Tag: eshwar khandre

  • ಹೆಚ್‌ಎಂಟಿ ಡಿನೋಟಿಫಿಕೇಷನ್ ಪ್ರಕರಣ – IFS ಅಧಿಕಾರಿ ಅಮಾನತಿಗೆ ಈಶ್ವರ್ ಖಂಡ್ರೆ ಶಿಫಾರಸು

    ಹೆಚ್‌ಎಂಟಿ ಡಿನೋಟಿಫಿಕೇಷನ್ ಪ್ರಕರಣ – IFS ಅಧಿಕಾರಿ ಅಮಾನತಿಗೆ ಈಶ್ವರ್ ಖಂಡ್ರೆ ಶಿಫಾರಸು

    ಬೆಂಗಳೂರು: 14 ಸಾವಿರ ಕೋಟಿ ರೂ. ಗೂ ಹೆಚ್ಚು ಮೌಲ್ಯದ ಹೆಚ್‌ಎಂಟಿ (Hindustan Machine Tools) ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐಎಎಸ್, ಐಎಫ್‌ಎಸ್ ಮತ್ತು ಇಬ್ಬರು ಹಾಲಿ ಐಎಫ್‌ಎಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದರು.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್‌ಎಂಟಿ ವಶದಲ್ಲಿರುವ ಭೂಮಿ, ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಈ ಭೂಮಿ ಪರಭಾರೆ ಆಗಿದೆ. ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದರು. ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

    ಸಚಿವ ಸಂಪುಟದ ಅನುಮತಿ ಇಲ್ಲದೆ, ಹೆಚ್‌ಎಂಟಿ ಅರಣ್ಯ ಭೂಮಿ ಡಿನೋಟಿಫಿಕೇಷನ್‌ಗೆ ಐಎ ಹಾಕಿರುವ ಪ್ರಕರಣದಲ್ಲಿ ಅಧಿಕಾರಿಗಳಿಗೆ ನೋಟಿಸ್ ನೀಡಿ 7 ತಿಂಗಳಾದರೂ ಇನ್ನೂ ಏಕೆ ಕ್ರಮ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದರು. ಹೆಚ್‌ಎಂಟಿ ವಶದಲ್ಲಿರುವ ಅರಣ್ಯಭೂಮಿ 7 ಕೋಟಿ ಕನ್ನಡಿಗರ ಆಸ್ತಿ, ಇದನ್ನು ಕೆಲವೇ ಕೆಲವು ಅಧಿಕಾರಿಗಳು ಅಂದಿನ ಅರಣ್ಯ ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಪೂರ್ವಾನುಮತಿ ಪಡೆಯದೆ ಡಿನೋಟಿಫಿಕೇಷನ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ನಿವೃತ್ತ ಮತ್ತು ಇಬ್ಬರು ಹಾಲಿ ಸೇರಿ 4 ಅಧಿಕಾರಿಗಳಿಗೆ ನೋಟಿಸ್ ನೀಡಿದ್ದು, ಕ್ರಮಕ್ಕೆ ತಾವು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಎಲೆಕ್ಟ್ರಿಕ್‌ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – 4 ಸ್ಕೂಟರ್ ಬೆಂಕಿಗಾಹುತಿ

    ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆರ್. ಗೋಕುಲ್ ತಾವು ಬೇಲಿಕೇರಿ ಪ್ರಕರಣದಲ್ಲಿ ಆಡಳಿತ ಪಕ್ಷದ ಶಾಸಕರಿಗೆ ಶಿಕ್ಷೆ ಆಗುವಂತೆ ಮಾಡಿದ ಕಾರಣ ತಮ್ಮನ್ನು ಬಲಿ ಪಶು ಮಾಡಲಾಗುತ್ತಿದೆ ಎಂದು ತಿಳಿಸಿ, ರಕ್ಷಣೆ ಕೋರಿ ಸಿಬಿಐಗೆ ಪತ್ರ ಬರೆದಿದ್ದಾರೆ. ಸರ್ಕಾರ ಅಧಿಕಾರಿಗಳನ್ನು ಬಲಿಪಶು ಮಾಡುತ್ತಿದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಂಡ್ರೆ, ಇದು ಸರ್ಕಾರದ ವಿರುದ್ಧ ಮಾಡಿರುವ ಸಂಪೂರ್ಣ ಸುಳ್ಳು ಆರೋಪ ಎಂದರು. ಇದನ್ನೂ ಓದಿ: ‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್

    2024ರ ಸೆ. 24ರಂದು ತಾವು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಟಿಪ್ಪಣಿ ಕಳುಹಿಸಿ, ಸಚಿವ ಸಂಪುಟದ ಪೂರ್ವಾನುಮತಿ ಇಲ್ಲದೆ ಐಎ ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ಸೂಚನೆ ನೀಡಿದ 1 ತಿಂಗಳ ನಂತರ ಅ. 2024ರಲ್ಲಿ ಬೇಲಿಕೇರಿ ತೀರ್ಪು ಬಂದಿದೆ. ಆರ್.ಗೋಕುಲ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಸರ್ಕಾರದ ವಿರುದ್ಧ ಸಿಬಿಐಗೆ ಸುಳ್ಳು ಆರೋಪ ಮಾಡಿ ಪತ್ರ ಬರೆದಿದ್ದಾರೆ. ಇದು ಕೂಡ ಅಧಿಕಾರಿಯ ದುರ್ವರ್ತನೆ ಆಗುತ್ತದೆ ಅಥವಾ ಬೆದರಿಕೆಯ ತಂತ್ರ ಎಂದು ಭಾವಿಸಬಹುದಾಗಿದೆ ಎಂದು ಹೇಳಿದರು.

    ಹೆಚ್‌ಎಂಟಿ ಅರಣ್ಯ ಭೂಮಿ ಪ್ರದೇಶಕ್ಕೆ ತಾವೇ ಖುದ್ದು ಭೇಟಿ ನೀಡಿದ್ದು, ಅಲ್ಲಿ ಇಂದಿಗೂ 280 ಎಕ್ರೆಯಷ್ಟು ನೆಡುತೋಪು ಇದೆ. ಅದಾಗ್ಯೂ, ಸದರಿ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ಗೆ ಸುಳ್ಳು ಮಾಹಿತಿ ನೀಡಿ ಐಎ ಸಲ್ಲಿಸಲಾಗಿದೆ. ತಮ್ಮ ರಕ್ಷಣೆಗೆ ಸಿಬಿಐಗೆ ಪತ್ರ ಬರೆಯುವ ಅಧಿಕಾರಿ, ಹೆಚ್‌ಎಂಟಿ ಭೂಮಿಯಲ್ಲಿ ಅರಣ್ಯವಿದೆ. ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಐಎ ಸಲ್ಲಿಸಲು ಬರುವುದಿಲ್ಲ ಎಂದು ಸಿಎಂಗೆ ಏಕೆ ಪತ್ರ ಬರೆಯಲಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

    ಬೆಂಗಳೂರಿನಲ್ಲಿ ಇತರ ಸಂಸ್ಥೆಗಳ ವಶದಲ್ಲಿರುವ ಅರಣ್ಯಭೂಮಿ ಕುರಿತಂತೆ ಚರ್ಚಿಸಿ ಸರ್ಕಾರಕ್ಕೆ ಶಿಫಾರಸು ಮಾಡಲು 2015ರಲ್ಲೇ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಗಮನಕ್ಕೆ ಸಹ ತಾರದೆ, ಸಚಿವ ಸಂಪುಟದ ಅನುಮತಿ ಇಲ್ಲದೆ ಸುಪ್ರೀಂ ಕೋರ್ಟ್ನಲ್ಲಿ ಡಿನೋಟಿಫಿಕೇಷನ್ ಅನುಮತಿ ಕೋರಿ 2020ರ ಜೂನ್ 20ರಂದು ಅರ್ಜಿ ಸಲ್ಲಿಸಲಾಗಿದೆ. ಕೇವಲ 25 ದಿನಗಳ ಅಂತರದಲ್ಲಿ ಅಂದರೆ 2020 ಆ. 25ರಂದು ಉನ್ನತ ಮಟ್ಟದ ಸಭೆಯಲ್ಲಿ `1980ರ ಪೂರ್ವದಲ್ಲಿ ವಿವಿಧ/ಸರ್ಕಾರಿ ಸಂಸ್ಥೆಗಳಿಗೆ ಆದ ಪ್ರದೇಶಗಳ ಮಂಜೂರಾತಿಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು ಅಂತಹ ಅರಣ್ಯಪ್ರದೇಶಗಳ ಡಿನೋಟಿಫಿಕೇಶನ್‌ನ ಪ್ರಸ್ತಾವನೆಯನ್ನು ಕ್ಯಾಬಿನೆಟ್ ನಿರ್ಧಾರಕ್ಕಾಗಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆರವರಿಗೆ ಸೂಚಿಸಿದೆ’ ಎಂಬ ನಿರ್ಣಯ ಮಾಡಲಾಗಿದೆ. ಈ ಬಗ್ಗೆ ಘಟನೋತ್ತರ ಅನುಮತಿ ಪಡೆದಿಲ್ಲ. ಹೀಗಾಗಿ 4 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು ಎಂದರು. ಇದನ್ನೂ ಓದಿ: ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ

    ಈಗ ಗೋಕುಲ್ ಅವರನ್ನು ಅಮಾನತು ಮಾಡಿ ವಿಚಾರಣೆ ನಡೆಸಲು, ಮತ್ತೊಬ್ಬ ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹಾಗೂ ನಿವೃತ್ತಿ ಐಎಎಸ್ ಅಧಿಕಾರಿ ಮತ್ತು ಐಎಫ್‌ಎಸ್ ಅಧಿಕಾರಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಿಎಂಗೆ ಕಡತ ಸಲ್ಲಿಸಿರುವುದಾಗಿ ಹೇಳಿದರು.

    ಈ ವಿಷಯ ತಮ್ಮ ಗಮನಕ್ಕೆ ಬಂದ ಕೂಡಲೇ ಐಎ ಹಿಂಪಡೆಯಲು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಐಎ ಹಿಂಪಡೆಯಲು ಸಚಿವ ಸಂಪುಟದ ಅನುಮತಿಯನ್ನೂ ಪಡೆಯಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಡ್ಯ ಬಾಲಕಿ ಸಾವು ಕೇಸ್ | ಎಚ್ಚೆತ್ತ ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ

    ಬೃಹತ್ ಉದ್ಯಾನ ನಿರ್ಮಾಣ
    ಹೆಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಉತ್ತರ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಮುಂದಿನ ಪೀಳಿಗೆಗೆ ಶ್ವಾಸತಾಣ(ಲಂಗ್ಸ್ ಸ್ಪೇಸ್) ಉಳಿಸುವುದು ನಮ್ಮ ಗುರಿಯಾಗಿದೆ. ಈ ಅಂಶವನ್ನು ಐಎ ಹಿಂಪಡೆಯಲು ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕುವ ಪೂರ್ವದಲ್ಲೇ ತಾವು ಸ್ಪಷ್ಟಪಡಿಸಿರುವುದಾಗಿ ಹೇಳಿದರು.

  • ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ: ಈಶ್ವರ್ ಖಂಡ್ರೆ

    ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ: ಈಶ್ವರ್ ಖಂಡ್ರೆ

    ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ (Anil Kumble) ಇನ್ನು ಮುಂದೆ ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದರು.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರೋ ವಿಚಾರವನ್ನು ಸ್ಪಷ್ಟಪಡಿಸಿದರು. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆ ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರವನ್ನ ಕ್ಯಾಮೆರಾ ಮುಂದೆಯೇ ಮಾಡಲಾಯ್ತು ಆದ್ದರಿಂದ ಯಾರೂ ಪುರಾವೆ ಕೇಳಲ್ಲ: ವಿಪಕ್ಷಗಳಿಗೆ ತಿವಿದ ಮೋದಿ

    ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಅನಿಲ್ ಕುಂಬ್ಳೆ ಅವರಿಗೆ ಇದೆ. ಇವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಗೆ (Forest Department) ರಾಯಭಾರಿ ಆಗಲಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ಇದನ್ನೂ ಓದಿ: ಸಮಾಜದಲ್ಲಿ ಅಶಾಂತಿ, ಒಡಕು ಮೂಡಿಸೋದು ಬಿಜೆಪಿ ಉದ್ದೇಶ: ಶರಣಪ್ರಕಾಶ್ ಪಾಟೀಲ್

    ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ. ಆದಷ್ಟು ಬೇಗ ಸಿಎಂ ಮತ್ತು ಡಿಸಿಎಂ ಸಮ್ಮುಖದಲ್ಲಿ ಎಂಒಯು ಮಾಡಿಕೊಳ್ಳಲಾಗುವುದು ಅಂತ ತಿಳಿಸಿದರು.

  • ವನ್ಯಜೀವಿಗಳೊಂದಿಗೆ ಸೆಲ್ಫಿ ಬೇಡ – ಚೆಲ್ಲಾಟ ಆಡಿದ್ರೆ ಕಠಿಣ ಕ್ರಮ: ಈಶ್ವರ್ ಖಂಡ್ರೆ

    ವನ್ಯಜೀವಿಗಳೊಂದಿಗೆ ಸೆಲ್ಫಿ ಬೇಡ – ಚೆಲ್ಲಾಟ ಆಡಿದ್ರೆ ಕಠಿಣ ಕ್ರಮ: ಈಶ್ವರ್ ಖಂಡ್ರೆ

    ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ(Eshwar Khandre) ಎಚ್ಚರಿಕೆ ನೀಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ(Charmadi Ghat) ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಅರಣ್ಯ ಮಾರ್ಗದಲ್ಲಿ(Forest Path) ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ, ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ರನ್ಯಾರಾವ್‌ಗೆ ಪರಮೇಶ್ವರ್ ಶಿಕ್ಷಣ ಸಂಸ್ಥೆ ಸಾಲ ಕೊಟ್ಟಿರಬಹುದು: ರಾಮಲಿಂಗಾ ರೆಡ್ಡಿ

    ರಾಜ್ಯ ಸರ್ಕಾರ, ಅರಣ್ಯ ಇಲಾಖೆಯು(Forest Department) ಮಾನವ ಹಾಗೂ ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಶ್ರಮಿಸುತ್ತಿದೆ. ಸಾರ್ವಜನಿಕರು ಈ ರೀತಿ ಸೆಲ್ಫಿ ತೆಗೆದುಕೊಳ್ಳುವಾಗ, ಫೋಟೋ ತೆಗೆಯುವಾಗ ಅನಾಹುತ ಸಂಭವಿಸುವ ಅಪಾಯ ಇರುತ್ತದೆ. ಯಾರೂ ತಮ್ಮ ಅಮೂಲ್ಯ ಜೀವದೊಂದಿಗೆ ಚೆಲ್ಲಾಟ ಆಡಬಾರದು ಎಂದು ಮನವಿ ಮಾಡಿದ್ದಾರೆ.

  • PUBLiC TV Impact | ಜನಿವಾರ ಹಾಕಿದ್ದಕ್ಕೆ ಸಿಇಟಿಗೆ ನೋ ಎಂಟ್ರಿ – ಫ್ರೀ ಎಂಜಿನಿಯರಿಂಗ್ ಸೀಟ್ ಆಫರ್ ಕೊಟ್ಟ ಈಶ್ವರ್ ಖಂಡ್ರೆ

    PUBLiC TV Impact | ಜನಿವಾರ ಹಾಕಿದ್ದಕ್ಕೆ ಸಿಇಟಿಗೆ ನೋ ಎಂಟ್ರಿ – ಫ್ರೀ ಎಂಜಿನಿಯರಿಂಗ್ ಸೀಟ್ ಆಫರ್ ಕೊಟ್ಟ ಈಶ್ವರ್ ಖಂಡ್ರೆ

    ಬೀದರ್: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವಂಚಿತನಾದ ವಿದ್ಯಾರ್ಥಿಗೆ ಉಚಿತ ಎಂಜಿನಿಯರಿಂಗ್ ಸೀಟ್ (Engineering Seat) ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಭರವಸೆ ನೀಡಿದ್ದಾರೆ.

    ಏ,17ರಂದು ಜಿಲ್ಲೆಯ ಸುಚ್ಚಿವೃತ್ ಎಂಬ ವಿದ್ಯಾರ್ಥಿ ಸಿಇಟಿ ಪರೀಕ್ಷೆ ಬರೆಯಲು dಹೋಗಿದ್ದಾಗ ಜನಿವಾರ ತೆಗೆಯದಿದ್ದರೆ ಪರೀಕ್ಷೆ ಅವಕಾಶವಿಲ್ಲ ಎಂದು ಒರಟಾಗಿ ನಡೆದುಕೊಂಡಿದ್ದ ಘಟನೆ ನಡೆದಿತ್ತು. ಈ ಕುರಿತು `ಪಬ್ಲಿಕ್ ಟಿವಿ’ (PUBLiC TV) ನಿರಂತರವಾಗಿ ಸುದ್ದಿಯನ್ನು ಬಿತ್ತರಿಸಿತ್ತು. ಈಗಾಗಲೇ ವಿದ್ಯಾರ್ಥಿಯ ಜೊತೆ ದುರ್ವರ್ತನೆ ತೋರಿದ ಪ್ರಾಂಶುಪಾಲ ಮತ್ತು ಸಿಬ್ಬಂದಿಯನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.ಇದನ್ನೂ ಓದಿ: ಧಾರವಾಡದಲ್ಲಿಯೂ ಜನಿವಾರ ಜಟಾಪಟಿ – ಹುರಕಡ್ಲಿ ಕಾಲೇಜಿನಲ್ಲಿ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ

    ಸುದ್ದಿ ಬಿತ್ತರಿಸುವ ಮೂಲಕ ಸರ್ಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದ್ದು, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವಿದ್ಯಾರ್ಥಿಯ ನಿವಾಸಕ್ಕೆ ಭೇಟಿ ನೀಡಿ, ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟು ಕೊಡಿಸುವುದಾಗಿ ಆಫರ್ ನೀಡಿದ್ದಾರೆ. ಭವಿಷ್ಯದ ಬಗ್ಗೆ ಮಾನಸಿಕವಾಗಿ ನೊಂದಿದ್ದ ವಿದ್ಯಾರ್ಥಿ ಸುಚ್ಚಿವೃತ್ ಹಾಗೂ ಆತನ ಪೋಷಕರ ಮುಖದಲ್ಲಿ ಮಂದಹಾಸ ಮೂಡಿದೆ. ನಮಗೆ ನ್ಯಾಯಸಿಗುವಂತೆ ಮಾಡಿದ `ಪಬ್ಲಿಕ್ ಟಿವಿ’ ಹಾಗೂ ಹೆಚ್.ಆರ್ ರಂಗನಾಥ ಸರ್ ಅವರಿಗೆ ವಿದ್ಯಾರ್ಥಿ ಸೇರಿ ಪೋಷಕರು ಧನ್ಯವಾದಗಳನ್ನು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಏ,17ರಂದು ಬೀದರ್‌ನ ಸಾಯಿ ಸ್ಪೂರ್ತಿ ಕಾಲೇಜಿನಲ್ಲಿ ಸುಚ್ಚಿವೃತ್ ಎಂಬ ವಿದ್ಯಾರ್ಥಿ ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದಾಗ ಜನಿವಾರ ತೆಗೆಯದಿದ್ದರೆ ಪರೀಕ್ಷೆ ಅವಕಾಶವಿಲ್ಲ ಎಂದು ಒರಟಾಗಿ ನಡೆದುಕೊಂಡಿದ್ದ ಘಟನೆ ನಡೆದಿತ್ತು. ಸಿಬ್ಬಂದಿಗಳಿಗೆ ಇದೆಂಥಾ ನ್ಯಾಯ ಸರ್ ಎಂದಿದ್ದಕ್ಕೆ, ಒಳಗಡೆ ನೀನು ನೇಣು ಹಾಕಿಕೊಂಡರೆ ಏನು ಮಾಡೋದು? ಎಂದು ಉಡಾಫೆಯಾಗಿ ಮಾತನಾಡಿದ್ದರು. ಎರಡು ಎಕ್ಸಾಂಗೆ ಅವಕಾಶ ನೀಡಿ, ಗಣಿತ ಪರೀಕ್ಷೆಯಲ್ಲಿ ಮಾತ್ರ ಜನಿವಾರ ತೆಗೆದು ಒಳಗಡೆ ಬಾ ಎಂದಿದ್ದು ಅನ್ಯಾಯ ಎಂದು ವಿದ್ಯಾರ್ಥಿ ಅಳಲು ತೋಡಿಕೊಂಡಿದ್ದ, ನಾನು ತೆಗೆಯೋದಕ್ಕೆ ಆಗಲ್ಲ ಅಂದಿದ್ದಕ್ಕೆ, ಹಾಗಾದ್ರೆ ನಾವು ಒಳಗೆ ಬಿಡಲ್ಲ ಎಂದಿದ್ದರು. ನೀನು ಒಳಗಡೆ ಹೋಗಿ ಸೂಸೈಡ್ ಮಾಡಿಕೊಂಡರೆ ಹೇಗೆ? ಎಂದು ವಾಪಸ್ ಕಳಿಸಿದ್ದರು.ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಕ್ಕೆ ಟಿಟಿ ಡಿಕ್ಕಿ; ಹೈಮಾಸ್ಟ್ ದೀಪದ ಬೃಹತ್ ಕಂಬಕ್ಕೆ ಕಾರು ಡಿಕ್ಕಿ

  • ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಹಿಂಪಡೆಯಲು ನಿಯಮ ರೂಪಿಸಿ: ಈಶ್ವರ ಖಂಡ್ರೆ

    ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಹಿಂಪಡೆಯಲು ನಿಯಮ ರೂಪಿಸಿ: ಈಶ್ವರ ಖಂಡ್ರೆ

    ಬೆಂಗಳೂರು: ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು (Plastic Water Bottles) ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwar Khandre), ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದಾರೆ.

    ತತ್ಸಂಬಂಧ ನಿಯಮ ರೂಪಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಐಪಿಎಲ್‌ 10 ಸೆಕೆಂಡ್‌ ಜಾಹೀರಾತಿಗೆ ಲಕ್ಷ ಲಕ್ಷ – 4,500 ಕೋಟಿ ಆದಾಯ ನಿರೀಕ್ಷೆಯಲ್ಲಿ ಜಿಯೋಸ್ಟಾರ್‌

    ಮಣ್ಣಲ್ಲಿ ಮಣ್ಣಾಗದ, ನೀರಿನಲ್ಲಿ ಕರಗದ, ಸುಟ್ಟರೆ ಪ್ರಾಣವಾಯುವಿಗೆ ವಿಷಕಾರಿ ಅಂಶಗಳನ್ನು ಸೇರ್ಪಡೆ ಮಾಡುವ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಅಷ್ಟೇ ಅಲ್ಲದೆ ಜನ, ಜಾನುವಾರಗಳ ಆರೋಗ್ಯಕ್ಕೂ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ದಿಷ್ಟ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ದಾಸ್ತಾನು, ಮಾರಾಟ, ಬಳಕೆಯನ್ನು ನಿಷೇಧಿಸಿದ್ದು, ರಾಜ್ಯ ಸರ್ಕಾರ ಕೂಡ ಈ ಸಂಬಂಧ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಪರಿಸರಕ್ಕೆ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Karnataka Bandh| ಮೈಸೂರಲ್ಲಿ ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

    ಮೊದಲಿಗೆ ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದು ಪರಿಸರ ಹಾಳು ಮಾಡುತ್ತಿರುವ, ಖನಿಜಯುಕ್ತ ನೀರಿನ ಬಾಟಲಿಗೆ (Mineral Water Bottles) ಕಡಿವಾಣ ಹಾಕಬೇಕಾಗಿದೆ. ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ/ಅಷ್ಟು ದರ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಉತ್ಪಾದಕರ ವಿಸ್ತರಿತ ಜವಾಬ್ದಾರಿಯಂತೆ ಯಾವುದೇ ಉತ್ಪನ್ನವನ್ನು ತಯಾರಿಸುವವರು, ತಮ್ಮ ಉತ್ಪನ್ನಗಳಿಂದ ಪರಿಸರ ಮೇಲಾಗುವ ಪರಿಣಾಮಗಳನ್ನು ಉತ್ಪನ್ನವು ಗ್ರಾಹಕರ ಕೈಸೇರಿದ ನಂತರವೂ ನಿರ್ವಹಿಸುವ ಜವಾಬ್ದಾರಿ ಹೊಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಮರು ಖರೀದಿ ಮಾಡಿ ವಿಲೇವಾರಿ ಮಾಡಿದಲ್ಲಿ ಬೃಹತ್ ಪ್ರಮಾಣದಲ್ಲಿ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಿಸಬಹುದು ಎಂಬುದು ಈಶ್ವರ ಖಂಡ್ರೆ ಅವರ ಅಭಿಮತವಾಗಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ಎಫೆಕ್ಟ್ – ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ

  • ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಾಟ ನಿಷೇಧ

    ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಾಟ ನಿಷೇಧ

    – ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ

    ಬೆಂಗಳೂರು: ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ ಹಾಗೂ ಸೋಪುಗಳ (Shampoo And Soap) ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ (Forest and Environment Department) ಆದೇಶ ಹೊರಡಿಸಿದೆ.

    ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದ್ದು, ಸ್ನಾನ ಮಾಡಿದ ನಂತರ ಭಕ್ತಾದಿಗಳು ಅರ್ಧಂಬರ್ಧ ಖಾಲಿಯಾದ ಸೋಪುಗಳನ್ನು ಕವರ್‌ಗಳಲ್ಲಿ ಹಾಕಿ ನದಿಯಲ್ಲೇ ಬಿಡುತ್ತಿದ್ದರು. ಇದರಿಂದ ನದಿ ನೀರಿನಲ್ಲಿ ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಈ ಕ್ರಮ ಕೈಗೊಂಡಿದೆ. ಇದನ್ನೂ ಓದಿ: Bengaluru| ಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ 70 ಲಕ್ಷ ವಂಚನೆ – ಆರೋಪಿ ಅರೆಸ್ಟ್

    ನದಿ ದಡಗಳಲ್ಲಿ (River Bank) ಸೋಪು ಹಾಗೂ ಶಾಂಪೂ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 7ನೇ ತರಗತಿ ವಿದ್ಯಾರ್ಥಿನಿಗೆ ಬಾಲ್ಯವಿವಾಹ – ಬರಲ್ಲ ಅಂತ ಕಿರುಚಾಡಿದ್ರೂ ಹೊತ್ತೊಯ್ದ ಪಾಪಿಗಳು

  • ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ – ಈಶ್ವರ ಖಂಡ್ರೆ

    ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ – ಈಶ್ವರ ಖಂಡ್ರೆ

    -ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆ ಸಾಬೀತುಪಡಿಸಿದ ಬಜೆಟ್

    ಬೀದರ್: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಈ ಸಾಲಿನ ಬಜೆಟ್‌ನಲ್ಲಿ 5 ಸಾವಿರ ಕೋಟಿ ರೂ. ಯೋಜನೆ ರೂಪಿಸಲು ಅವಕಾಶ ನೀಡಲಾಗಿದ್ದು, ಇದು ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ಸಾಬೀತು ಪಡೆಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಶ್ಲಾಘಿಸಿದ್ದಾರೆ.ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಮಿಸ್ ಆಗಿದ್ದು ಏನು..?

    ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,367 ಶಿಕ್ಷಕರ ಹುದ್ದೆಗಳ ಭರ್ತಿಯೂ ಶಿಕ್ಷಕರ ಕೊರತೆಯನ್ನು ನಿವಾರಿಸಲಿದೆ. ತೊಗರಿ ಬೆಳೆಗೆ 450 ರೂ. ಪ್ರೋತ್ಸಾಹ ಧನ ಹೆಚ್ಚಿಸಿದ್ದು, ನಮ್ಮ ಭಾಗದ ರೈತರ ಪಾಲಿಗೆ ಆಶಾಕಿರಣವಾಗಿದೆ ಎಂದರು.

    ಕಲ್ಯಾಣ ಕರ್ನಾಟಕವು ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ, ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕ ವೃದ್ಧಿಸುವ ಉದ್ದೇಶವನ್ನು ಹೊಂದಿದೆ. ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆ ಬಲಪಡಿಸುವ ಮತ್ತು ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ ಆರಂಭಿಸುತ್ತಿರುವ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದರು.ಇದನ್ನೂ ಓದಿ: ಫ್ಯಾನ್ಸ್ ಜೊತೆ ಬರ್ತ್‌ಡೇ ಆಚರಿಸಿದ ರಾಧಿಕಾ ಪಂಡಿತ್

     

  • ಮಾ.2 ರಿಂದ 4ರವರೆಗೆ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ: ಈಶ್ವರ್ ಖಂಡ್ರೆ

    ಮಾ.2 ರಿಂದ 4ರವರೆಗೆ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ: ಈಶ್ವರ್ ಖಂಡ್ರೆ

    ಬೀದರ್: ಜಿಲ್ಲೆಯಲ್ಲಿ ಇದೇ ಮಾರ್ಚ್2 ರಿಂದ 4ರವರೆಗೆ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಜರುಗಲಿದ್ದು, ರಾಜ್ಯದ 31 ಜಿಲ್ಲೆಗಳ 1,500ಕ್ಕೂ ಅಧಿಕ ಪಾರಂಪರಿಕ ವೈದ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದರು.ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ಇರೋದು ದೃಢ – ಕೋಳಿಗಳ ಮಾರಣಹೋಮಕ್ಕೆ ಮುಂದಾದ ಜಿಲ್ಲಾಡಳಿತ

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು (Karnataka) ಶ್ರೀಮಂತ ಜೀವವೈವಿಧ್ಯ ತಾಣವಾಗಿದೆ. ಅನೇಕ ಪ್ರಬೇಧಗಳ ಸಸ್ಯ, ಪ್ರಾಣಿ, ಕೀಟ ಸಂಕುಲಗಳನ್ನ ಹೊಂದಿದೆ. ಮನುಷ್ಯನ ಹಾಗೆ ಇವೆಲ್ಲದಕ್ಕೂ ಬದುಕುವ ಹಕ್ಕಿದ್ದು, ಇವುಗಳ ಸಂರಕ್ಷಣೆ ನಮ್ಮೆಲ್ಲರ ಹಕ್ಕಾಗಿದೆ. ಮುಂದಿನ ಪೀಳಿಗೆಗೆ ಇವುಗಳನ್ನ ಪರಿಚಯಿಸುವ ಅವಶ್ಯಕತೆ ಇದೆ. ಇನ್ನೂ ಋಷಿ ಮುನಿಗಳು, ಹಿರಿಯರು ಎಲ್ಲಾ ರೋಗಗಳಿಗೆ ಗಿಡಮೂಲಿಕೆ, ಪ್ರಕೃತಿ ಚಿಕಿತ್ಸೆಯಿತ್ತು. ಔಷಧಿಯ ಗುಣಧರ್ಮ ಇಲ್ಲದ ಸಸಿಗಳು ಭೂಮಿ ಮೇಲೆ ಎಲ್ಲಿಯೂ ಇಲ್ಲ ಎಂದು ಹೇಳಿದರು.

    ಔಷಧೀಯ ಸಸ್ಯಗಳನ್ನು ಪತ್ತೆ ಹಚ್ಚುವ, ಔಷಧಿ ತಯಾರಿಕೆಯ ಮಾಹಿತಿ ಕಡಿಮೆ ಆಗುತ್ತಿದೆ. ಔಷಧಿಯ ಸಸ್ಯಗಳನ್ನ ಪತ್ತೆ ಹಚ್ಚುವವರಿಲ್ಲದೇ ನಶಿಸಿ ಹೋಗುತ್ತಿವೆ. ಪಾರಂಪರಿಕ ವೈದ್ಯ ಪದ್ಧತಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನ ಒಟ್ಟು ಮೂರು ದಿನ ನಡೆಯಲಿದ್ದು, 11 ಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಕರಾವಳಿಯಲ್ಲಿ ದೈವ ಕಾರ್ಣಿಕ ಹೋರಾಟ – ಕಾಂತೇರಿ ಧೂಮಾವತಿ ದೈವ ಪೂಜೆಗೆ ತಡೆ

     

  • ಬೀದರ್ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ

    ಬೀದರ್ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ

    ಬೆಂಗಳೂರು: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ (Maha Kumbh Mela) ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ (Uttar Pradesh) ಬಳಿ ಅಪಘಾತದಲ್ಲಿ ಬೀದರ್‌ನ (Bidar) ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ಗ್ಯಾಂಗ್ ರೇಪ್

    ಉತ್ತರಪ್ರದೇಶದಲ್ಲಿ ಕರ್ನಾಟಕದವರಾದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ.. ಅದರ ಸಂಪರ್ಕದಿಂದ ಚರ್ಮ ರೋಗಗಳು ಬರಲ್ಲ: ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

  • ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

    ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

    ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಮಂಗಳವಾರ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

    ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವುದಾಗಿ ಮಾಧ್ಯಮಗಳಲ್ಲಿ ಸಚಿತ್ರ ವರದಿಗಳು ಪ್ರಕಟವಾಗಿದ್ದು ಈ ಬಗ್ಗೆ ತನಿಖೆ ನಡೆಸಿ 10 ದಿನಗಳ ಒಳಗಾಗಿ ವಾಸ್ತವ ವರದಿ ಸಲ್ಲಿಸಲು ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

    ಹುಲಿಯ ಮೃತ ದೇಹ ಪತ್ತೆಯಾಗಿರುವ ಪ್ರದೇಶದಲ್ಲಿ ಯಾವತ್ತೂ ಹುಲಿಯ ದರ್ಶನವೇ ಆಗಿಲ್ಲ. ಹೀಗಾಗಿ ಬೇರೆ ಕಡೆ ಹುಲಿ ಕೊಂದು ಇಲ್ಲಿ ಹಾಕಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲು ಸೂಚಿಸಿದ್ದಾರೆ.