Tag: eshwar khandre

  • ರಾಷ್ಟ್ರ, ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಪರಿವಾರದ ಬಗ್ಗೆ ಮೋದಿ ಹೇಳಿಕೆ ಖಂಡನೀಯ- ಈಶ್ವರ ಖಂಡ್ರೆ

    ರಾಷ್ಟ್ರ, ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಪರಿವಾರದ ಬಗ್ಗೆ ಮೋದಿ ಹೇಳಿಕೆ ಖಂಡನೀಯ- ಈಶ್ವರ ಖಂಡ್ರೆ

    ಬೆಂಗಳೂರು: ಯಾವ ಪರಿವಾರ ಈ ರಾಷ್ಟ್ರಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದೆಯೋ, ಆ ಮನೆತನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಖಂಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗಾಂಧಿ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಯಾವ ಪರಿವಾರ ಈ ದೇಶಕ್ಕಾಗಿ ರಕ್ತ, ಬಲಿದಾನ ಕೊಟ್ಟಿದೆ. ಹೀಗಾಗಿ ಆ ಪರಿವಾರದ ಬಗ್ಗೆ ಮೋದಿ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.


    ಗಾಂಧಿ ಪರಿವಾರ ಈ ರಾಷ್ಟ್ರಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದೆ. ಅವರು ಮನೆಯನ್ನು ಇಂದು ದೇಶಕ್ಕಾಗಿ ಹರಾಜು ಮಾಡಿಕೊಂಡಿದ್ದಾರೆ. ಅಂತಹ ಪರಿವಾರ, ನಾಯಕರ ಬಗ್ಗೆ ಇವತ್ತು ಒಬ್ಬ ಪ್ರಧಾನ ಮಂತ್ರಿಯಾಗಿ ಇಂತಹ ಹೇಳಿಕೆಗಳನ್ನು ಕೊಡುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಹೀಗಾಗಿ ಅವರ ಮಾತನ್ನು ಖಂಡಿಸುತ್ತೇನೆ ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.

    ಮೋದಿ ಹೇಳಿದ್ದೇನು?
    ಶನಿವಾರ ರಾತ್ರಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‍ನಲ್ಲಿ ಪ್ರಧಾನಿ ಜೊತೆಗಿನ ಸಂವಾದದ ವೇಳೆ ಡೆಹ್ರಾಡೂನ್‍ನ ವಿದ್ಯಾರ್ಥಿನಿಯೊಬ್ಬಳು ಡೈಲೆಕ್ಸಿಕ್ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳು ಅಂದರೆ ಓದು-ಬರಹದ ಕಲಿಕೆ ನಿಧಾನಗತಿಯಲ್ಲಿರುವ ಮಕ್ಕಳಿಗೆ ಸಹಾಯ ಮಾಡಲು ನಿರ್ಧರಿಸಿದ್ದೇವೆ. ತಾರೇ ಜಮೀನ್ ಪರ್ ಸಿನಿಮಾದಲ್ಲಿ ನೋಡಿದಂತೆ ಈ ಮಕ್ಕಳು ಅತ್ಯಂತ ಬುದ್ಧಿವಂತರು ಮತ್ತು ಸೃಜನಶೀಲರು ಆಗಿರುತ್ತಾರೆ ಎಂದು ಹೇಳಿದಳು.

    ಈ ವೇಳೆ ಮಧ್ಯಪ್ರವೇಶಿಸಿದ ಪ್ರಧಾನಿ ಮೋದಿ 40-50 ವರ್ಷದ ಮಕ್ಕಳಿಗೂ ಈ ಕಾರ್ಯಕ್ರಮ ಉಪಯೋಗ ಆಗುತ್ತಾ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾಲೆಳೆದರು. ಮೋದಿ ಅವರ ಈ ಉತ್ತರ ಕೇಳಿ ಅಲ್ಲಿ ಕುಳಿತ್ತಿದ್ದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿದರು. ಬಳಿಕ “ಆಗುತ್ತೆ ಸರ್” ಎಂದು ವಿದ್ಯಾರ್ಥಿನಿ ಮೋದಿ ಅವರಿಗೆ ಉತ್ತರಿಸಿದ್ದಳು. ವಿದ್ಯಾರ್ಥಿನಿಯಿಂದ ಈ ಉತ್ತರ ಬಂದ ಕೂಡಲೇ “ಅಂಥ ಮಕ್ಕಳ ತಾಯಂದಿರು ತುಂಬಾ ಖುಷಿ ಆಗಬಹುದು” ಎಂದು ಹೇಳಿದರು. ಮಕ್ಕಳ ಕಲಿಕೆಯ ಸಮಸ್ಯೆಯನ್ನೂ ರಾಜಕೀಯಕ್ಕಾಗಿ ತಮಾಷೆ ಮಾಡಿದ ಮೋದಿ ಎಷ್ಟು ಸರಿ ಎಂದು ಪ್ರಶ್ನಿಸಿ ನೆಟ್ಟಿಗರು ಈಗ ಪ್ರಧಾನಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ಯಾರು..? ಅಚಾನಕ್ಕಾಗಿ ಪ್ರಧಾನಿ ಆಗಿದ್ದಾರೆ- ಈಶ್ವರ್ ಖಂಡ್ರೆ ವ್ಯಂಗ್ಯ

    ಮೋದಿ ಯಾರು..? ಅಚಾನಕ್ಕಾಗಿ ಪ್ರಧಾನಿ ಆಗಿದ್ದಾರೆ- ಈಶ್ವರ್ ಖಂಡ್ರೆ ವ್ಯಂಗ್ಯ

    ಬೀದರ್: ಮೋದಿ ಯಾರು..? ಮೊನ್ನೆ ಮೊನ್ನೆ ತಾನೆ ಬಂದಿದ್ದಾರೆ. ಹೇಗೆ ಬಂದಿದ್ದಾರೋ ಹಾಗೇ ಎಲ್ಲವನ್ನೂ ಸುತ್ತಿಕೊಂಡ ಮನೆಗೆ ಹೋಗುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ.

    ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆ ಉದ್ದೇಶದಿಂದ ನಗರದಲ್ಲಿ ಇಂದು ರಾಜ್ಯ ಮಟ್ಟದ ಅಲ್ಪಸಂಖ್ಯಾತ ವಿಭಾಗದಿಂದ ಸಭೆ ಆಯೋಜಿಸಲಾಗಿತ್ತು. ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಈಶ್ವರ್ ಖಂಡ್ರೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಅಚಾನಕ್ಕಾಗಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಈ ಬಾರಿ ಅವರು ಆಯ್ಕೆಯಾಗುವ ಸಾಧ್ಯತೆಗಳೇ ಇಲ್ಲ ಎಂದರು.

    ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯ ಟೈಪಿಸ್ಟ್ ಬಳಿ ಲಕ್ಷಾಂತರ ಹಣ ಪತ್ತೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ತನಿಖೆ ನಡೆಯುತ್ತಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ಆದರೆ ಈ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ. ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುವುದು ಸರಿಯಲ್ಲ ಎಂದು ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ 20 ಶಾಸಕರು ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಈಶ್ವರ್ ಖಂಡ್ರೆ

    ಬಿಜೆಪಿ 20 ಶಾಸಕರು ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಈಶ್ವರ್ ಖಂಡ್ರೆ

    ಬೀದರ್: ಬಿಜೆಪಿಯ 20 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕೆಪಿಸಿಸಿ ಕಾರ್ಯಾದ್ಯಕ್ಷರಾದ ನಂತರ ಮೊದಲ ಬಾರಿಗೆ ಬೀದರ್ ಜಿಲ್ಲೆಗೆ ಆಗಮಿಸಿದ ವೇಳೆ ಈಶ್ವರ್ ಖಂಡ್ರೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕುರಿ ನೀಡಿ ಅದ್ಧೂರಿ ಸ್ವಾಗತ ನೀಡಲಾಯಿತು.

    ನಮ್ಮ ಯಾವ ಶಾಸಕರು ಕಾಂಗ್ರೆಸ್ ತೊರೆಯುದಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಭದ್ರವಾಗಿದ್ದು, ನಮ್ಮ ಶಾಸಕರು ಪಕ್ಷ ತೊರೆಯವ ಪ್ರಶ್ನೆಯೇ ಇಲ್ಲ. ಈಗಾಗಲೇ ಬಿಜೆಪಿ ಶಾಸಕರು ನಮ್ಮನ್ನು ಸಂಪರ್ಕಿಸುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

    ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಈಶ್ವರ್ ಖಂಡ್ರೆ ರಾಜ್ಯ ಪ್ರವಾಸದಲ್ಲಿದ್ದಾರೆ. ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ 2018ರ ಚುನಾವಣೆಯಲ್ಲಿ ಬಹುಮತ ಪಡೆಯುವಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಸರಿಯಾಗಿ ಮನೆ ಮನೆಗೆ ತಲುಪಿಸಲು ಆಗಲಿಲ್ಲ. ಹೀಗಾಗಿ ನಾವು ಸೋಲಬೇಕಾಯಿತು. ಪಕ್ಷವನ್ನು ಬೇರು ಮಟ್ಟದಿಂದ ಭದ್ರಗೊಳಿಸಲು ಪ್ರವಾಸ ಕೈಗೊಂಡಿದ್ದೇನೆ ಎಂದು ಈಶ್ವರ್ ಖಂಡ್ರೆ ಹೇಳಿದ್ದರು.

    ಈ ಮೊದಲು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಕೆಲ ಶಾಸಕರು ಮತ್ತು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಎಲ್ಲರೂ ಕಾಂಗ್ರೆಸ್ ಸೇರುವ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ಪಕ್ಷದ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದರು.

  • ಬೀದರ್ ನಲ್ಲಿ ಮತದಾರರನ್ನು ಸೆಳೆಯಲು ಗಡಿಯಾರ ಹಂಚಿಕೆ

    ಬೀದರ್ ನಲ್ಲಿ ಮತದಾರರನ್ನು ಸೆಳೆಯಲು ಗಡಿಯಾರ ಹಂಚಿಕೆ

    ಬೀದರ್: ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗಡಿಯಾರಗಳನ್ನ ಹಂಚುತ್ತಿರುವುದು ಬಯಲಿಗೆ ಬಂದಿದೆ.

    ಸರ್ಕಾರದ ದುಡ್ಡಿನಲ್ಲಿ ಭಾಲ್ಕಿ ಕ್ಷೇತ್ರದ ಮತದಾರ ಪ್ರಭುಗಳಿಗೆ ತಮ್ಮ ಭಾವಚಿತ್ರವಿರುವ ಗಡಿಯಾರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಂಚುತ್ತಿದ್ದಾರೆ. 200 ರಿಂದ 300 ರೂ. ಬೆಲೆ ಬಾಳುವ ಗಡಿಯಾರವನ್ನು ಸರ್ಕಾರದ ಹೆಸರಿನಲ್ಲಿ ಈಶ್ವರ ಖಂಡ್ರೆ ಹಂಚಿಕೆ ಮಾಡುತ್ತಿದ್ದಾರೆ.

    ನಿಟ್ಟೂರು, ಖಟಕ್ ಚಿಂಚೊಳಿ, ಮೇಕರ ಹಾಗೂ ಸಾಯಿಗಾಂವ ಗ್ರಾಮಗಳು ಸೇರಿದಂತೆ ಕ್ಷೇತ್ರದ ಮನೆ ಮನೆಗಳಿಗೆ ಸರ್ಕಾರದ ಗಡಿಯಾರಗಳನ್ನು ನೀಡುತ್ತಿದ್ದಾರೆ.

    ಮತದಾರರನ್ನು ಸೆಳೆಯಲು ಜಿಲ್ಲಾ ಉಸ್ತುವಾರಿ ಸಚಿವರು ಹಲವು ದಿನಗಳಿಂದ ಗಡಿಯಾರಗಳನ್ನು ಗಿಫ್ಟ್ ನೀಡುತ್ತಿದ್ದಾರೆ ಎಂಬ ಮಾತು ಕ್ಷೇತ್ರದಲ್ಲಿ ಜೋರಾಗಿ ಕೇಳಿ ಬರುತ್ತಿದೆ.