಮೂಲದ ಅಂಬಿಲಿ (25) ಎಂದು ಗುರುತಿಸಲಾಗಿದೆ. ಆಕೆ ಕಲಮಸ್ಸೇರಿಯಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಆಕೆಯ ಸ್ನೇಹಿತೆಯರು ಹಾಸ್ಟೆಲ್‌ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: Bengaluru | ಕುಟುಂಬ ಕಲಹದಿಂದ ಮಾನಸಿಕವಾಗಿ ನೊಂದು ಟೆಕ್ಕಿ ಆತ್ಮಹತ್ಯೆ

    ಇದು ಆತ್ಮಹತ್ಯೆಯಾಗಿರಬಹುದು ಪೊಲೀಸರು ಶಂಕಿಸಿದ್ದಾರೆ. ಆಕೆ ಮಾನಸಿಕ ತೊಂದರೆ ಮತ್ತು ಕಲಿಕಾ ನ್ಯೂನತೆ ಸಮಸ್ಯೆಗಳಿಂದ ಬಳಲುತ್ತಿದ್ದಳು. ಆದರೂ ಈ ಅಂಶಗಳು ದೃಢಪಟ್ಟಿಲ್ಲ. ಇನ್ನೂ ಕಳೆದ ಕೆಲವು ದಿನಗಳಿಂದ ಆಕೆ ಮೌನವಾಗಿರುತ್ತಿದ್ದಳು ಎಂದು ಆಕೆಯ ಸ್ನೇಹಿತೆಯರು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಮರಣೋತ್ತರ ಪರೀಕ್ಷೆಯ ನಂತರ ಯುವತಿಯ ಶವವನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಯುವತಿಯ ಸಾವಿನ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡಿವೋರ್ಸ್‌ ಬಳಿಕ ಪತ್ನಿಗೆ ಜೀವನಾಂಶ ಹೊಂದಿಸಲು ದರೋಡೆಗೆ ಯತ್ನ – ಮಾಜಿ ಪತಿ ಸೇರಿ ಮೂವರು ಅರೆಸ್ಟ್‌

  • ಕೇರಳದಲ್ಲಿ ಅಬಕಾರಿ ಅಧಿಕಾರಿ, ಕುಟುಂಬ ಶವವಾಗಿ ಪತ್ತೆ

    ಕೇರಳದಲ್ಲಿ ಅಬಕಾರಿ ಅಧಿಕಾರಿ, ಕುಟುಂಬ ಶವವಾಗಿ ಪತ್ತೆ

    ತಿರುವನಂತಪುರಂ: ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ (Kerala) ನಡೆದಿದೆ.

    ಮನೀಶ್ ವಿಜಯ್ ಮೃತ ಅಧಿಕಾರಿ. ಮೂಲತಃ ಜಾರ್ಖಂಡ್ (Jharkhand) ಮೂಲದ ಮನೀಶ್ ವಿಜಯ್ ಕುಟುಂಬ ಕೇರಳದ ಎರ್ನಾಕುಲಂ (Ernakulam) ಜಿಲ್ಲೆಯ ಕಕ್ಕನಾಡ್ ಕಸ್ಟಮ್ಸ್ ಕ್ವಾಟ್ರಸ್‌ನಲ್ಲಿ ವಾಸಿಸುತ್ತಿದ್ದರು. ಮನೀಶ್ ವೈಯಕ್ತಿಕ ಕಾರಣಕ್ಕೆ ನಾಲ್ಕು ದಿನಗಳ ರಜೆ ತೆಗೆದುಕೊಂಡಿದ್ದರು. ನಾಲ್ಕು ದಿನ ಕಳೆದ ಬಳಿಕವೂ ಕೆಲಸಕ್ಕೆ ಬಾರದ ಕಾರಣ ಮನೀಶ್ ಅವರ ಸಹೋದ್ಯಗಿಗಳು ಅವರ ಮನೆಗೆ ತೆರಳಿದ ಸಂದರ್ಭ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಸಹೋದ್ಯೋಗಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದು ಆತ್ಮಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ನೇಹಿತನಿಂದಲೇ ಗೆಳತಿ ಮೇಲೆ ಅತ್ಯಾಚಾರ

    ಮನೀಶ್ ಮತ್ತು ಅವರ ಸಹೋದರಿ ಶಾಲಿನಿ ಪ್ರತ್ಯೇಕ ಕೊಠಡಿಗಳಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ತಾಯಿ ಶಕುಂತಲಾ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ತಾಯಿಯನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಹೂವುಗಳಿಂದ ಮುಚ್ಚಲಾಗಿತ್ತು. ಈ ಹಿನ್ನೆಲೆ ತಾಯಿಯನ್ನು ಕೊಂದು ಮಕ್ಕಳಿಬ್ಬರು ನೇಣಿಗೆ ಶರಣಾಗಿರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ. ಇದನ್ನೂ ಓದಿ: ಬಸ್‌, ಮೆಟ್ರೋ ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ! – ತೆಂಗಿನ ಎಣ್ಣೆ ದರ ದಿಢೀರ್‌ ಏರಿಕೆಯಾಗಿದ್ದು ಯಾಕೆ?

    ಕೊಚ್ಚಿ ಪೊಲೀಸ್ ಆಯುಕ್ತ ಪುಟ್ಟ ವಿಮಲಾದಿತ್ಯ ಮಾತನಾಡಿ, ಮೃತದೇಹಗಳು ಕೊಳೆಯಲು ಪ್ರಾರಂಭಿಸಿವೆ. ವಿಧಿವಿಜ್ಞಾನ ಪರೀಕ್ಷೆಯ ನಂತರವೇ ಅವರು ಯಾವಾಗ ಸತ್ತರು ಎಂದು ಹೇಳಲು ಸಾಧ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: PUBLiC TV Impact; ಸರ್ಕಾರದ ಉಚಿತ ಪುಸ್ತಕಗಳು ಬೀದಿಪಾಲು – ಶಾಲಾ ಮುಖ್ಯೋಪಾಧ್ಯಾಯ ಅಮಾನತು

    ತನಿಖೆ ವೇಳೆ ಕೋಣೆಯಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ಅವರ ಸಹೋದರಿ ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ಸಾವಿನ ಬಗ್ಗೆ ಸಹೋದರಿಗೆ ತಿಳಿಸಬೇಕು ಎಂದು ಬರೆಯಲಾಗಿದೆ. ಸದ್ಯ ಮನೀಶ್ ಅವರ ಸಹೋದರಿ ವಿದೇಶದಿಂದ ಬಂದ ನಂತರ ಶವಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಘಟನೆ ಸಂಬಂಧ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಕಾಡ್ಗಿಚ್ಚು

    ಮನೀಶ್ ಈ ಹಿಂದೆ ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಪ್ರಿವೆಂಟಿವ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಒಂದೂವರೆ ವರ್ಷಗಳ ಹಿಂದೆ ಕೊಚ್ಚಿಗೆ ವರ್ಗಾವಣೆಗೊಂಡರು. ಅವರ ತಾಯಿ ಮತ್ತು ಸಹೋದರಿ ಕೆಲವು ತಿಂಗಳುಗಳಿಂದ ಅವರೊಂದಿಗೆ ನೆಲೆಸಿದ್ದರು. ಪೊಲೀಸರ ಪ್ರಕಾರ, ಶಾಲಿನಿ ಜಾರ್ಖಂಡ್‌ನಲ್ಲಿ ಕಾನೂನು ಪ್ರಕರಣವೊಂದನ್ನು ಎದುರಿಸುತ್ತಿದ್ದರು. ಇದಕ್ಕಾಗಿ ಮನೀಶ್ ಕೆಲಸದಿಂದ ರಜೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಬೌಂಡರಿ ಚಚ್ಚಿ ಆರ್‌ಸಿಬಿ ಗೆಲುವು ಕಸಿದ 16ರ ಹುಡುಗಿ – ಯಾರು ಈ ಕಮಲಿನಿ? ಮುಂಬೈ 1.6 ಕೋಟಿ ನೀಡಿದ್ದು ಯಾಕೆ?

    ಶಾಲಿನಿ 2006ರ ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (ಜೆಪಿಎಸ್‌ಸಿ) ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಈ ಹಿನ್ನೆಲೆ ಅವರನ್ನು ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಿಸಲಾಯಿತು ಎಂದು ವರದಿಗಳು ತಿಳಿಸಿವೆ. ನಂತರ ಅವರ ರ‍್ಯಾಂಕ್ ಅನ್ನು ಪ್ರಶ್ನಿಸಿ ರದ್ದುಗೊಳಿಸಲಾಯಿತು. ಇದರಿಂದ ಶಾಲಿನಿ ಅವರನ್ನು ಕೆಲಸದಿಂದ ವಜಾಗೊಳಿಸಲಾಯಿತು. 2024ರಲ್ಲಿ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸುವ ಸಲುವಾಗಿ ವಿಚಾರಣಾ ಪ್ರಕ್ರಿಯೆಗಳು ನಡೆಯುತ್ತಿದ್ದವು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಂಡ್ಯ| ಸರ್ಕಾರಿ ನೌಕರಿ ಕೊಡಿಸುತ್ತೇನೆಂದು ಕೋಟಿ ಕೋಟಿ ವಂಚನೆ

  • ಟೆಕ್ವಾಂಡೋ: ರಾಷ್ಟ್ರಮಟ್ಟಕ್ಕೆ ಕಾಸರಗೋಡಿನ ಗಣ್ಯ – ಕೇರಳದಲ್ಲಿ ಅಗ್ರʻಗಣ್ಯʼಚಿನ್ನದ ಪದಕ..!

    ಟೆಕ್ವಾಂಡೋ: ರಾಷ್ಟ್ರಮಟ್ಟಕ್ಕೆ ಕಾಸರಗೋಡಿನ ಗಣ್ಯ – ಕೇರಳದಲ್ಲಿ ಅಗ್ರʻಗಣ್ಯʼಚಿನ್ನದ ಪದಕ..!

    ಕಾಸರಗೋಡು: ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಟೆಕ್ವಾಂಡೋದಲ್ಲಿ ಚಿನ್ನದ ಪದಕ ಗೆದ್ದು, (Taekwondo) ಕನ್ನಡತಿ ಎನ್.‌ ಗಣ್ಯ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

    ಕಾಸರಗೋಡು (Kasaragod) ಜಿಲ್ಲೆಯ ಎಡನೀರು ಸ್ವಾಮೀಜಿಸ್‌ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಪ್ಲಸ್‌ ಒನ್‌ ವಿದ್ಯಾರ್ಥಿನಿಯಾಗಿರುವ ಗಣ್ಯ, 17 ವರ್ಷದೊಳಗಿನ ಬಾಲಕಿಯರ 50-65 ಕೆಜಿ ವಿಭಾಗದಲ್ಲಿ ಮಿಂಚಿದರು. ಗಣ್ಯ ಸಾಧನೆಯಿಂದಾಗಿ ಕಾಸರಗೋಡು ಜಿಲ್ಲೆ ಸೀನಿಯರ್‌ ಹಾಗೂ ಜೂನಿಯರ್‌ ಟೆಕ್ವಾಂಡೋ (Junior Taekwondo) ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಗೆದ್ದಿದೆ.

    ಆರ್‌ಎಸ್‌ಸಿ ಎರ್ನಾಕುಳಂನಲ್ಲಿ (Ernakulam) ನಡೆದ ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಗೆಲುವಿನೊಂದಿಗೆ ಗಣ್ಯ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಇದನ್ನೂ ಓದಿ: ಧೋನಿಯ ನಂ.7 ಜೆರ್ಸಿಗೆ ನಿವೃತ್ತಿ; ಶರ್ಟ್‌ ಆಯ್ಕೆ ಮಾಡದಂತೆ ಆಟಗಾರರಿಗೆ BCCI ಸೂಚನೆ

    ಪ್ಲಸ್‌ ಒನ್‌ ವಿಜ್ಞಾನ ವಿಭಾಗದಲ್ಲಿ (PCMB) ವಿದ್ಯಾಭ್ಯಾಸ ಮಾಡುತ್ತಿರುವ ಗಣ್ಯ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದು, ಯೋಗಾಭ್ಯಾಸದಲ್ಲೂ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಸರಗೋಡು ಯೋಧ ಟೆಕ್ವಾಂಡೋ ಅಕಾಡೆಮಿಯಲ್ಲಿ ಜಯನ್ ಪೊಯಿನಾಚಿ ಅವರಿಂದ ಗಣ್ಯ ತರಬೇತಿ ಪಡೆದಿದ್ದಾರೆ.

    ಖಾಸಗಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿರುವ ಬಿ.ನವೀನ್ ಕುಮಾರ್ ಮತ್ತು ಕಾಸರಗೋಡು ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಫ್ರಂಟ್ ಆಫೀಸ್ ಮ್ಯಾನೇಜರ್ ಆಗಿರುವ ರಾಜೇಶ್ವರಿ ದಂಪತಿಯ ಪುತ್ರಿ ಗಣ್ಯ. ಇವರ ಪುತ್ರ ಘನಶ್ಯಾಂ ಯೋಗಾಸನದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಎರಡು ಬಾರಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ಸೂರ್ಯ ಬೆಂಕಿ ಆಟ, ಕುಲ್ದೀಪ್‌ ಮಾರಕ ಬೌಲಿಂಗ್‌ಗೆ ಆಫ್ರಿಕಾ ಬರ್ನ್‌ – ಸರಣಿ 1-1 ರಲ್ಲಿ ಸಮ

    ಅ`ಗಣ್ಯʼ ಸಾಧನೆ..!: ಟ್ವೆಕಾಂಡೋ ಮಾತ್ರವಲ್ಲ ಗಣ್ಯಗೆ ಇತರೆ ಕ್ರೀಡೆಗಳಲ್ಲೂ ಆಸಕ್ತಿ ಇದೆ. ಗಣ್ಯಳ ಸಾಧನೆಯ ಕಿರುವಿವರ ಇಲ್ಲಿದೆ ನೋಡಿ.

    • 2022ರಲ್ಲಿ ಕಾಸರಗೋಡು ಜಿಲ್ಲೆಯ ಪಡನ್ನಕ್ಕಾಡ್‌ನಲ್ಲಿ ನಡೆದ 23ನೇ ಕಾಸರಗೋಡು ಜಿಲ್ಲಾ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ
    • 2018ರಲ್ಲಿ ಕಾಸರಗೋಡು ಜಿಲ್ಲಾ ಮಟ್ಟದ ಟ್ವೆಕಾಂಡೋ ಸಬ್‌ ಜೂನಿಯರ್‌ ಚಾಂಪಿಯನ್‌ಶಿಪ್‌ (38 ವರ್ಷದೊಳಗಿನ ವಿಭಾಗ) – ಕ್ಯೊರೂಗಿ (Sparring) – ಬೆಳ್ಳಿ ಪದಕ
    • 2019ರಲ್ಲಿ ಕಾಸರಗೋಡು ಜಿಲ್ಲಾಮಟ್ಟದ ಟ್ವೆಕಾಂಡೋ ಸಬ್‌ ಜೂನಿಯರ್‌ (48 ಕೆಜಿಯೊಳಗಿನ ವಿಭಾಗ) – ಚಿನ್ನದ ಪದಕ
    • 2018ರಲ್ಲಿ ಕರ್ನಾಟಕದ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಂತರ್‌ ಶಾಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ
    • 2019ರಲ್ಲಿ ಕರ್ನಾಟಕದ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಂತರ್‌ ಶಾಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ – ಕಂಚಿನ ಪದಕ
    • 2022-23ನೇ ಶೈಕ್ಷಣಿಕ ವರ್ಷದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
    • 2019-2020ನೇ ಶೈಕ್ಷಣಿಕ ವರ್ಷದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 800 ಮೀಟರ್‌ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ
    • 2022-23ನೇ ಸಾಲಿನ ಕಾಸರಗೋಡು ಜಿಲ್ಲಾ ಮಟ್ಟದ ಯೋಗ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನ.
    • 2018-19ರಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ರಾಜ್ಯಮಟ್ಟದ ಶಾಸ್ತ್ರಮೇಳದಲ್ಲಿ ನಂಬರ್‌ ಚಾರ್ಟ್‌ಗೆ ತೃತೀಯ ಸ್ಥಾನ.
    • 2019-20ರಲ್ಲಿ ಜಿಲ್ಲಾ ಮಟ್ಟದ ವೇದಿಕ್‌ ಮ್ಯಾಥ್ಸ್‌ ಪೇಪರ್‌ ಪ್ರೆಸೆಂಟೇಷನ್‌ – ಪ್ರಥಮ ಸ್ಥಾನ
    • ರಾಜ್ಯ ಮಟ್ಟದ ಗಣಿತ ಶಾಸ್ತ್ರ ಮೇಳದಲ್ಲಿ ಗಣಿತ ಪೇಪರ್‌ ಪ್ರೆಸೆಂಟೇಷನ್‌ – ಎ ಗ್ರೇಡ್‌
    • 2019-20ರಲ್ಲಿ ರಾಜ್ಯ ಮಟ್ಟದ ಶಾಲಾ ಕಲೋತ್ಸವದಲ್ಲಿ ಇಂಗ್ಲಿಷ್‌ ವಾಚನ – ಫಸ್ಟ್‌ ಎ ಗ್ರೇಡ್‌, ಹಿಂದಿ ವಾಚನದಲ್ಲಿ ಎ ಗ್ರೇಡ್.‌
  • ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು IED ಬ್ಲಾಸ್ಟ್: ದೃಢಪಡಿಸಿದ ಪೊಲೀಸರು

    ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು IED ಬ್ಲಾಸ್ಟ್: ದೃಢಪಡಿಸಿದ ಪೊಲೀಸರು

    ತಿರುವನಂತಪುರಂ: ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ (Kalamassery)  ನಡೆದಿರುವುದು ಐಇಡಿ ಬ್ಲಾಸ್ಟ್ (IED Blast) ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

    ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇರುವ ಶಂಕೆ ದಟ್ಟವಾಗಿದೆ. ಕೇರಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಕಲಮಶ್ಶೇರಿಗೆ ತೆರಳಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಎಡಿಜಿಪಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.

    ಶಂಕಿತರ ಸಾಮಾಜಿಕ ಜಾಲತಾಣಗಳ ಚಟುವಟಿಕೆ ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜೊತೆಗೆ ಈ ಸ್ಫೋಟ ಪೂರ್ವ ನಿಯೋಜಿತ ಕೃತ್ಯವೇ ಎಂಬುದನ್ನು ಖಚಿತಪಡಿಸಲು ರಾಜ್ಯ ಅಥವಾ ಕೇಂದ್ರ ಸಂಸ್ಥೆಗಳಿಗೆ ಯಾವುದೇ ವರದಿಗಳು ಬಂದಿಲ್ಲ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಇತ್ತ ಗಾಯಾಳುಗಳ ಆರೋಗ್ಯ ವಿಚಾರಿದ ಬಳಿಕ ಜಿಲ್ಲಾಧಿಕಾರಿ ಎನ್‍ಎಸ್‍ಕೆ ಉಮೇಶ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 10 ಜನರನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದೆ. ಅವರಲ್ಲಿ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು 8 ಜನರನ್ನು ವೈದ್ಯಕೀಯ ಕಾಲೇಜಿನ ಸಾಮಾನ್ಯ ವಾರ್ಡ್‍ನಲ್ಲಿ ದಾಖಲಿಸಲಾಗಿದ್ದು, ಉಳಿದ 18 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

    ಘಟನೆಯಲ್ಲಿ ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ಉಮೇಶ್ ಇದೇ ವೇಳೆ ತಿಳಿಸಿದರು.

     Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ತಿರುವನಂತಪುರಂ: ಕೇರಳದ ಕಲಮಶ್ಯೇರಿಯಲ್ಲಿ (Kalamassery, Kerala) ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

    ಈ ವೇಳೆ ಅಮಿತ್ ಶಾ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಸಮಾವೇಶ ಕೇಂದ್ರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಷ್ಟ್ರೀಯ ತನಿಖಾ ದಳ (NIA) ಮತ್ತು ರಾಷ್ಟ್ರೀಯ ಭದ್ರತಾ ಪಡೆ (NSG) ಸ್ಥಳಕ್ಕಾಗಮಿಸಿ ಘಟನೆಯ ಕುರಿತು ತನಿಖೆ ಆರಂಭಿಸುವಂತೆ ಸೂಚನೆ ನೀಡಿದರು.

    ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಶವಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 2,500 ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಪ್ರೇಯರ್ ಹಾಲ್ ನಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈಗಾಗಲೇ 36 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 10 ಮಂದಿಗೆ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

    ಘಟನೆ ನಡೆಯುತ್ತಿದ್ದಂತೆಯೇ ಬೆದರಿ ಜನ ದಿಕ್ಕಾಪಾಲಾಗಿ ಓಡಿ ಹೋದರು. ಸದ್ಯ 4 ಸದಸ್ಯರ ಎನ್‍ಐಎ ತಂಡವು ಸ್ಥಳೀಯ ಪೊಲೀಸರೊಂದಿಗೆ ಸ್ಥಳದಲ್ಲಿ ಬೀಡುಬಿಟ್ಟಿದೆ. ಪ್ರಾಥಮಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಎನ್‍ಐಎ, ಬಾಂಬ್ ಬ್ಲಾಸ್ಟ್ ಹಿಂದಿನ ಸೂತ್ರಧಾರಿಗಳು ಯಾರು ಅನ್ನೋದರ ಬಗ್ಗೆ ತನಿಖೆ ಆರಂಭಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಗ್ಗತ್ತಲ ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ – ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವು

    ಕಗ್ಗತ್ತಲ ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ – ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವು

    ತಿರುವನಂತಪುರಂ: ರಾತ್ರಿ ವೇಳೆ ಭಾರೀ ಮಳೆಯ ನಡುವೆ ಜಿಪಿಎಸ್ ಎಡವಟ್ಟಿನಿಂದ ಕಾರೊಂದು (Car) ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ (Kerala) ಎರ್ನಾಕುಲಂನಲ್ಲಿ (Ernakulam) ನಡೆದಿದೆ.

    ಮೃತರನ್ನು ಡಾ.ಅದ್ವೈತ್ (29) ಹಾಗೂ ಡಾ.ಅಜ್ಮಲ್ ಆಸಿಫ್ (29) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರ ಮೂವರು ಹೊರಬಂದು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಭಾನುವಾರ ರಾತ್ರಿ ಸುಮಾರು 11:30ರ ವೇಳೆಗೆ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವಿಮಾನದಲ್ಲಿ ಎಮರ್ಜೆನ್ಸಿ ಬಾಗಿಲು ತೆಗೆದ ಭೂಪ- ಬಂಧನ

    ಡಾ.ಅದ್ವೈತ್ ಅವರ ಹುಟ್ಟುಹಬ್ಬದ ಸಲುವಾಗಿ ಶಾಪಿಂಗ್‍ಗೆ ಕೊಚ್ಚಿಗೆ ಹೋಗಿದ್ದರು. ಶಾಪಿಂಗ್ ಮುಗಿಸಿ ಕೊಚ್ಚಿಯಿಂದ ಕೊಡುಂಗಲ್ಲೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಭಾರೀ ಮಳೆಯಾಗುತ್ತಿತ್ತು. ದಾರಿಯ ಪರಿಚಯ ಇರದ ಕಾರಣ ಜಿಪಿಎಸ್ ನೆರವು ಪಡೆದುಕೊಂಡಿದ್ದಾರೆ. ಈ ವೇಳೆ ನೀರು ತುಂಬಿದ ರಸ್ತೆಯಲ್ಲಿ ಕಾರು ಸಂಚರಿಸಿದೆ. ಈ ವೇಳೆ ದಾರಿಯನ್ನು ನೇರವಾಗಿಯೇ ಜಿಪಿಎಸ್ ಮ್ಯಾಪ್‍ನಲ್ಲಿ ತೋರಿಸಿದೆ. ಇದರಿಂದ ಅದೇ ಮಾರ್ಗದಲ್ಲಿ ಸಂಚರಿಸಿದ್ದಾರೆ. ಈ ವೇಳೆ ಕಾರು ನದಿಯಲ್ಲಿ ಮುಳುಗಿದೆ.

    ಬದುಕುಳಿದವರಲ್ಲಿ ಒಬ್ಬರಾದ ಡಾ.ಗಾಜಿಕ್ ತಬ್ಸೀರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ಮಾಹಿತಿ ಹಂಚಿಕೊಂಡಿದ್ದಾರೆ. ಅದರ ಹೊರತಾಗಿಯೂ ನಾನು ಚಾಲನೆ ಮಾಡದ ಕಾರಣ, ಇದು ಅಪ್ಲಿಕೇಶನ್‍ನ ತಾಂತ್ರಿಕ ದೋಷವೋ ಅಥವಾ ಮಾನವ ದೋಷವೋ ಎಂದು ನಾನು ಖಚಿತಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಗಭೂಷಣ್ ಕಾರು ಅಪಘಾತ: ಮದ್ಯಪಾನದ ರಿಪೋರ್ಟ್ ನೆಗೆಟಿವ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆಗೈದ ಪಾಪಿ

    5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆಗೈದ ಪಾಪಿ

    ತಿರುವನಂತಪುರಂ: 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ (Sexual Assault) ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಸಿ ಹೂತುಹಾಕಿದ ಘಟನೆ ಕೇರಳದ (Kerala) ಎರ್ನಾಕುಲಂ (Ernakulam) ಜಿಲ್ಲೆಯಲ್ಲಿ ನಡೆದಿದೆ.

    ದುಷ್ಕೃತ್ಯ ನಡೆಸಿದ ಆರೋಪಿಯನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದು, ಕುಡಿದ ಅಮಲಿನಲ್ಲಿದ್ದರಿಂದ ಆತನಿಂದ ಸಂಪೂರ್ಣ ಮಾಹಿತಿ ಪಡೆಯಲು ಕೆಲವು ಗಂಟೆಗಳೇ ಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಗ್ಯಾಂಗ್‍ಸ್ಟರ್ ಅತೀಕ್ ಅಹ್ಮದ್‍ನ ವಕೀಲ ಅರೆಸ್ಟ್

    ಬಿಹಾರ (Bihar) ಮೂಲದ ದಂಪತಿಯ 5 ವರ್ಷದ ಮಗಳು ಶುಕ್ರವಾರ ಸಂಜೆ ನಾಪತ್ತೆಯಾಗಿದ್ದು, ಆರೋಪಿ ಆಕೆಯನ್ನು ಕರೆದುಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯನ್ನು ಅಸ್ಫಾಕ್ ಅಸ್ಲಾಮ್ ಎಂದು ಗುರುತಿಸಲಾಗಿದ್ದು, ಸಿಸಿಟಿವಿಯಲ್ಲಿ ಆತ ಬಾಲಕಿಯನ್ನು ಕರೆದುಕೊಂಡು ಹೋಗುವ ದೃಶ್ಯ ಕಂಡುಬಂದಿದೆ. ಆದ್ದರಿಂದ ಆತನನ್ನು ಅದೇ ದಿನ ರಾತ್ರಿ 9:30ಕ್ಕೆ ವಶಕ್ಕೆ ಪಡೆದೆವು. ಮದ್ಯಪಾನ ಮಾಡಿದ್ದರಿಂದ ನಮ್ಮ ಪ್ರಶ್ನೆಗಳಿಗೆ ಉತ್ತರಿಸುವ ಸ್ಥಿತಿಯಲ್ಲಿ ಆತ ಇರಲಿಲ್ಲ ಎಂದು ಎರ್ನಾಕುಲಂ ಎಸ್ಪಿ ವಿವೇಕ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 125 ರೋಗಿಗಳ ಸ್ಥಳಾಂತರ

    ಶನಿವಾರ ಬೆಳಗ್ಗೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಬಾಲಕಿಯನ್ನು ಕೊಂದು ಹೂತುಹಾಕಿದ ಜಾಗವನ್ನು ತೋರಿಸಿದ್ದಾನೆ. ಆರೋಪಿ ಇತ್ತೀಚಿಗೆ ಬಾಲಕಿ ಮತ್ತು ಆಕೆಯ ಕುಟುಂಬ ವಾಸಿಸುತ್ತಿದ್ದ ಕಟ್ಟಡಕ್ಕೆ ತೆರಳಿದ್ದ. ಬಳಿಕ ಆಕೆಯನ್ನು ಅಲ್ಲಿಂದ ಬೇರೆಡೆಗೆ ಕರೆದೊಯ್ದು ಲೈಂಗಿಕ ತೃಷೆ ತೀರಿಸಿಕೊಂಡ ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಆಕೆಯ ಮೃತದೇಹ ಯಾರಿಗೂ ಕಾಣದ ರೀತಿಯಲ್ಲಿ ಮುಚ್ಚಲು ಕಸಗಳು ಮತ್ತು ಗೋಣಿ ಚೀಲಗಳನ್ನು ಬಳಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Instagram ಪ್ರಿಯಕರನನ್ನ ಭೇಟಿಯಾಗಲು ಪಾಕಿಸ್ತಾನಕ್ಕೆ ಹೊರಟಿದ್ದ ರಾಜಸ್ಥಾನದ 16ರ ಹುಡುಗಿ ಅರೆಸ್ಟ್‌

    ಬಾಲಕಿ ನಾಪತ್ತೆಯಾದ ಬಳಿಕ ಆಕೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ್ದ ವ್ಯಕ್ತಿಯೋರ್ವರು ಮಾರುಕಟ್ಟೆ ಪ್ರದೇಶದಲ್ಲಿ ಆರೋಪಿ ಜೊತೆ ಬಾಲಕಿ ಇರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಲ್ಲದೇ, ಮಗುವಿನ ಬಗ್ಗೆ ಆರೋಪಿ ಬಳಿ ವಿಚಾರಿಸಿದ್ದಾರೆ. ಈ ವೇಳೆ ಆರೋಪಿ ಈಕೆ ತನ್ನ ಮಗಳು ಎಂದು ತಿಳಿಸಿದ್ದಲ್ಲದೇ, ಮದ್ಯಪಾನ ಮಾಡುವ ಸಲುವಾಗಿ ಮಾರುಕಟ್ಟೆಯ ಹಿಂಬದಿಗೆ ಹೋಗಿದ್ದಾನೆ. ಅಲ್ಲದೇ ಬಾಲಕಿಯ ಕೈಯಲ್ಲಿ ಮಿಠಾಯಿ ಇತ್ತು ಎಂದು ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇಷ್ಟು ದಿನ ಎಲ್ಲಿಗೆ ಹೋಗಿದ್ದೆ? ಪತಿ ಎಂದು ಬೇರೊಬ್ಬನನ್ನು ಕರೆದೊಯ್ದ ಪತ್ನಿ!

    ಮಾಹಿತಿಯ ಆಧಾರದ ಮೇರೆಗೆ ಪೊಲೀಸರು ಮಾರುಕಟ್ಟೆಯ ಹಿಂಭಾಗದಲ್ಲಿ ಶೋಧಕಾರ್ಯವನ್ನು ನಡೆಸಿದ್ದಾರೆ. ಘಟನೆಯ ಬಳಿಕ ಬಾಲಕಿಯನ್ನು ಪೋಷಕರಿಗೆ ಜೀವಂತವಾಗಿ ಮರಳಿಸಲಾಗದ್ದರಿಂದ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪೋಷಕರಲ್ಲಿ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ಮನೆಗೆ ತೆರಳಿದ್ದ ಯೋಧನ ಕಿಡ್ನ್ಯಾಪ್ – ಸೇನೆಯಿಂದ ತೀವ್ರ ಹುಡುಕಾಟ

    ಶುಕ್ರವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದು, ಸಂಜೆ 5:30ರ ವೇಳೆಗೆ ಆಕೆಯ ನೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಲಾಗಿದೆ. ಮಗಳು ನಾಪತ್ತೆಯಾದ ಹಿನ್ನೆಲೆ ಪೋಷಕರು ರಾತ್ರಿ 7:30ರ ಸುಮಾರಿಗೆ ದೂರು ದಾಖಲಿಸಿದ್ದು, ಮಾಹಿತಿಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರ ರಕ್ಷಣೆ

    ಘಟನೆಯ ಬಳಿಕ ಬಾಲಕಿಯ ಮೃತದೇಹವನ್ನು ಆಕೆ ಓದುತ್ತಿದ್ದ ಶಾಲೆಯಲ್ಲಿ ಇರಿಸಲಾಗಿದ್ದು, ನೂರಾರು ಮಂದಿ ಅಂತಿಮ ನಮನ ಸಲ್ಲಿಸಿ ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿದರು. ಈ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು, ಇದು ಅತ್ಯಂತ ದುಃಖಕರ ಮತ್ತು ದುರಾದೃಷ್ಟಕರವಾದ ಸಂಗತಿಯಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.  ಇದನ್ನೂ ಓದಿ: ಪಟಾಕಿ ಗೋದಾಮಿನಲ್ಲಿ ಸ್ಫೋಟ – ಒಂದೇ ಕುಟುಂಬದ ನಾಲ್ವರು ಸೇರಿ 9 ಮಂದಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆಕ್ಸ್‌ಗೆ ಒಪ್ಪದ ಪತ್ನಿಯ ಶೀಲ ಶಂಕಿಸಿ ಕೈ-ಕಾಲು ಕಟ್ಟಿ ಕೊಲೆಗೈದ!

    ಸೆಕ್ಸ್‌ಗೆ ಒಪ್ಪದ ಪತ್ನಿಯ ಶೀಲ ಶಂಕಿಸಿ ಕೈ-ಕಾಲು ಕಟ್ಟಿ ಕೊಲೆಗೈದ!

    ತಿರುವನಂತಪುರಂ: ಸೆಕ್ಸ್ ಗೆ ಒಪ್ಪದ ಪತ್ನಿಯ ಮೇಲೆ ಅಕ್ರಮ ಸಂಬಂಧದ ಅನುಮಾನ ಬಂದು ಪತಿ (Husband Killed Wife) ಬರ್ಬರವಾಗಿ ಕೊಲೆಗೈದ ಘಟನೆ ಕೇರಳದ ಎರ್ನಾಕುಲಂನ ಪೆರಿಂತಲ್ಮನ್ನಾ ಎಂಬಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ರಫೀಕ್ (35) ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪತ್ನಿ ಫಾತಿಮಾ ಫಹ್ನಾ (30)ಳನ್ನು ಕೊಲೆ ಮಾಡಿದ್ದಾನೆ.

    ರಫೀಕ್ ಶನಿವಾರ ರಾತ್ರಿ ಪತ್ನಿಯನ್ನು ಬಟ್ಟೆಯಿಂದ ಮೂಗು-ಬಾಯಿ ಕಟ್ಟಿ ಸಾಯಿಸಿದ್ದಾನೆ. ನಾಲ್ಕೂವರೆ ವರ್ಷದ ಮಗು ಜೊತೆ ದಂಪತಿ ಮಲಗಿದ್ದ ಸಂದರ್ಭದಲ್ಲಿ ಪತಿ ಈ ಕೃತ್ಯ ಎಸಗಿದ್ದಾನೆ. ಪತ್ನಿ ಸೆಕ್ಸ್ ಗೆ ಒಪ್ಪದಿದ್ದರಿಂದ ಸಿಟ್ಟುಗೊಂಡ ಪತಿ ರಫೀಕ್ ಆಕೆಗೆ ಬೇರೊಬ್ಬನ ಜೊತೆ ಸಂಬಂಧ ಇರಬೇಕು ಎಂದು ಶಂಕಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೆಂಡತಿ ಇಬ್ಬರು ಮಕ್ಕಳನ್ನು ಕೊಲೆಗೈದು ವ್ಯಕ್ತಿ ನೇಣಿಗೆ ಶರಣು

    ಕೊಲೆ ಮಾಡಿದ್ದು ಹೇಗೆ..?: ಪತ್ನಿಯ ತಾಯಿ ಪಕ್ಕದ ರೂಮಿನಲ್ಲಿ ಮಲಗಿದ್ದರು. ಇತ್ತ ರಫೀಕ್ ಮೊದಲು ತನ್ನ ಪತ್ನಿಯ ಕೈ-ಕಾಲುಗಳನ್ನು ಕಿಟಕಿಗೆ ಕಟ್ಟಿದ್ದಾನೆ. ಇದನ್ನು ಗಮನಿಸಿದ ಫಾತಿಮಾ ತಾಯಿ ಜೋರಾಗಿ ಕಿರುಚಿಕೊಂಡು ಸಹಾಯಕ್ಕಾ ಅಕ್ಕ-ಪಕ್ಕದ ಮನೆಯವರನ್ನು ಕರೆದಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಆಕೆ ಬದುಕುಳಿಯಲಿಲ್ಲ.

    ಇತ್ತ ಪತ್ನಿ ಮೃತಪಟ್ಟ ಬೆನ್ನಲ್ಲೇ ಪತಿ ರಫೀಕ್, ಆಕೆಯ ಚಿನ್ನಾಭರಣಗಳೊಂದಿಗೆ ತಲೆಮರೆಸಿಕೊಂಡಿದ್ದಾನೆ. ನಂತರ ಆತನನ್ನು ಹುಡುಕಿ ಬಂಧಿಸಲಾಯಿತು.

     

  • ಪರೀಕ್ಷೆಗೆ ತೆರಳೋ ಮುನ್ನ ಮೊಟ್ಟೆ ಬೇಯಿಸಲು ಹೋಗಿ ಅಗ್ನಿ ಅವಘಡ- ವಿದ್ಯಾರ್ಥಿನಿ ಸಾವು

    ಪರೀಕ್ಷೆಗೆ ತೆರಳೋ ಮುನ್ನ ಮೊಟ್ಟೆ ಬೇಯಿಸಲು ಹೋಗಿ ಅಗ್ನಿ ಅವಘಡ- ವಿದ್ಯಾರ್ಥಿನಿ ಸಾವು

    ತಿರುವನಂತಪುರಂ: ವಿದ್ಯಾರ್ಥಿನಿಯೊಬ್ಬಳು ಪರೀಕ್ಷೇಗೆ ತೆರಳುವ ಮುನ್ನ ಮೊಟ್ಟೆ ಬೇಯಿಸಲು ಹೋಗಿ ಆಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಕೇರಳದ ಕೊಡುವಾಯೂರ್ ನಲ್ಲಿ ನಡೆದಿದೆ.

    ಮೃತ ದುರ್ದೈವಿ ವಿದ್ಯಾರ್ಥಿನಿಯನ್ನು ವರ್ಷ(17) ಎಂದು ಗುರುತಿಸಲಾಗಿದೆ. ಬೆಂಕಿ ಹೊತ್ತಿಕೊಂಡು ಸೆ.2ರಿಂದ ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದ ವರ್ಷ ಸೋಮವಾರ ಎರ್ನಾಕುಲಂನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

    ಕೇರಳ ಜಿಲ್ಲೆಯ ಪಾಲಕ್ಕಾಡ್ ಜಿಲ್ಲೆಯ ಕೊಡುವಾಯೂರ್ ಗ್ರಾಮದ ಕಣ್ಣನ್ ಹಾಗೂ ರತಿ ಎಂಬವರ ಪುತ್ರಿಯಾಗಿರುವ ವರ್ಷ, ಪಲ್ಲಸ್ಸನದ ವಿಐಎಂ ಸೆಕೆಂಡರಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಎಂದಿನಂತೆ ಪರೀಕ್ಷೆಗೆ ತೆರಳುವ ಮುನ್ನ ಈಕೆ ಮೊಟ್ಟೆ ಬೇಯಿಸಲು ತೆರಳಿದ್ದಾಳೆ. ಬೆಂಕಿ ಹೊತ್ತಿಸಲೆಂದು ಒಲೆಗೆ ಸೀಮೆ ಎಣ್ಣೆಯನ್ನ ಎರಚಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಈಕೆಯ ಮೈಮೇಲೆ ತಗುಲಿದೆ. ಇದನ್ನೂ ಓದಿ: ಮಳೆಗಾಗಿ ಹುಡುಗಿಯರ ಬೆತ್ತಲ ಮೆರವಣಿಗೆ

    ಮೈಮೇಲೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ನೋವಿನಿಂದ ವರ್ಷ  ಜೋರಾಗಿ ಕಿರುಚಿಕೊಂಡಿದ್ದಾಳೆ. ಇದನ್ನು ಕೇಳಿಸಿಕೊಂಡ ಆಕೆತ ತಂದೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅದಾಗಲೇ ವರ್ಷ ದೇಹ ಶೇ.65ರಷ್ಟು ಸುಟ್ಟು ಹೋಗಿತ್ತು. ಹೀಗಾಗಿ ಅಲ್ಲಿನ ವೈದ್ಯರು ತ್ರಿಶೂರ್ ನಲ್ಲಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ವರ್ಷ ಹೆಚ್ಚಿನ ಚಿಕಿತ್ಸೆಗಾಗಿ ತ್ರಿಶೂರ್ ಮೆಡಿಕಲ್ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಬೆಡ್ ಖಾಲಿಯಿಲ್ಲದ ಪರಿಣಾಮ ಅಲ್ಲಿಂದ ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಮೊಬೈಲ್ ನುಂಗಿ 4 ದಿನ ಹೊಟ್ಟೆಯಲ್ಲಿಟ್ಟುಕೊಂಡ

    ಚಿಕಿತ್ಸೆಗೆ ಒಟ್ಟು 5 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮುಂಗಡವಾಗಿ 2.5 ಲಕ್ಷ ಕಟ್ಟುವಂತೆ ಖಾಸಗಿ ಆಸ್ಪತ್ರೆಯವರು ವರ್ಷ ತಂದೆಗೆ ತಿಳಿಸಿದ್ದಾರೆ. ಬಡ ಆಟೋ ಡ್ರೈವರ್ ಆಗಿರುವ ವರ್ಷ ತಂದೆ ಕಣ್ಣನ್ ಅಷ್ಟೊಂದು ಹಣ ಕಟ್ಟಲಾಗದೆ ಎರ್ನಾಕುಲಂನ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ವರ್ಷ ಮೃತಪಟ್ಟಿದ್ದಾಳೆ. ಮೃತಳ ದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಮೃತ ವರ್ಷ ತಂದೆ, ತಾಯಿ ಹಾಗೂ ಸಹೋದರರಾದ ಜಿಷ್ಣು ಹಾಗೂ ವಿಷ್ಣುವನ್ನು ಅಗಲಿದ್ದಾಳೆ. ಇದನ್ನೂ ಓದಿ: ಒಟ್ಟಾಗಿ ಹೋಗೋಣವೆಂದು ಹೆಚ್‍ಡಿಕೆಗೆ ಹೇಳಿದ್ದೇನೆ: ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆ