Tag: Examination Room

  • ಎಕ್ಸಾಂ ಹಾಲ್‍ನಲ್ಲಿ ಮೊಬೈಲ್ ಬಳಸಿದ್ದ ಇಬ್ಬರು ಶಿಕ್ಷಕರು ಅಮಾನತು

    ಎಕ್ಸಾಂ ಹಾಲ್‍ನಲ್ಲಿ ಮೊಬೈಲ್ ಬಳಸಿದ್ದ ಇಬ್ಬರು ಶಿಕ್ಷಕರು ಅಮಾನತು

    ಭುವನೇಶ್ವರ: ಒಡಿಶಾದ ಜಾಜ್‍ಪುರ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆ ವೇಳೆ ಕೊಠಡಿಯಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ ಇಬ್ಬರು ಇನ್‌ವಿಜಿಲೇಟರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಗುರುವಾರ ಎರಡು ವಿಭಿನ್ನ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಶಿಕ್ಷಕರು ಮೊಬೈಲ್ ಬಳಸುತ್ತಿರುವುದನ್ನು ತಪಾಸಣೆ ವೇಳೆ ಗಮನಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ರಂಜನ್ ಗಿರಿ ತಕ್ಷಣ ಇಬ್ಬರನ್ನು ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಸೆಲ್ಫ್ ಕೋವಿಡ್ ಟೆಸ್ಟಿಂಗ್ ಮಾಡಿಕೊಳ್ಳುವವರಿಗೆ ಮಾರ್ಗಸೂಚಿ ನೀಡಬೇಕು: ಡಾ.ವಿಶಾಲ್ ರಾವ್

    ಎರಡು ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಮತ್ತು ಉಪ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಕೇಂದ್ರದ ಅಧೀಕ್ಷಕರನ್ನು ಹೊರತುಪಡಿಸಿ ಯಾರೂ ಸೆಲ್ ಫೋನ್‍ಗಳನ್ನು ಪರೀಕ್ಷಾ ಹಾಲ್‍ಗೆ ಒಯ್ಯುವಂತಿಲ್ಲ ಎಂದು ಸೂಚಿಸಿದ್ದಾರೆ.

    ಪ್ರೌಢ ಶಿಕ್ಷಣ ಮಂಡಳಿಯು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುತ್ತಿದ್ದು, ಪರೀಕ್ಷೆಗಳು ಬುಧವಾರ ಆರಂಭಗೊಂಡಿವೆ. ಇದನ್ನೂ ಓದಿ: ಭೂಮಿಯ ಸಮೀಪದಿಂದ ಹಾದುಹೋಗಲಿದೆ ಪರಮಾಣು ಬಾಂಬ್‌ಗಿಂತ 30 ಪಟ್ಟು ಹೆಚ್ಚು ಶಕ್ತಿಯ ಕ್ಷುದ್ರಗ್ರಹ


    Teachers, Mobile, Examination Room, Bhuvaneswar

  • 2 ದಿನಗಳ ಮುನ್ನವೇ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಗಡಿ ಜಿಲ್ಲೆಯಲ್ಲಿ ಸಿದ್ಧತೆ

    2 ದಿನಗಳ ಮುನ್ನವೇ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಗಡಿ ಜಿಲ್ಲೆಯಲ್ಲಿ ಸಿದ್ಧತೆ

    – ಪರೀಕ್ಷಾ ಕೊಠಡಿಗಳ ಸ್ಯಾನಿಟೈಜೇಷನ್

    ಚಾಮರಾಜನಗರ: ಕೊರೊನಾ ಆತಂಕದ ನಡುವೆ ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷೆಯ ಪರೀಕ್ಷೆಗೆ ಗಡಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ಪರೀಕ್ಷೆಗೆ ಎರಡು ದಿನ ಮುಂಚೆಯೇ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಜೇಷನ್ ಮಾಡಲಾಗಿದೆ. ಜಿಲ್ಲೆಯಲ್ಲಿ 16 ಪರೀಕ್ಷಾ ಕೇಂದ್ರಗಳ 314 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಕೊಠಡಿಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೊಠಡಿಯಲ್ಲಿ ಕನಿಷ್ಠ 12 ರಿಂದ ಗರಿಷ್ಠ 24 ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳುವಂತೆ ಡೆಸ್ಕ್ ವ್ಯವಸ್ಥೆ ಮಾಡಲಾಗಿದೆ.

    ಜಿಲ್ಲೆಯಲ್ಲಿ 6,535 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರಿಗೆಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದಿಂದ ಉಚಿತವಾಗಿ ಮಾಸ್ಕ್ ನೀಡಲಾಗಿದೆ. ಈಗಾಗಲೇ ಪರೀಕ್ಷೆ ಕೇಂದ್ರಗಳಿಗೆ ರವಾನಿಸಲಾಗಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಲಿದ್ದರೂ ವಿದ್ಯಾರ್ಥಿಗಳು ಬೆಳಗ್ಗೆ 8.30ಕ್ಕೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅವಕಾಶ ಮಾಡಿಕೊಡಲಾಗಿದೆ.

    ಪರೀಕ್ಷಾ ಕೇಂದ್ರಗಳ ಪ್ರವೇಶ ದ್ವಾರದಲ್ಲೇ ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ನೀಡಿ, ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಇದಕ್ಕಾಗಿ ಆರೋಗ್ಯ ಸಹಾಯಕರನ್ನು ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗಿದೆ. ಕೋವಿಡ್ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ. ಮಾಮೂಲಿ ಜ್ವರ, ಕೆಮ್ಮು ನೆಗಡಿ ಇರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಿ.ಎಸ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

    ಪರೀಕ್ಷಾ ಕೇಂದ್ರಕ್ಕೆ ಬರಲು ಅನುಕೂಲವಾಗುವಂತೆ ಜಿಲ್ಲೆಯ ವಿವಿಧೆಡೆಯಿಂದ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಿಂದ ಕೇರಳ ಹಾಗೂ ತಮಿಳುನಾಡಿಗೆ ಹೋಗಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಿಲುಕಿರುವ ಏಳು ವಿದ್ಯಾರ್ಥಿಗಳು ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಇಚ್ಛಿಸಿದ್ದಾರೆ. ಅವರಿಗೆ ಜಿಲ್ಲಾಡಳಿತದಿಂದ ಅನುಮತಿ ಕೊಡಿಸಲಾಗಿದ್ದು, ಇ-ಪಾಸ್ ಸೌಲಭ್ಯ ಕಲ್ಪಿಸಿಕೊಡಲಾಗಿದೆ. ಇದರ ಜೊತೆಗೆ ಹೊರ ಜಿಲ್ಲೆಯ 240 ವಿದ್ಯಾರ್ಥಿಗಳು ಸಹ ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಕೃಷ್ಣಮೂರ್ತಿ ತಿಳಿಸಿದ್ದಾರೆ.