Tag: ex-gratia

  • ವಡೋದರಾ ಸೇತುವೆ ಕುಸಿತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    ವಡೋದರಾ ಸೇತುವೆ ಕುಸಿತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    ಗಾಂಧೀನಗರ: ವಡೋದರಾದಲ್ಲಿ (Vadodara) ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಈ ಕುರಿತು ಪ್ರಧಾನಿ ಮೋದಿ ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು (Ex-Gratia) ಘೋಷಿಸಿದ್ದು, ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆ ಹಂಚಿಕೊಂಡಿದೆ.ಇದನ್ನೂ ಓದಿ: ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

    ವಡೋದರಾ ಜಿಲ್ಲೆಯ ಪದ್ರಾ-ಮುಜ್‌ಪುರ ಪ್ರದೇಶದಲ್ಲಿ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಗಂಭೀರಾ ಸೇತುವೆಯ ಒಂದು ಭಾಗ ಬುಧವಾರ ಬೆಳಿಗ್ಗೆ ಸುಮಾರು 7:30ರ ವೇಳೆಗೆ ಕುಸಿದಿದೆ. ಪರಿಣಾಮ ಸೇತುವೆಯ ಮೇಲೆ ಸಂಚರಿಸುತ್ತಿದ್ದ ಟ್ರಕ್, ವ್ಯಾನ್ ಮತ್ತು ಕಾರುಗಳು ನದಿಗೆ ಉರುಳಿ ಬಿದ್ದಿವೆ. ವಾಹನಗಳಲ್ಲಿದ್ದ 9ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

    ತಕ್ಷಣ ಸ್ಥಳೀಯರು ಮತ್ತು ತುರ್ತು ಸೇವಾ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದು, ಮೃತದೇಹಗಳನ್ನು ಹೊರತೆಗೆದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ವಡೋದರಾ ಎಸ್‌ಪಿ ರೋಹನ್ ಆನಂದ್ ಹಾಗೂ ಸಂಸದ ಮಿತೇಶ್ ಪಟೇಲ್ ಸಾವನ್ನಪ್ಪಿರುವ ಕುರಿತು ಮಾಹಿತಿ ದೃಢಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ವಡೋದರಾ ಹಾಗೂ ಆನಂದ್ ಜಿಲ್ಲೆಗಳ ಅಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಮಟ್ಟದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

    ಸ್ಥಳಕ್ಕೆ ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ತಂಡಗಳು, ಪೊಲೀಸ್ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಸೇತುವೆ ಮಧ್ಯ ಗುಜರಾತ್ ಹಾಗೂ ಸೌರಾಷ್ಟ್ರವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು, ವಡೋದರಾ ನಗರದಿಂದ ಕೇವಲ 25 ಕಿ.ಮೀ ದೂರದಲ್ಲಿದೆ. ಸೇತುವೆ ಕುಸಿತದಿಂದಾಗಿ ಈ ಮಾರ್ಗದ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.ಇದನ್ನೂ ಓದಿ: ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

  • ಕೇರಳ ದುರಂತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    ಕೇರಳ ದುರಂತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    ತಿರುವನಂತಪುರಂ: ಕೇರಳದ (Kerala) ಪಾಲಕ್ಕಾಡ್ (Palakkad) ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (NrendraModi) ಅವರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‍ಆರ್‌ಎಫ್)ನಿಂದ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ.ಗಳನ್ನು ಮತ್ತು ಗಾಯಾಳುಗಳಿಗೆ ರೂ. 50,000 ರೂ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಎಸ್‍ಆರ್‌ಟಿಸಿಗೆ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ ಡಿಕ್ಕಿ – 9 ಮಂದಿ ಸಾವು, 40 ಜನರಿಗೆ ಗಾಯ

    ಶಾಲೆಯ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್, ಕೆಎಸ್‍ಆರ್‌ಟಿಸಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿರುವ ಘಟನೆ ವಡಕ್ಕೆಂಚೇರಿಯಲ್ಲಿ ನಡೆದಿದೆ.  ಇದನ್ನೂ ಓದಿ: ನ. 1 ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ – ಪಕ್ಷ ಸಂಘಟನೆಗೆ ಒತ್ತು: ಹೆಚ್‍ಡಿಕೆ

    ವಾಳಯಾರ್-ವಡಕ್ಕೆಂಚೇರಿ (Walayar-Vadakkencherry) ರಾಷ್ಟ್ರೀಯ ಹೆದ್ದಾರಿಯ ಅಂಜುಮೂರ್ತಿ ಮಂಗಲಂ ಬಸ್ ನಿಲ್ದಾಣದ ಬಳಿ ಈ ಅಪಘಾತ ನಡೆದಿದ್ದು, ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಕೆಎಸ್‍ಆರ್‌ಟಿಸಿ ಬಸ್‍ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿಯಾಗಿದೆ.

    Live Tv
    [brid partner=56869869 player=32851 video=960834 autoplay=true]