Tag: Ethanol

  • ನನ್ನ ಮಿದುಳು 200 ಕೋಟಿ ಬೆಲೆಬಾಳುತ್ತೆ, ಪ್ರಾಮಾಣಿಕವಾಗಿಯೇ ಹಣ ಗಳಿಸ್ತೀನಿ: ನಿತಿನ್ ಗಡ್ಕರಿ

    ನನ್ನ ಮಿದುಳು 200 ಕೋಟಿ ಬೆಲೆಬಾಳುತ್ತೆ, ಪ್ರಾಮಾಣಿಕವಾಗಿಯೇ ಹಣ ಗಳಿಸ್ತೀನಿ: ನಿತಿನ್ ಗಡ್ಕರಿ

    ನಾಗ್ಪುರ: ನನ್ನ ಮಿದುಳು ತಿಂಗಳಿಗೆ 200 ಕೋಟಿ ರೂ. ಬೆಲೆಬಾಳುತ್ತೆ. ನನಗೆ ಹಣದ ಕೊರತೆ ಇಲ್ಲ. ವಂಚನೆ ಮಾಡದೇ ಪ್ರಾಮಾಣಿಕವಾಗಿ ಹಣ ಗಳಿಸುವುದು ಹೇಗೆ ಎಂದು ನನಗೆ ತಿಳಿದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

    ಸರ್ಕಾರವು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ (E20) ಒತ್ತು ನೀಡುವ ಕುರಿತಾದ ವಿವಾದ, ವೈಯಕ್ತಿಕ ಲಾಭದ ಆರೋಪ ಬೆನ್ನಲ್ಲೇ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿತಿನ್ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ. ಇದರಲ್ಲಿ ನನಗೆ ಯಾವುದೇ ವೈಯಕ್ತಿಕ ಲಾಭವಿಲ್ಲ, ರೈತರಿಗೆ ಪ್ರಯೋಜನವನ್ನು ನೀಡುವ ಸಲುವಾಗಿ ಪ್ರಯೋಗ ಮಾಡುತ್ತಿದ್ದೇನೆ. ರೈತರು ಸಮೃದ್ಧಿಯನ್ನು ಸಾಧಿಸುವವರೆಗೆ ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಗಡ್ಕರಿ ಹೇಳಿದ್ದಾರೆ. ಇದನ್ನೂ ಓದಿ: ಜಾತಿಗಣತಿ ಕಾಲಂನಲ್ಲಿ ಮತಾಂತರ ಜಾತಿಗೂ ಜಾಗ – ಸರ್ಕಾರದ ವಿರುದ್ಧ ಬಿಜೆಪಿ, ಕನಕ ಶ್ರೀ ಕಿಡಿ

    ಇದಕ್ಕೂ ಮುನ್ನ ಈ ತಿಂಗಳ ಆರಂಭದಲ್ಲಿ ಇ20 ಬಿಡುಗಡೆಯನ್ನು ನಿಲ್ಲಿಸಲು ಮತ್ತು ಪಂಪ್‌ಗಳಲ್ಲಿ ಎಥನಾಲ್-ಮುಕ್ತ ಪೆಟ್ರೋಲ್ ಅನ್ನು ಕಡ್ಡಾಯಗೊಳಿಸಲು ಪ್ರಯತ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಸಾಂಪ್ರದಾಯಿಕ ಇಂಧನದೊಂದಿಗೆ ಶೇ. 20ರಷ್ಟು ಎಥೆನಾಲ್ ಅನ್ನು ಬೆರೆಸುವ ಇ20 ಪೆಟ್ರೋಲ್ ಬಗ್ಗೆ  ಟೀಕಿಸಲಾಗುತ್ತಿದೆ. ಆ ಇಂಧನ ಸುರಕ್ಷಿತವಾಗಿದೆ, ನಿಯಂತ್ರಕರು ಮತ್ತು ವಾಹನ ತಯಾರಕರು ಇಬ್ಬರೂ ಅದನ್ನು ಬೆಂಬಲಿಸುತ್ತಾರೆ ಎಂದು ಗಡ್ಕರಿ ಪ್ರತಿಪಾದಿಸಿದ್ದರು. ಇದನ್ನೂ ಓದಿ: ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು

    ಎಥನಾಲ್ ಮಿಶ್ರಣವು ತೈಲ ಆಮದುಗಳನ್ನು ಕಡಿಮೆ ಮಾಡುತ್ತದೆ. ನಾವು ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಇದರ ಪರಿಣಾಮವಾಗಿ, ಉತ್ತರ ಪ್ರದೇಶ, ಬಿಹಾರ ಮತ್ತು ದೇಶಾದ್ಯಂತ ಮೆಕ್ಕೆಜೋಳದ ಕೃಷಿ 3 ಪಟ್ಟು ಹೆಚ್ಚಾಗಿದೆ. ಭಾರತದ ಕೃಷಿ ಬೆಳವಣಿಗೆಯ ದರ ಸಾಂಪ್ರದಾಯಿಕವಾಗಿ ಕಡಿಮೆಯಾಗಿದೆ. ಇಂಧನ ಮತ್ತು ವಿದ್ಯುತ್ ವಲಯಕ್ಕೆ ಕೃಷಿಯ ಈ ವೈವಿಧ್ಯೀಕರಣವು ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡುತ್ತದೆ ಮತ್ತು ಆರ್ಥಿಕತೆಯನ್ನು ಬಲಪಡಿಸುತ್ತದೆ, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

  • ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ಎಥೆನಾಲ್‌ ಪೆಟ್ರೋಲ್‌ನಿಂದ ಮೈಲೇಜ್‌ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    ನವದೆಹಲಿ:ಎಥೆನಾಲ್‌ ಮಿಶ್ರಣದ ಪೆಟ್ರೋಲ್‌ನಿಂದ ವಾಹನಗಳ ಮೈಲೇಜ್‌ ಕುಸಿತವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ (Union Govt) ಸ್ಪಷ್ಟನೆ ನೀಡಿದೆ.

    ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ನಿಂದ (Ethanol Blending Petrol) ಮೈಲೇಜ್‌ (Mileage) ಕುಸಿತವಾಗಿದೆ ಎಂಬ ಆರೋಪಿಸಿದ ಬೆನ್ನಲ್ಲೇ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ದೀರ್ಘವಾದ ಪೋಸ್ಟ್‌ ಪ್ರಕಟಿಸಿ ಗೊಂದಲಗಳಿಗೆ ಸ್ಪಷ್ಟನೆ ನೀಡಿದೆ. ಅಷ್ಟೇ ಅಲ್ಲದೇ ವಾಹನದ ವಿಮೆಗಳು (Vehicle Insurance) ರದ್ದಾಗುವುದಿಲ್ಲ ಎಂದು ಹೇಳಿದೆ.

    ಏನಿದು E20 ಇಂಧನ?
    2003ಕ್ಕೆ ಮೊದಲು ಭಾರತದಲ್ಲಿ (India) ಕಚ್ಚಾ ತೈಲದಿಂದ ಸಂಸ್ಕರಣೆಗೊಂಡ ಪೆಟ್ರೋಲ್‌ ಬಂಕ್‌ಗಳಿಗೆ ಬರುತ್ತಿದ್ದವು. ಆದರೆ ಈಗ ಪೆಟ್ರೋಲ್‌ ಜೊತೆ ಎಥೆನಾಲ್‌ ಮಿಶ್ರಣವಾಗಿರುವ ಇಂಧನ ಬರುತ್ತಿದೆ.

    20% ಎಥೆನಾಲ್‌ ಮತ್ತು 80% ಬಾಕಿ ಪೆಟ್ರೋಲ್‌ ಮಿಶ್ರಿತ ತೈಲವನ್ನು ಇ20 ತೈಲ ಎನ್ನುತ್ತಾರೆ. ಕಬ್ಬು, ಜೋಳ ಅಥವಾ ಹೆಚ್ಚುವರಿ ಧಾನ್ಯದಿಂದ ತಯಾರಿಸಲಾದ ಜೈವಿಕ ಇಂಧನವನ್ನು ಎಥೆನಾಲ್‌ ಎಂದು ಕರೆಯಲಾಗುತ್ತದೆ. 2003ರಲ್ಲಿ ಭಾರತದಲ್ಲಿ ಇ5 ಇಂಧನ ಸಿಗತೊಡಗಿತು. 2022ರ ವೇಳೆಗೆ ದೇಶದಲ್ಲಿ ಇ10 ಇಂಧನ ಮಾರಾಟವಾಗುತ್ತಿತ್ತು. 2023ರಲ್ಲಿ ಕೆಲ ನಗರಗಳಲ್ಲಿ ಪ್ರಾಯೋಗಿಕವಾಗಿ ಇ20 ಇಂಧನ ಮಾರಾಟ ಮಾಡಲಾಗುತ್ತಿತ್ತು. 2025 ರಿಂದ ದೇಶಾದ್ಯಂತ ಇ20 ಇಂಧನ ಮಾರಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ಬೀದಿ ನಾಯಿಗಳ ಸ್ಥಳಾಂತರ; ಸುಪ್ರೀಂ ಆದೇಶಕ್ಕೆ ರಾಹುಲ್ ಗಾಂಧಿ ಆಕ್ಷೇಪ

    ಸ್ಪಷ್ಟನೆಯಲ್ಲಿ ಏನಿದೆ?
    ಚಾಲನಾ ಅಭ್ಯಾಸಗಳು, ವಾಹನ ನಿರ್ವಹಣೆ, ಟೈರ್ ಒತ್ತಡ ಮತ್ತು ಹವಾನಿಯಂತ್ರಣ ಬಳಕೆಯಂತಹ ಅಂಶಗಳು ವಾಹನದ ಮೈಲೇಜ್‌ ಮೇಲೆ ಪ್ರಭಾವ ಬೀರುತ್ತವೆ.

    2009 ರಿಂದಲೂ ಅನೇಕ ವಾಹನಗಳು E20 ಇಂಧನಕ್ಕೆ ಹೊಂದಾಣಿಕೆಯಾಗುತ್ತಿವೆ. ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌, ಆಟೋಮೊಟಿವ್‌ ರಿಸರ್ಚ್‌ ಆಸೋಸಿಯೇಷನ್‌ ಆಫ್‌ ಇಂಡಿಯಾ, ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರ್ಸ್‌ ನಡೆಸಿದ ಸಂಶೋಧನೆಯಿಂದ E20 ಇಂಧನವು ಉತ್ತಮ ವೇಗವರ್ಧನೆ ಮತ್ತು E10 ಇಂಧನಕ್ಕಿಂತ 30% ರಷ್ಟು ಕಡಿಮೆ ಇಂಗಾಲದ ಹೊರಸೂಸುವಿಕೆಯನ್ನು ನೀಡುತ್ತದೆ ಎಂದು ಕಂಡುಹಿಡಿದಿದೆ.

    E20 ಬಳಸುವುದರಿಂದ ವಾಹನ ವಿಮೆ ರದ್ದಾಗುತ್ತದೆ ಎಂಬ ಹೇಳಿಕೆ ಆಧಾರರಹಿತ ಮತ್ತು ಉದ್ದೇಶಪೂರ್ವಕ ಭಯ ಹುಟ್ಟಿಸುವ ಹೇಳಿಕೆಯಾಗಿದೆ. ಎಥೆನಾಲ್-ಮಿಶ್ರಿತ ಇಂಧನವನ್ನು ಬಳಸುವ ವಾಹನಗಳಿಗೆ ವಿಮಾ ರಕ್ಷಣೆ ಸಿಗಲಿದೆ. ಹಳೆಯ ವಾಹನಗಳಲ್ಲಿ ಅಗತ್ಯವಿರುವ ಯಾವುದೇ ಸಣ್ಣ ಭಾಗಗಳ ಬದಲಾವಣೆಯನ್ನು ಕಂಪನಿಯ ಅಧಿಕೃತ ವರ್ಕ್‌ಶಾಪ್‌ನಲ್ಲಿ ಮಾಡಿಕೊಳ್ಳಬಹುದು.

    ಜೈವಿಕ ಇಂಧನಗಳು ಮತ್ತು ನೈಸರ್ಗಿಕ ಅನಿಲವು ಭಾರತದ ಸೇತುವೆ ಇಂಧನಗಳು. ಕಬ್ಬು ಆಧಾರಿತ ಎಥೆನಾಲ್‌ನಿಂದ ಹಸಿರುಮನೆ ಅನಿಲ ಹೊರಸೂಸುವಿಕೆಯು ಪೆಟ್ರೋಲ್‌ಗಿಂತ 65% ರಷ್ಟು ಕಡಿಮೆ ಮತ್ತು ಮೆಕ್ಕೆಜೋಳ ಆಧಾರಿತ ಎಥೆನಾಲ್‌ನಿಂದ 50% ರಷ್ಟು ಕಡಿಮೆಯಾಗಿದೆ ಎಂದು ನೀತಿ ಆಯೋಗದ ಅಧ್ಯಯನ ಹೇಳಿದೆ.

    ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಮಾಡಿದ್ದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ 1.44 ಲಕ್ಷ ಕೋಟಿಗೂ ರೂ. ಹೆಚ್ಚು ವಿದೇಶಿ ವಿನಿಮಯ ಉಳಿತಾಯವಾಗಿದೆ. ಇಂಗಾಲದ ಡೈಆಕ್ಸೈಡ್ ಅಂದಾಜು 736 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಡಿಮೆಯಾಗಿದ್ದು ದು 30 ಕೋಟಿ ಮರಗಳನ್ನು ನೆಡುವುದಕ್ಕೆ ಸಮಾನವಾಗಿದೆ.

    ಬ್ರೆಜಿಲ್‌ನಲ್ಲಿ ಕೆಲ ವರ್ಷಗಳಿಂದ E27 ಇಂಧನ ಬಳಕೆ ಮಾಡುತ್ತಿದ್ದು ಅಲ್ಲಿ ಯಾವುದೇ ಸಮಸ್ಯೆಯಿಲ್ಲದೇ ಯಶಸ್ವಿಯಾಗಿದೆ. ಟೊಯೋಟಾ, ಹೋಂಡಾ, ಹುಂಡೈ ಮುಂತಾದ ವಾಹನ ತಯಾರಕರು ಅಲ್ಲಿಯೂ ವಾಹನಗಳನ್ನು ಉತ್ಪಾದಿಸುತ್ತಾರೆ ಎಂದು ಸ್ಪಷ್ಟನೆಯಲ್ಲಿ ಹೇಳಿದೆ.

  • 20% ಎಥೆನಾಲ್ ಮಿಶ್ರಿತ ಪೆಟ್ರೋಲ್: ಲಾಭ, ಸವಾಲುಗಳೇನು?

    20% ಎಥೆನಾಲ್ ಮಿಶ್ರಿತ ಪೆಟ್ರೋಲ್: ಲಾಭ, ಸವಾಲುಗಳೇನು?

    ಪ್ರಸ್ತುತ ಭಾರತದಲ್ಲಿ (India) ಪೆಟ್ರೋಲ್‌ಗೆ (Petrol) 10% ಎಥೆನಾಲ್ (Ethanol) ಬೆರೆಸಲಾಗುತ್ತಿದೆ. ಇದನ್ನೂ ಮುಂದಿನ 2025ರ ವೇಳೆಗೆ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ವಾಹನಗಳು ಹೊರ ಸೂಸುವ ಇಂಗಾಲದ ಪ್ರಮಾಣ ಕಡಿತಗೊಳಿಸಲು ಹಾಗೂ ಜೈವಿಕ ಇಂಧನಗಳ ಬಳಕೆಯನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಪ್ರಮುಖವಾಗಿ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ನಿರ್ಧಾರ ಕೈಗೊಂಡಿದೆ.

    ಎಥೆನಾಲ್ ಮಿಶ್ರಣ ಎಂದರೇನು ಮತ್ತು ಅದು ಹೇಗೆ ಸಹಾಯ ಮಾಡುತ್ತದೆ?

    ಎಥೆನಾಲ್ ಮಿಶ್ರಣವು ಈಥೈಲ್ ಆಲ್ಕೋಹಾಲ್‌ನ್ನು ಒಳಗೊಂಡಿರುವ ಇಂಧನವಾಗಿದೆ. ಇದನ್ನು ಕೃಷಿ ಉತ್ಪನ್ನಗಳಿಂದ ತಯಾರಿಸಿ ಬಳಿಕ ಪೆಟ್ರೋಲ್‌ಗೆ ಮಿಶ್ರಣ ಮಾಡಲಾಗುತ್ತದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಎರಡು ಅಂಶಗಳಲ್ಲಿ ಸಹಾಯ ಮಾಡುತ್ತದೆ. ಜೈವಿಕ ಇಂಧನವಾಗಿ ಪರಿಸರಕ್ಕೆ (Environment) ಆಗುವ ಹಾನಿಯ ಪ್ರಮಾಣವನ್ನು ತಗ್ಗಿಸುತ್ತದೆ. ಅಲ್ಲದೇ ಇದು ಕಚ್ಚಾ ತೈಲ ಆಮದನ್ನು ಕಡಿಮೆ ಮಾಡುತ್ತದೆ.

    ಸರ್ಕಾರದ ಯೋಜನೆ ಏನು?

    ಭಾರತದಾದ್ಯಂತ ಮುಂದಿನ ಎರಡು ವರ್ಷಗಳಲ್ಲಿ ಪ್ರಸ್ತುತ 10% ಎಥೆನಾಲ್ ಮಿಶ್ರಿತ ಪೆಟ್ರೋಲ್‌ನ್ನು 20%ಗೆ ಹೆಚ್ಚಿಸಲು ಯೋಜಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಕೆಲಸ ಎರಡು ಹಂತಗಳಲ್ಲಿ ನಡೆಯುತ್ತಿದೆ. ಮೊದಲ ಹಂತದಲ್ಲಿ 15 ನಗರಗಳನ್ನು ಒಳಗೊಳ್ಳುತ್ತದೆ. ಮುಂದಿನ ಎರಡು ವರ್ಷಗಳಲ್ಲಿ ಇದನ್ನು ದೇಶಾದ್ಯಂತ ವಿಸ್ತರಿಸಲಾಗುತ್ತದೆ. ಒಟ್ಟಾರೆ 2025ರ ವೇಳೆಗೆ ಸರ್ಕಾರ ತನ್ನ ಗುರಿಯನ್ನು ಸಾಧಿಸಲು ಕ್ರಮ ಕೈಗೊಂಡಿದೆ.

    E20 ಪೆಟ್ರೋಲ್ ಪ್ರಸ್ತುತ ಲಭ್ಯವಿದೆಯೇ?

    E20 (20% ಎಥೆನಾಲ್‌ನೊಂದಿಗೆ ಪೆಟ್ರೋಲ್ ಮಿಶ್ರಣ) ಆರಂಭದಲ್ಲಿ ದೇಶದ 84 ಪೆಟ್ರೋಲ್ ಪಂಪ್‌ಗಳಲ್ಲಿ ಮಾತ್ರ ಲಭ್ಯವಿತ್ತು. ಈಗ ಪ್ರಸ್ತುತ ಸುಮಾರು 1,000 ಪೆಟ್ರೋಲ್ ಪಂಪ್‌ಗಳಲ್ಲಿ ಲಭ್ಯವಿದೆ ಎಂದು ವರದಿಯಾಗಿದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಬೆಲೆ ಗ್ರಾಹಕರಿಗೆ ಇದೇ ದರದಲ್ಲಿ ಸಿಗುತ್ತಿದೆ ಎಂಬುದು ಗಮನಾರ್ಹ ವಿಚಾರ.

    ಉದ್ಯಮ ಎದುರಿಸುತ್ತಿರುವ ಸವಾಲುಗಳೇನು?

    ಪ್ರಸ್ತುತ ಉತ್ಪಾದಿಸಲಾಗುವ ಹೆಚ್ಚಿನ ಎಥೆನಾಲ್ ಅಕ್ಕಿ ಮತ್ತು ಕಬ್ಬನ್ನು ಬಳಸಿ ತಯಾರಿಸಲಾಗುತ್ತಿದೆ. ಈ ಎರಡೂ ಬೆಳೆಗಳಿಗೂ ಹೆಚ್ಚಿನ ನೀರಿನ ಅಗತ್ಯವಿದೆ. ಇತ್ತೀಚೆಗೆ ಅಕ್ಕಿ ಬೆಲೆಗಳು ಏರಿದಾಗ ಉದ್ಯಮಕ್ಕೆ ಅಕ್ಕಿ ಪೂರೈಕೆಯನ್ನು ನಿಲ್ಲಿಸಲಾಗಿತ್ತು. ಆಗ ಎಥೆನಾಲ್ ತಯಾರಕರು ತೊಂದರೆ ಎದುರಿಸಿದ್ದರು. 

    2025ರ ವೇಳೆಗೆ 20% ಮಿಶ್ರಣ ಮಾಡುವ ಗುರಿಯನ್ನು ಸಾಧಿಸಲು ಭಾರತಕ್ಕೆ 1,400 ಕೋಟಿ ಲೀಟರ್ ಎಥೆನಾಲ್ ಅಗತ್ಯವಿದೆ ಎಂದು ನೀತಿ ಆಯೋಗ ಅಂದಾಜಿಸಿದೆ. ಇದು ಸಕ್ಕರೆ ಉತ್ಪಾದನೆಗೆ ತೊಡಕಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

    ಎಥೆನಾಲ್ ಮಿಶ್ರಣ ಹೆಚ್ಚಾದ ಬಳಿಕ ರೈತರು 40,600 ಕೋಟಿ ರೂ. ಆದಾಯ ಗಳಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಭಾಷಣವೊಂದರಲ್ಲಿ ಉಲ್ಲೇಖಿಸಿದ್ದರು.

    ಎಥೆನಾಲ್ ಮಿಶ್ರಣದ ಪ್ರಯೋಜನಗಳೇನು?

    ಪ್ರಸ್ತುತ ಭಾರತ ತನ್ನ ಅಗತ್ಯದ 85% ಇಂಧನವನ್ನು ವಿದೇಶಗಳಿಂದ ಆಮದು ಮಾಡುತ್ತದೆ. ಎಥೆನಾಲ್ ಮಿಶ್ರಣ ಯಶಸ್ವಿಯಾದರೆ ಅದು ಭಾರತದ ಪೆಟ್ರೋಲಿಯಂ ಮೇಲಿನ ವಿದೇಶಿ ಅವಲಂಬನೆಯನ್ನು ಕಡಿತಗೊಳಿಸುತ್ತದೆ. 2020-21ರಲ್ಲಿ ಭಾರತದ ಪೆಟ್ರೋಲಿಯಂ ಆಮದು 15.5 ಕೋಟಿ ಟನ್ ಆಗಿದ್ದು, ಅದಕ್ಕಾಗಿ ಭಾರತ 15800 ಕೋಟಿ ರೂ. ಮೊತ್ತವನ್ನು ಪಾವತಿಸಿದೆ. ಆದ್ದರಿಂದ ಈ ಎಥೆನಾಲ್ ಮಿಶ್ರಣ ಆರ್ಥಿಕವಾಗಿ ಉಳಿತಾಯ ಮಾಡಲು ಸಹಕರಿಸುತ್ತದೆ. ಅದಲ್ಲದೆ ಎಥೆನಾಲ್ ಒಂದು ಸಸ್ಯಜನ್ಯ ಇಂಧನವಾದ್ದರಿಂದ ಇದನ್ನು ನವೀಕರಿಸಬಹುದಾದ ಇಂಧನ ಎಂದು ಪರಿಗಣಿಸಲಾಗಿದೆ.

    ಎಥೆನಾಲ್ ಮತ್ತು ಪರಿಸರ

    ಧಾನ್ಯ ಅಥವಾ ಕೃಷಿ ಆಧಾರಿತ ಎಥೆನಾಲ್ ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಗಮನಾರ್ಹವಾಗಿ 44% ರಿಂದ 52% ರಷ್ಟು ಕಡಿತಗೊಳಿಸುತ್ತದೆ. ಮುಂದೆ ತಂತ್ರಜ್ಞಾನಗಳ ಸಹಾಯದಿಂದ ಇದನ್ನು 70%ಗೆ ಇಳಿಸಲು ಪ್ರಯತ್ನಗಳು ನಡೆಯುತ್ತಿದೆ.

    ಮೊದಲೆಲ್ಲ ಕೇವಲ ಕಬ್ಬನ್ನು ಬಳಸಿ ಎಥೆನಾಲ್ ಉತ್ಪಾದಿಸಲಾಗುತ್ತಿತ್ತು. ಆದರೆ ಈಗ ಎಥೆನಾಲ್ ಉತ್ಪಾದನೆಗೆ ಜೋಳ, ಭತ್ತ, ಹಣ್ಣು ಹಾಗೂ ತರಕಾರಿ ಉತ್ಪನ್ನಗಳನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ. ಇದು ಭಾರತೀಯ ಕೃಷಿಕರಿಗೆ ಹೆಚ್ಚಿನ ಆದಾಯ ಗಳಿಸಲು ಸಹಕರಿಸುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ 1.74 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆ – 41,448 ಉದ್ಯೋಗ ಸೃಷ್ಟಿಯ ನಿರೀಕ್ಷೆ

    ರಾಜ್ಯದಲ್ಲಿ 1.74 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆ – 41,448 ಉದ್ಯೋಗ ಸೃಷ್ಟಿಯ ನಿರೀಕ್ಷೆ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 60ನೇ ಸಭೆಯಲ್ಲಿ ಬರೋಬ್ಬರಿ 1,74,381.44 ಕೋಟಿ ರೂ. ಮೌಲ್ಯದ ಒಟ್ಟು 11 ಯೋಜನೆಗಳಿಗೆ (Investment Proposal) ಒಪ್ಪಿಗೆ ನೀಡಲಾಯಿತು.

    ರಾಜ್ಯದಲ್ಲಿ ಇಷ್ಟು ಭಾರಿ ಮೊತ್ತದ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದು ಇದೇ ಮೊದಲು. ಗ್ರೀನ್ ಹೈಡ್ರೋಜನ್ ಉತ್ಪಾದಕ ಸಂಸ್ಥೆ ಆಕ್ಮೆ ಕ್ಲೀನ್ ಟೆಕ್ ಸೆಲ್ಯೂಷನ್ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 3 ಹೆಚ್ಚುವರಿ ಹೂಡಿಕೆ ಯೋಜನೆಗಳ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ. ಈ ಯೋಜನೆಗಳಿಂದ ರಾಜ್ಯದಲ್ಲಿ 41,448 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಮೋದಿ ದೀಪಾವಳಿ- ರಾಮ ಮಂದಿರ ಕಾಮಗಾರಿ ಪರಿಶೀಲನೆ

    ಸಭೆಯಲ್ಲಿ ಯೋಜನೆಗಳಿಗೆ ಒಪ್ಪಿಗೆ ನೀಡಿದ ನಂತರ ಮಾತನಾಡಿದ ಬೊಮ್ಮಾಯಿ, ಹಸಿರು ಇಂಧನವೇ ಭವಿಷ್ಯ 2026ರಿಂದ ಗ್ರೀನ್ ಹೈಡ್ರೋಜನ್ (Green Hydrogen) ರಫ್ತು ಆರಂಭವಾಗಲಿದ್ದು, ದೇಶದ ಒಟ್ಟು ಗ್ರೀನ್ ಹೈಡ್ರೋಜಿನ್ ರಫ್ತಿನಲ್ಲಿ ರಾಜ್ಯದ ಪಾಲು ಅಧಿಕವಾಗಿರಲಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಮುಂದಾಗಿರುವ ಆಕ್ಮೆ ಕ್ಲೀನ್ ಟೆಕ್ ಸಲ್ಯೂಷನ್ ಪ್ರೈ. ಲಿ. ಜೆಎಸ್‍ಡಬ್ಲ್ಯು ಗ್ರೀನ್ ಹ್ರೈಡ್ರೋಜನ್ ಲಿ. ಅವದಾ ವೆಂಚರ್ಸ್ ಪ್ರೈ. ಲಿ. ಹಾಗೂ ರಿನ್ಯೂ ಇ-ಫ್ಯೂಯೆಲ್ಸ್ ಪ್ರೈವೇಟ್ ಲಿಮಿಟೆಡ್‍ನ ಪ್ರಸ್ತಾವನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಮೊದಲೇ ಇಷ್ಟು ಭಾರಿ ಮೊತ್ತದ ಬಂಡವಾಳ ರಾಜ್ಯದಲ್ಲಿ ಹೂಡಿಕೆ ಆಗುತ್ತಿರುವುದು ವಿಶೇಷ. ಇದು ನಮ್ಮ ಉತ್ಸಾಹ ಮತ್ತು ನಿರೀಕ್ಷೆಯನ್ನು ಹೆಚ್ಚಿಸಿದೆ ಎಂದರು.

    ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರ್ಕಾರವು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸುತ್ತಿದೆ. ಕಬ್ಬು ಬೆಳೆಯುವ ರಾಜ್ಯಗಳ ಪೈಕಿ ದೇಶದಲ್ಲೇ 3ನೇ ಸ್ಥಾನದಲ್ಲಿರುವ ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ಎಥನಾಲ್ (Ethanol) ಉತ್ಪಾದಿಸುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಪೂರಕವಾಗಿ ಇಂದಿನ ಸಭೆಯಲ್ಲಿ ಹಸಿರು ಇಂಧನ ಉತ್ಪಾದನಾ ವಲಯದ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿರುವುದು ಅತ್ಯಂತ ಸಂತಸದ ವಿಷಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಹೇಳಿದರು. ಇದನ್ನೂ ಓದಿ: ದೀಪಾವಳಿ ಹಬ್ಬದಂದೇ ಸೂರ್ಯಗ್ರಹಣ- ಬೆಂಗಳೂರಿನ ದೇಗುಲಗಳು ಬಂದ್

    ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೃಷಿ ಸಚಿವ ಬಿ.ಸಿ ಪಾಟೀಲ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯಕಾರ್ಯದಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ.ಇವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಆರ್. ಗಿರೀಶ್ ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ಅಪರ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಅನುಮೋದನೆ ಪಡೆದ ಯೋಜನೆಗಳು:
    ಆಕ್ಮೆ ಕ್ಲೀನ್ ಟೆಕ್ ಸಲ್ಯೂಷನ್ ಪ್ರೈ. ಲಿ. ಹೂಡಿಕೆ: 51,865 ಕೋಟಿ ರೂ.
    ಅವದಾ ವೆಂಚರ್ಸ್ ಪ್ರೈ. ಲಿ. ಹೂಡಿಕೆ: 45,000 ಕೋಟಿ ರೂ.
    ಜೆಎಸ್‍ಡಬ್ಲ್ಯು ಗ್ರೀನ್ ಹ್ರೈಡ್ರೋಜನ್ ಲಿ. ಹೂಡಿಕೆ: 40,148 ಕೋಟಿ ರೂ.
    ರಿನ್ಯೂ ಇ-ಫ್ಯೂಯೆಲ್ಸ್ ಪ್ರೈವೇಟ್ ಲಿಮಿಟೆಡ್, ಹೂಡಿಕೆ: 20,000 ಕೋಟಿ ರೂ.
    ಏಟ್ರಿಯಾ ಪವರ್ ಹೋಲ್ಡಿಂಗ್ಸ್ ಹೂಡಿಕೆ: 9,454 ಕೋಟಿ ರೂ.
    ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಲಿ. ಹೂಡಿಕೆ: 30,25 ಕೋಟಿ ರೂ.
    ಜೆಎಸ್‍ಡಬ್ಲ್ಯು ನಿಯೋ ಎನರ್ಜಿ ಲಿ. ಹೂಡಿಕೆ: 2,579 ಕೋಟಿ ರೂ.
    ಕಾಂಟಿನೆಂಟಲ್ ಆಟೋಮೇಟಿವ್ ಕಾಂಪೊನೆಂಟ್ಸ್‌ ಹೂಡಿಕೆ: 920 ಕೋಟಿ ರೂ.

    ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು:
    ಟೊಯೋಟ ಕಿರ್ಲೋಸ್ಕರ್ ಮೋಟಾರ್ ಪ್ರೈ ಲಿ. ಹೂಡಿಕೆ: 511 ಕೋಟಿ ರೂ.
    ಜಿ.ಎಂ ಶುಗರ್ ಮತ್ತು ಎನರ್ಜಿ ಲಿ. ಹೂಡಿಕೆ: 49.44 ಕೋಟಿ ರೂ.
    ರಿಸೋರ್ಸ್‍ಸ್ ಪೆಲ್ಲೆಟ್ಸ್ ಕಾನ್ಸನ್ಟ್ರೇಟ್ಸ್ ಪ್ರೈ. ಲಿ. ಹೂಡಿಕೆ: 830 ಕೋಟಿ ರೂ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ, ಎಥೆನಾಲ್ ನೀತಿ ಜಾರಿಗೆ ನಿರ್ಣಯ: ಮುನೇನಕೊಪ್ಪ

    ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ, ಎಥೆನಾಲ್ ನೀತಿ ಜಾರಿಗೆ ನಿರ್ಣಯ: ಮುನೇನಕೊಪ್ಪ

    ಬೆಳಗಾವಿ: ರಾಜ್ಯದ ಕಬ್ಬು, ಮೆಕ್ಕೆಜೋಳ, ಭತ್ತ ಬೆಳಗಾರರನ್ನು ಆರ್ಥಿಕವಾಗಿ ಸಬಲ ಮಾಡುವ ನಿಟ್ಟಿನಲ್ಲಿ ಒಂದು ತಿಂಗಳ ಒಳಗಾಗಿ ಎಥನಾಲ್ ನೀತಿ ಜಾರಿಗೆ ನಿರ್ಣಯ ಸರ್ಕಾರ ನಿರ್ಧರಿಸಿದೆ ಎಂದು ಜವಳಿ ಮತ್ತು ಕೈಮಗ್ಗ ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವರೂ ಆದ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಬೆಳಗಾವಿ ಸುವರ್ಣಸೌಧದಲ್ಲಿ ಇವತ್ತು ಕಬ್ಬು ಬೆಳೆಗಾರರು, ಕಾರ್ಖಾನೆ ವ್ಯವಸ್ಥಾಪಕರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಲಭಿಸಬೇಕು ಎಂಬ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಎಥೆನಾಲ್ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೇಡೌನ್‌ ಮೇಲೆ ಅಧಿಕಾರಿಗಳ ದಾಳಿ

    ಕೇಂದ್ರ ಸರ್ಕಾರ ಎಥೆನಾಲ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ. ಪ್ರಸ್ತುತ ಎಥೆನಾಲ್ ಪರ್ಯಾಯ ಹಾಗೂ ಸಹ ಇಂಧನವಾಗಿ ಬಳಕೆಯಾಗುತ್ತದೆ. ಇದರಿಂದ ಇಂಧನ ಸಮಸ್ಯೆ ಉತ್ತರ ದೊರೆಯಲಿದ್ದು. ಹೆಚ್ಚಿನ ಉದ್ಯೋಗ ಸೃಷ್ಠಿಯಾಗಲಿದೆ. ಸರ್ಕಾರಕ್ಕೂ ಆದಾಯ ಬರುವುದು. ಎಥೆನಾಲ್ ಜಾರಿಗೊಳಿಸುವಿಕೆಯಿಂದ ಕಬ್ಬು ಬೆಳೆದ ರೈತರಿಗೆ ಸಮಯಕ್ಕೆ ಸರಿಯಾಗಿ ಹಣ ಲಭಿಸಲಿದೆ, ಸಕ್ಕರೆ ಕಾರ್ಖಾನೆಗಳು ಸಹ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಹಾಯಕ ವಾಗಲಿದೆ ಎಂದು ಮಾಹಿತಿ ಹಂಚಿಕೊಂಡರು.

    ಇತರೆ ರಾಜ್ಯಗಳಾದ ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಎಥೆನಾಲ್ ಉತ್ಪಾದನೆ ಮಾಡುತ್ತಿರುವ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗುವುದು. ಸಮಿತಿ ನೀಡಿದ ವರದಿಯನ್ನು ಪರಿಶೀಲಿಸಿ, ತ್ವರಿತವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳಲಾಗುವುದು. ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಈ ಕುರಿತು ಎರಡು ದಿನಗಳ ಹಿಂದೆ ಸಲಹೆ ನೀಡಿದ್ದರು. ಇದಕ್ಕೆ ಸ್ಪಂದಿಸಿ ಇಂದು ಸಭೆ ನೆಡೆಸಿ ನಿರ್ದೇಶನ ನೀಡಲಾಗಿದೆ ಎಂದರು. ಇದನ್ನೂ ಓದಿ: ಸಕ್ರಿಯ ರಾಜಕಾರಣ ತ್ಯಜಿಸಿದ ಮೆಟ್ರೋಮ್ಯಾನ್ ಇ ಶ್ರೀಧರನ್

    ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಉಮೇಶ್ ಕತ್ತಿ, ಶಿವರಾಮ್ ಹೆಬ್ಬಾರ್, ವಾದಕರಾದ ಪಿ.ರಾಜೀವ್, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ರೈತ ಮುಖಂಡರು, ಕಾರ್ಖಾನೆ ಮಾಲಿಕರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಎಥೆನಾಲ್ ಉತ್ಪಾದನೆಗೆ ಮುಂದಾದ ಕೇಂದ್ರ ಸರ್ಕಾರ

    ಎಥೆನಾಲ್ ಉತ್ಪಾದನೆಗೆ ಮುಂದಾದ ಕೇಂದ್ರ ಸರ್ಕಾರ

    ನವದೆಹಲಿ: ದೇಶದಲ್ಲಿ ಒಂದೆಡೆ ತೈಲಬೆಲೆ ಏರಿಕೆ ಸಾಮಾನ್ಯ ಜನರ ಗಾಯದ ಮೇಲೆ ಬರೆ ಎಳೀತಿದೆ. ಮತ್ತೊಂದೆಡೆ ಎಲೆಕ್ಟ್ರಾನಿಕ್ ವಾಹನಗಳ ದರ ಮಧ್ಯಮ ವರ್ಗಕ್ಕೆ ಕೈಗೆಟುಕುತ್ತಿಲ್ಲ. ಹೀಗಾಗಿ ಎಥೆನಾಲ್ ಉತ್ಪಾದನೆಗೆ ಹೆಚ್ಚು ಮಣೆ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ.

    2025ರ ವೇಳೆಗೆ ಎಥೆನಾಲ್ ಉತ್ಪಾದನೆ ಶೇ.20ರಷ್ಟು ಹೆಚ್ಚಿಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2020-21ನೇ ಸಾಲಿನಲ್ಲಿ ಎಥೆನಾಲ್‍ಗೆ ಹೆಚ್ಚಿನ ಬೆಲೆ ನೀಡಲು ಅನುಮೋದನೆ ನೀಡಿದೆ. ಕಬ್ಬು ಆಧಾರಿತ ನಾನಾ ಕಚ್ಚಾ ಸಾಮಗ್ರಿಗಳಿಂದ ಪಡೆದ ಎಥೆನಾಲ್‍ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಇದನ್ನೂ ಓದಿ: ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ

    ಸದ್ಯ 332 ಕೋಟಿ ಲೀಟರ್ ಎಥೆನಾಲ್‍ನ ಪೆಟ್ರೋಲ್‍ಗೆ ಮಿಕ್ಸ್ ಮಾಡಲಾಗುತ್ತಿದೆ. 2025-26ರ ವೇಳೆಗೆ 1,016 ಕೋಟಿ ಲೀಟರ್‍ಗಳಿಗೆ ಹೆಚ್ಚಿಸಲು ಗುರಿ ಇಟ್ಟುಕೊಂಡಿದೆ. ಎಥೆನಾಲ್ ಬಳಕೆಯಿಂದ ಕಾರ್ಬನ್ ಡೈ ಆಕ್ಸೈಡ್ ಉತ್ಪಾದನೆ ಕಡಿಮೆಯಾಗಲಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೆ ಬರಲಿದೆ. ಎಥೆನಾಲ್ ಉತ್ಪಾದನೆಗೆ ಆಹಾರ ಪದಾರ್ಥಗಳನ್ನು ಬಳಸುವುದರಿಂದ ರೈತರಿಗೂ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.  ಇದನ್ನೂ ಓದಿ: ಐಸಿಸ್ ಉಗ್ರ ಸಂಘಟನೆಗೆ ಹಿಂದುತ್ವ ಹೋಲಿಕೆ – ವಿವಾದಕ್ಕೆ ಸಿಲುಕಿದ ಖುರ್ಷಿದ್ ಪುಸ್ತಕ

    ಈ ನಡುವೆ ಪ್ರತಿ ಲೀಟರ್ ಎಥೆನಾಲ್ ಮೇಲೆ 2.5 ರೂ ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಡಿಸೆಂಬರ್ 1 ರಿಂದ ಈ ಹೊಸ ಬೆಲೆ ಅನ್ವಯವಾಗಲಿದ್ದು, ಈ ಹಿಂದೆ ನವೆಂಬರ್ 10 ರಂದು ಎಥನಾಲ್ ಬೆಲೆಯನ್ನು 80 ಪೈಸೆ ಏರಿಕೆ ಮಾಡಿತ್ತು. ಪ್ರಸ್ತುತ ಎಥನಾಲ್ ಬೆಲೆ 62.65 ರೂ. ಇದ್ದು, 63.45 ರೂ.ಗೆ ಏರಿಕೆ ಕಾಣಲಿದೆ ಎಂದು ಅನುರಾಗ್ ಸಿಂಗ್ ಠಾಕೂರ್ ಸ್ಪಷ್ಟಪಡಿಸಿದ್ದಾರೆ.