Tag: escom

  • ರಾಜ್ಯದ ಜನರಿಗೆ ಕಾದಿದ್ಯಾ ಫ್ರೀ ಕರೆಂಟ್ ಶಾಕ್? – ಗ್ರಾಹಕರಿಂದಲೇ ಹಣ ವಸೂಲಿಗೆ ಎಸ್ಕಾಂ ಚಿಂತನೆ

    ರಾಜ್ಯದ ಜನರಿಗೆ ಕಾದಿದ್ಯಾ ಫ್ರೀ ಕರೆಂಟ್ ಶಾಕ್? – ಗ್ರಾಹಕರಿಂದಲೇ ಹಣ ವಸೂಲಿಗೆ ಎಸ್ಕಾಂ ಚಿಂತನೆ

    ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾರಣವಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳಿಂದಲೇ (Guarantee Scheme) ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕಿದಂತೆ ಕಾಣುತ್ತಿದೆ. ಪ್ರತಿ ವರ್ಷ ಸರ್ಕಾರದಿಂದ ಎಸ್ಕಾಂಗಳಿಗೆ (ESCOM) ಪಾವತಿಸಬೇಕಿದ್ದ ಹಣವನ್ನು ಜನರಿಂದಲೇ ಸಂಗ್ರಹಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ.

    ಹೌದು. ಪ್ರತಿ ವರ್ಷ ಸರ್ಕಾರ ಎಸ್ಕಾಂಗಳಿಗೆ 1,602 ಕೋಟಿ ರೂ. ಸಬ್ಸಿಡಿ ಸರ್ಕಾರ ಪಾವತಿಸಬೇಕು. ಆದ್ರೆ ಇದು ಪಾವತಿಯಾಗದೇ ಇರುವುದರಿಂದ ಜನರಿಂದಲೇ ವಸೂಲಿಗೆ ಚೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಆದರೆ ನಿರ್ದೇಶನ ಕೊಡದ ಹೊರತು ಹಣ ವಸೂಲಿ ಮಾಡದಂತೆ ಕೆಇಆರ್‌ಸಿ (KERC) ಸೂಚಿಸಿದೆ. ಒಂದು ವೇಳೆ ಕೆಇಆರ್‌ಸಿ ಏನಾದರೂ ಸೂಚನೆ ಕೊಟ್ಟರೆ 1.79 ಕೋಟಿ ಗೃಹಜ್ಯೋತಿ (Gruhajyothi) ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಲಿದೆ.

    ಜನರಿಂದಲೇ ಗೃಹಜ್ಯೋತಿ ಬಿಲ್ ವಸೂಲಿಗೆ ಅವಕಾಶ ಕೊಡುವಂತೆ ಕೋರಿ ಚೆಸ್ಕಾಂ ಕೆಇಆರ್‌ಸಿಗೆ ಪತ್ರ ಬರೆದಿದೆ. ಕೆಇಆರ್‌ಸಿ ಆಕ್ಟ್ ಅಡಿ ಅವಕಾಶ ಕೊಡುವಂತೆ ಪತ್ರ ಬರೆಯಲಾಗಿದೆ. 2008ರ ಕೆಇಆರ್‌ಸಿ ಆಕ್ಟ್ ಅನ್ನು ಚೆಸ್ಕಾಂ ಪತ್ರದಲ್ಲಿ ಉಲ್ಲೇಖಿಸಿದೆ. ಸರ್ಕಾರ ಸಬ್ಸಿಡಿ ಕೊಡದೇ ಹೋದಲ್ಲಿ ಜನರಿಂದ ಅದನ್ನ ಪಾವತಿ ಮಾಡಿಸಿಕೊಳ್ಳಬೇಕು. ಇದಕ್ಕೆ ಕೆಇಆರ್‌ಸಿ ಖುದ್ದು ಅನುಮತಿ ಕೊಡಬೇಕು, ವಸೂಲಿಗೆ ನಿರ್ದೇಶನ ಕೊಡಬೇಕು ಎಂದು ಪತ್ರದಲ್ಲಿ ಬರೆಯಲಾಗಿದೆ. ಆದರೆ ಕೆಇಆರ್‌ಸಿಯಿಂದ ವಿಚಾರಣೆ ಬಾಕಿ ಇದ್ದು, ಇನ್ನೂ ಅನುಮತಿ ಸಿಕ್ಕಿಲ್ಲ. ಕೆಇಆರ್‌ಸಿ ನಿರ್ದೇಶನ ಕೊಡದ ಹೊರತು ಜನರಿಂದ ಬಿಲ್ ಪಾವತಿ ಮಾಡಿಸಿಕೊಳ್ಳುವಂತಿಲ್ಲ.

    ಕೆಇಆರ್‌ಸಿ ಚೆಸ್ಕಾಂ ಪ್ರಸ್ತಾಪ ಒಪ್ಪಿದ್ರೆ ಏನಾಗುತ್ತೆ?
    * ಗೃಹಜ್ಯೋತಿ ಬಳಕೆದಾರರೇ ಮೊದಲು ಬಿಲ್ ಪಾವತಿಸಬೇಕಾಗುತ್ತದೆ.
    * ಸದ್ಯ 1.71ಕೋಟಿ ಅರ್ಹರು ಗೃಹಜ್ಯೋತಿಗೆ ನೋಂದಣಿ ಮಾಡಿಕೊಂಡಿದ್ದಾರೆ.
    * ಇದರಲ್ಲಿ 1.65 ಕೋಟಿ ಕುಟುಂಬಗಳಿಗೆ ಶೂನ್ಯ ಬಿಲ್ ಬರುತ್ತಿದೆ.
    * ಬೆಸ್ಕಾಂ ವ್ಯಾಪ್ತಿಯಲ್ಲೇ 70 ಲಕ್ಷ ಗೃಹಜ್ಯೋತಿ ಫಲಾನುಭವಿಗಳಿದ್ದಾರೆ.
    * ಕೆಇಆರ್‌ಸಿ ಚೆಸ್ಕಾಂ ಪ್ರಸ್ತಾಪಕ್ಕೆ ಅವಕಾಶ ಕೊಟ್ಟರೆ ಎಲ್ಲಾ ಎಸ್ಕಾಂಗಳಿಗೂ ಇದು ಅನ್ವಯ ಆಗಲಿದೆ.
    * ಈಗಾಗಲೇ ಸರ್ಕಾರ ಸಬ್ಸಿಡಿ ಹಣವನ್ನು ಮುಂಗಡವಾಗಿ ನೀಡುವ ಬದಲು ಎರಡು ತಿಂಗಳು ಬಾಕಿ ಉಳಿಸಿಕೊಳ್ಳುತ್ತಿದೆ.
    * 2008ರ ಕೆಇಆರ್‌ಸಿ ನಿಯಮಗಳ ಪ್ರಕಾರ ಪರಿಗಣಿಸಿದರೆ ಅವಕಾಶ ಕೊಡಬೇಕಾಗಬಹುದು.
    * ಆದರೆ ಇದೇ ತಿಂಗಳು 27ರಂದು ಕೆಇಆರ್‌ಸಿ ಅಂತಿಮ ಸಭೆ ಇದೆ.
    * ಆ ಸಭೆಯಲ್ಲಿ ಏನು ತೀರ್ಮಾನ ಮಾಡುತ್ತೆ ಎಂಬುದರ ಮೇಲೆ ಗೃಹಜ್ಯೋತಿ ಗ್ರಾಹಕರಿಗೆ ಶಾಕ್ ಸಿಗುತ್ತಾ? ರಿಲೀಫ್ ಸಿಗುತ್ತಾ ಎಂದು ಗೊತ್ತಾಗಲಿದೆ.

  • ನಾಳೆಯಿಂದ 3 ದಿನಗಳ ಕಾಲ ಎಸ್ಕಾಂ ಆನ್‌ಲೈನ್ ಸೇವೆ ಬಂದ್

    ನಾಳೆಯಿಂದ 3 ದಿನಗಳ ಕಾಲ ಎಸ್ಕಾಂ ಆನ್‌ಲೈನ್ ಸೇವೆ ಬಂದ್

    ಬೆಂಗಳೂರು: ಸಾಫ್ಟ್‌ವೇರ್, ಹಾರ್ಡ್‌ವೇರ್ ಅಪ್‌ಡೇಟ್ ಹಿನ್ನೆಲೆ ಶುಕ್ರವಾರದಿಂದ 3 ದಿನಗಳ ಕಾಲ ಎಸ್ಕಾಂ (ESCOM) ಆನ್‌ಲೈನ್ ಸೇವೆಗಳು ಬಂದ್ ಇರಲಿದೆ. ಈ ಹಿನ್ನೆಲೆ ಬೆಂಗಳೂರು (Bengaluru) ಸೇರಿದಂತೆ ಹಲವೆಡೆ ಆನ್‌ಲೈನ್ ಸೇವೆಗಳು ಸ್ಥಗಿತವಾಗಿರಲಿದೆ.

    ಶುಕ್ರವಾರ ನವೆಂಬರ್ 24 ರಿಂದ 26 ರವರೆಗೆ 98 ನಗರ ಹಾಗೂ ಪಟ್ಟಣಗಳಲ್ಲಿ ಸೇವೆಗಳು ಅಲಭ್ಯವಾಗಿರಲಿದೆ. ಸಾಫ್ಟ್‌ವೇರ್, ಹಾರ್ಡ್‌ವೇರ್ ಅಪ್‌ಡೇಟ್ ಹಿನ್ನೆಲೆ ಸೇವೆಗಳು ಬಂದ್ ಇರಲಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು ಸೇರಿದಂತೆ ಹಲವೆಡೆ ಆನ್‌ಲೈನ್ ಸೇವೆಗಳು ಸ್ಥಗಿತವಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕೃತ ಪ್ರಕಟಣೆ ನೀಡಿದೆ. ಇದನ್ನೂ ಓದಿ: ಅಸಮಾಧಾನಿತ ನಾಯಕ ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ

    ಯಾವೆಲ್ಲಾ ಸೇವೆ ಇರಲ್ಲ?
    * ಹೊಸ ವಿದ್ಯುತ್ ಸಂಪರ್ಕ ನೋಂದಣಿ
    * ಆನ್‌ಲೈನ್ ಹಣ ಪಾವತಿ
    * ಕೌಂಟರ್‌ಗಳಲ್ಲಿ ನಗದು ಪಾವತಿ ಇರಲ್ಲ ಇದನ್ನೂ ಓದಿ: ರಾಜಕಾರಣ ಯಾವ್ದೇ ಮನೆತನಕ್ಕೆ ಸಿಮೀತವಲ್ಲ – ವಿಜಯೇಂದ್ರ ಆಯ್ಕೆಗೆ ಸೋಮಣ್ಣ ಅಸಮಾಧಾನ

  • ಈ ಮೂರು ದಿನ ಕರೆಂಟ್ ಬಿಲ್ ಕಟ್ಟೋಕೆ ಆಗಲ್ಲ – ನವೆಂಬರ್ ಅಂತ್ಯಕ್ಕೆ ವಿದ್ಯುತ್ ದರ ಏರಿಕೆ ಸಾಧ್ಯತೆ?

    ಈ ಮೂರು ದಿನ ಕರೆಂಟ್ ಬಿಲ್ ಕಟ್ಟೋಕೆ ಆಗಲ್ಲ – ನವೆಂಬರ್ ಅಂತ್ಯಕ್ಕೆ ವಿದ್ಯುತ್ ದರ ಏರಿಕೆ ಸಾಧ್ಯತೆ?

    ಬೆಂಗಳೂರು: ನವೆಂಬರ್ ತಿಂಗಳ ಅಂತ್ಯದಲ್ಲಿ ಮೂರು ದಿನಗಳ ಕಾಲ ಕರೆಂಟ್ ಬಿಲ್ (Electricity Bill) ಕಟ್ಟಲು ಸಾಧ್ಯವಿಲ್ಲ. ಆನ್‌ಲೈನ್ ಮತ್ತು ಆಫ್‌ಲೈನ್ ಸೇವೆಗಳು ಕೂಡಾ ಸ್ಥಗಿತಗೊಳ್ಳಲಿದೆ ಎಂದು ಇಂಧನ ಇಲಾಖೆ ಪ್ರಧಾನ ವ್ಯವಸ್ಥಾಪಕ ಐಟಿ ವೆಂಕಟೇಶ್ (IT Venkatesh) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್ 24, 25 ಹಾಗೂ 26ರಂದು ವಿದ್ಯುತ್ ಬಿಲ್ ಪಾವತಿ ಸೇರಿದಂತೆ ಹೊಸ ಕನೆಕ್ಷನ್ ಪಡೆದುಕೊಳ್ಳಲು ದುಡ್ಡು ಪಾವತಿ ಹೀಗೆ ಯಾವ ಪ್ರಕ್ರಿಯೆಯೂ ನಡೆಯುವುದಿಲ್ಲ. ಹೊಸ ಹಾರ್ಡ್‌ವೇರ್ ಅಳವಡಿಕೆ ಮಾಡಿ ಐಟಿ ಸೇವೆಗಳನ್ನು ಉನ್ನತೀಕರಣಗೊಳಿಸುತ್ತಿರುವುದರಿಂದ ಸಾಫ್ಟ್ವೇರ್‌ನಲ್ಲಿ ಬದಲಾವಣೆ ಆಗಲಿದೆ. ಹೀಗಾಗಿ ಐದು ಎಸ್ಕಾಂಗಳ ಕರೆಂಟ್ ಬಿಲ್ ಕಟ್ಟಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಮಾಂಸಪ್ರಿಯರಿಗೆ ಗುಡ್‍ನ್ಯೂಸ್- KMF ಮಾದರಿಯಲ್ಲೇ ಮಾರಾಟಕ್ಕೆ ಪ್ಲಾನ್

    ಇನ್ನು ನವೆಂಬರ್ ಅಂತ್ಯಕ್ಕೆ ಬೆಸ್ಕಾಂ ಸೇರಿದಂತೆ ಎಸ್ಕಾಂಗಳಿಂದ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್‌ಸಿಗೆ ಮನವಿ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ದರ ಏರಿಕೆಗೆ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಲಿದೆ. ರಾಜ್ಯಾದ್ಯಂತ ಗೃಹಜ್ಯೋತಿ ಜಾರಿ ಬೆನ್ನಲ್ಲೇ ಈ ಬಾರಿ ಎಷ್ಟು ದರ ಏರಿಕೆಗೆ ಮನವಿ ಮಾಡಬೇಕು ಎನ್ನುವುದರ ಬಗ್ಗೆ ಆಯಾಯ ಎಸ್ಕಾಂಗಳ ಹಿರಿಯ ಅಧಿಕಾರಿಗಳು ಚರ್ಚೆ ನಡೆಸುತ್ತಾರೆ. ಸಾರ್ವಜನಿಕ ಅಹವಾಲು, ಆಕ್ಷೇಪಣೆ ಬಳಿಕ ದರ ಏರಿಕೆಯ ಬಗ್ಗೆ ಕೆಇಆರ್‌ಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಬೆಸ್ಕಾಂ ಅಧಿಕಾರಿ ನಾಗರಾಜ್ ಮಾಹಿತಿ ನೀಡಿದರು. ಇದನ್ನೂ ಓದಿ: ಬೆಂಗಳೂರಲ್ಲಿ ತಲೆ ಎತ್ತಲಿದೆ ಮತ್ತೊಂದು ಸಸ್ಯಕಾಶಿ – ಡಿಕೆಶಿಗೆ ಪ್ರಸ್ತಾವನೆ ಸಲ್ಲಿಕೆ

  • ಗೃಹಜ್ಯೋತಿಗಾಗಿ ಹಣ ಬಿಡುಗಡೆ – ಎಸ್ಕಾಂಗಳು ಕೇಳಿದ್ದು ಎಷ್ಟು? ಸಿಕ್ಕಿದ್ದು ಎಷ್ಟು?

    ಗೃಹಜ್ಯೋತಿಗಾಗಿ ಹಣ ಬಿಡುಗಡೆ – ಎಸ್ಕಾಂಗಳು ಕೇಳಿದ್ದು ಎಷ್ಟು? ಸಿಕ್ಕಿದ್ದು ಎಷ್ಟು?

    ಬೆಂಗಳೂರು: ಚುನಾವಣೆ ಸಮಯದಲ್ಲಿ ನೀಡಿದ್ದ ಗೃಹಜ್ಯೋತಿಗೆ (Gruha Jyothi) ಗ್ಯಾರಂಟಿಗೆ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ವಿದ್ಯುತ್ ಪೂರೈಕೆ ಸಂಸ್ಥೆಗಳಿಗೂ ಹಣ ಬಿಡುಗಡೆಯಾಗಿದೆ.

    ಗೃಹಜ್ಯೋತಿ ಯೋಜನೆ ಸಂಬಂಧ ಜುಲೈ ತಿಂಗಳಿನಲ್ಲಿ ಒಟ್ಟು 970.50 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಎಸ್ಕಾಂಗಳು (Escoms) ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಈ ಪೈಕಿ 476 ಕೋಟಿ ರೂ. ಮುಂಗಡ ಸಹಾಯಧನ ಬಿಡುಗಡೆಯಾಗಿದೆ. ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ಗಂಡ ಜೈಲಿಗೆ – ಮನನೊಂದು ಪತ್ನಿ ಆತ್ಮಹತ್ಯೆ; ಜೈಲಲ್ಲಿದ್ದ ಪತಿ ಹೃದಯಾಘಾತದಿಂದ ಸಾವು

     

    ಯಾವ ಎಸ್ಕಾಂ ಎಷ್ಟು ಕೋಟಿ ಕೇಳಿತ್ತು?
    ಬೆಸ್ಕಾಂ 478.95, ಮೆಸ್ಕಾಂ 108.06, ಹೆಸ್ಕಾಂ 167.35, ಜೆಸ್ಕಾಂ 108.50, ಚೆಸ್ಕಾಂ 104.63, ಹುಕ್ಕೇರಿ 3.02 ಕೋಟಿ ರೂ. ಸಹಾಯಧನ ಕೇಳಿತ್ತು.

    ಸರ್ಕಾರ ಎಷ್ಟು ಕೋಟಿ ಬಿಡುಗಡೆ ಮಾಡಿದೆ?
    ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿ ಆಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲ: ಕೆಜೆ ಜಾರ್ಜ್‌

    ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿ ಆಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲ: ಕೆಜೆ ಜಾರ್ಜ್‌

    ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ದರ (New Electricity Tariffs) ಜಾರಿ ಆಗಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ (KG George) ಹೇಳಿದ್ದಾರೆ.

    ವಿದ್ಯುತ್ ದರ ಏರಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಹೊಸ ವಿದ್ಯುತ್ ದರ ನಮ್ಮ ಕಾಲದಲ್ಲಿ ಜಾರಿ ಮಾಡಬೇಕಾಗಿದೆ. ದರ ತಡೆಯುವ ಕುರಿತು ಕೆಇಆರ್‌ಸಿಗೆ (KERC) ಮನವಿ ಮಾಡುವ ಮುನ್ನ ನಾವು ಅಧ್ಯಯನ ಮಾಡಬೇಕು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅಧ್ಯಯನ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ಉತ್ತರಿಸಿದರು. ಇದನ್ನೂ ಓದಿ: ಹೊಸ ಮನೆ, ಹೊಸ ಬಾಡಿಗೆ ಮನೆಗಳಿಗೂ ಫ್ರೀ ಕರೆಂಟ್ – ಕೆ.ಜೆ.ಜಾರ್ಜ್ ಸ್ಪಷ್ಟನೆ

    ದರ ಹೆಚ್ಚಳ ಮಾಡುವಂತೆ ಎಲ್ಲಾ ಎಸ್ಕಾಂ (ESCOM) ಮನವಿ ಮಾಡುತ್ತದೆ. ನಮ್ಮ ಅಧಿಕಾರಿಗಳೇ ಹೋಗಿ ಕೆಇಆರ್‌ಸಿ ಮುಂದೆ ಪ್ರಸ್ತಾಪ ಇಡುತ್ತಾರೆ. ಈ ಕಾರಣಕ್ಕೆ ಅಧ್ಯಯನ ನಡೆಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ ಎಂದರು.  ಇದನ್ನೂ ಓದಿ: KERC ದರ ಏರಿಸಿದ್ದಕ್ಕೆ ವಿದ್ಯುತ್‌ ಬಿಲ್‌ ಹೆಚ್ಚಾಗಿದೆ: ಬೆಸ್ಕಾಂ ಸ್ಪಷ್ಟನೆ

    ಸದ್ಯ ಮಳೆ ಕೊರತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಮಳೆ ಬರಲು ಇನ್ನೂ ಸಮಯ ಇದೆ. ಸದ್ಯ ಸೋಲಾರ್‌ ಮತ್ತು ಪವನ ಶಕ್ತಿಯಿದೆ. ಸದ್ಯಕ್ಕೆ ವಿದ್ಯುತ್ ಕೊರತೆ ಇಲ್ಲ. ಆಗಸ್ಟ್‌ವರೆಗೂ ಮಳೆ ಬರುವ ನಿರೀಕ್ಷೆ ಇದೆ. ದೇವರ ಮೇಲೆ ಭಾರ ಹಾಕಿದ್ದೇವೆ ಎಂದು ತಿಳಿಸಿದರು.

  • ಜನರಿಗೆ ಕರೆಂಟ್ ಶಾಕ್- ತಪ್ಪೊಪ್ಪಿಕೊಂಡ ಬೆಸ್ಕಾಂ

    ಜನರಿಗೆ ಕರೆಂಟ್ ಶಾಕ್- ತಪ್ಪೊಪ್ಪಿಕೊಂಡ ಬೆಸ್ಕಾಂ

    ಬೆಂಗಳೂರು: ರಾಜ್ಯದ ಜನರಿಗೆ ಉಚಿತ ಗ್ಯಾರಂಟಿಗಳಲ್ಲಿ ಒಂದಾಗಿರುವ ಉಚಿತ 200 ಯೂನಿಟ್ ಕರೆಂಟ್ ನೀಡುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿದ್ದು, ಫ್ರೀ ಆಫರ್ ಜೊತೆಗೆ 5 ಎಸ್ಕಾಂಗಳು (ESCOM) ಜನತೆಗೆ ಭರ್ಜರಿ ಕರೆಂಟ್ ಶಾಕ್ ಕೊಟ್ಟಿದೆ.

    ಈ ಬಾರಿಯ ವಿದ್ಯುತ್ ಬಿಲ್‌ಗಳು (Electricity Bill) ಕಳೆದ ಬಾರಿಗಿಂತ ದುಪ್ಪಟ್ಟಾಗಿದ್ದು, ಡಬಲ್ ಬಿಲ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಬೆಸ್ಕಾಂ (BESCOM) ಅಧಿಕಾರಿಗಳು ಡಬಲ್ ಬಿಲ್‌ನ ಅಸಲಿ ಸತ್ಯವನ್ನು ‘ಪಬ್ಲಿಕ್ ಟಿವಿ’ ಮುಂದೆ ಬಿಚ್ಚಿಟ್ಟಿದ್ದಾರೆ. ಸಾಫ್ಟ್‌ವೇರ್‌ ಸಮಸ್ಯೆಯಿಂದ ಬಿಲ್‌ಗಳು ತಪ್ಪಾಗಿ ಎಂಟ್ರಿ ಆಗಿದೆ. ಹೀಗಾಗಿ ದುಪ್ಪಟ್ಟು ಬಿಲ್ ಬಂದಿದೆ. ಜನರು ಸಬ್ ಡಿವಿಷನ್‌ಗಳಿಗೆ ಹೋಗಿ ಅನುಮಾನ ಇದ್ದರೆ ಸರಿ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ

    ಯಾವುದೇ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸದೆ ಎಡವಟ್ಟು ಮಾಡಿದ್ದರಿಂದ ಡಬಲ್ ಬಿಲ್ ನೋಡಿ ಜನರು ಕಂಗಾಲಾಗಿದ್ದಾರೆ. ತಾಂತ್ರಿಕ ದೋಷದಿಂದ ಹಿಗ್ಗಾಮುಗ್ಗ ಬಿಲ್ ಬಂದಿದೆ ಎಂದು ಬೆಸ್ಕಾಂ ಒಪ್ಪಿಕೊಂಡಿದೆ. ಒಂದು ವೇಳೆ ತಾಂತ್ರಿಕ ದೋಷವಿದ್ದರೆ ದುಡ್ಡು ಕಟ್ಟಿದರೆ ಮತ್ತೆ ದುಡ್ಡು ವಾಪಸ್ ಸಿಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಗೃಹಜ್ಯೋತಿ ಗೊಂದಲ ಬಗೆಹರಿದ್ರೂ ಶಾಕ್- 200 ಯುನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಡಬಲ್ ಬಿಲ್

  • ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ಎಸ್ಕಾಂಗಳ ನಿರ್ಧಾರ

    ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ಎಸ್ಕಾಂಗಳ ನಿರ್ಧಾರ

    ಬೆಂಗಳೂರು: ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಧಿಗೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ (Load Shedding) ಮಾಡದಿರಲು ಎಲ್ಲಾ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯುತ್ ವ್ಯವಹಾರ ಸಮಿತಿಯ ಅಧ್ಯಕ್ಷರು ಆಗಿರುವ ಬೆಸ್ಕಾಂ (Bescom)ನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಎಲ್ಲಾ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

    ಬೇಸಿಗೆಯಲ್ಲಿ ವಿದ್ಯುತ್ (Electricity) ಬೇಡಿಕೆ ಹೆಚ್ಚಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿವೆ. ಅಲ್ಲದೇ ರೈತರಿಗೂ ಕೂಡ ಹೆಚ್ಚಿನ ವಿದ್ಯುತ್ ಪೂರೈಸುವ ಜವಾಬ್ದಾರಿ ಎಸ್ಕಾಂಗಳ ಮೇಲಿದೆ. ಬೇಸಿಗೆಯಲ್ಲಿ ತಡೆರಹಿತ ವಿದ್ಯುತ್ ಪೂರೈಸಲು ರೈತ ಪ್ರತಿನಿಧಿಗಳು ಇತ್ತೀಚೆಗೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳ ಅವಧಿಗೆ ಬೇಕಾಗುವ ವಿದ್ಯುತ್ ಬೇಡಿಕೆ ಕುರಿತು ವೈಜ್ಞಾನಿಕವಾಗಿ ಅಧ್ಯಯನ ನಡೆಸಿರುವ ಎಲ್ಲಾ ಎಸ್ಕಾಂಗಳು ಅದಕ್ಕೆ ಬೇಕಾಗಿರುವ ವಿದ್ಯುತ್ ಖರೀದಿ ಮಾಡಿ ಗ್ರಾಹಕರಿಗೆ ಪೂರೈಸಲು ನಿರ್ಧರಿಸಿವೆ ಎಂದು ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ‌ (Mahantesh Bilagi) ತಿಳಿಸಿದ್ದಾರೆ.

    ಈ ಮೂರು ತಿಂಗಳ ಅವಧಿಯಲ್ಲಿ ವಿದ್ಯುತ್ ಬಳಕೆ ಹೆಚ್ಚಾಗಲಿದ್ದು, ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ಎಲ್ಲಾ ಎಸ್ಕಾಂಗಳು ನಿರ್ಧಾರ ಕೈಗೊಂಡಿವೆ. ಬೇಸಿಗೆ ಕಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕ್ರಮವಹಿಸಲು ಇಂಧನ ಇಲಾಖೆಯು ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳಿಗೆ ನಿರ್ದೇಶನ ನೀಡಿದೆ. ಬೇಸಿಗೆ ಕಾಲದಲ್ಲಿ ವಿದ್ಯುತ್ ಖರೀದಿಗೆ ಬೇಕಾಗುವ ಹಣಕಾಸಿನ ವ್ಯವಸ್ಥೆಯನ್ನು ಸಿದ್ಧತೆ ಮಾಡಿಕೊಳ್ಳು ಇಂಧನ ಇಲಾಖೆ ಎಲ್ಲಾ ಎಸ್ಕಾಂಗಳಿಗೆ ಈಗಾಗಲೇ ಸೂಚನೆ ನೀಡಿದೆ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

    ಬೇಸಿಗೆಯಲ್ಲಿ ಬೆಸ್ಕಾಂ ವಿದ್ಯುತ್ ಬೇಡಿಕೆ ವಿವರ: ಮಾರ್ಚ್ ತಿಂಗಳಿಂದ ಮೇ ವರೆಗೆ ವಿದ್ಯುತ್ ಬೇಡಿಕೆ ಮತ್ತು ಬಳಕೆಯನ್ನು ಬೆಸ್ಕಾಂ ಈಗಾಗಲೇ ಅಂದಾಜಿಸಿದ್ದು, ಮಾರ್ಚ್ ತಿಂಗಳಲ್ಲಿ ದಿನದ ಗರಿಷ್ಠ ಬೇಡಿಕೆ 7,600 ಮೆಗಾ ವ್ಯಾಟ್ ತಲುಪುವ ಸಾಧ್ಯತೆ ಇದೆ. ಕಳೆದ 12 ದಿನಗಳಿಂದ ಸರಾಸರಿ ದಿನದ ವಿದ್ಯುತ್ ಬೇಡಿಕೆ 7400 ಮೆಗಾ ವ್ಯಾಟ್ ದಾಖಲಾಗಿದೆ. ಮಾರ್ಚ್ ತಿಂಗಳಲ್ಲಿ ದಿನದ ವಿದ್ಯುತ್ ಸರಾಸರಿ 132 ಮಿಲಿಯನ್ ಯೂನಿಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅದೇ ರೀತಿ ಏಪ್ರಿಲ್ ತಿಂಗಳಲ್ಲಿ ದಿನ ವಿದ್ಯುತ್ ಬೇಡಿಕೆ 7650 ಮೆಗಾ ವ್ಯಾಟ್ ತಲುಪಲಿದ್ದು, ದಿನದ ವಿದ್ಯುತ್ ಬಳಕೆ ಸರಾಸರಿ 135 ಮಿಲಿಯನ್ ಯೂನಿಟ್ ಆಗಲಿದೆ.

    ಮೇ ತಿಂಗಳ ದಿನದ ವಿದ್ಯುತ್ ಬೇಡಿಕೆ 6800 ಮೆಗಾ ವ್ಯಾಟ್‍ಗೆ ಇಳಿಯಲಿದ್ದು, ದಿನದ ವಿದ್ಯುತ್ ಬಳಕೆ ಸರಾಸರಿ 124 ಮಿಲಿಯನ್ ಯೂನಿಟ್ ಆಗಲಿದೆ. ಇದನ್ನೂ ಓದಿ: ಗುರುವಾರ ರಾಜ್ಯಾದ್ಯಂತ 60 ಸಾವಿರ KPTCL ನೌಕರರಿಂದ ಮುಷ್ಕರ

     

  • ರಾಜ್ಯದ ಜನರಿಗೆ ಶುಲ್ಕದ ಬರೆ – ಅಕ್ಟೋಬರ್‌ನಿಂದ ವಿದ್ಯುತ್ ದರ ಏರಿಕೆ

    ರಾಜ್ಯದ ಜನರಿಗೆ ಶುಲ್ಕದ ಬರೆ – ಅಕ್ಟೋಬರ್‌ನಿಂದ ವಿದ್ಯುತ್ ದರ ಏರಿಕೆ

    ಬೆಂಗಳೂರು: ನವರಾತ್ರಿ (Navaratri) ಸಂಭ್ರಮದಲ್ಲಿರುವ ರಾಜ್ಯದ ಜನರಿಗೆ ಈಗ ಕರೆಂಟ್ ಶಾಕ್ ಬಿಸಿ ತಟ್ಟಿದೆ.

    ಇಂಧನ (Fuel) ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದ್ದು ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ. ಕಳೆದ ಏಪ್ರಿಲ್‍ನಲ್ಲಿ ಬೆಸ್ಕಾಂ (Bescom) ಸೇರಿದಂತೆ ಎಲ್ಲಾ ಎಸ್ಕಾಂನಲ್ಲಿ (Escom) ವಿದ್ಯುತ್ ದರ ಏರಿಕೆಯಾಗಿತ್ತು. ಈಗ ಅಕ್ಟೋಬರ್‌ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ. ಮುಂದಿನ ವರ್ಷ ಮಾರ್ಚ್‍ವರೆಗೆ ಈ ದರ ಇರಲಿದೆ. ಇದನ್ನೂ ಓದಿ: ಸೆ.26ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

    ಕಲ್ಲಿದ್ದಲಿನ ದರ ಏರಿಕೆಯಾದಾಗ ಈ ದರ ಏರಿಕೆ ಅನಿವಾರ್ಯ ಎನ್ನುವುದು ಬೆಸ್ಕಾಂ ಸ್ಪಷ್ಟನೆ. ಆದರೆ ಜನರಿಗೆ ಮಾತ್ರ ಗಾಯದ ಮೇಲೆ ಬರೆಎಳೆದಂತಾಗಿದೆ. ಇಂಧನ ಹೊಂದಾಣಿಕೆ ಶುಲ್ಕವನ್ನು (Tax) ಮೂರು ತಿಂಗಳಿಗೊಮ್ಮೆ ಕೆಇಆರ್‌ಸಿಗೆ (KERC) ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಕೂಡ ಮಾಡಿದೆ. ಆದರೆ ಸದ್ಯ ಆರು ತಿಂಗಳಿಗೆ ಅನ್ವಯವಾಗುವಂತೆ ದರ ಏರಿಕೆಯಾಗುತ್ತಿದೆ. ನವರಾತ್ರಿಯ (Navaratri) ಸಂದರ್ಭದಲ್ಲಿಯೇ ಕೆಇಆರ್‌ಸಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: ಉತ್ಸವ ಮೂರ್ತಿಯ ಗುಜ್ಜುಕೋಲನ್ನು ಮುಟ್ಟಿದ್ದಕ್ಕೆ ದಲಿತ ಕುಟುಂಬದ ಮೇಲೆ ದೌರ್ಜನ್ಯ – 8 ಮಂದಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಎಸ್ಕಾಂಗಳಿಗೆ ಮೋದಿ ಸರ್ಕಾರದಿಂದ ಶಾಕ್: ಲೋಡ್‍ಶೆಡ್ಡಿಂಗ್ ಮಾಡಿದರೆ ಬೀಳುತ್ತೆ ಭಾರೀ ದಂಡ!

    ಎಸ್ಕಾಂಗಳಿಗೆ ಮೋದಿ ಸರ್ಕಾರದಿಂದ ಶಾಕ್: ಲೋಡ್‍ಶೆಡ್ಡಿಂಗ್ ಮಾಡಿದರೆ ಬೀಳುತ್ತೆ ಭಾರೀ ದಂಡ!

    ಪಾಟ್ನಾ: ದೇಶಾದ್ಯಂತ ವಿದ್ಯುತ್ ವಿತರಿಸುವ ಸಂಸ್ಥೆಗಳು ಅಥವಾ ಎಸ್ಕಾಂಗಳು ಲೋಡ್ ಶೆಡ್ಡಿಂಗ್ ಮಾಡಿದರೆ ದಂಡ ಪಾವತಿ ಮಾಡಬೇಕು ಎಂದು ಇಂಧನ ಸಚಿವರಾದ ಆರ್ ಕೆ ಸಿಂಗ್‍ರವರು ಬಿಹಾರ್ ನ  ಪಾಟ್ನಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಕೇಂದ್ರ ಇಂಧನ ಸಚಿವರಾದ ಆರ್ ಕೆ ಸಿಂಗ್‍ರವರು ಮಂಗಳವಾರ ಕೇಂದ್ರ ಸರ್ಕಾರದ 4 ವರ್ಷಗಳ ಸಾಧನೆ ಕುರಿತು 7 ರಾಜ್ಯದ ರಾಜಧಾನಿಗಳ ಪತ್ರಕರ್ತರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಈ ವೇಳೆ ದೇಶಾದ್ಯಂತ ಇರುವ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳೇ ಲೋಡ್ ಶೆಡ್ಡಿಂಗ್ ಮಾಡಿದರೆ ಇದರಿಂದಾಗುವ ನಷ್ಟವನ್ನು ಖುದ್ದು ಸಂಸ್ಥೆಗಳೇ ಭರಿಸಬೇಕು ಎಂದು ತಿಳಿಸಿದ್ದಾರೆ.

    ದೇಶದಲ್ಲಿ ಶೇ.15ರಷ್ಟು ಆರ್ಥಿಕ ನಷ್ಟ ವಿದ್ಯುತ್ ಕಡಿತದಿಂದಾಗಿ ಸಂಭವಿಸುತ್ತಿದೆ. ಇದು ದೇಶದ ಬೆಳವಣಿಗೆಗೆ ಮಾರಕವಾಗಿದೆ. ವಿದ್ಯುತ್ ಕಡಿತದಿಂದಾಗಿ ಶೇ.15 ಹಾಗೂ ಅದಕ್ಕಿಂತ ಹೆಚ್ಚಿನ ನಷ್ಟ ಉಂಟಾದರೆ ಆ ನಷ್ಟವನ್ನು ವಿದ್ಯುತ್ ವಿತರಣಾ ಸಂಸ್ಥೆಗಳೇ ಪಾವತಿ ಮಾಡಬೇಕು ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರವು ಸಿದ್ದ ಪಡಿಸುತ್ತಿರುವ ನೂತನ ಇಂಧನ ನೀತಿಯಲ್ಲಿ ಈ ವಿಚಾರವನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದ್ದು. ಈ ಯೋಜನೆಗೆ ಸಾರ್ವಜನಿಕರಿಂದ ಮಾಹಿತಿ ಮತ್ತು ಸಲಹೆಗಳನ್ನು ಪಡೆದುಕೊಂಡು ಮುಂದಿನ ಹಣಕಾಸು ವರ್ಷದಲ್ಲಿ ಈ ನೂತನ ನೀತಿಯನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

     

    ದೇಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಕುರಿತು ಮಾತನಾಡಿದ ಅವರು ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಬಿಹಾರ ಹಾಗೂ ಇತರೆ ರಾಜ್ಯಗಳಲ್ಲಿ ಹೆಚ್ಚಿನ ರೈತರು ಡೀಸೆಲ್ ಪಂಪ್‍ಗಳನ್ನ ಬಳಸುತ್ತಿದ್ದಾರೆ. ಡೀಸೆಲ್‍ಗೆ ಪರ್ಯಾಯವಾಗಿ ಸೋಲಾರ್ ಪಂಪ್‍ಸೆಟ್‍ಗಳನ್ನು ಬಳಕೆ ಮಾಡಲು ರೈತರಿಗೆ ಕುಸುಮ್ ಯೋಜನೆಯನ್ನು ಜಾರಿಗೊಳಿಸಿದ್ದೇವೆಂದು ಮಾಹಿತಿ ನೀಡಿದ್ದಾರೆ. ರೈತರ ಅಗತ್ಯತೆಗೆ ತಕ್ಕಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳುತ್ತದೆ ಎಂದು ಈ ವೇಳೆ ತಿಳಿಸಿದ್ದಾರೆ.

  • ಯುಗಾದಿ ಬೆನ್ನಲ್ಲೆ ಕರೆಂಟ್ ಶಾಕ್- ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ

    ಯುಗಾದಿ ಬೆನ್ನಲ್ಲೆ ಕರೆಂಟ್ ಶಾಕ್- ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ

    ಬೆಂಗಳೂರು: ಯುಗಾದಿ ಹಬ್ಬದ ಬೆನ್ನಲ್ಲೇ ಸರ್ಕಾರದಿಂದ ಜನರಿಗೆ ಶಾಕ್ ಕಾದಿದೆ. ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಮಾರ್ಚ್ 31ಕ್ಕೆ ಕೆಇಆರ್‍ಸಿಯಿಂದ (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ)ದರ ಪ್ರಕಟವಾಗಲಿದ್ದು, ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಯಾಗಲಿದೆ.

    ಎಸ್ಕಾಂಗಳು ಕಳೆದ ಡಿಸೆಂಬರ್‍ನಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಲ್ಲಿ ಯೂನಿಟ್ ಗೆ 1.40ಪೈಸೆ ಹೆಚ್ಚಳ ಮಾಡುವಂತೆ ಮನವಿ ಸಲ್ಲಿಸಿತ್ತು.

    ದರ ಏರಿಕೆ ಅನಿವಾರ್ಯ: ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಫೆ. 20ರಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದರು. ಈ ಬಗ್ಗೆ 5 ವಿದ್ಯುತ್ ಸರಬರಾಜು ಕಂಪೆನಿಗಳಿಂದ ಪ್ರಸ್ತಾವನೆ ಬಂದಿದ್ದು, ಪ್ರತಿ ಯೂನಿಟ್‍ಗೆ 1 ರೂಪಾಯಿ 48 ಪೈಸೆ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ ಎಂದು ತಿಳಿಸಿದ್ದರು. ಕಳೆದ ವರ್ಷ ಮಾರ್ಚ್‍ನಲ್ಲಿ ವಿದ್ಯುತ್‍ದರ ಏರಿಕೆ ಮಾಡಲಾಗಿತ್ತು.

    ಕಳೆದ ಬಾರಿ ಎಷ್ಟು ಹೆಚ್ಚಳ ಮಾಡಲಾಗಿತ್ತು?: ನಗರದ ಗೃಹಬಳಕೆ ಗ್ರಾಹಕರಿಗೆ ಮೊದಲ 30 ಯೂನಿಟ್‍ಗೆ 30 ಪೈಸೆ, 31ರಿಂದ 100 ಯೂನಿಟ್‍ಗೆ 40 ಪೈಸೆ ಹೆಚ್ಚಿಸಲಾಗಿತ್ತು. 100 ಯೂನಿಟ್‍ಗೆ ಮೇಲ್ಪಟ್ಟ ಬಳಕೆಗೆ ಪ್ರತಿ ಹಂತದಲ್ಲಿ ತಲಾ 50 ಪೈಸೆ ಏರಿಸಲಾಗಿತ್ತು. ಗ್ರಾಮೀಣ ಗೃಹಬಳಕೆದಾರರಿಗೂ ಇಷ್ಟೇ ದರ ಹೆಚ್ಚಳವಾಗಿತ್ತು. ಎಲ್ಲ ಗ್ರಾಹಕರನ್ನು ಪರಿಗಣಿಸಿ ಲೆಕ್ಕ ಹಾಕಿದರೆ ಪ್ರತಿ ಯೂನಿಟ್ ವಿದ್ಯುತ್ ದರದಲ್ಲಿ 48 ಪೈಸೆಯಷ್ಟು ಏರಿಕೆ ಮಾಡಿದಂತಾಗಿತ್ತು. ಇದು ಕಳೆದ ಒಂದು ದಶಕದಲ್ಲಾದ ಅತ್ಯಧಿಕ ಪ್ರಮಾಣದ ದರ ಏರಿಕೆಯಾಗಿತ್ತು. ವಿದ್ಯುತ್ ಸರಬರಾಜು ಕಂಪೆನಿಗಳು (ಎಸ್ಕಾಂ) ಪ್ರತಿ ಯೂನಿಟ್‍ಗೆ 1.02 ರೂ. ಹೆಚ್ಚಳಕ್ಕೆ ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು.