Tag: excm

  • ಮಾಜಿ ಸಿಎಂ ಸಿದ್ದರಾಮಯ್ಯಗೆ ಖೆಡ್ಡಾ ತೋಡಲು ಮುಹೂರ್ತ ಫಿಕ್ಸ್?

    ಮಾಜಿ ಸಿಎಂ ಸಿದ್ದರಾಮಯ್ಯಗೆ ಖೆಡ್ಡಾ ತೋಡಲು ಮುಹೂರ್ತ ಫಿಕ್ಸ್?

    ಬೆಂಗಳೂರು: ಉಪ ಚುನಾವಣಾ ಫಲಿತಾಂಶ ಹೊರ ಬೀಳುವ ಮೊದಲೇ ಕಾಂಗ್ರೆಸ್ ನಾಯಕರ ಗುಪ್ತ್ ಗುಪ್ತ್ ಮೀಟಿಂಗ್ ನಡೆಯುತ್ತಿದ್ದು, ಡಿಸೆಂಬರ್ 11 ಅಥವಾ 12 ರಂದು ಮೂಲ ಕಾಂಗ್ರೆಸ್ಸಿಗರ ದಂಡು ದೆಹಲಿಗೆ ದೌಡಾಯಿಸಲಿದೆ ಎನ್ನಲಾಗಿದೆ.

    ಹೈಕಮಾಂಡಿಗೆ ಫಲಿತಾಂಶದ ವರದಿ ಸಲ್ಲಿಕೆ ಮಾಡಲು ಮೂಲ ಕಾಂಗ್ರೆಸ್ಸಿಗರು ನಿರ್ಧಾರ ಮಾಡಿದ್ದಾರೆ. ಶನಿವಾರ ಸಂಜೆ ರಾಜ್ಯಸಭಾ ಸದಸ್ಯರೊಬ್ಬರ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಸಿ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾರ್ಜ್ ಶೀಟ್ ರೆಡಿ ಮಾಡಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.

    ಉಪ ಸಮರದಲ್ಲಿ 4ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲ್ಲ ಅನ್ನೋ ಲೆಕ್ಕದಲ್ಲಿ ಮೂಲ ಕಾಂಗ್ರೆಸ್ಸಿಗರು ಇದ್ದಾರೆ. ಫಲಿತಾಂಶದ ನಂತರ ಡಿಸೆಂಬರ್ 11 ಅಥವಾ 12 ರಂದು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ಉಪ ಸಮರದ ಹಿನ್ನಡೆಗೆ ಕಾರಣ ಏನು ಅಂತ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

    ರಾಜ್ಯಸಭಾ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಜಿ.ಸಿ.ಚಂದ್ರಶೇಖರ್, ಪ್ರೊ.ರಾಜೀವ್ ಗೌಡ, ಮಾಜಿ ಕೇಂದ್ರ ಸಚಿವ ಮುನಿಯಪ್ಪ, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್ ಸೇರಿದಂತೆ ಹಿರಿಯ ನಾಯಕರಿಂದ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಗುಪ್ತ ಸಭೆ ನಡೆದಿದೆ.

    ತಮಗಿಷ್ಟ ಬಂದವರಿಗೆ ಟಿಕೆಟ್ ಕೊಡಿಸಿಕೊಂಡು ಯಾವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷದ ಹಿನ್ನಡೆಗೆ ಕಾರಣ ಸಿದ್ದರಾಮಯ್ಯ ಎಂದು ದೂರು ಕೊಡಲು ರೆಡಿಯಾಗಿದ್ದಾರೆ. ಅಲ್ಲದೆ ಸತತ ಸೋಲು ಹಾಗೂ ಹಿನ್ನಡೆ ಆಗುತ್ತಿದ್ದರು ಸಿದ್ದರಾಮಯ್ಯ ಪ್ರಶ್ನಾತೀತ ನಾಯಕರಂತೆ ವರ್ತಿಸುತಿದ್ದಾರೆ ಎಂದು ಆರೋಪ ಕೂಡ ಮಾಡಿದ್ದಾರೆ. ಸಿಎಲ್ ಪಿ ನಾಯಕನ ಸ್ಥಾನ ಅಥವಾ ವಿಪಕ್ಷ ನಾಯಕನ ಸ್ಥಾನ ಒಂದರಿಂದ ತಲೆದಂಡ ಮಾಡುವಂತೆ ಹೈ ಕಮಾಂಡ್ ಮುಂದೆ ಪಟ್ಟು ಹಿಡಿಯಲು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

  • ಉಪಚುನಾವಣೆಯ ನಂತ್ರ ರಾಜ್ಯ ರಾಜಕೀಯ ಬದಲಾಗುತ್ತೆ: ಸಿದ್ದರಾಮಯ್ಯ

    ಉಪಚುನಾವಣೆಯ ನಂತ್ರ ರಾಜ್ಯ ರಾಜಕೀಯ ಬದಲಾಗುತ್ತೆ: ಸಿದ್ದರಾಮಯ್ಯ

    ಹುಬ್ಬಳ್ಳಿ: ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ. ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತೇನೆ. ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ ಎಂದರು.

    ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು. 17 ಜನರಿಗೆ ರಾಜೀನಾಮೆ ಕೊಡಿಸಿ ಕುದುರೆ ವ್ಯಾಪಾರ ಮಾಡಿದ್ದಾರೆ ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಡಲ್ಲ ನನಗೆ ನಂಬಿಕೆ ಇದೆ. ಅವರು ಬಿಜೆಪಿ ಬೆಂಬಲಿಸುವುದಿಲ್ಲ. ಬಿಎಸ್‍ವೈ ಡಿಸ್ಟರ್ಬ್ ಆಗಿದ್ದಾರೆ ಅದಕ್ಕೆ ಏನೇನೋ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾತ್ರೋ ರಾತ್ರಿ ರಾಷ್ಟ್ರಪತಿ ಆಡಳಿತ ಹಿಂಪಡೆದಿದ್ದು, ಶಿವಸೇನೆ ಬಿಜೆಪಿಯಿಂದ ಈಗಾಗಲೇ ಹೊರಬಂದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾದ್ರೆ ನಾನು ಸಿಎಂ ಆಗುವುದಾಗಿ ಎಲ್ಲಿಯೂ ಹೇಳಿಲ್ಲ. ಬಿಜೆಪಿ ಸರ್ಕಾರ ಪತನವಾದ್ರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರೋ ಸಾಧ್ಯತೆಯಿದೆ. ಮಧ್ಯಂತರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಮುಂದೆ ನಾನು ಸಿಎಂ ಆಗೋ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.

  • ಬದಲಾದ ಸಿದ್ದರಾಮಯ್ಯ ತಂತ್ರ- ವಿರೋಧಿಗಳು, ಮುನಿಸಿಕೊಂಡವರ ಜೊತೆ ಟಗರು ಕೂಲ್

    ಬದಲಾದ ಸಿದ್ದರಾಮಯ್ಯ ತಂತ್ರ- ವಿರೋಧಿಗಳು, ಮುನಿಸಿಕೊಂಡವರ ಜೊತೆ ಟಗರು ಕೂಲ್

    ಬೆಂಗಳೂರು: ಪಕ್ಷದೊಳಗಿನ ಬಣ ರಾಜಕಾರಣಕ್ಕೆ ಬ್ರೇಕ್ ಹಾಕಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ತಂತ್ರಗಾರಿಕೆಗೆ ಮುಂದಾದ್ರಾ ಅನ್ನೋ ಪ್ರಶ್ನೆಯೊಂದು ಎದ್ದಿದೆ. ಪಕ್ಷದೊಳಗಿನ ವಿರೋಧಿಗಳನ್ನೆಲ್ಲ ಒಂದೇ ವೇದಿಕೆಗೆ ತರಲು ಹೊಸ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ.

    ಈಗಾಗಲೇ ಪಕ್ಷದ ಹಿರಿಯ ನಾಯಕರ ನಿವಾಸಕ್ಕೆ ಭೇಟಿ ನೀಡಿ ಅವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮಾಜಿ ಸಿಎಂ ಮುಂದಾಗಿದ್ದಾರೆ. ಅದಕ್ಕೂ ಮೊದಲು ಎಲ್ಲಾ ಹಿರಿಯ ನಾಯಕರ ಜೊತೆ ಸಭೆ ನಡೆಸಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಸಿದ್ದರಾಮಯ್ಯ ಲೆಕ್ಕಾಚಾರವಾಗಿದೆ.

    ಮೂಲ ಕಾಂಗ್ರೆಸ್ಸಿಗರು ಹಾಗೂ ಹಿರಿಯ ನಾಯಕರ ಜೊತೆ ಸೋಮವಾರ ಸಭೆ ನಡೆಸಲು ಮುಂದಾಗಿದ್ದಾರೆ. ಸಾಧ್ಯವಾದರೆ ಸೋಮವಾರದ ಸಭೆ ಬದಲಿಗೆ ಹಿರಿಯ ನಾಯಕರ ಜೊತೆಗೆ ಸೌಹಾರ್ದ ಕೂಟ ನಡೆಸಲು ಸಿದ್ದರಾಮಯ್ಯ ಪ್ಲಾನ್ ಮಾಡುತ್ತಿದ್ದಾರೆ. ಹಿರಿಯ ನಾಯಕರು ಗ್ರೀನ್ ಸಿಗ್ನಲ್ ಕೊಟ್ಟರೆ ಹಿರಿಯ ಅವರ ಜೊತೆ ಸೌಹಾರ್ದ ಬೋಜನ ಕೂಟ ನಡೆಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

    ಒಂದು ವೇಳೆ ಹಿರಿಯ ನಾಯಕರ ಸಮ್ಮತಿ ಸಿಗದಿದ್ದರೆ, ಸಿಎಲ್ ಪಿ(ಕಾಂಗ್ರೆಸ್ ಶಾಸಕಾಂಗ ಪಕ್ಷ)ದ ನಾಯಕನಾಗಿ ಸೋಮವಾರ ಹಿರಿಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಉಪ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ಆ ನಂತರ ಹಂತ ಹಂತವಾಗಿ ಹಿರಿಯ ನಾಯಕರ ನಿವಾಸಕ್ಕೆ ಭೇಟಿಕೊಟ್ಟು ಮಾತುಕತೆ ನಡೆಸಲಿದ್ದಾರೆ. ಹೀಗೆ ವಿಪಕ್ಷ ನಾಯಕನಾಗಿ ನೇಮಕವಾದ ಕಾರಣಕ್ಕೆ ಉಪ ಚುನಾವಣೆಯ ಗೆಲುವಿನ ಜವಾಬ್ದಾರಿ ಸಿದ್ದರಾಮಯ್ಯ ಹೆಗಲೇರಿದೆ. ಆದ್ದರಿಂದ ಮೂಲ ಕಾಂಗ್ರೆಸ್ಸಿಗರ ವಿಶ್ವಾಸ ಗಳಿಸಲು ಸಿದ್ದರಾಮಯ್ಯ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

  • ಸಿದ್ದರಾಮಯ್ಯ ಮುಂದೆ ಬಿಕ್ಕಿ-ಬಿಕ್ಕಿ ಅತ್ತ ಮಹಿಳೆ

    ಸಿದ್ದರಾಮಯ್ಯ ಮುಂದೆ ಬಿಕ್ಕಿ-ಬಿಕ್ಕಿ ಅತ್ತ ಮಹಿಳೆ

    ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹವಾಲು ಸಲ್ಲಿಕೆ ವೇಳೆ ಮಹಿಳೆಯೊಬ್ಬರು ಕಣ್ಣೀರು ಹಾಕಿ ಗೋಳಾಡಿದ ಘಟನೆ ಗುರುವಾರ ನಡೆದಿದೆ.

    ಬಾದಾಮಿ ತಾಲೂಕಿನ ಶಿರಬಡಗಿ ಗ್ರಾಮದ ನಿವಾಸಿ ಸಾವಿತ್ರಿ ಟೆಂಗೇರ್ ಅವರು ಆಶ್ರಯ ಯೋಜನೆಯಡಿ ಮನೆ ಕೊಡಿಸಿ. ನಮ್ಮ ಗೋಳು ಕೇಳೋರು ಯಾರೂ ಇಲ್ಲ ಎಂದು ಬಿಕ್ಕಿ-ಬಿಕ್ಕಿ ಅತ್ತಿದ್ದಾರೆ. ಗ್ರಾಮ ಪಂಚಾಯ್ತಿಯಿಂದ ಮನೆ ನೀಡುತ್ತಿಲ್ಲ. ಈ ಹಿಂದೆಯೂ ನಿಮ್ಮನ್ನು ಭೇಟಿಯಾಗಿದ್ದೆ ಆದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಮಹಿಳೆ ಕಣ್ಣೀರು ಹಾಕಿದ್ದಾರೆ.

    ಸುಮಾರು ಮೂರು ತಿಂಗಳ ಬಳಿಕ ಬಾದಾಮಿಗೆ ಆಗಮಿಸಿದ ಶಾಸಕ, ಮಾಜಿ ಸಿಎಂ ಸಿದ್ದರಾಮಯ್ಯಗೆ ಅಹವಾಲು ಸಲ್ಲಿಸಲು ಕ್ಷೇತ್ರದ ಜನರು ಮುಗಿಬಿದ್ದರು. ಬಾದಾಮಿ ಪಟ್ಟಣ ಶಾಸಕರ ಗೃಹಕಚೇರಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿ ಬಾದಾಮಿ ತಾಲೂಕಿನ ಮಲ್ಲಾಪುರ ಎಸ್ ಎಲ್ ಗ್ರಾಮದ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಗ್ರಾಮಕ್ಕೆ ಸಂಚರಿಸಲು ರಸ್ತೆಯಿಲ್ಲದ ಹಿನ್ನೆಲೆಯಲ್ಲಿ ಮುಖ್ಯರಸ್ತೆಯಿಂದ ಗ್ರಾಮಕ್ಕೆ 2 ಕಿ.ಮೀ ರಸ್ತೆ ನಿರ್ಮಾಣಕ್ಕೆ ಬೇಡಿಕೆ ಇಟ್ಟರು.