Tag: Eshwara Khandre

  • ಒಂದು ಮತ ಕಳವಿಗೆ 80 ರೂ. ʻಕೂಲಿʼ – ಬಿಜೆಪಿ ಮೇಲೆ ಆರೋಪ ಹೊರಿಸಿದ ಈಶ್ವರ್‌ ಖಂಡ್ರೆ

    ಒಂದು ಮತ ಕಳವಿಗೆ 80 ರೂ. ʻಕೂಲಿʼ – ಬಿಜೆಪಿ ಮೇಲೆ ಆರೋಪ ಹೊರಿಸಿದ ಈಶ್ವರ್‌ ಖಂಡ್ರೆ

    – ರಾಹುಲ್‌ ಗಾಂಧಿ ಆರೋಪ ಸತ್ಯ; ಅಕ್ರಮದಿಂದಲೇ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬಂದಿದೆ
    – ಕಾಲ್ ಸೆಂಟರ್ ಸಂಸ್ಥೆ ಹುಟ್ಟುಹಾಕಿದ್ದೇ ಬಿಜೆಪಿ; ಸಚಿವರ ಆರೋಪ

    ಬೆಂಗಳೂರು: ರಾಹುಲ್‌ ಗಾಂಧಿ ಅವರ ಆರೋಪ ಸತ್ಯವಾದ ಆರೋಪ. ಅಕ್ರಮದಿಂದಲೇ ಬಿಜೆಪಿ ಕೇಂದ್ರದಲ್ಲೂ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ಗೆ ಒಲವು ಇರುವ ಕಡೆ ಕಾಲ್‌ ಸೆಂಟರ್‌ ಸಂಸ್ಥೆಯನ್ನ ಹುಟ್ಟುಹಾಕಿ ಮೋಸ ಮಾಡಿದ್ದಾರೆಂದು ಸಚಿವ ಈಶ್ವರ್‌ ಖಂಡ್ರೆ (Eshwara Khandre) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಆಳಂದ (Alanda) ಕ್ಷೇತ್ರದಲ್ಲಿ ʻಒಂದು ಮತದಾರನ ಚೀಟಿ ಅಕ್ರಮವಾಗಿ ರದ್ದುಪಡಿಸಲು ಅರ್ಜಿ ಸಲ್ಲಿಸಿದ್ದಕ್ಕೆ 80 ರೂ. ಕೂಲಿʼ ನೀಡಿರುವ ವಿಚಾರವನ್ನು ಎಸ್‌ಐಟಿ ತನಿಖೆ (SIT Investigation) ಬಯಲಿಗೆಳೆದಿರುವ ಕುರಿತು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

    ಬಿಜೆಪಿ (BJP) ಎಂದೂ ಜನರ ಮತದಿಂದ, ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ. ಬರೀ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಅಕ್ರಮ ಮಾಡುವ ಮೂಲಕ ಅಧಿಕಾರಕ್ಕೆ ಬಂದಿದೆ. ಸ್ವಾಯತ್ತ ಸಂಸ್ಥೆಗಳನ್ನ ದುರುಪಯೋಗ ಪಡಿಸಿಕೊಂಡು ಅಧಿಕಾರಕ್ಕೆ ಬಂದಿದೆ. ಚುನಾವಣಾ ಆಯೋಗವನ್ನೇ ದುರುಪಯೋಗ ಮಾಡಿಕೊಂಡಿರೋದು ನಾವು ನೋಡ್ತಾ ಇದ್ದೀವಿ. ರಾಹುಲ್ ಗಾಂಧಿ (Rahul Gandhi) ಮಾಡಿದ್ದ ಆರೋಪ ಸತ್ಯವಾದ ಆರೋಪ. ತನಿಖೆಯ ಸಂದರ್ಭದಲ್ಲಿ ಅದು ಸಾಬೀತು ಆಗ್ತಾ ಇದೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್‌ ಮತದಾನದ ಹಕ್ಕು ಎಲ್ಲರಿಗೂ ಕೊಡಿಸುತ್ತೆ
    ರಾಹುಲ್ ಗಾಂಧಿ ಹೇಳಿಕೆಯನ್ನ ಬಿಜೆಪಿಯವರು ಅಲ್ಲಗಳೆಯುತ್ತಿದ್ದರು. ಕೆಲವು ಕಡೆ ಕಾಂಗ್ರೆಸ್ ಕಡೆ ಒಲವು ಇದೆ, ಅವರಿಗೆ ಹಣ ನೀಡಿ ಕಾಲ್ ಸೆಂಟರ್ ಮೂಲಕ ಸಂಸ್ಥೆಯನ್ನ ಹುಟ್ಟು ಹಾಕಿದ್ದಾರೆ. ಆಸೆ ತೋರಿಸಿ ಮೋಸ ಮಾಡಿದ್ದಾರೆ. ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕೆಲಸ ಮಾಡಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದದ್ದು. ಇದನ್ನ ತೀವ್ರವಾಗಿ ಖಂಡಿಸಬೇಕು. ಇದು ರಾಜ್ಯ ದೇಶದ್ಯಾಂತ ಚರ್ಚೆ ಆಗ್ತಾಇದೆ. ಕೇಂದ್ರದಲ್ಲೂ ಕೂಡ ಬಿಜೆಪಿ ಅಕ್ರಮದಿಂದಲೇ ಅಧಿಕಾರಕ್ಕೆ ಬಂದಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ತೊಲಗಬೇಕು ಅನ್ನೊದು ಎಲ್ಲರ ಮನಸ್ಸಿನಲ್ಲಿ ಇದೆ. ಹೀಗಾಗಿ ಇದು ತಾರ್ಕಿಕ ಅಂತ್ಯಕ್ಕೆ ಹೋಗಿ ಸಂವಿಧಾನ ಪ್ರಜಾಪ್ರಭುತ್ವ ಉಳಿಸಬೇಕು. ಮತದಾನದ ಹಕ್ಕು ಎಲ್ಲರಿಗೂ ಸಿಗಬೇಕು. ಇದನ್ನ ನಮ್ಮ ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದಿದ್ದಾರೆ.

    ಇನ್ನೂ ಮುಂದಿನ ನಾಯಕತ್ವ ವಿಚಾರ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ,ಏನ್ ಹೇಳಿದ್ದಾರೆ ಅಂತಾ ಮಾಹಿತಿ ಇಲ್ಲ. ಈಗಾಗಲೇ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ ಅನಿಸುತ್ತೆ ಎಂದು ತಿಳಿಸಿದ್ದಾರೆ.

  • ಸಕ್ರೆಬೈಲ್​ ಆನೆಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ – ತನಿಖೆಗೆ ಈಶ್ವರ್‌ ಖಂಡ್ರೆ ಆದೇಶ

    ಸಕ್ರೆಬೈಲ್​ ಆನೆಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ – ತನಿಖೆಗೆ ಈಶ್ವರ್‌ ಖಂಡ್ರೆ ಆದೇಶ

    ಶಿವಮೊಗ್ಗ: ನಗರದಲ್ಲಿ (Shivamogga) ನಡೆದ ದಸರಾದದಲ್ಲಿ ಭಾಗವಹಿಸಿದ್ದ ಸಕ್ರೆಬೈಲ್ (Sakrebyle)​ ಆನೆಬಿಡಾರದ ಬಾಲಣ್ಣ, ಸಾಗರ್​ ಸೇರಿದಂತೆ ಮೂರು ಆನೆಗಳು (Elephant) ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಅರಣ್ಯ ಸಚಿವ ಈಶ್ವರ್​ ಖಂಡ್ರೆ (Eshwara Khandre) ತನಿಖೆ ಕೈಗೊಂಡು ಆಗಿರುವ ವೈಫಲ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿ ಪ್ರಕಟಣೆ ಹೊರಡಿಸಿದ್ದಾರೆ.

    ಪ್ರಕಟಣೆಯಲ್ಲಿ ಏನಿದೆ?
    ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಪತ್ರ ಬರೆದು ಈ ವಿಷಯವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಕಳುಹಿಸಲಾಗಿದ್ದ 35 ವರ್ಷದ ಬಾಲಣ್ಣ ಆನೆಗೆ ಐ.ವಿ. (IV) ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಆದ ನಿರ್ಲಕ್ಷ್ಯದಿಂದ ಸೋಂಕು ತಗುಲಿ ನರಳುತ್ತಿದೆ. ಇದರ ಜೊತೆಗೆ ಶಿಬಿರದಲ್ಲಿರುವ ಸಾಗರ್ ಸೇರಿದಂತೆ ಒಟ್ಟು 4 ಆನೆಗಳು ಗಾಯದಿಂದ ಬಳಲುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು. ಇದನ್ನೂ ಓದಿ: ಶಿವಮೊಗ್ಗ ದಸರಾ | ಜಂಬೂ ಸವಾರಿಗೆ ಅದ್ದೂರಿ ಚಾಲನೆ

    ರಾಜ್ಯದಲ್ಲಿರುವ ಎಲ್ಲಾ ಆನೆ ಶಿಬಿರಗಳಲ್ಲಿ ಮತ್ತು ಮೃಗಾಲಯಗಳಲ್ಲಿ ವೈದ್ಯಾಧಿಕಾರಿ ಇರಬೇಕು. ಸದ್ಯ ಪಶುವೈದ್ಯರ ಕೊರತೆಯಿರುವ ಬಗ್ಗೆ ವರದಿಯಾಗಿದ್ದು, ಕೂಡಲೇ ಗುತ್ತಿಗೆ ಆಧಾರದ ಮೇಲೆ ಅಥವಾ ನಿಯೋಜನೆಯ ಮೂಲಕ ವೈದ್ಯರನ್ನು ತಕ್ಷಣ ನೇಮಕ ಮಾಡಿಕೊಳ್ಳಬೇಕು. ಬಾಲಣ್ಣ ಆನೆಗೆ ಚುಚ್ಚುಮದ್ದು ನೀಡುವಾಗ ವೈದ್ಯಾಧಿಕಾರಿ, ಇಲಾಖಾ ಅಧಿಕಾರಿ ಅಥವಾ ಸಿಬ್ಬಂದಿಯ ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ, ಅವರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸಿನೊಂದಿಗೆ ಒಂದು ವಾರದೊಳಗೆ ಸಮಗ್ರ ವರದಿಯನ್ನು ಕಡ್ಡಾಯವಾಗಿ ಸಚಿವ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ದಸರಾ – ತಾಲೀಮು ಆರಂಭಿಸಿದ ಗಜಪಡೆ

  • ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ

    ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ

    ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

    ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

    ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಿ. ಹುಲಿ ಹಂತಕರನ್ನು ಪತ್ತೆ ಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

    ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

  • ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ: ಈಶ್ವರ್ ಖಂಡ್ರೆ ಕಿಡಿ

    ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ: ಈಶ್ವರ್ ಖಂಡ್ರೆ ಕಿಡಿ

    ಬೆಂಗಳೂರು: ಚುನಾವಣಾ ಆಯೋಗ (Election Commission of India) ಬಿಜೆಪಿ (BJP) ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwara Khandre) ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಕಾಂಗ್ರೆಸ್‌ (Congress) ನಾಯಕ ರಾಹುಲ್ ಗಾಂಧಿಯವರ (Rahul Gandhi)  ವೋಟ್ ಚೋರಿ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಅಳಂತದಲ್ಲಿ ಮತದಾರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅವರು ಖಚಿತ ಪಡಿಸಿಕೊಂಡು ಈ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್‌ ಗಾಂಧಿ ಬಾಂಬ್‌

    ರಾಹುಲ್ ಗಾಂಧಿಯವರ ಜೊತೆ ಇಡೀ ದೇಶ ಇದೆ. ನಮ್ಮ ಮತ ನಮ್ಮ ಹಕ್ಕು ಹೋರಾಟ ಮಾಡ್ತೀವಿ. ಹಿಂಬಾಗಿಲಿನಿಂದ ಬಂದಿರೋ ಈ ಸರ್ಕಾರವನ್ನು ಕಿತ್ತು ಹಾಕುವವರೆಗೂ ನಾವು ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಲಿ: ಶಿವರಾಜ್ ತಂಗಡಗಿ

  • ಬೀದರ್ | ನಾಲ್ವರು ಮಕ್ಕಳ ಜೊತೆ ನಾಲೆಗೆ ಹಾರಿದ ದಂಪತಿ, ಪತಿ 3 ಮಕ್ಕಳು ಸಾವು

    ಬೀದರ್ | ನಾಲ್ವರು ಮಕ್ಕಳ ಜೊತೆ ನಾಲೆಗೆ ಹಾರಿದ ದಂಪತಿ, ಪತಿ 3 ಮಕ್ಕಳು ಸಾವು

    – ಮಹಿಳೆ, ಮತ್ತೊಬ್ಬ ಮಗನ ರಕ್ಷಣೆ

    ಬೀದರ್: ಸಾಲಗಾರರ ಕಿರುಕುಳದಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ಕಾರಂಜಾ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಭಾಲ್ಕಿ ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ.

    ಶಿವಮೂರ್ತಿ ಮಾರುತಿ (45), 8 ತಿಂಗಳ ಪುಟ್ಟ ಕಂದ ರಾಕೇಶ್, ಶ್ರೀಕಾಂತ್ (8) ಹಾಗೂ ರಿತಿಕ್ (4) ಸಾವನ್ನಪ್ಪಿದ ದುರ್ದೈವಿಗಳು. ತಾಯಿ ರಮಾಬಾಯಿ ಮತ್ತು ಇನ್ನೋಬ್ಬ 7 ವರ್ಷದ ಮಗನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಚಿಂದಿ ಆಯುವ ನೆಪದಲ್ಲಿ ಮನೆಗಳ್ಳತನ – ಬೀಗ ಒಡೆಯುವಾಗಲೇ ಸಿಕ್ಕಿಬಿದ್ದ ಕಳ್ಳಿಯರು

    ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು ಮಕ್ಕಳ ಸಮೇತ ದಂಪತಿ ಕಾಲುವೆಗೆ ಹಾರಿದ್ದಾರೆ. ಈ ವೇಳೆ ತಾಯಿ ಮತ್ತು ಇನ್ನೊಬ್ಬ ಮಗನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರು ಮೂಲತಃ ಬೀದರ್ (Bidar) ನಗರದ ಮೈಲೂರು ನಿವಾಸಿಗಳಾಗಿದ್ದಾರೆ.

    ಮೃತದೇಹವನ್ನು ಭಾಲ್ಕಿ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಶಾಸಕ ಈಶ್ವರ್ ಖಂಡ್ರೆ ಭೇಟಿ (Eshwara Khandre) ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಎಸ್‍ಪಿ ಪ್ರದೀಪ್ ಗುಂಟಿ ಕೂಡಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

  • ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ, ರಾಜ್ಯದ ಕುರಿಗಾಹಿಗಳಿಗೆ ಇಲ್ಲ ತೊಂದರೆ: ಈಶ್ವರ್ ಖಂಡ್ರೆ

    ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ, ರಾಜ್ಯದ ಕುರಿಗಾಹಿಗಳಿಗೆ ಇಲ್ಲ ತೊಂದರೆ: ಈಶ್ವರ್ ಖಂಡ್ರೆ

    ಬೆಂಗಳೂರು: ಹೊರ ರಾಜ್ಯದಿಂದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ (Eshwara Khandre) ವಿಧಾನಸಭೆಯಲ್ಲಿಂದು  (Karnataka Assembly Session) ಸ್ಪಷ್ಟಪಡಿಸಿದ್ದಾರೆ.

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು (Mahadeshwara Hills Tiger Death Case) ಸಂಭವಿಸಿದಾಗ ತಮಿಳುನಾಡಿನಿಂದ ಸಾವಿರಾರು ಜಾನುವಾರುಗಳನ್ನು ತಂದು ನಮ್ಮ ಅರಣ್ಯ ನಾಶ ಪಡಿಸುತ್ತಿರುವ ಅಂಶ ವರದಿಯಲ್ಲಿ ತಮ್ಮ ಗಮನಕ್ಕೆ ಬಂದ ಬಳಿಕ, ಹೊರ ರಾಜ್ಯದ ಜಾನುವಾರನ್ನು ನಮ್ಮ ಕಾಡಿನಲ್ಲಿ ಮೇಯಿಸುವುದಕ್ಕೆ ನಿಷೇಧ ಹೇರಲಾಗಿದೆ. ನಮ್ಮ ರಾಜ್ಯದ ಕುರಿಗಾಹಿಗಳಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

    ಡೀಮ್ಡ್ ಅರಣ್ಯದ ಬಗ್ಗೆ ಈಗಾಗಲೇ ಮರು ಸಮೀಕ್ಷೆ ನಡೆಯುತ್ತಿದೆ. ಸರ್ವೋನ್ನತ ನ್ಯಾಯಾಲಯ ಮತ್ತೊಂದು ಅವಕಾಶ ನೀಡಿದ್ದು, ಸಮೀಕ್ಷೆಯಲ್ಲಿ ಅರಣ್ಯದಂತೆ ಇಲ್ಲದ ಯಾವ ಪ್ರದೇಶ ಕೈಬಿಡಬಹುದು ಯಾವುದನ್ನು ಸೇರಿಸಬಹುದು ಎಂಬುದನ್ನು ಪರಾಮರ್ಶಿಸಲಾಗುವುದು ಎಂದು ತಿಳಿಸಿದರು.

    ಅರಣ್ಯೇತರ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲು ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಪರ್ಯಾಯ ಭೂಮಿ ಮತ್ತು ಎನ್.ಪಿ.ವಿ. ಶುಲ್ಕ ಪಾವತಿಸಿ ನಿಯಮಾನುಸಾರ ಅನುಮತಿ ಪಡೆಯಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

  • ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

    ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

    ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್‌ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.

    ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾತನಾಡಿ, ಮುಂದಿನ 4-5 ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್ ಕೋತಿಯನ್ನು ದಕ್ಷಿಣ ಅಮೆರಿಕದಿಂದ ವಿನಿಮಯ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷ ಚಿಂಪಾಂಜಿ, ಜಾಗ್ವಾರ್, ಪೂಮಾ (ಉತ್ತರ ಅಮೆರಿಕ ಸಿಂಹ) ಸೇರಿದಂತೆ ಒಟ್ಟು 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟಕ್ಕೆ ಆಗಮಿಸಲಿವೆ ಎಂದು ತಿಳಿಸಿದರು.

    ಬನ್ನೇರುಘಟ್ಟದಲ್ಲಿ ಸೀಮಿತ ಆವರಣ ಪ್ರದೇಶದೊಳಗೆ ರೂಪಿಸಿರುವ ವನ್ಯಜೀವಿ ಸಫಾರಿಯಲ್ಲಿ ಹುಲಿ, ಚಿರತೆ, ಸಿಂಹ, ಕರಡಿಗಳ ದರ್ಶನ ಪ್ರವಾಸಿಗರಿಗೆ ನಿಶ್ಚಿತವಾಗಿ ಆಗುತ್ತದೆ. ಈ ಸಫಾರಿಗಳಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದ್ದು, ಈ ವಾಹನಗಳಿಂದ ಹೊರಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ದೇಶದಲ್ಲೇ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ ಎಂದರು.

    ಬಸ್‌ ವಿಶೇಷತೆ ಏನು?
    ವಿದ್ಯುತ್ ಚಾಲಿತ ಬಸ್, 22 ಆಸನಗಳನ್ನು ಹೊಂದಿದ್ದು, 100 ಕೆ.ವಿ. ಬ್ಯಾಟರಿ ಸಾಮರ್ಥ್ಯದ್ದಾಗಿದೆ. 2 ಗಂಟೆ ಚಾರ್ಜ್ ಮಾಡಿದರೆ 160 ಕಿ.ಮೀ. ಅಂದರೆ 8 ಟ್ರಿಪ್ ಸಂಚರಿಸಲಿದೆ. ಹಾಲಿ ಒಂದು ಬಸ್ ಮಾತ್ರವೇ ಕಾರ್ಯಾರಂಭ ಮಾಡಲಿದ್ದು, 2027 ರೊಳಗೆ ಬನ್ನೇರುಘಟ್ಟ ಉದ್ಯಾನವನ್ನು (ಟ್ರ್ಯಾಕ್ಟರ್‌ ಇತ್ಯಾದಿ ಉಪಯೋಗಿ ವಾಹನ ಹೊರತುಪಡಿಸಿ) ಪಳೆಯುಳಿಕೆ ಇಂಧನ ರಹಿತ ವಾಹನ ವಲಯವಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು.

    ಬನ್ನೇರುಘಟ್ಟ ಮೃಗಾಲಯ ಮತ್ತು ಸಫಾರಿ ವೀಕ್ಷಣೆಗೆ ವಾರಂತ್ಯದಲ್ಲಿ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವನ್ಯಜೀವಿ ಪ್ರಿಯರು ಮತ್ತು ಪ್ರವಾಸಿಗರು ಆಗಮಿಸುವ ಕಾರಣ, ಇಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದೆ. ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.

    ದಾಖಲೆಯ ಪ್ರವಾಸಿಗರ ಆಗಮನ
    ಕಳೆದ ತಿಂಗಳು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸುಮಾರು 2,85,000 ಪ್ರವಾಸಿಗರು ಆಗಮಿಸಿದ್ದು, ಇದು ದಾಖಲೆಯಾಗಿದೆ. ಚಿರತೆ ಸಫಾರಿ ಈಗ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದೆ ಎಂದರು. ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ತಿಳಿಸಿದರು.

    ಬೃಹತ್ ಮತ್ಯಾಗಾರ ನಿರ್ಮಾಣ
    ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಮತ್ತೊಂದು ಆಕರ್ಷಣೆಯಾಗಿ ಬೃಹತ್ ಮತ್ಸ್ಯಾಗಾರ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಟೆಂಡರ್ ಕರೆಯಲಾಗುವುದು. ಬನ್ನೇರುಘಟ್ಟ ಉದ್ಯಾನದ ವ್ಯಾಪ್ತಿಯಲ್ಲಿ 7 ಕೆರೆಗಳಿವೆ. ಜೊತೆಗೆ ಈಗ ಉದ್ಯಾನಕ್ಕೆ ಬರುವ ಪ್ರವಾಸಿಗರಿಗೆ ಹಾಗೂ ಪ್ರಾಣಿಗಳಿಗಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದಲೂ ನೀರು ಪಡೆಯಲಾಗುತ್ತಿದ್ದು, ಮತ್ಯಾಗಾರಕ್ಕೆ ನೀರಿನ ಕೊರತೆ ಇರುವುದಿಲ್ಲ ಎಂದೂ ತಿಳಿಸಿದರು.

    ಜೀಬ್ರಾ ಸಾವಿನ ಬಗ್ಗೆ ತನಿಖೆಗೆ ಆದೇಶ
    ಇತ್ತೀಚೆಗೆ ಬನ್ನೇರುಘಟ್ಟ ಉದ್ಯಾನದಲ್ಲಿ ಜೀಬ್ರಾ ಮತ್ತು ನೀಲಗಾಯ್ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿ. ಈ ಬಗ್ಗೆ ತನಿಖೆ ಮಾಡಿ ವರದಿ ನೀಡಲು ಸಿಸಿಎಫ್ ಅವರಿಗೆ ತಿಳಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇನ್ಮುಂದೆ ಮೃಗಾಲಯದಲ್ಲಿ ಮತ್ತು ಜೈವಿಕವನದಲ್ಲಿ ಯಾವುದೇ ವನ್ಯಜೀವಿ ಅಸಹಜವಾಗಿ ಸಾವನ್ನಪ್ಪದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಗುಲ್ಬರ್ಗಾದಲ್ಲಿ ನೂತನವಾಗಿ ಮೃಗಾಲಯ ನಿರ್ಮಿಸಲಾಗುತ್ತಿದ್ದು, ಬರುವ ಡಿಸೆಂಬರ್ ಹೊತ್ತಿಗೆ ಸಿದ್ಧವಾಗಲಿದೆ ಎಂದರು.

  • ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

    ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

    ಕಲಬುರಗಿ: ಅಹಮದಾಬಾದ್ ವಿಮಾನ ದುರಂತ (Ahmedabad Plane Crash) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮ ಮೋಹನ್ ನಾಯ್ಡು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ (Eshwara Khandre) ಒತ್ತಾಯಿಸಿದರು.

    ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಮಾನ ದುರಂತಕ್ಕೆ ಕೇಂದ್ರ ಸರ್ಕಾರ ಹೊಣೆ ಹೊತ್ತು ಕೂಡಲೇ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡಬೇಕು. ಇದು ಒಂದು ಅತಿದೊಡ್ಡ ದುರಂತವಾಗಿದೆ. ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

    ಈ ದುರಂತದ ಬಗ್ಗೆ ನಿಷ್ಪಕ್ಷಪಾತ ತನಿಖೆ ಕೈಗೊಂಡು ವರದಿ ಜನರ ಮುಂದೆ ಇಡಬೇಕು. ಆರ್‌ಸಿಬಿ ಗೆಲುವಿನ ಸಂಭ್ರಮದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳುವವರು ಕುಂಭಮೇಳದ ಕಾಲ್ತುಳಿತಕ್ಕೂ ರಾಜೀನಾಮೆ ಕೇಳಬೇಕು. ಸಾವಿನಲ್ಲಿ ರಾಜಕೀಯ‌ ಮಾಡಬಾರದು ಬಿಜೆಪಿಗೆ ಟಾಂಗ್‌ ಕೊಟ್ಟರು.

    ದುರಂತದ ಬೆನ್ನಲ್ಲೇ ಟಾಟಾ ಸಮೂಹ ಪ್ರತಿ ಮೃತ ವ್ಯಕ್ತಿಯ ಸಂತ್ರಸ್ತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಹಾಗಂತ ಸಂತ್ರಸ್ತ ಕುಟುಂಬಗಳಿಗೆ ಇಂತಹ ದುರಂತದ ಬಳಿಕ ಎಷ್ಟೇ ಕೋಟಿ ಕೊಟ್ಟರೂ ಕಡಿಮೆ ಎಂದರು. ಇದನ್ನೂ ಓದಿ:

  • ಹುಲಿ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

    ಹುಲಿ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

    ಕಾರ್ಯಾಚರಣೆಗೆ ಸೂಚನೆ – ಕೆಲವೇ ಗಂಟೆಯಲ್ಲಿ ಹುಲಿ ಸೆರೆ

    ಬೆಂಗಳೂರು: ಚಾಮರಾಜನಗರ (Chamarajanagar) ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿರುವ ಬಗ್ಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwara Khandre) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ನಿನ್ನೆ ರಾತ್ರಿ ಇದೇ ಹಾಡಿಯಲ್ಲಿ ರವಿ ಎಂಬುವವರ ಮೇಲೆ ಹುಲಿ (Tiger) ದಾಳಿ ಮಾಡಿತ್ತು, ರವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಇಂದು ಬೆಳಗ್ಗೆ ಮಹಿಳೆ ರಂಗಮ್ಮ ಬಹಿರ್ದೆಸೆಗೆ ಹೋಗಿದ್ದಾಗ ಹುಲಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

    ಮನುಷ್ಯರ ರಕ್ತದ ರುಚಿ ಕಂಡ ಹುಲಿ ಅಪಾಯಕಾರಿ, ಹೀಗಾಗಿ ಕೂಡಲೇ ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವಂತೆ ಸೂಚಿಸಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹುಲಿಯನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ಜನಸಂಖ್ಯೆ 146 ಕೋಟಿ – ಮಹಿಳೆಯರಲ್ಲಿ ಕುಸಿಯುತ್ತಿದೆ ಸಂತಾನೋತ್ಪತ್ತಿ

     

    ಹುಲಿ ದಾಳಿಯಿಂದ ಗಾಯಗೊಂಡಿರುವ ರವಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಸಚಿವರು, ಮೃತ ರಂಗಮ್ಮ ಅವರ ಕುಟುಂಬದ ಸದಸ್ಯರಿಗೆ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ, ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

    ರವಿ ಅವರ ಚಿಕಿತ್ಸಾ ವೆಚ್ಚ ಭರಿಸಲು ಮತ್ತು ಮೃತರ ಹತ್ತಿರದ ಬಂಧುಗಳಿಗೆ ಪರಿಹಾರದ ಮೊತ್ತ ವಿತರಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿರುವ ಈಶ್ವರ ಖಂಡ್ರೆ, ಕಾಡಿನಂಚಿನ ಜನರು ರಾತ್ರಿಯ ವೇಳೆ ಮತ್ತು ಮುಂಜಾನೆ ವನ ಪ್ರದೇಶದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

  • ಅರಣ್ಯ ಇಲಾಖೆಯ ಮುನ್ನೆಚ್ಚರಿಕೆ ಪಾಲಿಸಲು ಸಚಿವರ ಮನವಿ; ಆನೆ ದಾಳಿಯಿಂದ ಸಾವು – ಈಶ್ವರ ಖಂಡ್ರೆ ಶೋಕ

    ಅರಣ್ಯ ಇಲಾಖೆಯ ಮುನ್ನೆಚ್ಚರಿಕೆ ಪಾಲಿಸಲು ಸಚಿವರ ಮನವಿ; ಆನೆ ದಾಳಿಯಿಂದ ಸಾವು – ಈಶ್ವರ ಖಂಡ್ರೆ ಶೋಕ

    ಬೆಂಗಳೂರು: ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಸಾವಿಗೀಡಾಗಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಸಚಿವ ಈಶ್ವರ ಖಂಡ್ರೆ, ಸಾರ್ವಜನಿಕರು ಇಲಾಖೆಯ ಮುನ್ನೆಚ್ಚರಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.

    ನಿನ್ನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಒಬ್ಬ ಯುವಕ ಮತ್ತು ಇಂದು ಕೋಲಾರ ಜಿಲ್ಲೆ ಕಾನಸಮುದ್ರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು ತೀವ್ರ ನೋವು ತಂದಿದೆ. ಮೃತರ ಕುಟುಂಬದೊಂದಿಗೆ ಸರ್ಕಾರ ಇದೆ. ಅವರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಮೃತರ ಹತ್ತಿರದ ಸಂಬಂಧಿಕರಿಗೆ ಕೂಡಲೇ ಪರಿಹಾರದ ಮೊತ್ತ ನೀಡಲು ಸೂಚಿಸಲಾಗಿದೆ. ಈ ಎಲ್ಲ ದುರ್ಘಟನೆಗಳು ಬೆಳಗಿನ ಹೊತ್ತು ಮತ್ತು ಸಂಜೆಯ ವೇಳೆ ಸಂಭವಿಸುತ್ತಿವೆ. ಕಾಡಿನಂಚಿನ ಜನರು ಅರಣ್ಯ ಇಲಾಖೆಯು ಆನೆಗಳ ಚಲನವಲನದ ಬಗ್ಗೆ ನೀಡುವ ಸಂದೇಶಕ್ಕೆ ಸ್ಪಂದಿಸಿ, ಜಾಗರೂಕರಾಗಿರಬೇಕು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

    ಆನೆ-ಮಾನವ ಸಂಘರ್ಷ, ವನ್ಯಜೀವಿ ಮಾನವ ಸಂಘರ್ಷ ಇಂದು ನಿನ್ನೆಯ ಸಮಸ್ಯೆಯಲ್ಲ. ಸಾವಿರಾರು ವರ್ಷಗಳಿಂದಲೂ ಇದೆ. ಅರಣ್ಯ ಪ್ರದೇಶ ಕ್ಷೀಣಿಸುತ್ತಿದ್ದು, ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಸಮಸ್ಯೆ ಉಲ್ಬಣವಾಗುವಂತೆ ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ರಾಜ್ಯ ಸರ್ಕಾರ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ, ಆನೆ ಕಂದಕ ನಿರ್ಮಿಸಿ, ನಿರ್ವಹಿಸುತ್ತಿರುವುದರ ಜೊತೆಗೆ ರೈಲ್ವೆ ಬ್ಯಾರಿಕೇಡ್ ಸಹ ಹಾಕುತ್ತಿದೆ. 2024-25ನೇ ಸಾಲಿನಲ್ಲಿ 78.917 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಂಡಿದ್ದು, 41.87 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ 103 ಕಿ.ಮೀ. ಗುರಿ ನಿಗದಿ ಮಾಡಲಾಗಿದ್ದು, ಮಾರ್ಚ್ 31ರೊಳಗೆ ಈ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ದೇಶದಲ್ಲಿಯೇ ಅತಿ ಹೆಚ್ಚು 6395 ಆನೆಗಳು ರಾಜ್ಯದಲ್ಲಿವೆ. ಸರ್ಕಾರ ಪುಂಡಾನೆ ಹಾವಳಿ ತಡೆಗೆ ಮಾರ್ಗೋಪಾಯ ಕಂಡುಹಿಡಿಯಲು ನೆರೆ ರಾಜ್ಯಗಳ ಸಚಿವರೊಂದಿಗೆ ಸಭೆ ನಡಸಿದೆ. ಅಂತಾರಾಷ್ಟ್ರೀಯ ಸಮಾವೇಶ ನಡೆಸಿದೆ. ತಜ್ಞರ ಸಮಿತಿ ರಚಿಸಿ ಅಧ್ಯಯನ ನಡೆಸುತ್ತಿದೆ. ಆನೆ ಕಾರ್ಯಪಡೆಯನ್ನೂ ರಚಿಸಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಆನೆಗಳ ಓಡಾಟದ ಬಗ್ಗೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ಕೊಡಗು, ಹಾಸನ, ಚಿಕ್ಕಮಗಳೂರು ಸುತ್ತಮುತ್ತ ಕಾಡಿನಿಂದ ಹೊರಬಂದು ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ, 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮ ನಿರ್ಮಿಸಲು ಯೋಜಿಸಲಾಗಿದೆ. ಇಲ್ಲಿ ಆನೆಗಳಿಗೆ ಅಗತ್ಯ ಆಹಾರ, ನೀರು ಲಭ್ಯವಾಗುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ಕಾಡಿನ ಹೊರಗೇ ಓಡಾಡುವ 150ಕ್ಕೂ ಹೆಚ್ಚು ಆನೆಗಳನ್ನು ಗುರುತಿಸಲಾಗಿದ್ದು, ಮಿನಿ ಖೆಡ್ಡಾ ಕಾರ್ಯಾಚರಣೆ ರೂಪದಲ್ಲಿ ಆನೆಗಳನ್ನು ಧಾಮಕ್ಕೆ ಕಳಿಸಬೇಕಾಗುತ್ತದೆ. ಆದರೆ ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.