Tag: exm

  • ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ: ಬಿ.ಸಿ.ನಾಗೇಶ್

    ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ: ಬಿ.ಸಿ.ನಾಗೇಶ್

    ಬೆಂಗಳೂರು: ನಿಗದಿತ ಸಮಯಕ್ಕೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪಬ್ಲಿಕ್ ಪರೀಕ್ಷೆಗಳು ನಡೆಯುವುದರ ಜೊತೆಗೆ ಹಳೆ ಮಾದರಿಯಲ್ಲಿ ಈ ಬಾರಿ ಪರೀಕ್ಷೆ ನಡೆಯುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಇಲಾಖೆ ಮಾಡಿಕೊಂಡಿದೆ. ಒಂದು ವೇಳೆ ಪರೀಕ್ಷಾ ಸಮಯದಲ್ಲಿ ಕೋವಿಡ್ ಹೆಚ್ಚಳ ಆದರೆ ಮಾತ್ರ ಎಕ್ಸಾಂ ಮುಂದೂಡಿಕೆ ಮಾಡುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಹೇಳಿದರು.

    BC Nagesh

    ಈಗ ಬೆಂಗಳೂರಿನಲ್ಲಿ ಮಾತ್ರ ಶಾಲೆಯನ್ನು ಬಂದ್ ಮಾಡಲಾಗಿದೆ. ಅವಶ್ಯಕತೆ ಬಿದ್ದರೆ ಮುಂದಿನ ಸ್ಥಿತಿ ನೋಡಿಕೊಂಡು ಶಾಲೆ ಬಂದ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದ ಅವರು, ಆಯಾ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಡಿಸಿ ಮತ್ತು ತಹಶೀಲ್ದಾರ್ ಹಾಗೂ ಜಿಲ್ಲಾ ಮಂತ್ರಿಗಳ ಜೊತೆ ಚರ್ಚಿಸಿ ಶಾಲೆಗೆ ರಜೆ ನೀಡುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಜೊತೆಗೆ ತಾಲೂಕು ಹಂತದಲ್ಲಿ ಸೋಂಕು ನೋಡಿಕೊಂಡು ರಜೆ ನೀಡುವ ನಿರ್ಧಾರ ಮಾಡಿ ಎಂದು ತಹಶೀಲ್ದಾರ್ ಗೆ ತಿಳಿಸಿದ್ದೇವೆ ಎಂದರು.

    ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಪಠ್ಯ ಬೋಧನೆ ಮಾಡುತ್ತೇವೆ. ಜೊತೆಗೆ ರಜೆ ವಿಸ್ತರಣೆ ಆದರೆ ವಿದ್ಯಾಗಮ, ಚಂದನದ ಮೂಲಕ ಪಠ್ಯ ಬೋಧನೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಡ್ರ್ಯಾಗನ್ ಫ್ರೂಟ್‍ನಲ್ಲಿ ಕೊರೊನಾ!

    ಇತ್ತೀಚೆಗಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದ ಶಿಕ್ಷಣ ಸಚಿವ ಬಿ.ಸಿ. ಬಿಸಿ ನಾಗೇಶ್ ಸಂಪೂರ್ಣ ಗುಣಮುಖರಾಗಿದ್ದಾರೆ. ಶಿಕ್ಷಣ ಇಲಾಖೆ ಕೆಲಸಗಳನ್ನು ಮತ್ತೆ ಪ್ರಾರಂಭ ಮಾಡಿದ್ದಾರೆ. ಕೊರೊನಾ ಸೋಂಕು ದೃಢವಾಗಿದ್ದರಿಂದ ಕಳೆದ 8 ದಿನಗಳಿಂದ ಐಸೋಲೇಷನ್‍ನಲ್ಲಿದ್ದರು. ಇದನ್ನೂ ಓದಿ: ಆಸ್ಕರ್‌ ವಿಜೇತ ಮೊದಲ ಕಪ್ಪುವರ್ಣೀಯ ಸಿಡ್ನಿ ಪೊಯ್ಟಿಯರ್‌ ನಿಧನ

  • ಪರೀಕ್ಷೆಯಲ್ಲಿ ಕಾಪಿ ಮಾಡಲು ಬಿಡಲಿಲ್ಲವೆಂದು ಥಳಿಸಿ, ಬೆದರಿಸಿದ ವಿದ್ಯಾರ್ಥಿ

    ಪರೀಕ್ಷೆಯಲ್ಲಿ ಕಾಪಿ ಮಾಡಲು ಬಿಡಲಿಲ್ಲವೆಂದು ಥಳಿಸಿ, ಬೆದರಿಸಿದ ವಿದ್ಯಾರ್ಥಿ

    – 10ನೇ ತರಗತಿ ವಿದ್ಯಾರ್ಥಿಯಿಂದ ಚಾಕು ಇರಿತದ ಬೆದರಿಕೆ

    ಅಹಮದಾಬಾದ್: ತನಗೆ ಪರೀಕ್ಷೆಯಲ್ಲಿ ಕಾಪಿ ಮಾಡಲು ಬಿಡದ ವಿದ್ಯಾರ್ಥಿಗೆ ಮತ್ತೊಬ್ಬ ವಿದ್ಯಾರ್ಥಿ ಚಾಕು ಇರಿಯುವುದಾಗಿ ಬೆದರಿಕೆ ಹಾಕಿದ ಪ್ರಸಂಗವೊಂದು ಅಹಮಾದಾಬಾದ್ ನಲ್ಲಿ ನಡೆದಿದೆ.

    ಈ ಘಟನೆ ಶನಿವಾರ ನಡೆದಿದೆ. ಕೃಷ್ಣನಗರದ ಪರೀಕ್ಷಾ ಕೇಂದ್ರದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ನಡೆಯುತ್ತಿದೆ. ಈ ವೇಳೆ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾನೆ. ಘಟನೆ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 323 (ಹಲ್ಲೆ) ಹಾಗೂ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಂತ್ರಸ್ತ ಬಾಲಕನ ತಂದೆ ದೂರು ನೀಡಿದ್ದು, ದೂರಿನಲ್ಲಿ ನನ್ನ ಮಗ ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಬರೆಯಲು ಹೋಗಿದ್ದಾನೆ. ಈ ವೇಳೆ ಆತನಿಗೆ ವಿದ್ಯಾರ್ಥಿಯೊಬ್ಬ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ.

    ಬಾಲಕ ಪರೀಕ್ಷೆ ಬರೆಯಲು ಎಕ್ಸಾಂ ಹಾಲ್ ಗೆ ತೆರಳಿ ತನ್ನ ಸೀಟಿನಲ್ಲಿ ಕುಳಿತಿದ್ದಾನೆ. ಈತನ ಪಕ್ಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಬಂದು ಕುಳಿತುಕೊಂಡಿದ್ದಾನೆ. ಅಲ್ಲದೆ ತನಗೆ ನಿನ್ನ ಉತ್ತರ ಪತ್ರಿಕೆ ನಕಲಿ ಮಾಡಲು ತೋರಿಸುವಂತೆ ಹೇಳಿದ್ದಾನೆ. ಆದರೆ ಇದನ್ನು ಸಂತ್ರಸ್ತ ವಿದ್ಯಾರ್ಥಿ ನಿರಾಕರಿಸಿದ್ದಾನೆ. ಇದರಿಂದ ಸಿಟ್ಟುಗೊಂಡ ವಿದ್ಯಾರ್ಥಿ ಸಂತ್ರಸ್ತ ವಿದ್ಯಾರ್ಥಿ ನಿನ್ನನ್ನು ನೋಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ಬಳಿಕ ಸಂತ್ರಸ್ತ ವಿದ್ಯಾರ್ಥಿ ಕೂಡಲೇ ಕ್ಲಾಸ್ ಸೂಪರ್ ವೈಸರ್ ಬಳಿ ನಡೆದ ಘಟನೆಯನ್ನು ವಿರಿಸಿದ್ದಾನೆ. ಪರೀಕ್ಷೆ ಮುಗಿದ ಬಳಿಕ ಸಂತ್ರಸ್ತ ವಿದ್ಯಾರ್ಥಿ ಶಾಲೆಯಿಂದ ಹೊರಬಂದು ಮಠದ ಮುಂದೆ ನಿಂತಿದ್ದನು. ಈ ವೇಳೆ ಅಲ್ಲಿಗೆ ಬಂದ ವಿದ್ಯಾರ್ಥಿ ಸಂತ್ರಸ್ತ ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿಸಿ, ನೂಕಿ ತನ್ನ ಪಾಕೆಟ್ ನಲ್ಲಿದ್ದ ಚಾಕು ತೆಗೆದು ಬೆದರಿಸಿದ್ದಾನೆ.

    ವಿದ್ಯಾರ್ಥಿ ಚಾಕು ತೆಗೆಯುತ್ತಿದ್ದಂತೆಯೇ ಭಯಗೊಂಡ ಸಂತ್ರಸ್ತ ವಿದ್ಯಾರ್ಥಿ ಅಲ್ಲಿಂದ ಓಡಿ ತನ್ನ ತಂದೆಗೆ ತಿಳಿಸಿದ್ದಾನೆ. ಮಗನ ಮಾತನ್ನು ಆಲಿಸಿದ ತಂದೆ ಕೂಡಲೇ ಪೊಲೀಸರ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ವಿದ್ಯಾರ್ಥಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಆರೋಪಿ ಅಪ್ರಾಪ್ತನಾಗಿದ್ದು, ಆತನ ವಿರುದ್ಧ ಕ್ರಮಕೈಗೊಳ್ಳುವಾಗಿ ಕೃಷ್ಣನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿ.ಆರ್ ಚೌಧರಿ ತಿಳಿಸಿದ್ದಾರೆ.

  • ಎಫ್‍ಡಿಎ/ ಎಸ್‍ಡಿಎ ಪರೀಕ್ಷೆ- ಹಾಲ್ ಟಿಕೆಟ್‍ನಲ್ಲಿ ಎಚ್‍ಡಿಕೆ, ವಾಲಾ ಫೋಟೋ

    ಎಫ್‍ಡಿಎ/ ಎಸ್‍ಡಿಎ ಪರೀಕ್ಷೆ- ಹಾಲ್ ಟಿಕೆಟ್‍ನಲ್ಲಿ ಎಚ್‍ಡಿಕೆ, ವಾಲಾ ಫೋಟೋ

    ಬಳ್ಳಾರಿ: ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಚಲಾಯಿಸೋದು ಬಿಟ್ಟು ಸರ್ಕಾರಿ ನೌಕರಿ ಮಾಡಲು ಹೊರಟ್ರಾ, ರಾಜ್ಯಪಾಲ ವಜೂಭಾಯಿ ವಾಲಾ ರಾಜ್ಯಭಾರ ಮಾಡೋದು ಬಿಟ್ಟು ವಿಶ್ವ ವಿದ್ಯಾಲಯದಲ್ಲಿ ನೌಕರಿಗಾಗಿ ಅರ್ಜಿ ಸಲ್ಲಿಸಿದ್ರಾ ಅನ್ನೋ ಪ್ರಶ್ನೆಗಳು ಮೂಡಿದೆ.

    ಹೌದು. ಯಾಕಂದ್ರೆ ಪರೀಕ್ಷಾ ಹಾಲ್ ಟಿಕೆಟ್‍ನಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ರಾಜ್ಯಪಾಲ ವಜೂಭಾಯಿ ವಾಲಾರ ಫೋಟೋಗಳಿರುವುದು ಕಂಡುಬಂದಿದೆ. ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೇಮಕಾತಿ ಪರೀಕ್ಷೆಯ ಹಾಲ್ ಟಿಕೆಟ್‍ನಲ್ಲಿ ಇವರ ಫೋಟೋ ಇದ್ದು ಇವರೇ ಪರೀಕ್ಷೆ ಬರೆದ್ರಾ ಅನ್ನೋ ಅನುಮಾನ ಮೂಡುತ್ತಿದೆ ಎಂದು ಹೋರಾಟಗಾರ ಮಂಜುನಾಥ್ ಹೇಳಿದ್ದಾರೆ.

    ಎಫ್‍ಡಿಎ ಹಾಗೂ ಎಸ್‍ಡಿಎ ಪೋಸ್ಟ್‍ಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯ ಹಾಲ್ ಟಿಕೆಟ್‍ನಲ್ಲಿ ಯಾವೊಬ್ಬ ಅಭ್ಯರ್ಥಿಗಳ ಫೋಟೋಗಳಿಲ್ಲ. ಅದೂ ಅಲ್ಲದೆ ಹಾಲ್ ಟಿಕೆಟ್‍ನಲ್ಲಿ ಸಿಎಂ ಹಾಗೂ ರಾಜ್ಯಪಾಲರ ಫೋಟೋ ಇದ್ದರೂ ಯಾರೊಬ್ಬರು ಈ ಬಗ್ಗೆ ಪರಿಶೀಲನೆ ನಡೆಸಿಲ್ಲ ಎಂಬ ಆರೋಪ ಕೇಳಿಬಂದಿದೆ.

    ಒಟ್ಟಿನಲ್ಲಿ ವಿವಿ ನೇಮಕಾತಿಯಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ನೇಮಕಾತಿ ಮಾಡಲಾಗುತ್ತಿದೆ ಅನ್ನೋ ಆರೋಪವಿದೆ. ಇದೀಗ ಪರೀಕ್ಷಾರ್ಥಿಗಳ ಹಾಲ್ ಟಿಕೆಟ್‍ನಲ್ಲಿ ಸ್ವತಃ ಸಿಎಂ ಕುಮಾರಸ್ವಾಮಿ ಹಾಗೂ ರಾಜ್ಯಪಾಲರ ಫೋಟೋ ಪ್ರತ್ಯಕ್ಷವಾದ್ರೂ ವಿವಿ ಆಡಳಿತ ಮಂಡಳಿ ತನಗೇನು ಸಂಬಂಧವಿಲ್ಲದಂತೆ ವರ್ತಿಸುತ್ತಿದೆ ಎಂದು ಹೇಳಲಾಗುತ್ತಿದೆ.