Tag: explosive

  • Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    ಮೈಸೂರು: ಸಿಡಿಮದ್ದು (Explosive) ಸ್ಫೋಟಗೊಂಡು ಮಹಿಳೆ ಗಾಯಗೊಂಡಿರುವ ಘಟನೆ ಮೈಸೂರು (Mysuru) ಜಿಲ್ಲೆ ಹುಣಸೂರು (Hunsur) ತಾಲೂಕು ಹುಳಿಯಾಳು ಗ್ರಾಮದಲ್ಲಿ ನಡೆದಿದೆ.

    ಕಮಲಮ್ಮ (54) ಸ್ಫೋಟದಿಂದ ಗಾಯಗೊಂಡ ಮಹಿಳೆ. ಮನೆ ಬಳಿ ಕಮಲಮ್ಮಗೆ ಒಂದು ಕವರ್ ಸಿಕ್ಕಿತ್ತು. ಕವರ್ ತೆರೆದಾಗ ಸಿಡಿಮದ್ದು ಸ್ಫೋಟಗೊಂಡಿದೆ. ಇದನ್ನೂ ಓದಿ: ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

    ಸದ್ಯ ಗಾಯಾಳು ಕಮಲಮ್ಮನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Rajasthan | ಶಾಲಾ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು – ಐವರು ಶಿಕ್ಷಕರ ಅಮಾನತು

  • Raichur | ಗ್ರಾನೈಟ್ ಕ್ವಾರಿಯಲ್ಲಿ ಸಿಡಿಮದ್ದು ಸ್ಫೋಟ – ಓರ್ವ ಸಾವು, ಇನ್ನೋರ್ವ ಗಂಭೀರ

    Raichur | ಗ್ರಾನೈಟ್ ಕ್ವಾರಿಯಲ್ಲಿ ಸಿಡಿಮದ್ದು ಸ್ಫೋಟ – ಓರ್ವ ಸಾವು, ಇನ್ನೋರ್ವ ಗಂಭೀರ

    ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಮಾಕಾಪುರ ಬಳಿ ಗ್ರಾನೈಟ್ ಕ್ವಾರಿಯಲ್ಲಿ (Granite Quarry) ಸಿಡಿಮದ್ದು ಜೋಡಿಸುವ ವೇಳೆ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ.

    ಮೈಮೇಲೆ ಕಲ್ಲುಬಿದ್ದು ಬಾಗಲಕೋಟೆಯ (Bagalkote) ಇಳಕಲ್‌ನ ವೆಂಕಟೇಶ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಕೊಪ್ಪಳದ ಕುಷ್ಠಗಿ ಮೂಲದ ಮಹಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗ್ರಾನೈಟ್ ಕ್ವಾರಿ ಅಕ್ರಮವಾಗಿ ನಡೆಯುತ್ತಿದ್ದು, ಘಟನೆ ಹೊರಗೆ ಬಾರದಂತೆ ಮೃತದೇಹವನ್ನ ಬಾಗಲಕೋಟೆಗೆ ರವಾನಿಸಲಾಗಿತ್ತು. ಈಗ ಮೃತದೇಹವನ್ನ ಮುದಗಲ್ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಇದನ್ನೂ ಓದಿ: ಈ ಸರ್ಕಾರ ಪೋಸ್ಟ್‌ ಮಾರ್ಟಂಗೂ ದರ ವಿಧಿಸಿಬಿಟ್ರೆ ಸಾಯೋದಕ್ಕೂ ಜನ ಹಿಂಜರೀತಾರೆ – ಸಿ.ಟಿ ರವಿ ಲೇವಡಿ

    ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದು ಒಂದು ದಿನ ಕಳೆದರೂ ಪ್ರಕರಣ ದಾಖಲಾಗಿಲ್ಲ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಾಲಕನ ಮೇಲೆ ಹಲ್ಲೆ ನಡೆಸಿ, ಚಡ್ಡಿಯೊಳಗೆ ಇರುವೆ ಬಿಟ್ಟು ವಿಕೃತಿ – ಆರೋಪಿಗಳು ಅಂದರ್

  • ಬೆಂಗ್ಳೂರಿನ 2 ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಪತ್ತೆ

    ಬೆಂಗ್ಳೂರಿನ 2 ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಪತ್ತೆ

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru) ಅಪಾರ ಪ್ರಮಾಣದ ಸ್ಫೋಟಕ (Explosion) ವಸ್ತು ಪತ್ತೆಯಾಗಿದೆ. ನಗರದ ಸೋಲದೇವನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಸ್ಫೋಟಕ ವಶಪಡಿಸಿಕೊಂಡಿದ್ದಾರೆ.

    ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅನುಮತಿ ಇಲ್ಲದೆ ಮನೆಯಲ್ಲಿ ಆಡಗಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು

    ಎರಡೂ ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಸಾಮಗ್ರಿ ಪತ್ತೆಯಾಗಿದೆ. ಎರಡೂವರೆ ಕೆಜಿ ಸಲ್ಫರ್ ಪೌಡರ್, 250 ಗ್ರಾಂ ಎಕ್ಸ್‌ಪ್ಲೋಸಿವ್‌ ಜೆಲ್, 45 ಕೆಜಿ ಪೊಟಾಶಿಯಂ ನೈಟ್ರೇಟ್ ವೈಟ್ ಪೌಢರ್ ಹಾಗೂ ಸ್ಫೋಟಕ ಮದ್ದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿದ್ದ ಶಂಕರ್ ಹಾಗೂ ಕುಮಾರ್ ಎಂಬಿಬ್ಬರನ್ನು ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ದಾಸೇನಹಳ್ಳಿಯ ರಾಘವೇಂದ್ರ ಲೇಔಟ್‌ನ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಶ್ರೀನಿವಾಸ್ ಎಂಬಾತನ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲೂ ಕೆಜಿಗಟ್ಟಲೆ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಇದನ್ನೂ ಓದಿ: ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ

    1.860 ಕೆಜಿ ತೂಕದ ಎಕ್ಸ್‌ಪ್ಲೋಸಿವ್‌ ಜೆಲ್, 1.950 ಗ್ರಾಂ ತೂಕದ ಕಾರ್ಕೋಲ ಫೌಡರ್, 7.850 ಗ್ರಾಂ ಸಲ್ಫರ್ ಫೌಡರ್, 13 ಕೆಜಿ ಪೊಟಾಶಿಯಂ ನೈಟ್ರೇಟ್ ಪತ್ತೆಯಾಗಿದೆ. ಪೊಲೀ0ಸರ ವಿಚಾರಣೆ ವೇಳೆ ಕಲ್ಲು ಕ್ವಾರಿಗಾಗಿ ಸಂಗ್ರಹ ಮಾಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ. ಅಕ್ರಮವಾಗಿ ಸ್ಫೋಟಕ ಸಂಗ್ರಹ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರಿನ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ – ಭಯೋತ್ಪಾದನೆ ಲಿಂಕ್

    ಕಾರಿನ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ – ಭಯೋತ್ಪಾದನೆ ಲಿಂಕ್

    ಚೆನ್ನೈ: ಭಾನುವಾರ ತಮಿಳುನಾಡಿನ (Tamilnadu) ಕೊಯಮತ್ತೂರಿನಲ್ಲಿ (Coimbatore) ಕಾರಿನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast) 25 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿತ್ತು. ಆದರೆ ಈ ಘಟನೆ ಇದೀಗ ಭಯೋತ್ಪಾದನೆಯ (Terrorism) ತಿರುವು ಪಡೆದುಕೊಂಡಿದೆ.

    ನಿನ್ನೆ ಕೊಯಮತ್ತೂರಿನ ದೇವಾಲಯವೊಂದರ ಬಳಿ ಕಾರಿನ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿ ಜೆಮಿಶಾ ಮುಬೀನ್ ಅವರ ಮನೆಯಲ್ಲಿ ಇದೀಗ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಹಚ್ಚಿದ್ದಾರೆ.

    2019ರಲ್ಲಿ ಶ್ರೀಲಂಕಾದ ಈಸ್ಟರ್ ಸಂಡೇ ಸ್ಫೋಟದ ಮಾಸ್ಟರ್ ಮೈಂಡ್ ಜಹ್ರಾನ್ ಹಾಶಿಮ್‌ಗೆ ಸಂಬಂಧಿಸಿದ ಜಾಲದೊಂದಿಗೆ ಜೆಮಿಶಾ ಮುಬೀನ್ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ಆತನನ್ನು ಅಧಿಕಾರಿಗಳು ಈ ಹಿಂದೆ ವಿಚಾರಿಸಿದ್ದರು. ಇದೀಗ ಅದೇ ವ್ಯಕ್ತಿ ಸಿಲಿಂಡರ್ ಸ್ಫೋಟದಿಂದ ಸಾವನ್ನಪ್ಪಿದ್ದು, ಈ ಬಗ್ಗೆ ಭಯೋತ್ಪಾದನಾ ಸಂಚಿನ ಕೋನದಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಸವಲಿಂಗ ಶ್ರೀಗಳ ಸಾವಿನ ಸುತ್ತ ಅನುಮಾನಗಳ ಹುತ್ತ – 3 ಪುಟಗಳ ಡೆತ್‍ನೋಟ್ ರಹಸ್ಯ ಬಯಲು!

    ಘಟನೆಯ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥ ಸಿ ಶೈಲೇಂದ್ರ ಬಾಬು ಅವರು ಮಾತನಾಡಿ, ತನಿಖೆಯಲ್ಲಿ ಉತ್ತಮ ಪ್ರಗತಿ ಕಂಡುಬಂದಿದೆ. ಈ ಘಟನೆಯ ಬಗ್ಗೆ ಎನ್‌ಐಎ ತನಿಖೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ತನಿಖೆ ಪೂರ್ಣವಾದ ಬಳಿಕ ನಿಜಾಂಶ ಏನೆಂಬುದು ತಿಳಿದುಬರಲಿದೆ ಎಂದಿದ್ದಾರೆ.

    ಮುಬೀನ್ ಅವರನ್ನು ಈ ಹಿಂದೆ ಎನ್‌ಐಎ ವಿಚಾರಣೆ ನಡೆಸಿತ್ತು. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

    Live Tv
    [brid partner=56869869 player=32851 video=960834 autoplay=true]

  • ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಶ

    ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಶ

    ಹಾವೇರಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಸ್ತುಗಳು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕೋಡಮಗ್ಗಿಯಲ್ಲಿ ಪತ್ತೆಯಾಗಿವೆ.

    ಗ್ರಾಮದ ರಾಜು ಅಣ್ಣಪ್ಪನವರ ಜಮೀನಿನಲ್ಲಿದ್ದ ಕೋಳಿ ಶೆಡ್ ಹಿಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಸ್ಫೋಟಕ ವಸ್ತುಗಳಾದ ಎಲೆಕ್ಟ್ರಿಕ್ ಜೆಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸುರೇಶ್, ಶೌಕತ್ ಮತ್ತು ಧನರಾಜ್ ಎಂಬವರು ಈ ಸ್ಫೋಟಕಗಳನ್ನು ಅಡಗಿಸಿಟ್ಟಿದ್ದರು.

    ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯ ಸಿಪಿಐ ಸಂತೋಷ ಪವಾರ ದಾಳಿ ನಡೆಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸಲು ಆರೋಪಿಗಳು ಈ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರು. ಈ ಕುರಿತಂತೆ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿ ಅರೆಸ್ಟ್

    ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿ ಅರೆಸ್ಟ್

    ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಸಂಸ್ಥೆ 12 ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

    ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ¸ ವಾಜಿರನ್ನು ವಶಪಡೆದು 12 ಗಂಟೆಗಳ ಕಾಲ ವಿಚಾರಣೆ ನಡೆಸಿ ನಂತರ ಶನಿವಾರ ರಾತ್ರಿ 11.50ಕ್ಕೆ ಬಂಧಿಸಿದ್ದಾರೆ. ಅಲ್ಲದೆ ಭಾನುವಾರ ಸಚಿನ್ ವಾಜಿರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ.

    ಫೆಬ್ರವರಿ 25 ರಂದು ಮುಕೇಶ್ ಅಂಬಾನಿ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಕಾರು ಹಾಗೂ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಸಚಿನ್ ವಾಜಿರವರಿಗೆ ತನಿಖೆ ನಡೆಸಲು ಸೂಚಿಸಲಾಗಿತ್ತು, ಆದರೆ ಬಳಿಕ ಅವರನ್ನು ತೆಗೆದು ಹಾಕಿ ಪ್ರಕರಣ ಕುರಿತಂತೆ ತನಿಖೆ ನಡೆಸಲು ಎನ್‍ಐಎ ಮುಂದಾಗಿದೆ.

    ಎನ್‍ಐಎ ವಕ್ತಾರರ ಪ್ರಕಾರ, “ಫೆಬ್ರವರಿ 25 ರಂದು ಕಾರ್ಮೈಕಲ್ ರಸ್ತೆ ಬಳಿ ಸ್ಫೋಟಕಗಳಿಂದ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಸಚಿನ್ ವಾಜಿರವರ ಪಾತ್ರವಿರುವುದರಿಂದ ಸೆಕ್ಷನ್ 286 ( ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ವರ್ತನೆ), 465(ಖೋಟಾ ಶಿಕ್ಷೆ), 473 (ನಕಲಿ ಮುದ್ರೆಯನ್ನು ತಯಾರಿಸುವುದು ಅಥವಾ ಹೊಂದಿರುವುದು ಇತ್ಯಾದಿ), 502 (2)(ಕ್ರಿಮಿನಲ್ ಬೆದರಿಕೆ), 120 ಬಿ ಅಡಿಯಲ್ಲಿ ಸಚಿನ್ ವಾಜಿರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಅಂಬಾನಿ ನಿವಾಸದ ಬಳಿ ಪತ್ತೆಯಾಗಿದ್ದ ಸ್ಕಾರ್ಪಿಯೋ ಕಾರಿನ ಮಾಲೀಕ ಥಾಣೆ ಉದ್ಯಮಿ ಮನ್ಸುಖ್ ಹಿರಾನ್ ಸಾವಿಗೆ ಸಂಬಂಧಿಸಿದಂತೆ ಸಚಿನ್ ವಾಜಿ ಅವರ ಪಾತ್ರವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

  • ಪಾಕ್ ಸ್ಫೋಟಕ ನಾಶಗೊಳಿಸಿದ ಭಾರತೀಯ ಯೋಧರು – ವಿಡಿಯೋಗೆ ಭಾರೀ ಮೆಚ್ಚುಗೆ

    ಪಾಕ್ ಸ್ಫೋಟಕ ನಾಶಗೊಳಿಸಿದ ಭಾರತೀಯ ಯೋಧರು – ವಿಡಿಯೋಗೆ ಭಾರೀ ಮೆಚ್ಚುಗೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಗಡಿ ನಿಯಂತ್ರಣ ರೇಖೆ ಬಳಿ ಬಿದ್ದಿದ್ದ ಪಾಕಿಸ್ತಾನ ಸೇನೆಯ ಸ್ಫೋಟಕವನ್ನು ಭಾರತೀಯ ಯೋಧರು ನಾಶಗೊಳಿಸಿರುವ ವಿಡಿಯೋ ವೈರಲ್ ಆಗಿದೆ.

    ಭಾನುವಾರ ಮೇಂದಾರ್ ಸೆಕ್ಟರ್ ನ ಬಾಲಕೋಟ್ ಪ್ರದೇಶದ ಮನೆಯೊಂದರ ಬಳಿ ಸ್ಫೋಟಕದ ಶೆಲ್ ಬಿದ್ದಿತ್ತು. ಇದನ್ನು ಕೆಲ ಗ್ರಾಮಸ್ಥರು ಗಮನಿಸಿದ್ದು, ಈ ಬಗ್ಗೆ ಸೇನಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷವೇ ಸೇನೆಯಲ್ಲಿನ ತಜ್ಞರು ಸ್ಥಳಕ್ಕೆ ಬಂದು ಸ್ಫೋಟಿಸದ ಮಾರ್ಟರ್ ಶೆಲ್ ಅನ್ನು ಸುರಕ್ಷಿತವಾಗಿ ನಾಶಗೊಳಿಸಿದ್ದಾರೆ.

    ಇಬ್ಬರು ಸೈನಿಕರು ಸ್ಫೋಟಕವನ್ನು ನಾಶ ಮಾಡಿದ ಕಾರ್ಯಾಚರಣೆಯ ವಿಡಿಯೋವನ್ನು ಭಾರತೀಯ ಸೇನೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು ಯೋಧರ ಧೈರ್ಯ, ಶೌರ್ಯಕ್ಕೆ ಭಾರತೀಯರು ಸಲಂ ಹೊಡೆದಿದ್ದಾರೆ.

    ಪಾಕಿಸ್ತಾನ ಪಡೆಗಳು ಶನಿವಾರ ಬಾಲಕೋಟ್ ಸೇರಿ ವಿವಿಧ ಕಡೆಗಳಲ್ಲಿ ಗ್ರಾಮಗಳನ್ನು ಗುರಿಯಾಗಿಸಿ ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡಾ ಪ್ರತಿದಾಳಿ ನಡೆಸಿದೆ. ಆ ಬಳಿಕ ಭಾರತೀಯ ಶಿಬಿರವನ್ನು ಗುರಿಯಾಗಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಪಾಕಿಸ್ತಾನ ಸೇನೆ ಭಾನುವಾರ ರಾತ್ರಿ 10:30ರ ಹೊತ್ತಿಗೆ ಪೂಂಚ್ ಜಿಲ್ಲೆಯ ಬಾಲಕೋಟ್ ಸೆಕ್ಟರ್ ನಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತೀಯ ಭದ್ರತಾ ಪಡೆಗಳೂ ಕೂಡ ತಕ್ಕ ಪ್ರತ್ಯುತ್ತರ ಕೊಟ್ಟಿದೆ.

    ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರರು ಮಾತನಾಡಿ, ಈ ವರ್ಷ ಪಾಕಿಸ್ತಾನ 2,050 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ತಿಳಿಸಿದ್ದಾರೆ. ಈ ದಾಳಿಗಳಲ್ಲಿ 21 ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

    2003 ರ ಕದನ ವಿರಾಮ ಒಪ್ಪಂದಕ್ಕೆ ಬದ್ಧರಾಗಿರಲು ಮತ್ತು ಅಂತರರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪದೇ ಪದೇ ಕರೆ ನೀಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೊತೆಗೆ ಹೀಗೆ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದರೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ತಯಾರಾಗಿದೆ ಎಂದು ಎಚ್ಚರಿಸಿದ್ದಾರೆ.

  • ವಿಡಿಯೋ: 10 ಸೆಕೆಂಡ್ ನಲ್ಲಿ 15 ಅಂತಸ್ತಿನ ಕಟ್ಟಡ ನೆಲಸಮ!

    ವಿಡಿಯೋ: 10 ಸೆಕೆಂಡ್ ನಲ್ಲಿ 15 ಅಂತಸ್ತಿನ ಕಟ್ಟಡ ನೆಲಸಮ!

    ಬೀಜಿಂಗ್: 15 ಅಂತಸ್ತಿನ ಕಟ್ಟಡವನ್ನು ಕೇವಲ 10 ಸೆಕೆಂಡ್ ಗಳಲ್ಲಿ ನೆಲಸಮ ಮಾಡಿರುವ ಘಟನೆ ಚೀನಾದಲ್ಲಿ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಕಳೆದ ಕೆಲ ದಿನಗಳ ಹಿಂದೆ ಚೀನಾದ ಚೆಂಗ್ಡು ನಗರದಲ್ಲಿ 20 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ವಸ್ತು ಪ್ರದರ್ಶನ ಕಟ್ಟಡವನ್ನು ಸ್ಫೋಟಕ ಬಳಸಿ ಕೆಡವಲಾಗಿದೆ. ಕೇವಲ 10 ಸೆಕೆಂಡ್ ಗಳಲ್ಲಿ ನಡೆದ ಈ ಪ್ರಕ್ರಿಯೆಯಿಂದಾಗಿ ಕ್ಷಣ ಮಾತ್ರದಲ್ಲಿ ಸುತ್ತಲಿನ ಪ್ರದೇಶವ ಸಂಪೂರ್ಣ ದೂಳಿನಿಂದ ಆವೃತ್ತವಾಗಿತ್ತು.

    ಈ ದೃಶ್ಯಗಳನ್ನು ಸ್ಥಳೀಯ ವ್ಯಕ್ತಿ ತನ್ನ ಮೊಬೈಲ್ ನಲ್ಲಿ ಸೆರೆಡಿದಿದ್ದಾನೆ. ಕಟ್ಟಡ ನೆಲಸಮವಾದ ಬಳಿಕ ದೂಳಿನ ಪ್ರಮಾಣ ಕಡಿಮೆ ಮಾಡಲು ಕಾರ್ಮಿಕರು ಕಟ್ಟಡದ ಅವಶೇಷಗಳ ಮೇಲೆ ನೀರು ಸುರಿದಿದ್ದಾರೆ. ಸ್ಫೋಟಕ ಬಳಸಿ ಕಟ್ಟಡ ನೆಲ ಸಮ ಮಾಡುವ ವೇಳೆ ಹೊಗೆ ನಿರೋಧಕ ಫಿರಂಗಿಗಳನ್ನು ಬಳಕೆ ಮಾಡಲಾಗಿದೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

  • ಮನೆ ನಿರ್ಮಾಣಕ್ಕೆ ಪಾಯ ತೋಡಿ ಹೊರ ಹಾಕಿದ್ದ ಮಣ್ಣಿನಲ್ಲಿ ಸ್ಫೋಟಕ ಸಿಡಿದು ಬಾಲಕರಿಬ್ಬರಿಗೆ ಗಾಯ

    ಮನೆ ನಿರ್ಮಾಣಕ್ಕೆ ಪಾಯ ತೋಡಿ ಹೊರ ಹಾಕಿದ್ದ ಮಣ್ಣಿನಲ್ಲಿ ಸ್ಫೋಟಕ ಸಿಡಿದು ಬಾಲಕರಿಬ್ಬರಿಗೆ ಗಾಯ

    ರಾಯಚೂರು: ಸ್ಫೋಟಕ ವಸ್ತು ಸಿಡಿದು ಇಬ್ಬರು ಬಾಲಕರು ಗಾಯಗೊಂಡ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಸವರಾಜೇಶ್ವರಿ ಕ್ಯಾಂಪ್‍ನಲ್ಲಿ ನಡೆದಿದೆ.

    ಗೌರಂಗು ಮಂಡಲ್ ಹಾಗೂ ಬಿಸ್ವಾಜಿತ್ ಮಂಡಲ್ ಗಾಯಗೊಂಡಿರುವ ಬಾಲಕರು. ಗ್ರಾಮದ ರಮೇಶ್ ಎಂಬವರು ಮನೆ ನಿರ್ಮಾಣಕ್ಕೆ ಪಾಯ ತೋಡಿ ಹೊರಹಾಕಿದ್ದ ಮಣ್ಣಿನಲ್ಲಿ ಬಾಲಕರಿಬ್ಬರು ಆಟವಾಡುತ್ತಿದ್ದ ವೇಳೆ ಸಿಕ್ಕ ಬ್ಯಾಗ್ ನಲ್ಲಿ ಸ್ಫೋಟಕ ಪತ್ತೆಯಾಗಿದೆ. ಅದನ್ನ ಹೊರತೆಗೆದು ಬಾಲಕರು ಆಟವಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಫೋಟಗೊಂಡಿದ್ದು ಸಣ್ಣಪುಟ್ಟ ಗಾಯಗಳಾಗಿವೆ.

    ಘಟನೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋರ್ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹಳೆಯ ಮನೆಯನ್ನ ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ಈ ಹಿಂದೆ ಇದ್ದ ಮನೆಯಲ್ಲೇ ನಾಡಬಾಂಬ್ ಅಡಗಿಸಿಟ್ಟಿದ್ದಿರಬಹುದು ಅಂತಾ ಶಂಕಿಸಲಾಗಿದೆ.

    ಈ ಬಗ್ಗೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ. ಗಾಯಗೊಂಡ ಮಕ್ಕಳು ಚೇತರಿಸಿಕೊಂಡಿದ್ದಾರೆ.