Tag: ex mla

  • ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ- ಮಾಜಿ ಶಾಸಕ ಕೆ.ಎನ್ ರಾಜಣ್ಣ

    ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ- ಮಾಜಿ ಶಾಸಕ ಕೆ.ಎನ್ ರಾಜಣ್ಣ

    ತುಮಕೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರಬಹುದು. ಆದ್ರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿಯಿಲ್ಲ ಅಂತ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಇರಬಹುದು ಮಧುಗಿರಿಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಮಂತ್ರ ಇಲ್ಲ. ಸ್ಥಳೀಯ ಮತದಾರರು ಹಾಗೂ ಸ್ಥಳೀಯ ಮುಖಂಡರೇ ನಮಗೆ ಹೈಕಮಾಂಡ್. ಈ ಮೂಲಕ ಹೈಕಮಾಂಡ್ ಗೆ ಮಾತಿಗೂ ಮನ್ನಣೆ ಇಲ್ಲ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.

    ಮಧುಗಿರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಬಿಗ್ ಫೈಟ್ ಸಾಧ್ಯತೆ ಇದೆ. ಪುರಸಭೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಅಂತ ಪುರಸಭಾ ಚುನಾವಣೆ ಪೂರ್ವಾಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಎನ್‍ಆರ್ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಮಾಜಿ ಶಾಸಕರ ಕಾರು ಡಿಕ್ಕಿ- ಬಾಲಕ ಸಾವು

    ಮಾಜಿ ಶಾಸಕರ ಕಾರು ಡಿಕ್ಕಿ- ಬಾಲಕ ಸಾವು

    ಕೊಪ್ಪಳ: ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಮುಕ್ಕುಂಪಿ ಗ್ರಾಮದ ಬಳಿ ನಡೆದಿದೆ.

     

    ಮುಕ್ಕುಂಪಿ ಗ್ರಾಮದ 12 ವರ್ಷದ ಬಾಲಕ ಬಸವರಾಜ ಮೃತ ಬಾಲಕ. ಈತ ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ವತಃ ಶಾಸಕರೇ ತಮ್ಮ ಕಾರ್ ನಲ್ಲಿ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ವಾಹನ ಗಮನಿಸದೇ ರಸ್ತೆ ದಾಟಿದ್ದು ಘಟನೆಗೆ ಕಾರಣ ಎನ್ನಲಾಗಿದೆ.

    ಚಿಕಿತ್ಸೆಗಾಗಿ ಬಾಲಕನನ್ನು ಕರೆ ತಂದಿದ್ದ ಗಂಗಾವತಿ ಸರ್ಕಾರಿ ಆಸ್ಪತ್ರೆ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮುಂದಿನ ವಾರ ಮತ್ತೊಂದು ಸಿನಿಮಾ ನೋಡಲಿದ್ದಾರೆ ಸಿಎಂ

    ಮುಂದಿನ ವಾರ ಮತ್ತೊಂದು ಸಿನಿಮಾ ನೋಡಲಿದ್ದಾರೆ ಸಿಎಂ

    ಬೆಂಗಳೂರು: ಕಳೆದ ವಾರ ಬಾಹುಬಲಿ-2 ಚಿತ್ರ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ ಮುಂದಿನ ವಾರ ಮತ್ತೊಂದು ಸಿನಿಮಾ ವೀಕ್ಷಿಸಲಿದ್ದಾರೆ.

    ಇಂದು ನಟ ಹಾಗೂ ಮಾಜಿ ಶಾಸಕ ಬಿ.ಸಿ.ಪಾಟೀಲ್ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ರು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಮಾತನಾಡಿದ ಬಿ.ಸಿ.ಪಾಟೀಲ್, ಹ್ಯಾಪಿ ನ್ಯೂ ಇಯರ್ ಚಿತ್ರ ವೀಕ್ಷಿಸುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ಮುಂದಿನ ವಾರ ಚಿತ್ರ ವೀಕ್ಷಿಸೋದಾಗಿ ಸಿಎಂ ಹೇಳಿದ್ದಾರೆ ಅಂದ್ರು.

    ಇದನ್ನೂ ಓದಿ: ಬಾಹುಬಲಿ ಸಿನಿಮಾ ವೀಕ್ಷಣೆ: ಕೈ ನಾಯಕನ ವಿರುದ್ಧ ಸಿಎಂ ಗರಂ

    ಇದೇ ವೇಳೆ ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಸಿಎಂಗೆ ಮನವಿ ಮಾಡಿರೋದಾಗಿ ಬಿ.ಸಿ.ಪಾಟೀಲ್ ಹೇಳಿದ್ರು. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಆಗಮನದ ಹಿನ್ನೆಲೆಯಲ್ಲಿ, ಮಾಜಿ ಶಾಸಕರಾಗಿ ನಮ್ಮದೂ ಕೂಡಾ ಬೇಡಿಕೆಗಳಿವೆ. ಇಂದು ವೇಣುಗೋಪಾಲ್ ಅವರನ್ನು ಭೇಟಿ ಮಾಡುತ್ತೇನೆ. ಮುಖ್ಯಮಂತ್ರಿ ದಕ್ಷಿಣ ಕರ್ನಾಟಕ ಭಾಗದವರಾಗಿರುವ ಕಾರಣ ಉತ್ತರ ಕರ್ನಾಟಕ ಭಾಗಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ವೇಣುಗೋಪಾಲ್ ಅವರಿಗೆ ಮನವಿ ಮಾಡುತ್ತೇನೆ ಅಂದ್ರು.

    ಪನ್ನಗಾಭರಣ ನಿರ್ದೇಶನದಲ್ಲಿ ಮೂಡಿಬಂದಿರೋ ಹ್ಯಾಪಿ ನ್ಯೂ ಇಯರ್ ಚಿತ್ರದಲ್ಲಿ ಸಾಯಿ ಕುಮಾರ್, ಬಿಸಿ ಪಾಟೀಲ್, ಶೃತಿ ಹರಿಹರನ್, ದಿಗಂತ್, ವಿಜಯ್ ರಾಘವೇಂದ್ರ, ಧನಂಜಯ್, ಸುಧಾರಾಣಿ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.