Tag: exam timetable

  • 5, 8ನೇ ತರಗತಿ ಬೋರ್ಡ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟ

    5, 8ನೇ ತರಗತಿ ಬೋರ್ಡ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ರಾಜ್ಯ ಪಠ್ಯಕ್ರಮ ಹೊಂದಿದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ಕೊಟ್ಟ ಬೆನ್ನಲ್ಲೇ, ಪರೀಕ್ಷೆ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

    ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್‌ನಿಂದ ವೇಳಾಪಟ್ಟಿ ಪ್ರಕಟವಾಗಿದೆ. ಹೈಕೋರ್ಟ್ ಆದೇಶದ‌ ಮೇರೆಗೆ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

    5ನೇ ತರಗತಿಗೆ ಮಾರ್ಚ್ 27 ರಿಂದ ಮಾರ್ಚ್ 30ರ ವರೆಗೆ ಹಾಗೂ 8ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1ರ ವರೆಗೆ ಪರೀಕ್ಷೆ ನಡೆಯಲಿದೆ. ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಫಲಿತಾಂಶ ವಿದ್ಯಾರ್ಥಿಗೆ ಮಾತ್ರ ತಿಳಿಸಬೇಕು. ಗೌಪ್ಯತೆ ಕಾಪಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.

    5ನೇ ತರಗತಿ ವೇಳಾಪಟ್ಟಿ
    ಮಾ.27 – ಪ್ರಥಮ ಭಾಷೆ
    ಮಾ.28 – ದ್ವಿತೀಯ ಭಾಷೆ
    ಮಾ.29 – ಪರಿಸರ ಅಧ್ಯಯನ
    ಮಾ.30 – ಗಣಿತ

    8ನೇ ತರಗತಿ ವೇಳಾಪಟ್ಟಿ
    ಮಾ.27 – ಪ್ರಥಮ ಭಾಷೆ
    ಮಾ.28 – ದ್ವಿತೀಯ ಭಾಷೆ
    ಮಾ.29 – ತೃತೀಯ ಭಾಷೆ
    ಮಾ.30 – ಗಣಿತ
    ಮಾ.31 – ವಿಜ್ಞಾನ
    ಏ.1 – ಸಮಾಜ ವಿಜ್ಞಾನ

  • SSLC ಪರೀಕ್ಷೆ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

    SSLC ಪರೀಕ್ಷೆ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

    ಮಾರ್ಚ್ 31 ರಿಂದ ಎಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯಿಂದ ಮಹಿಳಾ‌ ಕೇಂದ್ರಿತ ತಂತ್ರಗಾರಿಕೆ ಮುಂದುವರಿಕೆ – ತುಮಕೂರಲ್ಲಿ BJP ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ‌

    ವೇಳಾಪಟ್ಟಿ ವಿವರ
    ಮಾರ್ಚ್ 31- ಪ್ರಥಮ ಭಾಷೆ, ಏಪ್ರಿಲ್ 3- ಗಣಿತ, ಏಪ್ರಿಲ್ 6- ದ್ವೀತಿಯ ಭಾಷೆ, ಏಪ್ರಿಲ್ 10- ವಿಜ್ಞಾನ, ಏಪ್ರಿಲ್ 12- ತೃತೀಯ ಭಾಷೆ, ಏಪ್ರಿಲ್ 15- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದ್ವಿತೀಯ PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

    ದ್ವಿತೀಯ PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್‌ 22ರಿಂದ ಮೇ 18ರವರೆಗೆ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ.

    ಪಿಯುಸಿ ಅಂತಿಮ ವೇಳಾಪಟ್ಟಿ
    ಏಪ್ರಿಲ್ 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಏಪ್ರಿಲ್ 23 – ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ
    ಏಪ್ರಿಲ್ 25 – ಅರ್ಥಶಾಸ್ತ್ರ
    ಏಪ್ರಿಲ್ 26 – ರಸಾಯನಶಾಸ್ತ್ರ ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ
    ಏಪ್ರಿಲ್ 27 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
    ಏಪ್ರಿಲ್ 28 – ಕನ್ನಡ, ಅರೇಬಿಕ್
    ಮೇ 2- ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮೇ 4- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್‌ಕೇರ್, ಆಟೋಮೊಬೈಲ್, ಬ್ಯೂಟಿ ಅಂಡ ವೆಲ್‌ನೆಸ್‌
    ಮೇ 5- ಇಂಗ್ಲಿಷ್
    ಮೇ 10- ಇತಿಹಾಸ,ಭೌತಶಾಸ್ತ್ರ
    ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
    ಮೇ 18- ಹಿಂದಿ

    ಈ ಮೊದಲು ಏಪ್ರಿಲ್ 16 ರಿಂದ ಮೇ 6 ರ ವರೆಗೆ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಜೆಇಇ ಪರೀಕ್ಷೆಗಳು ಈ ದಿನಾಂಕದಲ್ಲಿ ಇರುವ ಕಾರಣ ಪಿಯುಸಿ ಬೋರ್ಡ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ ಬದಲಾವಣೆ ಮಾಡಲಾಗಿತ್ತು. ಮತ್ತೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಈಗ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ನೀರು ಕುಡಿಯೋಕೆ ಹೊರಟ ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಯಡಿಯೂರಪ್ಪ..!