Tag: eshwar khandre

  • ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತಾಡೋ ನೈತಿಕತೆ, ಮಾನ ಮರ್ಯಾದೆ ಇಲ್ಲ – ಈಶ್ವರ್ ಖಂಡ್ರೆ

    ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತಾಡೋ ನೈತಿಕತೆ, ಮಾನ ಮರ್ಯಾದೆ ಇಲ್ಲ – ಈಶ್ವರ್ ಖಂಡ್ರೆ

    ಬೆಂಗಳೂರು: ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಬಿಜೆಪಿ (BJP) ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಡಿಸಿಎಂ ಡಿಕೆಶಿ ಮನೆಗೆ ಕಿಚ್ಚ ಸುದೀಪ್‌ ಭೇಟಿ- ಕಾರಣವೇನು?

    ನವೆಂಬರ್‌ಗೆ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಆರ್.ಅಶೋಕ್ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಅಶೋಕ್ ಹೇಳಿಕೆಗೆ ಯಾವುದೇ ಬೆಲೆ ಇಲ್ಲ. ಅವರ ಪಕ್ಷದ ಪರಿಸ್ಥಿತಿ ಏನಾಗಿದೆ? ಜನರು ಹಾದಿ-ಬೀದಿಯಲ್ಲಿ ಬಿಜೆಪಿಯವರಿಗೆ ಬೈಯುತ್ತಿದ್ದಾರೆ. ಅವರು ಜಗಳ ಮಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡುತ್ತಿದ್ದಾರೆ. ಅವರಿಗೆ ನೈತಿಕತೆ ಇದೆಯಾ? ಮಾನ ಮರ್ಯಾದೆ ಇದೆಯಾ? ಜನರ ಮುಂದೆ ಅವರು ಹೋಗೋಕೆ ಸಾಧ್ಯವಿದೆಯಾ? ಮೊದಲು ಬಿಜೆಪಿಯಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.

    ಇದೇ ವೇಳೆ ಡಿಕೆ ಶಿವಕುಮಾರ್ ಸಿಎಂ ಎಂಬ ಶಾಸಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ನಮ್ಮ ವರಿಷ್ಠರು ಯಾರು ಮಾತಾಡಬಾರದು ಎಂದು ಹೇಳಿದ್ದಾರೆ. ಹೈಕಮಾಂಡ್ ನಾಯಕರು ಹೇಳಿರುವ ಕಾರಣ ಈ ಬಗ್ಗೆ ನಾನೇನು ಮಾತನಾಡುವುದಿಲ್ಲ. ನಮ್ಮ ಉದ್ದೇಶ ಅಭಿವೃದ್ಧಿ ಮಾಡಬೇಕು. ಜನರಿಗೆ ಒಳಿತು ಮಾಡಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಬೇಕು. ಇರುವ ಸಮಸ್ಯೆಗಳನ್ನು ಬಗೆಹರಿಸಬೇಕು. ಅ ಎಲ್ಲಾ ಕೆಲಸಗಳನ್ನ ನಾವು ಮಾಡ್ತಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯ – ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್

     

  • ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಈಶ್ವರ್ ಖಂಡ್ರೆ ಸೂಚನೆ

    ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಈಶ್ವರ್ ಖಂಡ್ರೆ ಸೂಚನೆ

    ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆಯಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚಿಸಿದ್ದಾರೆ.

    ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ ಅವರು, ಅರಣ್ಯ ಹಕ್ಕು ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿ.13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ

    ಅರಣ್ಯ ಹಕ್ಕು ಕಾಯ್ದೆಯಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲೀಕತ್ವ ಹೊಂದಿರುವವರು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮವಹಿಸಲು ಸೂಚಿಸಿದ್ದಾರೆ. ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲಿ, ತಮ್ಮ ಕುಟುಂಬದ ಸದಸ್ಯರಿಗಾಗಲಿ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹೆಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ತಿಳಿಸಿದ್ದಾರೆ.

    ನಮೂನೆ-ಎಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ, ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.ಇದನ್ನೂ ಓದಿ: ವರ `ಚೋಲಿ ಕೆ ಪೀಚೆ ಕ್ಯಾ ಹೈ’ ಡ್ಯಾನ್ಸ್ ಮಾಡಿದ್ದಕ್ಕೆ ಮದ್ವೆ ನಿಲ್ಲಿಸಿದ ವಧುವಿನ ತಂದೆ

  • ಇನ್ನು ಮುಂದೆ ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ

    ಇನ್ನು ಮುಂದೆ ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ

    ಬೆಂಗಳೂರು: ಅರಣ್ಯ (Forest) ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ (Shooting) ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

    ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಚಿವರು ಸೂಚನೆ ನೀಡಿದ್ದಾರೆ.  ಇದನ್ನೂ ಓದಿ: ಕಾಂತಾರ 2ಗೆ ಬಿಗ್ ರಿಲೀಫ್ – ಅಧಿಕಾರಿಗಳಿಂದ ಕ್ಲೀನ್ ಚಿಟ್

     

    ಸೂಚನೆಯಲ್ಲಿ ಏನಿದೆ?
    ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ

    ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ

    ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸಬೇಕು.

     

  • ಬೀದರ್‌ನಲ್ಲಿ ATM ಹಣ ದರೋಡೆ – ಮೃತ ಸಿಬ್ಬಂದಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

    ಬೀದರ್‌ನಲ್ಲಿ ATM ಹಣ ದರೋಡೆ – ಮೃತ ಸಿಬ್ಬಂದಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

    – ಸಮಾಜ ಕಲ್ಯಾಣ ಇಲಾಖೆಯಿಂದ 8 ಲಕ್ಷ ರೂ. ಪರಿಹಾರ
    – ಮೃತನ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಭರವಸೆ

    ಬೀದರ್: ಹಾಡಹಗಲೇ ಬೀದರ್‌ನಲ್ಲಿ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ 83 ಲಕ್ಷ ರೂ. ಹಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಿಬ್ಬಂದಿಯ ಕುಟುಂಬಕ್ಕೆ ಸರ್ಕಾರ ವಿಶೇಷ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಈ ಬೆನ್ನಲ್ಲೇ ಸಮಾಜಕಲ್ಯಾಣ ಇಲಾಖೆಯು ಪ್ರತ್ಯೇಕವಾಗಿ 8 ಲಕ್ಷ ರೂ. ಪರಿಹಾರ ಘೋಷಿಸಿದೆ.

    ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಶ್ವರ್ ಖಂಡ್ರೆಗೆ ಎಡಿಜಿಪಿ ಹರಿಶೇಖರನ್, ಸಚಿವ ರಹೀಂ ಖಾನ್ ಸೇರಿದಂತೆ ಡಿಐಜಿ ಸಾಥ್ ನೀಡಿದರು. ಬಳಿಕ ಗುಂಡೇಟಿಗೆ ಬಲಿಯಾದ ಸಿಬ್ಬಂದಿ ಗಿರಿ ವೆಂಕಟೇಶ್ ಮನೆಗೆ ಭೇಟಿ ನೀಡಿದ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಕುಟುಂಬಸ್ಥರು ಈಶ್ವರ್ ಖಂಡ್ರೆ ಮುಂದೆ ನ್ಯಾಯಕ್ಕಾಗಿ ಕಣ್ಣೀರು ಹಾಕಿದರು. ಖಂಡ್ರೆ ಮುಂದೆ ಮಗನನ್ನು ನೆನೆದು ತಾಯಿ ಭಾವುಕರಾದರು. ಇದನ್ನೂ ಓದಿ: ವಿಜಯಪುರದಲ್ಲಿ ಮುಸುಕುಧಾರಿ ಗ್ಯಾಂಗ್‌ ಅಟ್ಟಹಾಸ – ದರೋಡೆಕೋರರ ಬೆನ್ನತ್ತಿ ಗುಂಡಿಟ್ಟ ಖಾಕಿ ಪಡೆ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಖಂಡ್ರೆ, ಬೀದರ್‌ನಲ್ಲಿ ನಡೆದ ಘಟನೆ ಅತ್ಯಂತ ಆತಂಕಕಾರಿ ಪ್ರಕರಣ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮಾಹಿತಿ ಸಿಕ್ಕ ತಕ್ಷಣ, ಡಿಐಜಿ, ಎಡಿಜಿಪಿ, ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ಗಾಯಾಳು ಶಿವಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇವೆ. ಸರ್ಕಾರ ಚಿಕಿತ್ಸೆಯ ಖರ್ಚು ವೆಚ್ಚ ಭರಿಸುತ್ತದೆ. ಯುವ ಜೀವ ಕಳೆದುಕೊಂಡಿದ್ದು ನೋವು ತಂದಿದೆ. ಖದೀಮರು 83 ಲಕ್ಷ ರೂ. ದೋಚಿದ್ದಾರೆ. ಪೊಲೀಸರ ತಂಡ ಹೈದರಾಬಾದ್ ಸೇರಿ ಬೇರೆಬೇರೆ ರಾಜ್ಯಕ್ಕೆ ತೆರಳಿದ್ದಾರೆ. ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಉಂಟಾಗಿರೋದನ್ನ ಸಾಕ್ಷೀಕರಿಸುತ್ತಿದೆ: ವಿಜಯೇಂದ್ರ ಕಿಡಿ

    ಇಂತಹ ಘಟನೆ ಬಿಹಾರದಲ್ಲೇ ಆದ್ರೂ, ಬೀದರ್‌ನಲ್ಲೇ ಆದ್ರೂ ಖಂಡಿಸುತ್ತೇನೆ. ಐಜಿ ಇಲ್ಲಿಯೇ ಇದ್ದಾರೆ, ಅವರೊಂದಿಗೆ ಚರ್ಚಿಸಿದ್ದೇನೆ. ತನಿಖೆಯಲ್ಲಿ ಯಾರ ವೈಫಲ್ಯ ಇದೆ ಎಂಬುವುದು ಗೊತ್ತಾಗುತ್ತದೆ. ದುಷ್ಕರ್ಮಿಗಳು ಪ್ರೊಫೆಷನಲ್ ದರೋಡೆಕೋರರು ಅಂತಾ ಅನಿಸುತ್ತೆ. ಸೆಕ್ಯೂರಿಟಿ ಗಾರ್ಡ್ ಇರಬೇಕಿತ್ತು. ಬ್ಯಾಂಕಿನವರದ್ದೂ ತಪ್ಪಿದೆ. ಸೆಕ್ಯೂರಿಟಿ ಗಾರ್ಡ್ಗೆ ಆರೋಗ್ಯ ಸರಿ ಇಲ್ಲ ಎಂದು ಹೇಳಿದ್ದಾರೆ. ಕಣ್ಣಿಗೆ ನಿದ್ರೆ ಮಾಡದೇ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಮೃತನ ಕುಟುಂಬದವರ ಜೊತೆಗೆ ನಾನು, ಸರ್ಕಾರ ಇದೆ. ಮುಖ್ಯಮಂತ್ರಿಗಳ ಜೊತೆಗೂ ವಿಶೇಷ ಪರಿಹಾರದ ಕುರಿತು ಮಾತನಾಡಿದ್ದೇನೆ. ಸಮಾಜ ಕಲ್ಯಾಣ ಇಲಾಖೆಯಿಂದಲೂ ಪರಿಹಾರ ಕೊಡಲು ಸೂಚಿಸಿದ್ದೇನೆ. ಮೃತನ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: Budget 2025 | ಜ.31 ರಿಂದ ಬಜೆಟ್‌ ಅಧಿವೇಶನ

    ಬ್ಯಾಂಕ್ ದರೋಡೆ ವೇಳೆ ಗಿರಿ ವೆಂಕಟೇಶ್ ಸಾವು ದುರಾದೃಷ್ಟಕರ. ಸರ್ಕಾರದಿಂದ, ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರ ಕೊಡುತ್ತೇವೆ. ಪ್ರಕರಣದ ಕುರಿತು ಮುಖ್ಯಮಂತ್ರಿ ಅವರಿಗೆ ತಿಳಿಸಿದಾಗ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಸಮಾಜ ಕಲ್ಯಾಣದಿಂದ 8 ಲಕ್ಷ ರೂ. ಪರಿಹಾರ ನೀಡುತ್ತೇವೆ. ಪರಿವಾರದ ಜೊತೆ ನಾವು ಇರುತ್ತೇವೆ. ಸರ್ಕಾರದ ಹಣ ರಕ್ಷಿಸಲು ಹೋಗಿ ಗಿರಿ ಪ್ರಾಣ ಕಳೆದುಕೊಂಡಿದ್ದಾರೆ. ಗಿರಿ ಬಗ್ಗೆ ಅಭಿಮಾನ ಮೂಡಿಸುವಂತ ಕೆಲಸ ಅವರು ಮಾಡಿದ್ದಾರೆ. ದುಷ್ಕರ್ಮಿಗಳನ್ನು ಆದಷ್ಟು ಬೇಗ ಬಂಧಿಸಿ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಆರೋಪಿಗಳಿಗೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆ ನೀಡಲಾಗುವುದು. ಗಾಯಗೊಂಡ ಶಿವ ಅವರ ಚಿಕಿತ್ಸೆಯ ಸಂಪೂರ್ಣ ಹಣ ಸರ್ಕಾರ ಭರಿಸುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸೈಫ್ ಅಲಿ ಖಾನ್ ಮೇಲಿನ ಹಲ್ಲೆಯಿಂದ ಶಾಕ್ ಆಗಿದೆ – ರಾಯಚೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಹೇಳಿಕೆ

  • ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆಗೆ ಡ್ರೋನ್ ಕ್ಯಾಮೆರಾ ಬಳಕೆ: ಈಶ್ವರ್ ಖಂಡ್ರೆ

    ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆಗೆ ಡ್ರೋನ್ ಕ್ಯಾಮೆರಾ ಬಳಕೆ: ಈಶ್ವರ್ ಖಂಡ್ರೆ

    ಬೆಂಗಳೂರು: ಮೈಸೂರು ನಗರದ ಇನ್ಫೋಸಿಸ್ (Infosys) ಆವರಣದಲ್ಲಿ ಇಂದು ನಸುಕಿನ ಜಾವ 4:30ರ ಸುಮಾರಿನಲ್ಲಿ ಚಿರತೆ (Leopard) ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ‌ (Eshwar Khandre) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹೊಸ ವರ್ಷ ಆಚರಣೆಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರ ದಂಡು

    ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದೆ. ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು, ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ. ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಅಮಿತ್ ಶಾ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ.. ಸಚಿವ ಸಂಪುಟದಿಂದ ಕೈಬಿಡಿ: ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ

    ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮೆರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ಹೊಸ ಲೋಕದಲ್ಲಿ ಶೋಕ ಕಾಣಬಹುದು – ವಿದೇಶ ಪ್ರವಾಸಕ್ಕೆ ಛಲವಾದಿ ವ್ಯಂಗ್ಯ

  • 9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ‌ಕ್ರಮ: ಈಶ್ವರ್ ಖಂಡ್ರೆ

    9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ‌ಕ್ರಮ: ಈಶ್ವರ್ ಖಂಡ್ರೆ

    – 9 ಕಂಪನಿಗಳಿಂದ ಒಟ್ಟು 1,492.18 ಕೋಟಿ ರೂ. ಬಡ್ಡಿ, ದಂಡ ಬಾಕಿ

    ಬೆಂಗಳೂರು: ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಬ್ರಿಟಿಷರ ಕಾಲದಲ್ಲಿ ಗುತ್ತಿಗೆ ನೀಡಲಾಗಿರುವ ಸುಮಾರು 5,150 ಎಕರೆ ಅರಣ್ಯ ಭೂಮಿಯ(Forest Land) ಮರು ವಶಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಸಚಿವ ಈಶ್ವರ್‌ ಖಂಡ್ರೆ (Eshwar Khandre) ತಿಳಿಸಿದ್ದಾರೆ.

    ವಿಧಾನ ಪರಿಷತ್ ‌ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕುಶಾಲಪ್ಪ (Kushalappa) ಪ್ರಶ್ನೆ ಕೇಳಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಕೊಡಗು ಜಿಲ್ಲೆಯಲ್ಲಿ ಮರ್ಕೆರಾ ರಬ್ಬರ್ ಕಂಪನಿ (1074 ಎಕರೆ), ನೀಲಾಂಬುರ್ ರಬ್ಬರ್ ಕಂಪನಿಗೆ (713.03 ಎಕರೆ), ಥಾಮ್ಸನ್ ರಬ್ಬರ್ ಕಂಪನಿ (625 ಎಕರೆ), ಪೋರ್ಟ್ ಲ್ಯಾಂಡ್ ರಬ್ಬರ್ ಕಂಪನಿ (1289.29 ಎಕರೆ), ಟಾಟಾ ಕಾಫಿ ಲಿ. (923.378 ಎಕರೆ), ಗೈನ್ ಲೋರೆನ್ ಪ್ಲಾಂಟೇಷನ್ (279.748 ಎಕರೆ), ಚಾಮರಾಜನಗರ ಜಿಲ್ಲೆಯ ಎಮರಾಲ್ಡ್ ಹೆವೆನ್ ಎಸ್ಟೇಟ್, ಬೇಡಗುಳಿ (37.25 ಎಕರೆ), ಬಿಳಿಗಿರಿ ರಂಗನ ಎಸ್ಟೇಟ್, ಬೇಡಗುಳಿ (25 ಎಕರೆ), ನೀಲಗಿರಿ ಪ್ಲಾಂಟೇಷನ್ ಲಿ. ಹೊನ್ನಮೇಟಿ 184 ಎಕರೆ ಸೇರಿ ಒಟ್ಟು 5150 ಎಕರೆ ಜಮೀನನ್ನು ಗುತ್ತಿಗೆ ನೀಡಲಾಗಿದೆ ಎಂದು ವಿವರಿಸಿದರು.

    ಈ ಕಂಪನಿಗಳು ಹಲವು ದಶಕಗಳಿಂದ ಗುತ್ತಿಗೆ ಹಣವನ್ನೂ ಪಾವತಿಸಿರುವುದಿಲ್ಲ. ಈ 9 ಕಂಪನಿಗಳಿಂದ ಇಲಾಖೆಗೆ ಬಡ್ಡಿ ಮತ್ತು ದಂಡ ಸೇರಿ ಒಟ್ಟು 1492.18 ಕೋಟಿ ರೂ. ಬರಬೇಕಿದೆ ಎಂದೂ ತಿಳಿಸಿದರು. ಕಂಪನಿಗಳು ತಮಗೆ 999 ವರ್ಷಗಳಿಗೆ ಲೀಸ್ ನೀಡಲಾಗಿತ್ತು ಎಂದು ಕಂಪನಿಗಳು ವಾದಿಸುತ್ತಿದ್ದವು. 2012ರಲ್ಲಿ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿ ಈ ಗುತ್ತಿಗೆ ಅವಧಿಯನ್ನು 99 ವರ್ಷಕ್ಕೆ ತಗ್ಗಿಸಿದ್ದು, ಅವಧಿ ಮುಗಿದ ಗುತ್ತಿಗೆ ಅರಣ್ಯ ಭೂಮಿಯ ಮರು ವಶಕ್ಕೆ ನೋಟಿಸ್ ನೀಡಿತ್ತು. ಆ ಕಂಪನಿಗಳು ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದು, ಪ್ರಸ್ತುತ ಪ್ರಕರಣ ಉಚ್ಚ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇದೇ ಡಿ.12ರಂದು ವಿಚಾರಣೆಗೆ ಬರಲಿದೆ ಎಂದೂ ಮಾಹಿತಿ ನೀಡಿದರು.

    ತಾವು ಸಚಿವರಾದ ಬಳಿಕ ಗುತ್ತಿಗೆ ಅರಣ್ಯ ಭೂಮಿಯ ಮರು ವಶಕ್ಕೆ ಪಡೆಯಲು 5 ಜನ ಸದಸ್ಯರ ಕಾರ್ಯಪಡೆಯನ್ನು ರಚಿಸಲಾಗಿದೆ. ಈ ಪಡೆಯು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ, ದಾಖಲೆಗಳನ್ನು ಒಗ್ಗೂಡಿಸಿ ಭೂಮಿ ಮರಳಿ ಪಡೆಯಲು ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರತಿ ತಿಂಗಳು ಎಷ್ಟು ಮಂದಿಗೆ ಯುವನಿಧಿ ಹಣ ಸೇರುತ್ತಿದೆ – ಲೆಕ್ಕ ಕೊಟ್ಟ ಸರ್ಕಾರ

    ವಿವಿಧ ಉದ್ದೇಶಗಳಿಗೆ ಅರಣ್ಯ ಭೂಮಿಯನ್ನು ಗುತ್ತಿಗೆ ನೀಡಿರುವ ಪ್ರಕರಣಗಳ ಪರಿಶೀಲನೆ, ಗೇಣಿ ವಸೂಲಾತಿ, ಅರಣ್ಯ ಪ್ರದೇಶವನ್ನು ಇಲಾಖೆಗೆ ಹಿಂಪಡೆಯುವ ಬಗ್ಗೆ ಕಾರ್ಯಪಡೆ ಅಧ್ಯಕ್ಷರು ಮತ್ತು ಸದಸ್ಯರು ಹಲವು ಸಭೆ ನಡೆಸಿ, ಆದ್ಯತೆಯ ಆಧಾರದಲ್ಲಿ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಲು ಶ್ರಮಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ

  • ಪವನ್‌ ಕಲ್ಯಾಣ್‌ ಮನವಿ – ಆಂಧ್ರದ ಅರಣ್ಯ ಸಿಬ್ಬಂದಿಗೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ತರಬೇತಿ

    ಪವನ್‌ ಕಲ್ಯಾಣ್‌ ಮನವಿ – ಆಂಧ್ರದ ಅರಣ್ಯ ಸಿಬ್ಬಂದಿಗೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ತರಬೇತಿ

    ಮಡಿಕೇರಿ: ಆಂಧ್ರ ಪ್ರದೇಶದ ಅರಣ್ಯ ಇಲಾಖೆ ಸಿಬ್ಬಂದಿಗೆ 1 ತಿಂಗಳು ತರಬೇತಿ ನೀಡುವ ಕಾರ್ಯಾಗಾರಕ್ಕೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ (Dubare Elephant Camp) ಚಾಲನೆ ಸಿಕ್ಕಿದೆ. ಆಂಧ್ರದ ಅರಣ್ಯ ಸಚಿವ ಪವನ್‌ ಕಲ್ಯಾಣ್‌ (Pawan Kalyan) ಅವರ ಮನವಿ ಮೇರೆಗೆ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ.

    ಕಾಡಾನೆ (Forest Elephant) ಸೇರಿದಂತೆ ವನ್ಯಜೀವಿಗಳ ಸಮಸ್ಯೆ ಕರ್ನಾಟಕ ಮಲೆನಾಡು ಭಾಗದಲ್ಲಿ ಮಾತ್ರವಲ್ಲ, ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲೂ ಹೆಚ್ಚಾಗಿದೆ. ಕಾಡಾನೆಗಳ ಹಾವಳಿಯಂತು ಮಿತಿಮೀರಿಹೋಗಿದೆ. ನಾಡಿಗೆ ನುಗ್ಗುವ ಆನೆಗಳನ್ನ ಮತ್ತೆ ಕಾಡಿಗಟ್ಟಲು ನುರಿತ ಮಾವುತರು ಹಾಗೂ ಕಾವಾಡಿಗಳು ಇಲ್ಲದೇ ಇರೋದು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ವನ್ಯಜೀವಿ ನಿರ್ವಹಣೆ ಕುರಿತು ರಾಜ್ಯದ ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಬೇಕೆಂದು ಕರ್ನಾಟಕದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ (Eshwar Khandre) ಅವರಿಗೆ ಪವನ್‌ ಕಲ್ಯಾಣ್ ಮನವಿ ಮಾಡಿದ್ದರು. ಅದರಂತೆ‌ ಎರಡು ರಾಜ್ಯಗಳ ಅರಣ್ಯ ಇಲಾಖೆಗಳ ಪರಸ್ಪರ ಸಹಕಾರದೊಂದಿಗೆ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ: ಕರುನಾಡಿಗೆ ಮತ್ತೊಂದು ಗರಿ: ದೇಶದ ಅತ್ಯಂತ ಕಿರಿಯ ಪೈಲಟ್ ಆಗಿ ವಿಜಯಪುರದ ಸಮೈರಾ

    ಆಂಧ್ರ ಪ್ರದೇಶದ 17 ಮಾವುತ ಮತ್ತು ಕಾವಾಡಿಗರು, ನಾಲ್ವರು ಇಲಾಖೆ ಸಿಬ್ಬಂದಿ ಸೇರಿ 21 ಮಂದಿಗೆ ನಮ್ಮ ರಾಜ್ಯದ ಮಾವುತರು ಮತ್ತು ಕವಾಡಿಗಳು ತರಬೇತಿ ನೀಡುತ್ತಿದ್ದಾರೆ. ಸಾಕಾನೆಗಳಿಗೆ ಸ್ನಾನ ಮಾಡಿಸುವುದು, ಆಹಾರ ಕೊಡುವುದು, ಇಂತಹದ್ದೇ ಪದಗಳನ್ನು ಬಳಸಿ ಆನೆಗಳನ್ನು ಮಾತನಾಡಿಸುವುದು, ವನ್ಯಜೀವಿ‌ ಸಂಘರ್ಷ ತಡೆಯುವುದು ಸೇರಿದಂತೆ ಇನ್ನಿತರ ವನ್ಯಜೀವಿ ನಿರ್ವಹಣೆ ಕುರಿತು ಹೇಳಿಕೊಡುತ್ತಿದ್ದಾರೆ. ಇದನ್ನೂ ಓದಿ: ಕೋಲಾರಕ್ಕೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು, ನಾನು ಅರ್ಹನಿದ್ದೇನೆ: ಕೆವೈ ನಂಜೇಗೌಡ

    ಆನೆ ಪಳಗಿಸುವುದು ಹೇಗೆ?
    ಒಂದು ಆನೆಯನ್ನು ಪಳಗಿಸಿ ಸರಿದಾರಿಗೆ ತರೋದು ಮಕ್ಕಳಿಗೆ ಅ, ಆ, ಇ, ಈ ಕಲಿಸಿದಷ್ಟು ಸುಲಭದ ಕೆಲಸವಲ್ಲ. ಕೊಂಚ ಯಡವಟ್ಟಾದ್ರೂ ಪ್ರಾಣವೇ ಹೋಗುವ ಸಾಧ್ಯತೆ ಹೆಚ್ಚು. ಅದಕ್ಕಾಗಿ ಮಾವುತರು ಬಹಳ ಜಾಣ್ಮೆಯಿಂದಲೇ ಪಾಠ ಹೇಳಿಕೊಡುತ್ತಾರೆ. ಒಂದೊಂದೇ ಪದವನ್ನು ಕಲಿಸುತ್ತಾ… ಆನೆ ತಮ್ಮ ಮಾತಿಗೆ ಸ್ಪಂದಿಸಿದಾಗ ಶಬ್ಬಾಸ್ ಹೇಳಿ ಮೈದಡವಿ ಖುಷಿಡಿಸುತ್ತಾರೆ.

    ಹೀಗೆ ನಿಧಾನವಾಗಿ ಆನೆಯನ್ನ ತಮ್ಮವಶಕ್ಕೆ ತೆಗೆದುಕೊಳ್ಳುಬೇಕು ಎಂದು ಇಲ್ಲಿನ ಮಾವುತರು ಆಂಧ್ರಪ್ರದೇಶದ ಅರಣ್ಯ ಸಿಬ್ಬಂದಿಗೆ ಪಾಠ ಹೇಳಿಕೋಡುತ್ತಿದ್ದಾರೆ. ಇದನ್ನೂ ಓದಿ: ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್‌ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್‌

  • ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ: ಈಶ್ವರ್ ಖಂಡ್ರೆ

    ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ: ಈಶ್ವರ್ ಖಂಡ್ರೆ

    ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷರ ಬದಲಾವಣೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಮದು ಸಚಿವ ಈಶ್ವರ್ ಖಂಡ್ರೆ (Eshwar Khandre) ಸ್ಪಷ್ಟಪಡಿಸಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಹೆಸರು ಕೇಳಿ ಬರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನನ್ನ ಜೊತೆ ಯಾರೂ ಈ ಬಗ್ಗೆ ಚರ್ಚೆ ಮಾಡಿಲ್ಲ. ಅಧ್ಯಕ್ಷರ ಬದಲಾವಣೆ ವಿಚಾರ ಸಿಎಂ, ಡಿಸಿಎಂ, ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು. ಇದನ್ನೂ ಓದಿ: ಡಿವಿಎಸ್ ಬಣ್ಣ ಬಯಲು ಮಾಡ್ತೀನಿ, ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ: ಯತ್ನಾಳ್ ಕಿಡಿ

    ನಾನು ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಮಾತಾಡಿದ್ದು ಇಲಾಖೆ ಬಗ್ಗೆ, ನಮ್ಮ ಕ್ಷೇತ್ರದ ಬಗ್ಗೆ. ಡಿಕೆ ಶಿವಕುಮಾರ್ (DK Shivakumar) ಅವರು ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಬಹುದು. ಅವರು ಪಕ್ಷದ ಅಧ್ಯಕ್ಷರು. ಅಂತಿಮವಾಗಿ ಹೈಕಮಾಂಡ್ ಎಲ್ಲವೂ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ತಲೆದಂಡ ಯಾಕಾಗುತ್ತೆ? – ಆರ್.ಬಿ.ತಿಮ್ಮಾಪುರ್

  • ಮುಡಾ, ವಕ್ಫ್‌ನಂತಹ ಸುಳ್ಳು ಆರೋಪಗಳಿಗೆ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ – ಈಶ್ವರ್ ಖಂಡ್ರೆ

    ಮುಡಾ, ವಕ್ಫ್‌ನಂತಹ ಸುಳ್ಳು ಆರೋಪಗಳಿಗೆ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ – ಈಶ್ವರ್ ಖಂಡ್ರೆ

    ಬೀದರ್: ಮುಡಾ, ವಕ್ಫ್ ಬಗ್ಗೆ ಪ್ರತಿಪಕ್ಷಗಳು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದು, ಆ ಸುಳ್ಳು ಆರೋಪಗಳಿಗೆ ಇಂದು (ನ.23) ಜನರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಜಿಲ್ಲೆಯ ಬಸವಕಲ್ಯಾಣದಲ್ಲಿ ಸಚಿವ ಈಶ್ವರ್ ಖಂಡ್ರೆ  (Eshwar Khandre) ಬಿಜೆಪಿ (BJP) ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

    ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಮತದಾರರು ನಮ್ಮ ಕೈ ಹಿಡಿದಿದ್ದು, ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲವು ತಂದು ಕೊಟ್ಟಿದ್ದಾರೆ. ನಮ್ಮ ಗ್ಯಾರಂಟಿಗಳಿಗೆ ಜಯ ಸಿಕ್ಕಿದೆ. ಜಾತ್ಯತೀತ ವಿಚಾರಗಳಿಗೆ ಜಯ ಸಿಕ್ಕಿರುವುದು ಬಿಜೆಪಿ, ಜೆಡಿಎಸ್ ಅನೈತಿಕ ಸಂಬಂಧಕ್ಕೆ ಇದು ತಕ್ಕ ಉತ್ತರವಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

    ವಿಶೇಷವಾಗಿ ಶಿಗ್ಗಾಂವಿ ಮತದಾರರು ಜಾತ್ಯತೀತವಾಗಿ ಮತ ಹಾಕಿದ್ದು, ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡಿದರೂ ನಮ್ಮ ಅಭ್ಯರ್ಥಿ ಯಾಸಿರ್ ಖಾನ್ ಗೆದ್ದಿದ್ದು ಸತ್ಯಕ್ಕೆ ಜಯವಾಗಿದೆ. ಈ ಮೂರು ಕ್ಷೇತ್ರದ ಗೆಲುವಿನಿಂದಾಗಿ ಇನ್ನಷ್ಟು ಕೆಲಸ ಮಾಡುವ ಹುಮ್ಮಸ್ಸು ಸಿಕ್ಕಿದೆ. ಸಿದ್ದರಾಮಯ್ಯನವರ ನಾಯಕತ್ವಕ್ಕೆ ಜನ ಬೆಂಬಲಿಸಿದ್ದಾರೆ. ಪ್ರತಿಪಕ್ಷದವರು ಇನ್ನಾದರೂ ಬುದ್ಧಿ ಕಲಿಯಲಿ ಎಂದು ಚಾಟಿ ಬೀಸಿದರು.

    ಮಹಾರಾಷ್ಟ್ರದಲ್ಲಿ (Maharashtra) ಕಾಂಗ್ರೆಸ್‌ಗೆ (Congress) ಹಿನ್ನಡೆಯಾಗಿರುವುದು ಪರಿಶೀಲನೆ ಮಾಡಬೇಕಾಗುತ್ತದೆ. ಎಕ್ಸಿಟ್ ಪೋಲ್‌ನಲ್ಲಿ ಸಮ ಪೈಪೋಟಿ ಎಂದು ಹೇಳಲಾಗಿತ್ತು. ಏನಾಗಿದೆ ಎಂದು ನಮ್ಮ ವರಿಷ್ಠರು ಪರಾಮರ್ಶೆ ಮಾಡುತ್ತಾರೆ ಎಂದು ತಿಳಿಸಿದರು.ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

  • ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಅಂದ್ರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ

    ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಅಂದ್ರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ

    ಬೀದರ್: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು (Bidar) ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ (Congress) ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ. ಈ ರಾಜ್ಯದ ಜನರಿಗೆ ಬಿಜೆಪಿ (BJP) ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು. ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ವೇದಘೋಷಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ

    ಬಿಜೆಪಿ ಕಾರ್ಡ್ ರದ್ದು ವಿಚಾರ:
    ಬಿಜೆಪಿ ಕಾರ್ಡ್ ರದ್ದು ವಿಚಾರವಾಗಿ ಬಹಳಷ್ಟು ದೂರುಗಳಿವೆ. ಸಾಹುಕಾರರು, ಮನೆ ಇದ್ದವರು, ಸರ್ಕಾರಿ ನೌಕರರು, ಟ್ಯಾಕ್ಸ್ ಕಟ್ಟುವವರು ಬಿಪಿಎಲ್ ಕಾರ್ಡ್ ತೆಗೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿದ್ದವರಿಗೆ ಬಿಜೆಪಿ ಕೊಡಬೇಕು ಎಂಬ ನಿಯಮವಿದೆ. ಒಂದೊಂದು ಜಿಲ್ಲೆಯಲ್ಲಿ ಶೇ.95 ರಷ್ಟು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ನೈಜವಾಗಿ ಯಾರು ಬಡತನದಲ್ಲಿ ಇದ್ದು, ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅವರಿಗೆ ಯಾವುದೇ ವಂಚನೆಯಗುವುದಿಲ್ಲ ಎಂದರು.

    ವರಿಷ್ಠರ ತೀರ್ಮಾನ
    ಕೇಂದ್ರ ಸಚಿವ ಹೆಚ್‌ಡಿಕೆಗೆ ಸಚಿವ ಜಮೀರ್ ಖಾನ್ ಕರಿಯಾ ಎಂಬ ಪದ ಬಳಕೆ ಪಕ್ಷಕ್ಕೆ ಡ್ಯಾಮೇಜ್ ಆಗಿದೀಯಾ ಎನ್ನುವ ವಿಚಾರವಾಗಿ ಈಗಾಗಲೇ ಸಿಎಂ, ಡಿಸಿಎಂ ಹಾಗೂ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ವ್ಯವಸ್ಥೆ ಇದೆ. ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾ? ಶಿಸ್ತು ಪಾಲನಾ ಸಮಿತಿಗೆ ನೀಡಬೇಕಾ ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

    ಬಿಜೆಪಿ ಅವಧಿಯಲ್ಲೇ ನೋಟಿಸ್
    ಬಿಜೆಪಿಯಲ್ಲಿ ಒಂದು ಮನೆ ನೂರು ಬಾಗಿಲು ಆಗಿವೆ. ಪಶ್ಚಾತ್ತಾಪ ಮಾಡಿಕೊಳ್ಳಲು ಬಿಜೆಪಿಯವರು ಪಾದಯಾತ್ರೆ ಮಾಡಲಿ. ವಕ್ಫ್ ವಿವಾದ ಹುಟ್ಟು ಹಾಕಿದ್ದು, ಮೊದಲು ನೋಟಿಸ್ ನೀಡಿದ್ದು ಬಿಜೆಪಿಯವರು. ಅಪರಾಧ ಮಾಡುವವರು, ದೂರು ನೀಡುವವರು, ವಿಚಾರಣೆ ಮಾಡುವವರು, ತೀರ್ಪು ನೀಡುವವರು ಎಲ್ಲವೂ ಬಿಜೆಪಿಯವರೇ. ಇದನ್ನೂ ಜನ ಅರ್ಥ ಮಾಡಿಕೊಳ್ಳುತ್ತಾರೆ. ಬಿಜೆಪಿ ಮುಗಿದ ಅಧ್ಯಾಯ, ಚರ್ಚೆ ಮಾಡಿ ಸಮಯ ಹಾಳು ಮಾಡಲಿ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಆಪ್‌ಗೆ ರಾಜೀನಾಮೆ ನೀಡಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಗೆ ಸೇರ್ಪಡೆ