Tag: Excise Policy Scam

  • ದೆಹಲಿ ಅಬಕಾರಿ ನೀತಿ ಹಗರಣ – ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ED ದಾಳಿ

    ದೆಹಲಿ ಅಬಕಾರಿ ನೀತಿ ಹಗರಣ – ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ED ದಾಳಿ

    ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ (Delhi Excise Policy Scam) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಸಂಸದ ಸಂಜಯ್ ಸಿಂಗ್ (Sanjay Singh) ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು (ಬುಧವಾರ) ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಶೋಧ ನಡೆಸಿದರು.

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಆಪ್ತ ಸಿಬ್ಬಂದಿ ಮತ್ತು ಅವರೊಂದಿಗೆ ಸಂಬಂಧ ಹೊಂದಿರುವವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿತ್ತು. ದಾಳಿ ಬಗ್ಗೆ ಮಾತನಾಡಿರುವ ಆಪ್ ವಕ್ತಾರೆ ರೀನಾ ಗುಪ್ತಾ, ಸಂಜಯ್ ಸಿಂಗ್ ಅವರು ಪ್ರಧಾನಿ ಮೋದಿ ಮತ್ತು ಅದಾನಿ ವಿಷಯದ ಬಗ್ಗೆ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದರಿಂದ ಅವರ ನಿವಾಸದ ಮೇಲೆ ದಾಳಿ ನಡೆಸಲಾಗುತ್ತಿದೆ. ಹಿಂದೆಯೂ ಏನೂ ಸಿಗಲಿಲ್ಲ, ಇಂದು ಏನೂ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾದಿಂದ ಅಕ್ರಮ ಹೂಡಿಕೆ – ನ್ಯೂಸ್‌ಕ್ಲಿಕ್ ಸಂಪಾದಕ, HR 7 ದಿನ ಪೊಲೀಸ್ ಕಸ್ಟಡಿಗೆ – ಏನಿದು ಪ್ರಕರಣ?

    ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರ ಲಂಚವನ್ನು ಪಡೆದಿದೆ. ಹಣ ಪಾವತಿಸಿದ ಕೆಲವು ಡೀಲರ್‌ಗಳಿಗೆ ಅದ್ಯತೆ ನೀಡಿದೆ ಎಂದು ಆರೋಪಿಸಲಾಗಿದೆ. ಆದರೆ ಇದನ್ನು ಆಪ್ ಬಲವಾಗಿ ನಿರಾಕರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಮನೀಶ್ ಸಿಸೋಡಿಯ ಅವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ – ಲಾಲು ಕುಟುಂಬಕ್ಕೆ ಜಾಮೀನು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪ್ ನಾಯಕ ಮನೀಶ್ ಸಿಸೋಡಿಯಾ ಜೈಲುಪಾಲು

    ಆಪ್ ನಾಯಕ ಮನೀಶ್ ಸಿಸೋಡಿಯಾ ಜೈಲುಪಾಲು

    ನವದೆಹಲಿ: ಸಿಬಿಐ (CBI) ವಿಶೇಷ ನ್ಯಾಯಾಲಯ ಆಪ್ (AAP) ನಾಯಕ, ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ (Manish Sisodia) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 7 ದಿನಗಳ ಸಿಬಿಐ ಕಸ್ಟಡಿ ಅಂತ್ಯವಾದ ಹಿನ್ನೆಲೆ ಮಾರ್ಚ್ 20ರ ವರೆಗೂ ನ್ಯಾಯಂಗ ಬಂಧನಕ್ಕೆ ನೀಡಲಾಗಿದೆ.

    ದೆಹಲಿಯ ಹೊಸ ಮದ್ಯ ನೀತಿ ಹರಗಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. 7 ದಿನಗಳ ವಿಚಾರಣೆ ನಡೆಸಿದ ಅಧಿಕಾರಿಗಳು ಸೋಮವಾರ ಅವರ ವಿಚಾರಣೆ ಅಗತ್ಯ ಇಲ್ಲ, ಮುಂದೆ ಅಗತ್ಯ ಬಿದ್ದಲ್ಲಿ ಕೋರ್ಟ್ ಮೂಲಕ ಕಸ್ಟಡಿ ಪಡೆಯುವುದಾಗಿ ಸಿಬಿಐ ಪರ ವಕೀಲರು ನ್ಯಾಯಲಯಕ್ಕೆ ಹೇಳಿದರು.

    ಇಡೀ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದರಿಂದ ಸಾಕ್ಷ್ಯಗಳು ಭಯಗೊಂಡಿವೆ ಎಂದು ಕೋರ್ಟ್‌ಗೆ ತಿಳಿಸಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಸಿಸೋಡಿಯಾ ಪರ ವಕೀಲರು, ಮಾಧ್ಯಮಗಳಿಗ ಸಿಬಿಐ ಅಧಿಕಾರಿಗಳು ಹೆದರುತ್ತಾರೆಯೇ ಎಂದು ಪ್ರಶ್ನಿಸಿದರು. ಮಾಧ್ಯಮಗಳು ವರದಿ ಮಾಡುತ್ತವೆ. ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ಮಾಡುವವರೆಗೂ ನ್ಯಾಯಾಲಯ ಈ ಬಗ್ಗೆ ಚಿಂತಿಸುವುದಿಲ್ಲ ಎಂದು ನ್ಯಾಯಧೀಶರು ಹೇಳಿದರು. ಇದನ್ನೂ ಓದಿ: ಬೀದಿ ನಾಯಿಗಳನ್ನು ತಿನ್ನಲು ಅಸ್ಸಾಂಗೆ ಕಳುಹಿಸಿ- ಮಹಾ ಶಾಸಕನಿಂದ ವಿವಾದಾತ್ಮಕ ಹೇಳಿಕೆ

    ನ್ಯಾಯಾಂಗ ಬಂಧನದ ಅವಧಿಯಲ್ಲಿ ಸಿಸೋಡಿಯಾಗೆ ಭಗವದ್ಗೀತೆ, ಡೈರಿ, ಪೆನ್ನು, ಕನ್ನಡಕ ನೀಡಬೇಕು ಎಂದು ಅವರ ಪರ ವಕೀಲರು ಮನವಿ ಮಾಡಿದರು. ಸಿಸೋಡಿಯಾ ಮನವಿ ಸ್ಪಂದಿಸಿದ ನ್ಯಾಯಾಧೀಶ ಎಂಕೆ ನಾಗ್‌ಪಾಲ್ ಸಂಬಂಧಿಸಿದ ಅಧಿಕಾರಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: BSY ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ