Tag: Exam Centre

  • ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

    ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

    ಹುಬ್ಬಳ್ಳಿ: ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ರಾತ್ರಿ ಹತ್ತು ಗಂಟೆಯಾದರೂ ಆರಂಭವಾಗದೇ ಎಸ್‌ಎಸ್‌ಸಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟಾಗಿದೆ.

    ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಅವ್ಯವಸ್ಥೆ ಆಗರವೇ ಕಂಡುಬಂದಿದೆ. ಈ ಮೂಲಕ ಭವಿಷ್ಯದ ಕೇಂದ್ರ ಸರ್ಕಾರಿ ನೌಕರರ ಜೊತೆಗೆ ಪರೀಕ್ಷಾ ಕೇಂದ್ರ ಸಿಬ್ಬಂದಿ ಹುಡುಗಾಟವಾಡಿದ್ದಾರೆ.

    ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳು ಪರೀಕ್ಷೆಗಾಗಿ ಆಗಮಿಸಿದ್ದರು. ಆದರೆ ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ರಾತ್ರಿ ಹತ್ತು ಗಂಟೆಯಾದರೂ ಆರಂಭವಾಗಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಆನ್‌ಲೈನ್ ಪರೀಕ್ಷೆಗೆ ಯಾವುದೇ ವ್ಯವಸ್ಥೆ ಇಲ್ಲ. ಜೊತೆಗೆ ವಿದ್ಯುತ್ ಮತ್ತು ಸರ್ವರ್‌ಗೆ ಸರಿಯಾದ ವ್ಯವಸ್ಥೆಯಿಲ್ಲ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕೂಡ ಮಾಡದೇ ನೂರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದ್ದಾರೆ.

    ಇನ್ನೂ ಅಭ್ಯರ್ಥಿಗಳ ಸಮಸ್ಯೆಗಳನ್ನು ಕೇಳಲು ಯಾವುದೇ ಅಧಿಕಾರಿಗಳು ಸಹ ಇಲ್ಲ. ಇದರಿಂದ ರೊಚ್ಚಿಗೆದ್ದು ಪರೀಕ್ಷಾ ಕೇಂದ್ರದ ಎದುರೇ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

  • ಪರೀಕ್ಷಾ ಕೇಂದ್ರದಲ್ಲಿ ಹುಡುಗಿಯರೇ ಇರೋದನ್ನ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ

    ಪರೀಕ್ಷಾ ಕೇಂದ್ರದಲ್ಲಿ ಹುಡುಗಿಯರೇ ಇರೋದನ್ನ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ

    ಪಾಟ್ನಾ: ಪರೀಕ್ಷಾ ಕೇಂದ್ರದಲ್ಲಿ (Exam Centre) ವಿದ್ಯಾರ್ಥಿನಿಯರೇ ಇರುವುದನ್ನು ನೋಡಿ 12ನೇ ತರಗತಿಯ ವಿದ್ಯಾರ್ಥಿ (Student) ಪ್ರಜ್ಞೆ ತಪ್ಪಿ ಬಿದ್ದ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

    ಬಿಹಾರದ ಷರೀಫ್‍ನ ಅಲ್ಲಮ ಇಕ್ಬಾಲ್ ಕಾಲೇಜಿನ ವಿದ್ಯಾರ್ಥಿ ಶಂಕರ್ ಪ್ರಜ್ಞೆ ತಪ್ಪಿ ಬಿದ್ದ ವಿದ್ಯಾರ್ಥಿ. ಶಂಕರ್ ಬ್ರಿಲಿಯಂಟ್ ಶಾಲೆಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬರೆಯಲು ಹೋಗಿದ್ದನು. ಈ ವೇಳೆ ಆ ಪರೀಕ್ಷಾ ಕೇಂದ್ರದಲ್ಲಿ ಹುಡುಗಿಯರು ಮಾತ್ರ ಇದ್ದರು. ಆ 50 ಹುಡುಗಿಯರ ಮಧ್ಯೆ ತಾನೊಬ್ಬನೇ ಎಂದು ತಿಳಿದ ಆತ ಭಯದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.

    ಈ ಬಗ್ಗೆ ವಿದ್ಯಾರ್ಥಿಯ ಚಿಕ್ಕಮ್ಮ ಮಾತನಾಡಿ, ಶಂಕರ್ ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದ. ಆ ವೇಳೆ ಕೊಠಡಿಯಲ್ಲಿ ಕೇವಲ ಹುಡುಗಿಯರೇ ಇದ್ದಾರೆ ಎಂದು ತಿಳಿದಿದ್ದಾನೆ. ಇದರಿಂದಾಗಿ ಆತ ಭಯಗೊಂಡಿದ್ದಾನೆ. ಅಷ್ಟೇ ಅಲ್ಲದೇ ಆತನಿಗೆ ಪರೀಕ್ಷಾ ಕೇಂದ್ರದಲ್ಲಿ ಜ್ವರ ಕಾಣಿಸಿಕೊಂಡಿದೆ. ಜೊತೆಗೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಿದರು. ಇದನ್ನೂ ಓದಿ: ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

    ಶಂಕರ್‌ಗೆ ಜ್ವರವೂ ಬಂದಿದ್ದರಿಂದ ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಶಂಕರ್ ಹೆಚ್ಚಿನ ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ಸೊರಬದಲ್ಲಿ ಸಹೋದರರ ಸವಾಲ್ – ದಾಯಾದಿಗಳ ಜಿದ್ದಾಜಿದ್ದಿ ಈ ಬಾರಿ ಮತ್ತಷ್ಟು ಜೋರು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನೀಟ್ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಬ್ರಾಗಳನ್ನು ತೆಗೆದುಹಾಕಲು ಒತ್ತಾಯ – ತನಿಖೆಗೆ ಆದೇಶ

    ನೀಟ್ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಬ್ರಾಗಳನ್ನು ತೆಗೆದುಹಾಕಲು ಒತ್ತಾಯ – ತನಿಖೆಗೆ ಆದೇಶ

    ತಿರುವನಂತಪುರಂ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಮಹಿಳೆಯರ ಬ್ರಾಗಳನ್ನು ತೆಗೆಯುವಂತೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಆಕ್ರೋಶಗೊಂಡ ತಂದೆ ಇದರ ವಿರುದ್ಧ ತನಿಖೆ ಮಾಡುವಂತೆ ಮನವಿ ಮಾಡಿರುವ ಸುದ್ದಿಯೊಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೆಡೆದಿದೆ.

    NEET ಪರೀಕ್ಷೆ ಬರೆದ ಮಹಿಳೆಯ ತಂದೆ ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದು, ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕವಾಗಿ ಹಿಂಸೆಯಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ:  ಬೊಮ್ಮಾಯಿ ಅಲ್ಲ, ಮೋದಿ ನಿತ್ಕೊಂಡ್ರು ನಾನು ಸ್ಪರ್ಧೆ ಮಾಡ್ತೀನಿ: ಮಲ್ಲಿಕಾರ್ಜುನ್

    EXAM

    ಈ ಹಿನ್ನೆಲೆ ಮಾನವ ಹಕ್ಕುಗಳ ಆಯೋಗವು ಕೊಲ್ಲಂ ಗ್ರಾಮಾಂತರ ಎಸ್‍ಪಿಗೆ ಈ ಬಗ್ಗೆ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ.

    ದೂರಿನಲ್ಲಿ ಏನಿದೆ?
    ಪ್ರಾಥಮಿಕ ತಪಾಸಣೆಯ ನಂತರ, ಲೋಹ ಶೋಧಕದಿಂದ ಮಹಿಳೆಯರ ಒಳಉಡುಪಿನ ಕೊಕ್ಕೆ ಪತ್ತೆಯಾಯಿತು. ಈ ವೇಳೆ ಸಿಬ್ಬಂದಿ ಅದನ್ನು ತೆಗೆದುಹಾಕಲು ಕೇಳಿದರು. ಇದೇ ರೀತಿ ಸುಮಾರು 90 ಪ್ರತಿಶತ ಮಹಿಳಾ ಅಭ್ಯರ್ಥಿಗಳು ತಮ್ಮ ಒಳಉಡುಪುಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಹಾಕಬೇಕಾಯಿತು. ಇದಾದ ಬಳಿಕ ಪರೀಕ್ಷೆಯನ್ನು ನೀಡುವಾಗ ಅಭ್ಯರ್ಥಿಗಳು ಮಾನಸಿಕವಾಗಿ ತೊಂದರೆಗೀಡಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ: ಕಾರಜೋಳ ಕಿಡಿ

    ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‍ಟಿಎ) ಡ್ರೆಸ್ ಕೋಡ್‍ನಲ್ಲಿ ಒಳಉಡುಪುಗಳನ್ನು ತೆಗೆದುಹಾಕಲು ಸೂಚಿಸಿಲ್ಲ ಎಂದು ದೂರುದಾರರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಊರಿಗೆ ತೆರಳಿರೋ ಸಿಇಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ಊರಿಗೆ ತೆರಳಿರೋ ಸಿಇಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಊರಿಗೆ ತೆರಳಿರುವ ಸಿಇಟಿ ಬರೆಯುತ್ತಿರೋ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ನೀಡಿದೆ.

    ಹೌದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳು ಇರುವ ಕಡೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದೆ. ಈ ನಿಟ್ಟಿನಲ್ಲಿ ಹೆಚ್ಚುವರಿಯಾಗಿ 75 ಕೇಂದ್ರಗಳನ್ನು ಹೊಸದಾಗಿ ಗುರುತಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಾವು ಇರುವ ಹತ್ತಿರದ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದುದಾಗಿದೆ.

    ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಎರಡು ದಿನಗಳ ಅವಕಾಶ ನೀಡಲಾಗಿದೆ. ಮೇ 20 ಸಂಜೆ 6 ಗಂಟೆಯಿಂದ ಮೇ 22ರ ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಿ ಕೇಂದ್ರ ಬದಲಾವಣೆ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಆದ್ಯತೆ ಮೇರೆಗೆ 3 ಆಯ್ಕೆ ಕೊಡಬೇಕು. ಈ ಮೂಲಕ ಪರೀಕ್ಷಾ ಕೇಂದ್ರದ ಲಭ್ಯತೆಯ ಆಧಾರದ ಮೇಲೆ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳಿಗೆ ಕೇಂದ್ರವನ್ನ ಹಂಚಿಕೆ ಮಾಡಲಿದೆ.

    ಜುಲೈ 30, 31 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಜುಲೈ 30 ಜೀವಶಾಸ್ತ್ರ, ಗಣಿತ ಪರೀಕ್ಷೆ ಇದ್ದರೆ ಜುಲೈ 31 ರಂದು ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿವೆ. ಆಗಸ್ಟ್ 1ರಂದು ಹೊರನಾಡು – ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

    ಈ ಹಿಂದೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್, ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಎಂದಿನಂತೆ ಆಫ್ ಲೈನ್‍ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದರು.

    ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗುತ್ತದೆ. ಸಾಮಾಜಿಕ ಅಂತರವನ್ನು ಕಾಪಾಡಬೇಕಾಗಿರುವ ಕಾರಣ ಕೊಠಡಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬೇಕಾಗುತ್ತದೆ. ಹೀಗಾಗಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ವಿವರಿಸಿದ್ದರು.