ಕಲಬುರಗಿ: PSI ಪರೀಕ್ಷಾ ಅಕ್ರಮ ಕುರಿತು ಸಿಐಡಿ ತನಿಖೆ ಚುರುಕುಗೊಳಿಸಿದ್ದು, ಬಂಧಿತ ಆರೋಪಿಗಳ ಸಂಖ್ಯೆ 40ರ ಗಡಿ ದಾಟಿದೆ. ಇಂದೂ ಸಹ ಬೆಂಗಳೂರಿನಲ್ಲಿ ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಕಲಬುರಗಿಯಲ್ಲಿ ಇನ್ನೊಬ್ಬ ಆರೋಪಿ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಇಲ್ಲಿನ ಮತ್ತೊಂದು MSI ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲಾಗಿದೆ. ಈ ಕೇಂದ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಪರೀಕ್ಷೆ ಪಾಸ್ ಮಾಡಿದ್ದರು. ಅವರಲ್ಲಿ ಓರ್ವ ಅಭ್ಯರ್ಥಿ ಪ್ರಭು ಬ್ಲೂಟೂತ್ ಬಳಸಿ ಅಕ್ರಮವಾಗಿ ಪರೀಕ್ಷೆ ಪಾಸ್ ಮಾಡಿದ್ದರು. ನಿನ್ನೆ ಆರೋಪಿ ಪ್ರಭುನೊಂದಿಗೆ ಆತನ ತಂದೆ ಶರಣಪ್ಪನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: MES ಮುಖಂಡ ಶುಭಂ ಶಳಕೆಯಿಂದ DDPI ಕಚೇರಿಗೆ ನುಗ್ಗಿ ಪುಂಡಾಟಿಕೆ – ವೀಡಿಯೋ ವೈರಲ್
ಅಕ್ರಮ ಎಸಗಿದ ಅಭ್ಯರ್ಥಿ ಪ್ರಭು ನನ್ನು ಎಂಎಸ್‌ಐ ಕಾಲೇಜಿನಲ್ಲಿ ಮಹಜರು ನಡೆಸಲಾಗಿದೆ. ಈತ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರು ಬಂದಕೂಡಲೇ ಪೊಲೀಸ್ ಹೇರ್‌ಸ್ಟೈಲ್ ಕಟಿಂಗ್ ಸಹ ಮಾಡಿಸಿಕೊಂಡಿದ್ದ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಬೆಂಗ್ಳೂರಿನ ಕೇಂದ್ರಗಳ ಮೇಲೆ ಕಣ್ಣು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ತನಿಖೆಯು ಇದೀಗ ಕಲಬುರಗಿಯಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ವ್ಯಾಪಿಸಿದ್ದು, ಬೆಂಗಳೂರಿನ 7 ಪರೀಕ್ಷಾ ಕೇಂದ್ರಗಳ ಮೇಲೂ ಸಿಐಡಿ ದಾಳಿಯನ್ನು ಮಾಡಿ ಮತ್ತಷ್ಟು ಮಹತ್ವದ ಮಾಹಿತಿ ಬಯಲಿಗೆಳೆಯಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಆ್ಯಸಿಡ್ ದಾಳಿ ಪ್ರಕರಣ – ಯುವತಿಯ ಆರೋಗ್ಯದಲ್ಲಿ ಚೇತರಿಕೆ
PSI 545 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ, ಬೆಂಗಳೂರಿನಿಂದ ಆಯ್ಕೆಯಾಗಿದ್ದ 172 ಅಭ್ಯರ್ಥಿಗಳ ಎಫ್‌ಎಸ್‌ಎಲ್ ವರದಿಯಲ್ಲಿ 22 ಅಭ್ಯರ್ಥಿಗಳ ಅಸಲಿ OMR ಮತ್ತು OMR ಕಾರ್ಬನ್ ಪ್ರತಿಯಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಇದೀಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಹೆಸರು ಕೇಳಿಬರುತ್ತಿದ್ದಂತೆ ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಮೇಲೆ ಸಿಐಡಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.
ಮೈಸೂರು: ಪರೀಕ್ಷಾ ಕೇಂದ್ರ ಅದಲು, ಬದಲು ಗೊಂದಲದಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
ಅನುಶ್ರೀ ಮೃತ ವಿದ್ಯಾರ್ಥಿನಿ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮಾದಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಅನುಶ್ರೀ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಟಿ. ನರಸೀಪುರದ ವಿದ್ಯೋದಯ ಪಿಯು ಕಾಲೇಜಿಗೆ ತೆರಳಬೇಕಿತ್ತು. ಆದರೆ, ಗೊಂದಲದಿಂದ ಅನುಶ್ರೀ ಟಿ. ನರಸೀಪುರದ ಶಿವಾನಂದ ಶರ್ಮ ಇಂಗ್ಲಿಷ್ ಮಾಧ್ಯಮ ಶಾಲೆಯ ಕೇಂದ್ರಕ್ಕೆ ಹೋಗಿದ್ದಳು. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಈ ವೇಳೆ ಈ ಕೇಂದ್ರದಲ್ಲಿ ಅನುಶ್ರೀ ಎಂಬ ಮತ್ತೊರ್ವ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಕುಳಿತಿದ್ದಳು. ಆಗ ವಿಚಾರಣೆ ನಡೆಸಿದಾಗ ಮೇಲ್ವಿಚಾರಕರು ವಿದ್ಯೋದಯ ಪರೀಕ್ಷಾ ಕೇಂದ್ರಕ್ಕೆ ತೆರಳಲು ಸೂಚಿಸಿದ್ದರು. ಈ ಗೊಂದಲದಲ್ಲಿ 20 ನಿಮಿಷ ತಡವಾಗಿ ಪರೀಕ್ಷೆ ಬರೆಯಲು ಆರಂಭಿಸಿದ್ದ ಅನುಶ್ರೀಗೆ ಒತ್ತಡದಿಂದ ಹೃದಯಾಘಾತವಾಗಿದೆ. ಇದನ್ನೂ ಓದಿ: ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದ್ರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಕಿಡಿ
ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಗಸ್ಟ್ 28, 29 ಮತ್ತು 30ರಂದು ರಾಜ್ಯದಲ್ಲೆಡೆ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್‍ನಾರಾಯಣ್ ಶುಕ್ರವಾರ ಎಲ್ಲ ಸಿದ್ಧತೆಗಳನ್ನು ಖುದ್ದು ಪರಿಶೀಲಿಸಿದರು.
ಈ ಸಂಬಂಧ ನಗರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಲ್ಲೇಶ್ವರದ 18ನೇ ಕ್ರಾಸ್ ನಲ್ಲಿರುವ ಸರ್ಕಾರಿ ಪಿಯು ಕಾಲೇಜಿಗೆ ತೆರಳಿ ಪರೀಕ್ಷಾ ಸಿದ್ಧತೆಗಳನ್ನು ನೇರವಾಗಿ ವೀಕ್ಷಿಸಿದರು.
ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸವಾಲಿನ ನಡುವೆಯೇ ಸಿಇಟಿ ನಡೆಯುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆಗಳನ್ನು ಸಚಿವರು ಪರಿಶೀಲನೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ನಡೆಯುತ್ತಿದ್ದು, ಕೋವಿಡ್ ಒತ್ತಡವನ್ನು ಮನಸ್ಸಿನಿಂದ ತೆಗೆದು ಹಾಕಿ ವಿದ್ಯಾರ್ಥಿಗಳು ಧೈರ್ಯ, ಸಂತೋಷದಿಂದ ಪರೀಕ್ಷೆ ಬರೆಯಬೇಕು. ಇದನ್ನು ಸಿಇಟಿ ಪರೀಕ್ಷೋತ್ಸವ ಎಂದು ಕರೆಯಲು ಬಯಸುತ್ತೇನೆ ಎಂದರು. ಇದನ್ನೂ ಓದಿ: ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ
ಮಹತ್ವದ ಅಂಶವೆಂದರೆ ಕೋವಿಡ್ ಕಾರಣದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದ್ದು, ಸಿಇಟಿ ಅಂಕದ ಆಧಾರದ ಮೇಲೆಯೇ ರ್ಯಾಂಕ್ ನಿರ್ಧಾರ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬರು ಸಿಇಟಿ ಬರೆಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ
ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲೇ ಇವೆ. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಿವೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅಗಸ್ಟ್ 30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಈ ಕೇಂದ್ರಗಳಲ್ಲಿ 1,682 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆಯುವಂತೆ, ಪ್ರತಿ ಬೆಂಚಿನಲ್ಲಿ ಇಬ್ಬರು ಅಭ್ಯರ್ಥಿಗಳು ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಎರಡು ಬೆಂಚ್ ನಡುವೆ ಮೂರು ಅಡಿ ಅಂತರ ಕಾಪಾಡಿಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕ್ರಮ ವಹಿಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಹ್ಯಾಂಡ್ ಸ್ಯಾನಿಟೈಸರ್ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಬಿಬಿಎಂಪಿ ವತಿಯಿಂದ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ 100 ಮಾಸ್ಕ್ ಗಳನ್ನು ಸ್ವಯಂ ಸೇವಾ ಸಂಸ್ಥೆಯಿಂದ ಎರಡು ದಿನ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ವಾರಾಂತ್ಯದ ಕರ್ಫ್ಯೂ ಇರುವ ಗಡಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಮತ್ತು ಪೋಷಕರು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ಅನುಕೂಲವಾಗಲು ಸಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರಿಗಣಿಸಿ ಅವಕಾಶ ನೀಡಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಕೇರಳ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಲಾಗಿದೆ. ಇದನ್ನೂ ಓದಿ: ಮಾಜಿ ಗಂಡನ ಹೇಳಿಕೆಯಿಂದ ಚೀನಾದ ಖ್ಯಾತ ನಟಿಗೆ ಬಿತ್ತು 340 ಕೋಟಿ ರೂ. ದಂಡ
ಉಳಿದಂತೆ ಪರೀಕ್ಷೆಗೆ ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನೂ ಸಮರ್ಪಕವಾಗಿ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ.
ಪರೀಕ್ಷೆ ವೇಳಾಪಟ್ಟಿ:
ಆಗಸ್ಟ್ 28ರಂದು ಶನಿವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ. ಆಗಸ್ಟ್ 29ರಂದು ಭಾನುವಾರ ಬೆಳಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. 30ರಂದು ಭಾನುವಾರ ಬೆಳಗ್ಗೆ 11.30ರಿಂದ 12.50 ರವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ.
ಅಭ್ಯರ್ಥಿಗಳು http://kea.kar.nic.in ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ಮುದ್ರಿತವಾಗಿರುವ ಸೂಚನೆಗಳನ್ನು ಪಾಲಿಸಿ, ಅದರಲ್ಲಿ ನಮೂದಿಸಲಾದ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು. ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳು, ಉತ್ತರಗಳು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಮುದ್ರಿತವಾಗಿರುತ್ತವೆ. ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗಮನಿಸಬೇಕು.
ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ
ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿದ್ದರೆ, ಅಂಥವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಸ್‍ಒಪಿ ಪ್ರಕಾರ ಅವರಿಗೆ ಪ್ರತಿ ಜಿಲ್ಲೆಯಲ್ಲೂ ಪರೀಕ್ಷೆ ಬರೆಸಲಾಗುವುದು. ಯಾರೇ ವಿದ್ಯಾರ್ಥಿಗಳು ಸೋಂಕಿತರಿದ್ದರೆ ಧೈರ್ಯವಾಗಿ ಪರೀಕ್ಷೆ ಬರೆಯಲು ಅವಕಾಶ ಇದೆ. ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಅರೆವೈದ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆ ಪತ್ರಿಕೆ ಪಾಲಕರು, ಸುಮಾರು 8,409 ಕೊಠಡಿ ಮೇಲ್ವಿಚಾರಕರು ಹಾಗೂ ಒಟ್ಟು 20,415 ಅಧಿಕಾರಿಗಳು, ಸಿಬ್ಬಂದಿ ಪರೀಕ್ಷೆ ಕರ್ತವ್ಯ ನಿರ್ವಹಿಸಲಿದ್ದಾರೆ. ಪರೀಕ್ಷಾ ದಿನಗಳಂದು ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ, ಖಜಾನೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.
ಆನ್ ಲೈನ್ ಮೂಲಕ ದಾಖಲೆಗಳ ಸಲ್ಲಿಕೆ
ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಸಿಇಟಿ ಅರ್ಜಿಯಲ್ಲಿ ಕೋರಿರುವ ಮೀಸಲಾತಿಗೆ ಅಗತ್ಯ ದಾಖಲೆಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಹೀಗೆ ಆನ್ ಲೈನ್ ಮೂಲಕ ಸಲ್ಲಿಸಿರುವ ದಾಖಲೆಗಳನ್ನು ಆನ್ ಲೈನ್ ಮೂಲಕವೇ ಪರಿಶೀಲನೆ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ ನಲ್ಲಿ ಪ್ರಕಟಿಸಲಾಗುವುದು. ಜೊತೆಗೆ ವಿಶೇಷ ವರ್ಗದ ಅಭ್ಯರ್ಥಿಗಳಿಗೆ ದಾಖಲಾತಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗುವುದು. ಎಲ್ಲ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿರುವ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲೂ ಅಂತಿಮ ಅವಕಾಶವನ್ನು ನೀಡಲಾಗುತ್ತಿದೆ. ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಗದಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದಾಗ ಅಪಘಾತವಾಗಿ ಆಸ್ಪತ್ರೆಗೆ ಸೇರಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮುಂಡರಗಿ ತಾಲೂಕಿನ ಕಲಕೇರಿ ಪರೀಕ್ಷಾ ಕೇಂದ್ರದಿಂದ ಜೂನ್ 25ರಂದು ಮೊದಲ ಪರೀಕ್ಷೆ ಮುಗಿಸಿ ಬೈಕ್‍ನಲ್ಲಿ ಮೂವರು ವಿದ್ಯಾರ್ಥಿಗಳು ಬಾಗೇವಾಡಿ ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ದಾರಿ ನಡುವೆ ಲಾರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಸ್ಥಳಲ್ಲೇ ಓರ್ವ ಮೃತಪಟ್ಟಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಆತಂಕದ ಹಿನ್ನೆಲೆ ಇಬ್ಬರು ವಿದ್ಯಾರ್ಥಿಗಳ ಗಂಟಲು ದ್ರವವನ್ನು ಕೋವಿಡ್-19 ಕಳುಹಿಸಲಾಗಿತ್ತು. ಈ ಪೈಕಿ ಬಳ್ಳಾರಿ ತಾಲೂಕಿನ ಕಪಗಲ್ ಗ್ರಾಮದ ವಿದ್ಯಾರ್ಥಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ವಿದ್ಯಾರ್ಥಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಕಲಕೇರಿ ಪರೀಕ್ಷಾ ಕೇಂದ್ರದಲ್ಲಿ ಆತನೊಂದಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಆತಂಕ ಶುರುವಾಗಿದೆ. ಇತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಯ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡಲು ಮುಂದಾಗಿದ್ದಾರೆ.
ಮೈಸೂರು: ಕಂಟೈನ್ಮೆಂಟ್ ಝೋನ್‍ನಲ್ಲಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರವನ್ನು ಬೇರೆ ಕಡೆಗೆ ಸ್ಥಳಾಂತರಗೊಳಿಸಿ ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.
ನಗರದ ಕಂಟೈನ್ಮೆಂಟ್ ಝೋನ್‍ನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಪರೀಕ್ಷಾ ಕೇಂದ್ರವನ್ನು ಸ್ಥಳಾಂತರಗೊಳಿಸಿದ್ದಾರೆ.
ಮೈಸೂರಿನ ದೇವರಾಜ ಮೊಹಲ್ಲಾದ ಕೃಷ್ಣವಿಲಾಸ ರಸ್ತೆ ಎರಡು ದಿನಗಳ ಹಿಂದೆಯಷ್ಟೇ ಸೀಲ್‍ಡೌನ್ ಆಗಿದೆ. ಈ ಪ್ರದೇಶದ ವ್ಯಾಪ್ತಿಯಲ್ಲೇ ಅವಿಲಾ ಕಾನ್ವೆಂಟ್ ಇದ್ದು, ಅಲ್ಲಿಯೇ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸಾರ್ವಜನಿಕ ಮುಂದಾಗಿತ್ತು.
ಈ ಬಗ್ಗೆ ಸ್ಪಷ್ಟೀಕರಣ ರೂಪದ ಕಥೆ ಹೇಳಿದ್ದ ಡಿಡಿಪಿಐ ಪಾಂಡುರಂಗ ಅವರು, “ನಾವು ಪರೀಕ್ಷಾ ಕೇಂದ್ರ ಸ್ಥಳಾಂತರಕ್ಕೆ ಸಿದ್ಧರಿದ್ದೇವೆ. ಈ ಬಗ್ಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೋಷಕರ ಅಭಿಪ್ರಾಯ ಸಂಗ್ರಹಿಸಿದ್ವಿ. ಆದರೆ ಅವರು ಅವಿಲಾ ಕಾನ್ವೆಂಟ್‍ನಲ್ಲೇ ಪರೀಕ್ಷೆ ನಡೆಸಿ ಎನ್ನುತ್ತಿದ್ದಾರೆ. ಆದ್ದರಿಂದ ಅವಿಲಾ ಕಾನ್ವೆಂಟ್‍ನಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದರು.
ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಸದ್ಯ ಅವಿಲಾ ಕಾನ್ವೆಂಟ್ ಪರೀಕ್ಷಾ ಕೇಂದ್ರವನ್ನು ಸ್ಥಳಾಂತರಗೊಳಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆತಂಕ ಕಡಿಮೆಯಾಗಿದೆ.
ಜಿಲ್ಲೆಯಲ್ಲಿ 39,822 ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿದ್ದು, ಅವರಲ್ಲಿ 20,631 ಬಾಲಕರು ಹಾಗೂ 19,191 ಬಾಲಕಿಯರಿದ್ದು, ಇವರಿಗೆ ಒಟ್ಟು 139 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 849 ವಿದ್ಯಾರ್ಥಿಗಳು ಹೊರ ಜಿಲ್ಲೆಗೆ ಪರೀಕ್ಷಾ ಕೇಂದ್ರ ಬದಲು ಮಾಡಿಕೊಂಡಿದ್ದರೆ, 320 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಿಂದ ಮೈಸೂರಿಗೆ ಬದಲು ಮಾಡಿಕೊಂಡಿ ದ್ದಾರೆ. ನಗರದಲ್ಲಿ 46 ಪರೀಕ್ಷಾ ಕೇಂದ್ರಗಳಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ 93 ಕೇಂದ್ರಗಳನ್ನು ತೆರೆಯಲಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ 12 ಬ್ಲಾಕ್ ಪರೀಕ್ಷಾ ಕೇಂದ್ರ ತೆರೆಯಲಾಗಿದೆ.
ಲಕ್ನೋ: ಖಾಸಗಿ ಕಾಲೇಜುವೊಂದರ ಗುಮಾಸ್ತ ತನ್ನ ಮನೆಯಲ್ಲೇ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.
ಖಾಸಗಿ ಕಾಲೇಜುವೊಂದರ ಗುಮಾಸ್ತ ತನ್ನ ಮನೆ ಕಾಲೇಜಿನ ಪಕ್ಕದಲ್ಲೇ ಇದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆಯಿಸಿ ಪರೀಕ್ಷೆ ಮಾಡಿದ್ದಾನೆ. ಜೊತೆಗೆ ವಿದ್ಯಾರ್ಥಿಗಳ ಜೊತೆ ಅಕ್ರಮವಾಗಿ ಬೇರೆಯವರ ಕೈಯಲ್ಲಿ ದುಡ್ಡು ಕೊಟ್ಟು ಪರೀಕ್ಷೆ ಬರೆಸುತ್ತಿದ್ದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗುಮಾಸ್ತನ ಮನೆಯ ಮೇಲೆ ದಾಳಿಮಾಡಿದ್ದಾರೆ. ದಾಳಿ ವೇಳೆ ಗುಮಾಸ್ತ ಎಸ್ಕೇಪ್ ಆಗಿದ್ದು, ಪ್ರಶ್ನೆ ಪತ್ರಿಕೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗ ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದಾಗ ನಾವು ಇಲ್ಲಿ ಪರೀಕ್ಷೆ ಬರೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಮನೆಯಲ್ಲಿ ವಿದ್ಯಾರ್ಥಿಗಳ ಜೊತೆ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ 10ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಗಳ ಆರಂಭಗೊಂಡಿದ್ದು, ಸುಮಾರು 56 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಕಟ್ಟುನಿಟ್ಟಿನಿಂದ ನಡೆಸಬೇಕು ಎಂದು ಉತ್ತರ ಪ್ರದೇಶದ ಶಿಕ್ಷಣ ಇಲಾಖೆ ಬಹಳ ಪ್ರಯತ್ನ ಮಾಡುತ್ತಿದೆ. ಈ ನಡುವೆ ಈ ರೀತಿಯ ಅವ್ಯವಹಾರ ನಡೆಯುತ್ತಿರುವುದು ಕಂಡು ಶಿಕ್ಷಣ ಇಲಾಖೆ ತಲೆಕೆಡಿಸಿಕೊಂಡಿದೆ.
ಕಳೆದ ವಾರವಷ್ಟೇ ಹೇಗೆ ಮೋಸ ಮಾಡಿ ಪರೀಕ್ಷೆ ಬರೆಯಬೇಕು ಮತ್ತು ನೀವು ನೀವೇ ಮಾತನಾಡಿಕೊಂಡು ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದ ಖಾಸಗಿ ಶಾಲೆಯ ಪ್ರಾಂಶುಪಾಲನನ್ನು ಬಂಧಿಸಲಾಗಿತ್ತು.
ಅಹಮದಬಾದ್: ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದ ಕೇಂದ್ರದ ಮೇಲೆ ಅಧಿಕಾರಿಗಳು ನಡೆಸಿದ ವೇಳೆ ಸುಮಾರು 200 ಕೆಜಿ ತೂಕದ ನಕಲು ಚೀಟಿಗಳನ್ನು ವಶ ಪಡಿಸಿಕೊಂಡಿರುವ ಘಟನೆ ಜುನಾಗಢ್ ನ ವಂಥಾಲಿ ನಗರದಲ್ಲಿ ನಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು ಸ್ವಾಮಿ ನಾರಾಯಣ ಗುರುಕುಲ ಪರೀಕ್ಷಾ ಕೇಂದ್ರದ 15 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದು, ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಸಹಕಾರ ನೀಡಿದ್ದ ಕಾರಣ ಕೆಲ ಪರೀಕ್ಷಾ ಕೇಂದ್ರದ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಮಾರ್ಚ್ 31 ರವರೆಗೂ ಪರೀಕ್ಷೆಗಳು ನಡೆಯಲಿದ್ದು, ನಕಲು ಮಾಡುವುದನ್ನು ತಡೆಯಲು ಅಗತ್ಯ ಕ್ರಮಕೈಗೊಂಡಿದ್ದಾಗಿ ಮಾಹಿತಿ ನೀಡಿದ್ದಾರೆ.
ಕಳೆದ ತಿಂಗಳು ನಡೆದ 10ನೇ ತರಗತಿಯ ಪರೀಕ್ಷೆ ವೇಳೆ ಇದೇ ಪರೀಕ್ಷಾ ಕೇಂದ್ರ ಬಳಿ ವಿದ್ಯಾರ್ಥಿಗಳು ನಕಲು ಚೀಟಿಗಳನ್ನು ಬಳಕೆ ಮಾಡಿದ್ದರು. ಶಾಲೆಯ ಮುಂಭಾಗದ ರಸ್ತೆಯಲ್ಲಿ ಪರೀಕ್ಷೆ ನಡೆದ ಬಳಿಕ ಅವುಗಳನ್ನು ಎಸೆಯಲಾಗಿತ್ತು. ಮೈಕ್ರೋ ಜೆರಾಕ್ಸ್ ಬಳಸಿ ನಕಲಿ ಚೀಟಿ ತಯಾರಿಸಿದ್ದರು. ಈ ಕುರಿತು ತಮಗೇ ದೂರು ಬಂದ ಬಳಿಕ ಹೆಚ್ಚಿನ ನಿಗಾ ವಹಿಸಲಾಗಿತ್ತು ಎಂದು ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳನ್ನು ನಕಲು ಮಾಡುವುದನ್ನು ಪತ್ತೆ ಹಚ್ಚಲು ಕಾಲೇಜಿ ಸಿಬ್ಬಂದಿಯಿಂದ ಮೆಗಾ ಪ್ಲಾನ್-ಕಾಲೇಜಿನ ನಡೆಗೆ ಎಲ್ಲಡೆ ಭಾರೀ ವಿರೋಧ!
ಪರೀಕ್ಷೆಯ ನಕಲಿ ಮಾಡದಂತೆ ಮೊದಲೇ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿತ್ತು. ಅದ್ರು ಪರೀಕ್ಷೆ ನಡೆಯುವ ವೇಳೆ ವಿದ್ಯಾರ್ಥಿಗಳು ನಕಲು ಮಾಡಲು ಮುಂದಾಗಿದ್ದಾರೆ. ಈ ವೇಳೆ ದಾಳಿ ನಡೆಸಿ ನಕಲು ಚೀಟಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ವಿಜ್ಞಾನ ವಿಭಾಗದ ರಸಾಯನ ಶಾಸ್ತ್ರ ಪರೀಕ್ಷೆ ನಡೆಯುತ್ತಿದ್ದ ಸಾಮೂಹಿಕ ನಕಲು ಬೆಳಕಿಗೆ ಬಂದಿದೆ.
ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದ ಎಲ್ಲಾ ವಿದ್ಯಾರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿರುವ ಅಧಿಕಾರಿಗಳು, ವಿದ್ಯಾರ್ಥಿಗಳಿಂದ ಒಟ್ಟಾರೆ 200 ಕೆಜಿ ತೂಕದ ಚೀಟಿಗಳನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.