Tag: eshwar khandre

  • ಕಾಂಗ್ರೆಸ್‌ನವರಿಂದಲೇ ಪಕ್ಷಕ್ಕೆ ಸೋಲು: ಈಶ್ವರ್ ಖಂಡ್ರೆ

    ಕಾಂಗ್ರೆಸ್‌ನವರಿಂದಲೇ ಪಕ್ಷಕ್ಕೆ ಸೋಲು: ಈಶ್ವರ್ ಖಂಡ್ರೆ

    ಹಾವೇರಿ: ಕಾಂಗ್ರೆಸ್‌ನವರಿಂದಲೇ (Congress) ಪಕ್ಷಕ್ಕೆ ಸೋಲಾಗುತ್ತಿದೆ. ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಪಕ್ಷದಲ್ಲಿ ಎಲ್ಲರಿಗೂ ಸ್ಥಾನಮಾನ ಸಿಗಲಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ.

    ಹಾವೇರಿ (Haveri) ಬೂತ್ ಸಮಿತಿ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ಉಪಚುನಾವಣೆ (By-Election) ಘೋಷಣೆ ಆಗಬಹುದು. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕಡೆ ಸಿದ್ಧತೆ ನಡೆದಿದೆ. ಹೆದರಿಸಿ ಬೆದರಿಸಿ ಇಡಿ, ಸಿಬಿಐ ಮೂಲಕ ಬಿಜೆಪಿಯವರು ಕಾಂಗ್ರೆಸ್ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದೇವೆ. 16 ತಿಂಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಹೊಟ್ಟೆಕಿಚ್ಚಿನಿಂದ ಸರ್ಕಾರ ಬುಡಮೇಲು ಮಾಡಲು ಪ್ರಯತ್ನ ನಡೆಸಿದ್ದಾರೆ. ಯಾವುದೇ ಶಕ್ತಿ ಬಂದರೂ ಐದು ವರ್ಷ ಏನು ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಅಲುಗಾಡಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಮಹಿಳಾ ಪಿಎಸ್‍ಐ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನ – ಕೊಲೆ ಆರೋಪಿಗೆ ಗುಂಡೇಟು

    ಸುಳ್ಳು ಆರೋಪ ಮಾಡಿ, ಸುಳ್ಳೇ ಸತ್ಯ ಮಾಡಲು ಹೊರಟಿದ್ದಾರೆ. ಮೋದಿ, ಅಮಿತ್ ಶಾ ಸಂಚು ಮಾಡಿ ಸಿದ್ದರಾಮಯ್ಯ ಸರ್ಕಾರ ಬುಡಮೇಲು ಮಾಡಲು ಮುಡಾ ಹಗರಣದ ಆರೋಪ ಮಾಡಿದ್ದಾರೆ. ಬಿಜೆಪಿಯವರು ಹೆಣಗಳ ರಾಶಿಗಳ ಮೇಲೆ ರಾಜಕೀಯವನ್ನು ಮಾಡಿದವರು. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡೋರು ಬಿಜೆಪಿಯವರು. ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ಮೋದಿಯವರಿಗೆ ಭಯ ಶುರುವಾಗಿದೆ. ಅಭ್ಯರ್ಥಿ ಯಾರೇ ಆಗಿರಲಿ, ಹೈಕಮಾಂಡ್ ಹೇಳಿದಂತೆ ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕೆಲಸ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ಪೇಜರ್‌ ಬ್ಲಾಸ್ಟ್‌ ಕೇಸ್‌ನಲ್ಲಿ ಟ್ಟಿಸ್ಟ್‌ – ಘಟನೆ ಹಿಂದೆ ಭಾರತೀಯ ಮೂಲದ ಉದ್ಯಮಿಯ ಕೈವಾಡ ಇರೋದು ನಿಜವೇ?

  • ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ

    ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ

    ಬೆಂಗಳೂರು: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

    ನಗರದ ಭವನದಲ್ಲಿ ಬುಧವಾರ ಮಾತನಾಡಿದ ಅವರು, ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದರು. ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಜೀವವನ್ನು ಒತ್ತೆಯಿಟ್ಟಿದ್ದಾರೆ. ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಅರಣ್ಯ ಇಲಾಖೆ ನಿಂತಿದೆ ಎಂದರು.ಇದನ್ನೂ ಓದಿ: ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

    ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ಇದಕ್ಕೂ ಮುನ್ನ ಸಿದ್ದರಾಮಯ್ಯ (CM Siddaramaiah) ಅವರು ಮುಖ್ಯಮಂತ್ರಿಗಳಾಗಿದ್ದಾಗ ಹುತಾತ್ಮರ ಕುಟುಂಬಕ್ಕೆ ಪರಿಹಾರ ನೀಡುವ ಘೋಷಣೆ ಮಾಡಿದರು. 30 ಲಕ್ಷ ರೂ. ಇದ್ದ ಪರಿಹಾರದ ಮೊತ್ತವನ್ನು ಈಗ 50 ಲಕ್ಷ ರೂ.ಗೆ ಹೆಚ್ಚಿಸುವ ಕಾರ್ಯವನ್ನೂ ಅವರೇ ಮಾಡಿದ್ದಾರೆ. ನಮ್ಮ ಸರ್ಕಾರ ಅರಣ್ಯದಲ್ಲಿ ಜೀವದ ಹಂಗು ತೊರೆದು ಆನೆ ಕಾರ್ಯಪಡೆ, ಕಳ್ಳಬೇಟಿ ನಿಗ್ರಹ ಶಿಬಿರ ಮತ್ತು ಇತರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊರಗುತ್ತಿಗೆ ನೌಕರರಿಗೂ ಮಾಸಿಕ 2 ಸಾವಿರ ರೂ. ಕಷ್ಟ ಕಾರ್ಯ ಭತ್ಯೆ ನೀಡುವ ಘೋಷಣೆ ಮಾಡಿದ್ದು, ಇದನ್ನು ಅನುಷ್ಠಾನ ಮಾಡಲಾಗಿದೆ ಎಂದು ತಿಳಿಸಿದರು.

    ಕಳೆದ 16 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜೊತೆಗೆ ಬೆಂಗಳೂರು, ಕೋಲಾರ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ. ಬೆಲೆ ಬಾಳುವ 2500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆದಿದೆ ಎಂದರು.

    2015ಕ್ಕೂ ಮುನ್ನ ರಾಜ್ಯ ಸರ್ಕಾರದ ನಡವಳಿಗೆ ಪಟ್ಟಾ ಜಮೀನು ಮತ್ತು ಅರಣ್ಯ ಭೂಮಿ ಒತ್ತುವರಿ ಸೇರಿ 3 ಎಕರೆ ಮೀರದ ಪ್ರಕರಣಗಳಲ್ಲಿ ಮತ್ತು ಅರಣ್ಯ ಹಕ್ಕು ಕಾಯಿದೆಯ ಅರ್ಜಿ ವಿಲೇವಾರಿ ಆಗದ ಪ್ರಕರಣಗಳ ಹೊರತಾಗಿ ದೊಡ್ಡ ಅರಣ್ಯ ಒತ್ತುವರಿ ತೆರವು ಮಾಡಿಸಲು ಸ್ಪಷ್ಟ ಆದೇಶ ನೀಡಲಾಗಿದೆ. ಇದು ಸಂವಿಧಾನದ 41(ಎ) ಮತ್ತು 51(ಎ) ಆಶಯಗಳಿಗೆ ಅನುಗುಣವಾಗಿದೆ ಎಂದು ಹೇಳಿದರು.ಇದನ್ನೂ ಓದಿ: ವಾಲ್ಮೀಕಿ ಹಗರಣದ ಇಡಿ ಚಾರ್ಜ್‌ಶೀಟ್‌ ಬಗ್ಗೆ ಕೋರ್ಟ್ ತೀರ್ಮಾನ ಮಾಡುತ್ತದೆ: ಸಿಎಂ

    ಕಸ್ತೂರಿ ರಂಗನ್ ವರದಿ ಮಾಸಾಂತ್ಯದೊಳಗೆ ರಾಜ್ಯದ ಅಭಿಪ್ರಾಯ ಸಲ್ಲಿಕೆ ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಇದೇ ಸೆ.19ರಂದು ಪಶ್ಚಿಮಘಟ್ಟ ವ್ಯಾಪ್ತಿಯ ಬಾಧ್ಯಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಬೇಕು. ನಂತರ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ನಂತರ ಸಚಿವ ಸಂಪುಟದ ಅನುಮೋದನೆ ಪಡೆದುಕೊಳ್ಳಬೇಕು. ಪಶ್ವಿಮಘಟ್ಟದ ಜೀವವೈವಿಧ್ಯ, ಜನರ ಜೀವನೋಪಾಯ ಎರಡೂ ಇರುವ ರೀತಿಯಲ್ಲಿ ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

  • ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ

    ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ

    ಬೆಂಗಳೂರು: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ (Western Ghats) ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

    ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ (Kasturi Rangan Report) ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

    ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು ಕೊಡಗಿನ ಭೂಕುಸಿತ (Kodagu LandSlide) ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಶ್, ರಿಷಬ್ ಶೆಟ್ಟಿ ಒಟ್ಟಿಗೆ ನಟಿಸುತ್ತಾರಾ? ನಿರ್ಮಾಪಕ ಹೇಳಿದ್ದೇನು?

    ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ತಮ್ಮ ಗಮನಕ್ಕೆ ಬಂದಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವಾಗಿದ್ದು, ಕೂಡಲೇ ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

    ಅತೀ ಜರೂರಾದ, ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಇರುವ ಮುಸ್ಲಿಮರೂ ಹಿಂದೂಗಳೇ: ವಚನಾನಂದ ಸ್ವಾಮೀಜಿ

    ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಭೂ ಉಪಯೋಗ ಕುರಿತಂತೆ ಹೊಸ ನಿಯಮಾವಳಿ ರೂಪಿಸಲು ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆಯೂ ಅವರು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದಾರೆ.

     

  • HMT ಜಾಗವನ್ನು ರಾಜ್ಯ ಸರ್ಕಾರಕ್ಕೆ ನೀಡಲ್ಲ: ಖಂಡ್ರೆ ವಿರುದ್ಧ ಹೆಚ್‌ಡಿಕೆ ಆಕ್ರೋಶ

    HMT ಜಾಗವನ್ನು ರಾಜ್ಯ ಸರ್ಕಾರಕ್ಕೆ ನೀಡಲ್ಲ: ಖಂಡ್ರೆ ವಿರುದ್ಧ ಹೆಚ್‌ಡಿಕೆ ಆಕ್ರೋಶ

    ಬೆಂಗಳೂರು : ಹೆಚ್‌ಎಂಟಿ ಜಾಗವನ್ನು (HMT Land) ಅರಣ್ಯ ಭೂಮಿ (Forest Land) ಎಂದು ಪರಿಗಣಿಸಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ (HD Kumaraswamy) ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

    ಹೆಚ್‌ಎಂಟಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್‌ಎಂಟಿಗೆ ಸೇರಿದ ಸುಮಾರು 590 ಎಕರೆ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡದ ಸುಮಾರು 290 ಎಕರೆ ಜಾಗವನ್ನು  ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದು ಅರಣ್ಯ ಇಲಾಖೆಯ ಜಾಗ ಎಂದು ವಶಪಡಿಸಿಕೊಳ್ಳಬೇಕು ಎಂದು ಈಶ್ವರ್‌ ಖಂಡ್ರೆ ಅವರು ಅಧಿಕಾರಿಗಳಿಗೆ ಟಿಪ್ಪಣಿ ಬರೆದಿದ್ದಾರೆ. ನನ್ನ ಮೇಲಿನ ದ್ವೇಷಕ್ಕೆ ಹೀಗೆ ಮಾಡುವುದು ಸರಿಯಲ್ಲ ಅಂತ ಕಿಡಿಕಾರಿದರು.

    ಹೆಚ್‌ಎಂಟಿಗೆ ಈ ಜಮೀನನ್ನು ಸರ್ಕಾರ ಪುಕ್ಕಟ್ಟೆಯಾಗಿ ಕೊಟ್ಟಿಲ್ಲ. ಇದಕ್ಕೆ ಹಣ ಪಡೆದಿದೆ. ಇದಲ್ಲದೆ ಅರಣ್ಯ ಇಲಾಖೆ ಕೂಡಾ ಹಿಂದೆ ಜಮೀನು ಖರೀದಿಗೆ ಒಪ್ಪಿಗೆ ಕೊಟ್ಟಿತ್ತು. ಈಗ ಯಾಕೆ ಏಕಾಏಕಿಯಾಗಿ ಖಾಲಿ ಜಾಗ ವಶಪಡಿಸಿಕೊಳ್ಳಲು ಮುಂದಾಗಿದ್ದೀರಿ? ಯಾರಿಗೆ ಹಂಚಲು ಈ ಆದೇಶ ಮಾಡಿದ್ದೀರಾ ಅಂತ ಈಶ್ವರ್ ಖಂಡ್ರೆಗೆ ಪ್ರಶ್ನೆ ಮಾಡಿದರು.

    1963 ರಲ್ಲಿ ಖರೀದಿ ವೇಳೆ ಆದ ಎಲ್ಲಾ ದಾಖಲಾತಿಗಳು ಹೆಚ್‌ಎಂಟಿ ಬಳಿ ಇವೆ. ಎಚ್‌ಎಂಟಿ, ಇಸ್ರೋದವರು NOC ಕೇಳಿದ್ರೆ ಕೊಡುತ್ತಿಲ್ಲ. ಆದರೆ ಖಾಸಗಿ ಸಂಸ್ಥೆ ಪ್ರೆಸ್ಟೀಜ್ ಕಂಪನಿ ಕೇಳಿದ ಕೂಡಲೇ ಎನ್‌ಒಸಿ ಕೊಡುತ್ತಾರೆ. ‌ ಇದರಲ್ಲಿ ಬ್ರ್ಯಾಂಡ್ ಬೆಂಗಳೂರು ಮಾಡುವವರ ಕೈವಾಡ ಇದೆಯಾ ಅಂತ ಪರೋಕ್ಷವಾಗಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕಿಡಿಕಾರಿದರು.

    ಕುಮಾರಸ್ವಾಮಿ ಮೇಲೆ ಇರುವ ದ್ವೇಷಕ್ಕೆ ರಾಜ್ಯವನ್ನು ಈಶ್ವರ್ ಖಂಡ್ರೆ ಹಾಳು ಮಾಡಿಕೊಳ್ಳೋದು ಬೇಡ. ನನಗೆ ಲಾಟರಿ ಸಿಸ್ಟಮ್ ನಲ್ಲಿ ದೇವರು ಅಧಿಕಾರ ಕೊಟ್ಟಿದ್ದಾರೆ. ಇದರಲ್ಲಿ ನಾಲ್ಕು ಒಳ್ಳೆ ಕೆಲಸ ಮಾಡಬೇಕು ಅಂತ ಇದ್ದೇನೆ. ಇದರಲ್ಲಿ ರಾಜಕೀಯ ಮಾಡಬೇಡಿ. ಹೆಚ್‌ಎಂಟಿ ಜಾಗ ಧರ್ಮಕ್ಕೆ ಕೊಟ್ಟಿಲ್ಲ. ಈಶ್ವರ್ ಖಂಡ್ರೆ ಎಲ್ಲಾ ದಾಖಲಾತಿ ತರಿಸಿಕೊಂಡು ಓದಬೇಕು ಅಂತ ಕಿಡಿಕಾರಿದರು. ಇದನ್ನೂ ಓದಿ: Tungabhadra Dam| ಗೇಟ್‌ ಕೊಚ್ಚಿ ಹೋದ ಪ್ರಕರಣದ ತನಿಖೆಯಾಗಲಿ: ಹೆಚ್‌ಡಿಕೆ ಆಗ್ರಹ

    ಹೆಚ್‌ಎಂಟಿ ಸೇರಿ ಸರ್ಕಾರಿ ಸ್ವಾಮ್ಯದ ಕಾರ್ಖಾನೆ, ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡಲು ಮುಂದಾಗಿದ್ದೇನೆ. ಇದಕ್ಕೆ ನೀವು ರಾಜಕೀಯ ಮಾಡುವುದು ಬೇಡ ಅಂತ ಕಿಡಿಕಾರಿದರು. ಯಾವುದೇ ಕಾರಣಕ್ಕೂ ಹೆಚ್‌ಎಂಟಿ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಅಂತ ಈಶ್ವರ್ ಖಂಡ್ರೆಗೆ ಸವಾಲ್ ಹಾಕಿದರು.

     

  • ವಯನಾಡು ದುರಂತದಿಂದ ಎಚ್ಚೆತ್ತ ಸರ್ಕಾರ – ಅಕ್ರಮ ರೆಸಾರ್ಟ್, ಹೋಮ್‌ ಸ್ಟೇ, ಬಡಾವಣೆ ತೆರವಿಗೆ ಸೂಚನೆ

    ವಯನಾಡು ದುರಂತದಿಂದ ಎಚ್ಚೆತ್ತ ಸರ್ಕಾರ – ಅಕ್ರಮ ರೆಸಾರ್ಟ್, ಹೋಮ್‌ ಸ್ಟೇ, ಬಡಾವಣೆ ತೆರವಿಗೆ ಸೂಚನೆ

    ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ (Forest Encroachment) ತೆರವಿಗೆ ಮತ್ತು ಅನಧಿಕೃತ ಹೋಮ್‌ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

    ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

    ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಬೇಕು. ಒಂದು ತಿಂಗಳ ಒಳಗಡೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಸೂಚಿಸಿದ್ದಾರೆ. ಇದನ್ನೂ ಓದಿ: Electoral Bonds | ತನಿಖೆಗೆ ಎಸ್‌ಐಟಿ ರಚನೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ

    ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದೆ.

    ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ. ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ತಮ್ಮ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

    ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಿದ್ದು ಚಾರಣಕ್ಕೂ ಕಡಿವಾಣ ಬೀಳುವ ಸಾಧ್ಯತೆ ಇದೆ.

     

  • ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ: ಈಶ್ವರ್‌ ಖಂಡ್ರೆ

    ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ: ಈಶ್ವರ್‌ ಖಂಡ್ರೆ

    ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ. ಖಂಡ್ರೆ (Eshwar Khandre) ತಿಳಿಸಿದ್ದಾರೆ.

    ಮಂಗಳೂರಿನ ಪಡೀಲ್‌ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

    ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ಕಾರಣ ಚಾರಣಿಗರು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಾಗಿರುತ್ತದೆ ಜೊತೆಗೆ ಇಲ್ಲಿನ ಜೀವರಾಶಿ ಮತ್ತು ಮೊಳಕೆಯೊಡೆಯುವ ಸಸ್ಯರಾಶಿಗೂ ತೊಂದರೆ ಆಗುತ್ತದೆ ಹೀಗಾಗಿ ಆಗಸ್ಟ್ ನಿಂದ ಚಾರಣಕ್ಕೆ ಮರು ಚಾಲನೆ ನೀಡುವುದಾಗಿ ತಿಳಿಸಿದರು.

    ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಆದೇ ರೀತಿ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಕಂಗಡಿಕಲ್, ನರಸಿಂಹ ಪರ್ವತಗಳಲ್ಲಿ ಅರಣ್ಯ ಇಲಾಖೆ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಇದಲ್ಲದೆ ಎತ್ತಿನಭುಜ ಸೇರಿದಂತೆ ಕೆಲವು ಕಡೆಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಇರುವುದಿಲ್ಲ. ಈ ಎಲ್ಲ ಚಾರಣ ಪಥಗಳಿಗೂ ಒಂದೇ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕ್ ಮಾಡಿಸಲು ಅವಕಾಶ ಕಲ್ಪಿಸಲಾಗುವುದು ಎಂದರು. ಇದನ್ನೂ ಓದಿ: ಕಾಲೇಜಿನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!

    ಚಾರಣಿಗರ ಸಂಖ್ಯೆಗೆ ಮಿತಿ: ಕೆಲವು ಪ್ರವಾಸಿ ಸಂಸ್ಥೆಗಳು (ಟೂರ್ ಆಪರೇಟರ್ ಗಳು) ಚಾರಣಪಥಗಳ ಬಗ್ಗೆ ಯುವಜನರಲ್ಲಿ ಅತಿಯಾದ ಆಸಕ್ತಿ ಕೆರಳಿಸುತ್ತಿದ್ದು,ಇದರ ಪರಿಣಾಮವಾಗಿ ಚಾರಣಪಥಗಳಲ್ಲಿ ವಾರಾಂತ್ಯದಲ್ಲಿ ದಟ್ಟಣೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯೂ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಕೃತಿ, ಪರಿಸರ ಉಳಿಸಲು ಕೆಲವು ಕಠಿಣ ಕ್ರಮ ಅತ್ಯಗತ್ಯ ಎಂದು ಹೇಳಿದರು.

    ಪ್ರತಿಯೊಂದು ಚಾರಣ ಪಥದಲ್ಲೂ ಅದರ ವಿಸ್ತಾರ, ಅಲ್ಲಿರುವ ಗೈಡ್ ಮತ್ತು ಇತರ ಮೂಲಭೂತ ಸೌಲಭ್ಯವನ್ನು ಗಮನದಲ್ಲಿಟ್ಟುಕೊಂಡು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗುವುದು. ಯಾವುದೇ ಚಾರಣಪಥದಲ್ಲಿ ಸೀಮಿತ ಸಂಖ್ಯೆಗಿಂತ ಹೆಚ್ಚಿನ ಚಾರಣಿಗರಿಗೆ ಅವಕಾಶವಾಗದಂತೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲಾಗುವುದು ಎಂದರು.

    ಒಂದೊಮ್ಮೆ ಯಾವುದೇ ಚಾರಣ ಪಥದಲ್ಲಿ ಹೆಚ್ಚಿನ ಸಂಖ್ಯೆಯ ಚಾರಣಿಗರಿಗೆ ಅವಕಾಶ ನೀಡಲಾಗುತ್ತಿದೆ ಎಂದು ದೂರು ಬಂದರೆ, ಈ ಬಗ್ಗೆ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಒಂದೇ ವೆಬ್ ಸೈಟ್ ನಲ್ಲಿ ವಿವಿಧ ಚಾರಣ ಪಥಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಇರುವ ಕಾರಣ, ಒಂದು ಚಾರಣ ಪಥದಲ್ಲಿ ಟಿಕೆಟ್ ಸಿಗದಿದ್ದರೆ ಮತ್ತೊಂದಕ್ಕೆ ಟಿಕೆಟ್ ಕಾಯ್ದಿರಿಸುವ ಅವಕಾಶವೂ ಇರುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ವಿವರಿಸಿದರು.

  • ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

    ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

    ಬೆಂಗಳೂರು: ಬನ್ನೇರುಘಟ್ಟ (Bannerughatta) ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ.

    ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.

    ಮೈಸೂರು ಶ್ರೀ ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.

    ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು. ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.

    ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.

    ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು.

    ಇತರ ನಿರ್ಣಯಗಳು:
    >. ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.

    >. ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.

    >. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.

    >. ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.

  • ಸಾಗರ್‌ ಖಂಡ್ರೆ ಗೆಲುವು – ಬೀದರ್‌ನಲ್ಲಿ ಈಗ ಭಾಲ್ಕಿ ಶಕ್ತಿ ಕೇಂದ್ರ!

    ಸಾಗರ್‌ ಖಂಡ್ರೆ ಗೆಲುವು – ಬೀದರ್‌ನಲ್ಲಿ ಈಗ ಭಾಲ್ಕಿ ಶಕ್ತಿ ಕೇಂದ್ರ!

    ಬೀದರ್‌: ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶದಿಂದಾಗಿ ಬೀದರ್‌ನಲ್ಲಿ (Bidar) ಭಾಲ್ಕಿ ಕ್ಷೇತ್ರ ಈಗ ರಾಜಕೀಯವಾಗಿ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ.

    ಬೀದರ್ ಲೋಕಸಭಾ ಕೇತ್ರದ ಚುನಾವಣೆಯಲ್ಲಿ ಖಂಡ್ರೆ ಪರಿವಾರದ ಮೂರನೇ ತಲೆಮಾರಿನ 26 ವಯಸ್ಸಿನ ಸಾಗರ ಖಂಡ್ರೆ ಗೆಲುವು ಭಾಲ್ಕಿ (Bhalki) ಹಿರಿಮೆ ಮತ್ತಷ್ಟು ಎತ್ತರಕ್ಕೇರಿಸಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಹಾಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು 1.28 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಪರಾಭವಗೊಳಿಸುವ ಮೂಲಕ ಸಾಗರ್ ಖಂಡ್ರೆ (Sagar Khandre) ಕಿರಿಯ ಸಂಸದರಾಗಿ ಸಂಸತ್ತಿಗೆ ಎಂಟ್ರಿ ಕೊಟ್ಟಿದಾರೆ.

    ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ, ಮಾಜಿ ಶಾಸಕ ದಿವಂಗತ ವಿಜಯ ಕುಮಾರ್ ಖಂಡ್ರೆ, ಹಾಲಿ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಬೀದರ್ ಡಿಸಿಸಿ ಬ್ಯಾಂಕ್ ಮತ್ತು ಮಹಾತ್ಮಾಗಾಂಧಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಮರ ಖಂಡ್ರೆ ಹಾಗೂ ನೂತನ ಸಂಸದ ಸಾಗರ್ ಖಂಡ್ರೆ ಭಾಲ್ಕಿ ನೆಲದವರಾಗಿದ್ದಾರೆ. ಹೀಗಾಗಿ ಖಂಡ್ರೆ ಕುಟುಂಬ ಈಗ ಮತ್ತೆ ರಾಜಕೀಯವಾಗಿ ಪಾರಮ್ಯ ಮೆರೆದಿದ್ದು ಭಾಲ್ಕಿ ರಾಜಕೀಯ ಪವರ್ ಸೆಂಟರ್‌ ಆಗಿ ಬದಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ

    ಈ ಹಿಂದೆ ಔರಾದ್ (Aurad) ರಾಜಕೀಯ ಶಕ್ತಿ ಕೇಂದ್ರವಾಗಿತ್ತು. ಔರಾದ್ ಕ್ಷೇತ್ರದಲ್ಲಿ ಹಾಲಿ ಶಾಸಕ ಪ್ರಭು ಚವ್ಹಾಣ್‌ ಅವರು ಹಿಂದಿನ ಬಿಜೆಪಿ ಸರಕಾರದಲ್ಲಿ ಪಶು ಸಂಗೋಪನೆ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಜೊತೆಗೆ ಔರಾದ್‌ನವರೇ ಆದ ಉಮಾಕಾಂತ್ ನಾಗಮಾರಪ್ಪಳ್ಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಭಗವಂತ ಖೂಬಾ ಕೇಂದ್ರ ಸಚಿವರಾದ ಮೇಲೆ ಎಲ್ಲದ್ದಕ್ಕೂ ಔರಾದ್ ಪವರ್ ಸೆಂಟರ್‌ ಆಗಿ ಬದಲಾಗಿತ್ತು. ಆದರೆ ಈಗ ಲೋಕಸಭಾ ಚುನಾವಣೆಯ ಬಳಿಕ ಜಿಲ್ಲೆಯ ಚಿತ್ರಣ ಬದಲಾಗಿದ್ದು ಖಂಡ್ರೆ ಪರಿವಾರ ಪವರ್ ಪುಲ್ ಆಗಿದೆ.

    ಮೊದಲು ಔರಾದ್ ತಾಲೂಕಿನಲ್ಲಿಯೇ ಉಸ್ತುವಾರಿ ಸಚಿವ, ಕೇಂದ್ರ ಸಚಿವ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹೀಗೆ ಹಲವಾರು ಪ್ರಮುಖ ಹುದ್ದೆಗಳಿದ್ದವು. ಯಾವುದೇ ಕೆಲಸಕ್ಕೂ ಔರಾದ್‌ನತ್ತ ಮುಖ ಮಾಡುತ್ತಿದ್ದ ಜನತೆ ಈಗ ಭಾಲ್ಕಿ ಕಡೆ ನೋಡುತ್ತಿದ್ದಾರೆ. ಇದನ್ನೂ ಓದಿ: ನಟಿ, ನೂತನ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ

    ಶತಾಯುಷಿ ಡಾ. ಭೀಮಣ್ಣ ಖಂಡ್ರೆಯವರು ಒಂದು ಬಾರಿ ಸಚಿವರಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ಭೀಮಣ್ಣ ಖಂಡ್ರೆಯವರ ಪುತ್ರ ಈಶ್ವರ್‌ ಖಂಡ್ರೆ (Eshwara Khandre) ಅವರು ಕ್ರಮವಾಗಿ 2013, 2018 ಮತ್ತು 2023 ಭಾಲ್ಕಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಸದ್ಯ ಅರಣ್ಯ ಖಾತೆ ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

  • ಪೆನ್‌ಡ್ರೈವ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ: ಈಶ್ವರ್ ಖಂಡ್ರೆ

    ಪೆನ್‌ಡ್ರೈವ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ: ಈಶ್ವರ್ ಖಂಡ್ರೆ

    ಬೆಂಗಳೂರು: ಪೆನ್‌ಡ್ರೈವ್ ಪ್ರಕರಣದಲ್ಲಿ (Pendrive Case) ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ.

    ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ, ಗೃಹ ಸಚಿವರು ಹಗಲಿರುಳು ಶ್ರಮ ಪಡುತ್ತಿದ್ದಾರೆ. ಅಪರಾಧಿಗಳನ್ನು ಮಟ್ಟ ಹಾಕುವ ಕೆಲಸ ನಡೆಯುತ್ತಿದೆ. ಪೆನ್‌ಡ್ರೈವ್ ಕೇಸ್ ಎಸ್‌ಐಟಿ ತನಿಖೆ ಮಾಡುತ್ತಿದೆ. ಯಾರು ತಪ್ಪಿತಸ್ಥರೋ ಅವರಿಗೆ ಶಿಕ್ಷೆ ಆಗಲಿದೆ. ಮಾಜಿ ಸಿಎಂ ಹೆಚ್‌ಡಿಕೆ ಸೇರಿದಂತೆ ಪ್ರತಿಪಕ್ಷಗಳು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳ

    ಪಾರದರ್ಶಕ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾರ ಯಾರ ಕೈವಾಡ ಇದೆ ಎಲ್ಲಾ ಹೊರಗೆ ಬರುತ್ತದೆ. ಇದೊಂದು ಗಂಭೀರ ಪ್ರಕರಣ. ಕೇಂದ್ರ ಸರ್ಕಾರ ಸ್ವಯಂ ಪ್ರೇರಣೆಯಿಂದ ಡಿಪ್ಲೊಮೆಟಿಕ್ ಪಾಸ್‌ಪೋರ್ಟ್ ರದ್ದು ಮಾಡಬೇಕು. ಕೇಂದ್ರ ಸರ್ಕಾರ ಸರಿಯಾದ ಸಹಕಾರ ನೀಡಬೇಕು. ಬಿಜೆಪಿಗೆ (BJP) ಅಷ್ಟೆಲ್ಲಾ ಬದ್ಧತೆ ಇದ್ದರೆ ಪ್ರಜ್ವಲ್‌ನನ್ನು ಕರೆದುಕೊಂಡು ಬಂದು ಒಪ್ಪಿಸಬೇಕಿತ್ತು. ಜನರ ಗಮನ ಸೆಳೆಯಲು ಪ್ರತ್ಯಾರೋಪಗಳನ್ನು ಮಾಡುತ್ತಿದೆ. ಕಾನೂನು ತನ್ನ ಕೆಲಸ ಮಾಡಲು ಎಲ್ಲರೂ ಅವಕಾಶ ನೀಡಬೇಕು. ಮುಖ್ಯ ಆರೋಪಿ ಇದರಲ್ಲಿ ಯಾರು? ಅವರಿಗೆ ಶಿಕ್ಷೆ ಆಗಬೇಕೋ ಬೇಡವೋ? ಯಾಕೆ ಬಿಜೆಪಿ-ಜೆಡಿಎಸ್‌ನವರು ಶಂಕೆ ಮಾಡುತ್ತಿದ್ದಾರೆ? ದೌರ್ಜನ್ಯ ಮಾಡಿದ್ದು, ಅತ್ಯಾಚಾರ ಮಾಡಿದ್ದು ಯಾರು ಎಂಬುದು ಮುಖ್ಯ ಎಂದು ಹರಿಹಾಯ್ದರು. ಇದನ್ನೂ ಓದಿ: ಪ್ರಧಾನಿಗೆ ಎರಡು ಪತ್ರ ಬರೆದ್ರೂ ಉತ್ತರ ಇಲ್ಲ: ಸಿದ್ದರಾಮಯ್ಯ

    ಕಾಂಗ್ರೆಸ್ ನಾಯಕರಿಗೆ ಹೇಳಿ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ ಎಂಬ ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಶೋಕ್ ಅವರ ಹೇಳಿಕೆಗೆ ತಲೆಬುಡ ಇದ್ಯಾ? ಯಾರಾದರೂ ಅದನ್ನು ನಂಬುತ್ತಾರಾ? ಪ್ರಕರಣ ದಾಖಲಿಸಿದ್ದು ಯಾರು, ನಮ್ಮ ಸರ್ಕಾರ. ಅವರಿಗೆ ಬೆಂಬಲ ಕೊಡುವ ಅವಶ್ಯಕತೆ ಏನಿದೆ? ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕೆಲಸ. ಸುಳ್ಳೇ ಅವರ ಮನೆ ದೇವರು. ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಹೊರಟ್ಟಿದ್ದಾರೆ. ಇವರೇ ಕಳುಹಿಸಿಬಿಟ್ಟು ಬೇರೆಯವರ ಮೇಲೆ ಆರೋಪ ಮಾಡುತ್ತಿದ್ದಾರೆ. ಲೋಕಸಭೆಯಲ್ಲಿ ಇವರನ್ನು ಜನ ತಿರಸ್ಕರಿಸುತ್ತಾರೆ. ಮುಂದೆ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲೂ ಜನ ಅವರಿಗೆ ಪಾಠ ಕಲಿಸುತ್ತಾರೆ ಎಂದರು. ಇದನ್ನೂ ಓದಿ: ಪಿಎಂ ಹುದ್ದೆಗೆ ರಾಜ್ಯದಿಂದ ಯಾರೂ ಅಭ್ಯರ್ಥಿ ಇಲ್ಲ ಎಂದಿಲ್ಲ: ಸಿಎಂ ಸ್ಪಷ್ಟನೆ

    ಫೋನ್ ಟ್ಯಾಪಿಂಗ್ ಇವೆಲ್ಲ ಮಾಡೋರು ಬಿಜೆಪಿಯವರು. ಸಿ.ಡಿನೂ ಅವರೇ ಬಿಡುಗಡೆ ಮಾಡುತ್ತಾರೆ. ದೂರು ಅವರೇ ಕೊಡುತ್ತಾರೆ, ತನಿಖೆಯೂ ನಾವೇ ಮಾಡುತ್ತೇವೆ ಎನ್ನುತ್ತಾರೆ. ತೀರ್ಪು ಅವರೇ ಕೊಡುತ್ತಾರೆ. ಬಿಜೆಪಿಯವರಿಗೆ ಮಾನ-ಮರ್ಯಾದೆ ಇಲ್ಲ. ಕಾನೂನಿನ ಬಗ್ಗೆ ಲೆಕ್ಕ ಇಲ್ಲ. ಅವರು ಹೇಳಿದ್ದೇ ಕಾನೂನು ಎನ್ನುತ್ತಾರೆ. ಅವರ ಹೇಳಿಕೆಯನ್ನು ನಂಬಬಹುದಾ? ಜನ ಅವರ ಬಗ್ಗೆ ಅರ್ಥ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ – ಡಿಸಿ, ಸಿಇಒಗಳಿಗೆ ಹೈ ಅಲರ್ಟ್ ಎಂದ ಸಿಎಂ ಸಿದ್ದರಾಮಯ್ಯ

  • ಮಹಾರಾಷ್ಟ್ರ ಸಿಎಂಗೆ ಸಚಿವ ಖಂಡ್ರೆ ಖಡಕ್ ವಾರ್ನಿಂಗ್

    ಮಹಾರಾಷ್ಟ್ರ ಸಿಎಂಗೆ ಸಚಿವ ಖಂಡ್ರೆ ಖಡಕ್ ವಾರ್ನಿಂಗ್

    ಬೀದರ್: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Ekanath Shinde) ರಾಜ್ಯಕ್ಕೆ ಕಾಲಿಡಲಿ ನೋಡೋಣ ಎಂದು ಹೇಳುವ ಮೂಲಕ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಖಡಕ್ (Eshwar Khandre) ವಾರ್ನಿಂಗ್ ಕೊಟ್ಟಿದ್ದಾರೆ.

    ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಹಾರಾಷ್ಟ್ರದ ಮಾದರಿ ರಾಜ್ಯದಲ್ಲೂ ನಾಥ ಆಪರೇಷನ್ ಸಿಎಂ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿದರು. ಸಂವಿಧಾನಿಕ ಸಿಎಂ ಸ್ಥಾನದಲ್ಲಿದ್ದುಕೊಂಡು ಈ ರೀತಿ ಹೇಳೋಕೆ ಶಿಂಧೆಗೆ ನಾಚಿಕೆಯಾಗಬೇಕು. ಬರೀ ರಾಜ್ಯದಲ್ಲಿ ಕಳವು ಮಾಡಬೇಕು ಅನ್ನೋದೇ ಅವರ ಉದ್ದೇಶ ಎಂದು ತೀರುಗೇಟು ನೀಡಿದರು.

    ಆಪರೇಷನ್ ಕಮಲ ಮಾಡೋಣ ಅನ್ನೋದು ಒಂದು ಹಣ, ಆಸ್ತಿ ಕಸಿದುಕೊಳ್ಳುವ ಕೆಲಸ ಮಾಡೋಕೆ, ಇಂಥೋರಿಗೆ ಛೀಮಾರಿ ಹಾಕೋಣ. ಇಲ್ಲೇನು ಕಾಂಗ್ರೆಸ್ ನವರು ಗಿರಾಕಿಗಳು ಇದ್ದಾರಾ ಹೊತ್ತುಕೊಂಡು ಹೋಗೋಕೆ. ಅವರಿಗೆ ಇಲ್ಲಿ ಸುಮ್ಮನೆ ಬಿಡುತ್ತಾರಾ ಎಂದು ಶಿಂಧೆಗೆ ಖಂಡ್ರೆ ಟಾಂಗ್ ನೀಡಿದರು.

    ಏಕನಾಥ್‌ ಶಿಂಧೆ ಹೇಳಿದ್ದೇನು..?: ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ (Maharastra) ಸತಾರಾದಲ್ಲಿ ಮಾತನಾಡಿದ್ದ ಶಿಂಧೆ, ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬ ಸ್ಫೊಟಕ ಹೇಳಿಕೆಯೊಂದನ್ನು ನೀಡಿದ್ದರು. ನಾನು ಇತ್ತಿಚೇಗೆ ಕರ್ನಾಟಕದ (Karnataka) ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲಿಯೂ ‘ನಾಥ’ ಆಪರೇಷನ್ ಮಾಡೋದಿದೆ’ ಅಂದಿದ್ದಾರೆ. ‘ನಾಥ ಆಪರೇಷನ್’ ಅಂದ್ರೆ ಏನು..? ಅಂತ ಕೇಳಿದೆ. ಆಗ ಅವರು, ನೀವು ಮಹಾರಾಷ್ಟ್ರದ ಮಹಾಘಟಬಂಧನ ಸರ್ಕಾರ ಪತನ ಮಾಡಿದ್ರಿ. ಹೀಗಾಗಿ ನಿಮ್ಮ ಅನುಭವ ನಮಗೆ ಬಹಳ ಅವಶ್ಯಕವಿದೆ ಎಂದರು. ಖಂಡಿತವಾಗಿಯೂ ನಾನು ಬರುತ್ತೇನೆ ಎಂದು ಹೇಳಿದ್ದೇನೆ ಅಣತಾ ಇಂದು ಶಿಂಧೆ ಹೇಳುವ ಮೂಲಕ ಆಪರೇಷನ್ ಸುಳಿವು ಕೊಟ್ಟಿದ್ದರು. ಶಿಂಧೆ ಹೇಳಿಕೆ ರಾಜ್ಯ ರಾಜಕೀಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.